DK SHIVKUMAR – Peepal Media

ಡಿ.ಕೆ.ಶಿವಕುಮಾರ್‌ ಅವರ ಅಕ್ರಮ ಹಣ ವರ್ಗಾವಣೆ ಪ್ರಕರಣ ವಜಾಗೊಳಿಸಿದ ಸುಪ್ರೀಂ
ನವದೆಹಲಿ: ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಮೇಲಿದ್ದ 2018ರ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನುಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಈ ಪ್ರಕರಣಕ್ಲೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಅದೇಶವನ್ನೂ ಕೂಡ ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ದಾಖಲಿಸಿದ್ದ 120 B ಪ್ರಕರಣವನ್ನು ಸರ್ವೋಚ್ಛ ನ್ಯಾಯಾಲಯ ರದ್ದುಗೊಳಿಸಿದ್ದು, ಶಿವಕುಮಾರ್‌ ಅವರಿಗೆ ಬಿಗ್‌ ರಿಲೀಫ್ ನೀಡಿದೆ.

ಈ ಪ್ರಕರಣದಲ್ಲಿ ಡಿಕೆಶಿ ವಿರುದ್ಧ ಪಿತೂರಿ ಮಾಡಿದ್ದ ಆರೋಪ ಹೊರಿಸಿದ್ದ ಇಡಿ, ಪಿಎಂಎಲ್ ಕಾಯಿದೆಯ ಅಡಿ ಪ್ರಕರಣ ದಾಖಲಿಸಿತ್ತು. ಈ ಅಪರಾಧಗಳು ಆದಾಯ ತೆರಿಗೆ ಕಾಯಿದೆಯ ವೇಳಾಪಟ್ಟಿಯ ಭಾಗವಾಗಿರದ ಕಾರಣ ಹೈಕೋರ್ಟಿನ ತೀರ್ಪನ್ನು ರದ್ದುಗೊಳಿಸಲಾಗಿದೆ. PML ಕಾಯಿದೆಯ ಅಡಿಯಲ್ಲಿ ಎಲ್ಲಾ ಪ್ರಕ್ರಿಯೆಗಳನ್ನು ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ.

ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಸೂರ್ಯಕಾಂತ್‌ ನೇತೃತ್ವದ ಪೀಠ 2018ರಲ್ಲಿ ಡಿಕೆ ಶಿವಕುಮಾರ್‌ ವಿರುದ್ಧ ದಾಖಲಾಗಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ರದ್ದುಗೊಳಿಸಿದೆ. 2017ರ ಆಗಸ್ಟ್ ದಿಲ್ಲಿಯಲ್ಲಿರುವ ಅವರ ಫ್ಲಾಟ್‌ಗಳಲ್ಲಿ ಹಣ ಸಿಕ್ಕಿದ್ದರಿಂದ ಜಾರಿ ನಿರ್ದೇಶನಾಲಯ ಪ್ರಕರಣವನ್ನು ದಾಖಲಿಸಿತ್ತು. ಈ ಪ್ರಕರಣದಲ್ಲಿ 2019ರಲ್ಲಿ ಶಿವಕುಮಾರ್ ಸುಮಾರು ಮೂರು ತಿಂಗಳ ಕಾಲ ಜೈಲುಪಾಲಾಗಿದ್ದರು. ದೆಹಲಿ ಹೈಕೋರ್ಟ್ ಬಳಿಕ ಅವರಿಗೆ ಜಾಮೀನು ನೀಡಿತ್ತು. ಶಿವಕುಮಾರ್ ಅವರು ತನ್ನ ಬಂಧನವನ್ನು ಬಿಜೆಪಿ ರಾಜಕೀಯ ಸೇಡಿನ ಭಾಗ ಎಂದು ಆರೋಪಿಸಿದ್ದರು ಮತ್ತು ನ್ಯಾಯಾಂಗದ ಮೇಲೆ ನನಗೆ ಸಂಪೂರ್ಣ ನಂಬಿಕೆಯಿದೆ ಎಂದು ಹೇಳಿಕೆ ನೀಡಿದ್ದರು.

ಈ ಮೊದಲು ಇಡಿ ಸಮನ್ಸ್ ಅನ್ನು ರದ್ದುಪಡಿಸಲು ಡಿಕೆಶಿ ಹೈಕೋರ್ಟ್‌ ಮೊರೆ ಹೋಗಿದ್ದರು. ಆದರೆ, ಇಡಿ ಸಮನ್ಸ್‌ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿತ್ತು. ಹೈಕೋರ್ಟ್‌ನ ನಿರ್ಧಾರ ಪ್ರಶ್ನಿಸಿ ಡಿಕೆ ಶಿವಕುಮಾರ್‌ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್‌ ಈಗ ಪ್ರಕರಣವನ್ನು ರದ್ದುಗೊಳಿಸಲು ಆದೇಶಿಸಿದೆ. ಆದರೆ ಜಾರಿ ನಿರ್ದೇಶನಾಲಯ ಸುಪ್ರೀಂಕೋರ್ಟ್‌ನಲ್ಲಿ ಆದೇಶವನ್ನು ಮರುಪರಿಶೀಲಿಸಲು ಮನವಿ ಮಾಡಿರುವುದರಿಂದ, ಪ್ರಕರಣಕ್ಕೆ ಇನ್ನು ಕೊನೆ ಸಿಕ್ಕಿಲ್ಲ ಎನ್ನಬಹುದಾಗಿದೆ.

ಕಾಲಮಿತಿಯೊಳಗೆ ಅರ್ಜಿಗಳ ವಿಲೇವಾರಿಗೆ ಅಧಿಕಾರಿಗಳಿಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
“ಸಾರ್ವಜನಿಕರ ಅಹವಾಲುಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಲು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಯಲಹಂಕದಲ್ಲಿ ನಡೆದ ಬಾಗಿಲಿಗೆ ಬಂತು ಸರಕಾರ ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿ ಹೇಳಿದ್ದಿಷ್ಟು;

“ಕಾರ್ಯಕ್ರಮದ ಎರಡನೇ ದಿನ 2600 ಅರ್ಜಿಗಳು ನೋಂದಣಿ ಆಗಿದ್ದು, ಅರ್ಜಿಗಳನ್ನು ವಿಂಗಡಿಸಿ ಅವುಗಳ ತ್ವರಿತ ವಿಲೇವಾರಿಗೆ ವಾರ್ಡ್ ಮಟ್ಟದ ಅಧಿಕಾರಿಗಳಿಗೆ ಸಮಯ ನಿಗದಿ ಮಾಡುತ್ತೇವೆ.

ಅರ್ಜಿ ಸಲ್ಲಿಸಿರುವ ಪ್ರತಿಯೊಬ್ಬರ ದೂರವಾಣಿ ಸಂಖ್ಯೆ ಪಡೆದಿದ್ದೇವೆ. ಈ ಎಲ್ಲಾ ದೂರುಗಳನ್ನು ಬಗೆಹರಿಸಲು ಪ್ರತ್ಯೇಕ ತಂಡ ಮಾಡುತ್ತೇವೆ.

ಜನರ ಅರ್ಜಿ ಸರಿ ಇಲ್ಲದಿದ್ದರೆ, ಅವರನ್ನು ಸಂಪರ್ಕಿಸಿ ಮತ್ತೆ ಅವರಿಂದ ಸರಿಯಾದ ರೀತಿಯಲ್ಲಿ ಅರ್ಜಿ ಪಡೆಯುತ್ತೇವೆ. ನಿವೇಶನ, ರಸ್ತೆ ಮುಚ್ಚಿರುವ ಬಗ್ಗೆ ಬಂದಿರುವ ದೂರಿನ ಮೇಲೆ ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿ ಪರಿಹಾರ ನೀಡುವಂತೆ ಮಾರ್ಗದರ್ಶನ ನೀಡಿದ್ದೇನೆ. ಈ ಕಾರ್ಯಕ್ರಮಗಳು ಮುಗಿದ ನಂತರ ಅಧಿಕಾರಿಗಳ ಜೊತೆ ಮತ್ತೊಂದು ಸುತ್ತಿನ ಸಭೆ ಮಾಡಿ ಜನರ ಸಮಸ್ಯೆಗೆ ಹೇಗೆ ಪರಿಹಾರ ನೀಡಬೇಕು ಎಂದು ಚರ್ಚಿಸುತ್ತೇವೆ.

ಜನರಿಗೆ ತೊಂದರೆ ನೀಡಬಾರದು ಎಂದು ಅಧಿಕಾರಿಗಳಿಗೂ ತಿಳಿಯಬೇಕು. ಹೀಗಾಗಿ ಅವರಿಗೆ ಸಂದೇಶ ನೀಡುತ್ತೇವೆ. ಕಷ್ಟ ಇದ್ದವರು ಮಾತ್ರ ಶಾಸಕರು ಹಾಗು ಮಂತ್ರಿಗಳ ಮನೆ ಕಚೇರಿಗೆ ಹೋಗುತ್ತಾರೆ. ಜನ ಈ ರೀತಿ ಅಲೆದಾಡುವಂತೆ ಆಗಬಾರದು. ಜನರಿಗೆ ನ್ಯಾಯ ಸಿಗುವಂತೆ ಮಾಡುತ್ತೇವೆ. ಹಕ್ಕುಪತ್ರ ವಿತರಣೆ ಸಮಯದಲ್ಲಿ ಎಲ್ಲಾ ದಾಖಲೆ ಪರಿಶೀಲಿಸುತ್ತೇವೆ.

ಯಾವ ಇಲಾಖೆಯ ದೂರುಗಳು ಹೆಚ್ಚಾಗಿವೆ ಎಂದು ಕೇಳಿದಾಗ, “ಕಂದಾಯ ಇಲಾಖೆ, ಪಾಲಿಕೆಗೆ ಸಂಬಂಧಿತ ದೂರುಗಳು ಹೆಚ್ಚಾಗಿದ್ದು, ಖಾತೆ ಮಾಡಿಸುವ ವಿಚಾರವಾಗಿ ದೂರುಗಳು ಬಂದಿವೆ. ಮನೆಗಳು ಬೇಕು ಎಂಬ ಬೇಡಿಕೆ ಕೂಡ ಹೆಚ್ಚಾಗಿದ್ದು, ಉಚಿತವಾಗಿ ಮನೆ ನೀಡಲು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೆ ಅವಕಾಶ ಇಲ್ಲ. ಇವರಿಗೆ ಕಡಿಮೆ ದರದಲ್ಲಿ ಮನೆ ನೀಡಲಾಗುತ್ತಿದ್ದು, ವಸತಿ ಇಲಾಖೆ ಜತೆ ಚರ್ಚೆ ಮಾಡಿ ಎಷ್ಟು ವಿನಾಯಿತಿ ನೀಡಬಹುದೋ ನೀಡುತ್ತೇವೆ.

ಇನ್ನು ಪಾಲಿಕೆ ತೆರಿಗೆ ವಿಚಾರದಲ್ಲಿ ತೆರಿಗೆ ಕಟ್ಟದವರಿಗೆ ದಂಡದ ಪ್ರಮಾಣ ಹೆಚ್ಚಾಗಿದೆ ಎಂಬ ಅರ್ಜಿಗಳಿವೆ. ಸಣ್ಣ ಮನೆಗಳಿಗೆ ನೆರವು ನೀಡುವ ವಿಚಾರವಾಗಿ ಅಧಿಕಾರಿಗಳ ಜತೆ ಚರ್ಚೆ ಮಾಡಿ ಕಾನೂನಿನಲ್ಲಿ ಎಷ್ಟು ಅವಕಾಶ ಇದೆ ಎಂದು ನೋಡುತ್ತೇವೆ” ಎಂದು ತಿಳಿಸಿದರು.

ಕಂದಾಯ ಇಲಾಖೆಯಲ್ಲಿ ಏಜೆಂಟ್ ಗಳಿಗೆ ಹಣ ನೀಡಬೇಡಿ ಎಂದು ನೀಡಿದ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ಈಗಲೂ ಜನರಿಗೆ ಏಜೆಂಟರ ಹಿಂದೆ ಹೋಗಬೇಡಿ ಎಂದು ಹೇಳುತ್ತೇನೆ. ಈ ಭಾಗದ ಜನ ಕಂದಾಯ ನಿವೇಶನ, ಜಮೀನು ಕಳೆದುಕೊಂಡಿದ್ದು, ಇಂತಹವರನ್ನು ದಾರಿ ತಪ್ಪಿಸುವ ಕೆಲಸ ಆಗುತ್ತಿದೆ. ಈ ಜನರಿಗೆ ಕಾನೂನು ವ್ಯಾಪ್ತಿಯಲ್ಲಿ ಎಷ್ಟು ಸಹಾಯ ಮಾಡಲು ಸಾಧ್ಯವೋ ಅಷ್ಟು ಸಹಾಯ ಮಾಡುತ್ತೇವೆ. ಏಜೆಂಟರನ್ನು ದೂರ ಇಡಬೇಕು, ಅವರ ಬಗ್ಗೆ ಅರಿವು ಮೂಡಿಸಬೇಕು ಎಂಬ ಉದ್ದೇಶದಿಂದಲೇ ನಾನು ಇಲ್ಲಿಗೆ ಬಂದಿದ್ದೇನೆ” ಎಂದು ತಿಳಿಸಿದರು.

ಕರ ಸೇವಕರ ಬಂಧನ ವಿಚಾರವಾಗಿ ಜೆಡಿಎಸ್ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಈಗಷ್ಟೇ ಬಿಜೆಪಿ ಜೊತೆ ಎನ್ ಡಿಎ ಮೈತ್ರಿಕೂಟಕ್ಕೆ ಹೋಗಿದ್ದಾರೆ. ಅವರು ಕರಸೇವಕರ ಬಗ್ಗೆ ಮಾತಾನಾಡುತ್ತಿದ್ದು ಒಳ್ಳೆಯದಾಗಲಿ. ಇವರು ಕೂಡ ಸೇವೆ ಮಾಡಲಿ” ಎಂದು ತಿಳಿಸಿದರು.

ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಸರ್ಕಾರವನ್ನು ಸೋಲಿಸುತ್ತೇವೆ ಎಂಬ ದೇವೇಗೌಡರ ಹೇಳಿಕೆ ಬಗ್ಗೆ ಕೇಳಿದಾಗ, “ಬಹಳ ಸಂತೋಷ. ಅವರಿಗೆ ಒಳ್ಳೆಯದಾಗಲಿ. ಅವರು ಆರೋಗ್ಯವಂತರಾಗಿರಲಿ” ಎಂದು ತಿಳಿಸಿದರು.

ಆದಾಯ ಮೀರಿದ ಆಸ್ತಿ ಗಳಿಕೆ : ಡಿ.ಕೆ.ಶಿವಕುಮಾರ್ ಗೆ ಹೈಕೋರ್ಟ್ ನಿಂದ ತಾತ್ಕಾಲಿಕ ರಿಲೀಫ್
ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಆ ಮೂಲಕ ನ್ಯಾಯಾಲಯ ಸಿಬಿಐ ವಾದವನ್ನು ತಳ್ಳಿ ಹಾಕಿದೆ.

ಸರ್ಕಾರದ ಪರ ಕಪಿಲ್ ಸಿಬಲ್, ಡಿಕೆ ಶಿವಕುಮಾರ್ ಪರ ಅಭಿಷೇಕ್ ಮನು ಸಿಂಘ್ವಿ, ಸಿಬಿಐ ಪರ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದರು. ಈ ನಡುವೆ ಸಂಪುಟದ ನಿರ್ಧಾರದ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡಾ ಮೇಲ್ಮನವಿ ಸಲ್ದಿಸಿದ್ದರು. ಯತ್ನಾಳ್ ಪರವಾಗಿ ವೆಂಕಟೇಶ್ ದಳವಾಯಿ ವಾದ ಮಂಡಿಸಿದ್ದರು. ಇಂದು ಸರ್ಕಾರದ ಅನುಮತಿ ನಿರ್ಧಾರ ಎತ್ತಿಹಿಡಿದಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸಿಜೆ ಪಿ.ಬಿ ವರ್ಲೆ ಮತ್ತು ನ್ಯಾಯಮೂರ್ತಿ ಕೃಷ್ಣದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ಆರಂಭಿಸಿತು.

ಈ ಅರ್ಜಿಯ ವಿಚಾರಣೆ ಇಂದು ಆರಂಭಗೊಳ್ಳುತ್ತಿದ್ದಂತೇ, ಹೈಕೋರ್ಟ್ ಗೆ ಸರ್ಕಾರದ ನಿರ್ಧಾರದ ಲಿಖಿತ ಪ್ರತಿಯನ್ನು ಎಜೆ ಶಶಿಕಿರಣ್ ಶೆಟ್ಟಿ ಸಲ್ಲಿಸಿದರು.

ಆ ಬಳಿಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳ ಪೀಠದಲ್ಲಿ ವಾದ-ಪ್ರತಿವಾದ ನಡೆದು, ಅಂತಿಮವಾಗಿ ಪಂಜಾಬ್ ಸರ್ಕಾರದ ಕೇಸ್ ಉಲ್ಲೇಖಿಸಿ, ಸಿಬಿಐ ತನಿಖೆ ಪ್ರಶ್ನಿಸಿ ಸಲ್ಲಿಸಿದ್ದಂತ ಮೇಲ್ಮನವಿ ಅರ್ಜಿಯನ್ನು ವಾಪಾಸ್ ಪಡೆಯಲು ಅನುಮತಿಸಿತು. ಈ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದೆ.

ಸಿಬಿಐ ತನಿಖೆ ಈಗಾಲೇ ಮುಕ್ತಾಯದ ಹಂತದಲ್ಲಿದೆ. ಒಮ್ಮೆ ನೀಡಿದ ಒಪ್ಪಿಗೆಯನ್ನು ಸರ್ಕಾರ ಹಿಂಪಡೆಯುವಂತಿಲ್ಲ. ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಈ ಬಗ್ಗೆ ಸ್ಪಷ್ಟವಿದೆ ಎಂಬುದೈಗಿ ಹೈಕೋರ್ಟ್ ನಲ್ಲಿ ಸಿಬಿಐ ಪರ ವಕೀಲರು ವಾದಿಸಿದರು.

ಸರ್ಕಾರ ಒಪ್ಪಿಗೆ ಹಿಂಪಡೆದ್ರೂ ಸಿಬಿಐ ತನಿಖೆ ಮುಂದುವರೆಸಲಿದೆ. ಸುಪ್ರೀಂ ಕೋರ್ಟ್ ನ 1994ರ ತೀರ್ಪು ಉಲ್ಲೇಖಿಸಿದರು. ಕಾಜಿ ಲೆಂಡಪ್ ದೋರ್ಜಿ ಪ್ರಕರಣದಲ್ಲಿ ನೀಡಿದಂತ ಸುಪ್ರೀಂ ಕೋರ್ಟ್ ತೀರ್ಪನ್ನು ಸಿಬಿಐ ಪರ ವಕೀಲರು ಹೈಕೋರ್ಟ್ ಮುಂದಿಟ್ಟರು.

ನಿಮ್ಮ ಅಹವಾಲನ್ನು ಪ್ರತ್ಯೇಕ ಅರ್ಜಿಯಲ್ಲಿ ಸಲ್ಲಿಸಿ. ಈ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ತೀರ್ಪು ಸ್ಪಷ್ಟವಾಗಿದೆ ಎಂಬುದಾಗಿ ವಿಭಾಗೀಯ ಪೀಠದ ನ್ಯಾ.ಕೃಷ್ಣ ದೀಕ್ಷಿತ್ ತಿಳಿಸಿದರು.

ಈ ಬಳಿಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪರ ವಕೀಲ ವೆಂಕಟೇಶ್ ದಳವಾಯಿ ಹೈಕೋರ್ಟ್ ನಲ್ಲಿ ತಮ್ಮ ವಾದನ ಮಂಡನೆ ಶುರುಮಾಡಿದರು. ಅವರು ಸುಪ್ರೀಂ ಕೋರ್ಟ್ ತೀರ್ಪನ್ನು ಸರ್ಕಾರ ಉಲ್ಲಂಘಿಸುವಂತಿಲ್ಲ. ತೀರ್ಪು ಉಲ್ಲಂಘಿಸಿ ನಮಗೆ ಬೇಕಾದಂತೆ ಮಾಡಿಕೊಳ್ಳುತ್ತೇವೆ ಎನ್ನುವಂತಿಲ್ಲ. ಡಿಕೆಶಿ ಪರ ಇಡೀ ಸಂಪುಟ ನಿಂತು ಕಾನೂನು ಬಾಹಿರ ಕ್ರಮ ಕೈಗೊಂಡಿದೆ ಎಂಬುದಾಗಿ ಆಕ್ಷೇಪಿಸಿದರು.

ಆಗ ಮದ್ಯಪ್ರವೇಶಿಸಿದಂತ ಡಿಕೆಶಿ ಪರ ವಕೀಲ ಅಭಿಶೇಖ್ ಸಿಂಘ್ವಿ ಅವರು, ಈ ಪ್ರಕರಣದಲ್ಲಿ ವಾದ ಮಂಡಿಸಲು ನೀವು ಯಾರು ಎಂಬುದಾಗಿ ಯತ್ನಾಳ್ ಪರ ವಕೀಲ ವೆಂಕಟೇಶ್ ದಳವಾಯಿಗೆ ಪ್ರಶ್ನಿಸಿದರು. ಅಲ್ಲದೇ ಯತ್ನಾಳ್ ಪರ ವಕೀಲರ ವಾದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದರು.

ಡಿಕೆಶಿ ಪರ ವಕೀಲರು ಮೇಲ್ಮನವಿ ಅರ್ಜಿಯನ್ನು ಹಿಂಪಡೆಯುತ್ತಿದ್ದಂತೇ, ಕೆಲ ಕಾಲ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿಕೆ ಮಾಡಲಾಯಿತು. ಆ ಬಳಿಕ ತನ್ನ ತೀರ್ಪು ಪ್ರಕಟಿಸಿದಂತ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವು ಸಿಬಿಐ, ಯತ್ನಾಳ್ ವಾದವನ್ನು ನಾವು ಒಪ್ಪಲು ಸಾಧ್ಯವಿಲ್ಲ. ಈವರೆಗೂ ಸರ್ಕಾರದ ಕ್ರಮ ಯಾರು ಪ್ರಶ್ನಿಸಿ ಅರ್ಜಿ ಸಲ್ಲಿಸಿಲ್ಲ. ಕಾಜಿ ಲೆಂಡಪ್ ದೋರ್ಜ್ ಪ್ರಕರಣದ್ಲಲಿ ಸರ್ಕಾರದ ಕ್ರಮ ಪ್ರಶ್ನಿಸಲಾಗಿತ್ತು ಎಂಬುದಾಗಿ ಹೇಳುವ ಮೂಲಕ, ಡಿಕೆ ಶಿವಕುಮಾರ್ ಸಲ್ಲಿಸಿದ್ದಂತ ಮೇಲ್ಮನವಿ ಅರ್ಜಿ ವಾಪಾಸ್ ಗೆ ಅನುಮತಿಸಿತು. ಈ ಮೂಲಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಪಕ್ಷದ ಆಂತರಿಕ ವಿಚಾರದ ಬಗ್ಗೆ ಮಾತನಾಡಿದರೆ ನೋಟಿಸ್ ಜಾರಿ : ಡಿಸಿಎಂ ಡಿ.ಕೆ.ಶಿವಕುಮಾರ್
ಪಕ್ಷದ ಆಂತರಿಕ ವಿಚಾರದ ಬಗ್ಗೆ ಎಲ್ಲಾ ಕಡೆಗೂ ಮಾತನಾಡಿದರೆ ಮುಲಾಜಿಲ್ಲದೆ ನೋಟಿಸ್ ಜಾರಿ ಮಾಡಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಪಕ್ಷದ ಶಾಸಕರಿಗೆ ಖಡಕ್ ಎಚ್ಚರಿಕೆ ರವಾನೆ ಮಾಡಿದ್ದಾರೆ.

ಮಂಡ್ಯದ ಶಾಸಕ ರವಿ ಗಾಣಿಗ ಅವರ ಮುಖ್ಯಮಂತ್ರಿ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆ ವಿಷಯದ ಬಗ್ಗೆ ವಿಚಾರ ಪ್ರಸ್ತಾಪಿಸಿದ ನಂತರ ಡಿ.ಕೆ.ಶಿವಕುಮಾರ್ ಈ ರೀತಿಯಾಗಿ ಎಚ್ಚರಿಕೆ ನೀಡಿದ್ದಾರೆ. ಶಾಸಕರಿಗೆ ಆಫರ್ ವಿಚಾರ ಕ್ಕೆ ಸಂಬಂಧಪಟ್ಟಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ಪ್ರತಿಯೊಬ್ಬರ ನಡೆ ಕೂಡ ನಮಗೆ ಗೊತ್ತಿದೆ. ಬಹಳ ಪ್ರಯತ್ನ ಮಾಡ್ತಾ ಇದ್ದಾರೆ ಅಂತ ಅವರು ತಿಳಿಸಿದರು .

ಇನ್ನೂ ಕೈಮುಗಿದು ಕೇಳಿಕೊಳ್ಳುತ್ತೇನೆ ಪಕ್ಷದ ಆಂತರಿಕ ವಿಚಾರ, ಅಧಿಕಾರ ವಿಚಾರ ಯಾವುದೇ ಹೇಳಿಕೆಗಳನ್ನು ಕೊಡಬಾರದು. ಯಾವುದೇ ಹೇಳಿಕೆ ನೀಡಬೇಡಿ. ಪದೇ ಪದೇ ಈ ರೀತಿಯ ಹೇಳಿಕೆಗಳನ್ನು ಕೊಟ್ಟಲ್ಲಿ ನೋಟಿಸ್ ನೀಡಲಾಗುವುದು ಅಂಥ ಅವರು ತಮ್ಮ ಪಾರ್ಟಿ ಶಾಸಕರಿಗೆ ಎಚ್ಚರಿಸಿದರು.

ಶನಿವಾರ ಮುಂಜಾನೆ ಹೈದರಾಬಾದ್ ಪ್ರವಾಸಕ್ಕೆ ಹೊರಟಿದ್ದಾಗ ತಮ್ಮ ಬೆಂಗಳೂರಿನ ನಿವಾಸದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಈಗಾಗಲೇ ಇಂತಹ ವಿಚಾರದ ಬಗ್ಗೆ ಅನಗತ್ಯ ಮಾತುಗಳ ಬಗ್ಗೆ ಪಕ್ಷದ ವೇದಿಕೆಯಲ್ಲೇ ಎಚ್ಚರಿಕೆ ನೀಡಲಾಗಿದೆ. ಇದು ಮುಂದುವರಿದು ಮತ್ತೆ ಹೇಳಿಕೆ ಬರುತ್ತಿವೆ. ಮತ್ತೊಮ್ಮೆ ಬಹಿರಂಗವಾಗಿ ಎಚ್ಚರಿಕೆ ನೀಡುತ್ತಿದ್ದೇವೆ. ಇದನ್ನು ಮೀರಿಯೂ ಇದು ಮುಂದುವರಿದರೆ ಪಕ್ಷದ ಕಡೆಯಿಂದ ನೋಟಿಸ್ ಜಾರಿ ಮಾಡಲಾಗುವುದು ಎಂದು ಎಚ್ಛರಿಸಿದರು.

ಇತ್ತೀಚೆಗೆ ತಮ್ಮನ್ನು ಟಾರ್ಗೆಟ್ ಮಾಡಿ ಮಾತನಾಡುತ್ತಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಗ್ಗೆ ವಿಚಾರ ಪ್ರಸ್ತಾಪಿಸಿ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಮನಗರ ಜಿಲ್ಲೆಗೆ ಯಾರ ಕೊಡುಗೆ ಎಷ್ಟು ಎಂಬ ಚರ್ಚೆ ನಡೆಯಲಿ, ಅದು ದಾಖಲೆ ಮೂಲಕ ಆಗಲಿ ಎಂದು ಕುಮಾರಸ್ವಾಮಿಗೆ ಸವಾಲು ಹಾಕಿದ್ದಾರೆ.

ನಾನು ಏನು ಮಾಡಿದ್ದೇನೆ, ಕುಮಾರಸ್ವಾಮಿ ಏನು ಮಾಡಿದ್ದಾರೆ ಎಂದು ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ. ಅಧಿವೇಶನದಲ್ಲಿ ದಾಖಲೆ ಸಮೇತ ಚರ್ಚೆ ಮಾಡೋಣ, ಅವರ ಸವಾಲು ಸ್ವೀಕರಿಸಿದ್ದೇನೆ ಎಂದು ಹೇಳಿದ್ದಾರೆ. ಯಾರು ಏನೇನು ಮಾಡಿದ್ದಾರೆ ಎಂದು ಎಲ್ಲವನ್ನೂ ಅಧಿವೇಶನದಲ್ಲಿ ಬಿಚ್ಚಿಡೋಣ. ಅವರ ಬಳಿ ಇರುವ ಸರಕುಗಳನ್ನು ತಂದು ಅವರು ಮಾತನಾಡಲಿ. ನನ್ನ ಬಳಿ ಇರುವ ದಾಖಲೆಗಳನ್ನು ಮುಂದಿಟ್ಟು ನಾನು ಮಾತನಾಡುತ್ತೇನೆ ಎಂದರು.

DK v/s HDK : ಕುಮಾರಸ್ವಾಮಿ ರಾಜಕೀಯ ದಾಳಕ್ಕೆ ಏನಂದ್ರು DK ‘ಬ್ರದರ್’?
ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ದಿನಗಳಲ್ಲಿ ತಿಹಾರ್ ಜೈಲಿಗೆ ಹೋಗಲಿದ್ದಾರೆ.. ಇನ್ನು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ.. ನಮ್ಮನ್ನು ಹಾಸನಕ್ಕೆ ಓಡಿಸಬಹುದು, ಆದರೆ ಅವರು ಜೈಲಿಗೆ ಹೋಗುವುದು ತಪ್ಪಲ್ಲ.. ಹೀಗೆ ಡಿಕೆ ಬ್ರದರ್ಸ್ ಮೇಲೆ ರಾಜಕೀಯ ದಾಳಿ ನಡೆಸುತ್ತಿರುವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಡಿಕೆ ಸುರೇಶ್ ಖಡಕ್ ಆಗಿ ಉತ್ತರಿಸಿದ್ದಾರೆ.

ಏನಂದ್ರು ಕುಮಾರಸ್ವಾಮಿ?
ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ತಿರುಗಿ ಬಿದ್ದಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಈಗ ತಮ್ಮ ಅಸ್ತ್ರಗಳನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೇಲೆ ತಿರುಗಿಸಿದ್ದಾರೆ.

ನನ್ನ ಜೀವನದಲ್ಲಿ ಡಿ.ಕೆ. ಶಿವಕುಮಾರ್‌ ಅವರ ಜತೆ ಎಂದೂ ರಾಜಿ ಆಗಲ್ಲ. ಒಮ್ಮೆ ಅವರ ಜತೆ ಸರ್ಕಾರ ಮಾಡಿದ್ದರಿಂದ ನಾನು ಈಗಲೂ ನೋವು ಅನುಭವಿಸುತ್ತಾ ಇದ್ದೇನೆ. ಜೆಡಿಎಸ್ ಜೊತೆಗಿನ ಮೈತ್ರಿ ಸರ್ಕಾರವನ್ನು ಉರುಳಿಸಿದ್ದೇ ಡಿ.ಕೆ.ಶಿವಕುಮಾರ್. ಅವರು ಒಮ್ಮೆ ತಿಹಾರ್ ಜೈಲಿಗೆ ಹೋಗಿ ಬಂದಿದ್ದಾರೆ. ಅವರು ಮತ್ತೆ ಅಲ್ಲಿಗೆ ಪರ್ಮನೆಂಟಾಗಿ ಹೋದರೂ ಅಚ್ಚರಿ ಅಲ್ಲ. ನಮ್ಮನ್ನು ಹಾಸನಕ್ಕೆ ಓಡಿಸಬಹುದು, ಆದರೆ ಅವರು ತಿಹಾರ್‌ ಜೈಲಿಗೆ ಓಡುವ ಕಾಲ ಹತ್ತಿರದಲ್ಲಿ ಇದೆ.. ಹೀಗೆ ಒಂದೊಂದಾಗಿ ಕುಮಾರಸ್ವಾಮಿ ಡಿ.ಕೆ.ಶಿವಕುಮಾರ್ ಮೇಲೆ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಕುಮಾರಸ್ವಾಮಿಯವರ ಈ ರೀತಿಯ ರಾಜಕೀಯ ದಾಳಿಗೆ ಕಾಂಗ್ರೆಸ್ ನ ಹಲವು ಮುಖಂಡರು ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ತಮ್ಮ ತೃತೀಯ ದರ್ಜೆಯ ರಾಜಕೀಯ ಆರೋಪವನ್ನು ಮತ್ತೆ ಇಲ್ಲಿ ತಿರುಗಿಸಿದ್ದು ಖಂಡನೀಯ ಎಂದು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ತಿರುಗಿ ಬಿದ್ದಿದ್ದಾರೆ‌.

ಹೆಚ್ಡಿಕೆ ಆರೋಪಕ್ಕೆ ಏನಂತಾರೆ ಡಿ.ಕೆ.ಸುರೇಶ್?
ಕುಮಾರಸ್ವಾಮಿ ಏನು‌ ಹೇಳಿದ್ದಾರೋ ಗೊತ್ತಿಲ್ಲ, ಅವರು ದೊಡ್ಡವರು. ಅವರ ನುಡಿಮುತ್ತುಗಳನ್ನು ನೋಡಿ ಉತ್ತರ ಕೊಡುತ್ತೇನೆ. ನನ್ನನ್ನು ಜೈಲಿಗೆ ಕಳುಹಿಸುವ ಬಗ್ಗೆ ಅವರ ಪ್ಲ್ಯಾನ್ ಏನಿದೆ ಎಂದು ಹೇಳುತ್ತಿದ್ದಾರೆ. ಅವರು ಬಿಜೆಪಿ ಜೊತೆಗೆ ಕೈ ಜೋಡಿಸಿದ್ದೇ ಈ ಉದ್ದೇಶಕ್ಕೆ ಇರಬಹುದು. ಇನ್ನೂ ಏನೆಲ್ಲ ಮಾಡಲು‌ ಸಾಧ್ಯವೋ ಎಲ್ಲವನ್ನೂ ಹೇಳುತ್ತಿದ್ದಾರೆ. ಹಿಂದೆಯೂ ಪಾಪ ಮಾಡಿದ್ದರಲ್ಲ. ನನ್ನ‌ ತಂಗಿ, ನನ್ನ ತಮ್ಮ, ನನ್ನ‌ ಹೆಂಡತಿ ಮೇಲೂ ಕೇಸ್ ಹಾಕಿದ್ದರು. ಈ ಹಿಂದೆ ಸಿಎಂ ಆಗಿದ್ದನ್ನು ಈಗ ನೆನಪು ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಈ ಬಗ್ಗೆ ಸಂಸದ ಡಿ.ಕೆ. ಸುರೇಶ್ ಪ್ರತಿಕ್ರಿಯೆ ನೀಡಿದ್ದು, ‘ಡಿ.ಕೆ. ಶಿವಕುಮಾರ್‌ ಅವರನ್ನು ತಿಹಾರ್ ಜೈಲಿಗೆ ಕಳುಹಿಸಿ ಅಂತ ದೆಹಲಿಗೆ ಹೋದಾಗ ಬಹುಶಃ ಇವರೇ ಅಮಿತ್ ಶಾಗೆ ರಿಕ್ವೆಸ್ಟ್ ಮಾಡಿಕೊಂಡು ಬಂದಿರಬೇಕು. ಇವರ ಗೊಡ್ಡು ಬೆದರಿಕೆಗಳಿಗೆ ಹೆದರುವ ಜಾಯಮಾನ ನಮ್ಮದಲ್ಲ. ಇವರ ದಾಖಲೆಗಳನ್ನು ಬಿಚ್ಚಿಡುವ ಸಮಯ ಬಂದರೆ ನಾವೂ ಸಿದ್ಧ. ಇವರ ಕನಸು ನನಸಾಗುವುದಿಲ್ಲ, ಕನಸು ಕನಸಾಗಿಯೇ ಉಳಿಯುತ್ತದೆ’ ಎಂದು ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಜೆಡಿಎಸ್ ನಾಯಕರು ಎಲ್ಲೋ ಒಂದು ಕಡೆ ಮಾನಸಿಕವಾಗಿ ಕುಗ್ಗಿದ್ದಾರೆ. ಅವರ ಕಾರ್ಯಕರ್ತರನ್ನು ಉಳಿಸಿಕೊಳ್ಳಬೇಕಿದೆ. ಅವರ ಆಲೋಚನೆಗಳೆಲ್ಲ ಒಂದು ಕಡೆ ಕೇಂದ್ರಿಕೃತ ಆದಂತೆ ಕಾಣುತ್ತಿದೆ. ಕಾರ್ಯಕರ್ತರು ಇವರ ನಡೆ ನುಡಿ ನೋಡಿ ಅವರ ದಾರಿಯನ್ನು ಅವರೇ ನೋಡಿಕೊಳ್ಳುತ್ತಿದ್ದಾರೆ. ಎಚ್‌ಡಿಕೆ ಹೇಳುವುದು ಸುಳ್ಳಿನ ಮಹಾ ಭಾಗ. ಸುಳ್ಳಿನಲ್ಲಿ ಎಚ್‌ಡಿಕೆ ಎಕ್ಸ್‌ಪರ್ಟ್” ಎಂದು ಹೇಳಿದ್ದಾರೆ.

ಸಂವಿಧಾನವೇ ನಮ್ಮ ಬೈಬಲ್, ಕುರಾನ್, ಭಗವದ್ಗೀತೆ ; ಡಿಸಿಎಂ ಡಿಕೆಶಿ
“ಕಾಂಗ್ರೆಸ್ ಗೂ ಸಂವಿಧಾನಕ್ಕೂ ಒಂದು ಅವಿನಾಭಾವ ಸಂಬಂಧ. ಹಾಗಾಗಿಯೇ ಕಾಂಗ್ರೆಸ್ ಪಕ್ಷ ಸಂವಿಧಾನದ ಆಶಯಗಳಿಗೆ ಬದ್ದವಾಗಿ ಸದಾ ಹೋರಾಡುತ್ತದೆ. ಆ ಕಾರಣದಿಂದ ಸಂವಿಧಾನವೇ ನಮ್ಮ ಬೈಬಲ್, ಸಂವಿಧಾನವೇ ನಮ್ಮ ಕುರಾನ್, ಸಂವಿಧಾನವೇ ನಮ್ಮ ಭಗವದ್ಗೀತೆ” ಎಂಬುದಾಗಿ ಬೆಂಗಳೂರಿನ ಟೌನ್ ಹಾಲ್ ನಲ್ಲಿ ದಲಿತ ಸಂಘರ್ಷ ಸಮಿತಿ ಆಯೋಜಿಸಿದ್ದ “ಭೀಮ ಸಂಕಲ್ಪ” ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ನನ್ನ ವಿದ್ಯಾರ್ಥಿ ಜೀವನದಿಂದಲೂ ನಾನು ದಲಿತ ಸಂಘರ್ಷ ಸಮಿತಿಯ ಹೋರಾಟವನ್ನು ಹತ್ತಿರದಿಂದ ನೋಡಿಕೊಂಡು ಬಂದಿದ್ದೇನೆ. ನೀವೆಲ್ಲ ಬೀದಿಯಲ್ಲಿ ಹೋರಾಡ್ತಾ ಇದೀರ. ದಸಂಸ ನಾಯಕರು ಸಮಾಜದ ಬದಲಾವಣೆಗೆ ನಿರಂತರವಾಗಿ ಹೋರಾಟ ನಡೆಸುತ್ತಿರುವವರು. ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ದೀಕ್ಷೆ ಉಳಿಸಿಕೊಳ್ಳು ನಿಮ್ಮ ಹೋರಾಟ ಯಶಸ್ವಿಯಾಗಲಿ ಎಂದು ಹೇಳಿದ್ದಾರೆ.

ನಾವು ಒಂದು ಕಾಲದಲ್ಲಿ ಸಂವಿಧಾನ ಪೀಠಿಕೆಯನ್ನು 11 ಸಾವಿರ ಪಂಚಾಯ್ತಿಗಳಲ್ಲಿ ಬೋಧಿಸುವ ಪ್ರತಿಜ್ಞೆ ಕೈಗೊಂಡಿದ್ವಿ. ಬಾಬಾ ಸಾಹೇಬರು ನಮಗೆ ಸಂವಿಧಾನದ ಮೂಲಕ ಗೌರವದ ಬದುಕನ್ನು ತಂದುಕೊಟ್ಟಿದ್ದಾರೆ. ಆ ಮೂಲಕ ನಾವು ಬಾಬಾಸಾಹೇಬರನ್ನು ದೇವರಂತೆ ಕಾಣುತ್ತೇವೆ. ಅಂಬೇಡ್ಕರ್ ಅಂದರೆ ಜ್ಞಾನ, ಅಂಬೇಡ್ಕರ್ ಅಂದರೆ ಸಮಾನತೆ, ಅಂಬೇಡ್ಕರ್ ಎಂದರೆ ಧೈರ್ಯ. ಎಂದು ಹೇಳಿದ್ದಾರೆ.

ಇತಿಹಾಸ ಮರೆತವರು ಇತಿಹಾಸ ಸೃಷ್ಡಿಸಲಾರರು ಎಂದು ಅಂಬೇಡ್ಕರ್ ಹೇಳಿದ್ದಾರೆ. ಇಂದು ಕಾಂಗ್ರೆಸ್ ಅದ್ಯಕ್ಷ ಸ್ಥಾನದಲ್ಲಿ ನಮ್ಮ ರಾಜ್ಯದ ಮಲ್ಲಿಕಾರ್ಜುನ ಖರ್ಗೆಯವರು ಕುಳಿತಿದ್ದಾರೆ. ಅವರಿಗೆ ನೀವು ಗೌರವಿಸಿದ್ದೀರಿ. ಅವರ ನಾಯಕತ್ವದಲ್ಲಿ ಇಡೀ ದೇಶದಲ್ಲಿ ಬದಲಾವಣೆಗೆ ನಾಂದಿ ಹಾಡಿದೆ ಎಂದು ಕಾಂಗ್ರೆಸ್ ಪಕ್ಷದಲ್ಲಿ ದಲಿತರ ಸ್ಥಾನಮಾನದ ಉಲ್ಲೇಖಿಸಿ ಹೇಳಿದ್ದಾರೆ.

ಹಾಗೆಯೇ ‘ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಪರಿಶಿಷ್ಟ ಜಾತಿ ಪಂಗಡ ಸಮುದಾಯಗಳಿಗೆ SCP/TSP ಕಾಯ್ದೆ ಜಾರಿ ಮಾಡಿ ಕಾಂಗ್ರೆಸ್ ಇತಿಹಾಸ ಸೃಷ್ಟಿಸಿದೆ. ಹಾಲಿ ಸರ್ಕಾರದಲ್ಲಿ ಸಹ ದಲಿತ ಸಮಯದಾಯದ ಜನಪ್ರತಿನಿಧಿಗಳು ಮಂತ್ರಿಗಳಾಗಿದ್ದಾರೆ. ನಮ್ಮ ಸರ್ಕಾರ ಒಂದು ಜಾತಿ ಒಂದು ಧರ್ಮ ಎಂದಲ್ಲ, ಮಾನವೀಯತೆಯ ಸಿದ್ದಾಂತದ ಆದಾರದಲ್ಲಿ ಇಡೀ ಸಮಾಜವನ್ನು ಒಂದುಗೂಡಿಸಿಕೊಂಡು ಹೋಗುತ್ತದೆ. ಹಾಗೆಯೇ ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಮುಂದಿಟ್ಟಿರುವ ಹಕ್ಕೊತ್ತಾಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತದೆ ಎಂದು ಈ ಮೂಲಕ ಭರವಸೆ ನೀಡುತ್ತಿದ್ದೇ‌‌ನೆ ಎಂದು ಹೇಳಿದ್ದಾರೆ.

ಅಶಾಂತಿ ಸೃಷ್ಟಿಸುವವರ ಮೇಲೆ ನಿರ್ದಾಕ್ಷಿಣ್ಯ ಕಠಿಣ ಕ್ರಮ ; ಅಧಿಕಾರಿಗಳಿಗೆ ಸಿದ್ದರಾಮಯ್ಯ ಖಡಕ್ ಸೂಚನೆ
ಸಮಾಜದ ಶಾಂತಿ ಸುವ್ಯವಸ್ಥೆ ಹಾಳಾಗದಂತೆ ಎಚ್ಚರಿಕೆ ವಹಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ವಿಭಾಗಗಳ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಮತ್ತು ಸಚಿವರುಗಳನ್ನು ಒಳಗೊಂಡ ಸಭೆಯಲ್ಲಿ ಗೃಹ ಇಲಾಖೆಗೆ ಸಂಬಂಧಿಸಿದ ಪ್ರಮುಖ ಅಧಿಕಾರಿಗಳೊಂದಿಗೆ ಮಾತನಾಡಿ ಸಾಮಾಜಿಕ ಸಾಮರಸ್ಯ ಕದಡದಂತೆ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರಾಜ್ಯದ ಜನ ಹೊಸ ಸರ್ಕಾರಕ್ಕೆ ಅವಕಾಶ ನೀಡಿದ್ದು, ಹಿಂದಿನ ಅವಧಿಯ ಸರ್ಕಾರದ ಆಡಳಿತ ವೈಖರಿಗೆ ಬೇಸತ್ತು. ಹಿಂದಿನ ಅವಧಿಯಂತೆ ಕೆಲಸ ಮಾಡುವುದು ಬಿಟ್ಟು, ಜನರ ನಿರೀಕ್ಷೆಯನ್ನು ಹುಸಿಗೊಳಿಸದಂತೆ ಕೆಲಸ ನಿರ್ವಹಿಸುವುದು ನಿಮ್ಮ ಜವಾಬ್ದಾರಿ. ಅದರಂತೆ, ಸಮಾಜದ ಶಾಂತಿ ಸುವ್ಯವಸ್ಥೆ ಹಾಳುಗೆಡವಲು ಯಾರೇ ಪ್ರಯತ್ನಿಸಿದರೂ ನಿರ್ದಾಕ್ಷಿಣ್ಯವಾಗಿ ಅವರ ಮೇಲೆ ಕ್ರಮ ಜರುಗಿಸಬೇಕೆಂದು ತಿಳಿಸಿದ್ದಾರೆ.

ವಿಶೇಷವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯವನ್ನು ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಸೈಬರ್‌ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಾಗೆಯೇ ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲೂ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಕೆಲವು ಅಗತ್ಯ ಸೂಕ್ಷ್ಮ ಸ್ಥಳಗಳಲ್ಲಿ ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು ಎಂದು ಸೂಚಿಸಿದರು.

ಪೊಲೀಸರು ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ವಿಚಾರವಾಗಿ ಪ್ರತ್ಯೇಕ ಸಭೆ ನಡೆಸಿ ಚರ್ಚಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು ಸಂಚಾರ ದಟ್ಟಣೆ ನಿವಾರಣೆಗೆ ಏನೇನು ಅಗತ್ಯ ಸಲಹೆಗಳನ್ನು ಅಧಿಕಾರಿಗಳಿಂದ ಪಡೆದರು.

ಇನ್ನು ಪೊಲೀಸ್‌ ಠಾಣೆಗೆ ಸಮಸ್ಯೆ ಪರಿಹಾರಕ್ಕಾಗಿ ಬರುವ ಸಾರ್ವಜನಿಕರನ್ನು ಅಪರಾಧಿಗಳಂತೆ ಕಾಣದೆ ಸೌಜನ್ಯದಿಂದ ವರ್ತಿಸಬೇಕು. ಅವರ ಸಮಸ್ಯೆಗಳನ್ನು ಬಗೆಹರಿಸಿ ನ್ಯಾಯ ಒದಗಿಸಬೇಕು ಎಂದು ನಿರ್ದೇಶನ ನೀಡಿದರು. ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್‌ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಗೂಂಡಾಗಿರಿ, ಅನಧಿಕೃತ ಕ್ಲಬ್‌ಗಳ ಚಟುವಟಿಕೆಗಳು, ಡ್ರಗ್‌ ಮಾಫಿಯಾವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇವುಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧವೇ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಕೆ.ಜೆ. ಜಾರ್ಜ್‌, ಕೆ.ಹೆಚ್. ಮುನಿಯಪ್ಪ, ಬಿ.ಝಡ್. ಜಮೀರ್‌ ಅಹ್ಮದ್‌ ಖಾನ್‌, ಎಂ.ಪಿ. ಪಾಟೀಲ್‌, ಸತೀಶ್‌ ಜಾರಕಿಹೊಳಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌ ಉಪಸ್ಥಿತರಿದ್ದರು.

ಸಿದ್ದರಾಮಯ್ಯ, ಡಿಕೆಶಿ ಜಂಟಿ ಪತ್ರಿಕಾಗೋಷ್ಠಿ: ಮೀಸಲಾತಿ ಕುರಿತು ಮಾತುಕತೆ
ಬೆಂಗಳೂರು: ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌ ಅವರು ಇಂದು ಜಂಟಿ ಪತ್ರಿಕಾಗೋಷ್ಠಿನಡೆಸಿ ಮಾತನಾಡಿದರು.

ಸಿದ್ದರಾಮಯ್ಯ ಅವರು, ನಿವೃತ್ತ ನ್ಯಾಯಮೂರ್ತಿ ನಾಗಮೋಹನ ದಾಸ್ ಅವರ ನೇತ್ರತ್ವದ ಆಯೋಗ ನೀಡಿರುವ ವರದಿಯಲ್ಲಿ ಪರಿಶಿಷ್ಟ ವರ್ಗದ ಮೀಸಲಾತಿಯನ್ನು 3% ಇಂದ 7% ಗೆ ಮತ್ತು ಪರಿಶಿಷ್ಟ ಜಾತಿಯ ಮೀಸಲಾತಿಯನ್ನು 15% ಇಂದ 17% ಗೆ ಏರಿಕೆ ಮಾಡಬೇಕು ಎಂದು ಶಿಫಾರಸು ಮಾಡಲಾಗಿದೆ. ಹೀಗೆ ಒಟ್ಟು ಮೀಸಲಾತಿ ಪ್ರಮಾಣ 24% ಗೆ ಏರಿಕೆ ಮಾಡಬೇಕು ಎಂದಿದೆ.

1992ರಲ್ಲಿ ಇಂದಿರಾ ಸಹಾನಿ ಪ್ರಕರಣದಲ್ಲಿ 9 ಮಂದಿ ನ್ಯಾಯಮೂರ್ತಿಗಳ ಪೀಠವು ಮೀಸಲಾತಿ ಪ್ರಮಾಣ 50% ಮೀರುವಂತಿಲ್ಲ ಎಂಬ ತೀರ್ಪು ನೀಡಿದೆ. ಈಗ ನಮ್ಮಲ್ಲಿ ಮೀಸಲಾತಿ ಪ್ರಮಾಣ 50% ಮೀರಿದೆ, ಇದರ ಜೊತೆಗೆ ಆರ್ಥಿಕವಾಗಿ ದುರ್ಬಲರಾಗಿರುವ ಸಾಮಾನ್ಯ ವರ್ಗದ ಜನರಿಗೆ 10% ಮೀಸಲಾತಿ ನೀಡಲಾಗಿದೆ. ಈಗಾಗಲೇ ಮೀಸಲಾತಿ ಪ್ರಮಾಣ 60% ಇದ್ದು, ಇದನ್ನು ಇನ್ನೂ 6% ಹೆಚ್ಚು ಮಾಡುವುದರಿಂದ ಕೋರ್ಟ್‌ ತೀರ್ಪಿನ ಉಲ್ಲಂಘನೆ ಆಗುತ್ತದೆ, ಹೀಗಾಗಿ ಮತ್ತೆ ಮೀಸಲಾತಿ ಹೆಚ್ಚಳ ಮಾಡುವುದಕ್ಕೆ ಕಾನೂನಿನ ರಕ್ಷಣೆ ಸಿಗಬೇಕು ಎಂದಾದರೆ ಸಂವಿಧಾನ ತಿದ್ದುಪಡಿ ಆಗಲೇಬೇಕು, ಸಂವಿಧಾನದ 9ನೇ ಶೆಡ್ಯೂಲ್ ಗೆ ಸೇರಿಸಬೇಕು ಎಂಬುದು ನಮ್ಮ ಒತ್ತಾಯ ಎಂದರು.

ಸರ್ಕಾರ ಸುಗ್ರೀಗಾಜ್ಞೆ ಮೂಲಕ ಮೀಸಲಾತಿ ಹೆಚ್ಚಿಸಲು ಹೊರಟಿದೆ, ಆದರೆ ನಾನು ಒಂದು ವಾರದೊಳಗೆ ಅಧಿವೇಶನ ಕರೆಯಿರಿ, ಅಲ್ಲಿ ಸುಗ್ರೀವಾಜ್ಞೆ ಬದಲು ಒಂದು ಮಸೂದೆಯನ್ನು ಅಂಗೀಕಾರ ಮಾಡೋಣ. ಇದರಿಂದ ಮೀಸಲಾತಿ ಹೆಚ್ಚಳಕ್ಕೆ ಇನ್ನೂ ಹೆಚ್ಚು ಶಕ್ತಿ ಬರುತ್ತದೆ. ಕೇಂದ್ರದಲ್ಲಿ ಬಿಜೆಪಿಯದೇ ಸರ್ಕಾರ ಇರುವುದರಿಂದ ದೆಹಲಿಗೆ ಹೋಗಿ ಪ್ರಯತ್ನ ಮಾಡಿ ಈ ಕಾಯ್ದೆಯನ್ನು 9ನೇ ಶೆಡ್ಯೂಲ್‌ ನಲ್ಲಿ ಸೇರಿಸುವ ಕೆಲಸ ಮಾಡಿ, ಆಗ ನಿಮ್ಮ ಪ್ರಾಮಾಣೀಕತೆ ಒಪ್ಪುವಂತಾಗುತ್ತದೆ ಎಂದು ಹೇಳಿದ್ದೆ.

ಈ ಬಿಜೆಪಿ ಸರ್ಕಾರದ ಬಗ್ಗೆ ನಮಗೆ ಅನುಮಾನ ಯಾಕೆಂದರೆ 2 ವರ್ಷ 3 ತಿಂಗಳು ಸುಮ್ಮನಿದ್ದು, ಈಗ ನಾವೆಲ್ಲ ಒತ್ತಾಯ ಮಾಡಿದ ಮೇಲೆ ಸುಗ್ರೀವಾಜ್ಞೆ ಮೂಲಕ ತರುತ್ತೇವೆ ಎಂದು ಹೊರಟಿದ್ದಾರೆ. ಒಂದು ವಿಶೇಷ ಅಧಿವೇಶನ ಕರೆದರೆ ನಮ್ಮ ಪಕ್ಷ ಸಂಪೂರ್ಣ ಸಹಕಾರಿ ನೀಡಿ ಒಂದೇ ದಿನದಲ್ಲಿ ಮಸೂದೆ ಪಾಸ್‌ ಆಗಲು ಎಲ್ಲ ಸಹಕಾರ ನೀಡಲಿದೆ. ತತ್‌ ಕ್ಷಣ ಇದನ್ನು ಸಂವಿಧಾನದ 9ನೇ ಶೆಡ್ಯೂಲ್‌ ನಲ್ಲಿ ಸೇರಿಸಲು ಕೇಂದ್ರದ ಮೇಲೆ ಒತ್ತಡ ಹಾಕಿ ಎಂಬುದು ನಮ್ಮ ಬೇಡಿಕೆ. ಇದನ್ನು ಬಿಟ್ಟು ಸರ್ಕಾರ ಅಡ್ಡದಾರಿ ಹಿಡಿದಿದ್ದು ಯಾಕೆ?

ಡಿಸೆಂಬರ್‌ ನಲ್ಲಿ ಅಧಿವೇಶನ ಕರೆಯುತ್ತೇವೆ ಎಂದು ಹೇಳಿದ್ದಾರೆ, ಅಲ್ಲಿವರೆಗೆ ಯಾಕೆ ಕಾಯಬೇಕು? ಆಮೇಲೆ ಆಗತ್ತೋ ಇಲ್ಲವೋ ಗೊತ್ತಿಲ್ಲ. ಒಂದು ವಿಶೇಷ ಅಧಿವೇಶನವನ್ನು ಈಗಲೇ ಕರೆಯಬಹುದಲ್ವಾ? ಈಗಾಗಲೇ ಬಹಳಷ್ಟು ಕಾಯ್ದೆಗಳು 9ನೇ ಶೆಡ್ಯೂಲ್‌ ಸೇರಿಯಾಗಿದೆ. ಕರ್ನಾಟಕದ ಭೂಸುಧಾರಣಾ ಕಾಯ್ದೆ ಮತ್ತು ತಮಿಳುನಾಡಿನಲ್ಲಿ ಮೀಸಲಾತಿಯನ್ನು 69% ಗೆ ಹೆಚ್ಚಿಸಿದ್ದು ಕೂಡ 9ನೇ ಶೆಡ್ಯೂಲ್‌ ಸೇರಿದೆ. ಹೀಗಾಗಿ ಇದನ್ನು ಕೂಡಲೇ ಮಾಡಬೇಕು ಎಂಬುದು ನಮ್ಮ ಒತ್ತಾಯಂದರು

ನಾವು ಪರಿಶಿಷ್ಟ ಜಾತಿ ಮತ್ತು ವರ್ಗದ ಜನರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಗಬೇಕು ಎಂಬುದರ ಪರವಾಗಿದ್ದೇವೆ. ಇದನ್ನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇವೆ. ಅಷ್ಟೇ ಅಲ್ಲ ಈ ಮೀಸಲಾತಿ ಹೆಚ್ಚಳಕ್ಕೆ ಕಾನೂನಿನ ರಕ್ಷಣೆಯನ್ನು ನೀಡಬೇಕು ಕೂಡ. ಬರೀ ಬಾಯಿ ಮಾತಲ್ಲಿ ಹೇಳಿ, ಮೊಸಳೆ ಕಣ್ಣೀರು ಸುರಿಸಿದ್ರೆ ಸಾಕಾಗಲ್ಲ, ಇದು ಶಾಸನ ರೂಪದಲ್ಲಿ ಬರಬೇಕು ಎಂದರು.

ರಾಜ್ಯ ಸರ್ಕಾರ ಈಗ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿ ಪ್ರಯತ್ನ ಮಾಡುತ್ತೇವೆ, ಮುಂದೆ ಅಧಿವೇಶನ ಕರೆದ ನಂತರ ಕಾಯ್ದೆ ಮಾಡುತ್ತೇವೆ ಎಂದಿದೆ. ಅದರ ಬದಲು ಸರ್ಕಾರ ಈಗ ಒಂದು ಅಥವಾ ಎರಡು ದಿನದ ವಿಶೇಷ ಅಧಿವೇಶನ ಕರೆಯಲಿ. ಮೀಸಲಾತಿ ಹೆಚ್ಚಳದ ಒಂದು ವಿಚಾರವನ್ನೇ ಚರ್ಚೆ ಮಾಡಿ, ಮೇಲ್ಮನೆ ಮತ್ತು ಕೆಳಮನೆ ಈ ಎರಡೂ ಸದನದಲ್ಲೂ ಶಾಸನ ರಚನೆ ಮಾಡೋಣ. ಇದನ್ನು ಅವಿರೋಧವಾಗಿ ಪಾಸ್ ಮಾಡಲು ನಾವು ಬೆಂಬಲ ನೀಡುತ್ತೇವೆ, ಕಾಂಗ್ರೆಸ್‌ ಪಕ್ಷ ಮೀಸಲಾತಿ‌ ಹೆಚ್ಚಳಕ್ಕೆ ಸಂಪೂರ್ಣ ಬೆಂಬಲ ನೀಡಲಿದೆ ಎಂಬ ಭರವಸೆ ನೀಡಿದರು.

ಬಿಜೆಪಿ ಅವರು ಚುನಾವಣೆ ಇರುವುದರಿಂದ ಜನರ ಕಣ್ಣು ಒರೆಸುವ ತಂತ್ರ ಮಾಡುತ್ತಿದ್ದಾರೆ. ನಾವು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದೇವೆ, ಈಗ ನಮ್ಮ ಕೈಲಿ ಏನು ಇಲ್ಲ ಎಂದು ಜನಗಳಿಗೆ ಹೇಳಿ ತಪ್ಪಿಸಿಕೊಳ್ಳುವ ತಂತ್ರವನ್ನು ಅನುಸರಿಸುತ್ತಿದ್ದಾರೆ.

ಎರಡು ವರ್ಷ ಮೂರು ತಿಂಗಳು ಸರ್ಕಾರ ನಿದ್ದೆ ಮಾಡುತ್ತಾ ಇತ್ತು, ಈಗ ನಮ್ಮವರೆಲ್ಲ ಒತ್ತಾಯ ಮಾಡಿದಮೇಲೆ ಸುಗ್ರೀವಾಜ್ಞೆ ಮೂಲಕ ಜಾರಿ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ, ಇದರ ಬದಲು ಕಾಯ್ದೆ ರೂಪಿಸಿ, ಸಂವಿಧಾನದ 9ನೇ ಶೆಡ್ಯೂಲ್‌ ಗೆ ಸೇರಿಸಲಿ. ಬಿಜೆಪಿಗೆ ಇಚ್ಛಾಶಕ್ತಿ ಇದ್ದರೆ ಈ ಕೆಲಸ ಮಾಡಲಿ ಎಂದು ಸವಾಲು ಹಾಕಿದರು.

ನಮ್ಮ ಪಾದಯಾತ್ರೆ ಖಂಡಿತಾ ಫಲಪ್ರದವಾಗಲಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಈ ಯಾತ್ರೆಯ ಫಲವನ್ನು ಖಂಡಿತಾ ಪಡೆಯಲಿದೆ. ಇಂದು ಜನ ಸ್ವ ಇಚ್ಛೆಯಿಂದ ಸಾವಿರಾರು ಸಂಖ್ಯೆಯಲ್ಲಿ ಬಂದು, ಮಳೆ ಬಿಸಿಲು ಎನ್ನದೆ ರಾಹುಲ್‌ ಗಾಂಧಿ ಅವರ ಜೊತೆ ಹೆಜ್ಜೆ ಹಾಕುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಪೂರ್ಣ ಬಹುಮತ ಪಡೆದು ಗೆಲುವು ಪಡೆಯಲು ಈ ಯಾತ್ರೆ ಸಹಕಾರಿಯಾಗುತ್ತದೆ ಎಂದು ಹೇಳಿದರು.

ಜನರನ್ನು ಮರೆತು ಮಲಗಿರುವ ಸರ್ಕಾರವನ್ನು ನಾವು ಬಡಿದೆಬ್ಬಿಸುತ್ತಿದ್ದೇವೆ: ಡಿಕೆಶಿ
ಬಳ್ಳಾರಿಯ ಮೋಕಾದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು. ಅದರ  ಮುಖ್ಯಾಂಶಗಳು ಇಲ್ಲಿವೆ.

ಕರ್ನಾಟಕ ರಾಜ್ಯದಲ್ಲಿ ಭಾರತ ಐಕ್ಯತಾ ಯಾತ್ರೆಗೆ ಜನ ಮತ್ತು ಮಾಧ್ಯಮಗಳಿಂದ ಉತ್ತಮ ಪ್ರೋತ್ಸಾಹ, ಸಹಕಾರ ಸಿಕ್ಕಿದೆ.

ರಾಜ್ಯದಲ್ಲಿ ಚುನಾವಣೆ ಎದುರಾಗುತ್ತಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನ ಗೆಲ್ಲುವುದಾಗಿ ಹೇಳಿದ್ದೇನೆ. ಬಿಜೆಪಿಯವರು ನಾವು ಬೇರೆಡೆಯಿಂದ ಜನ ಕರೆದುಕೊಂಡು ಬಂದಿದ್ದೇವೆ ಎಂದು ಹೇಳುತ್ತಿದ್ದಾರೆ.

ರಾಜಕಾರಣದಲ್ಲಿ ಜನ ಸಂಘಟನೆ ಮಾಡಬೇಕಾದರೆ, ರಾಷ್ಟ್ರಮಟ್ಟದ ಪಾದಯಾತ್ರೆ ಮಾಡುವಾಗ ಎಲ್ಲರಿಗೂ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಯಾತ್ರೆಯಲ್ಲಿ ಪಕ್ಷಬೇಧ ಮರೆತು ಸಹಸ್ರಾರು ಜನ ಭಾಗವಹಿಸಿದ್ದಾರೆ. ಅವರು ತೋರಿದ ಪ್ರೀತಿ, ವಿಶ್ವಾಸ ಅಪಾರ. ಶ್ರಮ ಇದ್ದಲಿ ಫಲ ಎಂಬುದರಲ್ಲಿ ನಮಗೆ ನಂಬಿಕೆ ಇದೆ.

ರಾಜಕಾರಣದಲ್ಲಿರುವಾಗ ದೇಶದಲ್ಲಿ ಬದಲಾವಣೆ ತಂದು ಸಾಧನೆ ಮಾಡಬೇಕು. ದೇಶ ಒಡೆಯಲಾಗುತ್ತಿದ್ದು, ದ್ವೇಷ, ಆರ್ಥಿಕ ಸಂಕಷ್ಟ, ನಿರುದ್ಯೋಗ, ದುರಾಡಳಿತ ಹೆಚ್ಚಾಗಿದೆ. ಇದರಿಂದ ಬೇಸತ್ತು ಜನ ಹೆಚ್ಚು ಸಂಖ್ಯೆಯಲ್ಲಿ ಈ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದಾರೆ.

ನಾವು ಮಕ್ಕಳನ್ನು ಕರೆತಂದಿಲ್ಲ. ಅವರೇ ಓಡೋಡಿ ಬಂದು ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಅವರ ಭಾವನೆಯನ್ನು ನಾವು ತಡೆಯಲು ಸಾಧ್ಯವೇ? ಮಕ್ಕಳು, ರೈತರು, ಮಹಿಳೆಯರು, ಕಾರ್ಮಿಕರು ಸೇರಿ ಎಲ್ಲ ವರ್ಗದ ಜನರ ಜತೆಗಿನ ರಾಹುಲ್ ಗಾಂಧಿ ಅವರ ಮಾತುಕತೆ ಸಂದರ್ಭ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದೆ.

ರಾಹುಲ್ ಗಾಂಧಿ ಅವರು ಕೇವಲ ಒಂದು ಮಗು, ಒಬ್ಬ ಯುವಕ, ಒಬ್ಬ ರೈತ, ಕಾರ್ಮಿಕ, ಮಹಿಳೆ ಜತೆ ಮಾತನಾಡಿದ್ದಲ್ಲ. ಎಲ್ಲ ವರ್ಗದ ಜನ ಸಮೂಹದ ಜತೆ ಮಾತುಕತೆ ನಡೆಸಿದ್ದಾರೆ. ಅವರ ನೋವು, ಕಷ್ಟ, ಭಾವನೆ ಅರಿತು, ಮುಂದೆ ಜನ ಆಶೀರ್ವಾದ ಮಾಡಿದಾಗ ಅವರಿಗೆ ಸರಿಯಾದ ರೀತಿಯಲ್ಲಿ ಪರಿಹಾರ ನೀಡುವ ಚಿಂತನೆ ಅವರದಾಗಿದೆ.

ಇಂದು ಬಳ್ಳಾರಿಯಲ್ಲಿ ಯಾತ್ರೆ ಮುಕ್ತಾಯವಾಗಿದ್ದು, ನಾಳೆ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಇದೆ. ಸಂಸದ ಡಿ ಕೆ ಸುರೇಶ್, ಉಗ್ರಪ್ಪ, ಶಾಸಕ ನಾಗೇಂದ್ರ ಸೇರಿದಂತೆ ಕೆಲವು ನಾಯಕರನ್ನು ಯಾತ್ರಿಗಳು ಎಂದು ಪರಿಗಣಿಸಿ, ಅವರಿಗೆ ಇಲ್ಲೇ ಮತ ಚಲಾಯಿಸುವ ಅವಕಾಶ ನೀಡಬೇಕು ಎಂದು ಮನವಿ ಮಾಡಲಾಗಿದೆ. ಉಳಿದವರು ಬೆಂಗಳೂರಿನಲ್ಲಿ ಮತ ಚಲಾಯಿಸಲಿದ್ದಾರೆ. ನಮ್ಮ ರಾಜ್ಯದವರೇ ಅಭ್ಯರ್ಥಿಯಾಗಿದ್ದು, ಎಲ್ಲರೂ ಚುನಾವಣೆಯಲ್ಲಿ ಉತ್ಸುಕರಾಗಿ ಭಾಗವಹಿಸಲಿದ್ದಾರೆ. ಗಾಂಧಿ ಕುಟುಂಬ ಈ ಚುನಾವಣೆಯಲ್ಲಿ ಯಾವುದೇ ಹಸ್ತಕ್ಷೇಪ ಮಾಡದೆ ಪಕ್ಷದವರಿಗೆ ಸಂಪೂರ್ಣ ಜವಾಬ್ದಾರಿ ನೀಡಿದ್ದು, ಈ ಚುನಾವಣೆ ಪಾರದರ್ಶಕವಾಗಿ ನಡೆಯುತ್ತಿದೆ.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಭಾರತ ಐಕ್ಯತಾ ಯಾತ್ರೆ ಬಗ್ಗೆ ಮಾಡಿರುವ ಟೀಕೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ ಬಿಜೆಪಿ ಜನ ಸ್ಪಂದನ ಸಮಾವೇಶ ಮಾಡಿತು. ಹಾಗಾದರೆ ಅವರು ಇಷ್ಟು ದಿನ ಜನರಿಗೆ ಸ್ಪಂದಿಸಿರಲಿಲ್ಲವೆ? ಅವರು ಅಧಿಕಾರದಲ್ಲಿದ್ದಾಗ ಜನರ ಮಧ್ಯೆ ಇದ್ದು, ಅವರ ಕಷ್ಟಕ್ಕೆ ಸ್ಪಂದಿಸಲಿಲ್ಲವೆ? ನೀವು ನಿಮ್ಮ ಅಧಿಕಾರ ಅವಧಿಯಲ್ಲಿ ಏನು ಸಾಧನೆ ಮಾಡಿದ್ದೀರಿ ಎಂದು ಹೇಳುವ ಬದಲು ಬೇಕಾಬಿಟ್ಟಿ ಹೇಳಿಕೆ, ಜಾಹೀರಾತು ನೀಡುತ್ತಿದ್ದೀರಿ. ಈಗ ಜನ ಸಂಕಲ್ಪ ಮಾಡುತ್ತಿದ್ದಾರೆ. ಭ್ರಷ್ಟ ಬಿಜೆಪಿ ಸರ್ಕಾರ ಕಿತ್ತೊಗೆಯಲು, ಕಾಂಗ್ರೆಸ್ ಪಕ್ಷಕ್ಕೆ 150 ಸ್ಥಾನ ಕೊಡಲು ಜನ ಈಗಾಗಲೇ ಸಂಕಲ್ಪ ಮಾಡಿದ್ದಾರೆ. ಈ ಯಾತ್ರೆಯಲ್ಲಿ ಜನ ನೀಡುತ್ತಿರುವ ಬೆಂಬಲ ನೋಡಿದರೆ ಕಾಂಗ್ರೆಸ್ 150 ಸ್ಥಾನ ಗೆಲ್ಲುವುದು ಖಚಿತ ‘ ಎಂದು ಉತ್ತರಿಸಿದರು.

ಕಾಂಗ್ರೆಸ್ ಭಾರತ ಜೋಡೋ ಬದಲು, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಅವರ ಜೋಡೋ ಮಾಡಲಿ ಎಂಬ ಬಿಜೆಪಿ ಲೇವಡಿ ಬಗ್ಗೆ ಕೇಳಿದಾಗ, ‘ನಮ್ಮಿಬ್ಬರನ್ನು ನೆನಪಿಸಿಕೊಳ್ಳದಿದ್ದರೆ ಅವರಿಗೆ ಸಮಾಧಾನ ಆಗುವುದಿಲ್ಲ. ಬೆಳಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೆ ಅವರು ನಮ್ಮನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಬಹಳ ಸಂತೋಷ’ ಎಂದು ಕುಟುಕಿದರು.

ರಾಹುಲ್ ಗಾಂಧಿ ಅವರನ್ನು ಬಚ್ಚಾ ಎಂದು ಕರೆದಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಯಡಿಯೂರಪ್ಪ, ಯತ್ನಾಳ್, ಶ್ರೀರಾಮುಲು ಸೇರಿದಂತೆ ಯಾರು ಬೇಕಾದರೂ ರಾಹುಲ್ ಗಾಂಧಿ ಅವರ ಬಗ್ಗೆ ಮಾತನಾಡಲಿ. ಆದರೆ ಚಡ್ಡಿ ಹಾಕಿರುವ ಬಚ್ಚಾ ಮುಂದೆ ಪ್ಯಾಂಟು ಧರಿಸಿ, ಪಂಚೆ ಕಚ್ಚೆ ಕಟ್ಟಿ, ಕೆಲಸ ಮಾಡುತ್ತಿರುವವರನ್ನು ಜನ ಗಮನಿಸುತ್ತಿದ್ದಾರೆ. ಅವರ ವಯಸ್ಸಿನ ಮುಂದೆ, ಅವರ ಹಿರಿತನದ ಮುಂದೆ ನಾವು ಬಚ್ಚಾಗಳೇ. ಯಡಿಯೂರಪ್ಪ ಅವರನ್ನು ಯಾಕೆ ಅಧಿಕಾರದಿಂದ ತೆಗೆದಿರಿ ಎಂದು ರಾಹುಲ್ ಗಾಂಧಿ ಅವರು ಗೌರವಯುತವಾಗಿ ಕೇಳಿದ್ದಾರೆ. ಯಡಿಯೂರಪ್ಪ ಅವರು ಅದನ್ನು ಅರಿಯಬೇಕು ‘ ಎಂದರು.

ಕಾಂಗ್ರೆಸ್ ಪಕ್ಷ ಮುಂದೆ ಮಾಡಲಿರುವ ಬಸ್ ಯಾತ್ರೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ರಾಜ್ಯದ ಎಲ್ಲ ಕ್ಷೇತ್ರಗಳನ್ನೂ ಮುಟ್ಟಬೇಕು ಎಂಬ ಕಾರಣಕ್ಕೆ ನಾನು, ಸಿದ್ದರಾಮಯ್ಯ ಅವರು ಹಾಗೂ ಎಐಸಿಸಿ ನಾಯಕರು ಕೂತು ಚರ್ಚಿಸಿ ಈ ಬಗ್ಗೆ ತೀರ್ಮಾನ ಮಾಡಿದ್ದೇವೆ. ಮುಂದೆ ಈ ಬಗ್ಗೆ ಮಾಹಿತಿ ನೀಡುತ್ತೇವೆ’ ಎಂದರು.

ಕಾಂಗ್ರೆಸ್ ತಂತ್ರಗಳನ್ನು ಬಿಜೆಪಿ ನಕಲು ಮಾಡುತ್ತಿದೆಯೇ ಎಂಬ ಪ್ರಶ್ನೆಗೆ, ‘ಜನರನ್ನು ಮರೆತು ಮಲಗಿರುವ ಸರ್ಕಾರವನ್ನು ನಾವು ಬಡಿದೆಬ್ಬಿಸುತ್ತಿದ್ದೇವೆ’ ಎಂದರು.

ಈ ಯಾತ್ರೆ ಯಶಸ್ಸು ಆಗಿದೆಯೇ ಎಂದು ಕೇಳಿದಾಗ, ‘ಈ ಯಾತ್ರೆ ನೋಡಿ ನಿಮಗೆ ಏನು ಅನಿಸುತ್ತಿದೆ? ನಿಮ್ಮ ಕ್ಯಾಮೆರಾ, ನಿಮ್ಮ ಸಂದರ್ಶನ, ವಿಶ್ಲೇಷಣೆ ಏನು ಹೇಳುತ್ತಿದೆ? ನಮ್ಮ ಯಾತ್ರೆ ಜನರ ಕಷ್ಟಕ್ಕೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಎಲ್ಲರೂ ಅಭಿಪ್ರಾಯ ಪಟ್ಟಿದ್ದಾರೆ. ಈ ಯಾತ್ರೆ ಯಶಸ್ಸಿನ ಶ್ರೇಯ ಪಕ್ಷದ ಎಲ್ಲ ನಾಯಕರು, ಕಾರ್ಯಕರ್ತರಿಗೆ ಸಲ್ಲಬೇಕು’ ಎಂದರು.

ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಬಗ್ಗೆ ಕೇಳಿದಾಗ, ‘ಈ ಬಗ್ಗೆ ಮಾಧ್ಯಮಗಳಲ್ಲಿ ಮಾತನಾಡುವುದಿಲ್ಲ. ಮತದಾರರ ಬಳಿ ನೇರವಾಗಿ ಮಾತನಾಡುತ್ತೇನೆ. ನನ್ನನ್ನು ಸಿಲುಕಿಸುವ ಪ್ರಯತ್ನ ಮಾಡಬೇಡಿ ‘ ಎಂದರು.

ಸೋನಿಯಾ ಗಾಂಧಿ ಅವರು ರಾಜ್ಯಕ್ಕೆ ಬಂದರೂ ಮಾತನಾಡಲಿಲ್ಲ ಎಂಬ ಪ್ರಶ್ನೆಗೆ, ‘ಮೋದಿ ಅವರು ಎಂದಾದರೂ ಪತ್ರಿಕಾಗೋಷ್ಠಿ ನಡೆಸಿದ್ದಾರಾ? ರಾಹುಲ್ ಗಾಂಧಿ ಅವರು ಎಲ್ಲೆಡೆ ಮಾತನಾಡುತ್ತಿದ್ದಾರಲ್ಲಾ’ ಎಂದರು.

ಪ್ರಿಯಾಂಕಾ ಗಾಂಧಿ ಅವರ ಆಗಮನದ ಬಗ್ಗೆ ಕೇಳಿದಾಗ, ‘ಅವರು ಸಿಮ್ಲಾ ಚುನಾವಣಾ ಪ್ರಚಾರದಲ್ಲಿದ್ದಾರೆ. ಇಂದು ದೆಹಲಿಗೆ ಹೋಗಿದ್ದು, ರಾಜ್ಯದಲ್ಲಿ ಇನ್ನೂ ಎರಡು ದಿನ ಯಾತ್ರೆ ಬಾಕಿ ಇದೆ. ಅವರ ಭಾಗವಹಿಸುವಿಕೆ ಬಗ್ಗೆ ಶೀಘ್ರದಲ್ಲಿ ತಿಳಿಸುತ್ತೇನೆ ಎಂದರು.

ಬಳ್ಳಾರಿಯಲ್ಲಿ ಸಮಾವೇಶ ಮಾಡಲು ಕಾರಣ ಏನು ಎಂಬ ಪ್ರಶ್ನೆಗೆ, ‘ಈ ಯಾತ್ರೆ ಸುದೀರ್ಘವಾಗಿ ನಡೆದು, ಒಂದಷ್ಟು ಅನುಭವ ಪಡೆದ ನಂತರ ಸಮಾವೇಶ ಮಾಡಲು ತೀರ್ಮಾನ ಮಾಡಲಾಗಿತ್ತು. ಹೀಗಾಗಿ 20 ದಿನಗಳ ಯಾತ್ರೆ ನಂತರ ಬಳ್ಳಾರಿಯಲ್ಲಿ ಮಾಡಿದ್ದೇವೆ. ರಾಯಚೂರಿನಲ್ಲಿ ಮಾಡುವ ಚರ್ಚೆ ನಡೆಯಿತು. ಅಲ್ಲಿ ತೆಲಂಗಾಣ ರಾಜ್ಯದವರೂ ಆಗಮಿಸುವುದಾಗಿ ಹೇಳಿದ್ದರು. ಆದರೆ ನಾವು ಅದನ್ನು ಒಪ್ಪದೇ ಬಳ್ಳಾರಿಯಲ್ಲಿ ಮಾಡಿದ್ದೇವೆ’ ಎಂದರು.

ಈ ಯಾತ್ರೆ ನಂತರ ರಾಜ್ಯದಲ್ಲಿ ನಾಯಕತ್ವಕ್ಕೆ ಬಲ ಬಂದಿದೆಯೇ ಎಂಬ ಪ್ರಶ್ನೆಗೆ, ‘ಪಕ್ಷಕ್ಕೆ ಶಕ್ತಿ ಬಂದಿದ್ದು, ನನ್ನ ಆರೋಗ್ಯ ಗಟ್ಟಿಯಾಗಿದೆ. ನನ್ನ ಅನುಭವ ಹೆಚ್ಚಾಯ್ತು. ನಾನು ರಾಜ್ಯ ಹಾಗೂ ಬೇರೆ ರಾಜ್ಯಗಳಲ್ಲೂ ಇಂತಹ ಹಲವು ಸಂಘಟನೆ ಮಾಡಿದ್ದೇನೆ. ನಮ್ಮ ರಾಜ್ಯದಲ್ಲಿ ಯಾತ್ರೆ ಮಾಡಿದ್ದೇನೆ. ಮೇಕೆದಾಟು ಯಾತ್ರೆ, ಸ್ವಾತಂತ್ರ್ಯ ನಡಿಗೆ ನೋಡಿದ್ದೀರಿ. ಜತೆಗೂಡುವುದು ಆರಂಭ, ಜತೆಗೂಡಿ ಯೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂಬಂತೆ ಎಲ್ಲ ಕಾರ್ಯಕರ್ತರ, ನಾಯಕರನ್ನು ಸೇರಿಸಿ ಈ ಕಾರ್ಯಕ್ರಮ ಮಾಡಲಾಗಿದೆ’ ಎಂದರು.

ಆರು ತಿಂಗಳ ಮುಂಚಿತವಾಗಿ ಚುನಾವಣೆ ಅಭ್ಯರ್ಥಿ ಘೋಷಣೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ನಾವು ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಅಂತಿಮ ಘಟ್ಟಕ್ಕೆ ತಲುಪಿದ್ದು, ಯಾತ್ರೆ ಮುಗಿದ ನಂತರ ಮಾತನಾಡುತ್ತೇನೆ. ಯಾರ ಶಕ್ತಿ ಏನು ಎಂದು ನೋಡಿದ್ದೇವೆ. ಪಾದಯಾತ್ರೆಗೆ ಶ್ರಮಿಸುವವರು, ಜನರ ಬಳಿ ಕೆಲಸ ಮಾಡಿರುವವರು, ಜನರ ಪ್ರೀತಿ ವಿಶ್ವಾಸ ಉಳಿಸಿಕೊಂಡಿರುವವರನ್ನು ಗಮನದಲ್ಲಿ ಇಟ್ಟುಕೊಂಡಿದ್ದೇವೆ’ ಎಂದರು.

ಭಾರತ್ ಐಕ್ಯತಾ ಯಾತ್ರೆಯಲ್ಲಿ ಮುಲಾಯಂ ಸಿಂಗ್ ಯಾದವ್ ಗೆ ಸಂತಾಪ
ತುಮಕೂರು: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಸಂಸ್ಥಾಪಕ, ಕೇಂದ್ರದ ಮಾಜಿ ಸಚಿವ ಮುಲಾಯಂ ಸಿಂಗ್ ಯಾದವ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

ಮುಲಾಯಂ ಸಿಂಗ್ ಯಾದವ್ ಅವರು ಒಬ್ಬ ಹುಟ್ಟು ಹೋರಾಟಗಾರ. ಜಾತ್ಯತೀತ ಸಿದ್ಧಾಂತದ ಮೇಲೆ ನಂಬಿಕೆ ಇಟ್ಟು, ಶೋಷಿತರ ಏಳಿಗೆಗಾಗಿ ತಮ್ಮ ಇಡೀ ಜೀವನವನ್ನೇ ಮುಡಿಪಿಟ್ಟರು. ಸಾಮಾನ್ಯ ಹಿನ್ನೆಲೆಯಿಂದ ಬಂದು ದೇಶದ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸುವ ಮಟ್ಟಿಗೆ ಬೆಳೆದು ನಿಂತ ನಾಯಕ ಮುಲಾಯಂ ಸಿಂಗ್ ಯಾದವ್ ಅವರು.

ಅವರು ಬೇರೆ ರಾಜಕೀಯ ಪಕ್ಷಗಳ ನಾಯಕರ ಜತೆ ಉತ್ತಮ ಬಾಂಧವ್ಯ ಹಾಗೂ ಗೌರವ ಸಂಪಾದಿಸಿದ್ದು, ಅವರ ವ್ಯಕ್ತಿತ್ವಕ್ಕೆ ಸಾಕ್ಷಿಯಾಗಿದೆ. ಸಮಾಜವಾದಿ ಚಿಂತನೆಗಳ ಪರ ನಿಂತಿದ್ದ ಧೀಮಂತ ನಾಯಕನ ಅಗಲಿಕೆ ಇಡೀ ದೇಶಕ್ಕೆ ತುಂಬಲಾರದ ನಷ್ಟ.

ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿ ಅವರ ಕುಟುಂಬ ಸದಸ್ಯರು, ಮಿತ್ರರು ಹಾಗೂ ಅಭಿಮಾನಿಗಳಿಗೆ ಕರುಣಿಸಲಿ ಎಂದು ಆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.