Election result – Peepal Media

ಹಿಮಾಚಲ ಪ್ರದೇಶದಲ್ಲಿ ಮತ್ತೆ ಕಾಂಗ್ರೆಸ್ ಕಲರವ: ಚುನಾವಣೆಯಲ್ಲಿ ಭರ್ಜರಿ ಜಯ!
ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದಲ್ಲಿ ಬಿಜೆಪಿಯನ್ನು ಸೋಲಿಸಿ ಅಧಿಕಾರಕ್ಕೆ ಮರಳುವ ಹಾದಿಯಲ್ಲಿ ಕಾಂಗ್ರೆಸ್ ಮುನ್ನಡೆಯುತ್ತಿದೆ. 68 ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷವು 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಅಧಿಕಾರ ಹಿಡಿಯುವತ್ತ ದಿಟ್ಟ ಹೆಜ್ಜೆಯನ್ನಿರಿಸಿದೆ.

ಇತ್ತ ಬಿಜೆಪಿ 17ಸ್ಥಾನ ಗೆದ್ದು 9  ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಸ್ವತಂತ್ರ ಅಭ್ಯರ್ಥಿಗಳು ಮೂವರು ಗೆಲುವು ಸಾಧಿಸಿದ್ದಾರೆ.  ಕಾಂಗ್ರೆಸ್ ನಾಯಕರಾದ ಭೂಪಿಂದರ್ ಬಘೇಲ್, ಭೂಪಿಂದರ್ ಹೂಡಾ, ಮತ್ತು ರಾಜೀವ್ ಶುಕ್ಲಾ ಈಗ ಹಿಮಾಚಲ ಪ್ರದೇಶಕ್ಕೆ ತೆರಳುತ್ತಿದ್ದಾರೆ.

ಸಿಎಂ ಜೈರಾಮ್ ಠಾಕೂರ್ ರಾಜೀನಾಮೆ:

ಜನಾದೇಶವನ್ನು ಗೌರವಿಸುತ್ತೇನೆ. ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ವರಿಷ್ಠರಿಗೆ ಧನ್ಯವಾದ ಸಲ್ಲಿಸಲು ಬಯಸುತ್ತೇನೆ. ರಾಜಕೀಯ ಬದಿಗೊತ್ತಿ ರಾಜ್ಯದ ಅಭಿವೃದ್ಧಿಗೆ ಬದ್ಧನಾಗಿರುವುದಾಗಿ ಎಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಜೈರಾಮ್ ಠಾಕೂರ್ ಗುರುವಾರ ಹೇಳಿದ್ದಾರೆ.

ಹಿಮಾಚಲದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ!

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ನೂತನ ಸರ್ಕಾರ ರಚಿಸಲಿದೆ ಎಂದು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಹೂಡಾ ಗುರುವಾರ ಹೇಳಿದ್ದಾರೆ.

ಆಡಳಿತ ವೈಫಲ್ಯವೇ ಬಿಜೆಪಿ ಸೋಲಿಗೆ ಕಾರಣ!

2017ರಲ್ಲಿ ಬಿಜೆಪಿ 44 ಸ್ಥಾನ ಹಾಗೂ ಕಾಂಗ್ರೆಸ್ 21 ಸ್ಥಾನ ಗಳಿಸಿತ್ತು. ಆದರೆ ಈ ಬಾರಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಆಡಳಿತ ವೈಫಲ್ಯ, ಪಕ್ಷದೊಳಗೆ ಎದ್ದ ಬಂಡಾಯ ಬಿಜೆಪಿ ಹಿನ್ನಡೆಗೆ ಕಾರಣವಾಗಿದೆ.

ಹಿಮಾಚಲ ಪ್ರದೇಶದಲ್ಲಿ ಆಪರೇಷನ್ ಕಮಲ ಭೀತಿ : ಶಾಸಕರ ಸ್ಥಳಾಂತರಕ್ಕೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ!

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್​ ಬಹುಮತ ಪಡೆದಿದ್ದು, ಸರ್ಕಾರ ರಚಿಸುವ ಉತ್ಸಾಹದಲ್ಲಿದೆ. ತನ್ನ ಶಾಸಕರಿಗೆ ಆಪರೇಷನ್ ಕಮಲದ ಗಾಳ ಹಾಕಬಹುದು ಎಂಬ ಕಾರಣಕ್ಕೆ ಎಲ್ಲ ಶಾಸಕರಿಗೂ ಚಂಡೀಗಢಕ್ಕೆ ತೆರಳುವಂತೆ ಹೈಕಮಾಂಡ್ ಸೂಚನೆ ನೀಡಿದೆ.

ಚುನಾವಣಾ ಫಲಿತಾಂಶ : ಗುಜರಾತ್ ನಲ್ಲಿ ಬಿಜೆಪಿ, ಹಿ.ಪ್ರದೇಶದಲ್ಲಿ ಅಲ್ಪ ಬಹುಮತದಲ್ಲಿ ಕಾಂಗ್ರೆಸ್ ಮುನ್ನಡೆ
ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯವಾದ ಗುಜರಾತ್ ರಾಜ್ಯದ ಸಾರ್ವತ್ರಿಕ ಚುನಾವಣೆ ಹಲವು ಕಾರಣಗಳಿಂದ ಗಮನ ಸೆಳೆದಿದ್ದು, ಜೊತೆಗೆ ಹಿಮಾಚಲ ಪ್ರದೇಶದ ಮತ ಎಣಿಕೆ ಕೂಡಾ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ತೀವ್ರ ಪೈಪೋಟಿಯಿಂದ ಕುತೂಹಲ ಹುಟ್ಟಿಸಿದೆ.

ಗುಜರಾತ್ ಮತ್ತು ಹಿಮಾಚಲ ಪ್ರದೇಶ ಎರಡೂ ಕಡೆಗಳಲ್ಲಿ ಮೊದಲ ಹಂತದ ಮತ ಎಣಿಕೆ ಮುಗಿದಿದ್ದು, ಗುಜರಾತ್ ನಲ್ಲಿ ಆಡಳಿತಾರೂಢ ಬಿಜೆಪಿ ಎಂದಿನಂತೆ ಮುನ್ನಡೆ ಸಾಧಿಸಿದೆ. ಗುಜರಾತ್ ನ 182 ಸ್ಥಾನಗಳಲ್ಲಿ 131 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಗುಜರಾತ್ ನಲ್ಲಿ ಸರ್ಕಾರ ರಚಿಸಲು 92 ಸೀಟುಗಳ ಸ್ಪಷ್ಟ ಬಹುಮತ ಬೇಕಿದೆ.

ಇಲ್ಲಿಯವರೆಗಿನ ಚುನಾವಣಾ ಸಮೀಕ್ಷೆ ಮತ್ತು ಸಧ್ಯದ ಮತ ಎಣಿಕೆ ಮುನ್ನಡೆ ಎಲ್ಲವನ್ನೂ ಗಮನಿಸಿದರೆ ಗುಜರಾತ್ ನಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಬರುವುದು ನಿಚ್ಚಳವಾಗಿದೆ. ಕಾಂಗ್ರೆಸ್ ಕೂಡಾ ಕೆಲವು ಪ್ರಮುಖ ಕ್ಷೇತ್ರಗಳಲ್ಲಿ ತೀವ್ರ ಪೈಪೋಟಿ ಕೊಟ್ಟಿದೆ. ಈ ನಡುವೆ ಹೊಸದೇನೋ ಮ್ಯಾಜಿಕ್ ಮಾಡಬಹುದು ಎಂದು ನಿರೀಕ್ಷಿಸಿದ ಆಮ್ ಆದ್ಮಿ ಪಕ್ಷ ಕೆಲವೇ ಕ್ಷೇತ್ರಗಳಲ್ಲಿ ಪೈಪೋಟಿ ನೀಡಿದೆ. ಆದರೆ ಇಲ್ಲಿಯವರೆಗೂ ಗೆಲುವಿನ ಬಗ್ಗೆ ಯಾವುದೇ ವಿಶ್ವಾಸ ಮೂಡಿಸಿಲ್ಲ.

ಇನ್ನು ಹಿಮಾಚಲ ಪ್ರದೇಶದಲ್ಲೂ ಮೊದಲ ಹಂತದ ಮತ ಎಣಿಕೆ ಮುಗಿದಿದ್ದು ಕಾಂಗ್ರೆಸ್ 35 ಕ್ಷೇತ್ರಗಳಲ್ಲಿ ಮತ್ತು ಬಿಜೆಪಿ 31 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಹಿಮಾಚಲ ಪ್ರದೇಶದ ಬಹುತೇಕ ಕಡೆಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ನಡೆದಿದ್ದು ಕಾಂಗ್ರೆಸ್ ಕೆಲವೇ ಕೆಲವು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಒಟ್ಟಾರೆ ಹಿಮಾಚಲ ಪ್ರದೇಶದ 68 ಕ್ಷೇತ್ರಗಳ 35 ಕ್ಷೇತ್ರಗಳಲ್ಲಿ ಬಹುಮತ ಬಂದವರು ಸರ್ಕಾರ ರಚಿಸಬಹುದು. ಒಂದು ಕಡೆ ಗುಜರಾತ್ ನರೇಂದ್ರ ಮೋದಿಯವರ ತವರು ರಾಜ್ಯ ಎಂಬ ಕುತೂಹಲದಿಂದ ಗಮನ ಸೆಳೆದರೆ ಹಿಮಾಚಲ ಪ್ರದೇಶ ಎರಡು ಪ್ರಮುಖ ಪಕ್ಷಗಳ ನಡುವಿನ ತೀವ್ರ ಹಣಾಹಣಿಯ ಕಾರಣಕ್ಕೆ ಕುತೂಹಲ ಮೂಡಿಸಿದೆ.

ಗುಜರಾತ್ ನಲ್ಲಿ ಹಾಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಇಬ್ಬರೂ ಮತ ಗಳಿಕೆಯಲ್ಲಿ ಮುಂದಿದ್ದಾರೆ. ಕಾಂಗ್ರೆಸ್ ಪಕ್ಷದ ಜಿಗ್ನೇಶ್ ಮೇಹ್ವಾನಿ ಕೆಲವೇ ಮತಗಳ ಅಂತರದಲ್ಲಿ ಹಿಂದಿದ್ದಾರೆ. ಬಿಜೆಪಿಯ ಅಲ್ಪೇಶ್ ಠಾಕೂರ್, ಆಮ್ ಆದ್ಮಿಯ ಇಸುದನ್ ಗಾದ್ವಿ ಮುನ್ನಡೆ ಸಾಧಿಸಿದ್ದಾರೆ. ಹಿಮಾಚಲ ಪ್ರದೇಶದ ಕಾಂಗ್ರೆಸ್ ನ ರೋಹಿತ್ ಠಾಕೂರ್ ಮುನ್ನಡೆ ಕಾಯ್ದುಕೊಂಡಿದ್ದಾರೆ.