cpim – Peepal Media

ಜಿಲ್ಲೆಯ ಶಿಕ್ಷಣ, ಆರೋಗ್ಯ, ನಿರುದ್ಯೋಗದ ಸ್ಥಿತಿಗತಿಗಳ ಅರಿವಿಲ್ಲದ ಅಭ್ಯರ್ಥಿ ಬೃಜೇಶ್ ಚೌಟ: ಮುನೀರ್ ಕಾಟಿಪಳ್ಳ ಆರೋಪ
ಮೂರು ದಶಕಗಳ ಬಿಜೆಪಿ ದುರಾಡಳಿತದ ವಿರುದ್ದದ ಜನಾಕ್ರೋಶವನ್ನು ತಣಿಸಲು ಬಿಜೆಪಿ ನಳಿನ್ ಕುಮಾರ್ ಕಟೀಲ್ ರಿಗೆ ಟಿಕೇಟ್ ತಪ್ಪಿಸಿ ಬೃಜೇಶ್ ಚೌಟರನ್ನು ಕಣಕ್ಕಿಳಿಸಿದೆ. ವಿದ್ಯಾವಂತ, ಮಾಜಿ ಯೋಧ ಎಂಬ ಬಿರುದಾಂಕಿತ ಅಭ್ಯರ್ಥಿ ಮೂಲಕ ತನ್ನದು ಯೋಗ್ಯ ಅಭ್ಯರ್ಥಿ ಎಂದು ಜನರ ನಡುವೆ ಪ್ರಚಾರ ನಡೆಸುತ್ತಿದೆ. ಆ ಮೂಲಕ ಆಡಳಿತ ವಿರೋಧಿ ಅಲೆಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದೆ. ಆದರೆ, ಬಿಜೆಪಿ ಹೊಸ ಮುಖ ಬೃಜೇಶ್ ಚೌಟರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜನರ ಯಾವುದೇ ಸಮಸ್ಯೆಗಳ ಕುರಿತು ಅರಿವಿಲ್ಲ. ಇಲ್ಲಿನ ಜನರನ್ನು ಕಿತ್ತು ತಿನ್ನುತ್ತಿರುವ ಆರೋಗ್ಯ, ಶಿಕ್ಷಣದ ವ್ಯಾಪಾರೀಕರಣದ ಸಮಸ್ಯೆಗಳು, ಉಲ್ಬಣಾವಸ್ಥೆಗೆ ತಲುಪಿರುವ ನಿರುದ್ಯೋಗ ಸ್ಥಿತಿಯ ಕುರಿತು ಚೌಟರಿಗೆ ಅರಿವೂ ಇಲ್ಲ, ಅಧ್ಯಯನವೂ ಇಲ್ಲ ಇಲ್ಲ ಎಂದು ಸಿಪಿಐ ಎಂ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.

ಹತ್ತು ವರ್ಷಗಳ ಅವರ ಸಾರ್ವಜನಿಕ ಜೀವನದಲ್ಲಿ ಚೌಟರು ಈ ಸಮಸ್ಯೆಗಳ ಕುರಿತು ಒಂದು ಶಬ್ದ ಮಾತಾಡಿದ್ದು ಯಾರೂ ಕಂಡಿಲ್ಲ. ಇಂತಹ ಅಭ್ಯರ್ಥಿನ್ನು ಗೆಲ್ಲಿಸಿದರೆ ದ.ಕ. ಜಿಲ್ಲೆಯಲ್ಲಿ ಬಿಜೆಪಿಯ 33 ವರ್ಷಗಳ ಸತತ ಆಳ್ವಿಕೆಯ ಕರಾಳ ಅಧ್ಯಾಯಕ್ಕೆ ಮತ್ತೆ ಐದು ವರ್ಷ ಸೇರ್ಪಡೆ ಮಾತ್ರ ಆಗಲಿದೆ. ಕೋಮುವಾದಕ್ಕೆ ಮಣೆ ಹಾಕುವ ಪಕ್ಷದಿಂದ ಸಮಸ್ಯೆಗಳು ಮತ್ತಷ್ಟು ಹೆಚ್ಚಲಿದೆ. ಜಿಲ್ಲೆಯ ಯುವಜನತೆ ಈಗಲಾದರು ಎಚ್ಚೆತ್ತು ಈ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು, ಆ ಮೂಲಕ ಜಿಲ್ಲೆಯ ಮೂರು ದಶಕಗಳ ಬಿಜೆಪಿ ದುರಾಡಳಿತಕ್ಕೆ ಅಂತ್ಯ ಹಾಡಬೇಕು ಎಂದು ಅವರು ಜನರಲ್ಲಿ ಮನವಿ ಮಾಡಿಕೊಂಡರು.

ಅವರು ಕುಳಾಯಿ ಮಹಿಳಾ ಮಂಡಲ ಸಭಾಂಗಣದಲ್ಲಿ ಸಿಪಿಐಎಂ ವತಿಯಿಂದ ಅಯೋಜಿಸಲಾಗಿದ್ದ ಸುರತ್ಕಲ್ ವಿಭಾಗ ಮಟ್ಟದ ರಾಜಕೀಯ ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಡಾ. ಕೃಷ್ಣಪ್ಪ ಕೊಂಚಾಡಿ ಮಾತನಾಡುತ್ತಾ ಹತ್ತು ವರ್ಷಗಳ ಮೋದಿ ಸರಕಾರದ ದುರಾಡಳಿತದಿಂದ ದೇಶದ ದುರಂತದತ್ತ ಚಲಿಸುತ್ತಿದೆ. ಚುನಾವಣಾ ಬಾಂಡ್ ಪಡೆಯುವ ಮೂಲಕ ಕಪ್ಪು ಪಟ್ಟಿಗೆ ಸೇರಬೇಕಾದ ಕಾರ್ಪೊರೇಟ್ ಕಂಪೆನಿಗಳಿಗೆ ರೆಡ್ ಕಾರ್ಪೆಟ್ ಹಾಕಲಾಗುತ್ತಿದೆ. ದೇಶದ ಆದಿವಾಸಿಗಳು, ದಲಿತರು, ಹಿಂದುಳಿದವರನ್ನು ಹಸಿವೆಗೆ ತಳ್ಳಲಾಗುತ್ತಿದೆ. ಈ ಭಾರಿಯ ಚುನಾವಣೆಯಲ್ಲಿ ಮೋದಿ ಸರಕಾರ ಸೋಲಿಸಲು ಈ ಎಲ್ಲಾ ವಿಭಾಗಗಳು ಒಟ್ಟಾಗಿ ದುಡಿಯಬೇಕು ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಜಿಲ್ಲಾ ಸಮಿತಿ ಸದಸ್ಯ ಬಿ ಕೆ ಇಮ್ತಿಯಜ್ ಮಾತನಾಡಿದರು.ಮಂಗಳೂರು ನಗರ ಸಮಿತಿ ಸದಸ್ಯರಾದ ಶ್ರೀನಾಥ್ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು, ಚರಣ್ ಶೆಟ್ಟಿ ವಂದಿಸಿದರು. ನಗರ ಉತ್ತರ ಸಮಿತಿ ಕಾರ್ಯದರ್ಶಿ ಪ್ರಮೀಳಾ ಕೆ, ಮಾಜಿ ಕಾರ್ಪೊರೇಟರ್ ಅಯಾಝ್, ಜೋಕಟ್ಟೆ ಪಂಚಾಯತ್ ಸದಸ್ಯ ಅಬೂಬಕ್ಕರ್ ಬಾವಾ, ಕಾರ್ಮಿಕ ನಾಯಕ ರವಿಚಂದ್ರ ಕೊಂಚಾಡಿ ಸಹಿತ ಹಲವು ಮುಖಂಡರು ಉಪಸ್ಥಿತರಿದ್ದರು.

ಇಡಿ, ಸಿಬಿಐ, ತೆರಿಗೆ ಇಲಾಖೆ ಎಲ್ಲವೂ ಪ್ರಧಾನಿಗಳ ಗುಲಾಮರಾಗಿ ಕೆಲಸ ಮಾಡುತ್ತಿವೆ: ಡಾ. ಮುಖ್ಯಮಂತ್ರಿ ಚಂದ್ರು
ಬೆಂಗಳೂರು: ಜಾರಿ ನಿರ್ದೇಶನಾಲಯ, ಸಿಬಿಐ, ತೆರಿಗೆ ಇಲಾಖೆ ಮತ್ತಿತರ ಸ್ವತಂತ್ರ ಸಂಸ್ಥೆಗಳ ಅಧಿಕಾರಿಗಳು ಸ್ವತಂತ್ರ ಅಧಿಕಾರಿಗಳಾಗಿ ಕೆಲಸ ಮಾಡುತ್ತಿಲ್ಲ. ಬದಲಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಗುಲಾಮರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದರು.

ಆಮ್‌ ಆದ್ಮಿ ಪಾರ್ಟಿ ಸಂಸ್ಥಾಪಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಅಕ್ರಮವಾಗಿ ಬಂಧಿಸಿರುವುದನ್ನು ವಿರೋಧಿಸಿ ನಗರದ ಸ್ವತಂತ್ರ ಉದ್ಯಾನವನದಲ್ಲಿ ಮುಖ್ಯಮಂತ್ರಿ ಚಂದ್ರು ನೇತೃತ್ವದಲ್ಲಿ ‘ಇಂಡಿಯಾ’ ಒಕ್ಕೂಟವು ಬೃಹತ್‌ ಶಾಂತಿಯುತ ಪ್ರತಿಭಟನೆಯನ್ನು ನಡೆಸಿತು. ಈ ಸಂದರ್ಭ ಮುಖ್ಯಮಂತ್ರಿ ಚಂದ್ರು ಅವರು ಮಾತನಾಡುತ್ತ, ಕಳೆದ 10 ವರ್ಷಗಳಲ್ಲಿ ನಾವು ನೋಡಿದ್ದು ಪ್ರಜಾಪ್ರಭುತ್ವದ ಕಗ್ಗೋಲೆ, ವಿವಿಧತೆಯಲ್ಲಿ ಏಕತೆಯಿಂದಿರುವ ಭಾರತದ ನಾಶ, ಜನತಂತ್ರ ವ್ಯವಸ್ಥೆಯ ಸರ್ವನಾಶ, ಸಂವಿಧಾನ ಬದಲಿಸುವ ಪ್ರಯತ್ನ, ಪಾರದರ್ಶಕತೆ ಇಲ್ಲದ ಆಡಳಿತ, ಕೋಮುಗಲಭೆಗಳಾಗಿವೆ ಎಂದರು.

ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರ ಮೂಲಕ ಕಡಿವಾಣ ಹಾಕುತ್ತಿದ್ದಾರೆ, ದೆಹಲಿಯಲ್ಲಿ ಲೆಫ್ಟಿನೆಂಟ್‌ ಗವರ್ನರ್‌ ಮೂಲಕ ರಾಜ್ಯದ ಆಡಳಿತವನ್ನು ಹತೋಟಿಯಲ್ಲಿಡಲು ಯತ್ನಿಸುತ್ತಿದ್ದಾರೆ. ಜೈಲಿನಲ್ಲಿರಬೇಕಾದ ಕಡುಭ್ರಷ್ಟರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಮಂತ್ರಿ, ಮುಖ್ಯಮಂತ್ರಿಗಳನ್ನಾಗಿಸುತ್ತಿದ್ದಾರೆ. ರಾಜಕೀಯ ಎದುರಾಳಿಗಳನ್ನು ಇಡಿ, ಸಿಬಿಐ, ತೆರಿಗೆ ಇಲಾಖೆ ಮತ್ತಿತರ ತನಿಖಾ ಸಂಸ್ಥೆಗಳ ಮೂಲಕ ಸುಳ್ಳು ಪ್ರಕರಣಗಳಡಿ ಆರೋಪಿಗಳಾಗಿಸಿ ಕಿರುಕುಳಕೊಡುತ್ತಿದ್ದಾರೆ. ಈ ದೇಶ ಉಳಿಯಬೇಕೆಂದರೆ ಸರ್ವಾಧಿಕಾರಿಯ ಆಡಳಿತಕ್ಕೆ ಅಂತ್ಯಹಾಡಬೇಕು ಎಂದು ಮುಖ್ಯಮಂತ್ರಿ ಚಂದ್ರು ಕರೆ ನೀಡಿದರು.

ದುಡ್ಡು ಇರುವವರ ಹತ್ತಿರ ಇ.ಡಿ ಹೋಗುತ್ತೆ. ಆಮೇಲೆ ಒಳಗೆ ಹೋಗ್ತಿರಾ, ಹೊರಗೆ ಇರ್ತಿರಾ ಎಂದು ಕೇಳುತ್ತೆ. ಹೊರಗಿರಬೇಕಾದ್ರೆ ಬಿಜೆಪಿ ಹುಂಡಿಗೆ ಕಾಸು ಹಾಕಿ. ಇಲ್ದೇ ಹೋದ್ರೆ ಒಳಗೋಗಿ. ಇದು ನೂರಾರು ಉದ್ಯಮಿಗಳ ಪರಿಸ್ಥಿತಿಯಾಗಿದೆ. ಸಾವಿರಾರು ಕೋಟಿ ರೂ. ಅಕ್ರಮ ಹಣವನ್ನು ಚುನಾವಣಾ ಬಾಂಡ್‌ ಮೂಲಕ ತನ್ನ ಹುಂಡಿಗೆ ಹಾಕಿಸಿಕೊಂಡು ಸಕ್ರಮ ಮಾಡುತ್ತಿದೆ. ಸ್ವಿಸ್‌ ಬ್ಯಾಂಕಿನಲ್ಲಿರು ಎಲ್ಲ ಕಳ್ಳ ದುಡ್ಡನ್ನು ತಂದು ಭಾರತದ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂಪಾಯಿ ಹಾಕುತ್ತೇನೆ ಎಂದು 10 ವರ್ಷಗಳ ಹಿಂದೆ ನರೇಂದ್ರ ಮೋದಿ ಅವರು ಹೇಳಿದ್ದರು. ಆದರೆ ಅವರೇ ಚುನಾವಣೆ ಬಾಂಡ್‌ ಮೂಲಕ ಸಾವಿರಾರು ಕೋಟಿ ಅಕ್ರಮ ಹಣವನ್ನು ಗುಡ್ಡೆ ಹಾಕಿಕೊಂಡಿದ್ದಾರೆ. ಸರ್ಕಾರಿ ಆಸ್ತಿಗಳನ್ನು ಒಂದುಕಡೆಯಿಂದ ಮಾರಾಟ ಮಾಡಿಕೊಂಡು ಬಂದಿದ್ದರೆ. ದೇಶದ ಸಾಲವನ್ನು ಕೇವಲ 10 ವರ್ಷಗಳಲ್ಲಿ 200 ಪಟ್ಟು ಹೆಚ್ಚಿದ್ದಾರೆ. ಮೊದಲೆಲ್ಲ ಭಾರತದಲ್ಲಿ ಹುಟ್ಟುವ ಪ್ರತಿ ಮಗುವಿನ ಮೇಲೆ 50 ಸಾವಿರ ಸಾಲವಿತ್ತು. ಆದರೆ ಈಗ ಬರೋಬ್ಬರಿ 1.5 ಲಕ್ಷ ರೂ. ಸಾಲವಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಶಾಲೆಗಳ ಅಭಿವೃದ್ಧಿಗೆ ಕೇಜ್ರಿವಾಲ್‌ ಮಾದರಿ: ರಾಮಲಿಂಗಾರೆಡ್ಡಿ

ದೆಹಲಿಯಲ್ಲಿ ಅರವಿಂದ ಕೇಜ್ರಿವಾಲ್‌ ಅವರು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಿರುವುದನ್ನು ನೋಡಿ ಸ್ಫೂರ್ತಿಗೊಂಡು ನಮ್ಮ ಕ್ಷೇತ್ರದ 22 ಶಾಲೆಗಳನ್ನು ಅಭಿವೃದ್ಧಿಪಡಿಸಿದೆವು. ಮೊದಲು 4,000 ಸಂಖ್ಯೆಯಲ್ಲಿದ್ದ ವಿದ್ಯಾರ್ಥಿಗಳು ಇದ್ದವರು 5,500 ಮಕ್ಕಳಾಗಿದ್ದಾರೆ ಎಂದು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸಂತಸ ವ್ಯಕ್ತಪಡಿಸಿದರು.

‘ಇಂಡಿಯಾ’ ಒಕ್ಕೂಟದ ಭಾಗವಾಗಿ ಕಾಂಗ್ರೆಸ್‌ ಪ್ರತಿನಿಧಿಯಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರಾಮಲಿಂಗಾರೆಡ್ಡಿ ಅವರು ಬಿಜೆಪಿ ವಿರುದ್ಧ ಹರಿಹಾಯ್ದರು. ಬಿಜೆಪಿಗರ ಪೂರ್ವಜರು ಆರ್‌ಎಸ್‌ಎಸ್‌, ವಿಶ್ವ ಹಿಂದೂ ಪರಿಷತ್‌ನವರಾಗಿದ್ದಾರೆ. ಅವರು ಯಾರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದವರಲ್ಲ. ಮನುವಾದಿ, ಸರ್ವಾಧಿಕಾರಿ ಧೋರಣೆಯಲ್ಲಿ ನಂಬಿಕೆ ಇಟ್ಟವರಾಗಿದ್ದಾರೆ. ಸಂವಿಧಾನ ವಿರೋಧಿಗಳಾಗಿದ್ದಾರೆ. ಭಾರತದಲ್ಲಿ ಈಗ ಸರ್ವಾಧಿಕಾರ ಚಾಲ್ತಿಯಲ್ಲಿದೆ. ಸಂವಿಧಾನ ಬದಲಾದ್ರೆ ಸ್ವಾತಂತ್ರ್ಯ ಪೂರ್ವದಲ್ಲಿ ನಮ್ಮ ದೇಶ ಹೇಗಿತ್ತೋ ಆ ಪರಿಸ್ಥಿತಿಗೆ ಕೊಂಡೊಯ್ಯುತ್ತಾರೆ ಎಂದು ಕಳವಳ ವ್ಯಕ್ತಪಡಿಸಿದರು.

2ಜಿ ಹಗರಣದಲ್ಲಿ, ಕಲ್ಲಿದ್ದಲು ಹಗರಣದಲ್ಲಿ ಅಕ್ರಮ ನಡೆದಿರುವುದನ್ನು ಸಾಬೀತು ಪಡಿಸಲಾಗಲಿಲ್ಲ. ಆದರೂ ಅವುಗಳು ಭಾರತದ ಅತಿದೊಡ್ಡ ಹಗರಣಗಳೆಂದು ಸುಳ್ಳು ಬಿತ್ತಿದರು. ಅಬಕಾರಿ ನೀತಿ ಹಗರಣದಲ್ಲಿಯೂ ಎಎಪಿ ಪಾತ್ರದ ಬಗ್ಗೆ ನಿರಂತರವಾಗಿ ಸುಳ್ಳು ಹಬ್ಬಿಸಲಾಗುತ್ತಿದೆ. ಆದರೆ ಎರಡು ವರ್ಷಗಳೇ ಕಳೆದರೂ ಒಂದು ರೂಪಾಯಿ ಅಕ್ರಮ ಹಣವನ್ನು ವಶಪಡಿಸಿಕೊಳ್ಳಲಾಗಿಲ್ಲ. ಚುನಾವಣೆ ಬಾಂಡ್‌ ಮೂಲಕ ಸಾವಿರಾರು ಕೋಟಿ ಅಕ್ರಮ ಎಸಗಿರುವುದು ಕಣ್ಮುಂದೆ ಇದ್ದರೂ ಬಿಜೆಪಿ ವಿರುದ್ಧ ತನಿಖಾ ಸಂಸ್ಥೆಗಳು ಕ್ರಮ ಕೈಗೊಳ್ಳುತ್ತಿಲ್ಲ. ಮುಂದೆ ಒಳ್ಳೆಯ ದಿನಗಳು ಬರಲಿವೆ. ಕೇಜ್ರಿವಾಲ್‌ ಆರೋಪ ಮುಕ್ತರಾಗಲಿದ್ದಾರೆ. ಬಿಜೆಪಿಯ ಎಲ್ಲ ಭ್ರಷ್ಟರು ಜೈಲು ಸೇರಲಿದ್ದಾರೆ ಎಂದು ಆಶಾಯ ವ್ಯಕ್ತಪಡಿಸಿದರು.

ಸಿಪಿಐಎಂ ಮುಖಂಡ ಜಿ.ಎನ್‌.ನಾಗರಾಜ್‌ ಮಾತನಾಡುತ್ತ, ಭಾರತ ದೇಶದಲ್ಲಿ ಅಧಿಕಾರದಲ್ಲಿರುವುದು ಮೋದಿ ಎನ್ನಲಾಗುತ್ತಿದೆ. ಆದರೆ ಮೋದಿ ಹಿಂದಿರುವ ಆರ್‌ಎಸ್‌ಎಸ್‌ ಈ ದೇಶವನ್ನು ನಿಯಂತ್ರಿಸುತ್ತಿದೆ. ಮನುವಾದಿ, ಕೋಮು ದ್ವೇಷದ ಚಿಂತನೆಗಳನ್ನು ಹೊಂದಿರುವ, ಸರ್ವಾಧಿಕಾರಿ ಧೋರಣೆಯ ಆರ್‌ಎಸ್‌ಎಸ್‌ ಕಳೆದ ನೂರು ವರ್ಷಗಳಿಂದ ವ್ಯವಸ್ಥಿತವಾಗಿ ಭಾರತವನ್ನು ತನ್ನ ಕೈವಶ ಮಾಡಿಕೊಳ್ಳುತ್ತ ಬಂದಿದೆ. ಇದೀಗ ಆರ್‌ಎಸ್‌ಎಸ್‌ ಉಚ್ಛ್ರಾಯಸ್ಥಿತಿಯಲ್ಲಿರುವುದು ಆತಂಕಕಾರಿ ವಿಚಾರವಾಗಿದೆ. ಚುನಾವಣೆ ಸಂದರ್ಭ ಕೇಜ್ರಿವಾಲ್‌ ಬಂಧನ, ಕಾಂಗ್ರೆಸ್‌ ಪಕ್ಷದ ಖಾತೆಗಳನ್ನು ಸ್ಥಗಿತಗೊಳಿಸಿರುವುದು ಸಂವಿಧಾನ ವಿರೋಧಿ ನಡೆ. ಮಾಜಿ ಪ್ರಧಾನಿಯೊಬ್ಬರನ್ನು ಜೈಲಿನಲ್ಲಿಟ್ಟು ಚುನಾವಣೆಯ ಪಾಕಿಸ್ತಾನದಲ್ಲಿರುವ ಚಿಂತಕರು ಮತ್ತು ಕವಿಗಳು “ಅಯ್ಯೋ ಭಾರತವೇ ನೀನು ನಮ್ಮಂತಾದೆಯಲ್ಲಾ..” ಎಂದು ವಿಷಾಧದಿಂದ ಕವಿತೆಗಳನ್ನು ಬರೆಯುತ್ತಿದ್ದಾರೆ ಎಂದರು.

ಎಸ್‌ಡಿಪಿಐನ ಅಬ್ದುಲ್‌ ಮಜಿದ್‌, ಸಾಮಾಜಿಕ ಹೋರಾಟಗಾರ ನೂರ್‌ ಶ್ರೀಧರ್‌, ಸಲೀಲ್‌ ಶೆಟ್ಟಿ, ಎಎಪಿ ರಾಜ್ಯ ಉಪಾಧ್ಯಕ್ಷರಾದ ಮೋಹನ್‌ ದಾಸರಿ, ವಿಜಯ್‌ ಶರ್ಮಾ, ರಮೇಶ್‌ ಬೆಲ್ಲಂಕೊಂಡ, ಡಾ. ವೆಂಕಟೇಶ್‌, ಶಾಂತಳಾ ದಾಮ್ಲೆ, ಸಂಪತ್‌ ಶೆಟ್ಟಿ, ನಸೀಮುದ್ದಿನ್‌ ಪಟೇಲ್‌, ರುದ್ರಯ್ಯ ನವಲೀಹೀರೇಮಠ್, ಸುದೇಶ್‌ ರಾಥೋಡ್‌, ವಿವೇಕಾನಂದ ಸಾಲಿನ್ಸ್‌, ಉಮಾಶಂಕರ್‌, ರಾಜ್ಯಪ್ರಧಾನ ಕಾರ್ಯದರ್ಶಿ ಸಂಚಿತ್‌ ಸಹಾನಿ, ಪ್ರಕಾಶ್‌ ನಡುಂನುಡಿ, ರಾಜ್ಯ ಮಾಧ್ಯಮ ಸಂಚಾಲಕರಾದ ಜಗದೀಶ್‌ ವಿ. ಸದಂ, ರಾಜ್ಯ ಸಂಘಟನಾಧ್ಯಕ್ಷರಾದ ಅರ್ಜುನ್ ಹಲಗೀಗೌಡರ್‌, ಬಿ.ಟಿ.ನಾಗಣ್ಣ, ಕುಶಾಲಾ ಗೌಡ, ಸುಷ್ಮ ವಿ. ನವೀನ್‌ ಚಂದ್ರ ಪೂಜಾರಿ, ಲೋಹಿತ್‌ ಹನುಮಾಪುರ, ಫರೀದುದ್ದೀನ್‌ ಷರೀಫ್‌, ರಮೇಶ್‌ ಬಾಬು, ಜಿ.ಸಿ. ಭೈರೆಡ್ಡಿ, ಡಾ. ಸತೀಶ್‌ ಮತ್ತಿತರ ಮುಖಂಡರು ಸೇರಿದಂತೆ ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು. ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿಗಾಗಿ ಅನೇಕ ಮಂದಿ ಪಕ್ಷಾತೀತರಾಗಿ ಪಾಲ್ಗೊಂಡಿದ್ದರು.

ಪ್ರತಿಭಟನೆ ವೇಳೆ ಹೆಚ್ಚಿನವರು ಕಪ್ಪು ಪಟ್ಟಿ ಧರಿಸಿದ್ದರು. ಸಂವಿಧಾನ ವಿರೋಧಿ ನರೇಂದ್ರ ಮೋದಿ, ಭ್ರಷ್ಟ ಮೋದಿ ಧಿಕ್ಕಾರ, ಬಾಂಡ್‌ ಮೋದಿಗೆ ಧಿಕ್ಕಾರ ಘೋಷಣೆಗಳು ಕೇಳಿಬಂದವು.

ಜಾತಿ ತಾರತಮ್ಯದ ಹಾಗು ಶೋಷಿತ ದಲಿತ ಸಮುದಾಯವನ್ನು ಅಪಮಾನಿಸುವ ಗಾದೆಗಳ ಬಳಕೆ – 19 ರಂದು ರಾಜ್ಯದಾದ್ಯಂತ ಪ್ರತಿಭಟನೆಗೆ ಸಿಪಿಐಎಂ ಕರೆ
ಬೆಂಗಳೂರು: ದಲಿತ ಸಮುದಾಯವನ್ನು ಅಪಮಾನಿಸುವ, ಜಾತಿ ದೌರ್ಜನ್ಯದ ಗಾದೆಯನ್ನು ಸಾರ್ವಜನಿಕವಾಗಿ ಬಳಸಿ ನಿಂದಿಸಿದ ನಟ ಉಪೇಂದ್ರ ಹಾಗು ಮಂತ್ರಿ ಮಲ್ಲಿಕಾರ್ಜುನರವರ ತಪ್ಪು ನಡೆಯನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸವಾದಿ ) ದ ಕರ್ನಾಟಕ ರಾಜ್ಯ ಸಮಿತಿ ರಾಜ್ಯದಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

“ದಲಿತ ಸಮುದಾಯವನ್ನು ಅಪಮಾನಿಸುವ, ಜಾತಿ ದೌರ್ಜನ್ಯದ ಗಾದೆಯನ್ನು ಸಾರ್ವಜನಿಕವಾಗಿ ಬಳಸಿ ನಿಂದಿಸಿದ ನಟ ಉಪೇಂದ್ರ ಹಾಗು ಮಂತ್ರಿ ಮಲ್ಲಿಕಾರ್ಜುನರವರ ತಪ್ಪು ನಡೆಯನ್ನು ಭಾರತ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸವಾದಿ ) ದ ಕರ್ನಾಟಕ ರಾಜ್ಯ ಸಮಿತಿ ಬಲವಾಗಿ ಖಂಡಿಸುತ್ತದೆ. ಮೇಲ್ಜಾತಿ ಹಾಗೂ ಅದರ ಬಲಾಢ್ಯ ವರ್ಗಗಳು ಬಳಸುವ ಈ ದೌರ್ಜನ್ಯದ ಗಾದೆ ಕೇವಲ ಕೆಲ ವ್ಯಕ್ತಿ ಅಥವಾ ವ್ಯಕ್ತಿಗಳನ್ನು ನಿಂದಿಸುತ್ತಿಲ್ಲ, ಬದಲಿಗೆ ಇಡೀ ಸಮುದಾಯವನ್ನೇ ನಿಂದಿಸುತ್ತದೆ‌ ಮತ್ತು ಅಪಮಾನಿಸುತ್ತದೆ.” ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

ಘನ ನ್ಯಾಯಾಲಯವೂ ಕೂಡಾ,ಇಡೀ ದಲಿತ ಸಮುದಾಯವನ್ನೇ ಗುರಿಯಾಗಿಸಿ, ನಿಂದನೆಯನ್ನು, ಅಪಮಾನವನ್ನು ಮಾಡುವ ಈ ದೌರ್ಜನ್ಯದ ಗಾದೆಯ ಪ್ರಯೋಗವನ್ನು, ಕೇವಲ ಗಾದೆಯ ಬಳಕೆಯೆಂದು ಲಘುವಾಗಿ ಪರಿಗಣಿಸಿರುವುದು ಆಶ್ಚರ್ಯಕರ ಮತ್ತು ವಿಷಾಧನೀಯವಾಗಿದೆ ಎಂದು ಸಿಪಿಐಎಂ ಠೀಕಿಸಿದೆ.
ಈ ರೀತಿಯ ಗಾದೆಯನ್ನು ಸಾರ್ವಜನಿಕವಾಗಿ ಬಳಸುವ ಮೂಲಕ ಒಂದು ಸಮುದಾಯವನ್ನು ನಿಂದಿಸಬಹುದೇ? ಅಪಮಾನಿಸ ಬಹುದೇ? ನೋವುಂಟು ಮಾಡಬಹುದೇ? ಎಂದು ಸಿಪಿಐಎಂ ಪ್ರಶ್ನಿಸಿದೆ.

“ನ್ಯಾಯಾಲಯದ ಅಭಿಪ್ರಾಯ ಪ್ರಕಟಣೆಯ ನಂತರ, ನಾಯಕ ನಟ ಉಪೇಂದ್ರರು ಹಾಗೂ ಮಂತ್ರಿಗಳು ಬಳಸಿದ ಗಾದೆಯನ್ನು ಎತ್ತಿ ಹಿಡಿದು ಜಾತಿ ತಾರತಮ್ಯ ಹಾಗೂ ದೌರ್ಜನ್ಯ ಮೆರೆವ ಖಂಡನೀಯ ಬೆಂಬಲಗಳು ಸಾಮಾಜಿಕ ಜಾಲತಾಣಗಳಲ್ಲಿ ಕಂಡುಬರುತ್ತಿವೆ. ಅವುಗಳನ್ನು ತಡೆಯಲು ಅಗತ್ಯ ಕ್ರಮವಹಿಸುವಂತೆ ರಾಜ್ಯ ಸರಕಾರವನ್ನು ಸಿಪಿಐಎಂ ಒತ್ತಾಯಿಸುತ್ತದೆ‌.” ಎಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅದೇ ರೀತಿ, ಘನ ನ್ಯಾಯಾಲಯವು ಹೇಳಿಕೆಯನ್ನು ಪುನರ್ ಪರಿಶೀಲಿಸುವಂತೆ ಪಕ್ಷವು ಮನವಿ ಮಾಡಿದೆ.

ಪಕ್ಷದ ಪ್ರಕಟಣೆಯು ಚಲನ ಚಿತ್ರರಂಗದ ಜನಪ್ರಿಯ ನಾಯಕ ನಟನ ಹಾಗೂ ಮಂತ್ರಿ ಮಲ್ಲಿಕಾರ್ಜುನರವರ ಹೇಳಿಕೆ ಅವರ ಅಭಿಮಾನಿಗಳು, ಬೆಂಬಲಿಗರು ಮತ್ತು ರಾಜ್ಯದ ಜನತೆಯ ಮೇಲೆ ಗಂಭೀರ ಪರಿಣಾಮಗಳನ್ನು ಬೀರುತ್ತವೆಂಬುದನ್ನು ಗಮನಿಸಬೇಕಾಗಿದೆ‌ ಎಂದಿದೆ.

ನಟ ಉಪೇಂದ್ರರವರು ಹಾಗೂ ಮಂತ್ರಿಗಳು ಅವರಿಗೆ ಅರಿವಿಲ್ಲದೇ ಅಥವಾ ಯಾರನ್ನು ನಿಂದಿಸುವ ದುರುದ್ದೇಶವಿಲ್ಲದೇ ವಾಡಿಕೆಯಂತೆ ಬಳಸಿದ್ದು ನಿಜವಾದಲ್ಲಿ, ಅವರು ಸಾರ್ವಜನಿಕವಾಗಿ ದಮನಿತ ಸಮುದಾಯ ಹಾಗೂ ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು ಎಂದು ಸಿಪಿಐಎಂ ಒತ್ತಾಯಿಸಿದೆ‌.

ಸಮಾಜದಲ್ಲಿನ ಮೇಲ್ಜಾತಿ ಹಾಗೂ ಮೇಲ್ವರ್ಗಗಳು, ಸಾವಿರಾರು ವರ್ಷಗಳಿಂದ, ಮಹಿಳೆಯರನ್ನು ಹಾಗು ದಲಿತ ಮತ್ತು ಹಿಂದುಳಿದ ಜಾತಿ ಸಮುದಾಯಗಳನ್ನು ಗುರಿಯಾಗಿಸಿ, ನಿಂದಿಸುವ ಹಾಗೂ ಅಪಮಾನಿಸಿ ದೌರ್ಜನ್ಯ ಎಸಗುವ ಬೈಗಳು ಮತ್ತು ಹಲವು ಗಾದೆಗಳನ್ನು ಜಾತಿ ಹಾಗು ಲಿಂಗ ತಾರತಮ್ಯ ಹಾಗೂ ದೌರ್ಜನ್ಯ ಮೆರೆಯುವ ಭಾಗವಾಗಿ ಚಾಲ್ತಿಯಲ್ಲಿಟ್ಟು ಮುಂದುವರೆಸುತ್ತಿರುವುದು ಮತ್ತು ವಾಡಿಕೆಯಾಗಿಸಿರುವುದು ಅಕ್ಷಮ್ಯ ಅಪರಾಧವಾಗಿದೆ.

ಈಗಲೂ ಈ ಖಂಡನೀಯ ದೌರ್ಜನ್ಯದ ಅಪಮಾನಗಳನ್ನು ದಿನ ನಿತ್ಯ, ಪ್ರತಿ ಕ್ಷಣ, ರಾಜ್ಯದ, ದೇಶದ ಎಲ್ಲ ಮಹಿಳಾ ಮತ್ತು ಶೂದ್ರ ಹಾಗೂ ದಲಿತ ಸಮುದಾಯಗಳು, ಮೇಲ್ಜಾತಿ ಹಾಗೂ ಮೇಲ್ಬರ್ಗಗಳಿಂದ ಅನುಭವಿಸುತ್ತಲೆ ಇವೆ.

ಈ ದೌರ್ಜನ್ಯದ ಕುರಿತಂತೆ ರಾಜ್ಯದ ಜನತೆ ಪ್ರತಿರೋಧಿಸುವುದು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಿದೆ. ಎಂದು ವಿವರಿಸಿದ ಸಿಪಿಐಎಂ, ರಾಜ್ಯದಾದ್ಯಂತ 19 ರಂದು ಜಾತಿದೌರ್ಜನ್ಯ ಹಾಗೂ ಅಸ್ಪೃಶ್ಯಾಚರಣೆ ಮತ್ತು ಲಿಂಗ ತಾರತಮ್ಯದ ಭೂತ ದಹಿಸುವ ಮೂಲಕ ಪ್ರತಿಭಟನೆ ನಡೆಸಲು ಜನತೆ ಹಾಗೂ ಘಟಕಗಳಿಗೆ ಕರೆ ನೀಡಿದೆ.

ಮಹಿಳೆಯರು ಹಾಗೂ ಶೂದ್ರ ಹಾಗೂ ದಲಿತ ಸಮುದಾಯಗಳನ್ನು ನಿಂದಿಸಿ ಅಪ‌ಮಾನಿಸುವ ಪದಗಳನ್ನ, ಗಾದೆಗಳನ್ನು, ಬೈಗಳನ್ನು ಬಳಸದಂತೆ ನಾಗರೀಕ ಸಮಾಜ ಜಾಗೃತಿ ಮತ್ತು ಎಚ್ಚರವನ್ನು ವಹಿಸಬೇಕು ಮತ್ತು ಆ ಮೂಲಕ ಜಾತಿ ಹಾಗೂ ಲಿಂಗ ತಾರತಮ್ಯ ನಿವಾರಣೆಯ ಹೋರಾಟಕ್ಕೆ ಬಲವನ್ನು ತುಂಬ ಬೇಕೆಂದು ಸಿಪಿಐಎಂ ಕರೆ ನೀಡಿದೆ.

ರಾಂಚಿ: ಸಿಪಿಐ (ಎಂ) ನಾಯಕ ಸುಭಾಷ್ ಮುಂಡಾ ಅವರನ್ನು ಗುಂಡಿಕ್ಕಿ ಕೊಂದ ದುಷ್ಟರ್ಮಿಗಳು
ರಾಂಚಿ: ಜಾರ್ಖಂಡ್ ನ ರಾಂಚಿಯಲ್ಲಿ ಸ್ಥಳೀಯ ಸಿಪಿಐ(ಎಂ) ನಾಯಕ ಸುಭಾಷ್ ಮುಂಡಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಪರಿಣಾಮವಾಗಿ ಅಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

ಸ್ಥಳೀಯ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ ವಾದಿ), ಸಿಪಿಐ(ಎಂ) ಮುಖಂಡ ಸುಭಾಷ್ ಮುಂಡಾ ಅವರನ್ನು ರಾಂಚಿಯ ದಲಾದಲಿ ಪ್ರದೇಶದಲ್ಲಿ ಬುಧವಾರ ಅಪರಿಚಿತ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಂಚಿಯ ದಲದಾಲಿ ಚೌಕ್‌ನಲ್ಲಿರುವ ಅವರ ಕಚೇರಿಯಲ್ಲಿ ರಾತ್ರಿ 7ರಿಂದ 8 ಗಂಟೆಯ ನಡುವೆ ಈ ಘಟನೆ ನಡೆದಿದೆ.  ದ್ವಿಚಕ್ರವಾಹನದಲ್ಲಿ ಬಂದ ದುಷ್ಕರ್ಮಿಗಳು ಏಳು ಬಾರಿ ಗುಂಡುಗಳನ್ನು ಹಾರಿಸಿದ್ದಾರೆ ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಪ್ರಕಾಶ್ ವಿಪ್ಲವ್ ಹೇಳಿದ್ದಾರೆ.

ಘಟನೆಯ ನಂತರ, ಕ್ರೋಧಗೊಂಡ ಸ್ಥಳೀಯರು ಸ್ಥಳದಲ್ಲಿದ್ದ ಅಂಗಡಿಗಳನ್ನು ಧ್ವಂಸಗೊಳಿಸಿ, ರಸ್ತೆಯಲ್ಲಿ ಸಂಚಾರವನ್ನು ನಿರ್ಬಂಧಿಸಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮುಂಡಾ ಅವರು ಹಟಿಯಾ ಕ್ಷೇತ್ರದಿಂದ ಎರಡು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಹಾಗೂ ಮಂದರ್ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಹತ್ಯೆಯ ವಿರುದ್ಧ ಪ್ರತಿಭಟನೆ ಮಧ್ಯರಾತ್ರಿಯವರೆಗೂ ಮುಂದುವರೆದಿದ್ದು, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯುಂಟಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಹೆಚ್ಚುವರಿ ಪೊಲೀಸ್ ಪಡೆಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದ್ದು, ಎಲ್ಲಾ ಅಗತ್ಯ ಕ್ರಮಗಳನ್ನು ಪೊಲೀಸರು  ತೆಗೆದುಕೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗ್ರಾಮಾಂತರದ  ಎಸ್‌ಪಿ ನೌಶಾದ್ ಆಲಂ ಅವರು ಮಾಹಿತಿ ನೀಡಿ, ರಾಂಚಿಯ ದಲಾದಲಿ ಪ್ರದೇಶದಲ್ಲಿ ಸಿಪಿಐ(ಎಂ) ಮುಖಂಡ ಸುಭಾಷ್ ಮುಂಡಾ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಮುಂಡಾ ತನ್ನ ಕಚೇರಿಯಲ್ಲಿ ಕುಳಿತಿದ್ದ ವೇಳೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಪೊಲೀಸರು ಪರಿಶೀಲನೆ ನಡೆಸಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಹೇಳಿದ್ದಾರೆ.

ಬಜರಂಗದಳದ ರೌಡಿಶೀಟರ್ ಸಕಲೇಶಪುರ ರಘು ಬಂಧನಕ್ಕೆ ಸಿಪಿಐಎಂ ಹಾಗೂ ಎಸ್ಡಿಪಿಐ ಆಗ್ರಹ
‘ಮುಸ್ಲಿಂ ವ್ಯಾಪಾರಿಗಳು ಬಂದರೆ ಗುಂಡಿಟ್ಟು ಸಾಯಿಸಿ’ ಎನ್ನುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗಲು ಕಾರಣನಾದ ಬಜರಂಗದಳದ ಮಾಜಿ ರಾಜ್ಯ ಸಂಚಾಲಕ, ರೌಡಿಶೀಟರ್ ಸಕಲೇಶಪುರ ರಘು ಬಂಧನಕ್ಕೆ ರಾಜ್ಯಾದ್ಯಂತ ಹಲವು ಜನಪರ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳು ಸರ್ಕಾರವನ್ನು ಆಗ್ರಹಿಸಿವೆ.

ಈ ಹಿಂದೆಯೂ ಕೂಡಾ ಹಲವು ಬಾರಿ ಹಿಂದುತ್ವದ ಸಂಘಟನೆಗಳ ಹೆಸರಿನಲ್ಲಿ ಈ ವ್ಯಕ್ತಿ ಸಮಾಜದಲ್ಲಿ ಶಾಂತಿ ಕೆಡಿಸಲು ಪ್ರಯತ್ನಿಸಿದ್ದು, ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈತನ ಆಟಾಟೋಪಕ್ಕೆ ಲಂಗು ಲಗಾಮು ಇಲ್ಲದಂತಾಗಿತ್ತು. ಆದರೆ ಇದನ್ನೇ ಮುಂದುವರೆಸಿಕೊಂಡು ಬಂದ ಸಕಲೇಶಪುರ ರಘುಗೆ ಈಗ ಬಂಧನದ ಭೀತಿ ಎದುರಾಗಿದೆ. ನಿನ್ನೆಯ ದಿನ ತಡರಾತ್ರಿ ಪೊಲೀಸರು ಬಂಧಿಸಲು ಹೋದಾಗ ಸುಳಿವು ಅರಿತು ಅಜ್ಞಾತ ಸ್ಥಳಕ್ಕೆ ಈತ ಪರಾರಿಯಾಗಿದ್ದಾನೆ. ಸಧ್ಯ ಈತನ ಸಮಾಜಘಾತುಕ ಚಟುವಟಿಕೆಗಳ ಬಗ್ಗೆ ಪ್ರಸ್ತಾಪಿಸಿ ಸಿಪಿಎಂ ಹಾಸನ ಜಿಲ್ಲಾ ಘಟಕ ರಘು ಬಂಧನಕ್ಕೆ ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದೆ.

“ಮುಸ್ಲಿಮರನ್ನು ಗುಂಡು ಹಾರಿಸಿ ಕೊಲ್ಲುವುದಾಗಿ ಬಹಿರಂಗವಾಗಿ ಘೋಷಿಸಿರುವ ಸಕಲೇಶಪುರದ ರಘು ಎಂಬ ಸಮಾಜಘಾತಕನನ್ನು ಪೋಲೀಸರು ಕೂಡಲೇ ಬಂಧಿಸುವಂತೆ ಸಿಪಿಐಎಂ ಹಾಸನ ಜಿಲ್ಲಾ ಸಮಿತಿಯು ಆಗ್ರಹಿಸುತ್ತದೆ. ಹಾಗೂ ಆತನ ಮೇಲೆ ಕೊಲೆಗೆ ಪ್ರಚೋದನೆ, ಭಯೋತ್ಪಾದನೆ ಹಾಗೂ ಕೋಮು ಗಲಭೆಗೆ ಪ್ರಚೋದನೆ ನೀಡಿಕೆಗೆ ಸಂಬಂಧಿಸಿದ ಕಾಯ್ದೆಗಳನ್ವಯ ಕೇಸು ದಾಖಲಿಸಿ ಜೈಲಿಗೆ ಕಳುಹಿಸಬೇಕೆನ್ನುವುದು ಸಿಪಿಐಎಂ ಒತ್ತಾಯವಾಗಿದೆ.

ಸಕಲೇಶಪುರದ ರಘು ಎಂಬ ಸಮಾಜಘಾತುಕ ಭಜರಂಗದಳದ ಹೆಸರಿನಲ್ಲಿ ಹಲವಾರು ಅಕ್ರಮ ಹಾಗೂ ಕುಕೃತ್ಯಗಳನ್ನು ನಡೆಸಿರುತ್ತಾನೆ. ಅವನ ಮೇಲೆ ಈಗಾಗಲೇ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ‘ಗೋರಕ್ಷಣೆ’, ‘ಹಿಂದೂ’ ಧರ್ಮ ರಕ್ಷಣೆ ಹೆಸರಿನಲ್ಲಿ ರೋಲ್‌ಕಾಲ್, ಗೂಂಡಾಗಿರಿಯಂತಹ ಹಲವಾರು ಕಾನೂನು ಭಾಹಿರ ಚಟುವಟಿಕೆಯಲ್ಲಿ ತೊಡಗಿದ್ದಾನೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅವನ ವಿರುದ್ಧ ಪೋಲೀಸರು ಕಠಿಣ ಕ್ರಮ ಜರುಗಿಸಲು ವಿಫಲರಾಗಿದ್ದರು. ಸಕಲೇಶಪುರ ತಾಲ್ಲೂಕಿನಲ್ಲಿ ಕೆಲವು ಪೋಲೀಸರೂ ಅವನೊಂದಿಗೆ ಶಾಮೀಲಾಗಿರುವ ಮಾತುಗಳಿವೆ. ಈಗ ಸಕಲೇಶಪುರ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಆಯ್ಕೆಯಾಗಿರುವುದು ಆತನಿಗೆ ಮತ್ತಷ್ಟು ಉತ್ತೇಜನ ಸಿಕ್ಕಂತಾಗಿದೆ. ಸಕಲೇಶಪರ ಕ್ಷೇತ್ರದ ಬಿಜೆಪಿ ಶಾಸಕ ಸಿಮೆಂಟ್ ಮಂಜು ಬೆಂಬಲಿಗನಾಗಿರುವ ರಘು ವಿರುದ್ಧ ಪೋಲೀಸರು ಅತ್ಯಂತ ಕಠಿಣ ಕಾನೂನು ಕ್ರಮಕ್ಕೆ ಮುಂದಾಗಬೇಕಿದೆ.

ನಾಗರಿಕ ಸಮಾಜ ಮತ್ತು ಸರ್ಕಾರಕ್ಕೆ ಸವಾಲಾಗಿರುವ ಇಂತಹ ದುಷ್ಟ ಶಕ್ತಿಗಳ ನಿಗ್ರಹಕ್ಕೆ ರಾಜ್ಯ ಸರ್ಕಾರ ಮುಂದಾಗಬೇಕು. ಸಂವಿಧಾನದ ಕಾನೂನುಗಳ ಆಡಳಿತದ ಸರಾಗವಾಗವಾಗಿ ನಡೆಯಬೇಕಿದ್ದರೆ ರಘುನಂತಹ ದುಷ್ಟರ ವಿರುದ್ಧ ಅತ್ಯಂತ ಕಠಿಣ ಕ್ರಮ ಜರುಗಿಸುವ ಮುಖಾಂತರ ಅಂತಹ ದುಷ್ಟ ಶಕ್ತಿಗಳಿಗೆ ಸ್ಪಷ್ಟ ಸಂದೇಶವನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಬೇಕು. ಇಲ್ಲದಿದ್ದರೆ ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪೋಲೀಸು ಇಲಾಖೆಯ ವಿರುದ್ಧ ತೀವ್ರ ಹೋರಾಟಕ್ಕೆ ಇಲಿಯುವಯದು ಅನಿವಾರ್ಯವಾಗಲಿದೆ ಎಂದು ಸಿಪಿಐಎಂ ಮನವರಿಕೆ ಮಾಡಿಕೊಡಲು ಬಯಸುತ್ತದೆ.” ಎಂದು ಸಿಪಿಐಎಂ ಪಕ್ಷದ ಹಾಸನ ಜಿಲ್ಲಾ ಘಟಕದ ಕಾರ್ಯದರ್ಶಿ ಧರ್ಮೇಶ್ ಆಗ್ರಹಿಸಿದ್ದಾರೆ.

ಇದರ ಜೊತೆಗೆ ರಾಜ್ಯ ಎಸ್ಡಿಪಿಐ ಪಕ್ಷ ಕೂಡಾ ಈತನ ಕುಕೃತ್ಯಗಳ ಬಗ್ಗೆ ಪ್ರಸ್ತಾಪಿಸಿ ಶೀಘ್ರದಲ್ಲೇ ಈತನ ಬಂಧನವಾಗಲಿ ಎಂದು ಆಗ್ರಹಿಸಿದೆ‌. ಅದರಂತೆ
“ಗುಂಡು ಹೊಡೆದು ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡಿರುವ ರಘು ಸಕಲೇಶಪುರ ನನ್ನು ತಕ್ಷಣ ಬಂಧಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಲು ಗೃಹಮಂತ್ರಿ ಜಿ.ಪರಮೇಶ್ವರ್ ಅವರಲ್ಲಿ ಆಗ್ರಹಿಸುತ್ತೇನೆ. ಈತ ಈ ಹಿಂದೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಶಾಲೆಯೊಂದರಲ್ಲಿ ನಡೆದಿದ್ದ ಸಂಘದ ಕಾರ್ಯಕರ್ತರಿಗೆ ಕಾನೂನು ಬಾಹಿರ ಬಂದೂಕು ತರಬೇತಿ ಹಾಗೂ ಶಸ್ತ್ರ ದೀಕ್ಷೆಯಲ್ಲಿ ಭಾಗವಹಿಸಿ ಸಕಲೇಶಪುರದಿಂದ ನಿರಂತರವಾಗಿ ಕೊಡಗು ಜಿಲ್ಲೆಗೆ ಆಗಮಿಸಿ ಕೋಮು ವೈಷಮ್ಯವನ್ನು ಮೂಡಿಸಿ ಸಮಾಜದ ಶಾಂತಿ ಕದಡಲು ಯತ್ನಿಸಿದ್ದ ಸಂಧರ್ಭದಲ್ಲೇ ಬಂಧಿಸಿ ಅಕ್ರಮ ಶಸ್ತ್ರಾಸ್ತ್ರಗಳ ಸಂಗ್ರಹ ಮತ್ತು ತರಬೇತಿ ಬಗ್ಗೆ ಕೂಲಂಕಷ ತನಿಖೆ ನಡೆಸುವಂತೆ ಎಸ್ಡಿಪಿಐ ಪಕ್ಷ ಅಂದೇ ಪೋಲಿಸ್ ಇಲಾಖೆಯನ್ನು ಆಗ್ರಹಿಸಿತ್ತು. ತ್ರಿಶೂಲ ದೀಕ್ಷೆ ನೀಡಿದ ಬಳಿಕ ತ್ರಿಶೂಲ ದೀಕ್ಷೆ ನೀಡಿದ ಬಳಿಕ ಭಜರಂಗದಳ ಗೂಂಡಗಳು ಅದನ್ನು ನಾಗರಿಕರ ಮತ್ತು ವಿಧ್ಯಾರ್ಥಿಗಳ ವಿರುದ್ಧ ಬಳಸಿ ಕೊಲೆಯತ್ನದಂತಹ ಕೃತ್ಯವನ್ನು ನಡೆಸಿರುವ ಉದಾಹರಣೆಗಳು ಇವೆ, ಅಲ್ಲದೇ ನೆರೆಯ ಕೇರಳದಲ್ಲಿ ಕೂಡ ಸಂಘಪರಿವಾರ ಈ ರೀತಿಯ ಬಂದೂಕು,ಪೆಟ್ರೋಲ್ ಬಾಂಬ್ ತರಬೇತಿ ನೀಡಿ ಪೋಲಿಸ್ ಠಾಣೆಗಳ ಮೇಲೆಯೇ ದಾಳಿ ನಡೆಸಿದ ಹಲವಾರು ನಿದರ್ಶನಗಳು ಇವೆ.” ಎನ್ನುವ ಮೂಲಕ SDPI ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಸಿಪಿಐಎಂ ಪಕ್ಷದ ಹಿರಿಯ ಮುಖಂಡ ಯು ದಾಸ ಭಂಡಾರಿ ನಿಧನ
ಕುಂದಾಪುರ: ಜಿಲ್ಲೆಯ ಸಿಪಿಐಎಂ ಪಕ್ಷದ ಹಿರಿಯ ಮುಖಂಡರಾದ ಯು‌. ದಾಸ ಭಂಡಾರಿ (80) ಅಲ್ಪ ಕಾಲದ ಅಸೌಖ್ಯದಿಂದ ಮಂಗಳವಾರ ತಡರಾತ್ರಿ ಕೋಣಿಯ ತಮ್ಮ ಸ್ವಗ್ರಹದಲ್ಲಿ ನಿಧನರಾಗಿದ್ದಾರೆ.

ಜಿಲ್ಲೆಯಲ್ಲಿ ಕಾರ್ಮಿಕ ಸಂಘಟನೆಗಳನ್ನು‌ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು ಭೂಸುಧಾರಣೆಯ ಹೋರಾಟದ ಸಮಯದಲ್ಲಿ ದೈಹಿಕ ಹಲ್ಲೆಗೆ ಒಳಗಾಗಿದ್ದರೂ ಹೋರಾಟದಿಂದ‌ ಹಿಂದೆ ಸರಿದಿರಲಿಲ್ಲ. ವಿವಿಧ ಕಾರ್ಮಿಕ‌ ಸಂಘಟನೆಯನ್ನು ಕಟ್ಟುವಲ್ಲಿ ಶ್ರಮಿಸಿದ್ದ ಅವರು, ಸರ್ಕಾರದ ಸೌಲಭ್ಯಗಳನ್ನು‌ ಕಾರ್ಮಿಕರಿಗೆ ಕೊಡಿಸುವಲ್ಲಿ ಅವಿರತ ಹೋರಾಟವನ್ನು‌ ನಡೆಸಿದ್ದರು.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘಟನೆಯ ಸ್ಥಾಪಕಾಧ್ಯಕ್ಷರಾಗಿ, ಸಿಪಿಐಎಂ ಪಕ್ಷದ ಜಿಲ್ಲಾ ಸಮಿತಿಯ ಸದಸ್ಯರಾಗಿ, ಕೃಷಿಕೂಲಿಕಾರರ ಸಂಘಟನೆಯಲ್ಲಿಯೂ ಸಕ್ರಿಯರಾಗಿದ್ದರು. ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿಯೂ ಸಿಪಿಐಎಂ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಅನಾರೋಗ್ಯದ ಕಾರಣದಿಂದ ಕಳೆದ ಕೆಲ‌ ದಿನಗಳಿಂದ‌ ಮನೆಯಲ್ಲೇ ವಿಶ್ರಾಂತಿ‌ ಪಡೆಯುತ್ತಿದ್ದರು. ಮೃತರಿಗೆ ಪತ್ನಿ, ಮೂವರು ಮಕ್ಕಳಿದ್ದಾರೆ.

ಯು ದಾಸ ಭಂಡಾರಿ ಅವರ ನಿಧನಕ್ಕೆ ಸಿಪಿಐಎಂ, ತಾಲೂಕು‌ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕ ಸಂಘ, ಕೃಷಿಕೂಲಿಕಾರರ ಸಂಘ ಸೇರಿದಂತೆ ವಿವಿಧ ಕಾರ್ಮಿಕ‌ ಸಂಘಟನೆಗಳು‌ ಸಂತಾಪ ವ್ಯಕ್ತಪಡಿಸಿದೆ.

ನಮ್ಮ ಬಡತನವನ್ನು, ಅಸಹಾಯಕತೆಯನ್ನು ಅವಹೇಳನ ಮಾಡುವ ಸ್ಥಿತಿ ನಿರ್ಮಾಣಗೊಂಡಿದೆ- ಮುನೀರ್ ಕಾಟಿಪಳ್ಳ
ಭಾರತ ದೇಶದ ಜನರನ್ನು ಕಾಡುವ ಹಲವು ಗಂಭೀರ ಸಮಸ್ಯೆಗಳನ್ನು ಈಡೇರಿಸುವ ಭರವಸೆಯನ್ನು ಮುಂದಿಟ್ಟು ಅಧಿಕಾರದ ಗದ್ದುಗೆಯನ್ನೇರಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಯಾವೊಂದು ಭರವಸೆಗಳನ್ನು ಈಡೇರಿಸದೆ ಕನಿಷ್ಟ ನೆಮ್ಮದಿಯಿಂದ ಬದುಕು ನಡೆಸಲಾಗದಂತಹ ಸ್ಥಿತಿಗೆ ಈ ದೇಶದ ಜನರನ್ನು ತಂದು ನಿಲ್ಲಿಸಿದ್ದಾರೆ. ಇವತ್ತು ನಮ್ಮ ಬಡತನವನ್ನು, ಅಸಹಾಯಕತೆಯನ್ನು ಅವಹೇಳನ ಮಾಡುವ ಪರಿಸ್ಥಿತಿ ನಿರ್ಮಾಣಗೊಂಡಿದೆ ಎಂದು ಸಿಪಿಐಎಂ ಪಕ್ಷದ ರಾಜ್ಯ ಸಮಿತಿ ಸದಸ್ಯರಾದ ಕಾಂ ಮುನೀರ್ ಕಾಟಿಪಳ್ಳ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಕೇಂದ್ರ, ರಾಜ್ಯ ಸರಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ, ವಿಪರೀತ ಬೆಲೆಏರಿಕೆ, ನಿರುದ್ಯೋಗ, ಹಣದುಬ್ಬರ, ದೇಶದ ಸಂಪತ್ತಿನ ಲೂಟಿ ಮತ್ತು ಭ್ರಷ್ಟಾಚಾರ ವಿರೋಧಿಸಿ ಸಿಪಿಐಎಂ ರಾಜ್ಯವ್ಯಾಪಿ ಕರೆ ನೀಡಿದ ರಾಜಕೀಯ ಪ್ರಚಾರಾಂದೋಲನದ ಭಾಗವಾಗಿ ಇಂದು (23-09-2022) ನಗರದ ಮಿನಿವಿಧಾನ ಸೌಧದ ಮುಂಭಾಗ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಸಿಪಿಐಎಂ ಪಕ್ಷದ ರಾಜ್ಯ ಸಮಿತಿ ಸದಸ್ಯರಾದ ಸಭೆಯಲ್ಲಿ ಮಾತನಾಡುತ್ತಿರುವ ಮುನೀರ್‌ ಕಾಟಿಪಳ್ಳ

ದೇಶದಲ್ಲಿ ನಿರುದ್ಯೋಗದ ಪ್ರಮಾಣ ವಿಪರೀತವಾಗಿ ಏರಿಕೆ ಕಂಡಿದೆ ಆದರೆ ವರುಷಕ್ಕೆರಡು ಕೋಟಿ ಉದ್ಯೋಗ ನೀಡುವ ಭರವಸೆ ಈಡೇರಲೇ ಇಲ್ಲ, ನೋಟ್ ಬ್ಯಾನ್ ಮಾಡಿ ವಿದೇಶದಿಂದ ಕಪ್ಪು ಹಣವನ್ನಾಗಲಿ, ಭಯೋತ್ಪಾದನೆಯನ್ನಾಗಲಿ ನಿಗ್ರಹಿಸಲು ಸಾದ್ಯವಾಗಿಲ್ಲ ಬದಲಾಗಿ ಸಾವಿರಾರು ಕೋಟಿ ಆದಾಯ ತರುವ ಲಾಭದಾಯಕ ಸಾರ್ವಜನಿಕ ರಂಗದ ಉದ್ದಿಮೆಗಳನ್ನು, ಬ್ಯಾಂಕ್, ವಿಮಾ, ರೈಲ್ವೇ, ವಿಮಾನ ನಿಲ್ದಾಣಗಳನ್ನು ಕಾರ್ಪೊರೇಟ್ ಕಂಪೆನಿಗಳಿಗೆ ವಹಿಸಿಕೊಡಲಾಗಿದೆ. ಕೈಗಾರಿಕೆಗಳು ಬಾಗಿಲು ಮುಚ್ಚಿತ್ತು. ವ್ಯಾಪಾರ, ವಹಿವಾಟು, ಉದ್ಯೋಗ ಇಲ್ಲದೆ ಕಂಗಾಲಾದ ಜನ ಆತ್ಮಹತ್ಯೆ ಮಾಡುವಂತಹ ಸ್ಥಿತಿಗೆ ತಲುಪಿದರು. ದೇಶದ ಆರ್ಥಿಕ ಸ್ಥಿತಿ ಈ ಹಂತಕ್ಕೆ ತಲುಪಲು ಬಿಜೆಪಿ ಸರಕಾರದ ಆರ್ಥಿಕ ನೀತಿಗಳೇ ಕಾರಣ. ದೇಶದ ಅಗರ್ಭ ಶ್ರೀಮಂತರ ಪಟ್ಟಿಯಲ್ಲಿದ್ದ ಗೌತಮ್ ಅದಾನಿ ದೇಶದ ನಂಬರ್ ವನ್ ಶ್ರೀಮಂತನಾಗಲು ಸಾಧ್ಯವಾದದ್ದು ದೇಶದ ಪ್ರಧಾನಿ ನರೇಂದ್ರ ಮೋದಿಯ ಕಾಲಘಟ್ಟದಲ್ಲಿ. ಕಳೆದ ಒಂದು ವರುಷದಲ್ಲಿ ಗೌತಮ್ ಅದಾನಿ ಆದಾಯ 6ಲಕ್ಷ ಕೋಟಿ ಹೆಚ್ಚಾಗಿದೆ. ಇನ್ನು ಕರ್ನಾಟಕದ ರಾಜ್ಯದ ಬಿಜೆಪಿ ಸರಕಾರದಲ್ಲಿ ಭ್ರಷ್ಟಾಚಾರ ವ್ಯಾಪಕಗೊಂಡಿದ್ದು ಗುತ್ತಿಗೆಯಾಧಾರದ ಕಾಮಗಾರಿಗಳಲ್ಲಿ ಶೇ 40ರಷ್ಟು ಕಮಿಷನ್ ಪಡೆಯುವ ಹಂತಕ್ಕೆ ಬಂದು ತಲುಪಿದೆ. ಸಚಿವ ಈಶ್ವರಪ್ಪ ಹೆಸರೇಳಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿದ ಪ್ರಕರಣ ರಾಜ್ಯದ ಗಮನ ಸೆಳೆದಿದೆ. ಇನ್ನು 13800 ರಷ್ಟು ಸರಕಾರಿ ಶಾಲೆ ಬಾಗಿಲು ಮುಚ್ಚುವ ಸ್ಥಿತಿಗೆ ಮುಂದಾಗಿದೆ. ಅತಿಥಿ ಶಿಕ್ಷಕರಿಗೆ ಸರಿಯಾದ ವೇತನ ನೀಡದೆ , ಕನಿಷ್ಠ ಕೆಲಸವನ್ನು ಖಾಯಂ ಗೊಳಿಸದೆ ಸತಾಯಿಸಲಾಗುತ್ತಿದೆ. ಒಟ್ಟು ದೇಶದ ಜನರ ಬದುಕು ಬವಣೆಗಳನ್ನು ಸರಿಪಡಿಸುವ ಬದಲು ಧರ್ಮದ ಆಧಾರದಲ್ಲಿ ವಿಭಜಿಸುವ , ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು ಹಿಂಸೆಗೆ ಪ್ರಚೋದಿಸಿ ಜನರ ಗಮನದ ದಿಕ್ಕನ್ನು ಬದಲಾಯಿಸುವ ಮೂಲಕ ಕೋಮು ರಾಜಕಾರಣ ನಡೆಸಲಾಗುತ್ತಿದೆ. ಬಿಜೆಪಿ ಸರಕಾರದ ಜನ ವಿರೋಧಿ ನೀತಿಗಳನ್ನು ಬಯಲುಗೊಳಿಸಲು, ಅವರ ಕೋಮು ರಾಜಕಾರಣದ ಕುತಂತ್ರವನ್ನು ವಿಫಲಗೊಳಿಸಲು ಸಿಪಿಐಎಂ ಪಕ್ಷ ನಡೆಸುವ ರಾಜಕೀಯ ಪ್ರಚಾರಾಂದೋಲನವನ್ನು ಈ ರಾಜ್ಯದ ಜನ ಗಮನಿಸಬೇಕು ಹಾಗೂ ಬೆಂಬಲಿಸಬೇಕು ಎಂದರು.

ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಜೆ ಬಾಲಕೃಷ್ಣ ಶೆಟ್ಟಿ, ಸುನೀಲ್ ಕುಮಾರ್ ಬಜಾಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಭೆಯಲ್ಲಿ ಸಿಪಿಐಎಂ ನಗರ ಸಮಿತಿ ಸದಸ್ಯರಾದ ಲೋಕೇಶ್ ಎಂ, ಸುರೇಶ್ ಬಜಾಲ್, ಪ್ರದೀಪ್, ಭಾರತೀ ಬೋಳಾರ ,ದಿನೇಶ್ ಶೆಟ್ಟಿ, ಕಾರ್ಮಿಕ ಮುಖಂಡರಾದ ಮುಸ್ತಫಾ ಕಲ್ಲಕಟ್ಟೆ, ಡಿವೈಎಫ್ಐ ಜಿಲ್ಲಾ ಮುಖಂಡರಾದ ಬಿ.ಕೆ ಇಮ್ತಿಯಾಜ್ ಮುಂತಾದವರು ಉಪಸ್ಥಿತರಿದ್ದರು.

ಸಿಪಿಐಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸಂತೋಷ್ ಬಜಾಲ್ ಅಧ್ಯಕ್ಷತೆ ವಹಿಸಿ, ಸಿಪಿಐಎಂ ನಗರ ಸಮಿತಿ ಮುಖಂಡರಾದ ಯೋಗೀಶ್ ಜಪ್ಪಿನಮೊಗರು ಸ್ವಾಗತಿಸಿ, ಜಯಂತಿ ಬಿ ಶೆಟ್ಟಿ ವಂದಿಸಿದರು.