devanahalli – Peepal Media

ದೇವನಹಳ್ಳಿ ಭೂ ಸ್ವಾಧೀನ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟ ಆಹೋರಾತ್ರಿ ಧರಣಿ ಘೋಷಣೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ, ಹೋಬಳಿಯ ಹದಿಮೂರು ಹಳ್ಳಿಗಳ ರೈತರು ತಮ್ಮ ಭೂಮಿಗಾಗಿ ನಡೆಸುತ್ತಿರುವ ಹೋರಾಟ ನಿರ್ಣಾಯಕ ಹಂತಕ್ಕೆ ತಲುಪಿದೆ.

ಈ ರೈತರ 1,777 ಎಕರೆ ಭೂಮಿಯನ್ನು ವಶಪಡಿಸಿಕೊಂಡು, ಕಾರ್ಪೊರೇಟ್ ಕಂಪನಿಗಳಿಗೆ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿರುವ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ, 2025 ಜೂನ್ 26ರಿಂದ ಫ್ರೀಡಂ ಪಾರ್ಕಿನಲ್ಲಿ ಅನಿರ್ಧಿಷ್ಟ ಆಹೋರಾತ್ರಿ ಧರಣಿಗೆ ಕರೆ ನೀಡಿದೆ.

ರೈತರು ಕಳೆದ 1,180 ದಿನಗಳಿಂದ ನಿರಂತರ ಹೋರಾಟ ಮಾಡುತ್ತಾ ಬಂದಿದ್ದಾರೆ. ಜೂನ್ 25, ಬುಧವಾರ ‘ದೇವನಹಳ್ಳಿ ಚಲೋ’ ಹಮ್ಮಿಕೊಳ್ಳುವ ಮೂಲಕ ಹೋರಾಟವನ್ನು ತಾರ್ಕಿಕ ಹಂತಕ್ಕೆ ಕೊಂಡೊಯ್ಯಲು ನಿರ್ಧರಿಸಿದ್ದ ಹೋರಾಟಗಾರರನ್ನು ಬುಧವಾರ ಪೊಲೀಸರು ಬಂಧಿಸಿದರು.

ಗುರುವಾರ ನಟ ಪ್ರಕಾಶ್ ರಾಜ್, ಹಿರಿಯ ಪತ್ರಕರ್ತೆ ವಿಜಯಾ, ಕೆ. ಎಸ್. ವಿಮಲಾ, ಸಿರಿಮನೆ ನಾಗರಾಜ್, ತಾರಾ, ಸುಷ್ಮಾ ಮತ್ತಿತರರು ಮುಖ್ಯಮಂತ್ರಿ ಅವರನ್ನು ಭೇಟಿಯಾಗಲು ತೆರಳಿದ್ದರು, ಈ ವೇಳೆ ಮೊದಲು ಅವರನ್ನು ಪೊಲೀಸರು ತಡೆದಿದ್ದು, ಆನಂತರದಲ್ಲಿ ಮುಖ್ಯಮಂತ್ರಿಗಳ ಭೇಟಿಗೆೆ ಅವಕಾಶ ಮಾಡಿಕೊಟ್ಟಿದ್ದಾರೆ.

ಕಾವೇರಿ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ರೈತ ಮುಖಂಡರ ಜೊತೆ ಮಾತುಕತೆ ನಡೆಸಿದ ಮುಖ್ಯಮಂತ್ರಿಗಳು ಜುಲೈ 4ರ ಬೆಳಗ್ಗೆ 11 ಗಂಟೆಗೆ ರೈತರ ಬೇಡಿಕೆ ಮತ್ತು ಸಮಸ್ಯೆ ಕುರಿತಾಗಿ ಸಮಗ್ರ ಸಭೆ ನಡೆಸುವುದಾಗಿ ತಿಳಿಸಿದ್ದಾರೆ.

ಈ ವೇಳೆ ಮುಖ್ಯಮಂತ್ರಿಗಳು ಸಭೆ ನಡೆಸಿ, ರೈತರ ಭೂಮಿಯನ್ನು ಸ್ವಾದೀನ ಪಡಿಸಿಕೊಳ್ಳುವುದಿಲ್ಲ ಎಂಬ ನಿರ್ಧಾರ ಕೈಗೊಳ್ಳುವವರೆಗೂ ನಾವು ಸುಮ್ಮನೆ ಕೂರುವುದಿಲ್ಲ, ಫ್ರೀಡಂ ಪಾರ್ಕಿನಲ್ಲಿ ನಮ್ಮ ಹೋರಾಟ ಮುಂದುವರೆಸುತ್ತೇವೆ ಎಂಬ ಎಚ್ಚರಿಕೆಯನ್ನು ನೀಡಲಾಗಿದೆ.

ಜೂನ್ 26 ಮಧ್ಯಾಹ್ನ 1:30ಕ್ಕೆ ಪತ್ರಿಕಾಗೋಷ್ಠಿ ನಡೆಸಿದ ಸಂಯುಕ್ತ ಹೋರಾಟ ಕರ್ನಾಟಕ ಅನಿರ್ದಿಷ್ಟ ಆಹೋರಾತ್ರಿ ಧರಣಿಗೆ ಕರೆ ನೀಡಿದೆ.

ಮೋದಿ ಕಾರ್ಯಕ್ರಮಕ್ಕೆ ಬಂದರೆ 500 ರೂ ಭರವಸೆ : ಈಡೇರಿಸದಿದ್ದಕ್ಕೆ ಕೂಲಿಕಾರರ ಆರೋಪ
ಬೆಂಗಳೂರು: ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಭಾಗವಹಿಸಿದ್ದಕ್ಕೆ 500 ರೂಪಾಯಿ ಕೊಡುವುದಾಗಿ ಭರವಸೆ ನೀಡಿ ಕೊಡದೇ ಯಾಮಾರಿಸಿದ್ದಕ್ಕೆ 40 ಕ್ಕೂ ಹೆಚ್ಚು ಕೂಲಿಕಾರರ ಗುಂಪು ಬಿಜೆಪಿ ನಾಯಕರ ಮೇಲೆ ಆರೋಪ ಮಾಡಿದೆ. ಆ ಮೂಲಕ ಒಂದು ದಿನದ ಕೂಲಿ ಲೆಕ್ಕದಂತೆ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸುತ್ತಲಿನ ಜನಸಾಮಾನ್ಯರಿಗೆ ಹಣದ ಭರವಸೆ ಮೂಲಕ ಕರೆತರಲಾಗಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ 40 ಕ್ಕೂ ಹೆಚ್ಚು ಕೂಲಿಕಾರರ ಗುಂಪು ಬಿಜೆಪಿ ನಾಯಕರ ಮೇಲೆ ಶನಿವಾರ ಗಂಭೀರ ಆರೋಪ ಮಾಡಿದೆ. ಶಿಡ್ಲಘಟ್ಟದಲ್ಲಿ ಪ್ರತಿಭಟನೆ ನಡೆಸಿದ ಕೂಲಿ ಕಾರ್ಮಿಕರ ಗುಂಪು ಮಾಧ್ಯಮಗಳೊಂದಿಗೆ ಮಾತನಾಡಿ, ತಮ್ಮನ್ನು ಕರೆದೊಯ್ಯುವ ವ್ಯಕ್ತಿ ಒಂದು ದಿನದ ಸಂಪಾದನೆಯನ್ನು ನೀಡುವುದಾಗಿ ಹೇಳಿದ್ದರು. ಆದರೆ ಕಾರ್ಯಕ್ರಮ ಮುಗಿದ ನಂತರ ನಮ್ಮ ಸಂಪರ್ಕಕ್ಕೆ ಆ ವ್ಯಕ್ತಿ ಸಿಗುತ್ತಿಲ್ಲ. ಇತ್ತ ನಮಗೆ ಆ ದಿನದ ಕೆಲಸವೂ ಇಲ್ಲ, ಕೂಲಿ ಸಂಬಳದ ಭರವಸೆ ಕೂಡ ಈಡೇರಿಸಿಲ್ಲ ಎಂದು ಆರೋಪಿಸಿದರು.

“ಕಾರ್ಯಕ್ರಮಕ್ಕೆ ಬಂದಿದ್ದಕ್ಕೆ ನಮಗೆ ಉಪಹಾರ ನೀಡಲಾಯಿತು ಆದರೆ ಮದ್ಯಾಹ್ನದ ಊಟ ಕೂಡ ನೀಡಿಲ್ಲ. ದಿನದ ಕೊನೆಯಲ್ಲಿ, ನಮ್ಮನ್ನು ಕರೆದೊಯ್ದ ವ್ಯಕ್ತಿ ನಮಗೆ ₹ 100 ನೀಡಲು ಬಂದಿದ್ದ. ಕೊಟ್ಟ ಭರವಸೆಯಂತೆ 500 ರೂಪಾಯಿ ಕೊಡಲು ಕೇಳಿದರೆ ನಮಗೆ ಅವಮಾನಿಸಿ ಕಳಿಸಿದ್ದಾನೆ ಎಂದು ಗುಂಪಿನ ಪ್ರಮುಖ ವ್ಯಕ್ತಿಯೊಬ್ಬರು ಮಾದ್ಯಮಗಳಿಗೆ ತಿಳಿಸಿದರು.

ಸಧ್ಯಕ್ಕೆ ಈ ಕೂಲಿ ಕಾರ್ಮಿಕರ ಗುಂಪು ಪೊಲೀಸರಿಗೆ ದೂರು ನೀಡಲು ಪ್ರಯತ್ನಿಸಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಅಂತಹ ಯಾವುದೇ ಗುಂಪು ದೂರು ನೀಡಿಲ್ಲ ಎಂದು ಶಿಡ್ಲಘಟ್ಟ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಸ್ವಾತಂತ್ರ್ಯದ ದಿನವೇ ರೈತನಾಯಕರ ಬಂಧನ
ಬೆಂಗಳೂರು : ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳುತ್ತಿರುವ ರಾಜ್ಯ ಸರಕಾರದ ನೀತಿಯನ್ನು ಖಂಡಿಸಿ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿದ್ದ ರೈತ ನಾಯಕರನ್ನು ಸ್ವಾತಂತ್ರ್ಯ ದಿನವೇ ಪೊಲೀಸರು ಬಂಧಿಸಿದ್ದು, ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ದೇವನಹಳ್ಳಿಯ ವಿಮಾನ ನಿಲ್ದಾಣದ ಸುತ್ತ ಮುತ್ತಲಿನ 1700 ಎಕರೆಗೂ ಹೆಚ್ಚು ಫಲವತ್ತಾದ ಭೂಮಿಯನ್ನು ವಶಪಡಿಸಿಕೊಳ್ಳುವ ಸರಕಾರ ನೀತಿಯ ವಿರುದ್ಧ 135 ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದು, ಪ್ರತಿಭಟನೆಗೆ ನಾಯಕತ್ವ ನೀಡಿದ್ದ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಸಮಿತಿ ಅಧ್ಯಕ್ಷ ಜಿಸಿ ಬಯ್ಯಾರೆಡ್ಡಿಯರನ್ನು ಇಂದು ಬೆಳಗ್ಗೆ 4 ಗಂಟೆ ಸಮಯದಲ್ಲಿ ಪೊಲೀಸರು ಬಂಧಿಸಿದ್ದಾರೆ. ನಂತರ ಆರ್ ಕೆ ಹೆಗಡೆ ನಗರದ ಸಂಪಿಗೆಹಳ್ಳಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ಈ ಕುರಿತು ರಾಜ್ಯ ಪ್ರಧಾನ ಕಾರ್ಯದರ್ಶಿ ಯು. ಬಸವರಾಜ ಪತ್ರಿಕಾ ಹೇಳಿಕೆ ನೀಡಿದ್ದು, ಬಯ್ಯಾರೆಡ್ಡಿಯವರನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬಿಡದೇ ಅಕ್ರಮವಾಗಿ ಬಂಧನದಲ್ಲಿರಿಸಿರುವುದು ಸರಿಯಾದ ಕ್ರಮವಲ್ಲ ಎಂದು ಆರೋಪಿಸಿದ್ದಾರೆ. ಈ ಘಟನೆಯಿಂದಾಗಿ ರೈತರು ಯಾವುದೇ ಕಾರಣಕ್ಕು ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.