EC – Peepal Media

ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ವೇಳಾಪಟ್ಟಿ ಬಿಡುಗಡೆ
ಲೋಕಸಭಾ ಚುನಾವಣೆಯ ನಂತರ ದೇಶದಲ್ಲಿ ಮತ್ತೊಮ್ಮೆ ಚುನಾವಣಾ ಗಂಟೆ ಮೊಳಗಿದೆ. ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ವೇಳಾಪಟ್ಟಿಯನ್ನು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಬಿಡುಗಡೆ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ ಎಂದು ಇಸಿ ಪ್ರಕಟಿಸಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ಸೆಪ್ಟೆಂಬರ್ 18, 25 ಮತ್ತು ಅಕ್ಟೋಬರ್ 1ರಂದು ನಡೆಯಲಿದೆ.

ಒಟ್ಟು 90 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅಕ್ಟೋಬರ್ 4ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ. ಹರಿಯಾಣ ವಿಧಾನಸಭೆಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಘೋಷಿಸಿದೆ. ಎಲ್ಲಾ 90 ಸ್ಥಾನಗಳಿಗೆ ಅಕ್ಟೋಬರ್ 1ರಂದು ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಮತಗಳ ಎಣಿಕೆ ನಡೆಯಲಿದ್ದು, ಅಕ್ಟೋಬರ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ‘2024ರ ಲೋಕಸಭೆ ಚುನಾವಣೆಯು ವಿಶ್ವದ ಅತಿದೊಡ್ಡ ಚುನಾವಣಾ ಪ್ರಕ್ರಿಯೆಯಾಗಿದೆ. ಚುನಾವಣೆಗಳು ಯಶಸ್ವಿಯಾಗಿ ಮತ್ತು ಶಾಂತಿಯುತವಾಗಿ ಪೂರ್ಣಗೊಂಡಿವೆ. ಯುವಕರಿಂದ ಹಿಡಿದು ವಯೋವೃದ್ಧರವರೆಗೂ ದೇಶ ವಿದೇಶಗಳಿಂದ ಅಪಾರ ಸಂಖ್ಯೆಯಲ್ಲಿ ನೆರೆದು ಮತದಾನದ ಹಕ್ಕನ್ನು ಚಲಾಯಿಸಿದರು. ಅದರಲ್ಲೂ ಜಮ್ಮು-ಕಾಶ್ಮೀರದ ಚುನಾವಣೆಯಲ್ಲಿ ಅಲ್ಲಿನ ಮತದಾರರು ಉತ್ಸಾಹ ತೋರಿದ್ದಾರೆ. ಈ ಬಾರಿ ಹಿಂಸಾಚಾರವನ್ನು ಬಿಟ್ಟು ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕನ್ನು ಚಲಾಯಿಸಲು ಆದ್ಯತೆ ನೀಡಿದ್ದಾರೆʼ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ಏಪ್ರಿಲ್ 19ರ ಬೆಳಿಗ್ಗೆ 7ರಿಂದ ಜೂನ್ 1ರ ಸಂಜೆ 6.30ರವರೆಗೆ ಚುನಾವಣೋತ್ತರ ಸಮೀಕ್ಷೆಗಳಿಗೆ ನಿಷೇಧ ಹೇರಿದ ಚುನಾವಣಾ ಆಯೋಗ
ಲೋಕಸಭಾ ಚುನಾವಣೆಗೆತಯಾರಿ ಭರದಿಂದ ನಡೆಯುತ್ತಿದ್ದು ದೇಶದಲ್ಲಿ ಈ ಬಾರಿ 7 ಹಂತಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ದೇಶದಲ್ಲಿ ಮಾದರಿ ನೀತಿ ಸಂಹಿತೆಯೂ ಜಾರಿಗೆ ಬಂದಿದೆ. ಈ ಬಾರಿ ಲೋಕಸಭೆ ಚುನಾವಣೆಗೆ ಏಪ್ರಿಲ್ 19, ಏಪ್ರಿಲ್ 26, ಮೇ 7, 13 ಮೇ, 20 ಮೇ, 25 ಮೇ ಮತ್ತು ಜೂನ್ 1ರಂದು ಮತದಾನ ನಡೆಯಲಿದೆ. ಜೂನ್ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಈ ನಡುವೆ ಚುನಾವಣಾ ಆಯೋಗ ಎಕ್ಸಿಟ್ ಪೋಲ್ ಕುರಿತು ಮಹತ್ವದ ನಿರ್ಧಾರ ಕೈಗೊಂಡಿದೆ.

ಅಧಿಸೂಚನೆ ಹೊರಡಿಸಿದ ಚುನಾವಣಾ ಆಯೋಗ

ಎಕ್ಸಿಟ್ ಪೋಲ್ ಕುರಿತು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಇದರಲ್ಲಿ ಏಪ್ರಿಲ್ 19ರ ಬೆಳಿಗ್ಗೆ 7ರಿಂದ ಜೂನ್ 1ರ ಸಂಜೆ 6.30ರವರೆಗೆ ಚುನಾವಣೋತ್ತರ ಸಮೀಕ್ಷೆಗಳ ನಡವಳಿಕೆ, ಪ್ರಕಟಣೆ ಅಥವಾ ಪ್ರಚಾರದ ಮೇಲೆ ನಿಷೇಧ ಹೇರಲಾಗಿದೆ. ಈ ಅವಧಿಯಲ್ಲಿ ಲೋಕಸಭೆ ಹಾಗೂ ದೇಶದ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದೆ. ಆಯೋಗವು ಗುರುವಾರ (ಮಾರ್ಚ್ 28) ಹೊರಡಿಸಿದ ನಿರ್ದೇಶನವು ಪ್ರಜಾಪ್ರತಿನಿಧಿ ಕಾಯಿದೆಯ ನಿಬಂಧನೆಗಳ ಅಡಿಯಲ್ಲಿ, ಮತದಾನದ ಮುಕ್ತಾಯದ 48 ಗಂಟೆಗಳ ಮೊದಲು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಅಭಿಪ್ರಾಯ ಸಂಗ್ರಹ ಫಲಿತಾಂಶಗಳು ಅಥವಾ ಅಭಿಪ್ರಾಯ ಸಂಗ್ರಹಣೆ ಸೇರಿದಂತೆ ಯಾವುದೇ ಸಮೀಕ್ಷೆಯನ್ನು ನಡೆಸಬಾರದೆಂದು ಸ್ಪಷ್ಟಪಡಿಸುತ್ತದೆ.

ಈ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ

ದೇಶದಲ್ಲಿ ಲೋಕಸಭೆ ಚುನಾವಣೆಯ ಜೊತೆಗೆ, ಚುನಾವಣಾ ಆಯೋಗವು ಅನೇಕ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಮತ್ತು ಉಪಚುನಾವಣೆಗಳನ್ನು ಸಹ ನಡೆಸಲಿದೆ. ವಿಧಾನಸಭೆ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ಸೇರಿವೆ. ಇದಲ್ಲದೇ ದೇಶದ 12 ರಾಜ್ಯಗಳ 25 ವಿಧಾನಸಭಾ ಕ್ಷೇತ್ರಗಳಿಗೂ ಪ್ರತ್ಯೇಕ ಉಪಚುನಾವಣೆ ನಡೆಯಲಿದೆ.

ಚುನಾವಣಾ ಆಯೋಗದಿಂದ NCRT ಸಮಾಜ ವಿಜ್ಞಾನ ಪಠ್ಯಪುಸ್ತಕಗಳ ಪರಿಶೀಲನೆ: ಕೇಂದ್ರಕ್ಕೆ ಪತ್ರ
ಬೆಂಗಳೂರು: ಎನ್‌ಸಿಆರ್‌ಟಿ ಸಮಾಜ ವಿಜ್ಞಾನ ಪಠ್ಯಪುಸ್ತಕಗಳಲ್ಲಿರುವ ದೋಷಗಳನ್ನು ಪರಿಶೀಲಿಸಲಿಸುತ್ತೇವೆ ಎಂದು ಚುನಾವಣಾ ಆಯೋಗವು ಕೇಂದ್ರಕ್ಕೆ ತಿಳಿಸಿದೆ.

“correctness and relevance” ಗಾಗಿ ಪುಸ್ತಕಗಳನ್ನು ಪರಿಶೀಲಿಸಲು ಬಯಸಿರುವುದಾಗಿ ಚುನಾವಣಾ ಆಯೋಗ ತಿಳಿಸಿದ್ದು, ಸದ್ಯದ ಪಠ್ಯಪುಸ್ತಕಗಳನ್ನು “ನೈತಿಕ ಮತದಾನದ ನಿರ್ಧಾರಗಳನ್ನು” ತೆಗೆದುಕೊಳ್ಳುವಂತೆ ವಿದ್ಯಾರ್ಥಿಗಳನ್ನು ರೂಪಿಸಲು ಸಿದ್ಧಪಡಿಸುವುದಿಲ್ಲ ಎಂದು ಹೇಳಿದೆ.

2022 ರಲ್ಲಿ ಚುನಾವಣಾ ಆಯೋಗವು ತಿದ್ದುಪಡಿ ಮಾಡಲು ಸೂಚಿಸಿದ ಅಧ್ಯಾಯಗಳನ್ನು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) 6 ನೇ ತರಗತಿ ಮತ್ತು 10 ನೇ ತರಗತಿ ಪಠ್ಯಪುಸ್ತಕಗಳಿಂದ ತೆಗೆದುಹಾಕಿದೆ. ಇದಕ್ಕೆ  ಕೋವಿಡ್-19  ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಹೊರೆಯನ್ನು ಕಡಿಮೆ ಮಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿತ್ತು.

ಡಿಲಿಟ್‌ ಮಾಡಲಾದ ಅಧ್ಯಾಯಗಳು: 6 ನೇ ತರಗತಿಯ “ಪ್ರಜಾಪ್ರಭುತ್ವದ ಸರ್ಕಾರದ ಪ್ರಮುಖ ಅಂಶಗಳು” ಮತ್ತು 10 ನೇ ತರಗತಿಯ “ಜನಪ್ರಿಯ ಹೋರಾಟಗಳು ಮತ್ತು ಚಳುವಳಿಗಳು”.

6 ನೇ ತರಗತಿಯ ಪಠ್ಯಪುಸ್ತಕದ ಅಧ್ಯಾಯದಲ್ಲಿ ಚುನಾವಣಾ ಆಯೋಗವು “ಈ ಎಳಸು ವಯಸ್ಸಿನ ಮಕ್ಕಳಿಗೆ ಸಂಘರ್ಷ ಇತಿಹಾಸವನ್ನು ವಿಸ್ತರಿಸಿ ಪಾಠ ಮಾಡುವುದು ತೀರ ಅನಗತ್ಯ” ಎಂದು ಹೇಳಿದೆ. 10 ನೇ ತರಗತಿ ಪುಸ್ತಕದಲ್ಲಿನ ಅಧ್ಯಾಯಕ್ಕೆ ಸಂಬಂಧಿಸಿದಂತೆ, “ಘರ್ಷಣೆಗಳು, ಹೋರಾಟಗಳು, ಜನಪ್ರಿಯ ಚಳುವಳಿಗಳು, ಆಂದೋಲನಗಳ” ಬಗ್ಗೆ ಹೆಚ್ಚು ಮಾತನಾಡಿದೆಯೇ ಹೊರತು, “ಚುನಾವಣಾ ಭಾಗವಹಿಸುವಿಕೆಗಾಗಿ ಪೌರತ್ವ ಅಭಿವೃದ್ಧಿ – citizenship development for electoral participation” ಬಗ್ಗೆ ಯುವಜನರಿಗೆ ಹೆಚ್ಚು ಪಠ್ಯ ನೀಡಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

6 ನೇ ತರಗತಿ ಪುಸ್ತಕದ ಅಧ್ಯಾಯವು ಸಮಾನತೆ ಮತ್ತು ತಾರತಮ್ಯದ ಪರಿಕಲ್ಪನೆಗಳ ಬಗ್ಗೆ ಮಾತನಾಡಿದೆ ಮತ್ತು ದಕ್ಷಿಣ ಆಫ್ರಿಕಾದಲ್ಲಿ ವರ್ಣಭೇದ ನೀತಿ ಮತ್ತು ದಲಿತರು, ಆದಿವಾಸಿಗಳು ಮತ್ತು ಅಲ್ಪಸಂಖ್ಯಾತರ ನೇತೃತ್ವದ ಚಳುವಳಿಗಳ ಬಗ್ಗೆ ಉಲ್ಲೇಖಿಸಿದೆ. 10 ನೇ ತರಗತಿ ಪುಸ್ತಕದಿಂದ  ಕಾರ್ಯಕರ್ತೆ ಮೇಧಾ ಪಾಟ್ಕರ್ ನೇತೃತ್ವದ ಪೀಪಲ್ಸ್ ಮೂವ್‌ಮೆಂಟ್‌ಗಳ ರಾಷ್ಟ್ರೀಯ ಒಕ್ಕೂಟ ಮತ್ತು ನೇಪಾಳದಲ್ಲಿ ರಾಜಪ್ರಭುತ್ವ ವಿರೋಧಿ ಪ್ರತಿಭಟನೆಗಳ ಬಗ್ಗೆ ಇರುವ ಮಾಹಿತಿಗಳನ್ನು ತೆಗೆದುಹಾಕಲಾಗಿದೆ.

ಪಠ್ಯಪುಸ್ತಕಗಳಿಗೆ ತಿದ್ದುಪಡಿಗಳನ್ನು ಸೂಚಿಸುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗವು 2016 ರಿಂದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಜೊತೆಗೆ ಪತ್ರವ್ಯವಹಾರ ನಡೆಸುತ್ತಿದೆ. 2020 ರಲ್ಲಿ, ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವನ್ನು ಶಿಕ್ಷಣ ಸಚಿವಾಲಯ ಎಂದು ಮರುನಾಮಕರಣ ಮಾಡಲಾಯಿತು.

ಎರಡು ಮೂರು ದಿನಗಳಲ್ಲಿ ಹಲವು ರಾಜ್ಯಗಳ ಚುನಾವಣಾ ವೇಳಾಪಟ್ಟಿ! ಒಂದೇ ಹಂತದಲ್ಲಿ ಮತದಾನ
ದೆಹಲಿ: ಐದು ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಸುವ ಕುರಿತು ಚರ್ಚಿಸಲು ಕೇಂದ್ರ ಚುನಾವಣಾ ಆಯೋಗ ಸಭೆ ನಡೆಸಿದೆ. ಈ ಸಲುವಾಗಿ ಇಂದು ಆಯಾ ರಾಜ್ಯಗಳ ಚುನಾವಣಾ ವೀಕ್ಷಕರೊಂದಿಗೆ ಸಭೆ ನಡೆಯಲಿದೆ. ಈಗಾಗಲೇ ವಿಧಾನಸಭೆ ಚುನಾವಣೆ ನಿರ್ವಹಣೆಗೆ ಪರಾಮರ್ಶೆ ಮುಗಿಸಿರುವ ಚುನಾವಣಾ ಆಯೋಗ ಒಂದು ಅಂದಾಜಿಗೆ ಬಂದಂತಿದೆ. ನಾಲ್ಕು ರಾಜ್ಯಗಳಿಗೆ ಒಂದು ಹಂತದಲ್ಲಿ, ಒಂದು ರಾಜ್ಯಕ್ಕೆ ಎರಡು ಹಂತಗಳಲ್ಲಿ ಮತದಾನ ನಡೆಯುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.

ತೆಲಂಗಾಣ ಜೊತೆಗೆ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಿಜೋರಾಂನ ಚುನಾವಣಾ ವೀಕ್ಷಕರನ್ನು ಕೇಂದ್ರ ಚುನಾವಣಾ ಆಯೋಗ ಭೇಟಿ ಮಾಡಲಿದೆ. ಐದು ರಾಜ್ಯಗಳಲ್ಲಿ ಶಾಂತಿಯುತ ಮತ್ತು ಸುಗಮ ವಿಧಾನಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಕೇಂದ್ರ ಚುನಾವಣಾ ಆಯೋಗ ಈ ಸಭೆ ನಡೆಸುತ್ತಿದೆ.

‌ಡಿಸೆಂಬರ್‌ ಮೊದಲ ವಾರದಲ್ಲಿ ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಮಿಜೋರಾಂನಲ್ಲಿ ಒಂದೇ ಹಂತದ ಮತದಾನದಲ್ಲಿ ಚುನಾವಣೆ ನಡೆಸಲು ಇಸಿ ಉದ್ದೇಶಿಸಿದೆ. ಅದೇ ತಿಂಗಳು ನಕ್ಸಲ್‌ ಪೀಡಿತ ಛತ್ತೀಸ್‌ಗಢದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಸಲು ಬಯಸಿದೆ. ಡಿಸೆಂಬರ್ 10-15ರ ನಡುವೆ ಮತ ಎಣಿಕೆ ನಡೆಸಲು ಚುನಾವಣಾ ಆಯೋಗ ಮುಂದಾಗಿದೆ ಎಂದು ವರದಿಯಾಗಿದೆ.

ಚುನಾವಣಾ ಸಂದರ್ಭದಲ್ಲಿ ಮತದಾರರನ್ನು ಆಮಿಷವೊಡ್ಡಲು ರಾಜಕೀಯ ಪಕ್ಷಗಳು ಬಳಸುತ್ತಿರುವ ಮದ್ಯ ಮತ್ತು ಹಣದ ನಿಯಂತ್ರಣದ ಬಗ್ಗೆ ಕೇಂದ್ರ ಚುನಾವಣಾ ಆಯೋಗ ಈಗಾಗಲೇ ಅಸಮಾಧಾನ ವ್ಯಕ್ತಪಡಿಸಿದೆ. ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದರೊಂದಿಗೆ ಹಣಬಲ ಮತ್ತು ತೋಳ್ಬಲವನ್ನು ನಿಯಂತ್ರಿಸಲು ಶ್ರಮಿಸುವಂತೆ ಕೇಂದ್ರ ಚುನಾವಣಾ ಆಯೋಗವು ವೀಕ್ಷಕರಿಗೆ ಸಲಹೆ ನೀಡಲಿದೆ. ಇದೇ ತಿಂಗಳ 8ರಿಂದ 10ರ ನಡುವೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಅಧಿಕೃತವಾಗಿ ಪ್ರಕಟವಾಗಲಿದೆ.

EC | ಮತದಾರರ ನೋಂದಣಿಗೆ ಆಧಾರ್ ಕಡ್ಡಾಯವಲ್ಲ: ಚುನಾವಣಾ ಆಯೋಗ
ಹೊಸದೆಹಲಿ: ಮತದಾರರ ನೋಂದಣಿಗೆ ಆಧಾರ್ ಕಡ್ಡಾಯವಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಗುರುವಾರ ಸುಪ್ರೀಂ ಕೋರ್ಟ್‌ ಎದುರು ಚುನಾವಣಾ ಆಯೋಗ ಈ ವಿಷಯವನ್ನು ಸ್ಪಷ್ಟಪಡಿಸಿದೆ. ಮತದಾರರ ನೋಂದಣಿಗೆ ಬಳಸುವ ನಮೂನೆ-6 ಮತ್ತು ನಮೂನೆ-6ಬಿ ಕಾಲಂಗಳಲ್ಲಿ ಆಧಾರ್ ಸಂಖ್ಯೆ ಕೇಳಲು ಕಾರಣ ವ್ಯಕ್ತಿಯ ಗುರುತಿನ ವಿವರಗಳನ್ನು ಪರಿಶೀಲಿಸಲು ಮಾತ್ರ ಎಂದು ಅದು ಹೇಳಿದೆ.

ಆಧಾರ್ ಸಂಖ್ಯೆ ಇಲ್ಲದಿದ್ದರೆ ಮತದಾರರ ಗುರುತಿನ ಚೀಟಿ ನೀಡಲು ಸಾಧ್ಯವಿಲ್ಲ ಎಂದು ಇದರ ಅರ್ಥವಲ್ಲ ಎಂದು ಅದು ಸ್ಪಷ್ಟಪಡಿಸಿದೆ. ಈ ನೀತಿಯಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ ಮತ್ತು ಈ ಬಗ್ಗೆ ವಿವರಣೆಯನ್ನು ಶೀಘ್ರದಲ್ಲೇ ನೀಡಲಾಗುವುದು ಎಂದು ಅದು ಹೇಳಿದೆ. ತೆಲಂಗಾಣ ನಾಯಕ ಜಿ ನಿರಂಜನ್ ಅವರ ಅರ್ಜಿಯ ವಿಚಾರಣೆ ವೇಳೆ ಇಸಿ ಈ ವಿವರಣೆ ನೀಡಿದೆ.

ರಾಷ್ಟ್ರೀಯ ಐಕಾನ್ ಆಗಿ ಸಚಿನ್ ತೆಂಡೂಲ್ಕರ್ ಆಯ್ಕೆ: ಚುನಾವಣಾ ಆಯೋಗದೊಂದಿಗೆ ಒಪ್ಪಂದ
ಯುವ ಮತದಾರರಲ್ಲಿ ಜಾಗೃತಿ ಮೂಡಿಸಲು ಚುನಾವಣಾ ಆಯೋಗ (ಇಸಿ) ನಾಳೆ ಸಚಿನ್ ತೆಂಡೂಲ್ಕರ್ ಅವರೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಿದೆ. ಮೂರು ವರ್ಷಗಳ ಕಾಲ ಸಚಿನ್ ಜನರಲ್ಲಿ ಮತದಾನದ ಬಗ್ಗೆ ಪ್ರಚಾರ ನಡೆಸಲಿದ್ದಾರೆ.
ಹೊಸದಿಲ್ಲಿ: ಖ್ಯಾತ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರೊಂದಿಗೆ ಚುನಾವಣಾ ಆಯೋಗ ಒಪ್ಪಂದಕ್ಕೆ ಸಹಿ ಹಾಕಲಿದೆ. ಚುನಾವಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು EC ಸಚಿನ್ ಅವರನ್ನು ರಾಷ್ಟ್ರೀಯ ಐಕಾನ್ ಆಗಿ ನೇಮಿಸುತ್ತದೆ. ಬುಧವಾರ ಈ ಒಪ್ಪಂದಕ್ಕೆ ಸಚಿನ್ ಸಹಿ ಹಾಕಲಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಯುವಕರಿಗೆ ಮತದಾನದ ಕುರಿತು ತಿಳುವಳಿಕೆ ನೀಡಲು ಸಚಿನ್ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದಾರೆ. 2024ರ ಲೋಕಸಭೆ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ಸಚಿನ್ ಮತದಾರರ ಜಾಗೃತಿ ಅಭಿಯಾನ ನಡೆಸಲಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.‌

ಇಸಿ ವಿವಿಧ ಕ್ಷೇತ್ರಗಳ ಶ್ರೇಷ್ಠ ವ್ಯಕ್ತಿಗಳನ್ನು ತಮ್ಮ ಪ್ರಚಾರಕ್ಕಾಗಿ ರಾಷ್ಟ್ರೀಯ ಐಕಾನ್‌ಗಳಾಗಿ ನೇಮಿಸಿಕೊಳ್ಳುತ್ತದೆ. ಈ ಹಿಂದೆ ಪಂಕಜ್ ತ್ರಿಪಾಠಿ, ಎಂಎಸ್ ಧೋನಿ, ಅಮೀರ್ ಖಾನ್ ಮತ್ತು ಮೇರಿ ಕೋಮ್ ಅವರನ್ನು ಚುನಾವಣಾ ಪ್ರಚಾರಕ್ಕಾಗಿ ಚುನಾವಣಾ ಆಯೋಗ ಬಳಸಿಕೊಂಡಿದ್ದು ನಿಮಗೂ ಗೊತ್ತಿರಬಹುದು.

ಗುಜರಾತ್‌ ವಿಧಾನಸಭೆಗೆ ಚುನಾವಣಾ ದಿನಾಂಕ ಘೋಷಣೆ
ಕೊನೆಗೂ ಚುನಾವಣಾ ಆಯೋಗವು ಗುಜರಾತ್‌ ವಿಧಾನಸಭೆಗೆ ಚುನಾವಣಾ ದಿನಾಂಕವನ್ನು ಘೋಷಿಸಿದ್ದು, ಚುನಾವಣೆಯು ಎರಡು ಹಂತಗಳಲ್ಲಿ ನಡೆಯಲಿದ್ದು, ಡಿಸೆಂಬರ್ 1ರಂದು 89 ಸ್ಥಾನಗಳಿಗೆ, ಡಿಸೆಂಬರ್ 5ರಂದು 93 ಸ್ಥಾನಗಳಿಗೆ ಮತದಾನ ನಡೆಯಲಿದೆಯೆಂದು ಆಯೋಗ ತಿಳಿಸಿದೆ.

ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಗುಜರಾತ್ ಚುನಾವಣೆಯಲ್ಲಿ 4.9 ಕೋಟಿ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಮತದಾರರಿಗಾಗಿ ಗ್ರಾಮೀಣ ಪ್ರದೇಶಗಳಲ್ಲಿ 34,000 ಕ್ಕಿಂತ ಹೆಚ್ಚು ಸೇರಿದಂತೆ 51,000 ಕ್ಕೂ ಹೆಚ್ಚು ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದರು.

182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ಅಧಿಕಾರ ಹಿಡಿಯಲು 92 ಸದಸ್ಯರ ಬೆಂಬಲ ಬೇಕಿದೆ. ಪ್ರಸ್ತುತ ಆಡಳಿತಾರೂಢ ಬಿಜೆಪಿ 111, ಕಾಂಗ್ರೆಸ್​ 62 ಸದಸ್ಯ ಬಲ ಹೊಂದಿವೆ. ಐದು ಸ್ಥಾನಗಳು ವಿವಿಧ ಕಾರಣಗಳಿಂದ ತೆರವಾಗಿವೆ.

ಹಿಮಾಚಲ ಪ್ರದೇಶ ಮತ್ತು ಗುಜರಾತ್‌ನಲ್ಲಿ ಮಹಿಳೆಯರು, ವೃದ್ಧರು, ಅಂಗವಿಕಲರಿಗೆ ಪ್ರವೇಶ ಮತ್ತು ಸೇರ್ಪಡೆಗಾಗಿ ವಿಶೇಷ ವೀಕ್ಷಕರನ್ನು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಿಯೋಜಿಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ಇತ್ತೀಚೆಗೆ ಹಿಮಾಚಲ ಪ್ರದೇಶದ ಚುನಾವಣಾ ದಿನಾಂಕವನ್ನು ಮಾತ್ರವೇ ಘೋಷಿಸಿ ಗುಜರಾತ್‌ ಚುನಾವಣಾ ದಿನಾಂಕ ನಿಗದಿಪಡಿಸದ ಚುನಾವಣಾ ಆಯೋಗದ ಕುರಿತು ಅಲ್ಲಲ್ಲಿ ಅಪಸ್ವರ ಕೇಳಿ ಬಂದಿತ್ತು. ಆಡಳಿತ ರೂಢ ಬಿಜೆಪಿಗೆ ಅದರ ಯೋಜನೆಗಳನ್ನು ಉದ್ಘಾಟಿಸಲು ಅನುವು ಮಾಡಿಕೊಡುವ ಸಲುವಾಗಿ ಹೀಗೆ ಮಾಡಲಾಗುತ್ತಿದೆ ಎನ್ನುವ ಆರೋಪವೂ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಇದೆಲ್ಲದರಿಂದ ಕೆರಳಿದ ಆಯೋಗವು ತನ್ನ ವಿರುದ್ಧ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಸಿತ್ತು.

ಇಂದು ಬೆಳಗಿನ ಹೊತ್ತು ಆಯೋಗ ಚುನಾವಣಾ ದಿನಾಂಕವನ್ನು ಪ್ರಕಟಿಸಿಲಿದೆ ಎಂದು ತಿಳಿದ ಕೂಡಲೇ ಅದಕ್ಕೆ ಪ್ರತಿಕ್ರಿಯೆಯಾಗಿ ಹಿರಿಯ ಪತ್ರಕರ್ತ ರಾಜದೀಪ್‌ ಸರ್ದೇಸಾಯಿ ಹೀಗೆ ಟ್ವೀಟ್‌ ಮಾಡಿದ್ದರು: “ಬ್ರೇಕಿಂಗ್ ನ್ಯೂಸ್: ಈಗ ಎಲ್ಲಾ ಸರ್ಕಾರಿ ಉದ್ಘಾಟನೆಗಳು ಮುಗಿದಿವೆ, ರಿಬ್ಬನ್ ಕಟ್, ಶಿಲಾನ್ಯಾಸ ಸಮಾರಂಭಗಳು, ಭರವಸೆಗಳನ್ನು ನೀಡುವುದು ಹೀಗೆ ಎಲ್ಲವೂ ಮುಗಿದಿದೆ. ಅಂತೂ ಕೊನೆಗೂ ಗುಜರಾತ್ ವಿಧಾನಸಭೆಯ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗವು ಅಂತಿಮವಾಗಿ ಘೋಷಿಸಲಿದೆ! ಇಲ್ಲಿ ಚುನಾವಣಾ ವೇಳಾಪಟ್ಟಿಯನ್ನು ಯಾರು ಹೊಂದಿಸುತ್ತಾರೆ ಎಂದು ನೀವೇ ಊಹಿಸಿ!”