formers protest stoped – Peepal Media

ದೆಹಲಿ ಚಲೋ ಸದ್ಯಕ್ಕೆ ಅಂತ್ಯ: ಸರ್ಕಾರ ಜೊತೆ ನಡೆದ ಮಾತುಕತೆ ಫಲಿಸುವುದೇ?
ಚಂಡೀಗಢ: ಕೇಂದ್ರ ನಾಯಕರೊಂದಿಗೆ 4 ನೇ ಸುತ್ತಿನ ಮಾತುಕತೆ ನಡೆಸಿದ ರೈತ ಮುಖಂಡರು ತಾತ್ಕಾ‌ಲಿಕವಾಗಿ ಪ್ರತಿಭಟನೆ ಸ್ಥಗಿತಗೊಳಿಸಿದ್ದಾರೆ. ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳದಿದ್ದರೆ ಫೆ.21ರಿಂದ ದೆಹಲಿ ಚಲೋ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಅರ್ಜುನ್ ಮುಂಡಾ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಮತ್ತು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್‌ ಅವರು ಚಂಡೀಗಢದ ಸೆಕ್ಟರ್‌ 26ರಲ್ಲಿ ಇರುವ ಮಹಾತ್ಮ ಗಾಂಧಿ ರಾಜ್ಯ ಸಾರ್ವಜನಿಕ ಆಡಳಿತ ಸಂಸ್ಥೆಯಲ್ಲಿ ರೈತ ನಾಯಕರೊಂದಿಗೆ ಮಾತುಕತೆ ನಡೆಸಿದರು. ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್‌ ಅವರೂ ಈ ಸಭೆಯಲ್ಲಿ ಇದ್ದರು. ರಾತ್ರಿ 8.15ಕ್ಕೆ ಆರಂಭವಾದ ಸಭೆ ತಡರಾತ್ರಿ 1 ಗಂಟೆವರೆಗೂ ನಡೆಯಿತು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪೀಯೂಷ್ ಗೋಯಲ್, ದ್ವಿದಳ ಧಾನ್ಯಗಳು, ಮೆಕ್ಕೆಜೋಳ ಮತ್ತು ಹತ್ತಿ ಬೆಳೆಗಳನ್ನು ಐದು ವರ್ಷಗಳವರೆಗೆ ಕನಿಷ್ಠ ಬೆಂಬಲ ಬೆಲೆಯಲ್ಲಿ ಸರ್ಕಾರಿ ಸಂಸ್ಥೆಗಳಿಂದ ಖರೀದಿಸುವ ಪ್ರಸ್ತಾವವನ್ನು ರೈತರ ಮುಂದೆ ಇಟ್ಟಿದ್ದೇವೆ. ಸರ್ಕಾರದ ಈ ಪ್ತಸ್ತಾಪವನ್ನು ತಮ್ಮ ವಲಯದಲ್ಲಿ ಚರ್ಚಿಸಿ ಎರಡು ದಿನಗಳ ಒಳಗೆ ತಮ್ಮ ಮುಂದಿನ ನಡೆಯನ್ನು ತಿಳಿಸುವುದಾಗಿ ರೈತ ನಾಯಕರು ಹೇಳಿದ್ದಾರೆ ಎಂದು ಮಾಹಿತಿ ನೀಡಿದರು.

ಹುರಳಿ ಬೇಳೆ, ಉದ್ದಿನ ಬೇಳೆ, ಮಸೂದರ್‌ ದಾಲ್ ಅಥವಾ ಮೆಕ್ಕೆಜೋಳವನ್ನು ಮುಂದಿನ 5 ವರ್ಷಗಳಲ್ಲಿ ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸಲು ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ ಹಾಗೂ ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ರೈತರೊಂದಿಗೆ ಒಪ್ಪಂದ ಮಾಡಿಕೊಳ್ಳಲಿದೆ. ಖರೀದಿಯ ಪ್ರಮಾಣಕ್ಕೆ ಯಾವುದೇ ಮಿತಿ ಇಲ್ಲ. ಇದಕ್ಕಾಗಿ ಹೊಸ ಪೋರ್ಟಲ್ ಒಂದನ್ನು ಅಭಿವೃದ್ಧಿ ಪಡಿಸಲಾಗುವುದು. ಇದು ಪಂಜಾಬ್‌ನ ಕೃಷಿಯನ್ನು ಕಾಪಾಡುವುದಲ್ಲದೆ, ಅಂತರ್ಜಲ ಮಟ್ಟವನ್ನೂ ಹೆಚ್ಚಿಸುತ್ತದೆ. ಜೊತೆಗೆ ಭೂಮಿ ಬಂಜರಾಗುವುದನ್ನು ತಡೆಯಲಿದೆ’ ಎಂದು ಪೀಯೂಷ್‌ ಗೋಯಲ್ ಎಂದು ವಿವರಿಸಿದರು.

ಕೇಂದ್ರದ ಪ್ರಸ್ತಾವಗಳ ಬಗ್ಗೆ ಮಾತನಾಡಿದ ರೈತ ನಾಯಕ ಸರ್ವನ್‌ ಸಿಂಗ್‌ ಪಂದೆರ್‌, ದೆಹಲಿ ಚಲೋ’ ಹೋರಾಟ ತಾತ್ಕಾಲಿಕವಾಗಿ ಸ್ಥಗಿತವಾಗಿದ್ದು, ಸಮಸ್ಯೆಗಳು ಬಗೆಹರಿಯದಿದ್ದರೆ ಫೆ.21ರಂದು ಬೆಳಿಗ್ಗೆ 11 ಗಂಟೆಗೆ ಮುಂದುವರಿಯಲಿದೆ’ ಎಂದು ತಿಳಿಸಿದರು.
ಫೆ. 19–20ರಂದು ಸರ್ಕಾರದ ಪ್ರಸ್ಥಾವನೆ ಕುರಿತು ನಮ್ಮ ವೇದಿಕೆಯಲ್ಲಿ ಚರ್ಚಿಸುತ್ತೇವೆ. ಇದರ ಬಗ್ಗೆ ತಜ್ಞರ ಅಭಿಪ್ರಾಯ ಪಡೆದು, ನಿರ್ಧಾರ ಪ್ರಕಟಿಸುತ್ತೇವೆ. ಸಾಲ ಮನ್ನಾ ಹಾಗೂ ಇತರ ಬೇಡಿಕೆಗಳ ಬಗ್ಗೆ ಚರ್ಚೆ ಬಾಕಿ ಇದ್ದು, ಇದೂ ಎರಡು ದಿನಗಳಲ್ಲಿ ಬಗೆಹರಿಯುವ ಸಾಧ್ಯತೆ ಇದೆ ಎಂದು ನುಡಿದರು.