Gogte College of Commerce – Peepal Media

ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಹಲ್ಲೆ: ಎಚ್‌.ಡಿ.ಕೆ ಆಕ್ರೋಶ
ಬೆಳಗಾವಿ: ಬೆಳಗಾವಿಯ ಗೋಗ್ಟೆ ಕಾಲೇಜ್‌ ಆಫ್‌ ಕಾಮರ್ಸ್‌ʼನ ಶ್ರೇಯಸ್‌ ಎಂಬ ವಿದ್ಯಾರ್ಥಿ, ಜಿಲ್ಲೆಯ ಅಂತರ್‌ ಕಾಲೇಜು ಉತ್ಸವದಲ್ಲಿ ಕನ್ನಡ ಧ್ವಜವನ್ನು ಹಾರಿಸಿದ ವಿಧ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆದಿದೆ. ನಂತರ ವಿದ್ಯಾರ್ಥಿಯು ಹಲ್ಲೆ ನಡೆಸಿದವರ ಮೇಲೆ ಪೊಲೀಸರಿಗೆ ದೂರು ನೀಡಲು ಹೋದಾಗ, ಪೊಲೀಸರು ಕೂಡ ಆತನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವುದರ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಬೆಳಗಾವಿಯ ತಿಲಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ನಡೆದಿರುವ ಹಲ್ಲೆಯನ್ನು ಉಗ್ರವಾಗಿ ಖಂಡಿಸುತ್ತೇನೆ. ದೂರು ಕೊಡಲು ಹೋದ ಆ ವಿದ್ಯಾರ್ಥಿ ಮೇಲೆ ಪೊಲೀಸರು ಕೂಡ ಅಮಾನುಷವಾಗಿ ಹಲ್ಲೆ ನಡೆಸಿರುವುದು ಕನ್ನಡಕ್ಕೆ, ಕರ್ನಾಟಕಕ್ಕೆ ಬಗೆದ ದೊಡ್ಡ ದ್ರೋಹ ಎಂದು ಕಿಡಿಕಾರಿದ್ದಾರೆ.

ಡಿಸಿಪಿ ಹಾಗೂ ಎಸಿಪಿ ಮಟ್ಟದ ಅಧಿಕಾರಿಗಳು ಇಬ್ಬರು ಬಾಲಕನ ವಿಷಯದಲ್ಲಿ ಕ್ರೂರವಾಗಿ ವರ್ತಿಸಿ ದರ್ಪ ತೋರಿಸಿರುವುದು ಸರಿಯಲ್ಲ. ಡಿಸಿಪಿ ಅಧಿಕಾರಿ ಆ ಬಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಕಪಾಳಮೋಕ್ಷ ಮಾಡಿ, ಬೂಟು ಕಾಲಿನಿಂದ ಒದ್ದಿರುವುದು ಅಕ್ಷಮ್ಯ ಹಾಗೂ ಅನಾಗರಿಕ ವರ್ತನೆ ಎಂದು ಗಡುಗಿದ್ದಾರೆ.

ಈ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ಬಾಲಕನ ಮೇಲೆ ಹಲ್ಲೆ ನಡೆಸಿದ ಇತರೆ ಬಾಲಕರನ್ನು ವಶಕ್ಕೆ ಪಡೆದು, ಅವರಿಗೆ ಚಿತಾವಣೆ ನೀಡಿದವರನ್ನು ಬಂಧಿಸಬೇಕು ಹಾಗೂ ಕನ್ನಡ ಬಾವುಟ ಹಾರಿಸಿದ ಬಾಲಕನ ಮೇಲೆ ದುಂಡಾವರ್ತನೆ ತೋರಿದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ಮೇಲೆ ಬೆಳಗಾವಿಯಲ್ಲಿ ಗೊಂದಲ ಹೆಚ್ಚಾಗುತ್ತಿದೆ. ಪ್ರತಿ ಸೂಕ್ಷ್ಮ ವಿಷಯವನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಬಿಜೆಪಿಯ ಕೈಯ್ಯಲ್ಲಿ ಕನ್ನಡ ಮತ್ತು ಕನ್ನಡಿಗರು ಸುರಕ್ಷಿತವಾಗಿಲ್ಲ ಎನ್ನುವುದು ಸ್ಪಷ್ಟ. ಬೆಳಗಾವಿ ವಿಷಯ ಗಮನಿಸಿದರೆ ಅದು ಅರ್ಥವಾಗುತ್ತದೆ ಎಂದು ಹೇಳಿದ್ದಾರೆ.

ಬೆಳಗಾವಿಯ ತಿಲಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ನಡೆದಿರುವ ಹಲ್ಲೆಯನ್ನು ಉಗ್ರವಾಗಿ ಖಂಡಿಸುತ್ತೇನೆ.
ದೂರು ಕೊಡಲು ಹೋದ ಆ ವಿದ್ಯಾರ್ಥಿ ಮೇಲೆ ಪೊಲೀಸರು ಕೂಡ ಅಮಾನುಷವಾಗಿ ಹಲ್ಲೆ ನಡೆಸಿರುವುದು ಕನ್ನಡಕ್ಕೆ, ಕರ್ನಾಟಕಕ್ಕೆ ಬಗೆದ ದೊಡ್ಡ ದ್ರೋಹ.1/4#ಕನ್ನಡ #ಬೆಳಗಾವಿ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 1, 2022