Fire disaster – Peepal Media

ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ; ಹೊತ್ತಿ ಉರಿದ ನಾಲ್ಕು ಅಂತಸ್ತಿನ ಕಟ್ಟಡ
ಬೆಂಗಳೂರಿನ ಬಾಣಸವಾಡಿಯಲ್ಲಿ ತಡರಾತ್ರಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಅಂತಸ್ತಿನ ಬಿಲ್ಡಿಂಗ್ ಪೂರ್ತಿ ಬೆಂಕಿ ಹೊತ್ತಿ ಉರಿದಿರುವ ಘಟನೆ ನಡೆದಿದೆ.

ಬಾಣಸವಾಡಿ ಔಟರ್ ರಿಂಗ್ ರಸ್ತೆಯಲ್ಲಿರುವ ವಾಣಿಜ್ಯ ಮಳಿಗೆ ಕಟ್ಟಡದಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ನಾಲ್ಕು ಅಂತಸ್ತಿನಲ್ಲಿದ್ದ ಬೆಲೆ ಬಾಳುವ ಪೀಠೋಪಕರಣಗಳು ಸುಟ್ಟುಭಸ್ಮವಾಗಿದೆ. ನೆಲಮಾಳಿಗೆಯಲ್ಲಿ ಇದ್ದ ಪೀಠೋಪಕರಣ ಶೋ ರೂಂ ನಲ್ಲಿ ಮೊದಲು ಈ ಬೆಂಕಿ ಕಾಣಿಸಿಕೊಂಡು ಕ್ಷಣಮಾತ್ರದಲ್ಲಿ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ ಎಂದು ವರದಿಯಾಗಿದೆ.

ಕಟ್ಟಡದಲ್ಲಿದ್ದ ಫರ್ನಿಚರ್ ಶಾಪ್, ಐಟಿ ಕಂಪನಿಯ ಪಿಠೋಪಕರಣಗಳು ಸುಟ್ಟು ಕರಕಲಾಗಿವೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಟ್ಟಡದಲ್ಲಿದ್ದ ಸೆಕ್ಯೂರಿಟಿ ಗಾರ್ಡ್ ಗಳನ್ನು ರಕ್ಷಣೆ ಮಾಡಿದ್ದಾರೆ. ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಉದ್ಯಾನ್ ಎಕ್ಸ್ ಪ್ರೆಸ್ ರೈಲಿಗೆ ಬೆಂಕಿ!
ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಗೆ ಕಾರಣ ತಿಳಿಯಲು ತನಿಖೆ ಆರಂಭಿಸಲಾಗಿದೆ ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ರೈಲು ನಿಲ್ದಾಣದಲ್ಲಿ ಶನಿವಾರ ಬೆಳಗ್ಗೆ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ ಹತ್ತಿಕೊಂಡಿದೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ. ಬೆಂಕಿ ಅನಾಹುತಕ್ಕೆ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ.

ರೈಲು ಸಂಖ್ಯೆ 11301, ಉದ್ಯಾನ್ ಎಕ್ಸ್‌ಪ್ರೆಸ್ ಬೆಳಿಗ್ಗೆ 5:45 ಕ್ಕೆ ಕೆಎಸ್‌ಆರ್ ರೈಲು ನಿಲ್ದಾಣಕ್ಕೆ ತಲುಪಿತು. ಪ್ಲಾಟ್‌ಫಾರ್ಮ್ ಸಂಖ್ಯೆ 3ರಲ್ಲಿ ರೈಲು ನಿಂತಿದ್ದಾಗ ಬೆಳಗ್ಗೆ 7:10ರ ಸುಮಾರಿಗೆ ಎರಡು ಬೋಗಿಗಳಲ್ಲಿ ಹೊಗೆ ಕಾಣಿಸಿಕೊಂಡಿತು. ತಕ್ಷಣ ವಿಚಾರ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕೆಲವೇ ನಿಮಿಷಗಳಲ್ಲಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ರೈಲಿನ ಬಿ1 ಮತ್ತು ಬಿ2 ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದಟ್ಟ ಹೊಗೆ ಕವಿದದ್ದನ್ನು ಕಂಡು ಸ್ಥಳದಲ್ಲಿದ್ದ ಪ್ರಯಾಣಿಕರು ಭಯಭೀತರಾಗಿದ್ದರು. ಬೆಂಕಿ ಅನಾಹುತದಲ್ಲಿ ಕಾರಣ ಇನ್ನೂ ತಿಳಿದುಬಂದಿಲ್ಲ.

ಬಿಬಿಎಂಪಿ ಕೇಂದ್ರ ಕಚೇರಿ ಬೆಂಕಿ ; 9 ಕ್ಕೂ ಹೆಚ್ಚು ನೌಕರರಿಗೆ ಗಾಯ
ಬೆಂಗಳೂರಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಕೇಂದ್ರ ಕಚೇರಿಯ ಕಟ್ಟಡದಲ್ಲಿ ಶುಕ್ರವಾರ ಸಂಜೆ ಅಗ್ನಿ ಅವಘಡ ಸಂಭವಿಸಿದ್ದು, 9 ಕ್ಕೂ ಹೆಚ್ಚು ನೌಕರರು ಮತ್ತು ಸಿಬ್ಬಂದಿ ಭೇಟಿ ನೀಡಿದ್ದಾರೆ.

ಸಂಜೆ ವೇಳೆಗೆ ಕಚೇರಿಯ ತಾಂತ್ರಿಕ ವಿಭಾಗದ ಲ್ಯಾಬ್ ಮತ್ತು ಕಚೇರಿ ಕಟ್ಟಡದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದರೂ ಘಟನಾ ಸ್ಥಳಕ್ಕೆ ಅರ್ಧಗಂಟೆ ತಡವಾಗಿ ಬಂದ ಕಾರಣ ಕೆಲವು ನೌಕರರಿಗೆ ಬೆಂಕಿ ನಂದಿಸಲು ಮುಂದಾಗಿದೆ. ನಂತರ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿಯನ್ನು ಸಂಪೂರ್ಣ ನಂದಿಸಿದ್ದು, ಪರಿಸ್ಥಿತಿ ಹತೋಟಿಗೆ ಬಂದಿದೆ.

ಒಟ್ಟು 9 ಮಂದಿಗೆ ಗಾಯ.

2 ಮಹಿಳೆಯರು, 7 ಪುರುಷರಿಗೆ ಗಾಯ.

ಮುಖ್ಯ ಅಭಿಯಂತರರಾದ ಶಿವಕುಮಾರ್ ರವರನ್ನು ನೇರವಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆ ನೀಡಲು ಕರೆತರಲಾಗಿದೆ.

ಉಳಿದ 8 ಮಂದಿಗೆ ಮಾರ್ಥಾಸ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಆಂಬುಲೆನ್ಸ್ ಗಳ ಮೂಲಕ ವಿಕ್ಟೋರೊಯಾ ಆಸ್ಪತ್ರೆಗೆ ರವಾನಿಸಲಾಯಿತು.

ಗುಣನಿಯಂತ್ರಣ ಪ್ರಯೋಗಾಲಯ:

ಶಿವಕುಮಾರ್, ಮುಖ್ಯ ಅಭಿಯಂತರರು.

ಕಿರಣ್, ಕಾರ್ಯಪಾಲಕ ಅಭಿಯಂತರರು.

ಸಂತೋಷ್ ಕುಮಾರ್, ಕಾರ್ಯಪಾಲಕ ಅಭಿಯಂತರರು.

ವಿಜಯಮಾಲ, ಕಾರ್ಯಪಾಲಕ ಅಭಿಯಂತರರು.

ಶ್ರೀಧರ್, ಸಹಾಯಕ ಕಾರ್ಯಪಾಲಕ ಅಭಿಯಂತರರು.

ಸಿರಾಜ್, ಪ್ರಥಮ ದರ್ಜೆ ಸಹಾಯಕರು.

ಜ್ಯೋತಿ, ಆಪರೇಟರ್.

ಶ್ರಿನಿವಾಸ್, ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್.

ಮನೋಜ್, ಗಣಕಯಂತ್ರ ನಿರ್ವಾಹಕರು.

ಘಟನೆಯಲ್ಲಿ ಸುಮಾರು 9 ಕ್ಕೂ ಹೆಚ್ಚು ನೌಕರರಿಗೂ ಸುತ್ತು ಗಾಯಗಳಾಗಿದ್ದರೆ, ಅವರನ್ನು ಸೆಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂತಹ ಗಂಭೀರ ಗಾಯಗಳು ಆಗದಿದ್ದರೂ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾದಿಂದ ಪಾರಾಗಿದ್ದಾರೆ. ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸ್ಥಳಕ್ಕೆ ದಾವಿಸಿ ಪರಿಶೀಲನೆ

ಅಸ್ಸಾಂನಲ್ಲಿ ಅಗ್ನಿ ಅವಘಡ: ಸುಮಾರು 100 ಮನೆಗಳು, ಅಂಗಡಿಗಳು ಬೆಂಕಿಗೆ ಆಹುತಿ
ಕರ್ಬಿ ಆಂಗ್ಲಾಂಗ್( ಅಸ್ಸಾಂ): ಅಸ್ಸಾಂ-ನಾಗಾಲ್ಯಾಂಡ್ ಗಡಿಯಲ್ಲಿರುವ ಅಸ್ಸಾಂನ ಕರ್ಬಿ ಆಂಗ್ಲಾಂಗ್ ಜಿಲ್ಲೆಯ ಬೊಕಾಜನ್ ಬಳಿಯ ಲಾಹೋರಿಜಾನ್ ಪ್ರದೇಶದಲ್ಲಿ ಸಂಭವಿಸಿದ ಭಾರಿ ಅಗ್ನಿ ದುರಂತದಲ್ಲಿ, ಸುಮಾರು 100 ಮನೆಗಳು ಮತ್ತು ಅಂಗಡಿಗಳು ಸುಟ್ಟು ಕರಕಲಾಗಿರು ಘಟನೆ ಬುಧವಾರ ನಡೆದಿದೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾಹಿತಿ ನೀಡಿರುವ ಬೊಕಾಜನ್ನ ಉಪ ವಿಭಾಗೀಯ ಪೊಲೀಸ್ ಅಧಿಕಾರಿ (ಎಸ್ಡಿಪಿಒ) ಜಾನ್ ದಾಸ್, ಸಿಲಿಂಡರ್‌ಗಳು ಸ್ಫೋಟಗೊಂಡಿರುವ ಕಾರಣ ಅವಘಡ ಸಂಭವಿಸಿದ್ದು, ಬೆಂಕಿಯಲ್ಲಿ ಒಂದು ನಾಲ್ಕು ಚಕ್ರದ ವಾಹನ ಮತ್ತು ಮೂರು ಮೋಟಾರ್ ಸೈಕಲ್ ಗಳು ಸಹ ಹಾನಿಗೀಡಾಗಿವೆ. ಅದೃಷ್ಟಕ್ಕೆ ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.

ಘಟನೆ ತಿಳಿದ ಕೂಡಲೇ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿದ್ದು, ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ನಿರತರಾಗಿದ್ದು, ಅವಘಡದಲ್ಲಿ ಕನಿಷ್ಠ 100 ಮನೆಗಳು, ವ್ಯಾಪಾರ ಸಂಸ್ಥೆಗಳು ಮತ್ತು ಅಂಗಡಿಗಳಿಗೆ ಹಾನಿಯಾಗಿದೆ ಎಂದು ಹೇಳಿದ್ದಾರೆ.