dr .k. sudhakar – Peepal Media

ಇಂದಿನಿಂದ 48 ಲಕ್ಷ ಮಕ್ಕಳಿಗೆ ಜೆಇ ಲಸಿಕೆ: ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು: ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿ ಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟು ಮಾಡುವ ಜಪಾನಿನ ಎನ್ಸೆಫಾಲಿಟಿಸ್ (ಜೆಇ) ವಿರುದ್ಧ 1 ರಿಂದ 15 ವರ್ಷದೊಳಗಿನ ಅಂದಾಜು 48 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ವಿಶೇಷ ಲಸಿಕಾ ಅಭಿಯಾನವು ಸೋಮವಾರದಿಂದ ಮೂರು ವಾರಗಳ ಕಾಲ ರಾಜ್ಯದಲ್ಲಿ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಈ ಅಭಿಯಾನದ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼಡಿಸೆಂಬರ್ ಮೊದಲ ವಾರದಲ್ಲಿ ಲಸಿಕೆಗಳನ್ನು ಪ್ರಾಥಮಿಕವಾಗಿ ಖಾಸಗಿ ಮತ್ತು ಸರ್ಕಾರಿ ಶಾಲೆಗಳ ಮೇಲೆ ಕೇಂದ್ರೀಕರಿಸಲಾಗುವುದು. ಇದನ್ನು ಅನುಸರಿಸಿ, ಮುಂದಿನ ಎರಡು ವಾರಗಳಲ್ಲಿ, ನಾವು ಆರೋಗ್ಯ ಸಂಸ್ಥೆಗಳು, ಅಂಗನವಾಡಿ ಕೇಂದ್ರಗಳು ಮತ್ತು ಸಮುದಾಯಗಳಲ್ಲಿ ವ್ಯಾಕ್ಸಿನೇಷನ್ ಡ್ರೈವ್‌ಗಳ ಮೇಲೆ ಗಮನ ಹರಿಸಲಿದ್ದೇವೆ. ಡ್ರೈವ್ ನಡೆಸಲು ಕೇಂದ್ರ ಆರೋಗ್ಯ ಸಚಿವಾಲಯವು ನಮಗೆ ಜೆನ್ವ್ಯಾಕ್ ಲಸಿಕೆಯನ್ನು ಪೂರೈಸಲಿದೆʼ ಎಂದರು.

ಪ್ರಪಂಚದಾದ್ಯಂತ 24 ರಾಷ್ಟ್ರಗಳಲ್ಲಿ ಜಪಾನೀಸ್‌ ಎನ್‌ಸೆಫಲೈಟಿಸ್‌ (ಜೆಇ) ಪಿಡುಗನ್ನು ಗುರುತಿಸಲಾಗಿದೆ. ಇದರಲ್ಲಿ ಭಾರತವು ಸೇರಿದಂತೆ ಏಷ್ಯಾದ 11 ರಾಷ್ಟ್ರಗಳು ಸಹ ಪಟ್ಟಿಯಲ್ಲಿವೆ. ಪ್ರತಿ ವರ್ಷ ಸರಾಸರಿ 68,000 ಪ್ರಕರಣಗಳು ವರದಿಯಾಗುತ್ತಿದ್ದು, ಮರಣ ಪ್ರಮಾಣ ಶೇ,20 ರಿಂದ ಶೇ,30 ರಷ್ಟಿದೆ. ಗುಣಮುಖರಾದ ಶೇ, 30 ರಿಂದ ಶೇ, 50 ರಷ್ಟು ಪ್ರಕರಣಗಳಲ್ಲಿ ನರದೌರ್ಬಲ್ಯ, ಬುದ್ಧಿ ಮಾಂದ್ಯತೆ ಸೇರಿದಂತೆ ಶಾಶ್ವತ ಆಂಗವಿಕಲತೆ ಉಂಟಾಗಿದೆ ಎಂದು ಸಚಿವರು ಕಳವಳ ವ್ಯಕ್ತಪಡಿಸಿದ್ದಾರೆ.

ಜೆಇ ಮೆದುಳು ಜ್ವರದ ಮೊದಲ ಪ್ರಕರಣ 1955 ರಲ್ಲಿ ತಮಿಳುನಾಡಿನ ವೆಲ್ಲೂರ್ ನಲ್ಲಿ ವರದಿಯಾಗಿತ್ತು. ಕರ್ನಾಟಕದಲ್ಲಿ 1978 ರಲ್ಲಿ ಕೋಲಾರ ಜಿಲ್ಲೆಯಲ್ಲಿ ಮೊದಲ ಪ್ರಕರಣ ಪತ್ತೆಯಾಗಿತ್ತು. ಹೆಚ್ಚಿನ ಪ್ರಕರಣಗಳು 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಕಂಡುಬರುತ್ತಿದೆ. 2016 ರಲ್ಲಿ 11 ಪ್ರಕರಣಗಳು, 2017 ರಲ್ಲಿ 23 ಪ್ರಕರಣಗಳು, 2018 ರಲ್ಲಿ 35 ಪ್ರಕರಣಗಳು, 2019 ರಲ್ಲಿ 33 ಪ್ರಕರಣಗಳು, 2020 ರಲ್ಲಿ 19 ಪ್ರಕರಣಗಳು, 2021 ರಲ್ಲಿ 25 ಪ್ರಕರಣಗಳು, 2022 ರಲ್ಲಿ 21 ಪ್ರಕರಣಗಳು ಪತ್ತೆಯಾಗಿವೆ ಎಂದು ಸುಧಾಕರ್‌ ಮಾಹಿತಿ ನೀಡಿದ್ದಾರೆ.

ರೋಗ ಪತ್ತೆ ಮಾಡಲು ರಾಜ್ಯದಲ್ಲಿ ಸೆಂಟಿನಲ್ ಸರ್ವೆಲೆನ್ಸ್ ಲ್ಯಾಬೊರೇಟರಿ (ಎಸ್‍ಎಸ್‍ಎಲ್‍) ಗಳನ್ನು ಸಜ್ಜುಗೊಳಿಸಲಾಗಿದೆ. ನಿಮ್ಹಾನ್ಸ್ -ಸ್ಟೇಟ್ ಅಪೆಕ್ಸ್ ಲ್ಯಾಬೊರೇಟರಿ, ವಿಮ್ಸ್-ಬಳ್ಳಾರಿ, ಕಿಮ್ಸ್-ಹುಬ್ಬಳ್ಳಿ, ಡಿಪಿಎಚ್‍ಎಲ್-ಕೋಲಾರ, ಮಣಿಪಾಲ್ ಸೆಂಟರ್ ಫಾರ್ ವೈರಸ್ ರಿಸರ್ಚ್-ಉಡುಪಿ, ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ವೈರಾಲಜಿ(ಎನ್‍ಐವಿ)-ಬೆಂಗಳೂರು ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಸುಧಾಕರ್‌ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಧಾರವಾಡ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳನ್ನು 10 ಜೆಇ ಎಂಡೆಮಿಕ್ ಜಿಲ್ಲೆಗಳು ಎಂದು ಗುರುತಿಸಲಾಗಿದೆ. ಈ ಜಿಲ್ಲೆಗಳಲ್ಲಿ ಮಕ್ಕಳಿಗೆ 9 ತಿಂಗಳು ತುಂಬಿದ ನಂತರ ಮೊದಲನೇ ಡೋಸ್ ಮತ್ತು 1.5 ವರ್ಷದ ವಯಸ್ಸಿನಲ್ಲಿ 2ನೇ ಡೋಸ್ ಲಸಿಕೆ ನೀಡಲಾಗುತ್ತಿದೆ ಎಂದರು.

ಗಡಿ ವಿವಾದ: ರಾಜ್ಯದ ನಿಲುವು ಸಂವಿಧಾನಬದ್ದ- ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಸುಪ್ರೀಂಕೋರ್ಟ್ ನಲ್ಲಿ ಗಡಿ ವಿವಾದದ ಪ್ರಕರಣ ವಿಚಾರಣೆಗೆ ಬರಲಿದ್ದು, ಕರ್ನಾಟಕದ ನಿಲುವು ಸಂವಿಧಾನಬದ್ದ ಹಾಗೂ ಕಾನೂನಾತ್ಮಕವಾಗಿ ಸ್ಪಷ್ಟವಾಗಿದೆ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇಂದು ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಪುಣ್ಯತಿಥಿಯ ಅಂಗವಾಗಿ ವಿಧಾನ ಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದ ಅರ್ಜಿ  ಮೈಂಟೆನಬಲ್ ಅಲ್ಲ ಎನ್ನುವುದು ನಮ್ಮ ನಿಲುವು. ಅದನ್ನೇ ನಮ್ಮ ವಕೀಲರು ವಾದ ಮಂಡಿಸಿದ್ದಾರೆ. ನಮ್ಮ ನಿಲುವು ಸಂವಿಧಾನಬದ್ದ ಹಾಗೂ ಕಾನೂನಾತ್ಮಕವಾಗಿದೆ. ಎಲ್ಲಾ ಅಂಶಗಳ ಬಗ್ಗೆ ವಕೀಲರು ವಾದ ಮಾಡಲಿದ್ದಾರೆ ಎಂದರು.

ಪಕ್ಷದಲ್ಲಿ ರೌಡಿಗಳಿಗೆ ಅವಕಾಶವಿಲ್ಲ

ಪಕ್ಷದಲ್ಲಿ ಯಾವುದೇ ರೌಡಿಗಳನ್ನು ನಾವು ಸೇರ್ಪಡೆ ಮಾಡುವುದಿಲ್ಲ. ಯಾವುದೇ ಅವಕಾಶಗಳನ್ನು ಕೊಡುವುದಿಲ್ಲ ಎನ್ನುವುದು ಸ್ಪಷ್ಟವಾಗಿದೆ. ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು: ಚರ್ಚೆಯಾಗಿಲ್ಲ

ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯಲಿದ್ದು ಹಿಜಾಬ್ ಧರಿಸಲು ಅನುಮತಿ ನೀಡುವು ದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು,  ಈ ಬಗ್ಗೆ ಸರ್ಕಾರದಲ್ಲಿ  ಚರ್ಚೆಯಾಗಿಲ್ಲ. ಇದು ಅವರ ವೈಯಕ್ತಿಕ ಅಭಿಪ್ರಾಯವಿರಬಹುದು. ಇದು ನಮ್ಮ ಸರ್ಕಾರದ ನಿಲುವಲ್ಲ. ವಕ್ಫ್ ಮಂಡಳಿ ಅಧ್ಯಕ್ಷರು ಈ ಬಗ್ಗೆ  ಸರ್ಕಾರದೊಂದಿಗೆ ಚರ್ಚೆ ಮಾಡಬೇಕು ಎಂದರು.

ಈ ವೇಳೆ ಆರೋಗ್ಯ ಸಚಿವ ಡಾ: ಕೆ.ಸುಧಾಕರ್,  ಸಂಸದ ಮುನಿಸ್ವಾಮಿ, ಕೆಂಗಲ್ ಹನುಮಂತಯ್ಯ ಅವರ ಕುಟುಂಬ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

108 ಕಾಲ್‌ ಸೆಂಟರ್‌ ಸೇವೆ ನಿರ್ವಹಿಸುವುದರಲ್ಲಿ ಸರ್ಕಾರ ವಿಫಲ: ಸುಧಾಕರ್‌ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಆಂಬುಲೆನ್ಸ್ 108 ಕಾಲ್‌ ಸೆಂಟರ್‌ ಸೇವೆಯ ತಾಂತ್ರಿಕ ಸಮಸ್ಯೆಯಿಂದ ಸರಿಯಾದ ಸಮಯಕ್ಕೆ ಸೇವೆ ಸಿಗದಿರದಿರುವ ಕಾರಣ, ಮಧುಗಿರಿ ತಾಲೂಕಿನ ಐಡಿಹಳ್ಳಿಯಲ್ಲಿ ಮಹಿಳೆಯೊಬ್ಬರು ಮೃತಪಟಿರುವ ಘಟನೆ ಕುರಿತು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ವಿರುದ್ಧ ರಾಜ್ಯ ಕಾಂಗ್ರೆಸ್‌ ಘಟಕ ವಾಗ್ದಾಳಿ ನಡೆಸಿದೆ.

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜಯ್ಯಮ್ಮ(65) ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಹಲವು ಬಾರಿ ಆಂಬುಲೆನ್ಸ್‌ 108 ಕ್ಕೆ ಕರೆ ಮಾಡಲಾಗಿದ್ದು,  108 ಕಾಲ್‌ ಸೆಂಟರ್‌ ಸೇವೆಯಲ್ಲಿ ತಾಂತ್ರಿಕ ಸಮಸ್ಯೆಯಿಂದ ಸರಿಯಾದ ಸಮಯಕ್ಕೆ ಆಂಬುಲೆನ್ಸ್‌ ಸೇವೆ ದೊರಕದ ಕಾರಣ ಮಹಿಳೆ ಮನೆಯಲ್ಲೇ ಸಾವನ್ನಪ್ಪಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌, 108 ಆಂಬುಲೆನ್ಸ್ ಸಿಬ್ಬಂದಿಗೆ ವೇತನ ನೀಡದೆ ಸತಾಯಿಸಿದ್ದ ಸರ್ಕಾರ ಈಗ 108 ಕಾಲ್ ಸೆಂಟರ್ ಸೇವೆ ನಿರ್ವಹಿಸುವುದರಲ್ಲೂ ವಿಫಲವಾಗಿದೆ. ರಾಜಕೀಯ ಹೇಳಿಕೆ ಕೊಡಲು ಅತ್ಯತ್ಸಾಹದಿಂದ ಓಡೋಡಿ ಬರುವ ಸಚಿವ ಸುಧಾಕರ್ ಅವರಿಗೆ ತಮ್ಮ ಇಲಾಖೆಯ ಕೆಲಸಗಳನ್ನು ನಿರ್ವಹಿಸಲು ಮಾತ್ರ ಸಮಯವೂ ಇಲ್ಲ, ಆಸಕ್ತಿಯೂ ಇಲ್ಲ ಎಂದು ರಾಜ್ಯ ಕಾಂಗ್ರೆಸ್‌ ಘಟಕ ಕಿಡಿಕಾರಿದೆ.

‌ವಿಮ್ಸ್‌ ಆಸ್ಪತ್ರೆಯಲ್ಲಾದ ಘಟನೆಗೆ ರೋಚಕ ತಿರುವು: ಸಚಿವ ಸುಧಾಕರ್‌ ರಾಜೀನಾಮೆಗೆ ಕಾಂಗ್ರೆಸ್‌ ಒತ್ತಾಯ
ಬಳ್ಳಾರಿ: ಇತ್ತೀಚಿಗೆ ಬಳ್ಳಾರಿ ಜಿಲ್ಲೆಯ ವಿಮ್ಸ್‌ ಆಸ್ಪತ್ರೆಯಲ್ಲಿ ನಡೆದ ಘಟನೆಯ ಕುರಿತು ಆಸ್ಪತ್ರೆಯ ನಿರ್ದೇಶಕ ಡಾ. ಗಂಗಾಧರ ಗೌಡ ಅವರು ನೀಡಿರುವ ಸ್ಪೋಟಕ ಹೇಳಿಕೆಯನ್ನು ಉದ್ದೇಶಿಸಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಈ ಹಿನ್ನಲೆ ಆರೋಗ್ಯ ಸಚಿವ ಡಾ. ಸುಧಾಕರ್‌ ಕೆ ಅವರ ರಾಜೀನಾಮೆಗೆ ಒತ್ತಾಯಿಸಿದೆ.

ಬಳ್ಳಾರಿಯಲ್ಲಿ ವಿದ್ಯುತ್ ಸಂಪರ್ಕ ಕಡಿತವಾದ ಹಿನ್ನಲೆ ಜಿಲ್ಲೆಯ ವಿಮ್ಸ್‌ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ ಕಾರ್ಯ ಸ್ಥಗಿತವಾಗಿ ಮೂವರು ರೋಗಿಗಳು ಸಾವನ್ನಪ್ಪಿದ್ದು, ಈ ಘಟನೆ ಆಕಸ್ಮಿಕವಾಗಿರಬಹುದು ಎಂದು ಎಲ್ಲರು ಅಭಿಪ್ರಾಯ ಪಟ್ಟಿದ್ದರು. ಆದರೆ ಇದು ಆಕಸ್ಮಿಕವಲ್ಲ ಷಡ್ಯಂತ್ರ ಎಂಬ ಗಂಗಾಧರ ಅವರ ಹೇಳಿಕೆ ಮೇಲೆ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್‌ ಘಟಕ ಕಿಡಿಕಾರಿದೆ.

ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌,  ಬಸವರಾಜ ಬೊಮ್ಮಾಯಿ ಅವರೇ, ಏನಾಗ್ತಿದೆ ರಾಜ್ಯದಲ್ಲಿ? ಮೊದಲು ವಿಮ್ಸ್‌ನಲ್ಲಾದ ಸಾವುಗಳು ಸಹಜವಾದವು ಎಂದರು, ಈಗ ಷಡ್ಯಂತ್ರ ಎನ್ನುತ್ತಿದ್ದಾರೆ, ವಿಮ್ಸ್ ನಿರ್ದೇಶಕ ಹಾಗೂ ಆರೋಗ್ಯ ಸಚಿವರ ವಿರುದ್ದ ಶಾಸಕ ಎಸ್.ಟಿ ಸೋಮಶೇಖರ್ ದೂರುತ್ತಿದ್ದಾರೆ. ಸಿಡಿ ಸ್ಟೇ ತರಲು ಇರುವ ಕಾಳಜಿ ಆರೋಗ್ಯ ಸಚಿವ ಡಾ.ಸುಧಾಕರ್ ಅವರಿಗೆ ತಮ್ಮ ಇಲಾಖೆಯ ಬಗ್ಗೆ ಏಕಿಲ್ಲ? ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ವಿಮ್ಸ್ ಆಸ್ಪತ್ರೆಯಲ್ಲಾದ ಸಾವುಗಳಿಗೆ ಸಿಎಂ ಹಾಗೂ ಆರೋಗ್ಯ ಸಚಿವರು ಹೊಣೆ ಹೊರಬೇಕು. ವಿದ್ಯುತ್ ಕೊರತೆಯಿಂದ ಅವಘಡ ನಡೆದಿಲ್ಲ ಎಂದಾದರೆ ತನಿಖೆಗೆ ಸಮಿತಿ ರಚಿಸಿದ್ದೇಕೆ? ಸುಳ್ಳು ಹೇಳಿ ರಾಜ್ಯದ ದಿಕ್ಕು ತಪ್ಪಿಸುತ್ತಿದೆ ಸರ್ಕಾರ ಎಂದು ಕಾಂಗ್ರೆಸ್‌ ದೂರಿದೆ.

ಆರೋಗ್ಯ ಸಚಿವ ಡಾ. ಸುಧಾಕರ್

ರಾಜ್ಯದ ಜನರ ಪ್ರಾಣ ಉಳಿಯಬೇಕು ಎಂದರೆ ಅಸಮರ್ಥ ಸಚಿವ ಡಾ.ಸುಧಾಕರ್ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ರಾಜ್ಯ ಕಾಂಗ್ರೆಸ್‌ ಆಗ್ರಹಿಸಿದೆ.

ವಿಮ್ಸ್ ಆಸ್ಪತ್ರೆಯಲ್ಲಾದ ಸಾವುಗಳಿಗೆ ಸಿಎಂ ಹಾಗೂ ಆರೋಗ್ಯ ಸಚಿವರು ಹೊಣೆ ಹೊರಬೇಕು.

ವಿದ್ಯುತ್ ಕೊರತೆಯಿಂದ ಅವಘಡ ನಡೆದಿಲ್ಲ ಎಂದಾದರೆ ತನಿಖೆಗೆ ಸಮಿತಿ ರಚಿಸಿದ್ದೇಕೆ? ಸುಳ್ಳು ಹೇಳಿ ರಾಜ್ಯದ ದಿಕ್ಕು ತಪ್ಪಿಸುತ್ತಿದೆ ಸರ್ಕಾರ.

ರಾಜ್ಯದ ಜನರ ಪ್ರಾಣ ಉಳಿಯಬೇಕು ಎಂದರೆ ಅಸಮರ್ಥ ಸಚಿವ @mla_sudhakar ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು.
— Karnataka Congress (@INCKarnataka) September 17, 2022

ಕೋವಿಡ್‌ ಹೆಚ್ಚಳದ ಹಿನ್ನೆಲೆ ರಾಜ್ಯಾದಂತ ಮಾಸ್ಕ್‌ ಕಡ್ಡಾಯ: ಸಚಿವ ಸುಧಾಕರ್
ಬೆಂಗಳೂರು: ರಾಜ್ಯದಲ್ಲಿ ದಿನೇ-ದಿನೇ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಳವಾಗುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇಂದು ಕೋವಿಡ್‌ ನಿಯಂತ್ರಣ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌, 60 ವರ್ಷ ಮೇಲ್ಪಟ್ಟವರು ತಪ್ಪದೇ ಬೂಸ್ಟರ್‌ ಡೋಸ್‌ ಲಸಿಕೆಯನ್ನು ಪಡೆಯಬೇಕು ಮತ್ತು ರಾಜ್ಯದಲ್ಲಿ ಇನ್ನು ಮುಂದೆ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಎಂದು ತಿಳಿಸಿದರು.

ರಾಜ್ಯದಲ್ಲಿ ಸಿಎಂ ಬದಲಾವಣೆ ಕನಸು: ಕಾಂಗ್ರೆಸ್‌ಗೆ ಸುಧಾಕರ್‌ ಟಾಂಗ್‌
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುತ್ತಾ? ಎನ್ನುವ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌ ಘಟಕಕ್ಕೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ರಾಜ್ಯದಲ್ಲಿ  ದಕ್ಷ ನಾಯಕತ್ವದೊಂದಿಗೆ ಸರ್ಕಾರ ಸುಭದ್ರವಾಗಿದೆ ಎಂದು ತಿರುಗೇಟು ನೀಡಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು,  ಗಾಜಿನ ಮನೆಯಲ್ಲಿ ನಿಂತು ಅನ್ಯರತ್ತ ಕಲ್ಲು ತೂರುತ್ತಿರುವ ಕಾಂಗ್ರೆಸಿಗರ ಮನಃಸ್ಥಿತಿಯ ಬಗ್ಗೆ ಅಯ್ಯೋ ಎನ್ನಿಸುತ್ತಿದೆ. ದಿಲ್ಲಿ ಮಾಲೀಕರು ಕಳುಹಿಸಿದ ಚೀಟಿ ಆಧಾರದ ಮೇಲೆ ಮುಖ್ಯಮಂತ್ರಿಗಳನ್ನು ಬದಲಾಯಿಸಿದ ಘನ ಉದಾಹರಣೆ ನಿಮ್ಮ ಪಕ್ಷಕ್ಕೆ ಮಾತ್ರ ಇದೆ ಎಂದು ಕಾಂಗ್ರೆಸ್‌ ಪಕ್ಷವನ್ನು ವ್ಯಂಗಿಸಿದ್ದಾರೆ.

ಗಾಜಿನ ಮನೆಯಲ್ಲಿ ನಿಂತು ಅನ್ಯರತ್ತ ಕಲ್ಲು ತೂರುತ್ತಿರುವ ಕಾಂಗ್ರೆಸಿಗರ ಮನಃಸ್ಥಿತಿಯ ಬಗ್ಗೆ ಅಯ್ಯೋ ಎನ್ನಿಸುತ್ತಿದೆ.

ದಿಲ್ಲಿ ಮಾಲೀಕರು ಕಳುಹಿಸಿದ ಚೀಟಿ ಆಧಾರದ ಮೇಲೆ ಮುಖ್ಯಮಂತ್ರಿಗಳನ್ನು ಬದಲಾಯಿಸಿದ ಘನ ಉದಾಹರಣೆ ನಿಮ್ಮ ಪಕ್ಷಕ್ಕೆ ಮಾತ್ರ ಇದೆ.

1/4 https://t.co/AQmQZyepfg
— Dr Sudhakar K (@mla_sudhakar) August 9, 2022

ಕಾಂಗ್ರೆಸ್ ಆಳ್ವಿಕೆ ಕಾಲದಲ್ಲಿ ಸಿಎಂ ಎಂದರೆ ಚೀಫ್ ಮಿನಿಸ್ಟರ್ ಬದಲು ಚೀಟಿ ಮಿನಿಸ್ಟರ್ ಎಂಬಂತಾಗಿತ್ತು. ದಿಲ್ಲಿ ಪೋಸ್ಟ್ ಮ್ಯಾನ್ ಗಳು ಕಳುಹಿಸಿದ ಚೀಟಿ ಆಧಾರದ ಮೇಲೆ ಕಾಂಗ್ರೆಸ್ ಬದಲಾಯಿಸಿದ ಮುಖ್ಯಮಂತ್ರಿಗಳ ಸಂಖ್ಯೆಯ ಲೆಕ್ಕ ಕೊಡಬೇಕೆ? ಮುಖ್ಯಮಂತ್ರಿ ಸ್ಥಾನದ ಘನತೆ- ಗೌರವಗಳನ್ನು ಹಾಳುಗೆಡವಿದ್ದೇ ಕಾಂಗ್ರೆಸ್. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮನೆಯ ಗೇಟ್ ಕೀಪರ್ ಗಳ ರೀತಿ ಕಾಂಗ್ರೆಸ್ ಮುಖ್ಯಮಂತ್ರಿಗಳು ವರ್ತಿಸಿದ ಇತಿಹಾಸ ಇದೆ. ಆದರೆ ಮುಖ್ಯಮಂತ್ರಿ ಗಾದಿಯ ಕನಸು ಕಾಣುತ್ತಿರುವ ರಾಜ್ಯದ ಇಬ್ಬರು ಹಿರಿಯ ನಾಯಕರು ಈಗಲೇ ಗಾಂಧಿ ಕುಟುಂಬದ ಗೇಟ್ ಕಾಯುತ್ತಿರುವುದು ವರ್ತಮಾನ ಎಂದಿದ್ದಾರೆ.

ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಎಂಬುದು ಕಾಂಗ್ರೆಸ್ ಕಾಣುತ್ತಿರುವ ಕನಸು. ಬೊಮ್ಮಾಯಿ ಅವರ ದಕ್ಷ ನಾಯಕತ್ವದಲ್ಲಿ ಬಿಜೆಪಿ ಸರಕಾರ ಸುಭದ್ರವಾಗಿದೆ. ಆದರೆ ಕಾಂಗ್ರೆಸ್ ನ ಡಬಲ್ ಡೋರ್ ಬಸ್ಸಿನಿಂದ ಯಾರು, ಯಾರನ್ನು ಕೆಳಗಿಳಿಸುತ್ತಾರೆ ಎಂಬುದು ಸದ್ಯದಲ್ಲೇ ಗೊತ್ತಾಗುತ್ತದೆ ಎಂದು ಕಾಂಗ್ರೆಸ್‌ ಘಟಕಕ್ಕೆ ಟಾಂಗ್‌ ಕೊಡುವ ಮೂಲಕ ತಮ್ಮ ಪಕ್ಷದ ಆಡಳಿತದ ಬಗ್ಗೆ ಸಮರ್ಥನೆ ಮಾಡಿಕೊಂಡಿದ್ದಾರೆ.