dkshivkumar – Peepal Media

ಬಂಡೆ ಅಂದ್ರೆ ಪ್ರಕೃತಿ, ಪೂಜಿಸಿದರೆ ಸಂಸ್ಕೃತಿ, ವಿರುದ್ದ ನಿಂತುಕೊಂಡರೆ ನಾಶ: ಕನಪುರ ಬಂಡೆ ಡಿಕೆಶಿ ಡೈಲಾಗ್‌
ಮೈಸೂರು: ನನ್ನನ್ನು ಕನಕಪುರ ಬಂಡೆ ಅಂತಾರೆ. ಈ ಬಂಡೆ ಯಾವಾಗಲೂ ಸಿದ್ದರಾಮಯ್ಯನವರಿಗೆ ಸದಾ ಬೆನ್ನೆಲುಬಾಗಿ ನಿಲ್ಲಲಿದೆ ಎಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಮುಂದುವರೆದು ಕಲ್ಲುಬಂಡೆ ಅಂದ್ರೆ ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ, ವಿರುದ್ದ ನಿಂತುಕೊಂಡರೆ ನಾಶ” ಎಂದು ತಮ್ಮ ವಿರೋಧಿಗಳನ್ನು ಕುರಿತು ಮಾರ್ಮಿಕವಾಗಿ ನುಡಿದರು.

ಶುಕ್ರವಾರ ಮೈಸೂರಿನಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಪಕ್ಷದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು “ಹಿಂದುಳಿದ ಸಮುದಾಯದ ಸಿದ್ದರಾಮಯ್ಯನವರು ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿರುವುದು ಬಿಜೆಪಿ ಮತ್ತು ಜೆಡಿಎಸ್‌ನವರಿಗೆ ಸಹಿಸಲಾಗುತ್ತಿಲ್ಲ. ಅದಕ್ಕೆ ಅವರನ್ನು ಮುಡಾ ಹಗರಣದಲ್ಲಿ ಸಿಕ್ಕಿ ಹಾಕಿಸಿ ಅಧಿಕಾರದಿಂದ ಕೆಳಗಿಳಿಸುವ ಹುನ್ನಾರ ಮಾಡಿದ್ದಾರೆ. ಈ ಕನಕಪುರದ ಬಂಡೆ ಸಿಎಂ ಜೊತೆ ಸದಾ ಇರಲಿದೆ ಎಂಬುದನ್ನು ಮರೆಯದಿರಿ ಎಂದು ಎಚ್ಚರಿಕೆ ನೀಡಿದರು.

“ಮಾತಿಗಿಂತ ಕೃತಿ ಮೇಲು ಎಂದು ನಂಬಿದವರು ನಾವು. ನುಡಿದಂತೆ ನಡೆದಿದ್ದೇವೆ. ಬಡ ಜನರಿಗಾಗಿ ಶ್ರಮಿಸಿದ್ದೇವೆ. ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಇದನ್ನು ಸಹಿಸಲಾಗದೆ ಸಿದ್ದರಾಮವ್ಯಕ್ಯ್ಯ ಅವರನ್ನು ಮುಡಾ ಪ್ರಕರಣದಲ್ಲಿ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಮುಡಾ ಸೈಟ್ ಯಾರ ಆಡಳಿತಾವಧಿಯಲ್ಲಿ ನೀಡಲಾಗಿದೆ? ಬಿಜೆಪಿ ಅವಧಿಯಲ್ಲೇ ಆಗಿದೆ. ಆಗ ಎಲ್ಲಿಗೆ ಹೋಗಿತ್ತು ಹಗರಣ ವಿಚಾರ?” ಎಂದು ಡಿಸಿಎಂ ಪ್ರಶ್ನಿಸಿದರು.

ವಿಜಯೇಂದ್ರ ಅಂದ್ರೆ ಭ್ರಷ್ಟಾಚಾರ: “ಕುಮಾರಸ್ವಾಮಿ ನಂಬಿದವರನ್ನು ಮುಗಿಸುತ್ತಾರೆ. ಅವರು ಮಾಡಿರುವ ಹಗರಣಗಳನ್ನು ಬಯಲು ಮಾಡಿದ್ದೇನೆ, ಮುಂದೆ ಮಾಡುತ್ತೇನೆ. ವಿಜಯೇಂದ್ರ ಕೊರೋನಾ ಸಮಯದಲ್ಲಿ ಬಡವರ ಹಣ ತಿಂದಿದ್ದಾರೆ. ಇಂತಹ ಭ್ರಷ್ಟರನ್ನು ಬಿಜೆಪಿ ಅಧ್ಯಕ್ಷರಾಗಿ ಮುಂದುವರೆಸಬೇಕಾ? ವಿಜಯೇಂದ್ರ ಅಂದ್ರೆ ಭ್ರಷ್ಟಾಚಾರ” ಎಂದು ಆರೋಪಿಸಿದರು.

ನಮ್ಮ ಸರ್ಕಾರವನ್ನು ಉರುಳಿಸುವ, ನಾವು ಜನರಿಗೆ ಕೊಟ್ಟಿರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹುನ್ನಾರ ನಡೆಯುತ್ತಿದೆ. ಗ್ಯಾರಂಟಿ ಯೋಜನೆಗಳ ರಕ್ಷಣೆಗೋಸ್ಕರ ಈ ಜನಾಂದೋಲನ ಆಯೋಜಿಸಿದ್ದೇವೆ” ಎಂದು ಹೇಳಿದರು.

“ಮಿಸ್ಟರ್ ಕುಮಾರಸ್ವಾಮಿ..ಮಿಸ್ಟರ್ ಆಶೋಕಾ..ಮಿಸ್ಟರ್ ವಿಜಯೇಂದ್ರ..ನೀವು ಆಪರೇಶನ್ ಮಾಡಿ ಅನೇಕ ಸರ್ಕಾರಗಳನ್ನು ತೆಗೆದು ಹಾಕಿದ್ದೀರಿ. ಕುಮಾರಸ್ವಾಮಿ ನಿಮ್ಮ ಮುಖಂಡತ್ವದಲ್ಲಿ 19 ಸೀಟ್ ಮಾತ್ರ ಗೆಲ್ಲಲು ಸಾಧ್ಯವಾಗಿದೆ.  ಈ ಡಿ.ಕೆ ಶಿವಕುಮಾರ್ ಮುಖಂಡತ್ವದಲ್ಲಿ 136 ಸೀಟ್ ಗೆದ್ದಿದೆ. ಬ್ರಿಟಿಷರು 200 ವರ್ಷ ಆಳಿದ್ರೂ ಕೂಡ ಕಾಂಗ್ರೆಸ್ ತೆಗೆದು ಹಾಕಲು ಆಗಿಲ್ಲ. ನಿಮ್ಮಿಂದ ರಾಜಿನಾಮೆ ಪಡೆಯಲು ಸಾಧ್ಯವೇ ಎಂದು ಆಕ್ರೋಶವ್ಯಕ್ತಪಡಿಸಿದರು.

ಡಿ.ಕೆ.ಶಿವಕುಮಾರ್ ಮೇಲಿನ ಸಿಬಿಐ ತನಿಖೆ ವಾಪಸ್ : ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್
ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ಅಡಿಯಲ್ಲಿ ಡಿ.ಕೆ.ಶಿವಕುಮಾರ್ ಮೇಲಿದ್ದ ಪ್ರಕರಣ ಹಿಂಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣದ ತನಿಖೆ ಮುಂದುವರೆಸಬೇಕು ಎಂದು ಯತ್ನಾಳ್ ಪಟ್ಟು ಹಿಡಿದಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಅಡಿಯಲ್ಲಿ ಅಂದಿನ ಸರ್ಕಾರ ಸಿಬಿಐ ತನಿಖೆಗೆ ವಹಿಸಿತ್ತು. ಕಳೆದ ಕೆಲವು ದಿನಗಳ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಈ ಪ್ರಕರಣವನ್ನು ಹಿಂಪಡೆಯಲು ನಿರ್ಣಯಿಸಿದೆ.

ಈ ಸಂಬಂಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ತಾವು ಸರ್ಕಾರದ ಕ್ರಮವನ್ನು ಕೋರ್ಟ್ ನಲ್ಲಿ ಪ್ರಶ್ನಿಸೋದಾಗಿಯೂ ತಿಳಿಸಿದ್ದರು. ಅದರಂತೆ ಈಗ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಸಿಬಿಐ ತನಿಖೆಗೆ ಒಪ್ಪಿಗೆ ಹಿಂಪಡೆದ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ರಾಜ್ಯ ಸರ್ಕಾರದ ನಿರ್ಧಾರ ಕ್ರಮವಾಗಿಲ್ಲ ಎಂದು ಸೂಚಿಸಿ ಹೈಕೋರ್ಟ್ ಗೆ ಪ್ರಕರಣದ ತನಿಖೆ ಮುಂದುವರೆಸುವಂತೆ ಅರ್ಜಿ ಸಲ್ಲಿಸಿದ್ದಾರೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐಗೆ ನೀಡಲಾಗಿದ್ದಂತ ಡಿ.ಕೆ ಶಿವಕುಮಾರ್ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮವದ ಬಗ್ಗೆ ಸೂಕ್ತ ನಿರ್ದೇಶವನ್ನು ಸರ್ಕಾರಕ್ಕೆ ನೀಡುವಂತೆ ಕೋರಿದ್ದಾರೆ. ಈ ಮೂಲಕ ಡಿಕೆ ಶಿವಕುಮಾರ್ ಗೆ ಬಿಗ್ ಶಾಕ್ ಅನ್ನು ನೀಡಿದ್ದಾರೆ.

ವಿದ್ಯುತ್ ಕಳ್ಳತನ ಒಪ್ಪಿಕೊಂಡ ಕುಮಾರಸ್ವಾಮಿಗೆ ಅಭಿನಂದನೆ: ಡಿಸಿಎಂ ಡಿ.ಕೆ.ಶಿವಕುಮಾರ್
“ಅಚಾತುರ್ಯವೋ, ಕಳ್ಳತನವೋ ಒಟ್ಟಿನಲ್ಲಿ ವಿದ್ಯುತ್ ಕಳ್ಳತನದ ಬಗ್ಗೆ ಕುಮಾರಸ್ವಾಮಿ ಅವರು ಒಪ್ಪಿಕೊಂಡು, ದಂಡ ಕಟ್ಟುತ್ತೇನೆ ಎಂದು ಹೇಳಿರುವುದು ಅಭಿನಂದನೀಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

“ಕುಮಾರಸ್ವಾಮಿ ಅವರು ಮನೆಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಮಾಡಿಕೊಂಡಿದ್ದಾರೆ” ಎಂಬ ಬಗ್ಗೆ ಮಾಧ್ಯಮಗಳ ವರದಿ ಹಾಗೂ ಕಾಂಗ್ರೆಸ್ ಪಕ್ಷದ ‘ಎಕ್ಸ್’ ಖಾತೆಯಲ್ಲಿ ಮಾಡಿರುವ ಆರೋಪ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ವಿಧಾನಸೌಧ ಹಾಗೂ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಬಳಿ ಡಿಸಿಎಂ ಡಿ‌.ಕೆ.ಶಿವಕುಮಾರ್ ಅವರು ಮಂಗಳವಾರ ಈ ರೀತಿ ಉತ್ತರಿಸಿದರು.

“ಕುಮಾರಸ್ವಾಮಿ ಮನೆಗೆ ವಿದ್ಯುತ್ ಕಳವು ವಿಚಾರವನ್ನು ಮಾಧ್ಯಮಗಳಲ್ಲಿ ಗಮನಿಸಿದೆ. ಅವರ ನೆರೆಹೊರೆಯವರೇ ಅಕ್ರಮ ವಿದ್ಯುತ್ ಸಂಪರ್ಕದ ವಿಡಿಯೋ ಮಾಡಿ ಮಾಧ್ಯಮಗಳಿಗೆ ನೀಡಿದ್ದಾರೆ. ಆನಂತರ ನಮ್ಮ ಪಕ್ಷದ ಸಾಮಾಜಿಕ ಜಾಲತಾಣ ಘಟಕ ಏನು ಕೆಲಸ ಮಾಡಬೇಕೊ ಅದನ್ನು ಮಾಡಿದೆ. ಅವರ ಪಕ್ಷದ ಸೋಶಿಯಲ್ ಮೀಡಿಯಾದಲ್ಲಿ ಬೇಕಾದಷ್ಟು ಬರೆದಂತೆ, ನಮ್ಮ ಪಕ್ಷದವರು ಏನು ಕೆಲಸ ಮಾಡಬೇಕೋ ಅದನ್ನು ಮಾಡಿದ್ದಾರೆ. ಅವರು ಮಾಡೋದನ್ನು ನೋಡಿಕೊಂಡು ಸುಮ್ಮನೆ ಕುಳಿತುಕೊಳ್ಳಲು ಆಗುತ್ತದೆಯೇ?” ಎಂದು ಮರುಪ್ರಶ್ನಿಸಿದರು.

ಸರ್ಕಾರ ಮಧ್ಯೆ ಪ್ರವೇಶ ಮಾಡುವುದಿಲ್ಲ

ಕುಮಾರಸ್ವಾಮಿ ಅವರು ಈ ರೀತಿಯ ಕೆಲಸ ಮಾಡಿರುವುದು ತಪ್ಪಲ್ಲವೇ ಎಂದು ಕೇಳಿದಾಗ, “ವಿದ್ಯುತ್ ಕಳ್ಳತನ ಮಾಡಬಾರದು, ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ನಮ್ಮಂತವವರೇ ಹೀಗೆ ಕಳವು ಮಾಡಿದರೆ ತಪ್ಪಲ್ಲವೇ? ಸಂಬಂಧಿಸಿದ ಇಲಾಖೆಯವರು ಏನು ಕ್ರಮ ತೆಗೆದುಕೊಳ್ಳುತ್ತಾರೋ ನೋಡೋಣ. ಈ ವಿಚಾರವಾಗಿ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ, ನಮಗೆ ಅದರ ಅವಶ್ಯಕತೆಯೂ ಇಲ್ಲ ಮತ್ತು ಸಮಯವೂ ಇಲ್ಲ. ಬೆಸ್ಕಾಂನವರು ಕ್ರಮ ತೆಗೆದುಕೊಳ್ಳುತ್ತಾರೆ” ಎಂದರು.

ಕುಮಾರಸ್ವಾಮಿ ಅವರು ಸತ್ಯವನ್ನು ಒಪ್ಪಿಕೊಂಡಿರುವುದಕ್ಕೆ ಶುಭವಾಗಲಿ, ಸತ್ಯಮೇವ ಜಯತೇ ಎನ್ನುವ ಮಾತಿನಂತೆ ಸತ್ಯವನ್ನ ಎತ್ತಿ ಹಿಡಿದಿರುವುದಕ್ಕೆ ಸಂತೋಷ ಎಂದು ಹೇಳಿದರು.

ದೇವೇಗೌಡರ ಮೌಲ್ಯ, ಜಾತಿ ಕೆಡಿಸಿದ ಕುಮಾರಸ್ವಾಮಿ

“ಕುಮಾರಸ್ವಾಮಿ ಅವರು ದೇವೇಗೌಡರ ಕೊನೆಗಾಲದಲ್ಲಿ ಅವರ ಜಾತಿ ಕೆಡಿಸಿದ್ದಾರೆ. ದೇವೇಗೌಡರು ಜೀವನದ ಉದ್ದಕ್ಕೂ ಕಾಪಾಡಿಕೊಂಡು ಬಂದಿದ್ದ ಮೌಲ್ಯಗಳನ್ನ ಅವರ ಕೊನೆಗಾಲದಲ್ಲಿ ಕುಮಾರಸ್ವಾಮಿ ನಾಶ ಮಾಡಿದ್ದಾರೆ” ಎಂದು ಛೇಡಿಸಿದರು.

“ಹಿರಿಯರಾದ ದೇವೇಗೌಡರಿಗೆ ವಿಧಿಯೇ ಇಲ್ಲದಂತೆ ಕುಮಾರಸ್ವಾಮಿ ಮಾಡಿದ್ದು ನೋಡಿದರೆ, ನನಗೆ ಮಾತುಗಳೇ ಹೊರಡುತ್ತಿಲ್ಲ, ನನಗೇ ಅಯ್ಯೋ ಅನಿಸುತ್ತದೆ. I feel very sorry. ಎನ್‌ಡಿಎ ಸರ್ಕಾರದ ಜೊತೆ ಕೈ ಜೋಡಿಸಿರುವ ಕುಮಾರಸ್ವಾಮಿ ಅವರಿಗೆ ಒಳ್ಳೆಯದಾಗಲಿ” ಎಂದು ಹೇಳಿದರು.

ಕುಮಾರಸ್ವಾಮಿ ಅಸೂಯೆಗೆ ಮದ್ದಿಲ್ಲ:

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿಲ್ಲ, ಈ ವಿಚಾರವಾಗಿ ಚರ್ಚೆಗೆ ಸಿದ್ಧ ಎನ್ನುವ ಕುಮಾರಸ್ವಾಮಿ ಆರೋಪಕ್ಕೆ, “ಪಾಪ, ಕುಮಾರಸ್ವಾಮಿ ಅವರಿಗೆ ಅಸೂಯೆ, ಈ ಅಸೂಯೆಗೆ ಯಾವುದೇ ಮದ್ದಿಲ್ಲ. ನನಗೆ ಈ ಅವಕಾಶ ಸಿಕ್ಕಿಲ್ಲವಲ್ಲ ಎಂದು ಕೈ, ಕೈ ಹಿಸುಕಿಕೊಳ್ಳುತ್ತಿದ್ದಾರೆ” ಎಂದರು.

“ಶಕ್ತಿ ಯೋಜನೆಯಿಂದ ಈವರೆಗೂ ರಾಜ್ಯದ ಮಹಿಳೆಯರು 100 ಕೋಟಿ ರೂಪಾಯಿ ಮೌಲ್ಯದ ಬಸ್ ಟ್ರಿಪ್ ಗಳಲ್ಲಿ ಉಚಿತವಾಗಿ ಓಡಾಡಿದ್ದಾರೆ‌. ಪ್ರತಿ ತಿಂಗಳು 1 ಕೋಟಿಗೂ ಹೆಚ್ಚಿನ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಹಣ ತಲುಪುತ್ತಿದೆ. ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣದ ಜನತೆ ಸೇರಿದಂತೆ ಅವರ ಪಕ್ಷದ ಕಾರ್ಯಕರ್ತರ ಬಳಿ ಗ್ಯಾರಂಟಿ ಯೋಜನೆಗಳು ಹಳ್ಳ ಹಿಡಿದಿದೆಯೋ ಅಥವಾ ಅವರ ಸ್ವಂತ ದುಡ್ಡು ಹೋಗುತ್ತಿದೆಯೋ ಎನ್ನುವ ಬಗ್ಗೆ ಮಾಹಿತಿ ಕೇಳಲಿ” ಎಂದು ಸವಾಲು ಹಾಕಿದರು.

ನನ್ನ ಆಡಳಿತಾವಧಿಯಲ್ಲಿ ನಾನು ಸಾಲಮನ್ನಾ ಮಾಡಿದ್ದೇನೆ, ಸರ್ಕಾರ ಈಗ ಸಾಲಮನ್ನಾ ಮಾಡಿ ತೋರಿಸಲಿ ಎಂಬ ಕುಮಾರಸ್ವಾಮಿ ಮಾತಿನ ಬಗ್ಗೆ ಕೇಳಿದಾಗ, “ಅವರ ಸವಾಲನ್ನು ಅತ್ಯಂತ ಸಂತೋಷ, ಗೌರವದಿಂದ ಸ್ವೀಕರಿಸುತ್ತೇವೆ. ಡಿ. 4 ನೇ ತಾರೀಖಿನ ನಂತರ ಅವರ ಎಲ್ಲಾ ಕಡತಗಳು, ಲೆಕ್ಕಾಚಾರಗಳು, ಗ್ಯಾರಂಟಿಗಳು, ಸವಾಲುಗಳನ್ನು ತೆಗೆದುಕೊಂಡು ವಿಧಾನಸಭೆ ಅಧಿವೇಶನಕ್ಕೆ ಬರಲಿ. ಅವರ ಭರವಸೆ, ಆಡಿದ ಮಾತುಗಳು, ಪಂಚರತ್ನಗಳು ಮತ್ತು ಈ ಹಿಂದೆ ಏನೇನೆಲ್ಲಾ ಹೇಳಿದ್ದರು ಅದನ್ನೆಲ್ಲಾ ತೆಗೆದುಕೊಂಡು ವಿಧಾನಸಭೆಗೆ ಬರಲಿ. ಅಲ್ಲಿ ಅವರ ನುಡಿಮುತ್ತುಗಳನ್ನು ಕೇಳೋಣ. ಅವರ ಸವಾಲು, ಪಂಚರತ್ನಗಳಿಗೆ ಕರ್ನಾಟಕ ಜನ ಈಗಾಗಲೇ ಚುನಾವಣೆಯಲ್ಲಿ ಉತ್ತರ ಕೊಟ್ಟಿದ್ದಾರೆ. ಅದೇ ರೀತಿ ನಮ್ಮ ಗ್ಯಾರಂಟಿಗಳಿಗೂ ಉತ್ತರ ಕೊಟ್ಟಿದ್ದಾರೆ” ಎಂದರು.

ಅಪಘಾತದಲ್ಲಿ ಸತ್ತವರ ಕುಟುಂಬಕ್ಕೆ ಡಿ ಕೆ ಶಿವಕುಮಾರ್ ಸಂತಾಪ
ಬೆಂಗಳೂರು: ಹಾಸನ ಜಿಲ್ಲೆಯ ಬಾಣವಾರದ ಬಳಿ ಸಂಭವಿಸಿರುವ ಹೃದಯವಿದ್ರಾವಕ ಅಪಘಾತದಲ್ಲಿ 9 ಮಂದಿ ಮೃತಪಟ್ಟಿರುವ ಸುದ್ದಿ ಆಘಾತ ತಂದಿದೆ. ಈ ಅಪಘಾತದಲ್ಲಿ ನಾಲ್ವರು ಮಕ್ಕಳು ಸಾವಿಗೀಡಾಗಿರುವುದು ಬಹಳ ನೋವು ತಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಮೃತರ ಆತ್ಮಕ್ಕೆ ಸದ್ಗತಿ ಸಿಗಲಿ, ಈ ಆಘಾತಕಾರಿ ನೋವು ಭರಿಸುವ ಶಕ್ತಿಯನ್ನು ಭಗವಂತ ಮೃತರ ಕುಟುಂಬ ಸದಸ್ಯರಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದುಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಡಿ.ಕೆ. ಶಿವಕುಮಾರ್‌ ಅವರ ಮನೆ ಮತ್ತು ಇತರೆಡೆ ಸಿಬಿಐ ದಾಳಿ
ಇತ್ತ ಕಾಂಗ್ರೆಸ್‌ ಪಕ್ಷದ ನಾಯಕರು ರಾಹುಲ್‌ ಗಾಂಧಿಯವರ ಭಾರತ್‌ ಜೋಡೋ ಯಾತ್ರೆಯನ್ನು ಬರಮಾಡಿಕೊಳ್ಳುವ ಸಂಭ್ರಮದಲ್ಲಿದ್ದರೆ ಅತ್ತ ಕೇಂದ್ರ ತನಿಖಾ ದಳದ ಅಧಿಕಾರಿಗಳು KPCC ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರ ಮನೆ ಮತ್ತು ಇತರ ಸ್ಥಳಗಳಲ್ಲಿ ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳಿಗೆ ಬುಧವಾರ ತೆರಳಿ ಆಸ್ತಿ-ಪಾಸ್ತಿ ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ಈ ಪರಿಶೀಲನೆಗಳಿಗೆ ಸಿಬಿಐ ಅಧಿಕಾರಿಗಳು ಕನಕಪುರ ತಹಶೀಲ್ದಾರ್ ಹಾಗೂ ಪೋಲೀಸರ ಜತೆಗೆ ತೆರಳಿದ್ದರು. ಉಳಿದ ವಿವರಗಳನ್ನು ಎದುರುನೋಡಲಾಗುತ್ತಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿ ಗೆ ಅನಾರೋಗ್ಯ
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌  @DKShivakumar ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಎಲ್ಲಿಯೂ ಸಹ ಪ್ರಯಾಣ ಮಾಡದಂತೆ ವೈದ್ಯರು ಸಲಹೆ ನೀಡಿದ್ದಾರೆ. ಈ ಕಾರಣದಿಂದಾಗಿ ಅವರ ವೇಳಾಪಟ್ಟಿಯಲ್ಲಿ ಈಗಾಗಲೇ ನಿಗದಿಯಾಗಿರುವ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ದಯವಿಟ್ಟು ಅನ್ಯಥಾ ಭಾವಿಸದಂತೆ ಟ್ವೀಟ್‌ ಮೂಲಕ ಕರ್ನಾಟಕ ಕಾಂಗ್ರೇಸ್ ಮನವಿ ಮಾಡಿದೆ.

ಡಿ.ಕೆ.ಶಿ ಅವರ ಆರೋಗ್ಯದ ಕುರಿತು ಕಾಂಗ್ರೇಸ್‌ ಮುಖಂಡ ಸರ್ಫರಾಜ್‌ ಅಹಮದ್‌ ಅವರು ಟ್ವೀಟ್‌ ಮಾಡುವ ಮೂಲಕ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ@DKShivakumar ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಪ್ರಯಾಣ ಮಾಡದಂತೆ ವೈದ್ಯರು ಸಲಹೆ ನೀಡಿದ್ದಾರೆ. ಈ ಕಾರಣದಿಂದಾಗಿ ವೇಳಾಪಟ್ಟಿಯಲ್ಲಿ ಈಗಾಗಲೇ ನಿಗದಿಯಾಗಿರುವ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ದಯವಿಟ್ಟು ಅನ್ಯಥಾ ಭಾವಿಸದಂತೆ ಮನವಿ. pic.twitter.com/j4Cko4lP5l
— Karnataka Congress (@INCKarnataka) September 20, 2022

ಅಭಿವೃದ್ಧಿ ಹೆಸರಲ್ಲಿ ಜನರಿಗೆ ಮೋಸ : ಡಿ.ಕೆ.ಶಿ ಆಕ್ರೋಶ
ಬೆಂಗಳೂರು: ಅಭಿವೃದ್ಧಿ ಹೆಸರಲ್ಲಿ ಬಿಜೆಪಿ ಸರ್ಕಾರ ಜನರಿಗೆ ಮೋಸ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು. 2018ರಲ್ಲಿ ನೀಡಿದ ಪ್ರಣಾಳಿಕೆಯಲ್ಲಿ ಒಂದಾದರೂ ನಿಜವಾಗಿಸಿದ್ದೀರಾ. ನಾಡು- ನುಡಿಗಾಗಿ ಬಿಜೆಪಿ ಕೊಡುಗೆ ಶೂನ್ಯ. ಭ್ರಷ್ಟಾಚಾರದಲ್ಲಿ ಕರ್ನಾಟಕ ಇಂದು ದೇಶಕ್ಕೇ ರಾಜಧಾನಿಯಾಗಿದೆ . ಇದರ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ. ಇನ್ಮುಂದೆ ನಾವು ನಿರಂತರವಾಗಿ ಪ್ರಶ್ನೆ ಕೇಳುತ್ತೇವೆ. ನೈತಿಕತೆ ಇದ್ದರೆ ಉತ್ತರಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಭಿವೃದ್ಧಿ ಹೆಸರಲ್ಲಿ ಸುಳ್ಳಿನ ಕಹಳೆ ಊದುತ್ತಿರುವ ಬಿಜೆಪಿ ನಾಯಕರೇ ನಮ್ಮ ಪ್ರಶ್ನೆಗೆ ಉತ್ತರ ನೀಡುತ್ತೀರಾ? ಎಂದು ಗುಡಿಗಿದರು.

ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದ ಮಾತು ಏನಾಯಿತು? ಉದ್ಯೋಗ ಸೃಷ್ಟಿ ಬಗ್ಗೆ ನೀವು ನೀಡಿದ್ದ ಭರವಸೆ ಏನಾಯಿತು? ಪರಿಶಿಷ್ಟ ಜಾತಿ-ಪಂಗಡದ ವಿದ್ಯಾರ್ಥಿಗಳಿಗೆ ನೀಡುತ್ತೇವೆ ಎಂದಿದ್ದ 4,500 ಕೋಟಿ ಹಣ ಎಲ್ಲಿದೆ? ಎಂದು ಪ್ರಶ್ನಿಸಿದ್ದಾರೆ.

ಅಧಿಕಾರಕ್ಕೆ ಬರುವ ದುರಾಸೆಯಿಂದ ಬಿಜೆಪಿ ಸರ್ಕಾರ ದೇಶದ ಜನರ ಮುಂದೆ ಸುಳ್ಳಿನ ಅರಮನೆಯನ್ನೇ ನಿರ್ಮಾಣ ಮಾಡಿತ್ತು. ಬಿಜೆಪಿ ಪ್ರಣಾಳಿಕೆಯಲ್ಲಿ ಶೇ. 90 ರಷ್ಟು ಇದ್ದಿದ್ದು ಬರೀ ಸುಳ್ಳು. ಚುನಾವಣಾ ಸಂದರ್ಭದಲ್ಲಿ ಜನರಿಗೆ ಮೋಸ ಮಾಡಿ ಈಗ ಬೇಡದ ಸಂಗತಿಗಳನ್ನು ಮುನ್ನಲೆಗೆ ತಂದು ವೋಟ್‌ ಬ್ಯಾಂಕ್‌ ರಾಜಕಾರಣ ಮಾಡುತ್ತಿದೆ ಎಂದು ಹೇಳಿದ್ದಾರೆ.

2018ರಲ್ಲಿ ನೀಡಿದ ಪ್ರಣಾಳಿಕೆಯಲ್ಲಿ ಒಂದಾದರೂ ನಿಜವಾಗಿಸಿದ್ದೀರಾ. ನಾಡು- ನುಡಿಗಾಗಿ ಬಿಜೆಪಿ ಕೊಡುಗೆ ಶೂನ್ಯ. ಭ್ರಷ್ಟಾಚಾರದಲ್ಲಿ ಕರ್ನಾಟಕ ಇಂದು ದೇಶಕ್ಕೇ ರಾಜಧಾನಿಯಾಗಿದೆ . ಇದರ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ. ಇನ್ಮುಂದೆ ನಾವು ನಿರಂತರವಾಗಿ ಪ್ರಶ್ನೆ ಕೇಳುತ್ತೇವೆ. ನೈತಿಕತೆ ಇದ್ದರೆ ಉತ್ತರಿಸಿ.
3/3
— DK Shivakumar (@DKShivakumar) August 29, 2022

ʼಫ್ರೀಡಂಮಾರ್ಚ್‌ʼ ಮೂಲಕ ಕಾಂಗ್ರೆಸ್‌ ಕರೆ
ಬೆಂಗಳೂರು: ಸ್ವತಂತ್ರ ಭಾರತದ 75ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ನಾಯಕರುಗಳು ಹಾಗೂ ಸಾವಿರಾರು ಜನರು ಸೇರಿ ಕೈಯಲ್ಲಿ ತ್ರಿವರ್ಣಧ್ವಜ ಹಿಡಿದು ಪಾದಯಾತ್ರೆ ನಡೆಸಿದರು.

ಇದೇ ವೇಳೆ ಆಗಸ್ಟ್ 15ರಂದು ಫ್ರೀಡಂಮಾರ್ಚ್ ಮೂಲಕ  ಅತಿಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ನಮನ ಸಲ್ಲಿಸುವಂತೆ ಕಾಂಗ್ರೆಸ್‌ ಕರೆ ನೀಡಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಮ್ಮ ಟ್ವೀಟರ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಸ್ವತಂತ್ರ ಭಾರತದ 75ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ಪಾದಯಾತ್ರೆ ನಡೆಸಲಾಯಿತು. ಇದೇ ವೇಳೆ ಆಗಸ್ಟ್ 15ರಂದು #FreedomMarch ನಲ್ಲಿ ಅತಿಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ನಮನ ಸಲ್ಲಿಸುವಂತೆ ಕರೆ ನೀಡಿದೆ.

ವಿವರಗಳಿಗೆ: https://t.co/pidyGkI5QK pic.twitter.com/HpGwFjzWj2
— DK Shivakumar (@DKShivakumar) August 11, 2022

ಪಾದಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೇರಿದಂತೆ ಕಾಂಗ್ರೆಸ್‌ ಪಕ್ಷದ ಹಲವು ಶಾಸಕರು ಕೂಡ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು.

ರಾಷ್ಟ್ರಧ್ವಜದ ಮೇಲೆ ಕಾಂಗ್ರೆಸ್ ಗೆ ಹೆಚ್ಚು ಹಕ್ಕು: ಡಿಕೆಶಿ
ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದಿರುವುದರಲ್ಲಿ ಕಾಂಗ್ರೆಸ್‌ ನಾಯಕರ ತ್ಯಾಗ, ಬಲಿದಾನ ಬಹು ಮುಖ್ಯ ಪಾತ್ರವಾಗಿರುವುದರಿಂದ ರಾಷ್ಟ್ರಧ್ವಜ, ರಾಷ್ಟ್ರಗೀತೆ, ಸಂವಿಧಾನದ ಮೇಲೆ ಹೆಚ್ಚು ಅಧಿಕಾರ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ ಹೇಳಿದ್ದಾರೆ.

ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸ್ವಾತಂತ್ರ್ಯ ಅಮೃತ ಮಹೋತ್ಸವ ಮೊದಲು ಘೋಷಿಸಿದ್ದು ಕಾಂಗ್ರೆಸ್‌, ನಂತರ ಬಿಜೆಪಿಯವರು ʼಹರ್‌ ಘರ್‌ ತಿರಂಗʼ ಕಾರ್ಯಕ್ರಮದ ಹೆಸರಲ್ಲಿ ರಾಷ್ಟ್ರಧ್ವಜವನ್ನು ಉಚಿತವಾಗಿ ಕೊಡುವ ಬದಲು 25 ರೂ. ಗಳಿಗೆ ಮಾರುತ್ತಿರುವುದು ನಾಚಿಕೆಗೇಡಿನ ಸಂಗತಿ, ಏಕೆಂದರೆ ರಾಷ್ಟ್ರಧ್ವಜ ಮಾರಾಟದ ವಸ್ತುವಲ್ಲ ಎಂದು ಹೇಳಿದರು.

ಡಿಕೆಶಿಗೆ ತಿರುಗುಬಾಣ ಬಿಟ್ಟ ಹೆಚ್‌ಡಿಕೆ
ಬೆಂಗಳೂರು: ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಹೋರಾಟ ಮಾಡಿದ್ದೇ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಲಿ ಎಂದು ಕೆಪಿಸಿಸಿ ಅಧ್ಯಕ್ಷ  ಡಿ ಕೆ ಶಿವಕುಮಾರ್ ಅವರ ಹೇಳಿಕೆ ಅಪ್ರಭುದ್ಧತೆಯ ಪ್ರತೀಕ ಮತ್ತು ಪರಮ ಬಾಲಿಶ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರ್‌ ಸ್ವಾಮಿ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಹೋರಾಟ ಮಾಡಿದ್ದೇ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಲಿ ಎಂದು ಕೆಪಿಸಿಸಿ ಅಧ್ಯಕ್ಷ @DKShivakumar ಅವರ ಹೇಳಿಕೆ ಅಪ್ರಭುದ್ಧತೆಯ ಪ್ರತೀಕ ಮತ್ತು ಪರಮ ಬಾಲಿಶ. 1/7
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 9, 2022

ದಿಕೆಶಿ ಹೇಳಿಕೆ ಕುರಿತು ಟ್ವೀಟ್‌ ಮಾಡಿರುವ ಅವರು ನಿಮಗೆ ಗೊತ್ತಿರಲಿ, 1947ರ ಹಿಂದಿನ ಕಾಂಗ್ರೆಸ್ ಬೇರೆ, ಈಗಿನ ಸೋಗಲಾಡಿ ಸಿದ್ಧಹಸ್ತರು ಇರುವ ಕಾಂಗ್ರೆಸ್ಸೇ ಬೇರೆ. ಸಮಸ್ತ ಭಾರತೀಯರಿಗೆ ಸ್ವಾತಂತ್ರ್ಯ ತಂದುಕೊಡಲು ಮಹಾತ್ಮಗಾಂಧಿ ನೇತೃತ್ವದ ಕಾಂಗ್ರೆಸ್ ಹೋರಾಟ ಮಾಡಿತ್ತು. ನಂತರದ ಕಾಂಗ್ರೆಸ್ ಮಾಡಿದ್ದೇ ಸ್ವಾತಂತ್ರ್ಯದ ಮಾರಣಹೋಮ.ಮಾಡಿದ ಪಾಪಕ್ಕೆ ಇವತ್ತಿನ ಕಾಂಗ್ರೆಸ್ ಶಾಸ್ತಿ ಅನುಭವಿಸುತ್ತಿದೆ. ನಾನು ಮುಖ್ಯಮಂತ್ರಿ ಆಗಿದ್ದು ಅಂದು ರಾಷ್ಟ್ರಪಿತರು ತಂದುಕೊಟ್ಟ ಸ್ವಾತಂತ್ರ್ಯ ಹಾಗೂ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಕೊಟ್ಟ ಜಗತ್ ಮಾನ್ಯ ಸಂವಿಧಾನದ ಕಾರುಣ್ಯದಿಂದ. ಇದರಲ್ಲಿ ಕಾಂಗ್ರೆಸ್ ಪಾತ್ರ ಶೂನ್ಯ ಎಂದು ತಿರುಬಾಣ ಬಿಟ್ಟಿದ್ದಾರೆ.

ನಾನು ಪಂಡಿತ್ ನೆಹರು, ಲಾಲ್ ಬಹದ್ದೂರ ಶಾಸ್ತ್ರಿ ಅವರ ಬಗ್ಗೆ ಹಗುರವಾಗಿ ಮಾತನಾಡಲಾರೆ. ಅವರ ನಂತರ ಕಾಂಗ್ರೆಸ್ ಹೇಗೆಲ್ಲಾ ಹಾದಿತಪ್ಪಿ ಜನರ ಸ್ವಾತಂತ್ರ್ಯ ಹರಣ ಮಾಡಿತು ಎನ್ನುವದನ್ನು ಡಿ.ಕೆ.ಶಿವಕುಮಾರ್ ಅವರು ಇತಿಹಾಸ ಓದಿದರೆ ಸತ್ಯ ಅರಿವಾಗುತ್ತದೆ. ಸಂವಿಧಾನ ಕೊಟ್ಟವರು, ದೇಶದ ಮೊದಲನೇ ಸಂಪುಟದಲ್ಲಿ ಸಚಿವರಾಗಿದ್ದವರು ಡಾ.ಬಿ.ಆರ್.ಅಂಬೇಡ್ಕರ್ ಅವರು. ಅಂಥ ಮಹನೀಯರನ್ನು ಸಂಸತ್ತಿಗೇ ಮತ್ತೆ ಬಾರದಂತೆ ತಡೆದು, ಭಾರತದ ದೀನದಲಿತರ ದನಿಯನ್ನು ನಿರ್ದಯವಾಗಿ ಅಡಗಿಸಿದ ಪಕ್ಷದ ನಾಯಕರು ಇವತ್ತು ಸ್ವಾತಂತ್ಯದ ಭಜನೆ ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ಕೋಳಿ ಕೂಗಿದರೆ ಭಾರತದಲ್ಲಿ ಬೆಳಕು ಹರಿಯುತ್ತದೆ ಎನ್ನುವ ಕಾಲ ಹೋಯಿತು. ಡಿ.ಕೆ.ಶಿವಕುಮಾರ್ ಅವರು ಇದನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂಬ ನಂಬಿಕೆ ನನ್ನದು. ಅಲ್ಲದೆ ಪಕ್ಷದಲ್ಲಿ ನಿಮ್ಮ ಸ್ವಾತಂತ್ರ್ಯಹರಣ ಮಾಡುತ್ತಿರುವವರ ಕಡೆ ಗಮನ ಹರಿಸಿ. ಈಗ ಸ್ವಾತಂತ್ರೋತ್ಸವದ ನಡಿಗೆ ಎಂದು ಹೊರಟಿದ್ದೀರಿ. ಯಾರ ಸ್ವಾತಂತ್ರ್ಯಕ್ಕಾಗಿ ಎಂದು ಸ್ವಲ್ಪ ಬಿಡಿಸಿ ಹೇಳುವಿರಾ? ಇದುವರೆಗೂ ಕಾಂಗ್ರೆಸ್ ನಡೆಸಿದ ಸ್ವಾತಂತ್ರ್ಯ ವಿರೋಧಿ ಕೃತ್ಯಗಳಿಗೆ ಉತ್ತರ ಕೊಡುವಿರಾ? ಎಂದು ದಿಕೆಶಿಯವರನ್ನು ಪ್ರಶ್ನಿಸಿದ್ದಾರೆ.