environment – Peepal Media

ಸುತ್ತಮುತ್ತಲ ಪರಿಸರ ಸ್ವಚ್ಛವಾಗಿಡಿ, ಪ್ಲಾಸ್ಟಿಕ್ ಮಾಲಿನ್ಯ ಕೊನೆಗೊಳಿಸಿ : ನ್ಯಾಯದೀಶೆ ಜಿ.ಕೆ. ದಾಕ್ಷಾಯಿಣಿ
ಹಾಸನ : ಈ ಪರಿಸರ ದಿನಾಚರಣೆ ಒಂದು ದಿನಕ್ಕೆ ಮಾತ್ರ ಸೀಮಿತವಾಗದೇ ಪ್ರತಿನಿತ್ಯ ಮನೆ ಮತ್ತು ಸುತ್ತಮುತ್ತಲ ಪರಿಸರ ಮೊದಲು ಸ್ವಚ್ಛವಾಗಿ ಇಟ್ಟುಕೊಂಡು ಜೊತೆಗೆ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇದ ಮಾಡಿದಾಗ ಈ ಪರಿಸರದ ಸಮತೋಲನ ಕಾಪಾಡಬಹುದು ಎಂದು ಹಿರಿಯ ಸಿವಿಲ್ ನ್ಯಾಯದೀಶರು ಜಿ.ಕೆ. ದಾಕ್ಷಾಯಿಣಿ ಸಲಹೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಜಿಲ್ಲಾಡಳಿತ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕಾನೂನು ಸೇವೆಗಳ ಪ್ರಾದೀಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್, ಕೈಗಾರಿಕೆಗಳ ಸಂಯುಕ್ತಶ್ರಯದಲ್ಲಿ ಗುರುವಾರ ಬೆಳಿಗ್ಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಜಾಥ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವ ಪರಿಸರ ದಿನಾಚರಣೆ ಎಂದರೇ ನಮ್ಮ ಸುತ್ತಮುತ್ತಲ ಪರಿಸರ ಎಂದರೇ ಮೊದಲು ನಮ್ಮ ಮನೆಯ ಜಾಗವನ್ನು ಸ್ವಚ್ಛವಾಗಿ ಇಟ್ಟುಕೊಂಡರೇ ಮಾತ್ರ ಈ ಪರಿಸರ ದಿನಾಚರಣೆ ಆಚರಣೆ ಮಾಡುತ್ತಿರುವುದಕ್ಕೆ ಅರ್ಥ ಬರುತ್ತದೆ. ಪರಿಸರ ದಿನಾಚರಣೆ ಎಂಬುದು ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಪರಿಸರ, ತ್ಯಾಜ್ಯ ನಿರ್ವಹಣೆ ಮತ್ತು ಪ್ಲಾಸ್ಟಿಕ್ ನಿರ್ಮೂಲನೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವು ಮತ್ತು ಜವಾಬ್ದಾರಿಯಾಗಿದೆ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ಅಸಮರ್ಥರಾದಾಗ ಇಂತಹ ಆಚರಣೆ ಎಷ್ಟು ಉತ್ತಮವಾಗಿದೆ ಎಂಬುದು ಪ್ರಶ್ನೆಯಾಗುತ್ತದೆ. ಪ್ರತಿ ದಿನವೂ ಕೂಡ ಸ್ವಚ್ಛತೆಗೆ ಪ್ರಾಮುಖ್ಯತೆ ಕೊಡೊಣಾ ಎಂದರು. ಶಾಲಾ ಮಕ್ಕಳನ್ನು ಈ ಮೆರವಣಿಗೆಯಲ್ಲಿ ಸೇರಿಸಿ ಪರಿಸರದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡಲಾಗುತ್ತಿದ್ದು, ಪ್ಲಾಸ್ಟಿಕ್ ಬಳಕೆಗೆ ನಾವುಗಳು ಅವಲಂಬಿತರಾಗಿದ್ದೇವೆ. ತರಕಾರಿ ಇತರೆ ವಸ್ತುಗಳ ಖರೀದಿ ಮಾಡಲು ಮನೆಯಿಂದ ಮಾರುಕಟ್ಟೆಗೆ ಹೋಗುವಾಗ ಕೈಲಿ ಕಾಟನ್ ಬ್ಯಾಗ್ ಹಿಡಿದುಕೊಂಡು ಹೋಗಬೇಕು ಎಂದು ಕಿವಿಮಾತು ಹೇಳಿದರು. ಈ ವರ್ಷದ ಘೋಷಣೆ ಎಂದರೇ ಪ್ಲಾಸ್ಟಿಕನ್ನು ಸಂಪೂರ್ಣವಾಗಿ ಅಂತ್ಯವಾಡುವುದು ಆಗಿದೆ. ಎಲ್ಲಾ ಜನತೆ ಕೂಡ ಎಚ್ಚೆತ್ತುಕೊಂಡು ನಮ್ಮ ಪರಿಸರ ಸಂರಕ್ಷಣೆಗೆ ಕೈಜೋಡಿಸಿ ಎಂದು ಕರೆ ನೀಡಿದರು. ಕಾಡು ನಾಶ ಮಾಡಿದರೆ ಮತ್ತೆ ಬೆಳೆಸುವರು ಯಾರು ಎಂಬ ಪ್ರಶ್ನೆ ಈಗ ನಮ್ಮೆಲ್ಲರ ಮುಂದೆ ಇದೆ. ಮಕ್ಕಳು ಒಂದು ಗಿಡವನ್ನು ನೆಡುವ ಮೂಲಕ ಪರಿಸರದ ಜಾಗೃತಿ ಮತ್ತು ಅದರ ಮಹತ್ವವನ್ನು ನಾವೆಲ್ಲರೂ ತಿಳಿದು ಕೊಳ್ಳಬೇಕಾಗಿದೆ ಕೆರೆ ಬಾವಿ ಮರಗಿಡಗಳನ್ನು, ಪರಿಸರವನ್ನು ಬೆಳೆಸಿ ಅರಣ್ಯ ಸಂರಕ್ಷಣೆ ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪರಿಸರ ಅಧಿಕಾರಿ ಸುಗಂಧ, ಭಾಸ್ಕರ್, ಹಿಮ್ಸ್ ನಿರ್ದೇಶಕ ರಾಜಣ್ಣ ಇತರರು ಉಪಸ್ಥಿತರಿದ್ದರು.