farmers protest – Peepal Media

ರೈತರ ಪ್ರತಿಭಟನೆಯನ್ನು ಬಾಂಗ್ಲಾದೇಶಕ್ಕೆ ಹೋಲಿಸಿದ ಕಂಗನಾ ರಣಾವತ್:‌ ಬಿಜೆಪಿಯಿಂದಲೇ ವಿರೋಧ
ಹೊಸದಿಲ್ಲಿ: ಮಂಡಿ ಸಂಸದೆ ಮತ್ತು ಬಿಜೆಪಿ ನಾಯಕಿ, ನಟಿ  ಕಂಗನಾ ರಣಾವತ್ ರೈತರ ಪ್ರತಿಭಟನೆಯನ್ನು ಬಾಂಗ್ಲಾದೇಶದ ಅಶಾಂತಿಗೆ ಹೋಲಿಸಿ ಈಗ ಸಾಕಷ್ಟು ಚರ್ಚೆ ಕಾರಣವಾಗಿದ್ದು, ಹರಿಯಾಣದ ಬಿಜೆಪಿ ಮುಖಂಡರಿಂದ ಸಾಕಷ್ಟು ವಿರೋಧಕ್ಕೆ ಕಾರಣವಾಗಿದೆ.

ಸರಕಾರ ಬಲವಾದ ಕ್ರಮಗಳನ್ನು ಕೈಗೊಳ್ಳದಿದ್ದರೆ ಈ ರೈತರಿಂದಾಗಿ ಬಾಂಗ್ಲಾದೇಶದ ಪರಿಸ್ಥಿತಿ ಭಾರತಕ್ಕೆ ಬರಬಹುದು ಎಂದು ಹೇಳಿಕೆ ನೀಡಿರುವುದು ವಿವಾದಕ್ಕೆ ಕಾರಣ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಕಂಗನಾ ರೈತರ ಪ್ರತಿಭಟನೆಯ ಸಂದರ್ಭದಲ್ಲಿ, ಶವಗಳನ್ನು ನೇಣು ಹಾಕುವುದು ಮತ್ತು ಅತ್ಯಾಚಾರ ಪ್ರಕರಣಗಳು ನಡೆದ ಉದಾಹರಣೆಗಳಿವೆ ಎಂದು ರಣಾವತ್ ‌ ಆರೋಪಿಸಿದ್ದಾರೆ. ರೈತರ ಪ್ರತಿಭಟನೆಗಳಿಗೆ ವಿದೇಶಿ ಶಕ್ತಿಗಳ ಉತ್ತೇಜನವಿದೆ ಎಂದು ಅವರು ಹೇಳಿರುವುದು ರೈತರನ್ನು ಕೆರಳಿಸಿದೆ.

ಬಿಜೆಪಿ ಮೂಲಗಳ ಪ್ರಕಾರ, ಕಂಗನಾ ಅವರ ಹೇಳಿಕೆ ಚುನಾವಣೆಯ ಹೊಸ್ತಿಲಲ್ಲಿರುವ ಹರಿಯಾಣ ಬಿಜೆಪಿಗೆ ಅರಗಿಸಿಕೊಳ್ಳಲಾಗದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಬಿಜೆಪಿ ನಾಯಕರೊಬ್ಬರು, “ನಾವು ಈ ವಿಚಾರವನ್ನು ಉನ್ನತ ನಾಯಕರ ಗಮನಕ್ಕೆ ತಂದಿದ್ದೇವೆ” ಎಂದು ಹೇಳಿಕೆ ನೀಡಿದ್ದಾರೆ.

ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ರಾಜ್ಯದ ರೈತರಿಂದ ವಿರೋಧ ಎದುರಿಸಿದ್ದರು.ಕಂಗನಾ ರಣಾವತ್ ಅವರ ಹೇಳಿಕೆಗಳು ರೈತರ ಕೋಪವನ್ನು ಮತ್ತೆ ಹೆಚ್ಚಿಸಬಹುದು ಮತ್ತು ಕೆಲವು ಕ್ಷೇತ್ರಗಳಲ್ಲಿ ಬಿಜೆಪಿಗೆ ನಕಾರಾತ್ಮಕ ಪರಿಣಾಮ ಬೀರಬಹುದು ಎಂದು ಬಿಜೆಪಿ ನಾಯಕರು ಆತಂಕಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. “ಆಕೆ ಹರಿಯಾಣದ ನಾಯಕಿಯೂ ಅಲ್ಲ. ಆಕೆ ಇಂತಹ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಅಗತ್ಯವಿರಲಿಲ್ಲ”, ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದರು.

ಶಹೀದ್ ಭಗತ್ ಸಿಂಗ್ ನ ವಕ್ತಾರ ತೇಜ್ವೀರ್ ಸಿಂಗ್, ರಣಾವತ್ ಅವರಿಗೆ ಪ್ರಚಾರದ ಹುಚ್ಚು. ಅದಕ್ಕೆ ಟೀಕೆಗಳನ್ನು ಮಾಡುತ್ತಾರೆ. ಮಣಿಪುರದಂತಹ ಮಾನವ ಹಕ್ಕುಗಳ ವಿಷಯಗಳ ಬಗ್ಗೆ ಅವರು ಮೌನ ತಾಳಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯ ಮುಖ್ಯಸ್ಥ ಮೋಹನ್ ಲಾಲ್ ಬಡೋಲಿ ಅವರು ವೀಡಿಯೊ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

ರೈತರ ಪರ ಧ್ವನಿ ಎತ್ತುವುದಾಗಿ ತಿಳಿಸಿದ ರಾಹುಲ್‌: ಸಂಸತ್ತಿನ ಆವರಣದಲ್ಲಿ ರೈತರೊಂದಿಗೆ ಸಭೆ
ನವದೆಹಲಿ: ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದ 12 ರೈತ ಮುಖಂಡರ ನಿಯೋಗವು ಲೋಕಸಭೆಯ ಸಂಕೀರ್ಣದಲ್ಲಿಂದು ವಿರೋಧ ಪಕ್ಷದ ನಾಯಕ, ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಅವರೊಂದಿಗೆ ಕನಿಷ್ಟ ಬೆಂಬಲ ಬೆಲೆ ನೀತಿ ಪರೀಷ್ಕರಣೆಗೆ ಆಗ್ರಹಿಸಿ ಸಭೆ ನಡೆಸಿತು.

ಕಾಂಗ್ರೆಸ್‌ನ ಹಿರಿಯ ನಾಯಕರಾದ ಕೆಸಿ ವೇಣುಗೋಪಾಲ್ ಮತ್ತು ದೀಪೇಂದರ್ ಸಿಂಗ್ ಹೂಡಾ ಅವರು ಸಂಸದರಾದ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಮತ್ತು ಸುಖಜಿಂದರ್ ಸಿಂಗ್ ರಾಂಧವಾ ಅವರು ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ವಾರಿಂಗ್‌ ಅವರು, ರಾಹುಲ್ ಗಾಂಧಿಯವರು ಸಂಸತ್ತಿನ ಒಳಗೆ ರೈತರ ಪರ ಧ್ವನಿ ಎತ್ತುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ರೈತರು ಮತ್ತೆ  ದೆಹಲಿಗೆ ಬಂದು ಮತ್ತೊಂದು ಮೆರವಣಿಗೆ ಆಯೋಜಿಸುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ರೈತರು ದೆಹಲಿಗೆ ಬಂದು ಪ್ರತಿಭಟಿಸಲು ಎಲ್ಲ ಹಕ್ಕುಗಳನ್ನು ಹೊಂದಿದ್ದಾರೆ. ಖಾಸಗಿ ಸದಸ್ಯರ ಮಸೂದೆ ಅಗತ್ಯವಿದ್ದರೆ ನಾವು ಅದನ್ನು ಸಹ ತರುತ್ತೇವೆ” ಎಂದರು.

ರೈತರಲ್ಲಿ ಒಬ್ಬರಾದ ಜಗಜಿತ್ ಸಿಂಗ್ ದಲ್ಲೆವಾಲ್ ಮಾತನಾಡಿ, “ಸರ್ಕಾರ ಇದುವರೆಗೆ ಭರವಸೆಗಳನ್ನು ಈಡೇರಿಸಲು ವಿಫಲವಾಗಿದೆ; ಸ್ವಾಮಿನಾಥನ್ ವರದಿ ಅನುಷ್ಠಾನ ಅತ್ಯಗತ್ಯ. ನಾವು ದೆಹಲಿ ಕಡೆಗೆ ಪಾದಯಾತ್ರೆಯನ್ನು ಮುಂದುವರಿಸಲಿದ್ದೇವೆ ಎಂದು ಅವರು ತಿಳಿಸಿದರು.

ಇದಕ್ಕೂ ಮೊದಲು, ರೈತರು ತಮ್ಮ ರಾಜ್ಯಗಳಲ್ಲಿನ ಸಮಸ್ಯೆಗಳ ಬಗ್ಗೆ ರಾಹುಲ್ ಗಾಂಧಿಯವರೊಂದಿಗೆ ಮಾತನಾಡಿದರು. ದೀರ್ಘಾವಧಿಯ ಬೇಡಿಕೆಗಳನ್ನು ಈಡೇರಿಸಲು ಖಾಸಗಿ ಸದಸ್ಯರ ಮಸೂದೆಯನ್ನು ಪರಿಚಯಿಸಲು ಕೇಳಿಕೊಂಡರು. ಎಂಎಸ್‌ಪಿಯನ್ನು ಪರಿಷ್ಕರಿಸಲು ಮತ್ತು ಕಾನೂನು ಬೆಂಬಲವನ್ನು ಖಚಿತಪಡಿಸಿಕೊಳ್ಳುವ ಈ ಬೇಡಿಕೆಗಳು 2020 ರಲ್ಲಿ ಪ್ರಾರಂಭವಾದಾಗಿನಿಂದ ಅವರ ಪ್ರತಿಭಟನೆಯ ಮುಖ್ಯ ಭಾಗವಾಗಿದೆ ಎಂದರು.

ದೇಶದಾದ್ಯಂತದ ರೈತ ಸಂಘಗಳು ಎಂಎಸ್‌ಪಿಯನ್ನು ಬಯಸುತ್ತವೆ, ಸ್ವಾಮಿನಾಥನ್ ಆಯೋಗದ ಸಿ2+50 ಸೂತ್ರವನ್ನು ಆಧರಿಸಿರಬೇಕು, ಇದು ಬಂಡವಾಳದ ವೆಚ್ಚ ಮತ್ತು ಬೆಂಬಲ ಬೆಲೆಯನ್ನು ಲೆಕ್ಕಾಚಾರ ಮಾಡುವಾಗ ಭೂಮಿ ಬಾಡಿಗೆಯೂ ಸೇರಿರುತ್ತದೆ. ಆದರೆ, ಈಗಿರುವ ಎ2+ಎಫ್‌ಎಲ್‌+50 ಶೇಕಡಾ ವಿಧಾನವನ್ನು ಕೈಬಿಡಲು ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ದೂರಿದರು.

ರೈತರನ್ನು ಸಂಸತ್ತಿ ಅವರಣದೊಳಕ್ಕೆ ಬಿಡದಿರುವುದಕ್ಕೆ ಆಕ್ರೋಶ: ರೈತರನ್ನು ಸಂಸತ್ತಿನ ಆವರಣದೊಳಕ್ಕೆ ಬಿಡದಿರುವುದಕ್ಕೆ ರೈತರು ಸ್ವಲ್ಪ ಹೊತ್ತು ಪ್ರತಿಭಟನೆ ನಡೆಸಿದರು. ಸಭೆಗೂ ಮುನ್ನ ಗೊಂದಲ ಉಂಟಾಯಿತು.

“ನಾನು ರೈತರನ್ನು ಆಹ್ವಾನಿಸಿದ್ದೆ. ಆದರೆ, ರೈತರನ್ನು ಸಂಸತ್ತಿನ  ಆವರಣದೊಳಗೆ ಬರುವುದನ್ನು ಸರ್ಕಾರದ ನಿರ್ದೇಶನದಿಂದ ಸಿಬ್ಬಂದಿ ತಡೆದರು. ಬಹುಶಃ ಅವರು ರೈತರಾಗಿರುವ ಕಾರಣಕ್ಕೆ ಇರಬಹುದು. ಇದಕ್ಕೆ ಕಾರಣವನ್ನು ನೀವು ಪ್ರಧಾನಿಯವರನ್ನು ಕೇಳಬೇಕಾಗುತ್ತದೆ.” ಎಂದು ರಾಹುಲ್ ಗಾಂಧಿ ಲೇವಡಿಯಾಡಿದರು.

ಮಾರ್ಚ್‌ ಹತ್ತರಂದು ದೆಹಲಿಯಲ್ಲಿ ರೈಲು ತಡೆ; ಬಸ್ಸು, ನಡಿಗೆ ಮತ್ತು ರೈಲಿನಲ್ಲಿ ದೆಹಲಿಗೆ ಬರುವಂತೆ ರೈತರಿಗೆ ಕರೆ ನೀಡಿದ ನಾಯಕರು
Farmer Protest: ರೈತರ ಪ್ರತಿಭಟನೆ ಮುಂದುವರಿದಿದೆ. ಏತನ್ಮಧ್ಯೆ, ನಮ್ಮ ದೆಹಲಿ ಚಲೋ ಮೆರವಣಿಗೆಯನ್ನು ಮುಂದೂಡಲಾಗಿಲ್ಲ ಎಂದು ರೈತ ಮುಖಂಡರಾದ ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಸರ್ವಾನ್ ಸಿಂಗ್ ಪಂಧೇರ್ ಭಾನುವಾರ (3 ಮಾರ್ಚ್ 2024) ಹೇಳಿದ್ದಾರೆ. ನಮ್ಮ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.

ಜಗಜಿತ್ ಸಿಂಗ್ ದಲ್ಲೆವಾಲ್ ಅವರು, ”ದಿಲ್ಲಿಗೆ ಹೋಗುವ ಕಾರ್ಯಕ್ರಮವನ್ನು ಮುಂದೂಡಲಾಗಿಲ್ಲ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಇದರಿಂದ ನಾವು ಹಿಂದೆ ಸರಿದಿಲ್ಲ. ಕೇಂದ್ರ ಸರ್ಕಾರವನ್ನು ಮಂಡಿಯೂರಿಸುವ ಕಾರ್ಯತಂತ್ರ ರೂಪಿಸಲು ನಿರ್ಧರಿಸಿದ್ದೇವೆ. ನಾವು ಕುಳಿತಿರುವ ಜನರ ಸಂಖ್ಯೆಯನ್ನು ಹೆಚ್ಚಿಸುತ್ತೇವೆ. ರೈತರನ್ನು ಬೇರೆ ಗಡಿಗಳಿಗೂ ಕರೆತರಲು ಪ್ರಯತ್ನಿಸುತ್ತೇವೆ.

ಮಾರ್ಚ್ 6ರಂದು ದೇಶಾದ್ಯಂತದ ನಮ್ಮ ಜನರು ರೈಲು, ಬಸ್ ಮತ್ತು ವಿಮಾನದ ಮೂಲಕ (ದೆಹಲಿಗೆ) ಬರಲು ನಿರ್ಧರಿಸಿದ್ದೇವೆ ಎಂದು ದಲ್ಲೆವಾಲ್ ಹೇಳಿದರು. ಮಾರ್ಚ್ 10ರಂದು ಮಧ್ಯಾಹ್ನ 12ರಿಂದ 4 ಗಂಟೆಯವರೆಗೆ ರೈಲ್ ರೋಕೋ ಚಳವಳಿ ನಡೆಸುತ್ತೇವೆ. ಆದಷ್ಟು ಜನರು ಇದರಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಸರ್ವಾನ್ ಸಿಂಗ್ ಪಂಧೇರ್ ಹೇಳಿದ್ದೇನು?

ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಪ್ರಧಾನ ಕಾರ್ಯದರ್ಶಿ ಸರ್ವನ್ ಸಿಂಗ್ ಪಂಧೇರ್ ಕೂಡ ದಲ್ಲೆವಾಲ್‌ ಮಾತುಗಳನ್ನು ಪ್ರತಿಧ್ವನಿಸಿದರು ಮತ್ತು ಖನೌರಿ ಮತ್ತು ಶಂಭು ಗಡಿಯಲ್ಲಿ ಕುಳಿತ ರೈತರು ತಮ್ಮ ಚಳವಳಿಯನ್ನು ಪ್ರಾರಂಭಿಸುತ್ತಾರೆ ಎಂದು ಹೇಳಿದರು. ಅಜಯ್ ಮಿಶ್ರಾ ಟೇನಿ ಅವರಿಗೆ ಬಿಜೆಪಿ ಟಿಕೆಟ್ ನೀಡುವ ಮೂಲಕ ರೈತರಿಗೆ ಅವಮಾನ ಮಾಡಿದೆ ಎಂದರು.

ರೈತರು ಮಹಾಪಂಚಾಯತ್ ನಡೆಸಲಿದ್ದಾರೆ

ಮಾರ್ಚ್ 14ರಂದು ರೈತರು ‘ಕಿಸಾನ್ ಮಹಾಪಂಚಾಯತ್’ ಕೂಡ ನಡೆಸಲಿದ್ದಾರೆ. ಈ ಕುರಿತು ಸಂಯುಕ್ತ ಕಿಸಾನ್ ಮೋರ್ಚಾ 400ಕ್ಕೂ ಹೆಚ್ಚು ರೈತ ಸಂಘಗಳು ಇದರಲ್ಲಿ ಭಾಗವಹಿಸಲಿವೆ ಎಂದಿದೆ. SKM ಯುನೈಟೆಡ್ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (KMM) ಗೆ ಪ್ರಸ್ತಾವನೆಯನ್ನು ಕಳುಹಿಸಿದ್ದು, ಬೆಂಬಲಕ್ಕಾಗಿ ಮನವಿ ಮಾಡಿದೆ.

ರೈತರ ಬೇಡಿಕೆ ಏನು?

ಬೆಳೆಗಳ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ)ಗೆ ಕಾನೂನು ಖಾತರಿ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ರೈತರು ಮತ್ತು ಕೃಷಿ ಕಾರ್ಮಿಕರಿಗೆ ಪಿಂಚಣಿ ಮತ್ತು ಕೃಷಿ ಸಾಲ ಮನ್ನಾ ಸೇರಿದಂತೆ ಹಲವು ಬೇಡಿಕೆಗಳನ್ನು ಧರಣಿ ನಿರತ ರೈತರು ಹೊಂದಿದ್ದಾರೆ.