Congress Guarantee – Peepal Media

‘ಯುವನಿಧಿ’ಗೆ ಮುಹೂರ್ತ ನಿಗದಿ : ನಿರುದ್ಯೋಗಿ ಪದವೀಧರರಿಗೆ ಮಾಸಿಕ ನೆರವಿಗೆ ಚಾಲನೆ
ರಾಜ್ಯ ಸರ್ಕಾರದ ಗ್ಯಾರಂಟಿ ಅಂಶಗಳ ಕೊನೆಯ ಯೋಜನೆ, ಯುವನಿಧಿ ಯೋಜನೆಯ ( Yuvanidhi Scheme ) ನೋಂದಣಿ ಪ್ರಕ್ರಿಯೆ ಡಿ.26ಕ್ಕೆ ಮುಂದೂಡಿಕೆಯಾಗಿದೆ. ಡಿಸೆಂಬರ್ 26 ರಿಂದ ಯುವನಿಧಿ ಯೋಜನೆಗೆ ನೋಂದಣಿ ಆರಂಭಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ತಿಳಿಸಿದ್ದಾರೆ.

ಈ ಬಗ್ಗೆ CM of Karnataka ಖಾತೆಯಿಂದ ಟ್ವಿಟ್ ಮೂಲಕ ತಿಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು ಆರು ತಿಂಗಳು ಪೂರೈಸಿದವರು ಮತ್ತು ಉನ್ನತ ಶಿಕ್ಷಣ ಅಥವಾ ಯಾವುದೇ ಉದ್ಯೋಗಕ್ಕೆ ಸೇರದೇ ಇರುವವರು ಅರ್ಜಿ ಸಲ್ಲಿಸಲು ಅರ್ಹರು ಎಂದಿದ್ದಾರೆ.

ಹಾಗೆಯೇ ಪದವಿ ಹೊಂದಿರುವವರಿಗೆ ಮತ್ತು ಡಿಪ್ಲೊಮಾ ತೇರ್ಗಡೆ ಆದವರಿಗೆ ಈ ಯೋಜನೆ ಅನ್ವಯಿಸಲಿದೆ. ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ ರೂ., ಡಿಪ್ಲೊಮಾ ಹೊಂದಿರುವವರಿಗೆ 1,500 ಆರ್ಥಿಕ ನೆರವು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಉದ್ಯೋಗ ಸಿಗುವವರೆಗೆ ಅಥವಾ ಎರಡು ವರ್ಷ ಅವಧಿಯಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಈ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ ಎಂಬುದಾಗಿ ಹೇಳಿದ್ದಾರೆ.

ಈ ಮೂಲಕ ಅನುಷ್ಠಾನಗೊಂಡೇ ತೀರಬೇಕೆಂಬ ಐದೂ ಗ್ಯಾರಂಟಿಗಳಲ್ಲಿ ಕೊನೆಯ ಗ್ಯಾರಂಟಿ ಯೋಜನೆಗೂ ಈಗ ರಾಜ್ಯ ಸರ್ಕಾರ ಕೈ ಇಟ್ಟಿದೆ.

ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ : ಕಾನೂನು ಕಾಲೇಜಿನ ಮೇಲೆ ಕ್ರಮಕ್ಕೆ NSUI ಆಗ್ರಹ
ತುಮಕೂರು : ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರಕ್ಕೆ ಮುಂದಾದ ತುಮಕೂರಿನ ವಿದ್ಯೋದಯ ಕಾನೂನು ಕಾಲೇಜಿನ ಪ್ರಾಂಶುಪಾಲರು ಮತ್ತು ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ತುಮಕೂರು ಗ್ರಾಮಾಂತರ NSUI ಘಟಕ ಸರ್ಕಾರಕ್ಕೆ ಮನವಿ ಮಾಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿಗೆ ಬರೆದ ಪತ್ರದಲ್ಲಿ ತುಮಕೂರು ಗ್ರಾಮಾಂತರ ಘಟಕದ NSUI ಅಧ್ಯಕ್ಷ ತೇಜಸ್ ಗೌಡ ಈ ವಿಚಾರವನ್ನು ಪ್ರಸ್ತಾಪಿಸಿ ವಿವರಿಸಿದ್ದಾರೆ.

ತುಮಕೂರಿನ ವಿದ್ಯೋದಯ ಕಾನೂನು ಕಾಲೇಜು ಆಯೋಜಿಸಿರುವ ಈ ಒಂದು ಅಣಕು ಕಾಲ್ಪನಿಕ ಕೋರ್ಟ್ ಸನ್ನಿವೇಶದಲ್ಲಿ ಸರ್ಕಾರದ ಯೋಜನೆಗಳನ್ನು freebies ಎಂದು ಉಲ್ಲೇಖಿಸಿ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳಿಂದ ಆಗಬಹುದಾದ ದುಷ್ಪರಿಣಾಮದ ಬಗ್ಗೆ ಕಾನೂನು ವಿದ್ಯಾರ್ಥಿಗಳು ವಾದಿಸಬೇಕು ಎಂದು ಕಾನೂನು ಕಾಲೇಜು ಆದೇಶ ಹೊರಡಿಸಿದೆ.

ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಬೊಕ್ಕಸಕ್ಕೆ ಬೀಳಬಹುದಾದ ಹೊರೆಯನ್ನು ಉಲ್ಲೆಖಿಸಿ ಈಗಾಗಲೇ ರಿಟ್ ಅರ್ಜಿ ಸಲ್ಲಿಸಲಾಗಿದೆ. ಈ ಬಗ್ಗೆ ವಿದ್ಯಾರ್ಥಿಗಳು ವಾದ ಮಂಡಿಸಲು ತಯಾರಾಗಬೇಕು ಎಂದು ವಿದ್ಯಾರ್ಥಿಗಳಿಗೆ ನೀಡಿದ ನೋಟಿಸ್ ನಲ್ಲಿ ತಿಳಿಸಲಾಗಿದೆ.

ಕಾಂಗ್ರೆಸ್ ಸರ್ಕಾರದ ಕಾನೂನು ಮಂತ್ರಿಗಳು ಇತ್ತೀಚೆಗೆ ಕಾನೂನು ವಿಶ್ವವಿದ್ಯಾಲಯಕ್ಕೆ ನೇಮಕ ಮಾಡಿದ ಸಿಂಡಿಕೇಟ್ ಸದಸ್ಯರು, ಹೈಕೋರ್ಟ್‌ಗೆ ನೇಮಕ ಮಾಡಿದ ಸರ್ಕಾರಿ ವಕೀಲರು ಬಹುತೇಕ ಬಿಜೆಪಿ ಬೆಂಬಲಿಗರು ಇದರ ಪರಿಣಾಮವಾಗಿ ಇಂತಹ ಕಾರ್ಯಕ್ರಮಗಳು ನಡೆಯುತ್ತವೆ. ಕಳೆದ ಆಗಸ್ಟ್ 12,13 ರಂದು ಬೆಳಗಾವಿ ಚಿಕ್ಕೋಡಿ ಕೆಎಲ್ಇ ಕಾನೂನು ಕಾಲೇಜಿನಲ್ಲಿ ಇದೇ ವಿಷಯದ ಮೇಲೆ ಕನ್ನಡ ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ಬಿಟ್ಟಿ ಭಾಗ್ಯ ಎಂದು ಪದ ಬಳಸಲಾಗಿದ್ದನ್ನು ಎನ್‌ಎಸ್‌ಯುಐ ಹುಡುಗರಾದ ಚೇತನ್ ಮತ್ತು ಇತರರು ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ಉಲ್ಲೇಖಿಸಿದ್ದಾರೆ.

ಸಧ್ಯ ತುಮಕೂರಿನ ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಕಾಂಗ್ರೆಸ್ ಪಕ್ಷದ ಜನಪರ ಯೋಜನೆಗಳನ್ನು ವಿರೋಧಿಸುವ ಮನಸ್ಥಿತಿ ವಿದ್ಯಾರ್ಥಿಗಳಲ್ಲಿ ಮೂಡಿಸುವ ಸಲುವಾಗಿ ಅಣಕು ನ್ಯಾಯಾಲಯ ಸ್ಪರ್ಧೆ ಆಯೋಜಿಸಲಾಗಿದೆ. ಕಾನೂನು ಸಚಿವರು ತಮ್ಮ ಅಧೀನದಲ್ಲಿ ಬರುವ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಮತ್ತು ಸಿಂಡಿಕೇಟ್ ಸದಸ್ಯರಿಗೆ ಸರ್ಕಾರದ ಸವಲತ್ತುಗಳನ್ನು ನೀಡಿ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳನ್ನು ತಯಾರಿಸುವ ಹೊಣೆಗಾರಿಕೆ ನಿರ್ವಹಿಸುವುದನ್ನು ತಡೆಯಬೇಕು ಎಂದು NSUI ಘಟಕ ಆಗ್ರಹಿಸಿದೆ.

ಗ್ಯಾರಂಟಿ ಯೋಜನೆ ಮೂಲಕ ₹52 ಸಾವಿರ ಕೋಟಿ ಹಣ ಬಡವರ ಕೈಸೇರುತ್ತಿರುವುದು ಜಗತ್ತಿನಲ್ಲೇ ಮೊದಲು : ಕೃಷ್ಣಭೈರೇಗೌಡ
ಬೆಂಗಳೂರು : ದಿನೋಪಯೋಗಿ ವಸ್ತುಗಳ ಬೆಲೆ ದಿನನಿತ್ಯ ಏರಿಕೆಯಾಗುತ್ತಿದ್ದು, ಬಡವರ ಬದುಕು ದುಸ್ಥರವಾಗಿದೆ. ಈ ಹಿನ್ನೆಲೆಯಲ್ಲಿ ಬಡವರಿಗೆ ಅನುಕೂಲವಾಗಲಿ, ಪ್ರತಿಯೊಂದು ಕುಟುಂಬಗಳಿಗೆ ತಿಂಗಳಿಗೆ 4 ರಿಂದ 5 ಸಾವಿರ ಹಣ ಉಳಿತಾಯವಾಗಲಿ ಎಂಬ ಕಾರಣಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ 52 ಸಾವಿರ ಕೋಟಿ ರೂ. ಹಣವನ್ನು ಜನಪರ ಯೋಜನೆಯ ಅಡಿಯಲ್ಲಿ ಜನರ ಕೈಗೇ ನೀಡುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಕೋಗಿಲು ವಾರ್ಡ್ ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪಿಂಚಣಿ ಹಾಗೂ ಗೃಹಲಕ್ಷ್ಮಿ ಮಂಜೂರಾತಿ ಪತ್ರ ವಿತರಣೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಸರ್ಕಾರ ರಚನೆಯಾಗಿ ಕೇವಲ ಎರಡೇ ತಿಂಗಳಲ್ಲಿ ಆಶ್ವಾಸನೆ ನೀಡಿದ ಎಲ್ಲಾ ಯೋಜನೆಗಳನ್ನೂ ಜಾರಿಗೆ ತರುವ ಮೂಲಕ ಬಡ-ಮಧ್ಯಮ ವರ್ಗದ ಜನರಿಗೆ ಅನುಕೂಲ ಮಾಡಿಕೊಟ್ಟಿದೆ. ಈ ಮೂಲಕ ಕಾಂಗ್ರೆಸ್ ಬಡವರ ಪರ ಸರ್ಕಾರ ಎಂಬುದನ್ನು ಮತ್ತೊಮ್ಮೆ ಸಾಬೀತುಮಾಡಿದೆ” ಎಂದರು.

ಮಹಿಳೆಯರ ಸಬಲೀಕರಣಕ್ಕಾಗಿ ಶಕ್ತಿ ಯೋಜನೆಯ ಅಡಿಯಲ್ಲಿ ಉಚಿತ ಸಾರಿಗೆ ವ್ಯವಸ್ಥೆ ನೀಡಲಾಗಿದೆ. ಎಲ್ಲರ ಮನೆಗಳಿಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯೂ ಆಗಸ್ಟ್ ತಿಂಗಳಿನಿಂದಲೇ ಜಾರಿಯಾಗಿದ್ದು, ಶೂನ್ಯ ದರದ ಬಿಲ್ ನೀಡಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಹೆಸರಿನಲ್ಲಿ ಪ್ರತಿ ಮಹಿಳೆಯರಿಗೆ 2 ಸಾವಿರ ರೂ ಹಣವನ್ನು ನೀಡಲು ಸರ್ಕಾರ ಈಗಾಗಲೇ ರೂಪುರೇಷೆ ಸಿದ್ದಪಡಿಸಿದ್ದು, ನೋಂದಣಿಯನ್ನೂ ಆರಂಭಿಸಿಯಾಗಿದೆ. ಅನ್ನಭಾಗ್ಯದ ಅಡಿಯಲ್ಲಿ 5 ಕೆಜಿ ಅಕ್ಕಿ, ಉಳಿದ ಅಕ್ಕಿಯ ಬದಲಾಗಿ ಕೆ.ಜಿ.ಗೆ ₹34ರಂತೆ ₹750 ರೂ.ಹಣವನ್ನು ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ.

ಈ ಮೂಲಕ ಪ್ರತಿ ಮನೆಗೆ ಮಾಸಿಕ ₹4 ರಿಂದ ₹5 ಸಾವಿರ ಹಣ ಉಳಿತಾಯವಾಗಲಿದೆ. ಈ ಹಣವನ್ನು ಮಹಿಳೆಯರು ತಮ್ಮ ಕುಟುಂಬ ನಿರ್ವಹಣೆಗೆ, ಮಕ್ಕಳ ಶಿಕ್ಷಣಕ್ಕೆ ಸೇರಿದಂತೆ ಅಗತ್ಯ ವಿಚಾರಗಳಿಗೆ ಬಳಸಿಕೊಳ್ಳಬಹುದು. ದಿನೋಪಯೋಗಿ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟ ಎದುರಿಸುತ್ತಿರುವ ಬಡ-ಮಧ್ಯಮ ವರ್ಗದ ಜನರ ಪಾಲಿಗೆ ಕಾಂಗ್ರೆಸ್ ಸರ್ಕಾರ ಯೋಜನೆಗಳು ಆಶಾಕಿರಣವಾಗಿದೆ. ಜನರ ಸಂಕಷ್ಟ ನಿವಾರಣೆಗಾಗಿ ₹52 ಸಾವಿರ ಕೋಟಿ ಹಣವನ್ನು ಜನರಿಗೇ ನೀಡುವ ಮೂಲಕ ಕಾಂಗ್ರೆಸ್ ಸರ್ಕಾರ ಈವರೆಗೆ ಜಗತ್ತಿನಲ್ಲಿ ಯಾರೂ ಮಾಡಲಾಗದ ಸಾಧನೆ ಮಾಡಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಭಾಗ್ಯಗಳ ಜೊತೆಗೆ ವಿಧವೆಯವರು, ವಯಸ್ಸಾವರು ಹಾಗೂ ಅಂಗವಿಕಲರನ್ನೂ ಹುಡುಕಿ ಅವರಿಗೂ ಪಿಂಚಣಿ ನೀಡುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಆದರೆ, ಅಧಿಕಾರದಲ್ಲಿದ್ದಾಗ ಯಾವ ಜನಪರ ಯೋಜನೆಗಳನ್ನೂ ಜಾರಿಮಾಡದ ಬಿಜೆಪಿ ನಾಯಕರು, ಕಾಂಗ್ರೆಸ್ ಘೋಷಿಸಿದ್ದ ಭಾಗ್ಯಗಳನ್ನು ಭೂಸಾ ಭಾಗ್ಯ, ಇದನ್ನು ಜಾರಿ ಮಾಡಲು ಸಾಧ್ಯವೇ ಇಲ್ಲ ಎಂದು ಆರೋಪಿಸಿದ್ದರು. ನಾವು ಈ ಆರೋಪ-ಅಪಹಾಸ್ಯಗಳಿಗೆ ಕಿವಿಗೊಡದೆ ಜನರ ಮಾತಿಗೆ ಬದ್ಧವಾಗಿ ಕೇವಲ ಎರಡು ತಿಂಗಳಲ್ಲಿ ಎಲ್ಲಾ ಭಾಗ್ಯಗಳನ್ನೂ ಜಾರಿ ಮಾಡಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡ ತಿರುಗೇಟು ನೀಡಿದರು.

ಬಡವರ ಅಕ್ಕಿಗೆ ತಾರತಮ್ಯ ಮಾಡಿದ ಕೇಂದ್ರದ ವಿರುದ್ಧ ಕಿಡಿ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10 ಕೆ.ಜಿ ಅಕ್ಕಿ ನೀಡುವುದಾಗಿ ಆಶ್ವಾಸನೆ ನೀಡಿತ್ತು. ಹೀಗಾಗಿ ನಿಗದಿತ ₹34ರ ದರದಂತೆ ಕರ್ನಾಟಕಕ್ಕೆ ಅಕ್ಕಿ ನೀಡುವಂತೆ ಭಾರತೀಯ ಆಹಾರ ನಿಗಮಕ್ಕೆ ಪತ್ರ ಬರೆಯಲಾಗಿತ್ತು. ಆದರೆ, ಆರಂಭದಲ್ಲಿ ಅಕ್ಕಿ ನೀಡುವುದಾಗಿ ತಿಳಿಸಿ ಪತ್ರ ಬರೆದಿದ್ದ ಆಹಾರ ನಿಗಮ ಒಂದೇ ವಾರದಲ್ಲಿ ಅಕ್ಕಿ ನೀಡುವ ನಿರ್ಧಾರದಿಂದ ಹಿಂದೆ ಸರಿಯಿತು.

ಈ ಬಗ್ಗೆ ಕೇಂದ್ರ ಸರ್ಕಾರದ ಗಮನಕ್ಕೆ ತಂದರೂ ಯಾವುದೇ ಉಪಯೋಗವಾಗಲಿಲ್ಲ. ಆಹಾರ ನಿಗಮಗಳ ಗೋಧಾಮಿನಲ್ಲಿ ಅಕ್ಕಿ ಇದ್ದರೂ ಬಡವರಿಗೆ ನೀಡಲು ಮನಸ್ಸಿಲ್ಲದ ಕೇಂದ್ರ ಸರ್ಕಾರ ಆ ಅಕ್ಕಿಯನ್ನು ಹರಾಜಿಗಿಟ್ಟಿತು. ಕರ್ನಾಟಕ ಸರ್ಕಾರಕ್ಕೆ ಹರಾಜಿನಲ್ಲಿ ಪಾಲ್ಗೊಳ್ಳಲೂ ಅವಕಾಶ ನೀಡಲಿಲ್ಲ. ಈ ಮೂಲಕ ಕೇಂದ್ರ ಸರ್ಕಾರ ತಾನು ಯಾವ ಕಾಲಕ್ಕೂ ಬಡವರ ಪರ ಇಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ ಎಂದು ಅವರು ಕಿಡಿಕಾರಿದರು.

ಕೇಂದ್ರ ಸರ್ಕಾರ ಬಡವರಿಗೆ ಅಕ್ಕಿ ನೀಡಲು ಸಹಕರಿಸದ ಕಾರಣ ಪ್ರತಿ ಕುಟುಂಬಗಳಿಗೆ 5 ಕೆಜಿ ಅಕ್ಕಿ ಜೊತೆಗೆ ಉಳಿದ 5 ಕೆಜಿ ಅಕ್ಕಿಗೆ ಬದಲಾಗಿ  ₹34ರ ದರದಂತೆ ₹750 ರೂ. ನೀಡಲು ಸರ್ಕಾರ ನಿರ್ಧರಿಸಿದ್ದು, ಆ ಹಣವೂ ನಿಮ್ಮ ಖಾತೆಗೆ ನೇರ ಜಮೆಯಾಗಲಿದೆ. ಈ ಹಣವನ್ನು ಮಹಿಳೆಯರು ನಿಮಗೆ ಅಗತ್ಯವಾದ ಪೌಷ್ಠಿಕ ಆಹಾರಕ್ಕೆ ಬಳಸಿ ಎಂದು ಸಚಿವ ಕೃಷ್ಣ ಬೈರೇಗೌಡ ಸಲಹೆ ನೀಡಿದರು.

ಮನೆ ಯಜಮಾನಿಗೆ 2000 ರೂ: ಅರ್ಜಿ ಸಲ್ಲಿಸೋದು ಹೇಗೆ?
ಈಗಾಗಲೇ ‘ಶಕ್ತಿ ಯೋಜನೆ’ ಹೆಸರಿನ ಅಡಿಯಲ್ಲಿ ರಾಜ್ಯದ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣವನ್ನು ಅನುಷ್ಠಾನಕ್ಕೆ ತಂದ ಕಾಂಗ್ರೆಸ್ ಸರ್ಕಾರ, ಈಗ ‘ಗೃಹಲಕ್ಷ್ಮಿ’ ಯೋಜನೆಗೆ ಮಾರ್ಗಸೂಚಿ ಹೊರಡಿಸಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿಡುಗಡೆ ಮಾಡಿರುವ ಪ್ರಸ್ತಾವನೆಯಲ್ಲಿ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳು ಯಾರು, ಯಾವ ರೀತಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು, ನಂತರ ಯಾವಾಗ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ಬರಲಿದೆ ಎಂಬ ಬಗ್ಗೆ ತಿಳಿಸಿದೆ.

ಮೇ 20 ರಂದು ಕರೆದ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡ ಗೃಹಲಕ್ಷ್ಮಿ ಯೋಜನೆಯಲ್ಲಿ ಪ್ರತಿ ಕುಟುಂಬದ ಯಜಮಾನಿಗೆ 2,000 ರೂಪಾಯಿಯ ಮಾಸಿಕ ಭತ್ಯೆ ನೀಡುವ ಬಗೆಗಿನ ಪ್ರಸ್ತಾಪದಲ್ಲಿ ಒಂದಷ್ಟು ನಿಯಮಗಳನ್ನು ಹೊರಡಿಸಲಾಗಿದೆ. ಅದರಂತೆ

* ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ಗುರುತಿಸಿಕೊಂಡ ಮಹಿಳೆ ಈ ಯೋಜನೆಯ ಅರ್ಹ ಫಲಾನುಭವಿ ಆಗಿರುತ್ತಾರೆ.

* ಒಂದು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರು ಇದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸತಕ್ಕದ್ದು.

* ಯೋಜನೆಯ ಫಲಾನುಭವಿಗಳು ಇದೇ ಜೂನ್ 15 ರಿಂದ ಜುಲೈ 15 ರ ವರೆಗೆ ಅರ್ಜಿ ಸಲ್ಲಿಸಬಹುದು.

* ಅರ್ಜಿದಾರರು ಸೇವಾಸಿಂಧು ಪೋರ್ಟಲ್ ಅಥವಾ ತಾವೇ ಖುದ್ದು ಅಧಿಕಾರಿಗಳ ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.

* ಯೋಜನೆಯ ಸೌಲಭ್ಯ ಪಡೆಯುವ ಅರ್ಜಿದಾರರ ಬ್ಯಾಂಕ್ ಖಾತೆಯ ವಿವರ ಮತ್ತು ಆಧಾರ್ ಕಾರ್ಡ್ ಗಳನ್ನು ಜೋಡಣೆ ಮಾಡಬೇಕಿದೆ.

* ಜುಲೈ 15 ರ ನಂತರ ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲಿಸಿ, ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು.

* ಅರ್ಜಿಯಲ್ಲಿನ ಅಂಶಗಳು ತಪ್ಪೆಂದು ಕಂಡುಬಂದಲ್ಲಿ ಅರ್ಜಿದಾರರು ಅಲ್ಲಿಯವರೆಗೆ ತಗೆದುಕೊಂಡ ಹಣವನ್ನು ವಸೂಲಿ ಮಾಡಿ, ಸೂಕ್ತ ಕ್ರಮ ತಗೆದುಕೊಳ್ಳಲಾಗುವುದು.

* ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವವರು, ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಹೆಸರಿನಲ್ಲಿ ಅರ್ಜಿ ಸಲ್ಲಿಸಬೇಕು‌.

* ಅರ್ಜಿಯನ್ನು ಗ್ರಾಮ ಒನ್ ಕೇಂದ್ರ, ಬೆಂಗಳೂರು ಒನ್ ಕೇಂದ್ರ, ಸೈಬರ್ ಕೆಫೆಗಳ ಮೂಲಕ ಸಲ್ಲಿಸಬಹುದು‌.

* ಭೌತಿಕವಾಗಿ ಅರ್ಜಿ ಸಲ್ಲಿಸುವವರು ತಮ್ಮ ಸಮೀಪದ ನಾಡ ಕಛೇರಿ ಮೂಲಕ ಅರ್ಜಿ ಸಲ್ಲಿಸಬಹುದು.

* ಗೃಹಲಕ್ಷ್ಮಿ ಅರ್ಜಿಗಳನ್ನು ಪರಿಶೀಲಿಸಿ ಮಂಜೂರಾತಿ ನೀಡಲು ಸಂಬಂಧಿಸಿದ ತಾಲ್ಲೂಕಿನ ಶಿಶು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳನ್ನು ಈ ಯೋಜನೆಯ ಅಧಿಕಾರಿಗಳು ಎಂದು ಮಂಜೂರಾತಿ ಪ್ರಾಧಿಕಾರದ ಅಧಿಕಾರಿಗಳೆಂದು ಪರಿಗಣಿಸಲಾಗಿದೆ.

ಅದರಂತೆ ಜೂನ್ 15 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಜುಲೈ 15 ಕ್ಕೆ ಕೊನೆಯ ದಿನವಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.