Goonda kayde – Peepal Media

ಪುನೀತ್ ಕೆರೆಹಳ್ಳಿ ಬಂಧನ : ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು
ಇದ್ರಿಷ್ ಪಾಷಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪುನೀತ್ ಕೆರೆಹಳ್ಳಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಕರ್ನಾಟಕ ರಾಜ್ಯ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಸಿಸಿಬಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಸಮಾಜದ ಸ್ವಾಸ್ಥ್ಯ ಕೆಡಿಸುವ, ದೇಶ ವಿರೋಧಿ ಚಟುವಟಿಕೆ, ಅಪರಾಧ ಪ್ರಕರಣ, ಕೊಲೆ ಪ್ರಕರಣ, ಕೋಮು ಸಾಮರಸ್ಯ ಕೆಡಿಸಿರುವುದನ್ನು ಆದರಿಸಿ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿದ ಬಗ್ಗೆ ಪೊಲೀಸರು ಮಾಹಿತಿ ತಿಳಿಸಿದ್ದಾರೆ.

ಮೂಲತಃ ಹಾಸನ ಜಿಲ್ಲೆಯವನಾದ ಪುನೀತ್ ಕೆರೆಹಳ್ಳಿ ರಾಷ್ಟ್ರ ರಕ್ಷಣಾ ಪಡೆ ಎಂಬ ಪುಂಡರ ಸಂಘ ಕಟ್ಟಿಕೊಂಡು ಜನರನ್ನು ಬೆದರಿಸುವ, ಸಮಾಜದ ಶಾಂತಿ ಕದಡುವ, ಗೋ ರಕ್ಷಣೆ ಹೆಸರಿನಲ್ಲಿ ವ್ಯಾಪಾರಿಗಳನ್ನು ಬೆದರಿಸುವ ಕಾರ್ಯಗಳಲ್ಲಿ ತೊಡಗಿದ್ದನು ಎಂದು ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ.

ಈತನ ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ, ವಿಜಯನಗರ ಜಿಲ್ಲೆಯ ಹಂಪಿ ಟೂರಿಸಂ ಪೊಲೀಸ್‌ ಠಾಣೆ, ರಾಮನಗರ ಜಿಲ್ಲೆಯ ಸಾತನೂರು ಸೇರಿದಂತೆ ರಾಜ್ಯದ ಹಲವು ಠಾಣೆಗಳಲ್ಲಿ ದೊಂಬಿ, ಕೊಲೆ, ಹಲ್ಲೆ, ಪ್ರಾಣ ಬೆದರಿಕೆ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಈತನ ಮೇಲೆ ರೌಡಿಶೀಟರ್ ತೆರೆಯಲು ಸಿದ್ಧತೆ ನಡೆದಿದೆ ಎಂದು ಈ ಹಿಂದೆ ಚಾಮರಾಜಪೇಟೆ ಪೊಲೀಸರು ಮಾಹಿತಿ ನೀಡಿದ್ದರು.

ಒಂದು ತಿಂಗಳ ಹಿಂದೆಯೇ ಚಾಮರಾಜಪೇಟೆ ಉಪ ವಿಭಾಗದ ಪೊಲೀಸರು ಈತನಿಗೆ ತಿಳಿವಳಿಕೆ ನೋಟಿಸ್‌ ಜಾರಿ ಮಾಡಿದ್ದರು. ಇದಕ್ಕೂ ಮುನ್ನ ಈತನ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಹಾಗೂ ಈತನ ಕಾರ್ಯ ಚಟುವಟಿಕೆಗಳನ್ನು ಕಲೆ ಹಾಕಿ ಈತನ ವಿರುದ್ಧ ರೌಡಿಪಟ್ಟಿ ತೆರೆಯಲು ಸಿದ್ಧತೆ ನಡೆಸಿದ್ದರು ಎನ್ನಲಾಗಿದೆ.

ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ನಿಮ್ಮ ಮೇಲೆ ಏಕೆ ರೌಡಿಪಟ್ಟಿ ತೆರೆಯಬಾರದು ಎಂಬುದಕ್ಕೆ ನನಗೆ ವಿವರಣೆ ಸಲ್ಲಿಸಬಹದು. ಇಲ್ಲದಿದ್ದರೆ ವಿವರಣೆ ಇಲ್ಲವೆಂದು ಪರಿಗಣಿಸಿ ರೌಡಿಪಟ್ಟಿ ತೆರೆಯಲಾಗುವುದು’ ಎಂದು ಚಿಕ್ಕ‍ಪೇಟೆ ಉಪ ವಿಭಾಗದ ಸಹಾಯಕ ಪೊಲೀಸ್‌ ಆಯುಕ್ತರು, ಪುನೀತ್‌ಗೆ ಜಾರಿಗೊಳಿಸಿರುವ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದರು.

ಗೂಂಡಾ ಕಾಯ್ದೆ ಅಡಿಯಲ್ಲಿ ಬಂಧನವಾದ ವ್ಯಕ್ತಿಯನ್ನು ಇತರ ಪ್ರಕರಣಗಳ ಮಾದರಿಯಲ್ಲಿ 24 ಗಂಟೆಗಳ ಒಳಗೆ ನ್ಯಾಯಾಧೀಶರ ಎದುರು ಹಾಜರುಪಡಿಸಬೇಕಾದ ಅಗತ್ಯವು ಇರುವುದಿಲ್ಲ. ಪೊಲೀಸ್‌ ಕಸ್ಟಡಿ ಅಥವಾ ನ್ಯಾಯಾಂಗ ಬಂಧನವನ್ನು ಪದೇ ಪದೇ ವಿಸ್ತರಿಸಿಕೊಳ್ಳುವ ಪ್ರಕ್ರಿಯೆಯ ಅಗತ್ಯವೂ ಇಲ್ಲದೇ ನೇರವಾಗಿ ಜೈಲಿಗೆ ಕಳುಹಿಸಬಹುದು. ದಾಖಲಾದ ಪ್ರಕರಣದ ತನಿಖೆ ಅಡಿಯಲ್ಲಿ ಗೂಂಡಾ ಕಾಯ್ದೆ ಸೂಕ್ತ ಎನಿಸಿದರೆ 1 ವರ್ಷಗಳ ಕಾಲ ಜಾಮೀನು ಕೂಡಾ ಸಿಗುವುದಿಲ್ಲ ಎಂಬ ಮಾಹಿತಿ ಕೂಡಾ ಪೊಲೀಸರು ತಿಳಿಸಿದ್ದಾರೆ.