Electoral Roll – Peepal Media

ಮತದಾರರ ಪಟ್ಟಿ| ಅಲ್ಪಸಂಖ್ಯಾತ ಮತದಾರರನ್ನು ಕೈಬಿಟ್ಟಿಲ್ಲ : ಬೊಮ್ಮಾಯಿ
ಬೆಂಗಳೂರು: ರಾಜ್ಯಾದ್ಯಂತ ಅನಧಿಕೃ ಸಮೀಕ್ಷೆಗಳು ನಡೆದು ಅಲ್ಪಸಂಖ್ಯಾತರ ಮತದಾರರನ್ನು ಡಿಲೀಟ್ ಮಾಡಲಾಗುತ್ತಿದೆ ಎನ್ನುವುದು ಸುಳ್ಳು ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಈ ಕುರಿತು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ  ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ರಾಜ್ಯ ಚುನಾವಣೆ ಆಯೋಗ ಈ ಬಗ್ಗೆ ಗಮನ ಹರಿಸಿದೆ. ಚುನಾವಣಾ ಆಯೋಗದ ನೇತೃತ್ವದಲ್ಲಿ ಮತದಾರರನ್ನು  ಪಟ್ಟಿ ಪರಿಷ್ಕರಣೆಯಾಗುತ್ತದೆ. ಈ ಕುರಿತು ಭಾರತ ಮತ್ತು ರಾಜ್ಯ ಚುನಾವಣಾ ಆಯೋಗ ಕಾಳಜಿ ವಹಿಸಿದೆ. ಈ ರೀತಿಯ ದೂರುಗಳು ಬಂದಲ್ಲಿ ಅಧಿಕಾರಿಗಳಿಂದ ತನಿಖೆ ಮಾಡಿಸಬೇಕು. ಅನಧಿಕೃತವಾಗಿ ಮತದಾರರನ್ನು ಸೇರಿಸುವ ಕೆಲಸವೂ ಆಗಿದೆ. ಎರಡು ಕಡೆಗಳಲ್ಲಿ ಮತದಾರರ ಚೀಟಿ ಹೊಂದಿರುವವರೂ ಇದ್ದಾರೆ. ಅಂಥವನ್ನು ತೆಗೆಯುವ ಕೆಲಸ ಆಯೋಗ ಮಾಡಬೇಕು. ಯಾವುದೇ ಕಾರಣಕ್ಕೂ ಅಧಿಕೃತ ಜನರಿಗೆ ಮತದಾನದ ಹಕ್ಕು ಇರಲೇಬೇಕು. ಅದನ್ನು ಮೇಲ್ವಿಚಾರಣೆ ಮಾಡುವ ಕೆಲಸ ಚುನಾವಣಾ ಆಯೋಗ ಮಾಡಬೇಕು ಎಂದರು.

ಕನ್ನಡಿಗನ ಮೇಲೆ ಹಲ್ಲೆ: ತನಿಖೆಗೆ ಆದೇಶ

ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡಿಗರ ಮೇಲೆ ಹಲ್ಲೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ನಾನು ತನಿಖೆ ಕೈಗೊಳ್ಳಲು ಪೋಲಿಸ್ ಆಯುಕ್ತರಿಗೆ ಸೂಚಿಸಿದ್ದು, ವರದಿ ಬಂದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಪೊಲೀಸರು ಹಲ್ಲೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸತ್ಯಾಸತ್ಯತೆಯನ್ನು ತಿಳಿದುಕೊಂಡು ಯಾರೇ ತಪ್ಪು ಮಾಡಿದ್ದರೂ ಅವರ ಮೇಲೆ ಕ್ರಮ ಕೈಗೊಳ್ಳುತ್ತಾರೆ ಎಂದರು.

ಐಟಿ, ಇಡಿಗಳು ದಾಳಿ ನಡೆಸದೆ ಯಾಕೆ ಇನ್ನೂ ಕಣ್ಣು ಮುಚ್ಚಿಕೊಂಡಿವೆ ? : ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು: ಚಿಲುಮೆ ಸಂಸ್ಥೆಯ ಅಕ್ರಮಗಳ ಹಿಂದಿನ ರೂವಾರಿಗಳ ಮೇಲೆ ಯಾವ ಕ್ರಮ ತೆಗೆದುಕೊಳ್ಳಲಾಗಿದೆ? ಇಷ್ಟು ದಿನವಾದರೂ ಈ ಅಕ್ರಮ ಸಂಸ್ಥೆಯ ಹಣಕಾಸಿನ ವಹಿವಾಟಿನ ಮೇಲೆ ಈ ಸಂಸ್ಥೆಗೆ ಹಣ ನೀಡಿದವರ ಮೇಲೆ ಯಾಕೆ ಸಿಬಿಐ, ಐಟಿ, ಇಡಿ ದಾಳಿ ನಡೆಸಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ಖಾಸಗಿ ಸಂಸ್ಥೆ ಚಿಲುಮೆಗೆ ಮತದಾರರ ಪಟ್ಟಿಯನ್ನು ಪರಿಷ್ಕರಣೆಗೆ ವಹಿಸಿದ್ದರ ಹಿಂದೆ ಬಿಬಿಎಂಪಿ ಮತ್ತು ಚುನಾವಣಾ ಆಯೋಗದ ಅಧಿಕಾರಿಗಳೂ ಇದ್ದಾರೆ. ಚುನಾವಣಾ ಆಯೋಗಕ್ಕೆ ಈ ಕುರಿತು ಮೊದಲೇ ಮಾಹಿತಿ ಇತ್ತು. ಚುನಾವಣಾ ಆಯೋಗದವರು ಬಿಬಿಎಂಪಿಗೆ ಈ ಕುರಿತು ಪತ್ರಗಳನ್ನೂ ಬರೆದಿದ್ದರು. ಆದರೂ ಆಯೋಗಕ್ಕೂ ಕೇರ್ ಮಾಡದೆ ಚಿಲುಮೆ ಸಂಸ್ಥೆಯ ಅಕ್ರಮ ಹೆಚ್ಚಾಗುತ್ತಾ ಹೋಗಿದೆ. ಹಾಗಾಗಿ ಚುನಾವಣಾ ಆಯೋಗ ಈ ಅಕ್ರಮಕ್ಕೆ ಮೌನ ಸಮ್ಮತಿ ನೀಡಿದೆಯೆ? ಸುಪ್ರೀಂ ಕೋರ್ಟು ಚುನಾವಣಾ ಆಯೋಗದ ಮೇಲೆ ಮಾಡಿರುವ ವಿಮರ್ಶೆಗಳು ಸರಿಯಾಗಿವೆ ಅಲ್ಲವೆ? ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಹೊಂಗಸಂದ್ರದ ಬಿಜೆಪಿಯ ಕಛೇರಿಯಲ್ಲಿ ಹಾಲಿ ಶಾಸಕರು ಹಾಗೂ ವಿಧಾನಸಭೆಯ ಮುಖ್ಯ ಸಚೇತಕರಾದ ಸತೀಶ್‍ರೆಡ್ಡಿಯವರ  ನೇತೃತ್ವದಲ್ಲಿಯೇ ಮತದಾರರ ಪಟ್ಟಿಯ ಪರಿಷ್ಕರಣೆ ನಡೆಸುವ ಕುರಿತು ತರಬೇತಿ ನೀಡಲಾಗಿದೆ. ಆದರೆ ಪರಿಷ್ಕರಣೆ ಕಾರ್ಯಕ್ಕಾಗಿಯೆ 25000 ದಿಂದ 30000 ರೂಪಾಯಿಗಳನ್ನು ನೀಡಿ ನೇಮಕಾತಿ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಹಣದ ಮೂಲದ ಬಗ್ಗೆ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

ನೂರಾರು ಸಂಖ್ಯೆಯ ನೌಕರರಿಗೆ ಸಂಬಳ ಕೊಡಲು ಖರ್ಚು ಮಾಡಿದ ಕೋಟ್ಯಾಂತರ ರೂಪಾಯಿಗಳನ್ನು ಈ ಸಂಸ್ಥೆಗೆ ನೀಡಿದವರು ಯಾರು? ಇಷ್ಟು ದೊಡ್ಡ ಮೊತ್ತವನ್ನು ವಿನಿಯೋಗಿಸುತ್ತಿದ್ದವರ ಉದ್ದೇಶವಾದರೂ ಏನು? ಅಕ್ರಮವಾಗಿ ವಿನಿಯೋಗಿಸಿದ ಹಣದ ಕುರಿತು ಇನ್ನೂ ದಾಳಿಗಳನ್ನು ನಡೆಸದೆ ಐಟಿ, ಇಡಿಗಳು ಯಾಕೆ ಇನ್ನೂ ಕಣ್ಣು ಮುಚ್ಚಿಕೊಂಡಿವೆ ? ಎಂದು ಸಿದ್ದರಾಮಯ್ಯ ಪ್ರಶ್ನೆಗಳ ಸರಮಾಲೆ ಹಾಕಿದ್ದಾರೆ.

ಆದರೂ ಇಷ್ಟು ಬೃಹತ್ ಮಟ್ಟದ ಹಗರಣ ನಡೆದಿದ್ದರೂ ಬಿಬಿಎಂಪಿಯ ಹಿರಿಯ ಅಧಿಕಾರಿಗಳು, ಚುನಾವಣಾ ಆಯೋಗದ ಅಧಿಕಾರಿಗಳ ಮೇಲೆ ಯಾಕೆ ಇನ್ನೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ? ಅಕ್ರಮದಲ್ಲಿ ನೇರವಾಗಿ ಭಾಗಿಯಾಗಿರುವ ಬಿಜೆಪಿಯ ಎಂಎಲ್‍ಎಗಳು, ಸಚಿವರುಗಳ ಮೇಲೆ ಮತ್ತು ಬೆಂಗಳೂರು ಅಭಿವೃದ್ಧಿಯ ಉಸ್ತುವಾರಿ ಹೊತ್ತಿರುವ ಮುಖ್ಯಮಂತ್ರಿಗಳ ಮೇಲೆ ಏಕೆ ಯಾವುದೇ ಕ್ರಮ ವಹಿಸಿಲ್ಲ? ಎಂದು ಕಿಡಿಕಾರಿದ್ದಾರೆ.

ಬಿಬಿಎಂಪಿಯಲ್ಲಿ ನಡೆದಿರುವ ಮತದಾರರ ಪಟ್ಟಿಯ ಅಕ್ರಮಕ್ಕೆ, ಚುನಾವಣಾ ಆಯೋಗ ಮತ್ತು ಬಿಬಿಎಂಪಿಯ ಜಿಲ್ಲಾ ಚುನಾವಣಾಧಿಕಾರಿ, ಮತದಾರರ ನೋಂದಣಾಧಿಕಾರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಸಂಪೂರ್ಣ ಜವಾಬ್ಧಾರರಾಗಿದ್ದು ಇದಕ್ಕೆ ನೇರ ಹೊಣೆ ರಾಜ್ಯ ಸರ್ಕಾರ ಎಂದು ವಿರೋಧ ಪಕ್ಷದನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸರ್ಕಾರಿ/ಅರೆ ಸರ್ಕಾರಿ ನೌಕರರನ್ನು ನೇಮಿಸುವುದರ ಬದಲಿಗೆ ಖಾಸಗಿ ವ್ಯಕ್ತಿಗಳನ್ನು ಬಿಎಲ್‍ಓ ಗಳಾಗಿ ನೇಮಕ ಮಾಡಲಾಗಿದೆ. ಖಾಸಗಿ ವ್ಯಕ್ತಿಗಳನ್ನು ಯಾವ ಕಾರಣಕ್ಕೂ ನೇಮಕ ಮಾಡಬಾರದೆಂದು ಕಾನೂನು ಹೇಳುತ್ತದೆ. ಇವರು ಒಂದು ಪಕ್ಷದ ಕಾರ್ಯಕರ್ತರಂತೆ ಕಾಣಿಸುತ್ತಾರೆ ಎಂದು ದೂರಿದ್ದಾರೆ.

ಚಿಲುಮೆ ಸಂಸ್ಥೆಯ ಕಛೇರಿಗಳಲ್ಲಿ ಸಚಿವರ ಚೆಕ್ಕುಗಳು ಮತ್ತು ಲೆಟರ್ ಹೆಡ್‍ಗಳು ದೊರೆತಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಗಿದ್ದರೆ ಸದರಿ ಸಚಿವರ ಮೇಲೆ ಯಾಕೆ ಯಾವುದೇ ಪ್ರಕರಣ ದಾಖಲಿಸಿಲ್ಲ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು, ಸೇರಿಸಲು ಯಾವುದೇ ಅರ್ಜಿ ನಮೂನೆಗಳನ್ನು ಪಡೆಯದೆ ಈ ಕೃತ್ಯ ಎಸಗಿರುವುದು ಘೋರವಾದ ಅಪರಾಧವಾಗಿದ್ದು ಇದನ್ನು ಪ್ರತಿ ದಿನ ಸಾಕ್ಷಿಗಳ ಸಮೇತ ಜನರು ಮಾಧ್ಯಮಗಳ ಮುಂದೆ ಹೇಳುತ್ತಿದ್ದಾರೆ. ಆದ್ದರಿಂದ ಈ ಕೂಡಲೆ ಜನರು ನೀಡಿರುವ ನಮೂನೆ 6, 7, 8, ಮತ್ತು 8ಎ ಗಳ ಅರ್ಜಿಗಳನ್ನು ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಯಾವುದೆ ಅರ್ಜಿಗಳಿಲ್ಲದೆ ಮತದಾರರ ಪಟ್ಟಿಗೆ ಸೇರಿಸಿರುವ, ಕೈಬಿಟ್ಟಿರುವ, ತಿದ್ದುಪಡಿ ಮಾಡಿರುವ, ವರ್ಗಾವಣೆ ಮಾಡಿರುವ ಪ್ರಕರಣಗಳೆಷ್ಟು ಎಂಬುದನ್ನು ಚುನಾವಣಾ ಆಯೋಗ ಈ ಕೂಡಲೆ ಎಲ್ಲ ರಾಜಕೀಯ ಪಕ್ಷಗಳಿಗೆ, ಸಾರ್ವಜನಿಕರಿಗೆ ತಿಳಿಸಬೇಕು. ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸದೆ, ನೋಟೀಸು ನೀಡದೆ ಮಾಡಿರುವ ಎಲ್ಲ ಬದಲಾವಣೆಗಳನ್ನು ಈ ಕೂಡಲೆ ರದ್ದು ಮಾಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ,

ಅರ್ಜಿ ಸ್ವೀಕರಿಸದೆ, ನೋಟೀಸು ನೀಡದೆ, ಅರ್ಜಿಗಳ ಮೇಲೆ ಆದೇಶ ಮಾಡದೆ ಮತದಾರರ ಪಟ್ಟಿಗೆ ಸೇರಿಸಿರುವ, ತೆಗೆದಿರುವ, ವರ್ಗಾವಣೆ ಮಾಡಿರುವ ಎಲ್ಲ ಅಧಿಕಾರಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಜೈಲಿಗೆ ಅಟ್ಟಬೇಕು. ನಿಷ್ಪಕ್ಷಪಾತವಾಗಿ ವರ್ತಿಸದ ಅಧಿಕಾರಿಗಳನ್ನು ಈ ಕೂಡಲೆ ಚುನಾವಣಾ ಕರ್ತವ್ಯಗಳಿಂದ ಬಿಡುಗಡೆ ಗೊಳಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಪ್ರಜಾಪ್ರಭುತ್ವದ ಉಳಿವಿಗಾಗಿ ಮತದಾನ ವ್ಯವಸ್ಥೆಯ ಪಾವಿತ್ರ್ಯವನ್ನು ಉಳಿಸಲು ಕಾಂಗ್ರೆಸ್ ಹೋರಾಟ ಪ್ರಾರಂಭಿಸಿದ ಕೂಡಲೆ ಬಿಜೆಪಿಯ ಕೆಲವರು 2017ರ ದಾಖಲೆಯನ್ನು ಬಿಡುಗಡೆ ಮಾಡುತ್ತಿದ್ದೇವೆ, ಚಿಲುಮೆ ಸಂಸ್ಥೆಯನ್ನು ಬೆಳೆಸಿದ್ದೆ ಕಾಂಗ್ರೆಸ್ ಎಂದು ಸುಳ್ಳು ಹೇಳಲಾರಂಭಿಸಿದ್ದಾರೆ. ಇದಕ್ಕಾಗಿ ಮಹದೇವಪುರದ ಸಹ ಕಂದಾಯಾಧಿಕಾರಿ ಆದೇಶ ನೀಡಿದ್ದಾರೆಂಬ ಆದೇಶ ಪ್ರತಿಯನ್ನು ತೋರಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಹದೇವಪುರದಲ್ಲಿರುವುದು ಬಿಜೆಪಿ ಪಕ್ಷದ ಎಂಎಲ್‍ಎ. ಬಿಜೆಪಿ ಪಕ್ಷದವರು ಇರುವ ಕಡೆಯೆ ಇದನ್ನು ಪ್ರಾರಂಭಿಸಿದ್ದಾರೆ. ಚಿಲುಮೆ ಸಂಸ್ಥೆಗೆ ಆದೇಶ ನೀಡಿದ್ದಾರೆ ಎಂದು ಬಿಜೆಪಿಯವರು ತೋರಿಸುತ್ತಿರುವುದರಲ್ಲಿ ಸಹ ಕಂದಾಯಾಧಿಕಾರಿ ಸಹಿ ಮಾಡಿದ್ದಾರೆ. ಅದರಲ್ಲಿ ಉಲ್ಲೇಖ 9-7-2017 ರಂದು ಚಿಲುಮೆ ಸಂಸ್ಥೆ ನೀಡಿರುವ ಮನವಿ ಎಂದಿದೆ. ಈ ಅರ್ಜಿ ಸಾಚಾ ಆಗಿದೆಯೆ? ಆಗಿದ್ದರೆ ಬಿಜೆಪಿ ಎಂಎಲ್‍ಎ ಇರುವ ಕಡೆಯೆ ಇದು ಯಾಕೆ ಸಂಭವಿಸಿದೆ? ಆ ಅಧಿಕಾರಿಯ ಮೇಲೆ ಯಾರ ಒತ್ತಡವಿತ್ತು? ಬೂತು ಮಟ್ಟದ ಅಧಿಕಾರಿಯನ್ನು ನೇಮಿಸಲು ಸಹ ಕಂದಾಯಾಧಿಕಾರಿಗೆ ಯಾವುದೇ ಅಧಿಕಾರವಿಲ್ಲವೆಂದು  ಪ್ರಜಾಪ್ರತಿನಿಧಿ ಕಾಯ್ದೆ-1950 ಹೇಳುತ್ತದೆ.  ಹಾಗಾಗಿ ಬಿಜೆಪಿಯವರು ಒಬ್ಬ ಸಣ್ಣ ಅಧಿಕಾರಿ ಮೇಲೆ ಪ್ರಭಾವ ಬೀರಿ ಅಕ್ರಮವಾಗಿ ಆದೇಶ ಕೊಡಿಸಿದ್ದಾರೆಯೆ ಎಂಬುದನ್ನೂ ಪರಿಶೀಲಿಸಬೇಕಲ್ಲವೆ? ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಯಾವ ವರ್ಷದಿಂದ ಅಕ್ರಮಗಳಾಗಿವೆಯೊ ಆ ವರ್ಷದಿಂದ ಪ್ರತಿಯೊಂದು ಸೇರ್ಪಡೆ, ಪ್ರತಿಯೊಂದು ತೆಗೆಯುವಿಕೆಯನ್ನು ಚುನಾವಣಾ ಆಯೋಗವು ಖುದ್ದು ಪರಿಶೀಲಿಸಿ ಖಾತ್ರಪಡಿಸಿಕೊಳ್ಳಬೇಕು. ಅದುವರೆಗೂ ಈಗ ಸಿದ್ಧಪಡಿಸಿರುವ ಮತದಾರರ ಪಟ್ಟಿಯನ್ನು ಪ್ರಕಟ ಮಾಡದೆ ತಡೆಹಿಡಿಯಬೇಕು. ಭಾಗಿಯಾದ ಎಲ್ಲರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು. ಚಿಲುಮೆ ಸಂಸ್ಥೆಗೆ ಹಣ ನೀಡಿರುವವರು ಯಾರು? ಯಾಕಾಗಿ ಅವರಿಗೆ ಹಣ ನೀಡುತ್ತಿದ್ದರು? ಚಿಲುಮೆ ಸಂಸ್ಥೆಯ ಹಿನ್ನೆಲೆ ಏನು? ಅವರ ಹಿಂದೆ ಯಾರ್ಯಾರು ಇದ್ದಾರೆ? ಸಂಸ್ಥೆಯವರು ಯಾರೊಂದಿಗೆ ಸಂಪರ್ಕದಲ್ಲಿದ್ದರು? ಅವರ ನಡುವೆ ನಡೆದ ಸಂವಹನಗಳೇನು? ಸಂವಾದಗಳೇನು? ಇವೆಲ್ಲ ಅಂಶಗಳನ್ನು ತನಿಖೆ ಮಾಡಿ ಸಾರ್ವಜನಿಕರ ಮುಂದೆ ಇಡಬೇಕಾಗಿದೆ. ಹಾಗೆಯೆ ರಾಜ್ಯದಲ್ಲಿ ಎಲ್ಲೆಲ್ಲಿ ಹೀಗಾಗಿದೆ ಎಂಬ ಮಾಹಿತಿಯನ್ನೂ ಆಯೋಗವು ಸ್ಪಷ್ಟಪಡಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಮತದಾರರ ಪಟ್ಟಿಗಳ ಪರಿಷ್ಕರಣೆಯ ಮೇಲೆ ನಿಗಾವಹಿಸಬೇಕಾದ ಎಲೆಕ್ಟೋರಲ್ ರೋಲ್ ಅಬ್ಸರ್ವರ್ ಗಳು ಏನು ಮಾಡಿದ್ದಾರೆ ? ಅವರು ನಿರ್ಲಕ್ಷ್ಯ ವಹಿಸಿದ್ದರೆ, ಪಕ್ಷಪಾತ ಮಾಡಿದ್ದರೆ ಅವರ ಮೇಲೆಯೂ ನಿರ್ದಾಕ್ಷಿಣ್ಯವಾದ ಕ್ರಮ ತೆಗೆದುಕೊಳ್ಳಬೇಕು. ಬಿಬಿಎಂಪಿಯ ಡಿ ಲಿಮಿಟೇಷನ್ ಪ್ರಕ್ರಿಯೆಯಲ್ಲಿಯೂ ಈ ಸಂಸ್ಥೆ ಭಾಗವಹಿಸಿದೆಯೆಂದು ಹೇಳಲಾಗುತ್ತಿದೆ.  ಈ ಕೆಲಸವು ವೈಜ್ಞಾನಿಕವಾಗಿ ನಡೆದಿದೆಯೆ? ಎಂಬುದರ ಕುರಿತು ರಾಜ್ಯ ಚುನಾವಣಾ ಆಯೋಗವು ಪರಿಶೀಲನೆ ನಡೆಸಿ ತೀರ್ಮಾನ ತೆಗೆದುಕೊಳ್ಳಬೇಕು. ಅವೈಜ್ಞಾನಿಕವಾಗಿದ್ದರೆ, ಪಕ್ಷಪಾತದಿಂದ ಕೂಡಿದ್ದರೆ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಹಾಗೂ ತನಿಖೆಯನ್ನು ಸರ್ಕಾರದ ಅಧೀನದಲ್ಲಿರುವ ಸಂಸ್ಥೆಗಳು ಮಾಡಿದರೆ ಅದು ಪಕ್ಷಪಾತದಿಂದ ಕೂಡಿರುತ್ತದೆ. ಆದ್ದರಿಂದ ಕೂಡಲೆ ಉಚ್ಛ ನ್ಯಾಯಾಲಯದ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.