D K shivakumar – Peepal Media

ಕರ್ನಾಟಕ-ಮಹಾ ಗಡಿ ವಿವಾದವು ಒಂದು ಪಿತೂರಿ: ಕಾಂಗ್ರೆಸ್
ಕಲಬುರಗಿ: ಕರ್ನಾಟಕ-ಮಹಾರಾಷ್ಟ್ರದೊಂದಿಗಿನ ಗಡಿ ವಿವಾದದಿಂದ ಉದ್ಭವಿಸಿರುವ ಉದ್ವಿಗ್ನತೆಯ ನಡುವೆಯೇ, ಕರ್ನಾಟಕ ಕಾಂಗ್ರೆಸ್ ಪ್ರಸ್ತುತ ಪರಿಸ್ಥಿತಿಯನ್ನು ‘ಪಿತೂರಿ’ ಎಂದು ಕರೆದಿದೆ.

ಈ ಕುರಿತು ಮಾಧ್ಯಮದವರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಚುನಾವಣೆಗೂ ಮುನ್ನ ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನಗಳು ನಡೆಯುತ್ತಿದ್ದು, ʼನಮ್ಮ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ಮೇಲಿನ ಕೀಳರಿಮೆಯನ್ನು ಮರೆಮಾಚಲು ಇದನ್ನು ದೊಡ್ಡ ವಿಷಯವನ್ನಾಗಿ ಮಾಡುತ್ತಿದ್ದಾರೆ. ಇದರ ಹಿಂದೆ ಪಿತೂರಿ ಇದೆʼ ಎಂದು ಶಿವಕುಮಾರ್ ದೂರಿದ್ದಾರೆ.

ಗಡಿ ವಿವಾದವನ್ನು ಈಗಾಗಲೇ ಪರಿಹರಿಸಲಾಗಿದೆ. ʼನಮ್ಮ ಗಡಿಯೊಳಗಿನ ಪ್ರದೇಶ ನಮ್ಮದು, ಅವರ ಭೂಪ್ರದೇಶದಲ್ಲಿರುವ ಪ್ರದೇಶ ಅವರದು. ನಮ್ಮ ಪರವಾಗಿರುವವರು ನಮ್ಮ ಜನರೇʼ ಎಂದು ಶಿವಕುಮಾರ್‌ ಸಮರ್ಥಿಸಿಕೊಂಡಿದ್ದಾರೆ.

ಗಡಿ ವಿವಾದದ ನೆಪದಲ್ಲಿ ಮಹಾರಾಷ್ಟ್ರದಲ್ಲಿ ಯಾವುದೇ ಪಕ್ಷಕ್ಕೆ ಸೇರಿದ ಯಾರೊಬ್ಬರೂ ಶಾಂತಿ ಕದಡುವುದು ಸೂಕ್ತವಲ್ಲ ಎಂದು ಶಿವಕುಮಾರ್ ಹೇಳಿದ್ದಾರೆ.

ʼನಾವು ಬೆಳಗಾವಿಯಲ್ಲಿ ಸುವರ್ಣ ಸೌಧವನ್ನು ನಿರ್ಮಿಸಿದ್ದೇವೆ. ಶಾಂತಿ ಕದಡುವ ಕಾರ್ಯದಲ್ಲಿ ಯಾರೂ ತೊಡಗಬಾರದು’ ಎಂದಿದ್ದಾರೆ.

ಬೆಳಗಾವಿ ನಗರ ಮತ್ತು ಕರ್ನಾಟಕದ ನಾಲ್ಕು ಜಿಲ್ಲೆಗಳ 865 ಹಳ್ಳಿಗಳ ಮೇಲೆ ತನ್ನ ಹಕ್ಕುಗಳನ್ನು ಕೋರಿ ಮಹಾರಾಷ್ಟ್ರ ಸರ್ಕಾರವು 2004 ರಲ್ಲಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಸುಪ್ರೀಂ ಕೋರ್ಟ್ ಈ ಅರ್ಜಿಯನ್ನು ನಂತರದ ದಿನದಲ್ಲಿ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ ಎಂದು ಶಿವಕುಮಾರ್‌ ತಿಳಿಸಿದ್ದಾರೆ.

ಕರ್ನಾಟಕದ ಗಡಿ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಇದೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು ಪೊಲೀಸ್ ಇಲಾಖೆ ಗಡಿ ಪ್ರದೇಶದಾದ್ಯಂತ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಿದೆ. ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಎಂಬ ರಾಜಕೀಯ ಸಂಘಟನೆ ಬಿಜೆಪಿ-ಶಿವಸೇನೆ ಸಮ್ಮಿಶ್ರ ಸರ್ಕಾರದ ಇಬ್ಬರು ಸಚಿವರನ್ನು ಬೆಳಗಾವಿಗೆ ಆಹ್ವಾನಿಸಿದ್ದು, ಅವರಿಗೆ ಅವಕಾಶ ನೀಡದಂತೆ ಕನ್ನಡ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ. ಆದಾಗ್ಯೂ, ಪರಿಸ್ಥಿತಿಯ ಬಗ್ಗೆ ಕಾಂಗ್ರೆಸ್ ನೀಡಿದ ಹೇಳಿಕೆಯು ರಾಜ್ಯದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್: ಡಿ.ಕೆ. ಶಿವಕುಮಾರ್
ಬೆಂಗಳೂರು: ‘ಈ ಬಾರಿ ಚುನಾವಣೆಯಲ್ಲಿ ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್ ‘ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಈ ಕುರಿತು ಶುಕ್ರವಾರ ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರು ಅರ್ಜಿ ಸಲ್ಲಿಸುವಾಗ ಆಕಾಂಕ್ಷಿಗಳಿಂದ ದೇಣಿಗೆ ಸಂಗ್ರಹ ವಿಚಾರವಾಗಿ ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು,  ‘ ಇದು ನಮ್ಮ ಪಕ್ಷದಲ್ಲಿ ಹೊಸತಲ್ಲ. ಈ ಹಿಂದೆಯೂ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ. ಆಗ ಹೆಚ್ಚು ಸುದ್ದಿ ಆಗಿರಲಿಲ್ಲ. ಆದರೆ ಈ ಬಾರಿ ಆಗಿದೆ. ಚುನಾವಣಾ ತಯಾರಿ, ಜಿಲ್ಲೆ ಹಾಗೂ ಬ್ಲಾಕ್ ಮಟ್ಟದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಸೇರಿದಂತೆ ಹಲವು ವಿಚಾರವಾಗಿ ಆರ್ಥಿಕ ಶಕ್ತಿ ಅಗತ್ಯವಿದೆ. ಕಚೇರಿ ನಿರ್ಮಾಣಕ್ಕೆ ಕಾರ್ಯಕರ್ತರು ಆರ್ಥಿಕ ನೆರವು ಕೇಳಿದಾಗ ನಾವು ಹಣ ಸಹಾಯ ಮಾಡುತ್ತೇವೆ. ಕಾರ್ಯಕರ್ತರಿಗೆ ತೊಂದರೆ ಆದಾಗ ಅವರಿಗೆ ಸಹಾಯ ಮಾಡಲು ಹಣದ ಅಗತ್ಯವಿದೆ. ಹೀಗಾಗಿ ದೇಣಿಗೆಯನ್ನು ಸಂಗ್ರಹಿಸಲಾಗಿದೆ ‘ಎಂದರು.

ಅರ್ಜಿ ಸಲ್ಲಿಕೆ ನಂತರ ಆಕಾಂಕ್ಷಿಗಳು ಸಿದ್ದರಾಮಯ್ಯ ಹಾಗೂ ನಿಮ್ಮ ಮನೆಗೆ ಭೇಟಿ ನೀಡುತ್ತಿರುವುದರಿಂದ ತೊಂದರೆ ಆಗುವುದಿಲ್ಲವೇ ಎಂದು ಕೇಳಿದ ಪ್ರಶ್ನೆಗೆ, ‘ ಯಾರೇ ಆಗಲಿ ಒಬ್ಬರಿಗೆ ಒಂದೇ ಟಿಕೆಟ್. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಇಲ್ಲಿ ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ. ಪಕ್ಷ ಮೊದಲು ಅಧಿಕಾರಕ್ಕೆ ಬರಬೇಕು. ಅಧಿಕಾರಕ್ಕೆ ಬಂದಾಗ ಎಲ್ಲರಿಗೂ ಅಧಿಕಾರ ಸಿಗುತ್ತದೆ. ಎಲ್ಲರಿಗೂ ಅವರದೇ ಆದ ಶಕ್ತಿ ಇರುತ್ತದೆ. ಯಾರ ಶಕ್ತಿ ಎಷ್ಟಿದೆ ಎಂದು ಹೇಳಲು ಸಾಧ್ಯವಿಲ್ಲ. ಒಬ್ಬರಿಗೆ 100 ಬೂತ್ ನಿಭಾಯಿಸುವ ಶಕ್ತಿ ಇದ್ದರೆ, ಮತ್ತೆ ಕೆಲವರಿಗೆ 50, ಇನ್ನೂ ಕೆಲವರಿಗೆ 10 ಬೂತ್ ನಿಭಾಯಿಸುವ ಶಕ್ತಿ ಇರುತ್ತದೆ ‘ಎಂದು ಹೇಳಿದರು.

ಇಂದಿನ ಸಭೆಯಲ್ಲಿ ಯಾವ ವಿಚಾರವಾಗಿ ಚರ್ಚೆ ಮಾಡಲಾಗುವುದು ಎಂದು ಕೇಳಿದ ಪ್ರಶ್ನೆಗೆ,’ ಇಂದು ಯಾವುದೇ ಚರ್ಚೆ ಇರುವುದಿಲ್ಲ. ನಮ್ಮ ನಾಯಕರಿಗೆ ಕೆಲವು ಮಾರ್ಗದರ್ಶನ ನೀಡಲಾಗುವುದು ‘ಎಂದು ತಿಳಿಸಿದರು.

ಮತದಾರರ ಮಾಹಿತಿ ಕಳವು: ಮುಖ್ಯಮಂತ್ರಿ ಬೊಮ್ಮಾಯಿ ರಾಜೀನಾಮೆ, ಬಂಧನಕ್ಕೆ ಕಾಂಗ್ರೆಸ್ ಆಗ್ರಹ
ಬೆಂಗಳೂರು: ʼಮತದಾರರ ಪಟ್ಟಿ ಪರಿಷ್ಕರಣೆ ಮಾಡಲು ಖಾಸಗಿ ಸಂಸ್ಥೆಗಳಿಗೆ ಅನುಮತಿ ನೀಡುವ ಮೂಲಕ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಮತದಾರರ ಮಾಹಿತಿ ಕಳುವಿಗೆ ಕಾರಣವಾಗಿರುವ ಬೆಂಗಳೂರು ನಗರದ ಉಸ್ತುವಾರಿ ಹೊತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರ ವಿರುದ್ಧ ಎಫ್ಐಆರ್ ದಾಖಲಾಗಿ, ಅವರ ಬಂಧನವಾಗಬೇಕು. ಈ ಮತದಾರರ ಮಾಹಿತಿ ಕಳವು ಪ್ರಕರಣದ ಬಗ್ಗೆ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆ ನಡೆಸಬೇಕುʼಎಂದು ರಾಜ್ಯ ಕಾಂಗ್ರೆಸ್ ಆಗ್ರಹಿಸಿದೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಜಂಟಿ ಮಾಧ್ಯಮಗೋಷ್ಠಿ ನಡೆಸಿ ಮತದಾರರ ಮಾಹಿತಿ ಕಳವು ಬಗ್ಗೆ ಎಳೆ, ಎಳೆಯಾಗಿ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಮೂವರು ನಾಯಕರ ನೀಡಿರುವ ಮಾಹಿತಿ ಪ್ರಕಾರ, ʼಚಿಲುಮೆ ಎಜುಕೇಶನ್ ಇನ್ಸ್ ಟಿಟ್ಯೂಟ್ ಎಂಬ ಖಾಸಗಿ ಸಂಸ್ಥೆ ಮತದಾರರ ಜಾಗೃತಿ ಹಾಗೂ ಮತದಾರರ ಪಟ್ಟಿಯನ್ನು ಉಚಿತವಾಗಿ ಪರಿಷ್ಕರಣೆ ಮಾಡುತ್ತೇವೆ ಎಂದು ಆಗಸ್ಟ್ 19, 2022 ರಂದು ಸರಕಾರಕ್ಕೆ ಅರ್ಜಿ ಹಾಕಿದ್ದರು. ನಂತರ ಆಗಸ್ಟ್ 20 ರಂದು ಯಾವುದೇ ಜಾಹೀರಾತು ನೀಡದೆ ಖಾಸಗಿ ಸಂಸ್ಥೆಗೆ ಮತದಾರರ ಪಟ್ಟಿ ಪರಿಷ್ಕರಣೆಗೆ ಅನುಮತಿ ನೀಡಲಾಯಿತು. ಈ ಸಂಸ್ಥೆಯವರಿಗೆ ಯಾವುದೇ ಅನುಭವ ಇಲ್ಲದಿದ್ದರೂ ಅನುಮತಿ ನೀಡಲಾಗಿದೆ. ಜನರ ಮಾಹಿತಿ ಪಡೆಯಲು ತಮ್ಮ ಸಿಬ್ಬಂದಿಗೆ ಬೂತ್ ಮಟ್ಟದ ಅಧಿಕಾರಿ ಎಂಬ ಗುರುತಿನ ಚೀಟಿ ನೀಡಿದ್ದಾರೆ. ಕಾನೂನಿನ ಪ್ರಕಾರ ಸರ್ಕಾರಿ, ಅರೆ ಸರ್ಕಾರಿ ಸಿಬ್ಬಂದಿ ಹೊರತಾಗಿ ಬೇರೆಯವರು ಬಿಎಲ್ಒ ಆಗಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಈ ಖಾಸಗಿ ಸಂಸ್ಥೆಗೆ ಮತದಾರರಲ್ಲಿ ಜಾಗೃತಿ ಮೂಡಿಸಲು ಯಾವುದೇ ಅನುಭವ ಇಲ್ಲದಿದ್ದರೂ ಉಚಿತವಾಗಿ ಜಾಗೃತಿ ಮೂಡಿಸುವುದಾಗಿ ತಿಳಿಸಿದೆ. ಇದರ ಜತೆಗೆ ಇನ್ನೆರಡು ಸಂಸ್ಥೆಗಳಾದ ಚಿಲುಮೆ ಎಂಟರ್ ಪ್ರೈಸಸ್ ಪ್ರೈ.ಲಿ ಹಾಗೂ ಡಿಎಪಿ ಹೊಂಬಾಳೆ ಪ್ರೈ.ಲಿ ಕೂಡ ಭಾಗಿಯಾಗಿದ್ದು, ಈ ಎರಡು ಸಂಸ್ಥೆಗಳಿಗೆ ಕೃಷ್ಣಪ್ಪ ರವಿಕುಮಾರ್ ಎಂಬುವವರು ನಿರ್ದೇಶಕರಾಗಿದ್ದಾರೆ. ಈ ಎರಡು ಸಂಸ್ಥೆಗಳು ಜನರ ಬಳಿ ಹೋಗಿ ನಾವು ಚುನಾವಣಾ ನಿರ್ವಹಣೆ ಕಂಪನಿಯಾಗಿದ್ದು, ನಾವು ಪಕ್ಷಗಳಿಗೆ ಇವಿಎಂ ತಯಾರಿ ಮಾಡುತ್ತೇವೆ ಎಂದು ಹೇಳಿಕೊಂಡಿದ್ದಾರೆ. ನಾವು ಇದುವರೆಗೂ ಇವಿಎಂ ಅನ್ನು ಸರ್ಕಾರ ಮಾಡಲಿದೆ ಎಂದು ಕೇಳಿದ್ದೆವು. ಆದರೆ ಇವಿಎಂ ಅನ್ನು ರಾಜಕೀಯ ಪಕ್ಷಗಳಿಗೆ ಮಾಡಲಾಗುತ್ತದೆ ಎಂದು ಯಾವತ್ತೂ ಕೇಳಿರಲಿಲ್ಲ ಎಂದಿದ್ದಾರೆ.

ಈ ಸಂಸ್ಥೆಗಳು ಸರ್ಕಾರದ ಎಲ್ಲಾ ವಿಭಾಗಗಳಿಂದಲೂ ತಾತ್ಕಾಲಿಕ ಮತಗಟ್ಟೆ ವ್ಯಕ್ತಿಯನ್ನು ಒದಗಿಸುವುದಾಗಿ ತಿಳಿಸಿವೆ. ಇದೇ ಸಂಸ್ಥೆ ಡಿಜಿಟಲ್ ಸಮೀಕ್ಷಾ ಎಂಬ ಮತದಾರರ ಆಪ್ ಅನ್ನು ಹೊಂದಿದೆ. ಈ ಆಪ್ ಮೂಲಕ ಜನಪ್ರತಿನಿಧಿಗಳಿಗೆ ಸೇವೆ ಒದಗಿಸಲಾಗುವುದು ಎಂದೂ ತಿಳಿಸಿದೆ ಎಂದು ಮಾಹಿತಿ ನೀಡಿದರು.

ಬೆಂಗಳೂರಿನ ಎಲ್ಲ ಮತದಾರರ ಮಾಹಿತಿ ಪಡೆದ ನಂತರ ಈ ಸಂಸ್ಥೆ ಬೂತ್ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಿದೆ. ಚುನಾವಣಾ ಆಯೋಗ ನಿಯೋಜಿಸಬೇಕಿದ್ದ ಬೂತ್ ಮಟ್ಟದ ಅಧಿಕಾರಿಗಳನ್ನು ಈ ಸಂಸ್ಥೆ ನಿಯೋಜಿಸಿ ಅಕ್ರಮ ಎಸಗಿದೆ. ಇವರನ್ನು ಸರ್ಕಾರದ ಅಧಿಕಾರಿಗಳೆಂದು ಬಿಂಬಿಸಿ ಮನೆ, ಮನೆಗೂ ಹೋಗಿ ಪ್ರತಿ ಮತದಾರನ ಜಾತಿ, ಲಿಂಗ, ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ ಸೇರಿದಂತೆ ಅನೇಕ ಮಾಹಿತಿ ಕಲೆಹಾಕಲಾಗಿದೆ. ಹೀಗೆ ಕಲೆ ಹಾಕಿದ ಮಾಹಿತಿಯನ್ನು ಚುನಾವಣಾ ಆಯೋಗದ ಗರುಡ ಆಪ್ ನಲ್ಲಿ ಆಪ್ ಲೋಡ್ ಮಾಡದೇ, ಖಾಸಗಿ ಸಂಸ್ಥೆಯ ಆಪ್ ಆದ ಡಿಜಿಟಲ್ ಸಮೀಕ್ಷಾದಲ್ಲಿ ಅಪ್ ಲೋಡ್ ಮಾಡಲಾಗಿದೆ.

ಆ ಮೂಲಕ ಎಂಪಿ, ಶಾಸಕರು, ಪಾಲಿಕೆ ಸದಸ್ಯರಿಗೆ ಸೇವೆ ಒದಗಿಸಿ ವ್ಯಾಪಾರ ಮಾಡಲು ಮುಂದಾಗಿದೆ. ಮೊದಲಿಗೆ ತಮ್ಮನ್ನು ಸರ್ಕಾರದ ಅಧಿಕಾರಿಗಳೆಂದು ಬಿಂಬಿಸಿಕೊಂಡರು. ಎರಡನೇಯದಾಗಿ ತಮ್ಮವರಿಗೆ ನಕಲಿ ಗುರುತಿನ ಚೀಟಿ ನೀಡಿದರು. ಮೂರನೆಯದಾಗಿ ಅಕ್ರಮವಾಗಿ ಮತದಾರರಿಂದ ಮಾಹಿತಿ ಕಲೆ ಹಾಕಿದ್ದಾರೆ. ನಾಲ್ಕನೆಯದಾಗಿ ಇದನ್ನು ಖಾಸಗಿ ಆಪ್ ನಲ್ಲಿ ಅಪ್ ಲೋಡ್ ಮಾಡಿ ಅದನ್ನು ವಾಣಿಜ್ಯ ಉದ್ದೇಶಕ್ಕೆ ಮಾರಾಟ ಮಾಡಿಕೊಳ್ಳುತ್ತಿದ್ದಾರೆ. ಈ ಮಾಹಿತಿಯನ್ನು ಬೇರೆ ಸಂಸ್ಥೆಗಳಿಗೂ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಕೃಷ್ಣಪ್ಪ ರವಿಕುಮಾರ್ ಎಂಬಾತ ಸರ್ಕಾರದ ಹಿರಿಯ ಸಚಿವರ ಆಪ್ತರಾಗಿದ್ದಾರೆ. ಈ ಎಲ್ಲ ಕಂಪನಿಗಳು ಆ ಸಚಿವರ ಮಲ್ಲೇಶ್ವರ ಕ್ಷೇತ್ರದಲ್ಲಿ ಸ್ಥಾಪನೆಯಾಗಿವೆ. ಇವು ಮತದಾರರ ಮಾಹಿತಿ ಕಳವು, ಮಾಹಿತಿ ದುರ್ಬಳಕೆ, ನಂಬಿಕೆ ದ್ರೋಹದ ಅಪರಾಧ, ಪಿತೂರಿ ಅಪರಾಧ ಎಸಗಿವೆ. ಕೃಷ್ಣಪ್ಪ ರವಿಕುಮಾರ್ ತಮ್ಮ ಖಾಸಗಿ ಸಂಸ್ಥೆ ಸಿಬ್ಬಂದಿಗೆ ಬಿಎಲ್ಒ ಗುರುತಿನ ಚೀಟಿ ನೀಡಿದ್ದಾರೆ. ಇದು ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ ಮಾಡಲಾಗಿರುವ ಅಪರಾಧ. ಇದು ಐಪಿಸಿ ಸೆಕ್ಷನ್ ಪ್ರಕಾರ ಶಿಕ್ಷಾರ್ಹ ಅಪರಾಧ. ಇದರಿಂದ ರಾಜ್ಯದ ಜನರಿಗೆ ಯಾವ ಸಂದೇಶ ಹೋಗುತ್ತದೆ. ಇದರ ಹಿಂದಿನ ಉದ್ದೇಶವೇನು? ಇದು ಸ್ಪಷ್ಟ ಮೋಸ, ವಂಚನೆಯಾಗಿದೆ ಎಂದು ದೂರಿದ್ದಾರೆ.

ನವೆಂಬರ್ 16, 2022ರಂದು ಈ ಸಂಸ್ಥೆಗೆ ನೀಡಲಾಗಿದ್ದ ಅನುಮತಿಯನ್ನು ರದ್ದುಗೊಳಿಸಲಾಗಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ. ಆದರೆ ರದ್ದು ಮಾಡಲು ಕಾರಣ ಏನು ಎಂದು ತಿಳಿಸಿಲ್ಲ. ನೀವು ಷರತ್ತು ಉಲ್ಲಂಘನೆ ಮಾಡಿದ್ದು ಹೀಗಾಗಿ ಅನುಮತಿ ರದ್ದು ಮಾಡಲಾಗಿದೆ ಎಂದು ಹೇಳಲಾಗಿದೆ. ಇದರ ಹಿಂದೆ ಬಸವರಾಜ ಬೊಮ್ಮಾಯಿ ಅವರು ಇದ್ದಾರೆ. ಈ ಅಕ್ರಮಕ್ಕೆ ಬೊಮ್ಮಾಯಿ ಅವರೇ ನೇರ ಹೊಣೆ ಎಂದು ದೂಷಿಸಿದ್ದಾರೆ.

ನಾವು ರಾಜ್ಯದಲ್ಲಿ ಬಿಜೆಪಿ ಸರ್ಕಾರದ 40% ಭ್ರಷ್ಟಾಚಾರ, ಗುತ್ತಿಗೆ, ನೇಮಕಾತಿ, ವರ್ಗಾವಣೆಯಲ್ಲಿ ಅಕ್ರಮ ನೋಡಿದ್ದೆವು. ಈಗ ಅವರ ಅಕ್ರಮ ಚುನಾವಣೆ ಪ್ರಕ್ರಿಯೆಗೂ ವಿಸ್ತರಿಸಿದೆ. ಈ ಸಂಸ್ಥೆ ದಿನಕ್ಕೆ 1500 ರೂ. ದಿನಗೂಲಿ ನೀಡುವುದಾಗಿ ಜಾಹೀರಾತು ನೀಡಿ, ನಂತರ ಬಿಜೆಪಿ ಕಾರ್ಯಕರ್ತರನ್ನು ಆಯ್ಕೆ ಮಾಡಿಕೊಂಡಿದೆ. ಬೆಂಗಳೂರಿನಲ್ಲಿ 17-18 ಸಾವಿರ ಜನರನ್ನು ನೇಮಕ ಮಾಡಿಕೊಂಡು ಇವರೆಲ್ಲರಿಗೂ ಬಿಎಲ್ಒ ಎಂದು ಗುರುತಿನ ಚೀಟಿ ನೀಡಿದ್ದಾರೆ. ನಿನ್ನೆ ಕೂಡ ಅವರ ಕಚೇರಿ ಮುಂದೆ ಪರಿಶೀಲಿಸಿದಾಗ 2 ಸಾವಿರ ಸಿಬ್ಬಂದಿ ಇದ್ದರು. ಇವರು ಯಾವ ಕ್ಷೇತ್ರದಲ್ಲಿ ಯಾವ ಮನೆ ಖಾಲಿ ಇದೆ, ಯಾವ ಮತದಾರರು ಎಲ್ಲಿ ಇದ್ದಾರೆ ಎಂಬ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಸರ್ಕಾರಕ್ಕೆ ಉಚಿತವಾಗಿ ಸಮೀಕ್ಷೆ ಮಾಡಿಕೊಡುವುದಾಗಿ ಅರ್ಜಿಯಲ್ಲಿ ತಿಳಿಸಿದ್ದಾರೆ. ಇನ್ನು ಸಮೀಕ್ಷೆಗೆ ಆಯ್ಕೆ ಮಾಡಲಾದ ಸಾವಿರಾರು ಸಿಬ್ಬಂದಿಗೆ ದಿನಕ್ಕೆ 1500 ರು. ದಿನಗೂಲಿ ನೀಡುತ್ತಿದ್ದಾರೆ. ಇದಕ್ಕೆ ಹಣ ಎಲ್ಲಿಂದ ಬಂದಿದೆ? ಇದಕ್ಕೆ 40% ಕಮಿಷನ್ ಹಣ ಬಳಕೆಯಾಗುತ್ತಿದೆ. ಇದರ ಹಿಂದೆ ಯಾವ ಸಚಿವರು ಇದ್ದಾರೆ? ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಅವರೇ ನಿಮಗೆ ಉಚಿತ ಸೇವೆ ಬೇಕಾದರೆ ನಮ್ಮ ಪಕ್ಷದ ಕಾರ್ಯಕರ್ತರಿಂದಲೇ ಮಾಡಿಸುತ್ತೇವೆ. ನಾವು ಮತದಾರರ ಮಾಹಿತಿಯನ್ನು ಯಾರಿಗೂ ಮಾರಿಕೊಳ್ಳುವುದಿಲ್ಲ ಎಂದು ಟೀಕಿಸಿದ್ದಾರೆ.

ಮತದಾರರ ಪಟ್ಟಿಯಲ್ಲಿ ಕೆಲವು ವರ್ಗದ ಮತದಾರರನ್ನು ಕೈಬಿಡುವುದು ಒಂದೆಯಡೆಯಾದರೆ, ಖಾಲಿ ಇರುವ ಮನೆಗಳ ವಿಳಾಸದಲ್ಲಿ ಬೇರೆ ಕಡೆಯಿಂದ ಮತದಾರರನ್ನು ಕರೆತಂದು ಮತಹಾಕಿಸಲು ಸಿದ್ಧತೆ ಮಾಡಲಾಗುತ್ತಿದೆ. ಇದಕ್ಕಾಗಿ ಪ್ರತ್ಯೇಕ ಆಪ್ ಇಟ್ಟುಕೊಂಡಿದ್ದಾರೆ. ವಾರ್ಡ್ ಮಟ್ಟದಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿರುವವರಿಂದ ಕೋಟ್ಯಂತರ ರೂಪಾಯಿ ವ್ಯವಹಾರ ಮಾಡುತ್ತಿದ್ದಾರೆ.

ಬಿಬಿಎಂಪಿ ಮುಖ್ಯ ಆಯುಕ್ತರು ಬೊಮ್ಮಾಯಿ ಹಾಗೂ ಸಚಿವರ ಮಾತು ಕೇಳಿಕೊಂಡು ಇಂತಹ ನೀಚ ಕೆಲಸಕ್ಕೆ ಕೈಹಾಕಿದ್ದಾರೆ. ಆ ಮೂಲಕ ಕಾರ್ಯಾಂಗ ವ್ಯವಸ್ಥೆಗೆ ಕಳಂಕ ತಂದಿದ್ದಾರೆ. ಈ ಸಂಚು ಕೇವಲ ಬೆಂಗಳೂರಿನಲ್ಲಿ ಮಾತ್ರವಲ್ಲ, ಬೇರೆ ಕಡೆಗಳಲ್ಲೂ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ನವೆಂಬರ್ 16 ರಂದು ಸರ್ಕಾರ ಈ ಆದೇಶವನ್ನು ಹಿಂಪಡೆದಿದ್ದು, ಇದಕ್ಕೆ ಯಾವುದೇ ಸ್ಪಷ್ಟ ಕಾರಣ ನೀಡಿಲ್ಲ. ಬದಲಿಗೆ, ಈ ಸಂಸ್ಥೆ ವಿಶ್ವಾಸಾರ್ಹತೆ ಉಳಿಸಿಕೊಳ್ಳಲು ವಿಫಲವಾಗಿದ್ದು, ಯಾರೂ ಕೂಡ ಈ ಸಂಸ್ಥೆಗೆ ತಮ್ಮ ಮಾಹಿತಿ ಹಂಚಿಕೊಳ್ಳಬಾರದು ಎಂದು ಈಗ ತುಷಾರ್ ಗಿರಿನಾಥ್ ಅವರು ಹೇಳಿಕೆ ನೀಡಿದ್ದಾರೆ. ಈಗಾಗಲೇ ಸಾವಿರಾರು ಸಿಬ್ಬಂದಿ ಮೂಲಕ ಮತದಾರರ ಮಾಹಿತಿ ಸಂಗ್ರಹಿಸಲಾಗಿದೆ. ಈ ಬಗ್ಗೆ ಭಾರತೀಯ ಚುನಾವಣಾ ಆಯೋಗ, ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಲಾಗಿದೆಯೇ?

ಇದೆಲ್ಲವೂ ಮತದಾನದ ಅಕ್ರಮದ ಹಿಂದಿನ ಷಡ್ಯಂತ್ರ. ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪಂಗಡದವರು, ಹಿಂದುಳಿದ ವರ್ಗದ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲು ಈ ಸಂಚು ನಡೆದಿದೆ. ಆ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಇದು ರಾಷ್ಟ್ರಮಟ್ಟದ ಅಕ್ರಮ. ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗಿರುವ ವಿಚಾರ.

ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ಸರ್ಕಾರ ಬಿಬಿಎಂಪಿ ಚುನಾವಣೆಯನ್ನು ಮುಂದೂಡುತ್ತಿದೆ. ಕೋರ್ಟ್ ಡಿ.31ರ ಒಳಗೆ ಚುನಾವಣೆ ಮಾಡಬೇಕು ಎಂದು ಗಡವು ನೀಡಿದ ನಂತರ ಮುಖ್ಯಮಂತ್ರಿಗಳೇ ಇಂತಹ ಮೋಸ ಕೆಲಸಕ್ಕೆ ಕೈಹಾಕಿದ್ದೀರಾ? ಈ ಚುನಾವಣಾ ಪ್ರಕ್ರಿಯೆ ಬಗ್ಗೆ ಕೇಂದ್ರ ಚುನಾವಣಾ ಆಯೋಗ, ರಾಜ್ಯ ಚುನಾವಣಾ ಆಯೋಗವು ರಾಜ್ಯ ಮುಖ್ಯ ನ್ಯಾಯಾಧೀಶರಿಂದ ತನಿಖೆ ಮಾಡಿಸಬೇಕು. ಬಿಎಲ್ಒ ಎಂಬ ನಕಲಿ ಗುರುತಿನ ಚೀಟಿ ಇಟ್ಟುಕೊಂಡಿರುವವರ ವಿರುದ್ಧ ಎಫ್ಐಆರ್ ದಾಖಲಿಸಿ, ಅವರನ್ನು ಬಂಧಿಸಬೇಕು. ಇದರ ಹಿಂದಿರುವ ಎಲ್ಲ ಅದಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಬೇಕು. ಈಗಾಗಲೇ ಕಳುವಾಗಿರುವ ಮತದಾರರ ಮಾಹಿತಿಯನ್ನು ಹಿಂಪಡೆದು ಅವುಗಳ ಬಳಕೆ ತಡೆಯಬೇಕು. ಇದು ಕೇವಲ ಬಿಬಿಎಂಪಿ, ರಾಜ್ಯದ ವಿಚಾರವಲ್ಲ. ದೇಶದಾದ್ಯಂತ ಪ್ರಜಾಪ್ರಭುತ್ವದ ಹಕ್ಕು ಕಸಿಯುವ ಪ್ರಯತ್ನ ಎಂದು

ಈ ಸಮಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೆಲವು ಪ್ರಶ್ನೆಗಳನ್ನು ಕೇಳಿದ್ದು,

ಚಿಲುಮೆ ಎಂಬ ಖಾಸಗಿ ಸಂಸ್ಥೆಗೆ ಸರ್ಕಾರ ಹಾಗೂ ಬಿಬಿಎಂಪಿ ಬದಲಿಗೆ ಕೆಲಸ ಮಾಡಲು ಅನುಮತಿ ನೀಡಿದ್ದು ಯಾರು? ಯಾವ ಆಧಾರದ ಮೇಲೆ ಈ ಖಾಸಗಿ ಸಂಸ್ಥೆಗಳಿಗೆ ಒಂದೇ ದಿನದಲ್ಲಿ ಅನುಮತಿ ನೀಡಲಾಯಿತು?. ಬೆಂಗಳೂರಿನ ಉಸ್ತುವಾರಿ ಸಚಿವರಾಗಿರುವ ನೀವಾಗಲಿ, ಬಿಬಿಎಂಪಿ ಆಗಲಿ, ಚುನಾವಣಾ ಉಸ್ತುವಾರಿ ಅಧಿಕಾರಿಗಳಾಗಲಿ ಚುನಾವಣೆ ಕೆಲಸವನ್ನು ಖಾಸಗಿ ಸಂಸ್ಥೆಗೆ ನೀಡುವ ಮುನ್ನ ಯಾಕೆ ಜಾಹೀರಾತು ಪ್ರಕಟಿಸಲಿಲ್ಲ?, ರಾಜ್ಯದಲ್ಲಿ ಸಾವಿರಾರು ಎನ್ ಜಿಒಗಳಿದ್ದು, ಅವುಗಳ ಪೈಕಿ ಈ ಖಾಸಗಿ ಸಂಸ್ಥೆಗೆ ಅನುಮತಿ ನೀಡಲು ಶಿಫಾರಸ್ಸು ಮಾಡಿದ್ದು ಯಾರು?, ಬಿಬಿಎಂಪಿ, ಜಿಲ್ಲಾ ಉಸ್ತುವಾರಿಗಳು, ಚುನಾವಣಾ ಅಧಿಕಾರಿಗಳು ಈ ಸಂಸ್ಥೆಯ ಅನುಭವದ ಬಗ್ಗೆ ಪರಿಶೀಲನೆ ನಡೆಸಲಿಲ್ಲ ಏಕೆ?, ಇಡೀ ಬೆಂಗಳೂರಿನ 28 ಕ್ಷೇತ್ರಗಳಲ್ಲಿ ಎಲ್ಲ ಮನೆಗಳ ಸಮೀಕ್ಷೆಯನ್ನು ಉಚಿತವಾಗಿ ಮಾಡುತ್ತೇವೆ ಎಂದಾಗಲೇ ಸರ್ಕಾರಕ್ಕೆ ಅನುಮಾನ ಯಾಕೆ ಬರಲಿಲ್ಲ?, ಬೆಂಗಳೂರು ಉಸ್ತುವಾರಿ ಹೊತ್ತಿರುವ ಮುಖ್ಯಮಂತ್ರಿಗಳು, ಬಿಬಿಎಂಪಿ ಮುಕ್ತ ಆಯುಕ್ತರು, ಚುನಾವಣಾ ಅಧಿಕಾರಿಗಳೆಲ್ಲರೂ ಈ ಮತದಾರರ ಮಾಹಿತಿ ಕಳುವಿನಲ್ಲಿ ಭಾಗಿಯಾಗಿದ್ದಾರೆ ಎಂದು ಸಾಬೀತಾಗುವುದಿಲ್ಲವೇ?,  ಖಾಸಗಿ ಸಂಸ್ಥೆಯೊಂದು ಬೆಂಗಳೂರಿನ ಪ್ರತಿಯೊಬ್ಬ ಮತದಾರರ ಪಟ್ಟಿಯನ್ನು ಕಲೆ ಹಾಕಲು ಹೇಗ ಸಾಧ್ಯ? ಇದು ಕಳ್ಳತನಕ್ಕೆ ಸಾಕ್ಷಿಯಲ್ಲವೇ? ಇದು ಖಾಸಗಿ ಹಕ್ಕಿನ ತ್ಯುಚಿಯಲ್ಲವೇ?,  ಜನ ಪ್ರತಿನಿಧಿ ಕಾಯ್ದೆ ಸೆಕ್ಷನ್ 13 ಬಿ ಪ್ರಕಾರ ಸರ್ಕಾರಿ ಸಿಬ್ಬಂದಿ, ಅರೆ ಸರ್ಕಾರಿ ಅಥವಾ ಸ್ಥಳಿಯ ಪಾಲಿಕೆ ಅಧಿಕಾರಿಗಳು ಮಾತ್ರ ಬೂತ್ ಮಟ್ಟದ ಅಧಿಕಾರಿಗಳಾಗಬಹುದು. ಹಾಗಿದ್ದರೆ ಖಾಸಗಿ ಸಂಸ್ಥೆಯ ಸಿಬ್ಬಂದಿಗಳನ್ನು ಸರ್ಕಾರದ ಅಧಿಕಾರಿಗಳೆಂದು ಹೇಳಿ ಬೂತ್ ಮಟ್ಟದ ಆಧಿಕಾರಿಗಳೆಂದು ಗುರುತಿನ ಚೀಟಿ ನೀಡಿದ್ದು ಹೇಗೆ?,  ಮತದಾರರ ಖಾಸಗಿ ಮಾಹಿತಿಯನ್ನು ಈಗ ಖಾಸಗಿ ಹಕ್ಕಿನ ಆಧಾರದ ಮೇಲೆ ರಕ್ಷಣೆ ಮಾಡಲಾಗುತ್ತಿದ್ದು, ಇದನ್ನು ವಾಣಿಜ್ಯ ಉದ್ದೇಶದ ಡಿಜಿಟಲ್ ಸಮೀಕ್ಷಾ ಎಂಬ ಆಪ್ ಗೆ ಅಪ್ ಲೋಡ್ ಮಾಡಿದ್ದು ಹೇಗೆ? ಇದು ಚುನಾವಣೆ ಪ್ರಕ್ರಿಯೆ ಅಕ್ರಮಕ್ಕೆ ಸಾಕ್ಷಿಯಲ್ಲವೇ?, ಈ ಮೂರು ಸಂಸ್ಥೆಗಳಿಗೂ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಸಚಿವ ಅಶ್ವತ್ಥ್ ನಾರಾಯಣ ಅವರಿಗೂ ಇರುವ ಸಂಬಂಧವೇನು? ಎಂದು ಪ್ರಶ್ನೆಗಳ ಸರಮಾಲೆ ಹಾಕಿದ್ದಾರೆ.

ಅಕ್ರಮದ ಮೂಲಕ ಮತದಾರರ ಮತದಾನದ ಹಕ್ಕು ಕಸಿಯುವ ಪ್ರಯತ್ನವಾಗಿದ್ದು, ಇದರ ಜವಾಬ್ದಾರಿ ಬೆಂಗಳೂರು ಉಸ್ತುವಾರಿ ಸಚಿವರಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕು. ಇವರ ಜತೆಗೆ ಬಿಬಿಎಂಪಿ ಮುಖ್ಯ ಆಯುಕ್ತರು, ಚುನಾವಣಾ ಅದಿಕಾರಿಗಳು ಜವಾಬ್ದಾರಿ ಹೊರಬೇಕು. ಕೂಡಲೇ ಬೊಮ್ಮಾಯಿ ಅವರ ವಿರುದ್ಧ ಎಫ್ಐಆರ್ ದಾಖಲಿಸಿ, ಅವರನ್ನು ಬಂಧಿಸಬೇಕು. ಬೇರೆಯವರು ಇಂತಹ ಅಪರಾಧ ಮಾಡಿದ್ದರೆ ಇಷ್ಟು ಹೊತ್ತಿಗೆ ಬಂಧನವಾಗಿ ಜಾಮೀನು ಕೂಡ ಸಿಗುತ್ತಿರಲಿಲ್ಲ. ಮುಖ್ಯಮಂತ್ರಿಗಳ ಬಂಧನವಾಗಿ ಅವರ ವಿರುದ್ಧ ಉನ್ನತ ಮಟ್ಟದ ತನಿಖೆ ಆಗಬೇಕು. ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳ ನೇತೃತ್ವದಲ್ಲಿ 30 ದಿನಗಳ ಒಳಗಾಗಿ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

ಈ ಅಕ್ರಮದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು, ಬಿಬಿಎಂಪಿ ಆಯುಕ್ತರು, ಸೇರಿದಂತೆ ಈ ಖಾಸಗಿ ಸಂಸ್ಥೆಗಳ ಮಾಲೀಕರ ವರೆಗೆ ಎಲ್ಲರ ವಿರುದ್ಧ ದೂರು ನೀಡಲಾಗುವುದು. ಈ ವಿಚಾರವಾಗಿ 3 ತಿಂಗಳಿಂದ ತನಿಖಾ ವರದಿ ಮಾಡಿರುವ ನ್ಯೂಸ್ ಮಿನಿಟ್ ಹಾಗೂ ಪ್ರತಿಧ್ವನಿ ಮಾಧ್ಯಮ ಸಂಸ್ಥೆಗಳಿಗೆ ಅಭಿನಂದನೆ ಸಲ್ಲಿಸಿದರು.

ಬಿಜೆಪಿಗೆ ಇದೇನು ಹೊಸದಲ್ಲ:

ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಅವರು, ‘ಈ ರೀತಿ ಅಕ್ರಮ ಮಾಡುವುದು ಬಿಜೆಪಿಯವರಿಗೆ ಹೊಸತೇನಲ್ಲ. ಈ ಹಿಂದೆ ವಾರ್ಡ್ ಮರುವಿಂಗಡಣೆಯನ್ನು ರೆವೆನ್ಯೂ ಆಫಿಸರ್ ಗಳ ಮೂಲಕ ಮಾಡಬೇಕಿತ್ತು. ಆದರೆ ಈ ಬಾರಿ ವಾರ್ಡ್ ಮರುವಿಂಗಡಣೆಯನ್ನು ಕೇಶವಕೃಪ, ಬಿಜೆಪಿ ಶಾಸಕರ, ಸಂಸದರ ಕಚೇರಿಯಲ್ಲಿ ಮಾಡಲಾಗಿದೆ. ಅದೇ ರೀತಿ ಇಲ್ಲಿ ಈ ರೀತಿ ಅಕ್ರಮ ಮಾಡಲಾಗಿದೆ’ಎಂದರು.

ಹೂಡಿಕೆ, ಅಭಿವೃದ್ಧಿ ಹೆಸರಲ್ಲಿ ಸರ್ಕಾರದಿಂದ ಕೋಟಿ ಕೋಟಿ ಲೂಟಿ: ಎಂ. ಲಕ್ಷ್ಮಣ್‌ ಗಂಭೀರ ಆರೋಪ
ಬೆಂಗಳೂರು: ಜಾಗತಿಕ ಬಂಡವಾಳ ಹೂಡಿಕೆ ಮತ್ತು ಅಭಿವೃದ್ಧಿ ಕಾಮಗಾರಿ ಹೆಸರಲ್ಲಿ ರಾಜ್ಯ ಸರ್ಕಾರವು ಕೋಟಿ, ಕೋಟಿ ಹಣ ಲೂಟಿ ಮಾಡಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.

ಈ ಕುರಿತು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸರ್ಕಾರ ವಾರದ ಹಿಂದೆ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಮಾಡಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 10 ಲಕ್ಷ ಕೋಟಿ ಹೂಡಿಕೆ ಒಪ್ಪಂದ ಮಾಡಿಕೊಂಡಿದ್ದು 7 ಲಕ್ಷ ಉದ್ಯೋಗ ಸೃಷ್ಟಿ ಎಂದು ಹೇಳಿದ್ದಾರೆ. ಮುರುಗೇಶ್ ನಿರಾಣಿ ಅವರು 2010 ಹಾಗೂ 2012ರಲ್ಲೂ ಕೈಗಾರಿಕಾ ಸಚಿವರಾಗಿದ್ದರು. ಆಗಲೂ ಇದೇ ರೀತಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಮಾಡಿದ್ದರು. 2010ರಲ್ಲಿ 3 ಲಕ್ಷ ಕೋಟಿ ಹೂಡಿಕೆ ಎಂದು ಘೋಷಣೆ ಮಾಡಿದ್ದರು. ಇಲ್ಲಿವರೆಗೂ ಅದರಲ್ಲಿ ಜಾರಿ ಆಗಿದ್ದು ಶೇ.14ರಷ್ಟು ಮಾತ್ರ. 3 ಲಕ್ಷ ಉದ್ಯೋಗ ಸೃಷ್ಟಿ ಎಂದಿದ್ದರು ಆದರೆ ಇಲ್ಲಿಯವರೆಗೂ ಸಿಕ್ಕಿರುವ ಕೆಲಸ 4 ಸಾವಿರ ಮಾತ್ರ. ಇನ್ನು 2012ರಲ್ಲಿ ಘೋಷಣೆ ಆಗಿದ್ದು 6.77 ಲಕ್ಷ ಕೋಟಿ, ಹೂಡಿಕೆ ಆಗಿದ್ದು ಶೇ.8ರಷ್ಟು ಅಂದರೆ 54 ಸಾವಿರ ಕೋಟಿ. ಅಂದು 4.5 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದಿದ್ದರು. ಆದರೆ ಸಿಕ್ಕಿದ ಉದ್ಯೋಗ ಕೇವಲ 3500 ಮಾತ್ರ ಎಂದು ಮಾಹಿತಿ ನೀಡಿದರು.

ಈಗ 2022ರಲ್ಲಿ ಘೋಷಣೆ ಆಗಿರುವುದು 9.89 ಲಕ್ಷ ಕೋಟಿ ಅದರಲ್ಲಿ ಮಾಡಿಕೊಂಡಿರುವ ಒಪ್ಪಂದ 2.83 ಲಕ್ಷ ಕೋಟಿ ಎಂದು ಹೇಳುತ್ತಿದ್ದು, 7 ಲಕ್ಷ ಮಂದಿಗೆ ಉದ್ಯೋಗ ಸಿಗಲಿದೆ ಎಂದು ಸರ್ಕಾರ ಹೇಳುತ್ತಿದೆ. ಇದೆಲ್ಲವೂ ರಾಜಕೀಯ ಗಿಮಿಕ್ ಆಗಿದೆ ಎಂದು ಲಕ್ಷ್ಮಣ್ ಅವರು ದೂರಿದ್ದಾರೆ.

ಈ ಬಂಡವಾಳ ಹೂಡಿಕೆದಾರರ ಕಾರ್ಯಕ್ರಮಕ್ಕಾಗಿ ಪ್ರಪಂಚದಾದ್ಯಂತ ಇವರು ಪ್ರಚಾರಕ್ಕಾಗಿ ಖರ್ಚು ಮಾಡಿರುವ ಹಣ 300 ಕೋಟಿ. ಭೂ ಬ್ಯಾಂಕ್ ಮೂಲಕ 1.5 ಲಕ್ಷ ಎಕರೆ ಮೀಸಲಿಟ್ಟಿರುವುದಾಗಿ ಹೇಳಿದ್ದಾರೆ. ಈ ಹಿಂದೆಯೂ ಭೂ ಬ್ಯಾಂಕ್ ಎಂದು ಮಾಡಿ ಕೈಗಾರಿಕೆಗೂ ನೀಡಲಿಲ್ಲ, ಎಲ್ಲವೂ ರಿಯಲ್ ಎಸ್ಟೇಟ್ ಪಾಲಾಯಿತು. ಈಗ ದೇವನಹಳ್ಳಿ ಸುತ್ತಮುತ್ತ ಸಾವಿರಾರು ಎಕರೆಯನ್ನು ರೈತರಿಂದ ಕಸಿದು ರಿಯಲ್ ಎಸ್ಟೇಟ್ ನವರಿಗೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ಮುರುಗೇಶ್ ನಿರಾಣಿ ಅವರ ಪುತ್ರ ಈ ಕಾರ್ಯಕ್ರಮದಲ್ಲಿ ದೊಡ್ಡ ಪಾತ್ರ ವಹಿಸಿದ್ದರು. ಆ ಸಮಿತಿಯಲ್ಲಿ ಅವರು ಇದ್ದು, ಕಾರ್ಯಕ್ರಮದ ಆಯೋಜನೆಯಲ್ಲೂ ಅವರ ಪಾತ್ರವಿತ್ತು. ಸಚಿವರ ಪುತ್ರ ಎನ್ನುವುದು ಹೊರತಾಗಿ ಉಳಿದ ಯಾವುದೇ ಅರ್ಹತೆ ಅವರಿಗೆ ಇಲ್ಲವಾಗಿದೆ. ಅವರನ್ನು ಯಾಕೆ ಇದರಲ್ಲಿ ಭಾಗವಹಿಸಲು ಅವಕಾಸ ನೀಡಿ ಅವರ ಮೂಲಕ ಯಾರಿಗೆ ಎಷ್ಟು ಎಕರೆ ಜಮೀನು ಕೊಡಿಸಿದ್ದೀರಿ ಎಂದು ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು.

ಈ ಕಾರ್ಯಕ್ರಮದಲ್ಲಿ ಅತಿಥಿಗಳ ವಾಸ್ತವ್ಯಕ್ಕೆ ಸ್ಟಾರ್ ಹೋಟೇಲ್ ಗಳಿಗಾಗಿ 85 ಕೋಟಿಯಷ್ಟು ಖರ್ಚು ಮಾಡಿದ್ದಾರೆ. ಮೊನ್ನೆ ಪ್ರಧಾನಿ ಅವರು 4 ಗಂಟೆ ಆಗಮಿಸಿದ್ದಕ್ಕೆ ಜಾಹೀರಾತು ಹೊರತುಪಡಿಸಿ 48 ಕೋಟಿ ಖರ್ಚು ಮಾಡಲಾಗಿದೆ. ಇದು ಜನಸಾಮಾನ್ಯರ ಹಣವಾಗಿದೆ. ಯಾರದ್ದೋ ದುಡ್ಡಲ್ಲಿ ಯಲ್ಲಮ್ಮನ ಜಾತ್ರೆ ಮಾಡುತ್ತಿದೆ ಸರ್ಕಾರ ಎಂದು ಟೀಕಿಸಿದರು.

ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು 144ಪೊಲೀಸ್ ಠಾಣೆಗಳಿವೆ. 44 ಟ್ರಾಫಿಕ್ ಪೊಲೀಸ್ ಠಾಣೆಗಳಿವೆ. ಒಟ್ಟು 188 ಠಾಣೆಗಳಿವೆ. ಇವುಗಳಿಂದ ಭ್ರಷ್ಟಾಚಾರದ ಮೂಲಕ ಬರುತ್ತಿರುವ ಆದಾಯ ವಾರ್ಷಿಕವಾಗಿ 250 ಕೋಟಿ. ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಹುದ್ದೆಗೆ 1.50 ಕೋಟಿ. ಉಪ್ಪಾರಪೇಟೆ ಠಾಣೆಯಲ್ಲಿ 1.25 ಕೋಟಿ, ಬಸವೇಶ್ವರ ನಗರ 1 ಕೋಟಿ. ಕೇವಲ ವರ್ಗಾವಣೆ ಧಂದೆಯಲ್ಲಿ 188 ಪೊಲೀಸ್ ಠಾಣೆಗಳ ಮೂಲಕ 250 ಕೋಟಿ ವಸೂಲಿ ಮಾಡಲಾಗಿದೆ. ಈ ವಿಚಾರವನ್ನು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ರಹಸ್ಯವಾಗಿ ನೀಡಿರುವ ಮಾಹಿತಿ. ಈ ವಿಚಾರ ತನಿಖೆ ಮೂಲಕ ಬಹಿರಂಗವಾಗಬೇಕು ಎಂದು ಒತ್ತಾಯಿಸಿದರು.

ಪೊಲೀಸ್ ಠಾಣೆಗಳಿಂದ ಪ್ರತಿನಿತ್ಯ ಆಗುತ್ತಿರುವ ವಸೂಲಿ 5 ಕೋಟಿ. ತಿಂಗಳಿಗೆ 150 ಕೋಟಿ ವಸೂಲಿ ಆಗುತ್ತಿದೆ. ಕಳೆದ ಮೂರುವರೆ ವರ್ಷಗಳಿಂದ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾದ ನಂತರ ಸುಮಾರು 1 ಲಕ್ಷ ಕೋಟಿ ವಸೂಲಿ ಮಾಡಲಾಗಿದೆ. ಇದು ಹಾಲಿ 6 ಸಚಿವರು ಇಬ್ಬರು ಆಪ್ತರ ಬಳಿ ಈ ಹಣವಿದೆ. ಈ ವಿಚಾರವಾಗಿ ಹೈಕೋರ್ಟ್ ಹಾಗು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ, ಇಡಿ ಅಥವಾ ಸಿಬಿಐ ಮೂಲಕ ತನಿಖೆ ಆದರೆ 8 ಜನರ ಹೆಸರನ್ನು ನಾವು ನೀಡುತ್ತೇವೆ ಎಂದು ತಿಳಿಸಿದರು.

ಇಡಿ ಅವರು ಸಣ್ಣ ಪುಟ್ಟ ಪ್ರಕರಣ ಇಟ್ಟುಕೊಂಡು ಅವರು ಸಾಯುವ ವರೆಗೂ ಬಿಡುವುದಿಲ್ಲ. ನೀವು ಈ ಪ್ರಕರಣವನ್ನು ವಿಚಾರಣೆಗೆ ತೆಗೆದುಕೊಳ್ಳಿ. ಬೊಮ್ಮಾಯಿ ಅವರೇ ನೀವು ನಿಮ್ಮ ಮೂಗಿನ ನೇರಕ್ಕೆ ಎಲ್ಲವೂ ನಡೆಯುತ್ತಿದೆ. ನಿಮ್ಮ ಸುತ್ತಮುತ್ತಲಿನವರೇ ಈ 1 ಲಕ್ಷ ಕೋಟಿ ಒಡೆಯರು ಎಂದು ಹೇಳಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ 15 ಸಾವಿರ ಕಿ.ಮೀ ರಸ್ತೆಗಳಿದ್ದು, 32 ಸಾವಿರ ರಸ್ತೆಗುಂಡಿಗಳಿವೆ ಎಂದು ಸರ್ಕಾರ ಹೈಕೋರ್ಟ್ ಗೆ ನೀಡಿರುವ ವರದಿಯಲ್ಲಿ ತಿಳಿಸಲಾಗಿದೆ. ಈ ಪೈಕಿ 10 ಸಾವಿರ ರಸ್ತೆಗುಂಡಿ ಮುಚ್ಚಲಾಗಿದೆ ಎಂದು ಹೇಳಿದ್ದಾರೆ. ಅದಕ್ಕೆ ಖರ್ಚಾಗಿರುವ ಹಣ 790 ಕೋಟಿ. ಇನ್ನು ಉಳಿದ 22 ಸಾವಿರ ಕೋಟಿ ರಸ್ತೆಗುಂಡಿ ಮುಚ್ಚಲು 1500 ಕೋಟಿ ಬೇಕಾಗುತ್ತದೆ. ಒಟ್ಟಾರೆ 2200 ಕೋಟಿ ಯನ್ನು ರಸ್ತೆ ಗುಂಡಿ ಮುಚ್ಚಲು ಬೇಕಾಗಿದೆ ಎಂದು ತಿಳಿಸಿದರು.

ಕೇಂದ್ರದ ಇಂಡಿಯನ್ ರೋಡ್ ಕಾಂಗ್ರೆಸ್ ಸಂಸ್ಥೆ ಪ್ರಕಾರ 1 ಕಿ.ಮೀ ರಸ್ತೆಯ ಡಾಂಬರೀಕರಣಕ್ಕೆ 1.5 ಕೋಟಿ ವೆಚ್ಚ ಬೀಳುತ್ತದೆ. ಇವರು 1 ಕಿ.ಮೀ ರಸ್ತೆಯ ರಸ್ತೆಗುಂಡಿ ಮುಚ್ಚಲು 2.25 ಕೋಟಿ ವೆಚ್ಚ ಮಾಡಿದ್ದಾರೆ. ಈ ಸರ್ಕಾರದಲ್ಲಿ ಯಾವ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದರು.

ಬೊಮ್ಮಾಯಿ ಅವರೇ ನೀವು ಸಂಕಲ್ಪ ಯಾತ್ರೆ ಮಾಡಲು ಹೊರಟಿದ್ದೀರಿ. ನಿಮ್ಮ ಸಂಕಲ್ಪ ಯಾತ್ರೆಯಲ್ಲಿ 3 ಗಂಟೆ ಭಾಷಣದಲ್ಲಿ ಎರಡೂವರೆ ಗಂಟೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಬೈಯ್ಯಲು ಮೀಸಲಿಡುತ್ತೀರಿ. ಈಗ ನೀವು ಇದಕ್ಕೆ ಉತ್ತರ ನೀಡಬೇಕು ಎಂದರು.

ಮೈಸೂರಿನಲ್ಲಿ ಕಿಡಿ ಹೊತ್ತಿಸಲು ಪ್ರತಾಪ್ ಸಿಂಹ ಎಂಬ ಸಂಸದರಾಗಿದ್ದಾರೆ. ಈ ಹಿಂದಿನ ಸರ್ಕಾರಗಳು ಮೈಸೂರು ಸಿಟಿಯನ್ನು ಪಾರಂಪರಿಕ ನಗರಿ ಎಂದು ಪರಿಗಣಿಸಬೇಕು ಎಂದು ಆರ್ಕಿಯಾಲಜಿ ಇಲಾಖೆಗೆ ಪ್ರಸ್ತಾವನೆ ನೀಡಲಾಗಿತ್ತು. ಈ ಪರ್ಸ್ತಾವನೆಯಲ್ಲಿ 350 ಕಟ್ಟಡಗಳನ್ನು ಪಾರಂಪರಿಕ ಕಟ್ಟಡ ಎಂದು ಗುರುತಿಸಿದ್ದು, ಇದರಲ್ಲಿ ಅರಮನೆ ಸೇರಿದಂತೆ 180 ಕಟ್ಟಡಗಳು ಸರ್ಕಾರಿ ಕಟ್ಟಡಗಳಾಗಿವೆ ಎಂದು ಮಾಹಿತಿ ನೀಡಿದರು.

ಇಡೀ ಪ್ರಪಂಚದಲ್ಲಿ 8 ಬಗೆಯ ಆರ್ಕಿಟೆಕ್ಚರ್ ಗಳನ್ನು ಬಳಸಲಾಗುತ್ತಿದೆ. ಮೈಸೂರು ಅರಮನೆಯ ಮೇಲ್ಬಾಗದ ಗೋಪುರವನ್ನು ಮೋಘಲರ ಆರ್ಕಿಟೆಕ್ಚರ್ ಎಂದು ಕರೆಯುತ್ತೇವೆ. ಬ್ರಿಟನ್ ಸೇರಿದಂತೆ ಪ್ರಪಂಚದಾದ್ಯಂತ ಈ ವಿನ್ಯಾಸ ಬಳಸಲಾಗಿದೆ. ಮೈಸೂರು ಅರಮನೆ ವಿನ್ಯಾಸ ಆಧಾರದ ಮೇಲೆ ಅಲ್ಲಿನ ಪಾಲಿಕೆ, ಶಾಸಕರು ಸೇರಿ ಅರಮನೆಯ ಮೂರು ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡ  ನಿರ್ಮಾಣ ಮಾಡಬೇಕಾದರೂ ಅದು ಅರಮನೆಯ ಪಾರಂಪರಿಕ ವಿನ್ಯಾಸವನ್ನೇ ಹೊಂದಿರ ಬೇಕು ಎಂದು ತೀರ್ಮಾನಿಸಲಾಗಿದೆ. ಇದು ಮೈಸೂರು ಪಾಲಿಕೆಯ ಬೈಲಾದಲ್ಲೂ ಇದೆ. ಒಂದು ಶೌಚಾಲಯ ಕಟ್ಟಿದರೂ ಅದರ ವಿನ್ಯಾಸ ಈ ರೀತಿ ಇರಬೇಕು ಎಂದು ಕಾನೂನು ಇದೆ ಎಂದು ಹೇಳಿದರು.

ಈ ಭಾಗದ ಮೂವರು ಶಾಸಕರ ಪೈಕಿ ಬಿಜೆಪಿ ಶಾಸಕ ರಾಮದಾಸ್ ಅವರು 18 ಬಸ್ ಶೆಲ್ಟರ್ ಗಳನ್ನು ತಮ್ಮ ಅನುದಾನದಲ್ಲಿ ಹಣ ನೀಡಿದ್ದು, 12 ಬಸ್ ಶೆಲ್ಟರ್ ನಿರ್ಮಾಣವಾಗಿವೆ. ಇವುಗಳ ಡೂಮ್ ಸ್ಟಕ್ಚರ್ ಏನು ಎಂದು ಅರ್ಥ ಮಾಡಿಕೊಳ್ಲುವ ಯೋಗ್ಯತೆ ಇಲ್ಲದ ವ್ಯಕ್ತಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೇಲೆ ಒತ್ತಡ ತಂದು ಪಾಲಿಕೆ ಹಾಗೂ ರಾಜ್ಯ ರಸ್ತೆ ಸಂಸ್ಥೆಗೆ ಪತ್ರ ಬರೆದು ಅದರಲ್ಲಿ ಇದು ಧರ್ಮವನ್ನು ಬಿಂಬಿಸುವ ವಿನ್ಯಾಸವಾಗಿದೆ. ಹೀಗಾಗಿ ಇದನ್ನು ತೆರವುಗೊಳಿಸಬೇಕು ಎಂದು ಅಧಿಕಾರಿ ಕೈಯಲ್ಲಿ ಸಂಸದರು ಪತ್ರ ಬರೆಸುತ್ತಾರೆ ಎಂದು ಹೇಳಿದರು.

ಇದಕ್ಕೆ ರಾಮದಾಸ್ ಅವರು ಸ್ಪಷ್ಟೀಕರಣ ನೀಡಿದ್ದು, ಇದು ಯಾವುದೇ ಧರ್ಮದ ಪ್ರತೀಕವಾಗಿಲ್ಲ. ಇದಕ್ಕೂ ಮಸೀದಿಗೆ ಸಂಬಂಧವಿಲ್ಲ ಹಾಗಾಗಿ ಇದನ್ನು ಒಡೆಯುವ ಪ್ರಶ್ನೆಯೇ ಇಲ್ಲ. ಪ್ರತಾಪ್ ಸಿಂಹ ಅವರು ರಾಜಕೀಯ ಮಾಡುವ ನಿಟ್ಟಿನಲ್ಲಿ ಹೇಳಿಕೆ ನೀಡುತ್ತಿದ್ದಾರೆ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ ಎಂದರು.

ಪ್ರತಾಪ್ ಸಿಂಹ ಕಳೆದ ಎಂಟು ವರ್ಷಗಳಿಂದ ಕೊಡಗನ್ನು ಸಂಪೂರ್ಣವಾಗಿ 25 ವರ್ಷ ಹಿಂದಕ್ಕೆ ತೆಗೆದುಕೊಂಡಿದ್ದು, ಮೈಸೂರನ್ನು ಸುಮಾರು 10 ವರ್ಷ ಹಿಂದಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಉಳಿದಿರುವ ಎರಡು ವರ್ಷಗಳಲ್ಲಿ ಇನ್ನು 10 ವರ್ಷ ಹಿಂದಕ್ಕೆ ತೆಗೆದುಕೊಂಡು ಹೋಗುತ್ತಾರೆ. ಇವರ ಯೋಗ್ಯತೆಗೆ ಕೇಂದ್ರದಿಂದ ನಯಾ ಪೈಸೆ ತರಲಿಲ್ಲ. ಆದರೆ ರಾಜ್ಯದಲ್ಲಿ ಕಿಡಿ ಹೊತ್ತಿಸಲು ನಾಲ್ಕೈದು ಜನರಿದ್ದು ಇವರು ಮೊದಲ ಎರಡು ಸ್ಥಾನಗಳಲ್ಲಿ ಬರುತ್ತಾರೆ. ಪ್ರಪ್ಲಾದ್ ಜೋಷಿ, ಸಿ.ಟಿ ರವಿ, ರವಿ ಕುಮಾರ್ ಇವರೆಲ್ಲರೂ ಸುಳ್ಲು ಹೇಳುವುದರಲ್ಲೇ ಪಿಹೆಚ್ಡಿ ಮಾಡಿಕೊಂಡಿದ್ದರೆ ಎಂದು ಕಾರವಾಗಿ ಟೀಕಿಸಿದರು.

ಪ್ರತಾಪ್‌ ಸಿಂಹ ಅವರು ಸತ್ಯಹರಿಶ್ಚಂದ್ರರ ಕುಟುಂಬಕ್ಕೆ ಸೇರಿದ್ದರೆ ನಾನು ಮೈಸೂರು ಡಿಸಿಗೆ ನೀಡಿರುವ ದೂರಿನಲ್ಲಿ ಸಂಸದರ ನಿಧಿಯ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದೇನೆ. ಇವರು ದಕ್ಷಿಣ ಕನ್ನಡದ ಕಿಕ್ಕಂಜೆ ಊರಿನಲ್ಲಿ ಡಾ.ಮುರಳಿಕೃಷ್ಣ ಎಂಬ ಇವರ ಸ್ನೇಹಿತರ ಆಸ್ಪತ್ರೆ ಇದೆ. ಅದಕ್ಕೆ ಇವರು 18 ಲಕ್ಷ ರೂಪಾಯಿಯ ಆಂಬುಲೆನ್ಸ್ ಅನ್ನು ದೇಣಿಗೆ ನೀಡುತ್ತಾರೆ. ಮುರಳಿಕೃಷ್ಣ ಅವರ ಮತ್ತೊಂದು ಕ್ಲೀನಿಕ್ ಹೊಯ್ಸಳ ಕ್ಲೀನಿಕ್ ಗೆ ನಿರ್ದೇಶಕರನ್ನಾಗಿ ಪ್ರತಾಪ್ ಸಿಂಹ ಅವರ ಪತ್ನಿ ಅರ್ಪಿತಾ ಸಿಂಹ ಅವರನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

ಸಂಸದರ ನಿಧಿಯಿಂದ ಬೇರೆ ಜಿಲ್ಲೆ ಕ್ಷೇತ್ರಗಳಿಗೇ ದೇಣಿಗೆ ರೂಪದಲ್ಲಿ ನೀಡಲು ಅವಕಾಶವಿದೆ. ಆದರೆ ಅದಕ್ಕೆ ಒಂದು ಷರತ್ತು ಇದ್ದು, ನೀವು ಯಾವುದೇ ಟ್ರಸ್ಟ್, ಸೊಸೈಟಿ ಅಥವಾ ಸಹಕಾರಿ ಸೊಸೈಟಿ ಆಗಿರಬಾರದು. ಆದರೆ ಪ್ರತಾಪ್ ಸಿಂಹ ಅವರು ನೀಡಿರುವ ಹಣ ವೆಂಕಟಕೃಷ್ಣ ಯೂರತ್ರೇಯ ಮೆಮೋರಿಯಲ್ ಟ್ರಸ್ಟ್ ಗೆ ನೀಡಿದ್ದಾರೆ. ಇದು ಎಷ್ಟರ ಮಟ್ಟಿಗೆ ಸರಿ? ಇನ್ನು ಮೈಸೂರಿನಲ್ಲಿ ಒಂದು ಟ್ರಸ್ಟ್ ಗೆ ಹಣ ನೀಡಿದ್ದು, ಎಂ.ಗೋಪಿನಾಥ್ ಶೆಣೈ ಚಾರಿಟಬಲ್ ಟ್ರಸ್ಟ್ ಗೆ ನೀಡಿದ್ದಾರೆ. ಈ ಟ್ರಸ್ಟ್ ನ ವಿಳಾಸ ಹುಡುಕಿಕೊಂಡು ಹೋದಾಗ ಸರಸ್ವತಿಪುರಂ ನ ವಿಶ್ವಮಾನವ ರಸ್ತೆ 12ನೇ ನಂಬರ್ ಜಾಗದಲ್ಲಿ ಈ ಟ್ರಸ್ಟ್ ನ ಕಚೇರಿ ಬದಲು ಮೆಕ್ ಡೊನಾಲ್ಡ್ ಹೊಟೇಲ್ ಇದೆ. ಇದಕ್ಕೆ ಪ್ರತಾಪ್ ಸಿಂಹ ಅವರು ಉತ್ತರಿಸಬೇಕು. ಇದುವರೆಗೂ ಈ ಬಗ್ಗೆ ಜಿಲ್ಲಾಧಿಕಾರಿಗೆ ದೂರು ನೀಡಿ, ಎರಡು ಪತ್ರಿಕಾಗೋಷ್ಠಿ ಮಾಡಿದ್ದರೂ ಅವರು ಉತ್ತರ ನೀಡಿಲ್ಲ ಎಂದರು.

ಇಂತಹ ವ್ಯಕ್ತಿ ಬೆಂಗಳೂರು ಮೈಸೂರು ರಸ್ತೆಯನ್ನು ತನ್ನ ಮನೆ ಆಸ್ತಿಯಿಂದ ಮಾಡುತ್ತಿರುವಂತೆ ಮಂಡ್ಯ, ಮದ್ದೂರಿನಲ್ಲಿ ಫೇಸ್ಬುಕ್ ಲೈವ್ ಮಾಡುತ್ತಿದ್ದಾರೆ. ಈ ರೀತಿ ಮಾಡಿ ಗುತ್ತಿಗೆದಾರರಿಂದ 3 ಕೋಟಿಯಷ್ಟು ಲಂಚ ಪಡೆದಿದ್ದಾರೆ ಎಂದು ಮಂಡ್ಯದ ಜನ ಪತ್ರಿಕಾಗೋಷ್ಠಿ ಮಾಡಿ ಹೇಳುತ್ತಿದ್ದಾರೆ. ಇಂತಹ ವ್ಯಕ್ತಿ ಚುನಾವಣೆ ಸಮಯದಲ್ಲಿ ಕಿಡಿ ಹಚ್ಚಲು ಈ ರೀತಿ ಗೊಂದಲ ಸೃಷ್ಟಿಸಿ ಜನರ ದಿಕ್ಕು ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿಯವರ ಈ ಸುಳ್ಳು ಹೇಳಿಕೆಗಳನ್ನು ನಂಬಬಾರದು ಎಂದು ಜನರಲ್ಲಿ ಮನವಿ ಮಾಡಿಕೊಂಡರು.

ಅವರು ತಾವು ಇಂತಹ ಭರವಸೆ ನೀಡಿದ್ದು, ಅದರಲ್ಲಿ ಎಷ್ಟು ಭರವಸೆ ಈಡೇರಿಸಿದ್ದೇವೆ, ಇಂತಹ ಯೋಜನೆ ಮಾಡಿದ್ದೇವೆ ಎಂದು ತಮ್ಮ ಕೆಲಸದ ಪಟ್ಟಿ ನೀಡಿ ಮತ ಕೇಳಲಿ. ಅದನ್ನು ಬಿಟ್ಟು ದಿನಬೆಳಗಾದರೆ ಸಿದ್ದರಾಮಯ್ಯ ಅವರನ್ನು ನೆನೆಯುತ್ತಾರೆ. ಬಿಜೆಪಿ ನಾಯಕರು ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಹೆಸರು ಬಳಸದೇ ಯಾವುದಾದರೂ ಒಂದು ಕಾರ್ಯಕ್ರಮವನ್ನು ಮಾಡಲಿ ಎಂದು ಸವಾಲು ಹಾಕಿದ್ದಾರೆ.

ಶ್ರೀರಾಮುಲು ಅವರು ಅಂದರಗಾನಿ ಎಂದು ವೀರಾವೇಷದಲ್ಲಿ ಮಾತನಾಡುವುದರ ಹೊರತಾಗಿ ಬೇರೇನು ಮಾಡಿಲ್ಲ. ಆ ಪದದ ಅರ್ಥ ಹುಡುಕುತ್ತಿದ್ದು ಈವರೆಗೂ ಸಿಕ್ಕಿಲ್ಲ. ಅವರು ಸಿದ್ದರಾಮಯ್ಯನವರು ಕ್ಷೇತ್ರಕ್ಕೆ ಅನ್ಯಾಯಾ ಮಾಡಿದ್ದಾರೆ ಎಂದು ಹೇಳುತ್ತಾರೆ. ಅವರು ಯಾವ ಕ್ಷೇತ್ರದವರು ಅವರು ಏನು ಅನ್ಯಾಯಾ ಮಾಡಿದ್ದಾರೆ ಎಂದು ಅರಿಯುತ್ತಿಲ್ಲ. ಶ್ರೀರಾಮುಲು ಅವರೇ ನೀವು ಮುಂದಿನ ಚುನಾವಣೆಯಲ್ಲಿ 25 ಸಾವಿರ ಮತಗಳ ಅಂತರದಲ್ಲಿ ಸೋಲುವುದು ನಿಶ್ಚಿತ. ನಿಮ್ಮನ್ನು ಸೋಲಿಸಲು ಎಲ್ಲ ವ್ಯವಸ್ಥೆಯನ್ನು ಜನ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ರಾಮದಾಸ್ ಹಾಗೂ ಪ್ರತಾಪ್ ಸಿಂಹ ಅವರ ನಡುವಣ ತಿಕ್ಕಾಟ ಬಹಳ ಹಿಂದಿನಿಂದಲೂ ನಡೆಯುತ್ತಿದೆ. ಒಳಗೆ ಅವರು ಬಟ್ಟೆ ಹರಿದುಕೊಂಡು ಹೊಡೆದಾಡಿ ಹೊರಗಡೆ ಏನೂ ಆಗಿಲ್ಲ ಎಂಬಂತೆ ಬಿಂಬಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇದು ಅನ್ನು ದೊಡ್ಡ ಮಟ್ಟಕ್ಕೆ ಹೋಗಲಿದ್ದು. ಜನಗಳು ಇದನ್ನು ಮನರಂಜನೆಯಾಗಿ ನೋಡಲಿದ್ದಾರೆ.

ಮಕ್ಕಳ ದಿನಾಚರಣೆ: ಸರ್ಕಾರಿ ಶಾಲೆಗಳ ಅವ್ಯವಸ್ಥೆ ಕುರಿತ ವಿಡಿಯೋ ಬಿಡುಗಡೆಮಾಡಿದ ಡಿಕೆ ಶಿವಕುಮಾರ್‌
ಬೆಂಗಳೂರು: ದೇಶಾದ್ಯಂತ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮಕ್ಕಳ ಭವಿಷ್ಯವನ್ನು ಉತ್ತಮವಾಗಿ ರೂಪಿಸಲು ಮೂಲಭೂತ ಹಕ್ಕಾದ ಶಿಕ್ಷಣವನ್ನು ಉತ್ತಮ ರೀತಿಯಲ್ಲಿ ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಆದರೆ ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಅವ್ಯವಸ್ಥೆ, ಆ ಮೂಲಕ ಮಕ್ಕಳ ಮೇಲಾಗುವ ವ್ಯತಿರಿಕ್ತ ಪರಿಣಾಮದ ಬಗ್ಗೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ವಿಡಿಯೋ ಬಿಡುಗಡೆ ಮಾಡಿದ್ದಾರೆ.

ಡಿ.ಕೆ ಶಿವಕುಮಾರ್ ಬಿಡುಗಡೆಗೊಳಿಸಿರುವ ವಿಡಿಯೋದಲ್ಲಿ, ಕರ್ನಾಟಕದ ಪ್ರಸ್ತುತ ಶಿಕ್ಷಣ ಪರಿಸ್ಥಿತಿಯ ಮೇಲೆ ಬೆಳಕು ಚೆಲ್ಲಲಾಗಿದೆ. ಶಿಕ್ಷಣ ಇಲಾಖೆ ಏಕೀಕೃತ ಜಿಲ್ಲಾ ಶಿಕ್ಷಣ ವ್ಯವಸ್ಥೆ (ಯುಡಿಎಸ್ಇ+) ವರದಿಯನ್ನು ಬಿಡುಗಡೆ ಮಾಡಿದ್ದು, ವರದಿಯಲ್ಲಿ ರಾಜ್ಯ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಸಂಖ್ಯೆ ಹೆಚ್ಚಿದ್ದರೂ ಶಿಕ್ಷಕರ ಸಂಖ್ಯೆ ಕಡಿಮೆಯಿರುವುದು ಉಲ್ಲೇಖವಾಗಿದೆ. ಇದು ಶಿಕ್ಷಣದ ಗುಣಮಟ್ಟದ ಮೇಲೆ ಪರಿಣಾಮ ಬೀರುವುದರಲ್ಲಿ ಅನುಮಾನವಿಲ್ಲ ಎಂದು ಡಿಕೆಶಿಯವರು ವಿಡಿಯೋ ಮೂಲಕ ತಿಳಿಸಿದ್ದಾರೆ.

ರಾಜ್ಯದಲ್ಲಿ ಒಟ್ಟು ಶಾಲೆಗಳ ಸಂಖ್ಯೆ 76,450. ಅದರಲ್ಲಿ 49,679 ಸರ್ಕಾರಿ ಶಾಲೆಗಳು, 7,110 ಸರ್ಕಾರಿ ಅನುದಾನಿತ ಶಾಲೆಗಳು, 19,650 ಖಾಸಗಿ ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳಿವೆ. ರಾಜ್ಯದ ಶಾಲೆಗಳಲ್ಲಿ ದಾಖಲಾತಿ ಸಂಖ್ಯೆ 2021ರಲ್ಲಿ 1.18 ಕೋಟಿ ಇದ್ದದ್ದು 2022ರ ವೇಳೆಗೆ 1.20 ಕೋಟಿಯಾಗಿದೆ. 2021-22ನೇ ಸಾಲಿನಲ್ಲಿ 8 ಲಕ್ಷಕ್ಕೂ ಹೆಚ್ಚು ಹೊಸ ವಿದ್ಯಾರ್ಥಿನಿಯರು ದಾಖಲಾಗುವುದರ ಜೊತೆಗೆ ಇದೇ ಸಾಲಿನಲ್ಲಿ ಎಸ್ಸಿ, ಎಸ್ಟಿ, ಒಬಿಸಿ ಮತ್ತು ಸಿಡಬ್ಲ್ಯೂಎಸ್ಎನ್ ಅಡಿಯಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳವಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ತಿಳಿದುಬಂದಿದೆ.

2020-21 ಯುಡಿಐಎಸ್ಇ+ ವರದಿಗೆ ಹೋಲಿಸಿದರೆ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಸಂಖ್ಯೆ 2.08 ಲಕ್ಷದಿಂದ 1.99 ಲಕ್ಷಕ್ಕೆ ಇಳಿಕೆಯಾಗಿದ್ದು, ಪ್ರಾಥಮಿಕ ಹಂತದಲ್ಲಿ ಸುಮಾರು 23 ವಿದ್ಯಾರ್ಥಿಗಳಿಗೆ ಓರ್ವ ಶಿಕ್ಷಕರು ಇರುವಂತಾಗಿರುವುದು ಕಳವಳಕಾರಿಯಾಗಿದೆ.

ಕರ್ನಾಟಕದಲ್ಲಿ 47,608 ಸರ್ಕಾರಿ ಶಾಲೆಗಳಿವೆ. 45.42 ಲಕ್ಷ ವಿದ್ಯಾರ್ಥಿಗಳು ಓದುತ್ತಿದ್ದು, ಒಟ್ಟು 2.5 ಲಕ್ಷ ತರಗತಿಗಳಿವೆ. ಈ ಪೈಕಿ 40 ಸಾವಿರ ತರಗತಿಗಳನ್ನು ತುರ್ತು ರಿಪೇರಿ ಮಾಡಿಸಬೇಕಿದ್ದು, ಮಕ್ಕಳ ಹಿತಾಸಕ್ತಿಗೆ ಸರ್ಕಾರ ಮುಂದಾಗಬೇಕಿದೆ ಎಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಆರ್ಟಿಇ ಮೂಲೆಗುಂಪಾಗಿರುವುದು ದುರದೃಷ್ಟಕರ. ಅಂಕಿ ಅಂಶಗಳ ಪ್ರಕಾರ ಆರ್ಟಿಇ ಮಾನದಂಡಗಳನ್ನು ಅನುಸರಿಸುವಲ್ಲಿ ರಾಜ್ಯವು ಶೇಕಡಾ 23.6ರಷ್ಟು ಕಡಿಮೆ ಅನುಸರಣೆ ದರ ಹೊಂದಿದೆ. ಸರ್ಕಾರಿ ಶಾಲೆಗಳಲ್ಲಿ ನೀರು, ವಿದ್ಯುತ್ನಂತಹ ಸೌಲಭ್ಯಗಳ ಕೊರತೆ ಹೆಚ್ಚಳವಾಗಿರುವುದು ಜಡ್ಡುಗಟ್ಟಿದ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದಿದ್ದಾರೆ.

ಕಲ್ಯಾಣ-ಕರ್ನಾಟಕದ 8,028 ಪ್ರಾಥಮಿಕ ಶಾಲೆಗಳ ಪೈಕಿ 1,234 ಶಾಲೆಗಳು ಮತ್ತು 4,663 ತರಗತಿ ಕೊಠಡಿಗಳು ಶಿಥಿಲಾವಸ್ಥೆಯಲ್ಲಿವೆ. ಒಟ್ಟು 1,193 ಪ್ರೌಢಶಾಲೆಗಳ ಪೈಕಿ 237 ಶಾಲೆಗಳು ಮತ್ತು 762 ತರಗತಿ ಕೊಠಡಿಗಳು ಶಿಥಿಲಾವಸ್ಥೆಯಲ್ಲಿವೆ. ಕಲಬುರಗಿಯಲ್ಲಿ 187, ಬಳ್ಳಾರಿಯಲ್ಲಿ 168, ಕೊಪ್ಪಳದಲ್ಲಿ 118, ರಾಯಚೂರಿನಲ್ಲಿ 100, ಯಾದಗಿರಿಯಲ್ಲಿ 97 ತರಗತಿ ಕೊಠಡಿಗಳು ಶಿಥಿಲಾವಸ್ಥೆಯಲ್ಲಿದೆ ಎಂದು ವಿಡಿಯೋದಿಂದ ತಿಳಿದುಬಂದಿದೆ.

ಇನ್ನು, ಶಿವಮೊಗ್ಗ ಜಿಲ್ಲೆಯಲ್ಲಿ 2,001 ಸರ್ಕಾರಿ ಶಾಲೆಗಳಿದ್ದು, 11,842 ತರಗತಿ ಕೊಠಡಿಗಳಿವೆ. ಅವುಗಳಲ್ಲಿ ಸುಮಾರು 2,000 ತರಗತಿ ಕೊಠಡಿಗಳಿಗೆ ನಿರ್ವಹಣಾ ಕಾರ್ಯದ ಅಗತ್ಯವಿದೆ. ದಾವಣಗೆರೆ ಜಿಲ್ಲೆಯಲ್ಲಿ ಬಹಳಷ್ಟು ಕೊಠಡಿಗಳು ತರಗತಿ ನಡೆಸಲು ಯೋಗ್ಯವಾಗಿಲ್ಲ. ಜಿಲ್ಲೆಯಲ್ಲಿ 72 ತರಗತಿ ಕೊಠಡಿಗಳನ್ನು ಕೆಡವಲು ಗುರುತಿಸಲಾಗಿದೆ. ಚಿತ್ರದುರ್ಗದ ಸರ್ಕಾರಿ ಬಾಲಕರ ಪ್ರೌಢಶಾಲೆ ಮತ್ತು ಜೂನಿಯರ್ ಕಾಲೇಜು ಕಟ್ಟಡ ಯಾವಾಗ ಬೀಳುತ್ತದೆಯೋ ಗೊತ್ತಿಲ್ಲ.

ಈ ಎಲ್ಲ ಅಂಶಗಳನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ಬಿಡುಗಡೆಗೊಳಿಸಿರುವ ವಿಡಿಯೋದಲ್ಲಿ ವಿವರವಾಗಿ ತಿಳಿಸಲಾಗಿದ್ದು, ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲಾಗಿದೆ. ಅಲ್ಲದೇ 2023ರಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸರ್ಕಾರಿ ಶಾಲೆಗಳ ಪರಿಸ್ಥಿತಿಯನ್ನು ಸುಧಾರಿಸುವುದು ನಮ್ಮ ಮೊದಲ ಆದ್ಯತೆ ಎಂದು ಡಿಕೆಶಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಲೋಪಗಳ ಬಗ್ಗೆ ಪ್ರಧಾನಿಗೆ ಪತ್ರ, ಇದಕ್ಕೆ ಪ್ರಧಾನಿಗಳು ಉತ್ತರ ನೀಡಬೇಕು: ಡಿ.ಕೆ.ಶಿ
ಬೆಂಗಳೂರು: ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿಗಳಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಪತ್ರ ಬರೆದು ಬಿಜೆಪಿ ಸರ್ಕಾರದ ಲೋಪಗಳ ಬಗ್ಗೆ ವಿವರಣೆ ನೀಡುತ್ತಿದ್ದು, ಈ ಬಾರಿ ರಾಜ್ಯಕ್ಕೆ ಬಂದಾಗ ಪ್ರಧಾನಿ ಅವರು ಈ ವಿಚಾರವಾಗಿ ರಾಜ್ಯದ ಜನರಿಗೆ ಉತ್ತರ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ದೇವನಹಳ್ಳಿಯ ಕ್ಲಾರ್ಕ್ ಎಕ್ಸಾಟಿಕಾದಲ್ಲಿ ಸಿದ್ದರಾಮಯ್ಯ ಅವರ ಜತೆ ಗುರುವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಕುಮಾರ್ ಅವರು. ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾವು 2013ರಲ್ಲಿ ನಾಡಪ್ರಭು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಹೆಸರಿಟ್ಟಿದ್ದೆವು. ನಾಳೆ ಅಲ್ಲಿ ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡುತ್ತಿದ್ದಾರೆ ಎಂದರು.

ಸರ್ಕಾರದ ವತಿಯಿಂದ ವಿಮಾನ ನಿಲ್ದಾಣದಲ್ಲಿ ವಾಣಿಜ್ಯ ಉದ್ದೇಶಕ್ಕೆ 2 ಸಾವಿರ ಎಕರೆ ಜಮೀನು ನೀಡಲಾಗಿತ್ತು. ಹೀಗಾಗಿ ಈ ಪ್ರತಿಮೆಯನ್ನು ಸರ್ಕಾರದ ಬದಲು ವಿಮಾನ ನಿಲ್ದಾಣದ ಆಡಳಿತ ಸಂಸ್ಥೆಯೇ ನಿರ್ಮಾಣ ಮಾಡಬಹುದಾಗಿತ್ತು. ಇದಕ್ಕಾಗಿ ಸರ್ಕಾರ ಹಣ ಹಾಕುವ ಅಗತ್ಯ ಇರಲಿಲ್ಲ. ಆದರೂ ಸರ್ಕಾರದ ಹಣದಲ್ಲಿ ಪ್ರತಿಮೆ ಮಾಡಲಾಗಿದೆ ಎಂದು ತಿಳಿಸಿದರು.

ಪ್ರಧಾನಿಗಳು ರಾಜ್ಯಕ್ಕೆ ಆಗಮಿಸುತ್ತಿರುವುದಕ್ಕೆ ನಮ್ಮ ಯಾವುದೇ ತಕರಾರಿಲ್ಲ. ಆದರೆ ಅವರ ಕಾರ್ಯಕ್ರಮಕ್ಕೆ ಅಧಿಕಾರ ದುರುಪಯೋಗ ಮಾಡಿಕೊಂಡು ಕಾಲೇಜು ವಿದ್ಯಾರ್ಥಿಗಳು, ಅಂಗನವಾಡಿ, ಸ್ವಸಹಾಯ ಗುಂಪಿನ ಸದಸ್ಯರನ್ನು ಕರೆ ತರಲು ಮುಂದಾಗಿದ್ದಾರೆ. ಆ ಮೂಲಕ ರಾಜ್ಯ ಸರ್ಕಾರಕ್ಕೆ ಜನಬೆಂಬಲ ಇಲ್ಲ ಎಂಬುದು ಸ್ಪಷ್ಟವಾಗುತ್ತಿದೆ ಎಂದು ಹೇಳಿದರು.

ಬಿಜೆಪಿ ಸರ್ಕಾರ ಕೊಟ್ಟ ಮಾತಿನಂತೆ ನಡೆಯದೇ ವಚನಭ್ರಷ್ಟವಾಗಿರುವುದು ಹಾಗೂ ಸರ್ಕಾರದ ಲೋಪಗಳ ಬಗ್ಗೆ ನಾವು ಪ್ರಧಾನಿ ಅವರಿಗೆ ಪತ್ರ ಬರೆಯುತ್ತಿದ್ದು, ರಾಜ್ಯಕ್ಕೆ ಆಗಮಿಸುತ್ತಿರುವ ಅವರು ಇದಕ್ಕೆ ಉತ್ತರಿಸಬೇಕು ಎಂದರು.

ಕಳೆದ ಚುನಾವಣೆ ಸಮಯದಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಕೊಟ್ಟಿದ್ದ ಭರವಸೆಗಳಲ್ಲಿ ಶೇ.90 ರಷ್ಟು ಈಡೇರಿಸಿಲ್ಲ. ಈ ಬಗ್ಗೆ ನಾವು ನಿತ್ಯ ಒಂದೊಂದು ಪ್ರಶ್ನೆಗಳನ್ನು ಕೇಳುತ್ತಾ ಬಂದಿದ್ದು, ಇದುವರೆಗೂ ಸರ್ಕಾರ ಯಾವುದಕ್ಕೂ ಉತ್ತರ ನೀಡಿಲ್ಲ. ಚುನಾವಣೆ ಸಂದರ್ಭದಲ್ಲಿ ಮೋದಿ ಅವರು ಯಾವುದೇ ದಾಖಲಾತಿ ಇಲ್ಲದೆ ನಮ್ಮ ಸರಕಾರವನ್ನು 10 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಗೂಬೆ ಕೂರಿಸಿದರು. ಅದನ್ನು ಸಾಬೀತುಪಡಿಸಲು ನಮ್ಮ ಮೇಲೆ ಯಾವುದೇ ತನಿಖೆ ಮಾಡಲಿಲ್ಲ ಎಂದು ಹೇಳಿದರು.

ಆದರೆ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ದೂರು, ಬೆಳಗಾವಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣ ಹಾಗೂ ಹುಬ್ಬಳ್ಳಿ ಗುತ್ತಿಗೆದಾರ ಬಸವರಾಜ್ ಅವರು ದಯಾಮರಣ ಅರ್ಜಿ ಬರೆದಿದ್ದಾರೆ. ಈ ಬಗ್ಗೆ ಮೋದಿ ಅವರು ಉತ್ತರಿಸಬೇಕು ಎಂದರು.

ನಿರುದ್ಯೋಗಿ ಯುವಕರು, ರೈತರ ಆದಾಯ ಡಬಲ್ ಮಾಡುವುದಾಗಿ ಹೇಳಿದ್ದರು. ಇದಾವುದೂ ಆಗಿಲ್ಲ. ಬದಲಿಗೆ ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಕರ್ನಾಟಕ ರಾಜ್ಯ ಭ್ರಷ್ಟಾಚಾರದ ಕಳಂಕ ಹೊತ್ತಿರುವ ಬಗ್ಗೆ ಮಾಧ್ಯಮಗಳೇ ಬರೆದಿವೆ ಎಂದು ಹೇಳಿದರು.

ಚುನಾವಣೆ ಸಮಯದಲ್ಲಿ ನಾನು ತಿನ್ನುವುದಿಲ್ಲ ಬೇರೆಯವರಿಗೂ ತಿನ್ನಲು ಬಿಡಲ್ಲ ಎಂದು ಹೇಳಿದ್ದಿರಿ. ಈಗ ನಿಮ್ಮವರು ಏನು ತಿನ್ನುತ್ತಿದ್ದಾರೆ ಎಂದು ಈ ಸಂದರ್ಭದಲ್ಲಿ ಕೇಳುತ್ತಿದ್ದೇವೆ. ನೀವು ವಚನಭ್ರಷ್ಟರಾಗಿದ್ದು, ಕೊಟ್ಟ ಮಾತು ಉಳಿಸಿಕೊಂಡಿಲ್ಲ. ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ರೈತರಿಗೆ 1 ಲಕ್ಷದವರೆಗೂ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದಿರಿ. ಈವರೆಗೂ ಮಾಡಿಲ್ಲ. ರೈತರ ಆದಾಯ ಡಬಲ್ ಮಾಡುವುದಾಗಿ ಹೇಳಿದ್ದಿರಿ. ರೈತರ ಆದಾಯ ಡಬಲ್ ಆಗುವ ಬದಲಾಗಿ ರೈತರ ಕೃಷಿ ವೆಚ್ಚ ಡಬಲ್ ಆಗಿದೆ. ಹೀಗೆ ಹತ್ತು ಹಲವು ವಿಚಾರಗಳನ್ನು ಪತ್ರದ ಮೂಲಕ ಕೇಂದ್ರ ಸರ್ಕಾರದ ಮುಂದೆ ಇಡುತ್ತಿದ್ದೇವೆ. ಇದಕ್ಕೆ ಮೋದಿ ಅವರು ಉತ್ತರಿಸಬೇಕು ಎಂದರು.

ಕೃಷ್ಣ ಆಣೆಕಟ್ಟು ಎತ್ತರ 524 ಅಡಿಗೆ ಹೆಚ್ಚಿಸುತ್ತೇವೆ ಎಂದಿದ್ದಿರಿ. ಅದಕ್ಕೆ ಅನುದಾನ ನೀಡುತ್ತೇವೆ, ರೈತರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಹೇಳಿದ್ದಿರಿ. ಯಾವುದೂ ಆಗಿಲ್ಲ. ಪರಿಶಿಷ್ಟ ಜಾತಿ ಹಾಗೂ ಪಂಗಡವರಿಗೆ 4500 ಕೋಟಿ ಸ್ಕಾಲರ್ ಶಿಪ್ ನೀಡುತ್ತೇವೆ ಎಂದಿದ್ದಿರಿ. ಅದನ್ನೂ ನೀಡಿಲ್ಲ. ಹೀಗೆ ನೀವು ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ ಎಂದು ದೂರಿದರು.

ಇತ್ತೀಚೆಗೆ ನಡೆದ ಜಾಗತಿಕ ಬಂಡವಾಳ ಹೂಡಿಕೆಯಲ್ಲಿ ಸರ್ಕಾರ ಕೇವಲ ಪ್ರಚಾರಕ್ಕಾಗಿ 10 ಲಕ್ಷ ಕೋಟಿ ರು. ಒಪ್ಪಂದ ಮಾಡಿಕೊಂಡಿದೆ. ಇದರಲ್ಲಿ ಶೇ.10 ರಷ್ಟು ಜಾರಿ ಆಗುವುದಿಲ್ಲ. ನಮ್ಮ ಸರ್ಕಾರ ಬಂದ ನಂತರ ಇದೆಲ್ಲವನ್ನು ಪುನರ್ ಪರಿಶೀಲನೆ ಮಾಡುತ್ತೇವೆ ಎಂದರು.

ಸರ್ಕಾರ ಈಗ ತರಾತುರಿಯಲ್ಲಿ 20 ಸಾವಿರ ಕೋಟಿ ಮೊತ್ತದ ಕಾಮಗಾರಿಗೆ ಟೆಂಡರ್ ಕರೆಯಲು ಹೊರಟಿದೆ. ಈಗ ಆಗಿರುವ ಕೆಲಸಗಳಿಗೇ ಸರ್ಕಾರ ಬಿಲ್ ನೀಡಿಲ್ಲ. ಆರ್ಥಿಕ ಶಿಸ್ತು ಪಾಲನೆ ಆಗದೆ, ಆರ್ಥಿಕ ಇಲಾಖೆಯ ಜತೆ ಚರ್ಚೆ ಮಾಡದೇ ಯಾವುದೇ ಟೆಂಡರ್ ಅನ್ನು ನೀಡಬಾರದು. ಈಗ ಎಲ್ಲ ಕಾಮಗಾರಿಗಳ ಅಂದಾಜು ವೆಚ್ಚ ಡಬಲ್ ಮಾಡಿ ಸರ್ಕಾರ ಕಲೆಕ್ಷನ್ ಗೆ ಮುಂದಾಗಿದೆ. ನಾವು ಈ ಟೆಂಡರ್ ಪ್ರಕ್ರಿಯೆ ಪ್ರಶ್ನಿಸಿ ಸರ್ಕಾರಕ್ಕೆ ಪತ್ರ ಬರೆಯುತ್ತಿದ್ದು, ಈ ವಿಚಾರದಲ್ಲಿ ಗುತ್ತಿಗೆದಾರರು ಎಚ್ಚರವಾಗಿರಬೇಕು. ಯಾವ ಮೂಲಭೂತ ಯೋಜನೆ ಪೂರ್ಣಗೊಂಡಿದೆ ಎಂದು ಹೇಳಿ 10 ಲಕ್ಷ ಕೋಟಿ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಸರ್ಕಾರಕ್ಕೆ ರಸ್ತೆ ಗುಂಡಿ ಮುಚ್ಚಲು ಸಾಧ್ಯವಾಗುತ್ತಿಲ್ಲ. ಈಗ ಯಾವ ಹಣವಿದೆ ಎಂದು ಟೆಂಡರ್ ಕರೆಯಲಾಗುತ್ತಿದೆ? ಈ ಹಿಂದೆ ಮಾಡಲಾಗಿರುವ ಕಾಮಗಾರಿಗಳ ಬಿಲ್ ಕ್ಲಿಯರ್ ಮಾಡಲು ಆಗಿಲ್ಲ. ಇಂತಹ ಸಮಯದಲ್ಲಿ ಹೊಸ ಟೆಂಡರ್ ನೀಡುತ್ತಿರುವುದೇಕೆ? ಹೀಗೆ ಆರ್ಥಿಕ ಶಿಸ್ತು ಉಲ್ಲಂಘನೆ ಮಾಡಬಾರದು ಎಂದು ಪ್ರಧಾನಿಗಳಿಗೆ ಪತ್ರ ಬರೆಯುತ್ತಿದ್ದು, ಈ ಬಗ್ಗೆ ಗಮನಹರಿಸಬೇಕು ಎಂದು ಮನವಿ ಮಾಡುತ್ತಿದ್ದೇವೆ ಎಂದು ಹೇಳಿದರು.

ಬಿಜೆಪಿಯವರಿಗೆ ಜನ ಬೇಕಿದ್ದರೆ ನಾವು ನಮ್ಮ ಪಕ್ಷದ ಕಾರ್ಯಕರ್ತರನ್ನು ಕಳುಹಿಸುತ್ತೇವೆ: ಡಿಕೆಶಿ
ಬೆಂಗಳೂರು: ನವೆಂಬರ್‌ 11 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಾಡಪ್ರಭು ಕೆಂಪೇಗೌಡರ ಪ್ರಗತಿ ಪ್ರತಿಮೆಯನ್ನು ಲೋಕಾರ್ಪಣೆ ಮಾಡುವ ಕಾರ್ಯಕ್ರಮಕ್ಕೆ ಜನರಿಲ್ಲದ ಕಾರಣ, ಕಾರ್ಯಕ್ರಮಕ್ಕೆ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳನ್ನು ಕರೆ ತರುತ್ತಿದ್ದಾರೆ. ಅದರ ಬದಲು ಅವರಿಗೆ ಜನ ಬೇಕು ಎಂದರೆ ನಮ್ಮ ಪಕ್ಷದ ಕಾರ್ಯಕರ್ತರನ್ನು ಕಳಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ಈ ಕುರಿತು ಚಿತ್ರಕಲಾ ಪರಿಷತ್ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಮ್ಮ ಕಾರ್ಯಕ್ರಮಕ್ಕೆ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳನ್ನು ಕರೆ ತರಲು ಆದೇಶ ಹೊರಡಿಸಿದ್ದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯಮಂತ್ರಿಗಳನ್ನು ಕೇಳಬೇಕು. ಈ ರೀತಿ ಮಾಡಿರುವುದು ನಾಚಿಕೆಗೇಡಿನ ವಿಚಾರವಲ್ಲವೇ? ಇದು ಬಿಜೆಪಿಯ ಜನಶಕ್ತಿ ಕುಸಿದಿರುವುದಕ್ಕೆ ಸಾಕ್ಷಿ. ಅವರಿಗೆ ಜನ ಬೇಕಿದ್ದರೆ ನಾವು ನಮ್ಮ ಪಕ್ಷದ ಕಾರ್ಯಕರ್ತರನ್ನು ಕಳುಹಿಸುತ್ತೇವೆ. ಆದರೆ ಅಧಿಕಾರ ದುರ್ಬಳಕೆ ಮಾಡಿಕೊಂಡು ಸರ್ಕಾರದ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆತರಬಾರದು ಎಂದು ಟೀಕಿಸಿದರು.

‘ಜನ ಸಾಯುವಾಗ ಸರ್ಕಾರಕ್ಕೆ ಗುಂಡಿಗಳು ಕಾಣಲಿಲ್ಲ. ವಿರೋಧ ಪಕ್ಷಗಳು ಈ ಗುಂಡಿ ಮುಚ್ಚಲು ಹೋಮ, ಪೂಜೆ ಮಾಡಿದರು. ಆಗಲೂ ಸರ್ಕಾರ ತಲೆ ಕೆಡಿಸಿಕೊಳ್ಳಲಿಲ್ಲ. ಈಗ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಮುಚ್ಚುತ್ತಿದ್ದಾರೆ ಎಂದು ವ್ಯಂಗಿಸಿದ್ದಾರೆ. ಜೊತೆಗೆ ಪ್ರಧಾನಿ ಅವರು ಕಳೆದ ಬಾರಿ ಬಂದಾಗ ಡಾಂಬರು ಹಾಕಿದ ರಸ್ತೆಗಳು, ಅವರು ದೆಹಲಿಗೆ ಹೋಗುತ್ತಿದ್ದಂತೆ ಕಿತ್ತು ಬಂದವು ಎಂದು ಪ್ರತಿಕ್ರಿಯಿಸಿದರು.

ಬಿಜೆಪಿ ಕೆಂಪೇಗೌಡರನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಸರ್ಕಾರದ ಹಣದಲ್ಲಿ ಪ್ರತಿಮೆ ಮಾಡಿರುವುದು ದೊಡ್ಡ ಅಪರಾಧ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರಿಗೆ ನಾವು 2 ಸಾವಿರಕ್ಕೂ ಹೆಚ್ಚು ಎಕರೆ ಭೂಮಿಯನ್ನು ಪ್ರತಿ ಎಕರೆಗೆ 6 ಲಕ್ಷದಂತೆ ಹಾಗೂ ಹಣ ನೀಡಿದ್ದೇವೆ. ಅವರಿಗೆ ಹೇಳಿದ್ದರೆ ಅವರೇ ಪ್ರತಿಮೆ ನಿರ್ಮಾಣ ಮಾಡುತ್ತಿದ್ದರು. ಆದರೆ ಸರ್ಕಾರ ದುಡ್ಡು ಹಾಕಿದ್ದು ಯಾಕೆ? ಈ ವಿಚಾರವಾಗಿ ನಾನು ಶಂಕುಸ್ಥಾಪನೆ ದಿನವೇ ಹೇಳಿದ್ದೆ. ವಿಮಾನ ನಿಲ್ದಾಣದವರು ಇದರಿಂದ ಸಂಪಾದನೆ ಮಾಡುತ್ತಿಲ್ಲವೇ, ಧರ್ಮಕ್ಕೆ ಮಾಡುತ್ತಿದ್ದರೇ? ಇನ್ನು 2 ಸಾವಿರಕ್ಕೂ ಹೆಚ್ಚು ಎಕರೆ ಜಾಗವನ್ನು ವಾಣಿಜ್ಯ ಉದ್ದೇಶಕ್ಕೆ ನೀಡಿದ್ದೇವೆ. ಹೀಗಾಗಿ ವಿಮಾನ ನಿಲ್ದಾಣದವರೇ ಕಟ್ಟಬೇಕಿತ್ತು. ಈ ಬಗ್ಗೆ ಮುಖ್ಯ ಕಾರ್ಯದರ್ಶಿಗಳು ಯಾಕೆ ಮೌನವಾಗಿದ್ದಾರೆ? ಕರ್ನಾಟಕ ಸರ್ಕಾರ ವಿಮಾನ ನಿಲ್ದಾಣ ಪ್ರಾಧಿಕಾರದ ಮುಖ್ಯಸ್ಥರಾಗಿದ್ದು, ನಿಲ್ದಾಣದಿಂದಲೇ ಕಟ್ಟಬಹುದಿತ್ತು. ಈಗ ಇದನ್ನು ಪಕ್ಷದ ಕಾರ್ಯಕ್ರಮದಂತೆ ಬಿಂಬಿಸಿಕೊಳ್ಳುತ್ತಿದ್ದಾರೆ’ಎಂದರು.

ಸಂಸತ್ತಿನಲ್ಲೂ ಕೆಂಪೇಗೌಡರ ಪ್ರತಿಮೆ ನಿರ್ಮಿಸಲಿ ಎಂಬ ದೇವೇಗೌಡರ ಪತ್ರದ ಬಗ್ಗೆ ಕೇಳಿದಾಗ, ‘ಬಹಳ ಸಂತೋಷ, ಅಲ್ಲಿಯೂ ಪ್ರತಿಮೆ ನಿರ್ಮಾಣ ಮಾಡಲಿ, ವಿಧಾನಸೌಧ ಅವರಣದಲ್ಲೂ ಮಾಡಲಿʼಎಂದರು.

ಸಿದ್ದರಾಮಯ್ಯ ಅವರ ಬಗ್ಗೆ ಮುಕುಡಪ್ಪ ಅವರ ಅವಹೇಳನಕಾರಿ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಸಿದ್ದರಾಮಯ್ಯ ಅವರ ಬಗ್ಗೆ ಬೇರೆಯವರು ಏನು ಹೇಳಿದ್ದಾರೆ ಗೊತ್ತಿಲ್ಲ. ಇದು ಖಾಸಗಿಯಾಗಿ ಮಾತನಾಡಿರುವ ವಿಚಾರ. ಈ ಬಗ್ಗೆ ತಿಳಿದು ಮಾತನಾಡುತ್ತೇನೆ. ನಮ್ಮ ನಾಯಕರ ಘನತೆ ಹಾಳು ಮಾಡಲು ಷಡ್ಯಂತ್ರ ನಡೆಯುತ್ತಿದೆʼ ಎಂದರು.

ಕಾಂಗ್ರೆಸ್ಸಿಗೆ ಸ್ಪಷ್ಟವಾದ ನಿಲುವಿಲ್ಲ: ಬೊಮ್ಮಾಯಿ
ಬೆಳಗಾವಿ: ಶಾಸಕ ಸತೀಶ್‌ ಜಾರಕಿಹೊಳಿ ನೀಡಿರುವ ಹೇಳಿಕೆ ಕುರಿತು ಕಾಂಗ್ರೆಸ್ಸಿಗೆ ಸ್ಪಷ್ಟವಾದ ನಿಲುವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ಇಂದು ರಾಯಭಾಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಂದೆಡೆ ಶಾಸಕ ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆ ಹಿಂಪಡೆಯುವುದಿಲ್ಲ ಎಂದಿದ್ದಾರೆ. ಇನ್ನೊಂದು ಕಡೆ ಕಾಂಗ್ರೆಸ್ ಇದನ್ನು ಒಪ್ಪುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಇನ್ನೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ ನುಣುಚಿ ಕೊಳ್ಳುತ್ತಿದ್ದು, ಯಾಕಿಷ್ಟು ಅಸ್ಪಷ್ಟತೆ ಕಾಂಗ್ರೆಸ್ ನಲ್ಲಿ ಇದೆ ಎಂದು ತಿಳಿದಿಲ್ಲ ಎಂದು ಅವರು ತಿಳಿಸಿದರು.

ಸತೀಶ್ ಜಾರಕಿಹೊಳಿ ಒಪ್ಪಿಲ್ಲ ಎಂದರೆ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಒಪ್ಪಿದ್ದೇವೆ ಎನ್ನಬೇಕು. ರಾಜ್ಯದಲ್ಲಿ ಬಹುಸಂಖ್ಯಾತ ಹಿಂದೂಗಳಿದ್ದಾರೆ, ಪರಿಶಿಷ್ಟರಿದ್ದಾರೆ ಅವರ ಭಾವನೆಗಳಿಗೆ ಧಕ್ಕೆ ಬರುವ ರೀತಿಯಲ್ಲಿ ನೂರು ವರ್ಷಗಳ ಹಳೆ ಪಕ್ಷ ನಡೆದುಕೊಳ್ಳುತ್ತಿದೆ. ಅಂದರೆ ಭಾರತವನ್ನು ಗೊಂದಲದಲ್ಲಿಟ್ಟು ಆಳಬೇಕೆನ್ನುವ ಮೂಲ ಸಿದ್ಧಾಂತ ವಿದೆ. ರಾಹುಲ್ ಗಾಂಧಿ ಸುಮ್ಮನಿದ್ದಾರೆ. ಅವರು ಒಂದೆಡೆ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡುತ್ತಾರೆ, ಇನ್ನೊಂದೆಡೆ ಈ ರೀತಿಯ ಹೇಳಿಕೆಗಳು ಬಂದಾಗ ಪರೋಕ್ಷವಾಗಿ ಬೆಂಬಲ ನೀಡುತ್ತಾರೆ. ಈ ದ್ವಂದ್ವ ನೀತಿ ಕಾಂಗ್ರೆಸ್ ಗೆ ಒಳ್ಳೆಯದಲ್ಲ ಎಂದರು.

ಯಾರ ಭಾವನೆಗಳಿಗೂ ಧಕ್ಕೆ ತರಬಾರದು ಎಂಬ ಅರಿವಿನಿಂದ ನಡೆದುಕೊಳ್ಳಬೇಕು

ಹೇಳಿಕೆ ತಪ್ಪು ಎಂದು ಸಾಬೀತಾದರೆ ರಾಜೀನಾಮೆ ನೀಡುವುದಾಗಿ ಸತೀಶ್ ಜಾರಕಿಹೊಳಿ ಹೇಳಿರುವ ಬಗ್ಗೆ ಉತ್ತರಿಸಿ, ಯಾವ ಪುರಾವೆಯ ಆಧಾರದ ಮೇಲೆ ಅವರು ಹೇಳಿದ್ದಾರೆ ಎಂದು ಬಹಿರಂಗಪಡಿಸಲಿ. ಅವರ ಹೇಳಿಕೆ ಯಾವುದನ್ನು ಆಧಾರಿಸಿದ್ದು ಎನ್ನುವುದೇ ಸಾಕ್ಷಿಯಾಗುತ್ತದೆ. ಅಂತರ್ಜಾಲದಲ್ಲಿ ಹತ್ತು ಹಲವಾರು ವಿಚಾರಗಳಿರುತ್ತವೆ.  ಎಲ್ಲಾ ವಿಚಾರಗಳಲ್ಲಿ ಪರ, ವಿರೋಧ ಇದ್ದೇ ಇರುತ್ತದೆ. ಆದರೆ ನಾವು ಯಾವುದನ್ನು ತೆಗೆದುಕೊಳ್ಳಬೇಕು ಎಂದು ವಿಚಾರ ಮಾಡಬೇಕು.  ಸಾರ್ವಜನಿಕ ಜೀವನದಲ್ಲಿ ಯಾರ ಭಾವನೆಗಳಿಗೂ ಧಕ್ಕೆ ತರಬಾರದು ಎಂಬ ಅರಿವಿನಿಂದ ನಡೆದುಕೊಳ್ಳಬೇಕು ಎಂದರು.

ಮುಂದೆ ಅನುಭವಿಸುತ್ತಾರೆ

ಚರ್ಚೆ ಮಾಡಲು ವಸ್ತುವಿಲ್ಲ. ಅವರ ಹೇಳಿಕೆ ಅತ್ಯಂತ ಅಸಂಗತ್ಯವಾಗಿದೆ. ಮಾಧ್ಯಮ ಗಳಲ್ಲಿ ಅದು ತಪ್ಪು ಎಂದು ಹೇಳಿದ್ದಾರೆ. ಒಪ್ಪಲು ತಯಾರಿಲ್ಲದಿದ್ದರೆ ಮುಂದೆ ಅನುಭವಿಸುತ್ತಾರೆ ಎಂದರು.

ಬಿಜೆಪಿ ಆರೋಪ ಮಾಡುವುದು ರಾಜಕೀಯದಲ್ಲಿ ಬಲಿಷ್ಠವಾಗಿ ಬೆಳೆಯುವವರ ವಿರುದ್ಧ: ಡಿ.ಕೆ.ಶಿ
ಬೆಳಗಾವಿ: ಭಾರತೀಯ ಜನತಾ ಪಾರ್ಟಿಯವರು (ಬಿಜೆಪಿ) ತಮಗೆ ಯಾರೆಲ್ಲಾ ರಾಜಕೀಯವಾಗಿ ಅಪಾಯ ಎಂದು ತಿಳಿಯುತ್ತಾರೋ ಅಂತವರ ಮೇಲೆ ಅಥವಾ ರಾಜಕೀಯವಾಗಿ ಬಲಿಷ್ಠವಾಗಿ ಬೆಳೆಯುವವರ ವಿರುದ್ಧ ಆರೋಪ ಮಾಡುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ದೂರಿದ್ದಾರೆ.

ಈ ಕುರಿತು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ‘ ಬಿಜೆಪಿಯವರು ನನ್ನನ್ನು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಕ್ರಿಮಿನಲ್ ಆಗಿ ಬಿಂಬಿಸಿದ್ದಾರೆ. ರಾಜಕೀಯವಾಗಿ ಬಲಿಷ್ಠವಾಗಿ ಬೆಳೆಯುವವರ ವಿರುದ್ಧ ಈ ರೀತಿ ಆರೋಪ ಮಾಡುತ್ತಾರೆ. ಹೆಚ್ಚು ಬಲಶಾಲಿ ಆದಷ್ಟು ಹೆಚ್ಚು ಶತ್ರುಗಳು, ಬಲಶಾಲಿ ಅಲ್ಲದಿದ್ದರೆ ಶತ್ರುಗಳೇ ಇಲ್ಲ. ಬಿಜೆಪಿಯವರು ತಮಗೆ ಯಾರೆಲ್ಲಾ ರಾಜಕೀಯವಾಗಿ ಅಪಾಯ ಎಂದು ತಿಳಿಯುತ್ತಾರೋ ಅವರಿಗೆ ಈ ರೀತಿ ಕಿರುಕುಳ ನೀಡುತ್ತಾರೆ. ಪೊಲೀಸ್ ತನಿಖೆಯಲ್ಲಿ ವಿನಯ್ ಕುಲಕರ್ಣಿ ಅವರ ಮೇಲೆ ಯಾವುದೇ ಆರೋಪ ಇಲ್ಲ ಎಂದು ಪ್ರಕರಣ ಮುಕ್ತಾಯ ಹಂತದಲ್ಲಿ ಇದ್ದಾಗ, ಇವರು ರಾಜಕೀಯ ಉದ್ದೇಶದಿಂದ ಪ್ರಭಾವ ಬೀರಿ ಪ್ರಕರಣವನ್ನು ಸಿಬಿಐಗೆ ನೀಡಿ ಅವರನ್ನು ಸಿಲುಕಿಸುವ ಪ್ರಯತ್ನ ಮಾಡಿದ್ದಾರೆ ‘ ಎಂದು ತಿಳಿಸಿದರು.

ಇಂಧನ ಇಲಾಖೆ ಯೋಜನೆಗಳ ತನಿಖೆ ಬಗ್ಗೆ ಸಿಎಂ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಮುಖ್ಯಮಂತ್ರಿಗಳು ನಾನು ಇಂಧನ ಸಚಿವನಾಗಿದ್ದ ಕಾಲದ ಯೋಜನೆಗಳನ್ನು ತನಿಖೆ ಮಾಡಿಸಬೇಕು ಎಂದು ಹೇಳಿದ್ದಾರೆ. ಅವರು ತನಿಖೆ ಮಾಡಿಸಲಿ. ನಾನು ಸ್ವಾಗತಿಸುತ್ತೇನೆ. ನಾನು ಕೂಡ ಕಣ್ಣು ಮುಚ್ಚಿಕೊಂಡು ಕುಳಿತಿಲ್ಲ ಎಂದು ಹೇಳಿದರು.

ಇಂಧನ ಇಲಾಖೆ, ನೀರಾವರಿ ಇಲಾಖೆ ಎಲ್ಲವನ್ನೂ ಮಾಡಲಿ. ಬಿಜೆಪಿ ಆಡಳಿತದಲ್ಲಿ ಏನೆಲ್ಲಾ ಆಗಿದೆ, 100 ಕೋಟಿ ಯೋಜನೆಯನ್ನು 300 ಕೋಟಿ ಯೋಜನೆ ಹೇಗೆ ಮಾಡಿದ್ದಾರೆ, 300 ಕೋಟಿ ಯೋಜನೆಯನ್ನು 700 ಕೋಟಿ ಮಾಡಿ ಗುತ್ತಿಗೆಗೆ ಹೇಗೆ ನೀಡಿದ್ದಾರೆ. ಈ ಜಿಲ್ಲೆಯಲ್ಲಿ ಸಾಕಷ್ಟು ಉದಾಹರಣೆಗಳಿವೆ. ನಾನು ಕಣ್ಣು ಮುಚ್ಚಿಕೊಂಡು ರಾಜಕಾರಣ ಮಾಡುತ್ತಿಲ್ಲ. ಜಾಗತಿಕ ಬಂಡವಾಳ ಹೂಡಿಕೆಯಲ್ಲಿ 10 ಲಕ್ಷ ಕೋಟಿ ಬಂಡವಾಳಕ್ಕೆ ಸಹಿ ಎಂದು ಹೇಳಿದ್ದಾರೆ. ಸಮಯ ಬರಲಿ, ಎಲ್ಲದಕ್ಕೂ ನಾನು ಉತ್ತರ ನೀಡುತ್ತೇನೆ ಎಂದು ಆಕ್ರೋಶ ಹೊರಹಾಕಿದರು.

ಸರ್ಕಾರಿ ಕಾರ್ಯಕ್ರಮಕ್ಕೆ ಶಿಕ್ಷಕರ ಹಾಜರಿ ಕಡ್ಡಾಯದ ಬಗ್ಗೆ ಕೇಳಿದಾಗ, ‘ ಸರ್ಕಾರ ಪ್ರತಿಯೊಬ್ಬರನ್ನೂ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಶಿಕ್ಷಕರು ಯಾಕೆ ಬರಬೇಕು? ಕಾರ್ಯಕರ್ತರು ಹಾಗೂ ಜನರನ್ನು ಕರೆದುಕೊಂಡು ಬಂದು ಕಾರ್ಯಕ್ರಮ ಮಾಡಲಿ. ಶಿಕ್ಷಕರನ್ನು ಇವರ ರಾಜಕಾರಣಕ್ಕೆ ಬಳಸಿಕೊಳ್ಳಲು ಈ ರೀತಿ ಆದೇಶ ಹೊರಡಿಸಿದ್ದಾರೆ. ಶಿಕ್ಷಕರ ದಿನದಂದು ಅವರಿಗೆ ಅಭಿನಂದನೆ ಸಲ್ಲಿಸಲಿ ‘ ಎಂದರು.

ಜನಾರ್ದನ ರೆಡ್ಡಿ ಅವರು ಕಾಂಗ್ರೆಸ್ ಸೇರ್ಪಡೆ ಆಗುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿಯವರು, ‘ ಈ ಬಗ್ಗೆ ಯಾರೂ ನನ್ನನ್ನು ಸಂಪರ್ಕ ಮಾಡಿಲ್ಲ. ಬೇರೆ ಕೆಲವು ನಾಯಕರು ಸಂಪರ್ಕದಲ್ಲಿದ್ದು, ಪಕ್ಷಕ್ಕೆ ಸೇರಲು ಅರ್ಜಿ ಹಾಕಿದ್ದಾರೆ. ಕೆಲವರು ಸದಸ್ಯತ್ವ ತೆಗೆದುಕೊಂಡಿದ್ದು, ಅವರು ಪಕ್ಷ ಸೇರುವಾಗ ಜಿಲ್ಲಾವಾರು ಪಟ್ಟಿ ನೀಡುತ್ತೇವೆ ಎಂದಿದ್ದಾರೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತ, ನಾಯಕತ್ವದಲ್ಲಿ ನಂಬಿಕೆ ಇಟ್ಟವರು ಪಕ್ಷ ಸೇರಲು ಅರ್ಜಿ ಹಾಕಬಹುದು ‘ ಎಂದು ತಿಳಿಸಿದರು.

ʼಡಿ.ಕೆ.ಶಿʼಗೆ ಮತ್ತೆ ಇಡಿ ಸಂಕಟ
ಬೆಂಗಳೂರು: ಜಾರಿ ನಿರ್ದೇಶನಾಲಯ (ಇಡಿ) ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ನೋಟಿಸ್‌ ನೀಡಿದ್ದು, ನವೆಂಬರ್‌ 7 ರಂದು ವಿಚಾರಣೆಗೆ ಬರುವಂತೆ ಸೂಚಿಸಿದೆ.

ಮಾಹಿತಿ ಪ್ರಕಾರ, ಡಿ.ಕೆ.ಶಿವಕುಮಾರ್‌ ನಿವಾಸಕ್ಕೆ ಜಾರಿ ನಿರ್ದೇಶನಾಲಯದಿಂದ ನೋಟಿಸ್‌ ಕಳುಹಿಸಲಾಗಿದ್ದು, ನವೆಂಬರ್‌ 7 ರಂದು ವಿಚಾರಣೆಗೆ ಬರುವಂತೆ ನೋಟಿಸ್‌ ನೀಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಡಿ.ಕೆ.ಶಿವಕುಮಾರ್‌ರವರಿಗೆ ಜಾರಿ ನಿರ್ದೇಶನಾಲಯ ಪದೆ,ಪದೆ ನೋಟಿಸ್‌ ನೀಡುತ್ತಿದ್ದು, ಮತ್ತೆ-ಮತ್ತೆ ಸಂಕಷ್ಟ ಎದುರಾಗುತ್ತಿದೆ.