farmers – Peepal Media

ದೆಹಲಿ ಪ್ರವೇಶಕ್ಕೆ ತಯಾರಾದ ರೈತರು: ಒಬ್ಬ ರೈತನೂ ಒಳಬರದಂತೆ ತಡೆಯಿರಿ ಎಂದ ಸರ್ಕಾರ
ನವದೆಹಲಿ: ಕೇಂದ್ರ ಸರ್ಕಾರ ರೈತರೊಂದಿಗೆಮಾತುಕತೆ ನಡೆಸಿ ಒಂದು ಪ್ರಸ್ತಾವವನ್ನು ಮುಂದಿಟ್ಟಿತ್ತಾದರೂ ರೈತರು ಆ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಾರೆ. ಇಂದಿನಿಂದ ದೆಹಲಿ ಚಲೋ ಪ್ರತಿಭಟನೆಯನ್ನು ಮುಂದುವರಿಸಲು ಸಜ್ಜಾಗಿದ್ದು. ಸರ್ಕಾರ ಕೂಡ ರಾಷ್ಟ್ರರಾಜಧಾನಿಯಲ್ಲಿ ಭದ್ರತೆ ಬಿಗಿ ಹೆಚ್ಚಿಸಿದೆ. ಬಿಗಿ ಭದ್ರತೆ ನೆಪದಲ್ಲಿ ನಮಗೆ ಸರ್ಕಾರದಿಂದ ಇನ್ನಷ್ಟು ಕಿರುಕುಳ ಹೆಚ್ಚಲಿದೆ ಎಂದು ರೈತ ನಾಯಕರು ಆರೋಪಿಸಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ದೆಹಲಿ ಚಲೋ ಪ್ರತಿಭಟನಾ ಮೆರವಣಿಗೆಯನ್ನು ಮುನ್ನಡೆಸುತ್ತಿವೆ.
ಕನಿಷ್ಠ ಬೆಂಬಲ ಬೆಲೆಗೆ ಒತ್ತಾಯಿಸಿ ಕಳೆದ ವಾರದಿಂದ ಸಾವಿರಾರು ರೈತರು ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ನೀಡಿದ್ದ ದ್ವಿದಳ ಧಾನ್ಯಗಳು, ಮೆಕ್ಕೆಜೋಳ ಮತ್ತು ಹತ್ತಿ ಬೆಳೆಗಳನ್ನು ಸರ್ಕಾರಿ ಸಂಸ್ಥೆಗಳ ಮೂಲಕ ಕನಿಷ್ಠ ಬೆಂಬಲ ಬೆಲೆಯಲ್ಲಿ (MSP) ಐದು ವರ್ಷಗಳವರೆಗೆ ಖರೀದಿಸುವ ಪ್ರಸ್ತಾವವನ್ನೂ ತಿರಸ್ಕರಿಸಿದ್ದಾರೆ. ಇಂದು ದೆಹಲಿ ಪ್ರವೇಶಿಸಲು ಸಿದ್ಧತೆ ನಡೆಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ದೆಹಲಿಯ ಕೇಂದ್ರ ಭಾಗಕ್ಕೆ ಹೋಗುವ ವಿವಿಧ ರಸ್ತೆಗಳಲ್ಲಿ ವಾಹನಗಳನ್ನು ತಪಾಸಣೆ ಮಾಡುವುದರಿಂದ ಟ್ರಾಫಿಕ್‌ ಸಮಸ್ಯೆ ಹೆಚ್ಚಲಿದೆ. ಪ್ರಯಾಣಿಕರು ಸಂಚಾರ ದಟ್ಟಣೆಯನ್ನು ಎದುರಿಸಬೇಕಾಗುತ್ತದೆ ಎಂದು ಸಂಚಾರಿ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಈಗಾಗಲೇ ಟಿಕ್ರಿ ಮತ್ತು ಸಿಂಘು ಗಡಿಗಳನ್ನು ಬಂದ್‌ ಮಾಡಲಾಗಿದೆ. ಪೊಲೀಸರು ಮತ್ತು ಅರೆ ಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಜತೆಗೆ ಕಾಂಕ್ರೀಟ್‌ ಮತ್ತು ಕಬ್ಬಿಣದ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಅಗತ್ಯಬಿದ್ದರೆ, ಗಾಜಿಪುರ ಗಡಿಯನ್ನು ಬುಧವಾರವೂ ಬಂದ್‌ ಮಾಡಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದಾರೆ.

ಒಬ್ಬ ಪ್ರತಿಭಟನಾಕಾರ ಅಥವಾ ಒಂದು ವಾಹನವೂ ದೆಹಲಿಗೆ ಪ್ರವೇಶಿಸದಂತೆ ಭದ್ರತಾ ಸಿಬ್ಬಂದಿಗೆ ನಿರ್ದೇಶನ ನೀಡಲಾಗಿದೆ. ದೆಹಲಿ ಪೊಲೀಸರು ಈಗಾಗಲೇ 30,000 ಅಶ್ರುವಾಯು ಶೆಲ್‌ಗಳನ್ನು ಸಂಗ್ರಹಿಸಿದ್ದಾರೆ.

ಅವೈಜ್ಞಾನಿಕ ನೀರಾವರಿ ಯೋಜನೆ: ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ಮಾಡಿದ ರೈತ ನಿಯೋಗ
ಬೆಂಗಳೂರು: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನಲ್ಲಿ ಗ್ರಾಮಪಂಚಾಯ್ತಿಗಳ ಮಟ್ಟದಲ್ಲಿ ಅನುಷ್ಠಾನಕ್ಕೆ ಮುಂದಾಗಿರುವ ಕುಡಿಯುವ ನೀರಿನ ಅವೈಜ್ಞಾನಿಕ ಯೋಜನೆಯನ್ನು ಕೈಬಿಡುವಂತೆ ರೈತರ ನಿಯೋಗ ಶನಿವಾರ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿತು.

ಸುಮಾರು 50ಕ್ಕೂ ಹೆಚ್ಚು ರೈತರು ಹಾಗೂ ಗ್ರಾಮಸ್ಥರನ್ನು ಒಳಗೊಂಡಿದ್ದ ನಿಯೋಗವು ಸಚಿವರಿಗೆ ತಳಮಟ್ಟದಲ್ಲಿ ನಡೆಯುತ್ತಿರುವ ವಿಚಾರಗಳನ್ನು ಗಮನಕ್ಕೆ ತಂದಿತು. ಸುಮಾರು 350 ಕೋಟಿ ವೆಚ್ಚದಲ್ಲಿ ಕೇಂದ್ರದ ‘ಜಲ ಜೀವನ ಮಿಷನ್’ ಅಡಿಯಲ್ಲಿ ಕುಡಿಯುವ ನೀರಿನ ಯೋಜನೆಗೆ ಹಿಂದಿನ ಸರಕಾರದ ಕೊನೆಗಳಿಗೆಯಲ್ಲಿ ಅನುಮೋದನೆ ನೀಡಿಲಾಗಿತ್ತು. ಈ ಕುರಿತು ಸ್ಥಳೀಯರಿಗೆ ಹಾಗೂ ಯೋಜನೆಯ ಫಲಾನುಭವಿಗಳಿಗೆ ಯಾವುದೇ ಮಾಹಿತಿಯೂ ನೀಡಿರಲಿಲ್ಲ. ಸ್ಥಳೀಯ ಮಟ್ಟದಲ್ಲಿ ಯೋಜನೆಯಾಗಿ ಭೂಮಿ ಮಂಜೂರಾತಿಯಾಗುತ್ತಿದ್ದಂತೆ ಎಚ್ಚೆತ್ತ ಜನ ಸಾವಿರಾರು ಸಂಖ್ಯೆಯಲ್ಲಿ ತೀರ್ಥಹಳ್ಳಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆಯನ್ನು ನಡೆಸಿದ್ದರು. ಇದೀಗ ಸಚಿವ ಪ್ರಿಯಾಂಕ್ ಖರ್ಗೆಯವರನ್ನು ಭೇಟಿ ಮಾಡಿದ ನಿಯೋಗವು ಯೋಜನೆಯು ಅನುಷ್ಠಾನದ ನೆಪದಲ್ಲಿ ನಡೆಯುತ್ತಿರುವ ಬಾನಗಡಿಗಳನ್ನು ಗಮನಕ್ಕೆ ತಂದಿತು.

“ತಾವು ವಿಕೇಂದ್ರಿಕರಣದಲ್ಲಿ ನಂಬಿಕೆ ಮತ್ತು ಶ್ರದ್ಧೆಯನ್ನು ಹೊಂದಿದವರು. ಜಲ ಜೀವನ್ ಮಿಷನ್ ಮತ್ತು ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ನೆಪದಲ್ಲಿ ವಿಕೇಂದ್ರೀಕರಣದ ಕಲ್ಪನೆಯನ್ನೆ ತಿರಸ್ಕರಿಸಲಾಗಿದೆ. ಗ್ರಾಮೀಣ ಕುಡಿಯುವ ನೀರಿನ ವಿಕೇಂದ್ರಿಕರಣ ಯೋಜನೆಯು ಸದರಿ ಗ್ರಾಮಗಳ ಪ್ರಗತಿಗೆ ತೀವ್ರ ಧಕ್ಕೆ ತರಲಿದ್ದು, ಮಳೆನಾಡು ಎಂದು ಕರೆಸಿಕೊಳ್ಳುವ ಮಲೆನಾಡಿನಲ್ಲಿ ಮುಂದಿನ ದಿನಗಳಲ್ಲಿ ನೀರು ಸರಬರಾಜಿನ ವಿಚಾರದಲ್ಲಿ ತೀವ್ರ ಗೊಂದಲ ಮತ್ತು ಹಾಹಾಕಾರಗಳು ಉದ್ಭವಿಸುವುದು ಖಚಿತ,” ಎಂದು ನಿಯೋಗದ ಮುಖಂಡತ್ವ ವಹಿಸಿದ್ದ ರೈತ ನಾಯಕ ಕೋಡ್ಲು ವೆಂಕಟೇಶ್ ಸಚಿವರಿಗೆ ಮನದಟ್ಟು ಮಾಡಿಸಿದರು.

“ತೀರ್ಥಹಳ್ಳಿ ತಾಲೂಕಿನಲ್ಲಿ ತಮ್ಮ ಇಲಾಖೆ ಅಡಿಯಲ್ಲಿ ಕೈಗೆತ್ತಿಕೊಂಡಿರುವ ಮೇಲ್ಕಂಡ ಕುಡಿಯುವ ನೀರಿನ ಯೋಜನೆ ಕೇಂದ್ರೀಕರಣಕ್ಕೆ ಮಾತ್ರ ಒತ್ತುನೀಡಿದ್ದು, ಗ್ರಾಮ ಪಂಚಾಯ್ತಿಗಳ ಸ್ವಾಯತ್ಥತೆಗೆ ಧಕ್ಕೆ ತರುವ ಸ್ವರೂಪದ ಯೋಜನೆ ಆಗಿದೆ. ಇದರಿಂದಾಗಿ ಬೇಸಿಗೆ ಸಮಯದಲ್ಲಿ ಮಲೆನಾಡಿನ ಜೀವನಾಡಿಯಾದ ತುಂಗಾ ನದಿಯ ಹರಿವು ನಿಂತು ಹೋಗುವ ಸಾಧ್ಯತೆಯೂ ಇದೆ,’’ ಎಂದು ಕೋಡ್ಲು ವೆಂಕಟೇಶ್ ಆತಂಕವನ್ನು ಹಂಚಿಕೊಂಡರು.

“ಸ್ಥಳೀಯ ಆಡಳಿತ ರೈತರ ಮತ್ತು ಗ್ರಾಮಸ್ಥರ ಕಣ್ಣಿಗೆ ಮಣ್ಣೆರಚುವ ರೀತಿಯಲ್ಲಿ ನೀರಿನ ಶುದ್ಧೀಕರಣ ಘಟಕ- ವಾಟರ್ ಟ್ರೀಟ್‌ಮೆಂಟ್ ಪ್ಲಾಂಟ್‌(ಡಬ್ಲ್ಯೂಟಿಪಿ)ನ್ನು ಮೂಲ ಯೋಜನೆಯಲ್ಲಿ ಗುರುತಿಸಿದಂತೆ ತುಂಗಾ ನದಿ ದಡದಲ್ಲಿಯೇ ಮುಂದುವರಿಸುವ ಹಠಮಾರಿತಕ್ಕೆ ಬಿದ್ದಿದೆ. ಈ ಮೇಲಿನ ಕಾರಣಗಳಿಂದಾಗಿ, ತುಂಗಾ ನದಿಯ ಇಕ್ಕೆಲ ದಡಗಳ ನಿವಾಸಿಗಳು ಮತ್ತು ರೈತರು ಭವಿಷ್ಯದ ಆತಂಕದಲ್ಲೇ ಕಾಲಕಳೆಯುತ್ತಿದ್ದಾರೆ. ಹಾಗೆಯೇ, ಗ್ರಾಮ ಪಂಚಾಯ್ತಿಗಳು ವಿವಿಧ ಗ್ರಾಮಗಳಲ್ಲಿನ ನೀರಿನ ಮೂಲಗಳನ್ನು ಅಭಿವೃದ್ಧಿಪಡಿಸಲು ಮತ್ತು ಬಳಸಲು ವಿಫಲರಾಗುತ್ತಿದ್ದಾರೆ ಮತ್ತು ವಿಕೇಂದ್ರಿಕರಣದ ಆಶಯಗಳಿಂದ ವಿಮುಖರನ್ನಾಗಿ ಮಾಡಲಾಗುತ್ತಿದೆ,’’ ಎಂದು ಅವರು ತಿಳಿಸಿದರು.

ಮಾಧ್ಯಮಗಳ ಜತೆ ಮಾತನಾಡಿದ ರೈತ ಮುಖಂಡರು, “ತೀರ್ಥಹಳ್ಳಿಯಂಥ ಮಲೆನಾಡ ಪ್ರತಿ ಗ್ರಾಮಗಳಲ್ಲಿ ನೀರಿನ ಮೂಲಗಳು ಇದ್ಧೆ ಇವೆ. ಅವುಗಳನ್ನೇ ಅಭಿವೃದ್ಧಿಪಡಿಸಿ ಗ್ರಾಮಗಳ ಕುಡಿಯುವ ನೀರಿನ ಸ್ವಾವಲಂಬನೆಯನ್ನ ಕಾಪಾಡಬೇಕಿದೆ. ಈ ಹಿನ್ನೆಲೆಯಲ್ಲಿ ವಿಕೇಂದ್ರಿಕರಣ ವಿರೋಧಿ, ಅವೃಜ್ಞಾನಿಕ, ಭ್ರಷ್ಟತೆಯ ಗುಣಲಕ್ಷಣಗಳನ್ನು ಒಳಗೊಂಡಿರುವ ಯೋಜನೆಯನ್ನು ರದ್ದುಗೊಳಿಸಬೇಕು ಎಂದು ಸಚಿವರಲ್ಲಿ ಅವಹಾಲು ಸಲ್ಲಿಸಿದೆವು,’’ ಎಂದು ತಿಳಿಸಿದರು.

ಈ ಕುರಿತು ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, “ರೈತರ ಅವಹಾಲವನ್ನು ಆಲಿಸಿದ್ದೇನೆ. ಅವರು ನೀರಾವರಿ ಯೋಜನೆಗೇ ವಿರೋಧ ವ್ಯಕ್ತಪಡಿಸುತ್ತಿಲ್ಲ. ಬದಲಿಗೆ ಅವೈಜ್ಞಾನಿಕ ರೀತಿಯಲ್ಲಿ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗಿದೆ ಎಂಬುದು ಅವರ ಆರೋಪವಾಗಿದೆ. ಈ ಹಿನ್ನೆಲೆಯಲ್ಲಿ ಸದ್ಯದಲ್ಲಿಯೇ ಅಧಿಕಾರಿಗಳು ಹಾಗೂ ರೈತರ ಸಭೆಯನ್ನು ಕರೆಯಲು ಎಸಿಎಸ್‌ಗೆ ಸೂಚಿಸಿದ್ದೇನೆ,’’ ಎಂದು ಮಾಧ್ಯಮಗಳಿಗೆ ತಿಳಿಸಿದರು.

ಇಲಾಖೆ ಮೂಲಗಳ ಪ್ರಕಾರ, ಫೆಬ್ರವರಿ 1ರಂದು ಬೆಂಗಳೂರಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ತೀರ್ಥಹಳ್ಳಿ ರೈತರ ಸಭೆಯನ್ನು ಕರೆಯಲಾಗಿದ್ದು, ಜಲ ಜೀವನ ಮಿಷನ್ ಅಡಿಯಲ್ಲಿ ಅನುಷ್ಠಾನಕ್ಕೆ ಮುಂದಾಗಿರುವ ಯೋಜನೆಯ ಹಣೆಬರಹ ತೀರ್ಮಾನವಾಗಲಿದೆ.

ನಾಂದೇಡ್, ಮಹಾರಾಷ್ಟ್ರ | ಸಾಲ ತೀರಿಸಲಾಗದೆ ಕಿಡ್ನಿ ಮಾರಾಟಕ್ಕಿಟ್ಟಿರುವ ರೈತರು!
ಮುಂಬೈ: ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ರೈತರ ಸ್ಥಿತಿ ಹದಗೆಟ್ಟಿದೆ. ಮಹಾರಾಷ್ಟ್ರದಲ್ಲಿ ಡಬಲ್ ಇಂಜಿನ್ ಸರ್ಕಾರದ ಅಡಿಯಲ್ಲಿ ರೈತರು ತಮ್ಮ ಸಾಲವನ್ನು ತೀರಿಸಲಾಗದೆ ತಮ್ಮ ಮೂತ್ರಪಿಂಡಗಳನ್ನು ಮಾರಾಟ ಮಾಡಲು ತಯಾರಿ ನಡೆಸುತ್ತಿದ್ದಾರೆ.

ನಾಂದೇಡ್ ಜಿಲ್ಲೆಯ ಕಲೆಕ್ಟರ್‌ ಕಚೇರಿಯ ಮುಖ್ಯ ಗೇಟಿನಲ್ಲಿ ಕಿಡ್ನಿ ಮಾರಾಟದ ಪೋಸ್ಟರುಗಳು ಈಗ ಚರ್ಚೆಯ ವಿಷಯವಾಗಿದೆ. ಒಂದೇ ಕುಟುಂಬದ ಐವರು ಕಿಡ್ನಿ ಮಾರಲು ಮುಂದಾಗಿರುವುದು ಆ ರಾಜ್ಯದ ರೈತರ ದಯನೀಯ ಸ್ಥಿತಿಯನ್ನು ಬಿಂಬಿಸುತ್ತದೆ.

ಜಿಲ್ಲೆಯ ರೈತ ಕುಟುಂಬವೊಂದು ಸಾಲದ ಸುಳಿಯಲ್ಲಿ ಸಿಲುಕಿದೆ. ಇದರಿಂದ ಒಂದೇ ಕುಟುಂಬದ ತಂದೆ, ಹಿರಿಯ ಮಗ ಹಾಗೂ ಎರಡನೇ ಮಗ ಕೂಡ ಆತ್ಮಹತ್ಯೆಯ ದಾರಿ ಹಿಡಿಯುವಲ್ಲಿದ್ದಾರೆ. ಲೇವಾದೇವಿಗಾರರಿಂದ ಪಡೆದ ಎರಡು ಲಕ್ಷ ರೂಪಾಯಿ ಸಾಲ ತೀರಿಸಲು ಸಾಧ್ಯವಾಗದೆ ಸಂತ್ರಸ್ತ ಕುಟುಂಬಸ್ಥರು ಕಿಡ್ನಿ ಮಾರಲು ಸಿದ್ಧರಾಗಿದ್ದಾರೆ.

ಲೇವಾದೇವಿಗಾರರ ಬೆದರಿಕೆ…

ನಾಂದೇಡ್ ಜಿಲ್ಲೆಯ ಸಿಲ್ಲೋಡ್ ತಾಲೂಕಿನ ಪಿಂಪಲಗಾಂವ್ ಪೇಟೆಯ ಸೋಮನಾಥ ಪಂಡಿತ್ ಭೋಸಲೆ (30) ಎಂಬ ಯುವ ರೈತ ಸಾಲಬಾಧೆಯಿಂದ ಗುರುವಾರ ರಾತ್ರಿ ತನ್ನ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

15 ವರ್ಷಗಳ ಹಿಂದೆ ಸೋಮನಾಥ್ ಅವರ ತಂದೆ ಪಂಡಿತ್ ಮಾಣಿಕ್ ರಾವ್ ಬೋಸ್ ಮತ್ತು 20119ರಲ್ಲಿ ಸೋಮನಾಥ್ ಅವರ ಅಣ್ಣ ಗಜಾನನ್ ಮಾಣಿಕ್ ರಾವ್ ಬೋಸ್ ಆತ್ಮಹತ್ಯೆ ಮಾಡಿಕೊಂಡಿದ್ದರು. ತಂದೆ ಮತ್ತು ಅಣ್ಣಂದಿರ ಆತ್ಮಹತ್ಯೆಯ ನಂತರ ಕುಟುಂಬದ ಹೊರೆ ಸೋಮನಾಥ ಅವರ ಮೇಲೆ ಬಿದ್ದು ಸಾಲಗಳು ಬೆಟ್ಟದಷ್ಟು ಏರಿದ ಕಾರಣ ಸೋಮನಾಥ ಪಂಡಿತ ಭೋಸಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಗ ಸಂತ್ರಸ್ತ ಕುಟುಂಬಸ್ಥರು ಕಿಡ್ನಿ ಮಾರಲು ಮುಂದಾಗಿದ್ದಾರೆ.

ನ್ಯೂಸ್‌ ಕ್ಲಿಕ್‌ ಬೆಂಬಲಕ್ಕೆ ನಿಂತ ದೇಶದ ರೈತರು
ನ್ಯೂಸ್‌ಕ್ಲಿಕ್ ಪತ್ರಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸುವ ಮೂಲಕ ಬಿಜೆಪಿ ಮತ್ತು ಆರೆಸ್ಸೆಸ್ ನೇತೃತ್ವದ ಮೋದಿ ಸರ್ಕಾರ ರೈತರ ಚಳವಳಿಯ ಮೇಲೆ ಮತ್ತೆ ದಾಳಿ ನಡೆಸುತ್ತಿರುವುದನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ದೇಶಾದ್ಯಂತ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ.

ಎಸ್‌ಕೆಎಂ ಭಾನುವಾರ ಈ ಕುರಿತು ಪ್ರಕಟಣೆ ಹೊರಡಿಸಿದೆ. ದೆಹಲಿಯಲ್ಲಿ ನಡೆದ ಐತಿಹಾಸಿಕ ಎಸ್‌ಕೆಎಂ ನೇತೃತ್ವದ ರೈತರ ಚಳವಳಿಯ ವಿರುದ್ಧ ದೆಹಲಿ ಪೊಲೀಸರ ವಿಶೇಷ ವಿಭಾಗವು ದಾಖಲಿಸಿದ ಎಫ್‌ಐಆರ್‌ನಲ್ಲಿ ಮಾಡಲಾದ ಕೆಟ್ಟ ಆರೋಪಗಳನ್ನು ತಿಳಿದು ಆಘಾತವಾಗಿದೆ ಎಂದು ಎಸ್‌ಕೆಎಂ ಹೇಳಿದೆ. ಮಾಧ್ಯಮ ಸಂಸ್ಥೆ ನ್ಯೂಸ್‌ಕ್ಲಿಕ್ ಮತ್ತು ಪತ್ರಕರ್ತರ ವಿರುದ್ಧ ದಾಖಲಾದ ಎಫ್‌ಐಆರ್‌ನಲ್ಲಿ ರೈತರ ಚಳವಳಿಯ ವಿರುದ್ಧ ಹೊರಿಸಲಾದ ಎಲ್ಲಾ ಆರೋಪಗಳನ್ನು ಎಸ್‌ಕೆಎಂ ಕಟುವಾಗಿ ನಿರಾಕರಿಸುತ್ತದೆ ಎಂದಿದೆ.

ರೈತರ ಆಂದೋಲನವು ‘ದೇಶದಲ್ಲಿ ಸರಬರಾಜು ಮತ್ತು ಸೇವೆಗಳ ಅಡ್ಡಿ, ಆಸ್ತಿ ನಷ್ಟ, ವಿಧ್ವಂಸಕತೆ, ಆರ್ಥಿಕತೆಗೆ ಭಾರಿ ನಷ್ಟ, ಅಕ್ರಮ ವಿದೇಶಿ ನಿಧಿಯಿಂದ ಆಂತರಿಕ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳನ್ನು ಉಂಟುಮಾಡಿದೆ’ ಎಂದು ಎಫ್‌ಐಆರ್‌ನಲ್ಲಿ ಮಾಡಲಾಗಿರುವ ಆಧಾರರಹಿತ, ಸುಳ್ಳು ಮತ್ತು ಚೇಷ್ಟೆಯ ಆರೋಪಗಳನ್ನು ಎಸ್‌ಕೆಎಂ ನಿರಾಕರಿಸುತ್ತದೆ ಎಂದು ಸಂಯುಕ್ತ ಕಿಸಾನ್‌ ಮೋರ್ಚಾದ ವಕ್ತಾರರು ತಿಳಿಸಿದ್ದಾರೆ.

ಬಿಜೆಪಿ ಸರ್ಕಾರದ ರೈತ ವಿರೋಧಿ ಮತ್ತು ಕಾರ್ಪೊರೇಟ್ ಪರ ಕಾನೂನುಗಳು ಮತ್ತು ನೀತಿಗಳ ವಿರುದ್ಧ ಎಸ್‌ಕೆಎಂ ನೇತೃತ್ವದಲ್ಲಿ ದೇಶದ ರೈತರು ಮತ್ತು ಅನ್ನದಾತರು ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ರೈತರಿಂದ ಸಾಮಾನು ಸರಂಜಾಮು ಪೂರೈಕೆಗೆ ಅಡ್ಡಿಯಾಗಲಿಲ್ಲ. ರೈತರಿಂದ ಯಾವುದೇ ಆಸ್ತಿ ಹಾನಿಯಾಗಿಲ್ಲ. ರೈತರಿಂದ ಆರ್ಥಿಕತೆಗೆ ಯಾವುದೇ ನಷ್ಟ ಉಂಟಾಗಿಲ್ಲ. ರೈತರಿಂದಾಗಿ ಕಾನೂನು ಸುವ್ಯವಸ್ಥೆ ಸಮಸ್ಯೆ ಉದ್ಭವಿಸಿಲ್ಲ.

ಆದರೆ ಕೇಂದ್ರ ಸರ್ಕಾರವು ರಾಷ್ಟ್ರ ರಾಜಧಾನಿಯನ್ನು ತಲುಪುವ ತಮ್ಮ ಪ್ರಜಾಸತ್ತಾತ್ಮಕ ಹಕ್ಕನ್ನು ಚಲಾಯಿಸುವುದನ್ನು ಕೇಂದ್ರ ಸರ್ಕಾರವು ಹಿಂಸಾತ್ಮಕವಾಗಿ ತಡೆದಿದೆ, ಬೇಲಿಗಳು, ಜಲಫಿರಂಗಿಗಳು, ಲಾಠಿ ಚಾರ್ಜ್ ಮತ್ತು ರಸ್ತೆಗಳಲ್ಲಿ ಕಂದಕಗಳನ್ನು ಅಗೆಯುವ ಮೂಲಕ. ಇದು ದೇಶದ ಜನರಿಗೆ ಮತ್ತು ರೈತರಿಗೆ ಹೆಚ್ಚಿನ ಅನಾನುಕೂಲತೆಯನ್ನು ಉಂಟುಮಾಡಿತು. ಬೇಸಿಗೆಯ ಸುಡುವ ಬಿಸಿಲು, ಧಾರಾಕಾರ ಮಳೆ ಮತ್ತು ಕೊರೆಯುವ ಚಳಿಯಿಂದ ರೈತರು 13 ತಿಂಗಳ ಕಾಲ ಪ್ರತಿಭಟನೆಗೆ ಕುಳಿತುಕೊಳ್ಳಬೇಕಾಯಿತು ಎಂದು ಅದು ಕೇಂದ್ರ ಸರ್ಕಾರವನ್ನು ಕಟುವಾಗಿ ಟೀಕಿಸಿದೆ.

ಬಿಜೆಪಿ ಮತ್ತು ಆರ್‌ಎಸ್‌ಎಸ್ ಸರ್ಕಾರ ಶಾಂತಿ ಮತ್ತು ಭದ್ರತೆಯ ಸಮಸ್ಯೆಗಳನ್ನು ಸೃಷ್ಟಿಸಿದೆ. ಲಖೀಂಪುರ ಖೇರಿಯಲ್ಲಿ ರೈತರ ಮೇಲೆ ವಾಹನಗಳು ಹರಿದ ಪರಿಣಾಮ ನಾಲ್ವರು ರೈತರು ಹಾಗೂ ಪತ್ರಕರ್ತರೊಬ್ಬರು ಮೃತಪಟ್ಟಿದ್ದಾರೆ. ಈ ದಾಳಿಯ ಹಿಂದೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವರು ಮತ್ತು ಅವರ ಪುತ್ರನ ಕೈವಾಡವಿದೆ. ಇದುವರೆಗೂ ಪ್ರಧಾನಿ ಆ ಸಚಿವರನ್ನು ತೆಗೆದು ಹಾಕಿಲ್ಲ. ಲಖಿಂಪುರ ಖೇರಿ ರೈತರು ಸೇರಿದಂತೆ 735 ರೈತರು ಮೋದಿ ಸರ್ಕಾರದ ದಬ್ಬಾಳಿಕೆಯನ್ನು ಎದುರಿಸಲು ತಮ್ಮ ಪ್ರಾಣವನ್ನು ತ್ಯಾಗ ಮಾಡಬೇಕಾಯಿತುಎಂದು ಅದು ಹೇಳಿದೆ.

‌Newsclick FIR ಮೂಲಕ ರೈತರ ಚಳವಳಿಯ ಮೇಲೆ ಮತ್ತೆ ದಾಳಿ ನಡೆಸಲು ಯತ್ನಿಸುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಎಸ್‌ಕೆಎಂ ದೇಶಾದ್ಯಂತ ಬೃಹತ್ ಪ್ರತಿಭಟನೆಗಳನ್ನು ಘೋಷಿಸಿದೆ. ಎಫ್‌ಐಆರ್‌ನಲ್ಲಿ ರೈತರ ಆಂದೋಲನದ ವಿರುದ್ಧ ಮಾಡಲಾಗಿರುವ ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪಗಳನ್ನು ತಕ್ಷಣವೇ ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿ ರಾಜ್ಯ ರಾಜಧಾನಿ, ಜಿಲ್ಲಾ ಕೇಂದ್ರ ಮತ್ತು ಮಂಡಲ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆಗೆ SKM ಕರೆ ನೀಡಿದೆ.

ರೈತರ ಆಂದೋಲನದ ಮೇಲಿನ ಎಲ್ಲಾ ಆರೋಪಗಳನ್ನು ತಕ್ಷಣವೇ ಹಿಂಪಡೆಯುವಂತೆ ಎಸ್‌ಕೆಎಂ ಮುಖಂಡರ ನಿಯೋಗಗಳು ಭಾರತದ ರಾಷ್ಟ್ರಪತಿ, ಪ್ರಧಾನ ಮಂತ್ರಿ, ಕೇಂದ್ರ ಗೃಹ ಸಚಿವರು, ಕೇಂದ್ರ ಕೃಷಿ ಸಚಿವರು ಮತ್ತು ದೆಹಲಿ ಪೊಲೀಸ್ ಆಯುಕ್ತರಿಗೆ ಮನವಿ ಮಾಡಲಿವೆ.

ಅನ್ನದ ಋಣ ತೀರಿಸುವ ಒಂದು ಸುವರ್ಣಾವಕಾಶ
ದೇಶವನ್ನು ಹಸಿವು ಮುಕ್ತ ಮಾಡಲು ಪ್ರತಿಯೊಬ್ಬರೂ ತಮ್ಮ ತಮ್ಮ ನೆಲೆಯಲ್ಲಿ ಆಹಾರವನ್ನು ವ್ಯರ್ಥ ಮಾಡದಂತೆ ಒಂದಷ್ಟು ಜಾಗೃತಿ ಮೂಡಿಸುವ ಕೆಲಸ ಮಾಡಬೇಕಿದೆ ಎನ್ನುತ್ತಾರೆ ಬೆಂಗಳೂರಿನಲ್ಲಿ ಈ ಮೂರು ದಿನಗಳಿಂದ ನಡೆಯುತ್ತಿರುವ ಆಹಾರ ಸಂರಕ್ಷಣಾ ಜಾಗೃತಿಯ ಸಂಘಟಕ ವಿವೇಕಾನಂದ ಎಚ್‌ ಕೆ.

ಅಕ್ಟೋಬರ್ 16 “ವಿಶ್ವ ಆಹಾರ ದಿನ”. 1945 ರಲ್ಲಿ ವಿಶ್ವಸಂಸ್ಥೆಯು ʼಆಹಾರ ಮತ್ತು ಕೃಷಿ ಸಂಸ್ಥೆʼ ಯನ್ನು (Food and agriculture organization -FAO) ಸ್ಥಾಪಿಸಿದ ದಿನವನ್ನು ಪ್ರತಿವರ್ಷ ವಿಶ್ವ ಆಹಾರ ದಿನವನ್ನಾಗಿ ಆಚರಿಸಲಾಗುತ್ತದೆ.

ಹಸಿವಿನಿಂದ ಪ್ರತಿ ದಿನ‌ ವಿಶ್ವದಲ್ಲಿ 19,700 ಜನ ಸಾಯುತ್ತಿದ್ದಾರೆ ಅಂದರೆ ಪ್ರತಿ 4 ಸೆಕೆಂಡಿಗೆ ಒಬ್ಬರು ಎಂದು ನ್ಯೂಯಾರ್ಕ್ ನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಸೇರಿರುವ 75 ದೇಶಗಳ 250 ಸಂಘಟನೆಗಳು ವರದಿ ಮಂಡಿಸಿವೆ. ಭಾರತದಲ್ಲಿ ಹಸಿವಿನಿಂದ ಸಾಯುವವರ ಸಂಖ್ಯೆ ಎಷ್ಟು ಎಂದು ನಿರ್ದಿಷ್ಟವಾಗಿ ತಿಳಿದಿಲ್ಲ. ಆದರೆ ಸುಮಾರು 80 ಲಕ್ಷ ಜನ ಅಪೌಷ್ಟಿಕತೆಯಿಂದ ನರಳುತ್ತಿದ್ದಾರೆ ಎಂದು ಅಧ್ಯಯನವೊಂದು ವರದಿ ಮಾಡಿದೆ. ಭಾರತದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಊಟದ ಎಲೆಗಳಲ್ಲಿ ವ್ಯರ್ಥವಾಗುವ‌ ಆಹಾರ ಪ್ರಮಾಣ ಶೇಕಡಾ 25%. ಈಗ ಬಹುಶಃ ನಿಜವಾದ ಸಮಸ್ಯೆ ಅರ್ಥವಾಗಿರಬಹುದು.

ಇದಕ್ಕೆ ವಿವಿಧ ಆಯಾಮಗಳು ಇವೆ….

ವಿಶ್ವದ ಜನಸಂಖ್ಯೆ ಹೆಚ್ಚಾಗುತ್ತಲೇ ಇರುವುದು, ಅಥವಾ ಕೃಷಿ ಚಟುವಟಿಕೆಗಳು ಕಡಿಮೆಯಾಗುತ್ತಿರುವುದು, ಅಥವಾ ಅತಿಯಾದ ಬಳಕೆಯಿಂದ ಭೂಮಿಯ ಫಲವತ್ತತೆ ಕಡಿಮೆಯಾಗಿರುವುದು, ಅಥವಾ ಭೂ ಪ್ರದೇಶಗಳ ಅಸಮಾನತೆ, ಅಥವಾ ಉಳಿತಾಯ ಮತ್ತು ಹಂಚಿಕೆಯ ಲೋಪದೋಷಗಳು, ಅಥವಾ ಆಹಾರದ ದುರುಪಯೋಗ…ಇವುಗಳಲ್ಲಿ ಯಾವುದು ಹೆಚ್ಚು ಕಾರಣ ಎಂಬುದನ್ನು ಗುರುತಿಸಿ ಅದನ್ನು ಸರಿಪಡಿಸುವ ಕೆಲಸ ಆಗಬೇಕಿದೆ.

ಸದ್ಯದ ಪರಿಸ್ಥಿತಿಯಲ್ಲಿ ವಿಶ್ವದ ಜನಸಂಖ್ಯೆ ನಿಯಂತ್ರಣ ನಮ್ಮ ಕೈಯಲ್ಲಿ ಇಲ್ಲ, ಕೃಷಿ ಚಟುವಟಿಕೆಗಳನ್ನು ಹೆಚ್ಚಿಸುವುದು, ಫಲವತ್ತತೆ ಕಾಪಾಡುವುದು, ಉಳಿತಾಯ ಮತ್ತು ಹಂಚಿಕೆ ಎಲ್ಲವೂ ಆಯಾ ದೇಶದ ಸರ್ಕಾರ ಮತ್ತು ಆಡಳಿತದ ಜವಾಬ್ದಾರಿ. ಆದರೆ ಆಹಾರ ವ್ಯರ್ಥವಾಗುವುದನ್ನು ತಡೆಯುವ ಕರ್ತವ್ಯ, ಜವಾಬ್ದಾರಿ ಮತ್ತು ಮಾನವೀಯತೆ ನಮ್ಮಂತ ಪ್ರತಿ ನಾಗರೀಕರಿಗೂ ಸಾಧ್ಯವಿದೆ.

ಕರ್ನಾಟಕಕ್ಕೆ ಸೀಮಿತವಾಗಿ ಹೇಳುವುದಾದರೆ…

ಆ ನಿಟ್ಟಿನಲ್ಲಿ ಯೋಚಿಸಿದಾಗ, ಭಾರತ ದೇಶದ ಕರ್ನಾಟಕಕ್ಕೆ ಸೀಮಿತವಾಗಿ ಹೇಳುವುದಾದರೆ-ಉತ್ತರ ಕರ್ನಾಟಕದ ಭಾಗದಲ್ಲಿ ಆಹಾರ ವ್ಯರ್ಥವಾಗುವುದು ಸ್ವಲ್ಪ ಕಡಿಮೆ. ಕಾರಣ ಶರಣ ಸಂಸ್ಕೃತಿಯ ಹಿನ್ನೆಲೆಯಲ್ಲಿ ಅವರು ಆಹಾರವನ್ನು ಸಾಧ್ಯವಾದಷ್ಟು ದುರುಪಯೋಗ ಪಡಿಸಿಕೊಳ್ಳದೆ ಬಡಿಸಿದ ಸಂಪೂರ್ಣ ಆಹಾರ ತಿನ್ನುವ ಪ್ರಯತ್ನ ಮಾಡುವುದನ್ನು ಪಾದಯಾತ್ರೆಯ ಸಂದರ್ಭದಲ್ಲಿ ಗಮನಿಸಿದ್ದೇನೆ. ಅದಕ್ಕೆ ಕಾರಣ ಏನೇ ಇರಲಿ ಆ ಮನೋಭಾವ ಮಾತ್ರ ಸ್ವಾಗತಾರ್ಹ.

ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಉತ್ತರ ಕರ್ನಾಟಕದಷ್ಟು ಅಲ್ಲದಿದ್ದರೂ ಆಹಾರವನ್ನು ಸ್ವಲ್ಪ ಮಟ್ಟಿಗೆ ಗೌರವಿಸಿ ಹೆಚ್ಚು ವ್ಯರ್ಥ ಮಾಡುವುದಿಲ್ಲ. ಮುಖ್ಯವಾಗಿ ಮದುವೆ ಮುಂತಾದ ಸಾರ್ವಜನಿಕ ಸಮಾರಂಭಗಳಲ್ಲಿ ಆಹಾರ ಯಥೇಚ್ಛವಾಗಿ ವ್ಯರ್ಥವಾಗುವುದು ದಕ್ಷಿಣ ಕರ್ನಾಟಕ ಮತ್ತು ಹಳೇ ಮೈಸೂರು ಭಾಗದಲ್ಲಿ. ಅದರಲ್ಲೂ ಬೆಂಗಳೂರಿನಲ್ಲಿ ಅತಿಹೆಚ್ಚು ಆಹಾರವನ್ನು ದುರುಪಯೋಗ ಪಡಿಸಿಕೊಳ್ಳುವುದನ್ನು ಸ್ವತಃ ಅನುಭವದಿಂದ ಗಮನಿಸಿದ್ದೇನೆ. ಒಂದು ಕಾಲಕ್ಕೆ ಆಹಾರ ಅತ್ಯಮೂಲ್ಯವಾಗಿತ್ತು. ಆದರೆ ಜನರ ಹಣದ ಶಕ್ತಿ ಹೆಚ್ಚಾದಂತೆ ಆಹಾರದ ಪೋಲಾಗುವುದು ಹೆಚ್ಚಾಯಿತು. ಕೆಲವೊಮ್ಮೆ ನಿರ್ಲಕ್ಷ್ಯ ಮತ್ತೆ ಹಲವು ಕಡೆ ದುರಹಂಕಾರ ಇದಕ್ಕೆ ಕಾರಣ ಇರಬಹುದು.

ಆಹಾರ ಬೆಳೆಗಳ ದುರುಪಯೋಗ!

ರೈತರು ಬಿತ್ತನೆ ಮಾಡಿ, ಅದು ಬೆಳೆದು ಫಸಲಾಗಿ, ಕಟಾವು ಮಾಡಿ, ಸಂಗ್ರಹಿಸಿ, ಸಾಗಾಣಿಕೆ ಮಾಡಿ, ಮಾರಾಟ ಮಾಡಿ, ಅದು ಮನೆ ಮನೆಗೆ ಸೇರಿ, ಆಹಾರವಾಗಿ ನಮ್ಮ ಎಲೆ ಅಥವಾ ತಟ್ಟೆಗೆ ಸೇರುವ ವೇಳೆಗೆ ಸಾಕಷ್ಟು ಸಹಜವಾಗಿ ಮತ್ತು ಅನಿವಾರ್ಯವಾಗಿ ನಷ್ಟವಾಗಿರುತ್ತದೆ. ಮತ್ತೆ ಆಹಾರವನ್ನು ನಾವು ಬಡಿಸಿಕೊಂಡು ತಟ್ಟೆಯಲ್ಲಿ 25% ವ್ಯರ್ಥ ಮಾಡಿದರೆ ಒಟ್ಟು ಆಹಾರ ಬೆಳೆಗಳ ದುರುಪಯೋಗ ಎಷ್ಟಾಗಬಹುದು ಊಹಿಸಿ. ಭಾರತದಲ್ಲಿ 25% ವ್ಯರ್ಥ ಎಂದರೆ ಸುಮಾರು 35 ಕೋಟಿ ಜನಸಂಖ್ಯೆಯ ಆಹಾರವನ್ನು ನಾವು ಕಬಳಿಸಿದಂತೆ ಆಗುತ್ತದೆ ಮತ್ತು ಆಹಾರ ಬೆಳೆಯಲು ಉಪಯೋಗಿಸಿದ ದೇಶದ ಪ್ರಾಕೃತಿಕ ಸಂಪನ್ಮೂಲಗಳನ್ನು ದುರುಪಯೋಗ ಪಡಿಸಿಕೊಂಡು ವ್ಯವಸಾಯದ ಮೇಲೆ ಅವಶ್ಯಕವಾಗಿ ಒತ್ತಡ ಹೇರಿದಂತೆ ಆಗುತ್ತದೆ ಹಾಗು ನಮ್ಮ ರೈತರ ಶ್ರಮಕ್ಕೆ ಅಗೌರವ ತೋರಿಸಿದಂತೆ ಆಗುತ್ತದೆ. ಹಿಂದೆ ಆಗಿದ್ದು ಆಗಿ ಹೋಯಿತು. ಕನಿಷ್ಠ ಈಗಲಾದರೂ ನಾವೆಲ್ಲರೂ ಜಾಗೃತರಾಗಿ ಈ ನಿಟ್ಟಿನಲ್ಲಿ ನಮ್ಮ ನಮ್ಮ ನೆಲೆಯಲ್ಲಿ – ವೈಯಕ್ತಿಕ ಆಸಕ್ತಿಯಿಂದ ಸಾಧ್ಯವಾದಷ್ಟು ಆಹಾರ ವ್ಯರ್ಥವಾಗುವುದನ್ನು ತಡೆಯಲು ಪ್ರಯತ್ನಿಸಬೇಕು. ಇದು ಅತ್ಯಂತ ಸರಳ ಮತ್ತು ಆತ್ಮ ತೃಪ್ತಿಯ ಕೆಲಸ.

ಸಮಾಜದ ದಿವ್ಯ ನಿರ್ಲಕ್ಷ್ಯ…

ಭತ್ತ ಬೆಳೆಯುವ ರೈತರಿಗಿಂತ ಅಕ್ಕಿ ಮಾರುವ, ಅನ್ನ ಮಾರುವ ವ್ಯಾಪಾರಿಗಳು ಹೆಚ್ಚು ಹಣಕಾಸಿನ ಲಾಭ ಮತ್ತು ಸಾಮಾಜಿಕ ಗೌರವ ಪಡೆಯುವ ಕಾಲಘಟ್ಟದಲ್ಲಿ, ಅತಿಯಾದ ಮಳೆ, ಬಹಳಷ್ಟು ಬೆಳೆಗಳ ನಾಶ ಒಂದು ಕಡೆ, ಮೀಸಲಾತಿ ಹೋರಾಟಗಳು, ಟಿಪ್ಪು ಸುಲ್ತಾನ್ – ಒಡೆಯರ್ ಹೆಸರುಗಳ ಕೆಸರೆರಚಾಟ, ಜನಸಂಖ್ಯೆಯ ನಿಯಂತ್ರಣ ಚರ್ಚೆ, ಭಾರತ್ ಜೋಡೋ ಪಾದಯಾತ್ರೆ ಹೀಗೆ ನಿರಂತರ ಸಂಘರ್ಷಮಯ ರಾಜಕೀಯ ವಾತಾವರಣದಲ್ಲಿ ಮನುಷ್ಯನ ಮೂಲಭೂತ ಅವಶ್ಯಕತೆಗಳಲ್ಲಿ ಬಹುಮುಖ್ಯವಾದ ಆಹಾರದ ಸದುಪಯೋಗದ ಬಗ್ಗೆ ಸಮಾಜ ದಿವ್ಯ ನಿರ್ಲಕ್ಷ್ಯ ತೋರುತ್ತಿದೆ!

ಧರ್ಮಗಳ ಆಧ್ಯಾತ್ಮಿಕ ಗುರುಗಳು ವಕ್ಫ್ ಆಸ್ತಿ ಬೆಳೆಸುವಲ್ಲಿ, ಚರ್ಚ್‌ಗಳನ್ನು ನಿರ್ಮಿಸುವ, ಶಿವ – ನಾಗ ಪ್ರತಿಮೆಗಳನ್ನು ಸ್ಥಾಪಿಸುವಲ್ಲಿ ನಿರತರಾಗಿದ್ದಾರೆ. ಆಹಾರವನ್ನು ಮರೆತಿದ್ದಾರೆ. ಕೃಷಿಯನ್ನು, ರೈತರನ್ನು ನಿರ್ಲಕ್ಷಿಸಿದ್ದಾರೆ. ಮಾಧ್ಯಮಗಳು ಬ್ರೇಕಿಂಗ್ ನ್ಯೂಸ್ ಗಳಲ್ಲಿ ಮೈ ಮರೆತಿದ್ದಾರೆ…..

ಯುವ ಪೀಳಿಗೆಗೆ ಆಹಾರದ ಮಹತ್ವವೇ ಅರ್ಥವಾಗುತ್ತಿಲ್ಲ. ಸ್ವಿಗ್ಗಿ, ಜೊಮೇಟೋಗಳೆಂಬ ಮೊಬೈಲ್ ಕಂಪ್ಯೂಟರ್ ಆಧಾರಿತ ಅಪ್ಲಿಕೇಶನ್‌ಗಳಲ್ಲಿ ಪೇಟಿಎಮ್, ಫೋನ್‌ ಪೇ, ಗೂಗಲ್ ಪೇ ಮುಂತಾದ ಬ್ಯಾಂಕಿಂಗ್ ತಂತ್ರಜ್ಞಾನದ ಮುಖಾಂತರ ಹಣ ವರ್ಗಾಯಿಸಿ ಮನೆಯ ಬಾಗಿಲಿಗೆ ಇಷ್ಟಪಟ್ಟ ಊಟ ತಿಂಡಿಗಳನ್ನು ಸುಲಭವಾಗಿ ತರಿಸಿಕೊಂಡು ತಿಂದು ಆಹಾರದ ಪಾವಿತ್ರ್ಯವನ್ನೇ ಅವರು ಮರೆತಿದ್ದಾರೆ. ಅದರ ಉತ್ಪಾದನೆ, ಹಂಚಿಕೆ, ಸಂಗ್ರಹ, ಭವಿಷ್ಯದ ಬಗ್ಗೆ ಅವರಿಗೆ ಕನಿಷ್ಠ ತಿಳಿವಳಿಕೆಯೇ ಇಲ್ಲ. ಆಡಳಿತ ವ್ಯವಸ್ಥೆ, ಮಾಧ್ಯಮಗಳು, ಅದಕ್ಕೆ ಸಂಬಂಧಿಸಿದ ಇತರರು ತುಂಬಾ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ.

ಬಹಳ ಮುಖ್ಯ ವಿಷಯವೊಂದನ್ನು ಇಲ್ಲಿ ಗಮನಿಸಬೇಕು. ಆಹಾರ ಒಂದು ರಾಷ್ಟ್ರೀಯ ಸಂಪನ್ಮೂಲ. ಒಮ್ಮೆ ಅ ಸಂಪನ್ಮೂಲದ (ಆಹಾರದ) ಕೊರತೆ ಉಂಟಾದರೆ ಇಡೀ ದೇಶದಲ್ಲೇ ಹಾಹಾಕಾರ ಉಂಟಾಗುತ್ತದೆ. ಆದ್ದರಿಂದ ಕನಿಷ್ಠ ನಾವುಗಳು ಒಂದು ಎಚ್ಚರಿಕೆಯನ್ನಾದರೂ ವಹಿಸಬೇಕು. ಅದಕ್ಕಾಗಿ ವಿಶ್ವ ಆಹಾರ ದಿನಾಚರಣೆ.

ವಿವೇಕಾನಂದ ಎಚ್.ಕೆ
(ಲೋಕ ಹಿತದ ಪರ ಸದಾಶಯಗಳಿಂದ ಕೂಡಿದ ಸರಣಿ ಬರೆಹಗಳ ಮೂಲಕ ಮತ್ತು ಪಾದಯಾತ್ರೆಯ ಮೂಲಕ ನಾಡಿನಾದ್ಯಂತ ಪರಿಚಿತರು.)

ಪ್ರಾಣಹೋದರೂ ಭೂಮಿ ಬಿಡುವುದಿಲ್ಲ: ಕೆಐಎಡಿಬಿ ವಿರುದ್ಧ ರೈತರ ಪ್ರತಿಭಟನೆ
ದಾವಣಗೆರೆ: ಜಿಲ್ಲೆಯ ಹೊರವಲಯ ಗ್ರಾಮಗಳಾದ ಮೆಳ್ಳೆಕಟ್ಟೆ, ಅಣಜಿ ಮತ್ತು ಲಿಂಗಾಪುರ ಗ್ರಾಮದಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಾಣಕ್ಕೆ ಮುಂದಾಗಿರುವ ಕರ್ನಾಟಕ ಕೈಗಾರಿಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ವಿರುದ್ಧ ರೈತರು ಪ್ರತಿಭಟನೆ ಕೈಗೊಂಡು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಗ್ರಾಮೀಣ ಪ್ರದೇಶಗಳಾದ ಅಣಜಿ, ಮೆಳ್ಳಕಟ್ಟಿ, ಲಿಂಗಾಪುರ ದಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಾಣಕ್ಕೆ 1,156 ಎಕರೆ ಭೂಮಿ ಸ್ವಾಧೀನ ಪಡಿಸಿಕೊಳ್ಳಲಾಗುವುದು ಎಂದು, ಕೆಐಎಡಿಬಿಯ ವಿಶೇಷ ಭೂ ಸ್ವಾಧೀನಾಧಿಕಾರಿಗಳು 258 ಜನ ರೈತರಿಗೆ ನೋಟಿಸ್‌ ನೀಡಿದ್ದಾರೆ. ಇದರಿಂದ  ಆಕ್ರೋಶಗೊಂಡ ಜನ  ಪ್ರಾಣಹೋದರೂ ಭೂಮಿ ಬಿಡುವುದಿಲ್ಲ ಎಂದು, ನಗರದ ಗಾಂಧಿ ವೃತ್ತದ ಬಳಿ ಪ್ರತಿಭಟನೆ ಮಾಡುವ ಮೂಲಕ ಕೈಗಾರಿಕ ಅಭಿವೃದ್ಧಿ ಮಂಡಳಿ ( ಕೆಐಎಡಿಬಿ ) ಗೆ  ಎಚ್ಚರಿಕೆ ನೀಡಿದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮೆಳ್ಳೆಕಟ್ಟೆಯ  ರೈತ ಎಂ.ಎಸ್. ನಾಗರಾಜ್, ಈ ಪ್ರದೇಶದಲ್ಲಿರು ಭೂಮಿಗಳು ಫಲವತ್ತಾಗಿದ್ದು, ಇಲ್ಲಿ ಅನೇಕ ಬೆಳೆಗಳನ್ನ ಬೆಳೆಯಲಾಗುತ್ತದೆ, ಈ ಭಾಗದ ಜಮೀನು ನಾಲ್ಕು ಕೆರೆಗಳ ವ್ಯಾಪ್ತಿಗೆ ಬರುತ್ತದೆ. ನಮ್ಮದು ‘ಎ’ ಗ್ರೇಡ್‍ನ ಎರೆಭೂಮಿ ಮತ್ತು ಫಲವತ್ತಾದ ಭೂಮಿ, ರೈತರು ಇಲ್ಲಿ ಮಳೆ ಇಲ್ಲದಿದ್ದರು 2 ಬೆಳೆಗಳನ್ನ ತೆಗೆಯುತ್ತಾರೆ, ಹಾಗೂ  ಈ ಪ್ರದೇಶಗಳಲ್ಲಿನ ರೈತರು ಭೂಮಿಯನ್ನೆ ನಂಬಿ ಜೀವಿಸುತ್ತಿದ್ದಾರೆ. ಇಂತಹ ಜಮೀನುಗಳಲ್ಲಿ ಸರ್ಕಾರ ಕೈಗಾರಿಕಾ ಕಾರಿಡಾರ್ ಮಾಡಲು ಮುಂದಾಗಿರುವುದು ಯಾವ ನ್ಯಾಯ ಸ್ವಾಮಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಎಪಿಎಂಸಿ ಅಧ್ಯಕ್ಷ ಅಣಜಿ ಚಂದ್ರಶೇಖರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಎಸ್. ಬಸವಂತಪ್ಪ, ಮುಖಂಡರಾದ ಹನುಮಂತಪ್ಪ, ವೀರಭದ್ರಪ್ಪ, ಮಲ್ಲಿಕಾರ್ಜುನ, ಸಿ.ಟಿ. ಕುಮಾರ್, ರಾಜಶೇಖರ್, ಲಿಂಗರಾಜ್, ಶೋಭಾ, ಪವಿತ್ರ, ನವೀನ ಮತ್ತಿತರರು ಇದ್ದು, ಆದೇಶ ಹಿಂಪಡೆಯುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.

ಆಗಸ್ಟ್ 7 ರಿಂದ ಅಗ್ನಿಪಥ್ ವಿರೋಧಿಸಿ ಬಿಕೆಯು ಅಭಿಯಾನ
ಉತ್ತರ ಪ್ರದೇಶ: ಕೇಂದ್ರ ಸರ್ಕಾರದ ಸೇನಾ ನೇಮಕಾತಿಯ ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ಆಗಸ್ಟ್ 7 ರಿಂದ ರೈತರೆಲ್ಲ ಸೇರಿ ದೇಶದ್ಯಂತ ಅಭಿಯಾನವನ್ನು ಕೈಗೊಳ್ಳುತ್ತೇವೆ ಎಂದು ಭಾರತೀಯ ಕಿಸಾನ್ ಯುನಿಯನ್ ಸಂಘಟನೆಯ(ಬಿಕೆಯು) ಅಧ್ಯಕ್ಷ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಬುಧವಾರ ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯ ಟಿಕ್ರಿ ಪ್ರದೇಶದಲ್ಲಿ ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಟಿಕಾಯತ್, ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶದೊಂದಿಗಿನ ಹೋರಾಟ ಇನ್ನೂ ಆರಂಭವಾಗಿಲ್ಲ ಎಂದು ಹೇಳಿದರು.

ಅಗ್ನಿಪಥ್ ಯೋಜನೆಯ ವಿರುದ್ಧದ ಅಭಿಯಾನ ಆಗಸ್ಟ್ 7 ರಿಂದ ಆರಂಭಗೊಂಡು ಒಂದು ವಾರದವರೆಗೆ ಮುಂದುವರೆಯುತ್ತದೆ ಎಂದು ಬಿಕೆಯು ರಾಷ್ಟ್ರೀಯವಕ್ತಾರರು ರೈತ ಸಮುದಾಯದ ಬೆಂಬಲವನ್ನು ಕೋರಿದರು.

ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚನೆಯಾದಾಗ, ಬಿಜೆಪಿ ಸದಸ್ಯರ ಮೇಲಿನ ಪ್ರಕರಣಗಳನ್ನು ಮುಚ್ಚಲಾಯಿತು. ಆದ್ದರಿಂದ ಅವರು ಪ್ರಕರಣಗಳಿಗೆ ಸಿದ್ಧರಿರಬೇಕು ಅಥವಾ ನಾವು ಚಳುವಳಿಗೆ ಸಿದ್ಧರಿದ್ದೇವೆ ಎಂದು ರಾಕೇಶ್ ಟಿಕಾಯತ್ ಹೇಳಿದರು.