DR PUNITH RAJKUMAR – Peepal Media

ಅಪ್ಪು ನೆನಪಲ್ಲಿ ‘ಮಕ್ಕಳ ಚಿತ್ರೋತ್ಸವʼಲೋಗೋ ಲಾಂಚ್ – ಉಲ್ಲಾಸ್ ಸ್ಕೂಲ್ ಸಿನಿಮಾಸ್ ವತಿಯಿಂದ ಮಕ್ಕಳ ಚಿತ್ರಕ್ಕೆ ಪ್ರೋತ್ಸಾಹ
ಬೆಂಗಳೂರು: ಮಕ್ಕಳ ದಿನಾಚರಣೆ ಪ್ರಯುಕ್ತ ಉಲ್ಲಾಸ್ ಸ್ಕೂಲ್ ಸಿನಿಮಾಸ್ ವತಿಯಿಂದ ‘ಮಕ್ಕಳ ಚಿತ್ರೋತ್ಸವ’ಲೋಗೋ ಲಾಂಚ್ ಮಾಡಲಾಯಿತು.

ಜನವರಿ 26ರಿಂದ ಮೂರು ದಿನ ನಡೆಯುವ ಮಕ್ಕಳ ಚಲನ ಚಿತ್ರೋತ್ಸವವನ್ನು ಇದೇ ಮೊದಲ ಬಾರಿಗೆ ಉಲ್ಲಾಸ್ ಸ್ಕೂಲ್ ಸಿನಿಮಾಸ್ ಆಯೋಜನೆ ಮಾಡಿದೆ.  ಅದರ ಪೂರ್ವಭಾವಿಯಾಗಿ ಇಂದು ಚಂದನವನದ ಬಾಲನಟರನ್ನೆಲ್ಲ ಒಟ್ಟು ಗೂಡಿಸಿ ಮಕ್ಕಳ ಚಲನಚಿತ್ರೋತ್ಸವ ಲೋಗೋ ಲಾಂಚ್ ಮಾಡಿಸಲಾಯಿತು.

ಜನವರಿ 26ರಿಂದ ಮೂರು ದಿನಗಳ ಕಾಲ ‘ಮಕ್ಕಳ ಚಲನಚಿತ್ರೋತ್ಸವʼನಡೆಯಲಿದ್ದು, ಈ ಬಾರಿ ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥ ಕೇವಲ ಕನ್ನಡ ಸಿನಿಮಾಗಳಿಗೆ ಆದ್ಯತೆ ನೀಡಲಾಗಿದೆ.  ಕಾರ್ಯಕ್ರಮದಲ್ಲಿ ಬಾಲ ನಟರಾಗಿ ಪ್ರಖ್ಯಾತಿ ಗಳಿಸಿದ್ದ ಕಲಾವಿದರನ್ನು ಒಂದೆಡೆ ಸೇರಿಸಿದ್ದು ವಿಶೇಷವಾಗಿತ್ತು. ಮಾಸ್ಟರ್ ಮಂಜುನಾಥ್, ಮಾಸ್ಟರ್ ರೋಹಿತ್, ಸುನಿಲ್ ರಾವ್, ವಿಜಯ ರಾಘವೇಂದ್ರ, ಮಾಸ್ಟರ್ ಆನಂದ್, ಅಭಿಷೇಕ್, ವಿನಾಯಕ ಜೋಶಿ, ಹೇಮಾ ಪಂಚಮುಖಿ, ಎಸ್.ಎಸ್. ಕೀರ್ತನ, ನಟರಾಜ್ ಗುಬ್ಬಿ ಸೇರಿದಂತೆ ಹಲವು ಕಲಾವಿದರು ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಈ ಕುರಿತು ಉಲ್ಲಾಸ್ ಸ್ಕೂಲ್ ಆಫ್ ಸಿನಿಮಾಸ್ ಮಾಲೀಕರಾದ ಉಲ್ಲಾಸ್ ಮಾತನಾಡಿ, ಮಕ್ಕಳ ಚಿತ್ರಕ್ಕೆ ಆದ್ಯತೆ ಕಡಿಮೆಯಾಗುತ್ತಿದೆ. ಎಲ್ಲಾ ಫಿಲಂ ಪೆಸ್ಟಿವಲ್ ಗಳಿಗೆ ಹತ್ತು ಹದಿನೈದು ಸಿನಿಮಾಗಳನ್ನು ಕಳುಹಿಸಿದ್ರು ಒಂದೂ ಸಿನಿಮಾ ಕೂಡ ಸೆಲೆಕ್ಟ್ ಆಗೋದಿಲ್ಲ. ಮಕ್ಕಳ ಚಿತ್ರಕ್ಕೆ ಆದ್ಯತೆ ನೀಡೋ ದೃಷ್ಟಿಕೋನದಿಂದ ಉಲ್ಲಾಸ್ ಸ್ಕೂಲ್ ಸಿನಿಮಾಸ್ ವತಿಯಿಂದ ಇದೇ ಮೊದಲ ಬಾರಿಗೆ ಮಕ್ಕಳ ಚಲನಚಿತ್ರೋತ್ಸವ ಆಯೋಜಿಸಲಾಗಿದೆ. ಈ ಬಾರಿ ಅಪ್ಪು ಅವರ ಸ್ಮರಣಾರ್ಥ ಕೇವಲ ಕನ್ನಡ ಸಿನಿಮಾಗಳನ್ನು ಮಾತ್ರ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಮಾಡಲಾಗುವುದು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಲೋಗೋ ಲಾಂಚ್ ಮಾಡಿ ಮಾತನಾಡಿದ ನಟ ವಿಜಯ ರಾಘವೇಂದ್ರ, ನಾವು ತುಂಬಾ ಅದೃಷ್ಟವಂತ ತಲೆಮಾರು ಅಂತ ಹೇಳೋಕೆ ಇಷ್ಟಪಡ್ತಿನಿ. ಮುಂಬರುವ ಜನರೇಷನ್ ಗೆ ಈ ರೀತಿ ಸಪೋರ್ಟ್ ಸಿಗುತ್ತೋ ಇಲ್ವೋ ಗೊತ್ತಿಲ್ಲ. ಇವತ್ತು ಎಲ್ಲಾ ಬಾಲನಟರೂ ಒಂದೇ ವೇದಿಕೆಯಲ್ಲಿ ಮತ್ತೆ ಸೇರುವಂತಾಯ್ತು ಇದನ್ನು ಸಾಧ್ಯವಾಗಿಸಿದಕ್ಕೆ ಎಲ್ಲರಿಗೂ ಆಭಾರಿ. ಬಾಲನಟರಾಗಿದ್ದಾಗ ನಿರ್ದೇಶಕರಿಂದ, ಹಿರಿಯ ಕಲಾವಿದರಿಂದ ಸಿಕ್ಕ ಸಪೋರ್ಟ್, ತರಭೇತಿ ಎಲ್ಲವೂ ನಮ್ಮನ್ನು ಇಲ್ಲಿವರೆಗೆ ಕರೆತಂದು ನಿಲ್ಲಿಸಿವೆ. ಮಕ್ಕಳ ಚಿತ್ರಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಆರಂಭವಾಗಿರುವ ಮಕ್ಕಳ ಚಲನಚಿತ್ರೋತ್ಸವ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದ್ರು.

ಕಾರ್ಯಕ್ರಮದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ಮಾಜಿ ಅಧ್ಯಕ್ಷರಾದ ಚಿನ್ನೇಗೌಡ್ರು, ಸುಂದರ್ ರಾಜ್, ಎಮ್ ಏನ್ ಕುಮಾರ್, ಟಿ ಪಿ ಸಿದ್ದರಾಜು ಸೇರಿದಂತೆ ಹಲವರು ಭಾಗಿಯಾಗಿದ್ದರು.

ನವೆಂಬರ್‌ 13ಕ್ಕೆ ಕೆಟಿವಿಎ ಸದಸ್ಯರುಗಳಿಗೆ ʼಅಪ್ಪು ಅಮರ ಹೆಲ್ತ್‌ ಪ್ರೆವಿಲೈಜ್‌ ಕಾರ್ಡ್‌ʼ ವಿತರಣೆ
ಬೆಂಗಳೂರು: ನಗರದ ಪ್ರತಿಷ್ಠಿತ ಕಾವೇರಿ ಆಸ್ಪತ್ರೆಯು, ಸಾಯಿ ಸಂಗಮ ಡಯಾಗ್ನೋಸ್ಟಿಕ್ ಮತ್ತು ಹೆಲ್ತ್ ಕೇರ್ ಸಹಯೋಗದಲ್ಲಿ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ (ಕೆಟಿವಿಎ) ಸದಸ್ಯರುಗಳಿಗೆ ʼಅಪ್ಪು ಅಮರ ಹಲ್ತ್‌ ಪ್ರಿವಿಲೈಜ್‌ ಕಾರ್ಡ್‌ʼ ವಿತರಿಸಲಿದೆ.

ಈ ಕುರಿತು ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಅಧ್ಯಕ್ಷರಾದ ಎಸ್.ವಿ. ಶಿವಕುಮಾರ್ ಮಾಹಿತಿ ನೀಡಿದ್ದು, ಕಾವೇರಿ ಆಸ್ಪತ್ರೆಯು ನವೆಂಬರ್‌ 13 2022 ರಂದು ಕೆಟಿವಿಎ ಸದಸ್ಯರುಗಳಿಗೆ”ಅಪ್ಪು ಅಮರ ಹೆಲ್ತ್ ಪ್ರಿವೀಲೇಜ್ ಕಾರ್ಡ್” ವಿತರಿಸಲಿದ್ದು, ಈ ಕಾರ್ಡ್ ಪಡೆದ ಸದಸ್ಯರುಗಳಲ್ಲಿ ಅವಶ್ಯಕತೆ ಇರುವ ಹಾಗೂ ಆರ್ಥಿಕವಾಗಿ ದುರ್ಬಲರಾದ ಸದಸ್ಯರುಗಳಿಗೆ ಶಸ್ತ್ರಚಿಕಿತ್ಸೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಲು ಕಾವೇರಿ ಆಸ್ಪತ್ರೆ ಮತ್ತು ಸಾಯಿ ಸಂಗಮ ಡಯಾಗ್ನೋಸ್ಟಿಕ್ ಮತ್ತು ಹೆಲ್ತ್ ಕೇರ್ ನಿರ್ಧರಿಸಿದೆ. ಇದಲ್ಲದೆ ಈ ಹೆಲ್ತ್ ಕಾರ್ಡ್ ಅಡಿಯಲ್ಲಿ ಎಲ್ಲಾ ಸ್ಪೆಷಾಲಿಟಿ ಸವಲತ್ತುಗಳನ್ನು ಕಡಿಮೆ ದರದಲ್ಲಿ ಪಡೆದುಕೊಳ್ಳಬಹುದಾಗಿದ್ದು, ಈ  ಸವಲತ್ತನ್ನು ಸುಮಾರು 5000 ಸದಸ್ಯರು ಮತ್ತು ಅವರ ಕುಟುಂಬದವರು ಪಡೆಯಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ಕಾರ್ಯಕ್ರಮವು ಸಾಯಿಸಂಗಮ ಡಯಾಗ್ನಾಸ್ಟಿಕ್ ಮತ್ತು ಹೆಲ್ತ್ ಕೇರ್, #106D, ಹೊಸ ನಂಬರ್ 19, 29 ನೇ ಎ ಅಡ್ಡರಸ್ತೆ, 7 ನೇ ಬ್ಲಾಕ್, ಜಯನಗರ, ಯಡಿಯೂರು, ನಲ್ಲಿ ಭಾನುವಾರ ಸಂಜೆ 5 ಗಂಟೆಗೆ ನಡೆಯಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಆಸಿಡ್ ದಾಳಿಗೊಳಗಾದ ಮಹಿಳೆಗೆ ಸರ್ಕಾರಿ ಕೆಲಸ: ಬಸವರಾಜ ಬೊಮ್ಮಾಯಿ ಭರವಸೆ
ಬೆಂಗಳೂರು: ಸರ್ಕಾರಿ ಕೆಲಸ ಹಾಗೂ ಮನೆ ಮಂಜೂರು ಮಾಡಿಕೊಡ ಬೇಕೆಂಬ ಆಸಿಡ್ ದಾಳಿಗೊಳಗಾದ ಮಹಿಳೆಯ ಬೇಡಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ಸ್ಪಂದಿಸಿದ್ದು, ಮಹಿಳೆಗೆ ಸರ್ಕಾರಿ ಕೆಲಸ ನೀಡುವ ಭರವಸೆ ನೀಡಿದ್ದಾರೆ.

ತಮ್ಮ ನಿವಾಸದ ಬಳಿ ಇಂದು ಭೇಟಿ ಮಾಡಿದ ಆಸಿಡ್ ದಾಳಿಗೊಳಗಾದ ಮಹಿಳೆಗೆ, ಕೂಡಲೇ ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡಬೇಕು ಎಂದು ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಫ್ಲ್ಯಾ ಟ್ ನೀಡಲು ಕ್ರಮ

ಈ ಕುರಿತು ಮಾಧ್ಯದವರೊಂದಿಗೆ ಮಾತನಾಡಿದ ಅವರು, ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಮಾಸಾಶನವನ್ನು 10 ಸಾವಿರ ರೂ.ಗಳಿಗೆ ಹೆಚ್ಚಿಸಲಾಗಿದೆ. ಆಕೆ ಒಂದು ಮನೆಗೂ ಬೇಡಿಕೆ ಸಲ್ಲಿಸಿದ್ದಾಳೆ. ಈ ಕುರಿತು ವಸತಿ ಸಚಿವರ ಬಳಿ ಮಾತನಾಡಿದ್ದು, ಈ ಭಾಗದಲ್ಲಿ ಬಡವರಿಗಾಗಿ ನಿರ್ಮಿಸಲಾಗುತ್ತಿರುವ 40 ಸಾವಿರ ಫ್ಲ್ಯಾ ಟ್ ಗಳಲ್ಲಿ ಒಂದು ಫ್ಲ್ಯಾ ಟ್ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

ಪುನೀತ್‌ ರಾಜಕುಮಾರ ಅವರಿಗೆ ಪ್ರಶಸ್ತಿ ಪ್ರದಾನ ಮಾಡುತ್ತಿರುವುದರ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿಯವರು, ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡುತ್ತಿರುವುದು ಕನ್ನಡ ರಾಜ್ಯೋತ್ಸವದ ವಿಶೇಷ . ನವೆಂಬರ್ 1 ರಂದೇ ಪ್ರಶಸ್ತಿ ನೀಡಬೇಕೆನ್ನುವುದು ನನ್ನ ಇಚ್ಛೆಯಾಗಿತ್ತು. ಡಾ: ಪುನೀತ್ ರಾಜಕುಮಾರ್ ಅವರು ಕನ್ನಡಕ್ಕಾಗಿ ಸಂಪೂರ್ಣ ಬದುಕನ್ನೇ ಮೀಸಲಿಟ್ಟವರು. ಕನ್ನಡದ ಬಗ್ಗೆ, ಅಸ್ಮಿತೆಯ ಬಗ್ಗೆ ಜಾಗೃತಿ ಮೂಡಿಸಿದವರು. ಕನ್ನಡ ನಾಡಿನಲ್ಲಿ ಹಲವಾರು ಪರೋಪಕಾರಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ತಮ್ಮ ಅಂಗಾಗಗಳನ್ನೇ ದಾನ ಇತರರಿಗೆ ಮಾದರಿಯಾಗಿದ್ದಾರೆ.  ಲಕ್ಷಾಂತರ ಜನರು ಅಂಗಾಂಗ ದಾನ ಮಾಡಲು ಪ್ರೇರಣಾ ಶಕ್ತಿಯಾಗಿದ್ದಾರೆ. ಸಣ್ಣ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ್ದಾರೆ. ಅದಕ್ಕಾಗಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಇಂದು ಸಂಜೆ ಪ್ರದಾನ ಮಾಡಲಾಗುತ್ತಿದೆ. ಇದೊಂದು ಮಹತ್ವದ ಕಾರ್ಯಕ್ರಮ. ಪಠ್ಯ ಪುಸ್ತಕದಲ್ಲಿ ಪುನೀತ ಅವರ ಬಗ್ಗೆ ಪಾಠವನ್ನು ಸೇರ್ಪಡೆ ಮಾಡುವ ಬಗ್ಗೆ ಪ್ರತಿಕ್ರಿಯೆ ನೀಡಿ ಮುಂದಿನ ದಿನಗಳಲ್ಲಿ ಏನೆಲ್ಲಾ ಮಾಡಬಹುದೋ ಅದನ್ನು ಮಾಡಲಾಗುವುದು ಎಂದು ತಿಳಿಸಿದರು.

ಕನ್ನಡ ಡಿಂಡಿಮ ಬಾರಿಸಬೇಕು

ಸಮಸ್ತ ಕನ್ನಡ ನಾಡಿನ ಜನತೆಗೆ 67 ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ ಮುಖ್ಯ ಮಂತ್ರಿಗಳು ಅತ್ಯಂತ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಆಚರಣೆ ಕೇವಲ ಆಚರಣೆಯಾಗಿ ಉಳಿಯದೆ ಪ್ರತಿಯೊಬ್ಬ ಕನ್ನಡಿಗರ ಹೃದಯಗಳಲ್ಲಿ ಕನ್ನಡ ಡಿಂಡಿಮ ಬಾರಿಸಬೇಕು. ಕನ್ನಡಿಗರು ಶಿಕ್ಷಣ, ಉದ್ಯೋಗ ಮತ್ತು ಎಲ್ಲಾ ರಂಗಗಳಲ್ಲಿ ಮುಂದೆ ಬರಲು ಹಲವಾರು ಯೋಜನೆಗಳನ್ನು ಸರ್ಕಾರ ರೂಪಿಸಿದೆ. ಅದರ ಲಾಭವನ್ನು ಕನ್ನಡಿಗರು ಪಡೆಯಬೇಕು. ವಿಶೇಷವಾಗಿ ಯುವಕರು ಕ್ರಿಯಾಶೀಲರಾಗಿ ತೊಡಗಿಸಿಕೊಳ್ಳಬೇಕು. ಪ್ರತಿ ಕನ್ನಡಿಗನೂ ಕನ್ನಡದ ಅಸ್ಮಿತೆ, ಸ್ವಾಭಿಮಾನದ ಬಗ್ಗೆ ಜಾಗೃತಿ ಮೂಡಿಸಿ, ಎಲ್ಲಿದ್ದರೂ ಕನ್ನಡಿಗರಾಗಿಯೇ ಇರಬೇಕೆಂದರು.

ನಾಳೆ ಪುನೀತ್‌ ರಾಜಕುಮಾರ್‌ ಪುಣ್ಯ ಸ್ಮರಣೆ
ಬೆಂಗಳೂರು: ಒಂದು ಕಡೆ ಪುನೀತ್ ರಾಜ್‌ಕುಮಾರ್ ಅವರ ಕೊನೆಯ ಸಿನಿಮಾ ‘ಗಂಧದಗುಡಿʼಸಿನಿಮಾ ತೆರೆ ಕಾಣುತ್ತಿರುವ ಸಂಭ್ರಮವಾದರೆ, ಮತ್ತೊಂದು ಕಡೆ ಪುನೀತ್ ಅವರ ಮೊದಲ ವರ್ಷದ ಪುಣ್ಯ ಸ್ಮರಣೆಯೂ ಆಗಮಿಸಿದೆ.

ಇದೇ ಅಕ್ಟೋಬರ್ 29ಕ್ಕೆ ಪುನೀತ್ ಅವರು ಅಗಲಿ ಒಂದು ವರ್ಷ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ವಿವಿಧ ಸಾಮಾಜಿಕ ಹಾಗೂ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಜತೆಗೆ ರಾಜ್ಯದ ಎಲ್ಲ ಕಡೆ ‘ಗಂಧದಗುಡಿʼಯನ್ನು ನೋಡುವ ಮೂಲಕ ಪುನೀತ್ ಅವರ ಕನಸಿನ ಚಿತ್ರವನ್ನು ಸೆಲೆಬ್ರೆಟ್ ಮಾಡಲು ತಯಾರಿ ಮಾಡಿಕೊಂಡಿದ್ದಾರೆ.

ರಂಗೇರಲಿರುವ ಕಂಠೀರವ ಸ್ಟುಡಿಯೋ

ಪುನೀತ್ ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಬೆಂಗಳೂರಿನ ಕಂಠೀರವ ಸ್ಟುಡಿಯೋವನ್ನು ವಿಶೇಷವಾಗಿ ಅಲಂಕರಿಸಲಾಗಿದೆ. ಪುನೀತ್ ಅವರ 75ಕ್ಕೂ ಹೆಚ್ಚು ಕಟೌಟ್‌ಗಳು, ಆಕರ್ಷಕವಾದ ವಿದ್ಯುತ್ ದೀಪಗಳಿಂದ ಇಡೀ ಕಂಠೀರವ ಸ್ಟುಡಿಯೋ ರಂಗೇರಲಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆ, ತಾಲೂಕು ಹಾಗೂ ಹಳ್ಳಿಗಳಿಂದ ಅಭಿಮಾನಿಗಳು ಕಂಠೀರವ ಸ್ಟುಡಿಯೋಗೆ ಆಗಮಿಸಿಲಿದ್ದಾರೆ.

ಸಾಧು ಸಾರಥ್ಯದಲ್ಲಿ ಗೀತ ನಮನ

ಸಂಗೀತ ನಿರ್ದೇಶಕ ಸಾಧು ಕೋಕಿಲಾ ಅವರ ಸಾರಥ್ಯದಲ್ಲಿ 24 ಗಂಟೆಗಳ ಕಾಲ ಗೀತ ನಮನ ಕಾರ್ಯಕ್ರಮವು ನಡೆಯಲಿದೆ. ಈ ಕಾರ್ಯಕ್ರಮವು ಅ.28 ರ ರಾತ್ರಿ 12 ಗಂಟೆಯಿಂದ ಶುರುವಾಗಿ ಅ.29 ರ ರಾತ್ರಿ 12 ಗಂಟೆವೆರಗೂ ನಡೆಯಲಿದೆ. ಪುನೀತ್ ಅವರ ಮೊದಲ ವರ್ಷದ ಪುಣ್ಯ ಸ್ಮರಣೆಯ ಅಂಗವಾಗಿ ಆಯೋಜಿಸಿರುವ ಈ ಗೀತ ನಮನ ಕಾರ್ಯಕ್ರಮದಲ್ಲಿ, ನಟರಾದ ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಅವರು ಹಾಡಲಿದ್ದಾರೆ. ಇವರ ಜತೆಗೆ ಚಿತ್ರರಂಗದ ದಿಗ್ಗಜ ಗಾಯಕರು, ತಂತ್ರಜ್ಞರು, ಸಂಗೀತಗಾರರು ಪಾಲ್ಗೊಂಡು ಹಾಡುಗಳನ್ನು ಪ್ರಸ್ತುತ ಪಡಿಸಲಿದ್ದಾರೆ. ಅಲ್ಲದೆ ಆರ್‌ಕ್ಯಾಸ್ಟ್ರ ಕಲಾವಿದರಿಂದಲೂ ಸಂಗೀತ ಕಾರ್ಯಕ್ರಮ ಜರುಗಲಿದೆ.

ಗಂಧದ ಗುಡಿ: ಮೊದಲ ದಿನವೇ ರಾಜ್ಯದಾದ್ಯಂತ ಅದ್ದೂರಿ ಪ್ರದರ್ಶನ
ಬೆಂಗಳೂರು: ಕರ್ನಾಟಕ ರಾಜರತ್ನ ಡಾ. ಪುನೀತ್‌ ರಾಜಕುಮಾರ ಅಭಿನಯದ ಗಂಧದ ಗುಡಿ ಸಿನಿಮಾವು ಇಂದು ರಾಜ್ಯದಾದ್ಯಂತ ಬಿಡುಗಡೆಯಾಗಿದ್ದೂ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

ಪುನೀತ್‌ ರಾಜುಕುಮಾರ್‌ ಅವರ ಕೊನೆಯ ಚಿತ್ರವಾದ ಗಂಧದ ಗುಡಿ ಸಿನಿಮಾಗೆ, ಅಭಿಮಾನಿಗಳು ಕಾದು ಕುಳಿತಿದ್ದರು. ಆದರೆ ಇಂದು ಅವರ ಆಸೆ ನೆರೆವೇರಿದ್ದು, ಕೊನೆಯ ಸಿನಿಮಾದ ಮೂಲಕ ಅಭಿಮಾನಿಗಳು ಅಪ್ಪುನನ್ನು ಕಣ್ಣು ತುಂಬಿಕೊಂಡಿದ್ದಾರೆ.

ಗಂಧದಗುಡಿ ಸಿನಿಮಾ ರಾಜ್ಯದ ಎಲ್ಲ ಕಡೆ ಬೆಳಗ್ಗೆ 6 ಗಂಟೆಗೆಯಿಂದಲೇ ಪ್ರದರ್ಶನ ಕಾಣುತ್ತಿದ್ದು, ಚಿತ್ರವನ್ನು ಅಭಿಮಾನಿಗಳು, ಪ್ರೇಕ್ಷಕರು ಅದ್ದೂರಿಯಾಗಿ ಸ್ವಾಗತಿಸಿದರು.

ಮೊದಲ ದಿನವೇ ರಾಜ್ಯದ್ಯಾಂತ 200 ಚಿತ್ರಮಂದಿರಗಳಲ್ಲಿ 1500 ಶೋ- ಪ್ರದರ್ಶನ ಕಂಡಿರುವ ಈ ಸಿನಿಮಾ, ಪ್ರತಿ ಚಿತ್ರಮಂದಿರದಲ್ಲಿ 6 ರಿಂದ 7 ಶೋ ಪ್ರದರ್ಶನ ಕಂಡಿದೆ. ಬೆಂಗಳೂರಿನಲ್ಲೇ 300ಕ್ಕೂ ಹೆಚ್ಚು ಶೋಗಳ ಪ್ರದರ್ಶನ ಕಂಡಿರುವ ಗಂಧದಗುಡಿ, ರಾಜ್ಯದಲ್ಲಿ ಒಟ್ಟು 175 ಚಿತ್ರಮಂದಿರಗಳಲ್ಲಿ ಹೌಸ್‌ಫುಲ್ ಪ್ರದರ್ಶನ ಕಂಡಿದೆ.

ಸಿನಿಮಾವು ಅದ್ದೂರಿಯಾಗಿ ಪ್ರದರ್ಶನ ಕಾಣುತ್ತಿರುವ ಸಂತಸಕ್ಕೆ, ಚಿತ್ರಮಂದಿರದ ಮುಂದೆ ಅಭಿಮಾನಿಗಳ ಕುಣಿದು ಕುಪ್ಪಳಿಸಿದ್ದು, ರಾಘವೇಂದ್ರ ರಾಜಕುಮಾರ ಕೂಡ ಜೊತೆ ಹೆಜ್ಜೆ ಹಾಕಿದ್ದಾರೆ.

ಇನ್ನೂ ಅಪ್ಪು ಅಭಿಮಾನಿಗಳು ಸಿನಿಮಾ ತೆರೆಕಂಡಿರುವ ಖುಷಿಗೆ, ಚಿತ್ರಮಂದಿರಗಳ ಮುಂದೆ ಕೇಕ್ ಕತ್ತರಿಸಿದರು. ನಂತರ ಅಭಿಮಾನಿಗಳು ಅಪ್ಪು ಹೆಸರಲ್ಲಿ ಜನರಿಗೆ ಅನ್ನದಾನ ಮಾಡಿದರು. ಒಟ್ಟಾರೆ ನಗುವಿನ ಒಡೆಯನನ್ನು ಕಳೆದುಕೊಂಡ ಕರುನಾಡಿನ ಜನತೆಗೆ, ಗಂಧದಗುಡಿ ಸಿನಿ ಪರದಿಯ ಮೂಲಕ ಅಪ್ಪುವಿನ ನಗುವನ್ನು ಮತ್ತೋಮ್ಮೆ ಕಾಣುವ ಅದೃಷ್ಟ ಅಭಿಮಾನಿಗಳಿಗೆ ದೊರಕಿದಂತಾಗಿದೆ.

ಗಂಧದಗುಡಿ ಟ್ರೈಲರ್| 24 ಗಂಟೆಯಲ್ಲಿ ಒಂದು ಕೋಟಿ ವೀಕ್ಷಣೆ: ಎಲ್ಲೆಡೆ ಅಪ್ಪುದೇ ಹವಾ!
ಬೆಂಗಳೂರು: ಪವರ್ ಸ್ಟಾರ್, ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ಅವರ ಕನಸಿನ ಸಿನಿಮಾ ಗಂಧದಗುಡಿ ಟ್ರೈರಲ್ ಬಿಡುಗಡೆಯಾಗಿ 24 ಗಂಟೆಗಳು ಕಳೆದಿದ್ದು, ಒಂದು ಕೋಟಿ ವೀಕ್ಷಣೆ ಪಡೆದು ಹೊಸ ದಾಖಲೆ ನಿರ್ಮಿಸಿದೆ.

ಹೌದು, ಕಳೆದ 24 ಗಂಟೆಯಲ್ಲಿ ಈ ಟ್ರೈಲರ್ ಒಂದು ಕೋಟಿಗೂ ಅಧಿಕ ಮಂದಿ ವೀಕ್ಷಣೆ ಪಡೆಯುವ ಮೂಲಕ ಗಂಧದಗುಡಿ ಟ್ರೈಲರ್ ಯೂಟ್ಯೂಬ್ ನಲ್ಲಿ ದೂಳೆಬ್ಬಿಸಿದೆ.

ಅಪ್ಪು ಅಭಿನಯದ ಗಂಧದಗುಡಿ ಸಿನಿಮಾ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದು, ಇದೇ ಅಕ್ಟೋಬರ್ 28ರಂದು ಜಗತ್ತಿನಾದ್ಯಂತ ತೆರೆಕಾಣಲಿದೆ ಎಂದು ಅಪ್ಪು ಪತ್ನಿ ಅಶ್ವಿನಿ ಅವರು ಘೋಷಿಸಿದ್ದಾರೆ.

ಬೆಂಗಳೂರಿನ ನರ್ತಕಿ ಥಿಯೇಟರ್ ನಲ್ಲಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಗಂಧದಗುಡಿ ಸಿನಿಮಾ ಟ್ರೈಲರ್ ಅನ್ನು ಬಿಡುಗಡೆ ಮಾಡಿದ್ದರು. ಈ ಹಿನ್ನಲೆಯಲ್ಲಿ ಟ್ರೈಲರ್ ನೋಡಿ ಪ್ರೇಕ್ಷಕರು ಹುಚ್ಚೆದ್ದು ಕುಣಿಯುತ್ತಿದ್ದರೆ. ಸೆಲೆಬ್ರಿಟಿಗಳು, ರಾಜಕಾರಣಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.