forced to clean toilets – Peepal Media

ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ : ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ನಡೆದ ಪ್ರಕರಣ
ಬೆಂಗಳೂರಿನಲ್ಲಿ ಶಾಲಾ ಮಕ್ಕಳ ಬಳಿ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣದ ನಂತರ ಈಗ ಶಿಕ್ಷಣ ಸಚಿವರ ತವರು ಜಿಲ್ಲೆ ಶಿವಮೊಗ್ಗದಲ್ಲೂ ಇದೇ ಮಾದರಿಯ ಪ್ರಕರಣದ ಬಗ್ಗೆ ವರದಿಯಾಗಿದೆ.

ಕರ್ನಾಟಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜಿಲ್ಲಾ ಬ್ಲಾಕ್ ಶಿಕ್ಷಣಾಧಿಕಾರಿ DDPI ಈ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಕೊಮಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡದ ನೇರಲಕೆರೆ ಗ್ರಾಮದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಛಗೊಳಿಸುತ್ತಿರುವುದು ಕಂಡು ಬಂದಿದೆ. ಈ ಕುರಿತು ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್), ಶಿಕ್ಷಣ ಇಲಾಖೆಯ ಸಹಾಯಕ ಆಯುಕ್ತ ಸತ್ಯನಾರಾಯಣ ಅವರಿಗೆ ದೂರು ಸಲ್ಲಿಸಿದ್ದು, ಆರೋಪಿ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಮತ್ತು ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಮುಖ್ಯಶಿಕ್ಷಕ ಶಂಕರಪ್ಪ ಹಾಗೂ ಇತರೆ ಶಿಕ್ಷಕರು ಶಾಲಾ ಮಕ್ಕಳನ್ನು ಶೌಚಾಲಯ ಸ್ವಚ್ಛಗೊಳಿಸುವ ಕಾರ್ಯದಲ್ಲಿ ತೊಡಗಿದ್ದರು ಎನ್ನಲಾಗಿದೆ. ಸ್ಥಳೀಯ ಬಿಇಒ ಪ್ರಕಾರ, ಕಳೆದ ವಾರ ಈ ಘಟನೆ ನಡೆದಿದ್ದು, ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕೇವಲ ಶೌಚಾಲಯಗಳಿಗೆ ನೀರು ಹಾಕುವಂತೆ ವಿದ್ಯಾರ್ಥಿಗಳನ್ನು ಕೇಳಿದ್ದಾರೆ ಮತ್ತು ಅವುಗಳನ್ನು ಸ್ವಚ್ಛಗೊಳಿಸುವುದಿಲ್ಲ ಎಂದು ಹೇಳಿದ ನಂತರ ಈ ವಿಡಿಯೋ ಹರಿದಾಡಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಕೆಲವೇ ದಿನಗಳ ಹಿಂದೆ ಬೆಂಗಳೂರಿನ ಪೀಣ್ಯ ಬಳಿಯ ಆಂದ್ರಹಳ್ಳಿಯಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಒತ್ತಾಯಪೂರ್ವಕವಾಗಿ ಮಕ್ಕಳಿಂದ ಶೌಚಾಲಯವನ್ನು ಸ್ವಚ್ಛಗೊಳಿಸಿದ ನಂತರ ಮುಖ್ಯ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ನಂತರ ವಿಚಾರಣೆ ಮುಗಿಯುವ ವರೆಗೂ ಸರ್ಕಾರ ಅಮಾನತುಗೊಳಿಸಿ, ಅವರ ಬಂಧನಕ್ಕೆ ಕಾರಣವಾಗಿತ್ತು.

ಈ ಪ್ರಕರಣದ ನಂತರ ಶಿಕ್ಷಣ ಸಚಿವರ ತವರೀ ಜಿಲ್ಲೆ ಶಿವಮೊಗ್ಗದಲ್ಲೇ ಈಗ ಪ್ರಕರಣ ದಾಖಲಾಗಿದ್ದು ಸಚಿವರು ಎಷ್ಟರ ಮಟ್ಟಿಗೆ ಈ ಪ್ರಕರಣಕ್ಕೆ ನ್ಯಾಯ ಒದಗಿಸುವರು ಎಂದು DSS ದೂರಿದೆ.

ವಿಡಿಯೋ ವೈರಲ್: ಶಾಲೆಯಲ್ಲಿ ಶೌಚಾಲಯಗಳನ್ನು ಸ್ವಚ್ಚಗೊಳಿಸುವಂತೆ ವಿದ್ಯಾರ್ಥಿಗಳಿಗೆ ಒತ್ತಾಯ
ಉತ್ತರ ಪ್ರದೇಶ: ಬಲ್ಲಿಯಾ ಜಿಲ್ಲೆಯ ಸೋಹವ್ನ್ ಪ್ರದೇಶದ ಪಿಪ್ರಾಕಲಾದಲ್ಲಿನ ಪ್ರಾಥಮಿಕ ಶಾಲೆಯಲ್ಲಿ, ವಿದ್ಯಾರ್ಥಿಗಳನ್ನು ಬಲವಂತವಾಗಿ ಶೌಚಾಲಯಗಳನ್ನು ಸ್ವಚ್ಛಗೊಳಿಸುವಂತೆ ತೋರಿಸುವ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು, ಈ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಮೂಲ ಶಿಕ್ಷಣಾಧಿಕಾರಿ ಮಣಿರಾಮ್ ಸಿಂಗ್ ಆದೇಶಿಸಿದ್ದಾರೆ.

ಮಕ್ಕಳು ಶೌಚಾಲಯವನ್ನು ಸ್ವಚ್ಛಗೊಳಿಸುತ್ತಿರುವಾಗ, ವ್ಯಕ್ತಿಯೊಬ್ಬರು ವಿದ್ಯಾರ್ಥಿಗಳನ್ನು ನಿಂದಿಸುತ್ತಿದ್ದು, ಅದೇ ಘಟನೆಯ ಮತ್ತೊಂದು ವೀಡಿಯೊದಲ್ಲಿ, "ಶೌಚಾಲಯವನ್ನು ಸರಿಯಾಗಿ ಸ್ವಚ್ಛಗೊಳಿಸದಿದ್ದರೆ ಶೌಚಾಲಯಕ್ಕೆ ಬೀಗ ಹಾಕುವುದಾಗಿ ಪ್ರಾಂಶುಪಾಲರು ಬೆದರಿಕೆ ಹಾಕಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಬಲ್ಲಿಯಾ ಪ್ರದೇಶದ‌ ಕ್ಷೇತ್ರ ಶಿಕ್ಷಣಾಧಿಕಾರಿ ಅಖಿಲೇಶ್ ಕುಮಾರ್ ಝಾ ಮಾತನಾಡಿ, ಶಿಕ್ಷಣ ಇಲಾಖೆಯು ವಿಡಿಯೋದ ಸತ್ಯಾಸತ್ಯತೆಯ ಬಗ್ಗೆ ತನಿಖೆ ನಡೆಸುತ್ತಿದೆ, ಒಂದು ವೇಳೆ ಇದು ನಿಜವಾಗಿದ್ದರೆ ಪ್ರಾಂಶುಪಾಲರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.