Delhi Municipal Corporation Election – Peepal Media

ದೆಹಲಿ ಮಹಾನಗರ ಪಾಲಿಕೆ ಚುನಾವಣೆ: 1,100 ನಾಮಪತ್ರಗಳು ತಿರಸ್ಕೃತ
ಹೊಸದಿಲ್ಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಗೆ ಸಲ್ಲಿಸಲಾಗಿದ್ದ ಒಟ್ಟು 2.585 ನಾಮಪತ್ರಗಳಲ್ಲಿ, ಸುಮಾರು 1,100 ನಾಮಪತ್ರಗಳನ್ನು ಇಲ್ಲಿನ ರಾಜ್ಯ ಚುನಾವಣಾ ಆಯೋಗ (ಡಿಎಸ್ಇಸಿ) ತಿರಸ್ಕರಿಸಿದೆ ಎಂದು ಮೂಲಗಳು ತಿಳಿಸಿವೆ.

ನವೆಂಬರ್ 14 ರವರೆಗೆ 15 ರಾಜಕೀಯ ಪಕ್ಷಗಳು ಮತ್ತು ಮಹಾನಗರ ಪಾಲಿಕೆ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಗಳಿಂದ ಒಟ್ಟು 2,585 ನಾಮಪತ್ರಗಳು ಸಲ್ಲಿಕೆಯಾಗಿದ್ದವು, ಈ ಕಾರಣ ಬುಧವಾರ ರಾತ್ರಿ 10 ಗಂಟೆಯವರೆಗೆ ಪರಿಶೀಲನೆ ನಡೆಸಿ, ನಾಮಪತ್ರಗಳನ್ನು ತಿರಸ್ಕರಿಸಿದೆ ಎಂದು ತಿಳಿದುಬಂದಿದೆ.

ಮಾಹಿತಿ ಪ್ರಕಾರ, ಒಟ್ಟು ನಾಮಪತ್ರಗಳ ಪೈಕಿ 1,389 ನಾಮಪತ್ರಗಳನ್ನು ಮಾನ್ಯ ಮಾಡಲಾಗಿದ್ದು, ಸಂಜೆಯವರೆಗೂ ಯಾವುದೇ ಅರ್ಜಿಯನ್ನು ಹಿಂಪಡೆಯಲಾಗಿಲ್ಲ. ಒಟ್ಟು 2,585 ನಾಮಪತ್ರಗಳ ಪೈಕಿ 65 ನಾಮಪತ್ರಗಳು ಪರಿಶೀಲನೆಗೆ ಬಾಕಿ ಉಳಿದಿದ್ದು, ಉಳಿದಿರುವ ಅರ್ಜಿಗಳ ಪರಿಶೀಲನೆಯನ್ನು ಗುರುವಾರ ಚುನಾವಣಾಧಿಕಾರಿಗಳು ಕೈಗೆತ್ತಿಕೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.

ಮಾಹಿತಿಯ ಹೊಂದಾಣಿಕೆ ಇಲ್ಲದಿರುವುದು ಮತ್ತು ಅಗತ್ಯ ದಾಖಲೆಗಳ ಕೊರತೆ ಸೇರಿದಂತೆ ವಿವಿಧ ಕಾರಣಗಳಿಗಾಗಿ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. “ಅಪೂರ್ಣ ನಾಮಪತ್ರಗಳು, ಕಾಣೆಯಾದ ಅಫಿಡವಿಟ್ಗಳು, ಸರಿಯಾಗಿ ಜಾತಿ ಪ್ರಮಾಣಪತ್ರಗಳನ್ನು ಸಲ್ಲಿಸದಿರುವುದು ಮತ್ತು ಇತರ ಅನರ್ಹ ನಮೂನೆಗಳನ್ನು ಸಲ್ಲಿಸದಿರುವುದು ನಾಮಪತ್ರಗಳನ್ನು ತಿರಸ್ಕರಿಸಲು ಕಾರಣಗಳಾಗಿವೆ” ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಡಿಎಸ್ಇಸಿಯ ಅಂಕಿಅಂಶಗಳ ಪ್ರಕಾರ, ಇಲ್ಲಿಯವರೆಗೆ, ಬಿಜೆಪಿ ಅಭ್ಯರ್ಥಿಗಳು ಸಲ್ಲಿಸಿದ ಒಟ್ಟು 654 ನಾಮಪತ್ರಗಳಲ್ಲಿ, 394 ನಾಮಪತ್ರಗಳು ತಿರಸ್ಕೃತಗೊಂಡಿವೆ. ಎಎಪಿ ಅಭ್ಯರ್ಥಿಗಳ 728 ನಾಮಪತ್ರಗಳ ಪೈಕಿ 466 ನಾಮಪತ್ರಗಳು ತಿರಸ್ಕೃತಗೊಂಡಿವೆ. ಕಾಂಗ್ರೆಸ್‌ನಲ್ಲಿ 405 ನಾಮಪತ್ರಗಳು ಸಲ್ಲಿಕೆಯಾಗಿದ್ದು, 149 ನಾಮಪತ್ರಗಳು ತಿರಸ್ಕೃತಗೊಂಡಿವೆ. ಬಿಎಸ್ಪಿಯಲ್ಲಿ 152 ನಾಮಪತ್ರಗಳು ಸಲ್ಲಿಕೆಯಾಗಿದ್ದು, 12 ನಾಮಪತ್ರಗಳು ತಿರಸ್ಕೃತಗೊಂಡಿವೆ. 523 ಪಕ್ಷೇತರ ಅಭ್ಯರ್ಥಿಗಳ ಪೈಕಿ 80 ನಾಮಪತ್ರಗಳು ತಿರಸ್ಕೃತಗೊಂಡಿವೆ.

ಒಟ್ಟು ಅಭ್ಯರ್ಥಿಗಳ ಪೈಕಿ, ಪಕ್ಷೇತರರು 507, ಎಎಪಿ 492 ಅಭ್ಯರ್ಥಿಗಳೊಂದಿಗೆ ಗರಿಷ್ಠ ಪಾಲನ್ನು ಹೊಂದಿದೆ. ಇತರ ಪಕ್ಷಗಳ ಪೈಕಿ, ನವೆಂಬರ್ 14 ರವರೆಗೆ ಬಿಜೆಪಿಯಿಂದ 423, ಕಾಂಗ್ರೆಸ್ನಿಂದ 334, ಬಹುಜನ ಸಮಾಜ ಪಕ್ಷದಿಂದ 149, ಜೆಡಿಯುನಿಂದ 31, ಎಐಎಂಐಎಂನಿಂದ 20 ಮತ್ತು ಸಿಪಿಐ(ಎಂ) ನಿಂದ 9 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು.

ದೆಹಲಿ ಮಹಾನಗರ ಪಾಲಿಕೆ ಚುನಾವಣೆ: 117 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದ ಎಎಪಿ
ಹೊಸದಿಲ್ಲಿ: ಡಿಸೆಂಬರ್ 4 ರಂದು ನಡೆಯಲಿರುವ ದೆಹಲಿ ಮಹಾನಗರ ಪಾಲಿಕೆ ಚುನಾವಣೆಗೆ ಆಮ್ ಆದ್ಮಿ ಪಕ್ಷವು 117 ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ.

ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರ ಅಧ್ಯಕ್ಷತೆಯಲ್ಲಿ ನಡೆದ, ಎಎಪಿ ರಾಜಕೀಯ ವ್ಯವಹಾರಗಳ ಸಮಿತಿಯ ಮ್ಯಾರಥಾನ್ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಯಿತು.

ಈ ಹಿನ್ನಲೆಯಲ್ಲಿ, ʼತಮ್ಮ ಪ್ರದೇಶಗಳಲ್ಲಿ ಬಲವಾದ ಉಪಸ್ಥಿತಿಯನ್ನು ಹೊಂದಿರುವ 117 ಮಂದಿ ಪಕ್ಷದ ಹಳೆಯ ಮತ್ತು  ಕಠಿಣ ಪರಿಶ್ರಮಿ ಸ್ವಯಂಸೇವಕರು ಟಿಕೆಟ್ ಹಂಚಿಕೆಯಲ್ಲಿ ಆದ್ಯತೆ ಪಡೆದಿದ್ದಾರೆʼ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷವು 250 ಸದಸ್ಯರ ಸದನಕ್ಕೆ ಶುಕ್ರವಾರ ತನ್ನ ಮೊದಲ ಪಟ್ಟಿಯನ್ನು ಪ್ರಕಟಿಸಿತ್ತು. ಈ ಹಿಂದೆ ʼಜನರ ಆಯ್ಕೆ ಪಕ್ಷದ ಧ್ವನಿಯಾಗಿದೆʼ ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿತ್ತು. ಅದರಂತೆ ಎಲ್ಲಾ ಸಮೀಕ್ಷೆಗಳಲ್ಲಿ ಉನ್ನತ ಸ್ಥಾನ ಪಡೆದ ನಂತರ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಹಳೆಯ ಪಕ್ಷದ ಕಾರ್ಯಕರ್ತರು ಆದ್ಯತೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಟಿಕೆಟ್ ನೀಡುವ ಮೊದಲು, ಎಎಪಿ ಎಲ್ಲಾ ಅಭ್ಯರ್ಥಿಗಳನ್ನು ಸಮೀಕ್ಷೆ ಮಾಡಿ ಸಾರ್ವಜನಿಕರ ಪ್ರತಿಕ್ರಿಯೆಯನ್ನು ಪಡೆದುಕೊಂಡಿತ್ತು. ಈ ಕಾರಣ ಮುಂಬರುವ ನಾಗರಿಕ ಚುನಾವಣೆಯಲ್ಲಿ ಸ್ಪರ್ಧಿಸಲು 20,000 ಕ್ಕೂ ಹೆಚ್ಚು ಪಕ್ಷದ ಕಾರ್ಯಕರ್ತರು ಅರ್ಜಿ ಸಲ್ಲಿಸಿದ್ದರು.

ಸತತ ಎರಡನೇ ದಿನವೂ ಎಎಪಿಯ ರಾಜಕೀಯ ವ್ಯವಹಾರಗಳ ಸಮಿತಿ (ಪಿಎಸಿ) ಶನಿವಾರ ಸಭೆ ಸೇರಿದ್ದು, ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಮತ್ತು ಚುನಾವಣೆಗೆ ಸಂಬಂಧಿಸಿದ ಇತರ ವಿಷಯಗಳ ಬಗ್ಗೆ ಚರ್ಚಿಸಿತು.