Dengue – Peepal Media

ಡೆಂಗ್ಯೂ : ಈ ಮಾರ್ಗಸೂಚಿ ಪಾಲಿಸದೇ ಇದ್ದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ
ರಾಜ್ಯದಲ್ಲಿ ಮಳೆಯ ಕಣ್ಣಾಮುಚ್ಚಾಲೆ ಜೊತೆಗೆ ಡೆಂಗ್ಯೂ (Dengue) ಜ್ಯರದ ಅಬ್ಬರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಬಗ್ಗೆ ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿದೆ. ಮುಂಜಾಗ್ರತೆಯಿಂದ ಈ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಲು ಇಲಾಖೆ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಪ್ರಸ್ತುತ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಆಗಾಗ್ಗೆ ಬರುತ್ತಿರುವ ಮಳೆಯಿಂದ ಹಾಗೂ ನೀರು ಸರಬರಾಜಿನ ಕೊರತೆಯಿಂದಾಗಿ ಡೆಂಗ್ಯೂ ಪ್ರಕರಣಗಳಲ್ಲಿ ಏರಿಕೆ ಕಾಣುತ್ತಿದೆ ಎಂದು ಆರೋಗ್ಯ ಇಲಾಖೆ ಅಭಿಪ್ರಾಯ ಪಟ್ಟಿದೆ. ಹಾಗೆಯೇ ಡೆಂಗ್ಯೂ ಜ್ವರ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು ಯಶಸ್ವಿಯಾಗುವಲ್ಲಿ ಸಮುದಾಯ / ಸಾರ್ವಜನಿಕರ ಪಾತ್ರವು ಮಹತ್ವದ್ದಾಗಿದೆ.

ಸಧ್ಯಕ್ಕೆ ಡೆಂಗ್ಯೂ ಜ್ವರದ ಲಕ್ಷಣಗಳು, ತೀವ್ರತೆ, ಚಿಕಿತ್ಸೆ ಮತ್ತು ನಿರ್ವಹಣೆ ಮತ್ತು ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಮತ್ತು ಸಾರ್ವಜನಿಕರು ಪಾಲಿಸಬೇಕಾದ ಸ್ವಯಂ ರಕ್ಷಣಾ ವಿಧಾನಗಳು (ಮಾಡಬೇಕಾದವುಗಳು ಮತ್ತು ಮಾಡಬಾರದು) ಕುರಿತು ಈ ಸುತ್ತೋಲೆಯಲ್ಲಿ ಲಗತ್ತಿಸಲಾಗಿದೆ.

ಮಾರ್ಗಸೂಚಿ ಈ ಕೆಳಗಿನಂತಿವೆ.

ಸದರಿ ಮಾಹಿತಿಯನ್ನು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ವಿವಿಧ ಮಾಧ್ಯಮಗಳ ಮೂಲಕ ಪ್ರಚುರಪಡಿಸುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಡೆಂಗ್ಯೂ ನಿಯಂತ್ರಣದಲ್ಲಿ ಸಾರ್ವಜನಿಕರ ಪಾತ್ರದ ಕುರಿತು ಮನವರಿಕೆ ಮಾಡಲು ತಿಳಿಸುತ್ತಾ, ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಲು ಕೋರುವಂತೆ ಸೂಚಿಸಿದೆ.

ದೆಹಲಿಯಲ್ಲಿ ಹೆಚ್ಚಿದ ಡೆಂಗ್ಯೂ : 500 ರ ಗಡಿ ದಾಟಿದ ಸೋಂಕು
ನವದೆಹಲಿ: ದೆಹಲಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು,  ಒಂದೇ ವಾರದಲ್ಲಿ 129 ಸೋಂಕುಗಳು ವರದಿಯಾಗಿವೆ. ಈ ಹಿನ್ನಲೆ ಹೊಸ ಪ್ರಕರಣಗಳೊಂದಿಗೆ ರಾಷ್ಟ್ರ ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು 500 ರ ಗಡಿ ದಾಟಿದೆ.

ನಗರದಲ್ಲಿ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ. ಇದು ಕೂಡ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಲು ಕಾರಣವಾಗಿರಬಹುದು ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (MCD) ನಗರವನ್ನು 12 ವಲಯಗಳಾಗಿ ವಿಂಗಡಿಸಿದೆ. ಅದರಲ್ಲಿ ಕೇಂದ್ರ ವಲಯದಿಂದ ಗರಿಷ್ಠ ಸಂಖ್ಯೆಯ ಪ್ರಕರಣಗಳು ವರದಿಯಾಗಿವೆ ಎಂದು ತಿಳಿದು ಬಂದಿದೆ.