Governor – Peepal Media

ವಿವಿಗಳ ವಿಸಿಗಳ ನೇಮಕಾತಿಗೆ ಸಂಬಂಧಿಸಿದ ಕೇಂದ್ರದ ಹೊಸ ನಿಯಮಗಳ ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ
ಯುಜಿಸಿಯ 2025ರ ಕರಡು ನಿಯಮಾವಳಿಗಳನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಮಂಗಳವಾರ ಸರ್ವಾನುಮತದಿಂದ ಅಂಗೀಕರಿಸಿದೆ.

ಜನವರಿ 6 ರಂದು ಹೊರಡಿಸಲಾದ ನಿಯಮಾವಳಿಗಳು ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳನ್ನು ನೇಮಿಸಲು ಮೂರು ಸದಸ್ಯರ ಸಮಿತಿಯನ್ನು ರಚಿಸುವ ಅಧಿಕಾರವನ್ನು ರಾಜ್ಯಪಾಲರಿಗೆ ನೀಡಲು ಪ್ರಸ್ತಾಪಿಸುತ್ತದೆ.

ಹೊಸ ನಿಯಮಗಳು ಉದ್ಯಮ ತಜ್ಞರು ಮತ್ತು ಸಾರ್ವಜನಿಕ ವಲಯದ ಅನುಭವಿಗಳನ್ನು ಉಪಕುಲಪತಿಗಳಾಗಿ ನೇಮಿಸಲು ಅವಕಾಶ ನೀಡುತ್ತವೆ, ಕೇವಲ ಶಿಕ್ಷಣ ತಜ್ಞರನ್ನು ಮಾತ್ರ ಆಯ್ಕೆ ಮಾಡುವ ವ್ಯವಸ್ಥೆಯನ್ನು ತೆಗೆದುಹಾಕಿದೆ.

“ರಾಜ್ಯ ಸರ್ಕಾರಗಳು ಮತ್ತು ಶೈಕ್ಷಣಿಕ ತಜ್ಞರು ಕಳವಳ ವ್ಯಕ್ತಪಡಿಸಿರುವ ಸಮಯದಲ್ಲಿ ನಾವು ಈ ನಿರ್ಣಯವನ್ನು ಮಂಡಿಸುತ್ತಿದ್ದೇವೆ” ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಂಗಳವಾರ ಕೇರಳ ವಿಧಾನಸಭೆಯಲ್ಲಿ ನಿರ್ಣಯವನ್ನು ಮಂಡಿಸಿದರು.

ಪ್ರತಿ ರಾಜ್ಯದಲ್ಲಿನ ವಿಶ್ವವಿದ್ಯಾನಿಲಯಗಳು ತಮ್ಮ ರಾಜ್ಯ ಶಾಸಕಾಂಗ ಸಭೆ ಅಂಗೀಕರಿಸಿದ ಕಾನೂನುಗಳ ಪ್ರಕಾರ ಕಾರ್ಯನಿರ್ವಹಿಸುತ್ತವೆ ಎಂದು ಅವರು ಹೇಳಿದರು. ಸಮಾಲೋಚನೆಯಿಲ್ಲದೆ ಕೇಂದ್ರೀಯ ನಿಬಂಧನೆಗಳನ್ನು ಹೇರುವ ಯಾವುದೇ ಕ್ರಮವು ಭಾರತದ ಫೆಡರಲ್ ರಚನೆಯನ್ನು ದುರ್ಬಲಗೊಳಿಸುತ್ತದೆ ಎಂದು ವಿಜಯನ್ ಹೇಳಿದ್ದಾರೆ.

ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಕೇರಳದಂತಹ ವಿರೋಧ ಪಕ್ಷದ ಆಡಳಿತದ ರಾಜ್ಯಗಳಿಗೆ ಹೊಸ ನಿಯಮಗಳು ಪ್ರಮುಖ ಪರಿಣಾಮಗಳನ್ನು ಬೀರಬಹುದು. ಹಿಂದೆ, ಈ ರಾಜ್ಯಗಳಲ್ಲಿನ ಸರ್ಕಾರಗಳು ರಾಜ್ಯ ವಿಶ್ವವಿದ್ಯಾಲಯಗಳ ಕುಲಪತಿಗಳಾದ ಗವರ್ನರ್‌ಗಳೊಂದಿಗೆ ಶೈಕ್ಷಣಿಕ ನೇಮಕಾತಿಗಳ ವಿಚಾರದಲ್ಲಿ ಅನೇಕ ಬಾರಿ ಜಗಳವಾಡಿದ್ದವು.

ಜನವರಿ 9 ರಂದು ತಮಿಳುನಾಡು ವಿಧಾನಸಭೆಯು ನಿಯಮಗಳ ವಿರುದ್ಧ ಇದೇ ರೀತಿಯ ನಿರ್ಣಯವನ್ನು ಅಂಗೀಕರಿಸಿತು.

ನಿರ್ಣಯವನ್ನು ಓದಿದ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಕರಡು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಶಿಕ್ಷಕರು ಮತ್ತು ಶೈಕ್ಷಣಿಕ ಸಿಬ್ಬಂದಿಗಳ ನೇಮಕಾತಿ ಮತ್ತು ಬಡ್ತಿಗಾಗಿ ಕನಿಷ್ಠ ಅರ್ಹತೆಗಳು ಮತ್ತು ಉನ್ನತ ಶಿಕ್ಷಣದಲ್ಲಿ ಗುಣಮಟ್ಟವನ್ನು ಕಾಪಾಡಿಕೊಳ್ಳುವ ಕ್ರಮಗಳು) ನಿಯಮಗಳು, 2025 ರ ನಿಯಮಾವಳಿಗಳು ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಗೆ ಮತ್ತು ಒಕ್ಕೂಟ ವ್ಯವಸ್ಥೆಗೆ ಹಾನಿಕಾರಕ ಎಂದು ವಿವರಿಸಿದರು.

“ಇದು ತಮಿಳುನಾಡಿನ ಯುವಕರ ಭವಿಷ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ” ಎಂದು ಸ್ಟಾಲಿನ್ ಹೇಳಿದ್ದರು, ಉದ್ದೇಶಿತ ನಿಯಮಗಳನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರವನ್ನು ಒತ್ತಾಯಿಸಿದ್ದರು.

ಸೋಮವಾರ ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸ್ಟಾಲಿನ್ ಪತ್ರ ಬರೆದಿದ್ದು, ತಮಿಳುನಾಡಿನ ಮಾದರಿಯಲ್ಲಿ ನಿಯಮಗಳ ವಿರುದ್ಧ ನಿರ್ಣಯಗಳನ್ನು ಅಂಗೀಕರಿಸುವಂತೆ ಒತ್ತಾಯಿಸಿದ್ದಾರೆ.

ಕೇರಳ ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಿದ ನಂತರ, ರಾಜ್ಯದ ಉನ್ನತ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸಚಿವ ಆರ್ ಬಿಂದು “ನಾವು ಸಮಾನ ಮನಸ್ಕ ರಾಜ್ಯ ಸರ್ಕಾರಗಳ ಜಂಟಿ ವೇದಿಕೆಗಳನ್ನು ರಚಿಸಲು ನಿರ್ಧರಿಸಿದ್ದೇವೆ, ಏಕೆಂದರೆ ನಾವು ಇದನ್ನು ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯ ಸರ್ಕಾರಗಳ ಹಕ್ಕುಗಳ ಮೇಲಿನ ಹಲ್ಲೆ ಎಂದು ಪರಿಗಣಿಸುತ್ತೇವೆ,” ಎಂದು ಹೇಳಿದರು.

ಹಾಗಿದ್ದೂ, ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು ನಿಯಮಗಳನ್ನು ಸಮರ್ಥಿಸಿಕೊಂಡಿದೆ ಮತ್ತು ಪರಿಷ್ಕೃತ ಪ್ರಕ್ರಿಯೆಯು “ಅಸ್ಪಷ್ಟತೆಯನ್ನು ನಿವಾರಿಸುತ್ತದೆ ಮತ್ತು ಪಾರದರ್ಶಕತೆಯನ್ನು ಖಾತ್ರಿಗೊಳಿಸುತ್ತದೆ” ಎಂದು ಹೇಳಿದೆ.

ಜನವರಿ 10 ರಂದು, ಆಯೋಗದ ಅಧ್ಯಕ್ಷ ಎಂ ಜಗದೀಶ್ ಹೊಸ ನಿಯಮಗಳು ಉಪಕುಲಪತಿ-ಶೋಧನೆ- ಮತ್ತು-ಆಯ್ಕೆ ಸಮಿತಿಯ ಸಂಯೋಜನೆಯನ್ನು ನಿರ್ದಿಷ್ಟಪಡಿಸುವ ಮೂಲಕ “ಹೆಚ್ಚು-ಅಗತ್ಯವಿರುವ ಸ್ಪಷ್ಟತೆಯನ್ನು” ತರುತ್ತವೆ ಎಂದು ಹೇಳಿದರು.

ಸಮಿತಿಯು ಮೂವರು ಸದಸ್ಯರನ್ನು ಹೊಂದಿರುತ್ತದೆ – ಒಬ್ಬರನ್ನು ಕುಲಪತಿಗಳು, ಇನ್ನೊಬ್ಬರನ್ನು ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಅಧ್ಯಕ್ಷರು ಮತ್ತು ಮೂರನೆಯವರು ವಿಶ್ವವಿದ್ಯಾಲಯದ ಕಾರ್ಯಕಾರಿ ಮಂಡಳಿ ಅಥವಾ ಸೆನೆಟ್‌ನಿಂದ ಆಯ್ಕೆ ಮಾಡುತ್ತಾರೆ ಎಂದು ಜಗದೀಶ್ ಹೇಳಿದರು.

2023 ರಲ್ಲಿ, ಕೇರಳ ಸರ್ಕಾರವು ರಾಜ್ಯ ವಿಶ್ವವಿದ್ಯಾನಿಲಯಗಳ ಕುಲಪತಿಯಾಗಿ ರಾಜ್ಯಪಾಲರನ್ನು ತೆಗೆದುಹಾಕಲು ಪ್ರಯತ್ನಿಸಿತು, ಅದಕ್ಕಾಗಿ ಮಸೂದೆಯನ್ನು ವಿಧಾನಸಭೆ ಅಂಗೀಕರಿಸಿತು.

ಸರ್ಕಾರ ಮತ್ತು ಮಾಜಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ನಡುವಿನ ಘರ್ಷಣೆಯ ನಡುವೆ ಇದನ್ನು ಮಾಡಲಾಗಿದೆ. ಖಾನ್ ಈ ವಿಚಾರವನ್ನು ರಾಷ್ಟ್ರಪತಿಗಳ ಮುಂದೆ ಇಟ್ಟಿದ್ದರು, ಆದರೆ ಅವರು ಇನ್ನೂ ಇನ್ನೂ ಒಪ್ಪಿಗೆಯನ್ನು ನೀಡಿಲ್ಲ.

ಮೇ 2024 ರಲ್ಲಿ, ಕೇರಳ ಹೈಕೋರ್ಟ್ ಖಾನ್ ಅವರು ಕೇರಳ ವಿಶ್ವವಿದ್ಯಾನಿಲಯದ ಸೆನೆಟ್‌ಗೆ ಮಾಡಿದ ನಾಲ್ಕು ನಾಮನಿರ್ದೇಶನಗಳನ್ನು ರದ್ದುಗೊಳಿಸಿತು ಮತ್ತು ಕುಲಪತಿಯಾಗಿ ಅವರ ಪಾತ್ರವು ಅವರಿಗೆ “ಹೆಚ್ಚಿನ ಅಧಿಕಾರವನ್ನು” ಅನುಮತಿಸುವುದಿಲ್ಲ ಎಂದು ಹೇಳಿತು.

ರಾಜ್ಯಪಾಲರಿಂದ ಕನ್ನಡ ಕಡ್ಡಾಯ ತಿರಸ್ಕಾರ
ಬೆಂಗಳೂರು: ರಾಜ್ಯದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳಲ್ಲಿ ಕನ್ನಡ ಬಳಕೆಯ ಮಾಡುವಂತೆ ಕರ್ನಾಟಕ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಕರ್ನಾಟಕ ರಾಜ್ಯಪಾಲ ತಾವರ್‌ಚಂದ್‌ ಗೆಹ್ಲೋಟ್ ತಿರಸ್ಕರಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜನವರಿ 30 ಮಂಗಳವಾರ ತಿಳಿಸಿದ್ದಾರೆ.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆಗೆ (Kannada Language Comprehensive Development Act) ತಿದ್ದುಪಡಿ ತರಲು ಮತ್ತು ನಾಮ ಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸಲು ಹೊರಡಿಸಲಾದ ಸುಗ್ರೀವಾಜ್ಞೆಗೆ ರಾಜ್ಯ ಸಚಿವ ಸಂಪುಟ ಜನವರಿ 5ರಂದು ಅನುಮೋದನೆ ನೀಡಿತ್ತು.

“ನಾವು ಕಾನೂನನ್ನು ರಚಿಸಿದ್ದೇವೆ ಮತ್ತು ಸುಗ್ರೀವಾಜ್ಞೆಯನ್ನು ಅನುಮೋದಿಸಿದ್ದೇವೆ. ರಾಜ್ಯಪಾಲರು ಒಪ್ಪಿಗೆ ನೀಡಬಹುದಿತ್ತು. ಬದಲಿಗೆ ವಿಧಾನಸಭೆಯಲ್ಲಿ ಅಂಗೀಕಾರ ಆಗಬೇಕು ಎಂದು ವಾಪಸ್ ಕಳುಹಿಸಿದ್ದಾರೆ,” ಎಂದು ಡಿಕೆಶಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಅಂಗಡಿ- ಉದ್ಯಮಗಳನ್ನು ಗುರಿಯಾಗಿಸಿ ಕನ್ನಡ ಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆಗೆ ಅನುಮೋದನೆ ನೀಡಿತ್ತು.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮತ್ತು ರಾಜಭವನದ ನಡುವಿನ ಮೊದಲ ಭಿನ್ನಾಭಿಪ್ರಾಯ ಈಗ ಬಹಿರಂಗವಾಗಿದೆ.

ಮುಂದಿನ ತಿಂಗಳು ಪ್ರಾರಂಭವಾಗಲಿರುವ ಬಜೆಟ್ ಅಧಿವೇಶನಕ್ಕೆ ಮುನ್ನವೇ ರಾಜ್ಯಪಾಲರು ಸುಗ್ರೀವಾಜ್ಞೆಯನ್ನು ತಿರಸ್ಕರಿಸಿದ್ದು ಬಿಜೆಪಿಯೇತರ ರಾಜ್ಯಗಳಲ್ಲಿ ರಾಜ್ಯಪಾಲರ ಅಸಹಕಾರದ ಪ್ರಕರಣಗಳಲ್ಲಿ ಒಂದಾಗಲಿದೆ. ಗೆಹ್ಲೋಟ್ ಫೆಬ್ರವರಿ 12 ರಂದು ಶಾಸಕಾಂಗದ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಶಿವಕುಮಾರ್ ಘೋಷಣೆಗೂ ಮುನ್ನ ಸಿದ್ದರಾಮಯ್ಯ ಅವರು ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದರು. ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆದ ವಿಧಾನಸಭೆಯ ಅಧಿವೇಶನದಲ್ಲಿ ಅಂಗೀಕರಿಸಿದ ಮಸೂದೆಗಳನ್ನು ತೆರವುಗೊಳಿಸುವಂತೆ ಮುಖ್ಯಮಂತ್ರಿ ಒತ್ತಾಯಿಸಿದ ನಂತರ ಗೆಹ್ಲೋಟ್ ಮೂರು ಮಸೂದೆಗಳಿಗೆ ಸಹಿ ಹಾಕಿದರು.

ಕ್ಲಿಯರ್ ಮಾಡಿದ ಬಿಲ್‌ಗಳಲ್ಲಿ ಒಂದು ವೈದ್ಯಕೀಯ ಪದವೀಧರರಿಗೆ ಕಡ್ಡಾಯ ಗ್ರಾಮೀಣ ಸೇವೆಯನ್ನು ತೆಗೆದುಹಾಕುವುದೂ ಸೇರಿದೆ. ಆದರೆ ಬೆಳಗಾವಿ ಅಧಿವೇಶನದಲ್ಲಿ ಅಂಗೀಕರಿಸಲಾದ 17 ವಿಧೇಯಕಗಳ ಪೈಕಿ ರಾಜ್ಯಪಾಲರು ಕೇವಲ ಐದಕ್ಕೆ ಮಾತ್ರ ಒಪ್ಪಿಗೆ ನೀಡಿದ್ದಾರೆ.

ಅಲ್ಲದೇ, ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP) ರದ್ದುಗೊಳಿಸುವ ನಿರ್ಧಾರವು ರಾಜ್ಯ ಮತ್ತು ರಾಜಭವನದ ನಡುವಿನ ಸಂಬಂಧವನ್ನು ಮತ್ತಷ್ಟು ಹದಗೆಡಿಸುವ ಸಾಧ್ಯತೆ ಇದೆ. ಇತ್ತೀಚೆಗೆ People’s Forum for Karnataka Education ರಾಜ್ಯದಲ್ಲಿ ಎನ್‌ಇಪಿಯ ಮುಂದುವರಿಕೆಯನ್ನು ಖಚಿತಪಡಿಸಿಕೊಳ್ಳಲು ಮಧ್ಯಪ್ರವೇಶಿಸುವಂತೆ ಕೋರಿ 10 ಲಕ್ಷ ಸಹಿ ಸಂಗ್ರಹಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿತ್ತು.

ಬಿಜೆಪಿಯೇತರ ರಾಜ್ಯಗಳಲ್ಲಿ ‘ಸೂಪರ್ ಸಿಎಂ’ ಆಗ ಹೊರಟ ರಾಜ್ಯಪಾಲರುಗಳಿವರು!
ತಮಿಳುನಾಡಿನ ಡಿಎಂಕೆ ಸಂಸದೀಯ ಪಕ್ಷದ ನಾಯಕ ಟಿ ಆರ್ ಬಾಲು ಅವರು ತಮಿಳುನಾಡು ರಾಜ್ಯಪಾಲರಾದ ಆರ್.ಎನ್. ರವಿ ಅವರನ್ನು ತಕ್ಷಣವೇ ಹಿಂಪಡೆಯಬೇಕು ಅಥವಾ ಪದಚ್ಯುತಗೊಳಿಸಬೇಕು ಎಂಬುದಾಗಿ ಒತ್ತಾಯಿಸುವಂತೆ ತಮ್ಮ ಮಿತ್ರ ಪಕ್ಷಗಳಿಗೆ ಮನವಿ ಮಾಡಿದ್ದಾರೆ. ಭಾರತದ ರಾಷ್ಟ್ರಪತಿಗಳಿಗೆ ಸಹಿ ಜ್ಞಾಪಕ ಪತ್ರಕ್ಕೆ ಸಹಿ ಹಾಕುವಂತೆ ಟಿ.ಆರ್.ಬಾಲು ಸಮಾನ ಮನಸ್ಕ ಪಕ್ಷಗಳ ಸದಸ್ಯರು ಮತ್ತು ಸಮಾನ ಮನಸ್ಕ ಸಂಸದರಿಗೆ ಪತ್ರ ಬರೆದಿದ್ದಾರೆ.

ತಮಿಳುನಾಡಿನ ಎಲ್ಲಾ ರಾಜಕೀಯ ಪಕ್ಷಗಳಿಗೆ ಪತ್ರ ಬರೆದಿರುವ ಡಿಎಂಕೆ ಪಕ್ಷದ ಸಂಸದೀಯ ನಾಯಕ ಟಿ.ಆರ್.ಬಾಲು ಅವರು ಗುರುವಾರದೊಳಗೆ ಈ ಜ್ಞಾಪಕ ಪತ್ರಕ್ಕೆ ಸಹಿ ಹಾಕುವಂತೆ ಮನವಿ ಮಾಡಿದ್ದಾರೆ. ಜ್ಞಾಪಕ ಪತ್ರಕ್ಕೆ ಸಹಿ ಹಾಕಲು ಕಾಂಗ್ರೆಸ್ ಒಪ್ಪಿಗೆ ಸೂಚಿಸಿದೆ ಎಂದು ತಿಳಿದು ಬಂದಿದೆ. ಆ ಮೂಲಕ ತಮಿಳುನಾಡು ಸರ್ಕಾರ ಮತ್ತು ಗವರ್ನರ್ ನಡುವಿನ ಮಸುಕಿನ ಗುದ್ದಾಟ ಈಗ ಅಧಿಕೃತವಾಗಿ ಹೊರಬಿದ್ದಿದೆ.

ರಾಜ್ಯಪಾಲರ ಪದಚ್ಯುತಿಗೆ ಡಿಎಂಕೆ ಪಟ್ಟು ಹಿಡಿದದ್ಯಾಕೆ?
PUC ಪರೀಕ್ಷಾ ಫಲಿತಾಂಶಗಳ ನಂತರವೇ ವೈದ್ಯಕೀಯ ಕೋರ್ಸ್‌ಗಳಿಗೆ ವಿದ್ಯಾರ್ಥಿಗಳ ಪ್ರವೇಶವನ್ನು ಕೈಗೊಳ್ಳುವಂತೆ ತಮಿಳುನಾಡು ಸರ್ಕಾರ ಹೊರಡಿಸಿದ ಮಸೂದೆಯಲ್ಲಿ ಪ್ರಸ್ತಾಪಿಸಲಾಗಿತ್ತು. ಈ ಪ್ರಸ್ತಾವನೆ ತಮಿಳುನಾಡು ವಿಧಾನ ಮಂಡಲದಲ್ಲೂ ಅಂಗೀಕರಿಸಿ ಅದು ರಾಜ್ಯಪಾಲರ ಕೈ ಸೇರಿತ್ತು ಎಂಬುದು ಪ್ರಮುಖ ಅಂಶ. ಆದರೆ ಈ ಪ್ರಸ್ತಾಪವನ್ನು ಮರು ಪರಿಶೀಲಿಸುವಂತೆ ರಾಜ್ಯಪಾಲ ಆರ್.ಎನ್.ರವಿಯವರು ಫೆಬ್ರವರಿ ತಿಂಗಳಿನಲ್ಲಿ ಅಸೆಂಬ್ಲಿಗೆ ಹಿಂದಿರುಗಿಸಿದ್ದಾರೆ. PUC ನಂತರದ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ NEET ಪರೀಕ್ಷೆಗೆ ತಮಿಳುನಾಡು ವಿದ್ಯಾರ್ಥಿಗಳಿಗೆ ವಿನಾಯಿತಿ ನೀಡುವ ಪ್ರಸ್ತಾವನೆಯನ್ನು ಅಂಗೀಕರಿಸಿದ ಮಸೂದೆಯನ್ನು ರಾಜ್ಯಪಾಲರು ಪರೋಕ್ಷವಾಗಿ ತಿರಸ್ಕರಿಸಿದ್ದು, ಇದು ಡಿಎಂಕೆ ಮತ್ತು ಮಿತ್ರಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.

ಅಷ್ಟಕ್ಕೂ ತಮಿಳುನಾಡು ಸರ್ಕಾರ ಈ ಪ್ರಸ್ತಾವನೆ ಮುಂದಿಟ್ಟ ಹಿನ್ನೆಲೆಯನ್ನು ನೋಡುವುದಾದರೆ, NEET ನ ಪ್ರಶ್ನೆ ಪತ್ರಿಕೆಯು CBSE ಪಠ್ಯಕ್ರಮವನ್ನು ಆಧರಿಸಿದ್ದು, ಇದು ತಮಿಳುನಾಡು ರಾಜ್ಯ ಮಂಡಳಿಯ ಶೈಕ್ಷಣಿಕ ಪಠ್ಯಕ್ರಮಕ್ಕಿಂತ ಬಹುತೇಕ ಭಿನ್ನವಾಗಿದೆ. ಹಾಗಾಗಿ NEET ಪರೀಕ್ಷೆಯು ರಾಜ್ಯ ಮಂಡಳಿಯ ವಿದ್ಯಾರ್ಥಿಗಳ ಭವಿಷ್ಯಕ್ಕೆ ಹಾನಿ ಮಾಡುತ್ತದೆ ಎಂಬ ಕಾರಣಕ್ಕಾಗಿ ತಮಿಳುನಾಡು ಸರ್ಕಾರ ಈ ಪರೀಕ್ಷೆಯನ್ನು ವಿರೋಧಿಸಿ ಹೊಸ ಪ್ರಸ್ತಾವನೆ ಮುಂದಿಟ್ಟಿತ್ತು.

ತಮಿಳುನಾಡು ರಾಜ್ಯಪಾಲರ ಪದಚ್ಯುತಿ ಮನವಿಯನ್ನು ಮುಂದಿಟ್ಟುಕೊಂಡು ದಕ್ಷಿಣದ ಇತರೆ ರಾಜ್ಯಗಳ ರಾಜ್ಯಪಾಲ ಮತ್ತು ಸರ್ಕಾರಗಳ ಮಸುಕಿನ ಗುದ್ದಾಟವನ್ನು ಸೂಕ್ಷ್ಮವಾಗಿ ಅವಲೋಕಿಸಬೇಕಿದೆ. ಇಲ್ಲಿ ಕೇಂದ್ರ ಸರ್ಕಾರ ಪರೋಕ್ಷವಾಗಿ ರಾಜ್ಯಪಾಲರನ್ನು ಮುಂದಿಟ್ಟು ಬಿಜೆಪಿಯೇತರ ಸರ್ಕಾರವನ್ನು ಹಿಡಿತದಲ್ಲಿ ಇಟ್ಟುಕೊಳ್ಳುವ ಕೆಲಸ ಮಾಡುತ್ತಿದೆಯೇ ಎಂಬ ಅನುಮಾನ ವ್ಯಕ್ತವಾಗುತ್ತದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಕರ್ನಾಟಕ ಹೊರತುಪಡಿಸಿ ತಮಿಳುನಾಡು, ಕೇರಳ, ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳಲ್ಲಿ ಸರ್ಕಾರ ಮತ್ತು ರಾಜ್ಯಪಾಲರ ಸಂಘರ್ಷ ಈ ಎಲ್ಲಾ ಅನುಮಾನಗಳಿಗೆ ಸಾಕ್ಷಿ ಒದಗಿಸುತ್ತಿವೆ.

ಕೇರಳದ 9 ವಿವಿ ಗಳ ಉಪಕುಲಪತಿಗಳ ರಾಜೀನಾಮೆಗೆ ಗವರ್ನರ್ ಪಟ್ಟು
ಇತ್ತೀಚೆಗೆ ಸುಪ್ರೀಂ ಕೋರ್ಟ್, ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿ ನೇಮಕವನ್ನು ಯುಜಿಸಿ ನಿಯಮಗಳಿಗೆ ವಿರುದ್ಧವಾಗಿದೆ ಎಂದು ರದ್ದುಗೊಳಿಸಿತ್ತು. ಇದರ ಬೆನ್ನಲ್ಲೇ ಕೇರಳ ರಾಜ್ಯಪಾಲ ಆರೀಫ್ ಖಾನ್ 9 ವಿವಿಗಳ ಉಪಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ. ಈ ಪೈಕಿ ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿವಿಯ ಉಪಕುಲಪತಿಗಳೂ ಇದ್ದರು. ವಿವಿಗಳ ಕುಲಪತಿಗಳೂ ಆಗಿರುವ ರಾಜ್ಯಪಾಲರು ಕಳೆದ ಅಕ್ಟೋಬರ್ 24 ರ ಒಳಗೆ ರಾಜೀನಾಮೆಗೆ ಪಟ್ಟು ಹಿಡಿದಿದ್ದರು. ಇದು ಕೇರಳದ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷದ ಕೆಂಗಣ್ಣಿಗೆ ಗುರಿಯಾಗಿತ್ತು. ರಾಜ್ಯಪಾಲರ ನಡೆ ಸಂಘಪರಿವಾರದ ಪಿತೂರಿಯಾಗಿದ್ದು, ದೇಶದ ಶಿಕ್ಷಣ ವ್ಯವಸ್ಥೆಯನ್ನು ಕೇಸರೀಕರಣಗೊಳಿಸುವ ಅಜೆಂಡಾ ಆಗಿದೆ ಎಂದು ಕಮ್ಯುನಿಸ್ಟ್ ಪಕ್ಷ ಟೀಕಿಸಿತ್ತು.

ಹಾಗೆಯೇ ಕಳೆದ ಅಕ್ಟೋಬರ್ 25 ರಂದು ಕೇರಳ ಸರ್ಕಾರದ ಹಣಕಾಸು ಸಚಿವರನ್ನು ಅವರ ಸ್ಥಾನದಿಂದ ವಜಾಗೊಳಿಸಬೇಕು ಎಂದು ರಾಜ್ಯಪಾಲ ಆರೀಫ್ ಖಾನ್ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ಪ್ರಾದೇಶಿಕತೆ ಮತ್ತು ಪ್ರಾಂಥೀಯತೆ ಹಿನ್ನೆಲೆಯಲ್ಲಿ ಉತ್ತರ ಭಾರತದ ವಿದ್ಯಾರ್ಥಿಗಳಿಗೆ ಇಲ್ಲಿನ ನೆಲದ ಬಗ್ಗೆ ಹೊಂದಿಕೊಳ್ಳಲು ಕಷ್ಟ ಆಗಬಹುದು ಎಂದಿದ್ದು ಆರೀಫ್ ಖಾನ್ ಅವರ ‘ವಜಾ’ ಪತ್ರಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಸಂಬಂಧ ರಾಜ್ಯಪಾಲರ ಮನವಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿರಸ್ಕರಿಸಿದ್ದರು.

ತೆಲಂಗಾಣದಲ್ಲೂ ಇದೆ ರಾಜ್ಯಪಾಲ ಮತ್ತು ಸರ್ಕಾರದ ಮಸುಕಿನ ಗುದ್ದಾಟ
ಈ ಹಿಂದೆ ತಮಿಳುನಾಡಿನ ಬಿಜೆಪಿ ಪಕ್ಷದ ಪ್ರಮುಖ ಮುಖಂಡರಾಗಿದ್ದ ತೆಲಂಗಾಣ ರಾಜ್ಯಪಾಲೆ ತಮಿಳ್ ಸಾಯಿ ಸೌಂದರರಾಜನ್ ಮತ್ತು ತೆಲಂಗಾಣ ಸರ್ಕಾರದ ಮಸುಕಿನ ಗುದ್ದಾಟ ಸಹ ಅಷ್ಟು ಗುಟ್ಟಾಗೇನು ಉಳಿದಿಲ್ಲ. ಇತ್ತೀಚೆಗೆ ಮಾಧ್ಯಮಗಳಿಗೆ ನೀಡಿದ ಸಂದರ್ಶನವೊಂದರಲ್ಲಿ ತೆಲಂಗಾಣ ಸರ್ಕಾರದ ಮೇಲಿರುವ ತಮ್ಮ ಅಸಮಾಧಾನವನ್ನು ರಾಜ್ಯಪಾಲೆ ತಮಿಳ್ ಸಾಯಿ ಸೌಂದರರಾಜನ್ ಹೊರಹಾಕಿದ್ದು ತೀರಾ ಹಳೆಯ ವಿಷಯವಲ್ಲ. ಇದೇ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ಆಡಳಿತಾರೂಢ ಟಿಆರ್ಎಸ್ ಪಕ್ಷ ತಮ್ಮನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದರು. ಜೊತೆಗೆ ತಾನು ಭಾಗವಹಿಸುವ ಕಾರ್ಯಕ್ರಮಗಳಿಗೆ ಜಿಲ್ಲಾಧಿಕಾರಿ ಸೇರಿದಂತೆ ಪ್ರಮುಖ ಅಧಿಕಾರಿಗಳು ಬರದಂತೆ ಆಡಳಿತ ಪಕ್ಷ ತಡೆಯುತ್ತಿದೆ, ತನಗೆ ಸೂಕ್ತ ಭದ್ರತೆ ವ್ಯವಸ್ಥೆ ಕೂಡ ಸರ್ಕಾರ ಮಾಡಿಲ್ಲ ಎಂದು ತಮಿಳ್ ಸಾಯಿ ಸೌಂದರರಾಜನ್ ಆರೋಪಿಸಿದ್ದಾರೆ. ಜೊತೆಗೆ ರಾಜ್ಯಪಾಲರು ಇಲ್ಲಿಯವರೆಗೆ ಕರೆದ ಎರಡ್ಮೂರು ಔತಣಕೂಟಕ್ಕೂ ಸರ್ಕಾರದ ಪ್ರತಿನಿಧಿಗಳು ಗೈರು ಹಾಜರಾಗಿದ್ದು, ಇಲ್ಲೂ ಸಹ ಸರ್ಕಾರ ಮತ್ತು ರಾಜ್ಯಪಾಲರ ಸಂಬಂಧ ಸರಿ ಇಲ್ಲವಾಗಿದೆ.

ಇದಕ್ಕೆ ಟಿಆರ್ಎಸ್ ಪಕ್ಷ ಕೊಡುವ ಸಮಜಾಯಿಷಿ ಎಂದರೆ, ರಾಜ್ಯಪಾಲರು ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಯಾವುದೇ ಕೆಲಸಕ್ಕೆ ತೊಡಕುಂಟು ಮಾಡುತ್ತಿದ್ದಾರೆ. ವಿಧಾನಸಭೆಯಲ್ಲಿ ಸರ್ವಪಕ್ಷಗಳು ಅಂಗೀಕರಿಸಿದ ವಿಧೇಯಕಗಳನ್ನೂ ಮರುಪರಿಶೀಲನೆಗೆ ಒಡ್ಡಲಾಗುತ್ತಿದೆ. ರಾಜ್ಯಪಾಲರು ತಮ್ಮ ಹುದ್ದೆ ನಿರ್ವಹಿಸದೇ ಕೇಂದ್ರ ಬಿಜೆಪಿ ಸರ್ಕಾರದ ಪ್ರತಿನಿಧಿಯಂತೆ, RSS ಪ್ರತಿನಿಧಿಯಂತೆ ವರ್ತಿಸುವುದು ಆಡಳಿತಕ್ಕೆ ಸಮಸ್ಯೆ ಎದುರಾಗುತ್ತದೆ’ ಎಂಬ ರೀತಿಯಲ್ಲಿ ಸಮರ್ಥಿಸಿದ್ದಾರೆ.

ಈ ಎಲ್ಲಾ ಬೆಳವಣಿಗೆ ಗಮನಿಸಿದರೆ ಕೇಂದ್ರ ಬಿಜೆಪಿ ಸರ್ಕಾರ ಬೇಕಂತಲೇ ರಾಜ್ಯಪಾಲರ ಮೂಲಕ ತನ್ನ ಹಿಡನ್ ಅಜೆಂಡಾವನ್ನು ರಾಜ್ಯ ಸರ್ಕಾರಗಳ ಮೇಲೆ ಹೇರಲು ಎಲ್ಲಾ ತಂತ್ರಗಳನ್ನ ರೂಪಿಸುತ್ತಿದೆ ಎನ್ನಲಾಗುತ್ತಿದೆ. ವಿಶೇಷವಾಗಿ ಶಿಕ್ಷಣ ಕ್ಷೇತ್ರದಲ್ಲಿನ ಬದಲಾವಣೆ, ಗ್ರಾಮೀಣ ವಿದ್ಯಾರ್ಥಿಗಳಿಗೆ ಅನಾನುಕೂಲ ಆಗುವ ಮಟ್ಟಿಗೆ, ಪಟ್ಟಣ ಪ್ರದೇಶದ ಮಕ್ಕಳಿಗೆ ಅನುವು ಮಾಡಿ ಕೊಡುವಂತಹ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಾಜ್ಯಪಾಲರ ಕಡೆಯಿಂದ ರಾಜ್ಯದ ಆಡಳಿತದಲ್ಲಿ ಮೂಗು ತೂರಿಸುತ್ತಿರುವುದು ಸ್ಪಷ್ಟ.

ತಮಿಳುನಾಡು ಮತ್ತು ಕೇರಳದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎರಡೂ ರಾಜ್ಯಗಳ ರಾಜ್ಯಪಾಲರು ಅನವಶ್ಯಕವಾಗಿ ಸರ್ಕಾರಗಳ ನಿರ್ಧಾರವನ್ನು ಮರುಪರಿಶೀಲನೆಗೆ ಬಿಟ್ಟಿರುವುದು ಸಹಜವಾಗಿಯೇ ರಾಜ್ಯಪಾಲರು ತಮ್ಮ ಸೀಮಿತ ರೇಖೆಯನ್ನು ದಾಟುತ್ತಿರಬಹುದೇ ಎಂಬ ಅನುಮಾನ ವ್ಯಕ್ತವಾಗಿದೆ. ವಿಶೇಷವಾಗಿ ಬಿಜೆಪಿ ಅಧಿಕಾರದಲ್ಲಿ ಇಲ್ಲದ ರಾಜ್ಯಗಳನ್ನೇ ಗುರಿಯಾಗಿಸಿಕೊಂಡು ರಾಜ್ಯಪಾಲರು ತಮ್ಮ ತಕರಾರುಗಳನ್ನು ಮುಂದಿಡುತ್ತಿದ್ದಾರೆ. ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ ದೇಶದ ಪ್ರಮುಖ ದಕ್ಷಿಣ ಭಾರತದ ರಾಜ್ಯಗಳಾಗಿದ್ದು, ಇಲ್ಲಿ ಬಿಜೆಪಿ ಎಲ್ಲಾ ರೀತಿಗಳಲ್ಲೂ ಅಧಿಕಾರದಲ್ಲಿ ಮೂಗು ತೂರಿಸುವ ಕೆಲಸ ಮಾಡುತ್ತಿದೆ.

ಕೇವಲ ಕರ್ನಾಟಕ ಒಂದು ರಾಜ್ಯವನ್ನು ಉದಾಹರಣೆಗೆ ತಗೆದುಕೊಂಡು ಹೇಳುವುದಾದರೆ, ಕಳೆದ ಎರಡು ವರ್ಷಗಳಿಂದ ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿ ಬಿಜೆಪಿ ತಂದ ನಿರ್ಧಾರಗಳು ಮತ್ತು ನಿಲುವುಗಳು ಸ್ಪಷ್ಟವಾಗಿ ಸಂಘ ಪರಿವಾರದ ಅಜೆಂಡಾವನ್ನು ಹೇರಲಾಗುತ್ತಿದೆ. ಕಳೆದ ಒಂದು ವರ್ಷದ ಅವಧಿಯಲ್ಲಿ ರಾಜ್ಯ ಸರ್ಕಾರ ಪಠ್ಯ ಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ತಂದ ಅದ್ವಾನ ಮತ್ತು ಅದರಿಂದ ಸರ್ಕಾರಿ ಶಾಲೆಗಳ ಮಕ್ಕಳಿಗಾದ ದ್ವಂದ್ವಗಳು ಇನ್ನೂ ಮುಗಿದಿಲ್ಲ.

ತಮಿಳುನಾಡಿನ ರಾಜ್ಯಪಾಲರು ಸಹ ಇತ್ತೀಚೆಗೆ ಸ್ಪಷ್ಟವಾಗಿ ಬಿಜೆಪಿ ವಕ್ತಾರರಂತೆ ವರ್ತಿಸಿದ್ದೂ ಸಹ ಡಿಎಂಕೆ ರಾಜ್ಯಪಾಲರನ್ನು ಗುರಿಯಾಗಿಸಿದ್ದಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಕಳೆದ ಜೂನ್‌ ತಿಂಗಳಲ್ಲಿ, “ಸನಾತನ ಧರ್ಮ ವಿವಿಧತೆಯಲ್ಲಿ ಏಕತೆಯನ್ನು ಎತ್ತಿಹಿಡಿಯುತ್ತದೆ” ಎಂದು ಹೇಳಿಕೆ ನೀಡುವ ಮೂಲಕ ರಾಜ್ಯಪಾಲ ರವಿ ಅವರು ತಮ್ಮ ಸಂವಿಧಾನಿಕ ಮಿತಿಯನ್ನು ಮೀರುತ್ತಿದ್ದಾರೆ ಎಂದು ಡಿಎಂಕೆ ಆರೋಪಿಸಿತ್ತು. ನಂತರ ಆಗಸ್ಟ್‌ನಲ್ಲಿ, ಹಿಂಸಾಚಾರದ ಬಗ್ಗೆ ಶೂನ್ಯ ಸಹಿಷ್ಣುತೆ ಇರಬೇಕು ಮತ್ತು ಬಂದೂಕು ಬಳಸುವವ ವಿರುದ್ಧ ಬಂದೂಕಿನಿಂದಲೆ ವ್ಯವಹರಿಸಬೇಕು ಎಂದು ಅವರು ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದರು. ಸಧ್ಯ ಈ ಎಲ್ಲಾ ಬೆಳವಣಿಗೆ ಹಿಂದೆ ಬಿಜೆಪಿ ತಾನು ಅಧಿಕಾರದಲ್ಲಿ ಇಲ್ಲದ ಕಡೆಗಳಲ್ಲಿ ರಾಜ್ಯಪಾಲರ ಮೂಲಕ ತನ್ನ ಕೆಲಸ ಮಾಡುತ್ತಿದೆ ಎಂಬುದು ಸ್ಪಷ್ಟವಾಗಿದೆ.

ಅಡಿಕೆ ಆಮದು ವಿವಾದ: ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಎಎಪಿ ಆಗ್ರಹ
ಬೆಂಗಳೂರು: ಭೂತಾನ್‌ನಿಂದ ಅಡಿಕೆ ಆಮದು ಮಾಡಿಕೊಳ್ಳುವ ವಿಚಾರದಲ್ಲಿ ಮಧ್ಯಪ್ರವೇಶಿಸಿ ಅಡಿಕೆ ಬೆಳೆಗಾರರಿಗೆ ನೆರವಾಗಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದ ನಿಯೋಗವು ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಪೃಥ್ವಿ ರೆಡ್ಡಿ ಅವರು, ಭಾರತಕ್ಕೆ 15,000 ಕ್ವಿಂಟಾಲ್‌ ಅಡಿಕೆಯನ್ನು ಆಮದು ಮಾಡಿಕೊಳ್ಳುವ ನಿರ್ಧಾರವು ಕರ್ನಾಟಕದ ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಹಾಸನ ಜಿಲ್ಲೆಗಳ ಅಡಿಕೆ ಬೆಳಗಾರರನ್ನು ಚಿಂತೆಗೀಡುಮಾಡಿದೆ. ಕಾಳಮೆಣಸು ಬೆಳಗಾರರಿಗೆ ಆದ ಅನ್ಯಾಯವು ಅಡಿಕೆ ಬೆಳಗಾರರಿಗೂ ಆಗಲಿದೆ ಎಂದು ತಿಳಿದ ನಂತರ ನಮ್ಮ ಪಕ್ಷವು ಇದನ್ನು ಗಂಭೀರವಾಗಿ ಪರಿಗಣಿಸಿದೆ. ಆದರೆ ಕೇಂದ್ರ ಸರ್ಕಾರದ ಗಮನವನ್ನು, ಈ ಸಮಸ್ಯೆಯತ್ತ ಸೆಳೆಯುವ ನಮ್ಮ ಪ್ರಯತ್ನವು ಯಶಸ್ವಿಯಾಗಲಿಲ್ಲ. ಆದ್ದರಿಂದ ಸಮಸ್ಯೆಯ ಗಂಭೀರತೆಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲು ನೀವು ಮಧ್ಯಪ್ರವೇಶಿಸಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.

ಮೇಕ್‌ ಇನ್‌ ಇಂಡಿಯಾ ಎಂದು ಹೇಳುವ ಪ್ರಧಾನಿ ನರೇಂದ್ರ ಮೋದಿಯವರು ಅದಕ್ಕೆ ವಿರುದ್ಧವಾಗಿ ವಿದೇಶದಲ್ಲಿ ಬೆಳೆದ ಅಡಿಕೆ, ಕಾಳುಮೆಣಸನ್ನು ಭಾರತಕ್ಕೆ ತರಿಸಿ, ʻಎಲ್ಲಾದರೂ ಬೆಳೆಯಿರಿ, ಭಾರತಕ್ಕೆ ತನ್ನಿʼ ಎಂಬ ನೀತಿಯನ್ನು ಅನುಸರಿಸುತ್ತಿರುವುದೇಕೆ? ರಾಜಕೀಯ ಪ್ರಭಾವಿಗಳು ಇದರಲ್ಲಿ ಭಾಗಿಯಾಗಿ ಸಫೆಮಾ, ಫೆರಾ ಮುಂತಾದ ನಿಯಮಗಳು ಉಲ್ಲಂಘನೆಯಾಗಿರುವುದು ಕಂಡುಬರುತ್ತಿದ್ದು, ಜಾರಿ ನಿರ್ದೇಶನಾಲಯದಿಂದ ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಪೃಥ್ವಿ ರೆಡ್ಡಿ ಆಗ್ರಹಿಸಿದರು.

ಎಎಪಿ ಮುಖಂಡರು ಹಾಗೂ ಹಿರಿಯ ವಕೀಲರಾದ ಬ್ರಿಜೇಶ್‌ ಕಾಳಪ್ಪ ಮಾತನಾಡಿ, “ನಮ್ಮಲ್ಲಿ ಬೆಳೆಯುವ ಅಡಿಕೆಗೆ ಹೋಲಿಕೆ ಮಾಡಿದರೆ ಭೂತಾನ್‌ನಿಂದ ಆಮದು ಮಾಡಿಕೊಳ್ಳುವ ಅಡಿಕೆಯು ಕಳಪೆ ಗುಣಮಟ್ಟದ್ದಾಗಿರಲಿದೆ. ಅದೇ ರೀತಿ, ವಿಯೆಟ್ನಾಂನಿಂದ ಶ್ರೀಲಂಕಾ ಮೂಲಕ ಆಮದು ಮಾಡಿಕೊಳ್ಳುವ ಕಾಳುಮೆಣಸು ನಮ್ಮಲ್ಲಿ ಬೆಳೆಯುವ ಕಾಳುಮೆಣಸಿಗಿಂತ ಕಳಪೆ ಗುಣಮಟ್ಟದ್ದಾಗಿದೆ. ಇಲ್ಲಿನ ಉತ್ತಮ ಗುಣಮಟ್ಟದ ಬೆಳೆಗಳೊಂದಿಗೆ ಆಮದು ಮಾಡಿಕೊಂಡ ಅವುಗಳು ಮಿಶ್ರವಾಗುವುದರಿಂದ ಭಾರತದ ಅಡಿಕೆ ಹಾಗೂ ಕಾಳುಮೆಣಸು ಕಳಪೆ ಗುಣಮಟ್ಟದ್ದೆಂಬ ತಪ್ಪು ಕಲ್ಪನೆ ಗ್ರಾಹಕರಲ್ಲಿ ಮೂಡಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ವಾರ್ಷಿಕ 36,000 ಮೆಟ್ರಿಕ್‌ ಟನ್‌ ಕಾಳುಮೆಣಸು ಬೆಳೆಯಲಾಗುತ್ತಿದೆ. ಆಮದಿಗೂ ಮೊದಲು 850 ರೂಪಾಯಿಯಿದ್ದ ಬೆಲೆಯು 500 ರೂಪಾಯಿಗೆ ಕುಸಿದಿರುವುದರಿಂದ ಬೆಳೆಗಾರರಿಗೆ ಕೆಜಿಗೆ 350 ರೂಪಾಯಿ ನಷ್ಟವಾಗುತ್ತಿದೆ. ಅಂದರೆ ರೈತರಿಗೆ ಒಟ್ಟು 1.26 ಲಕ್ಷ ಕೋಟಿ ರೂಪಾಯಿ ನಷ್ಟವಾಗುತ್ತಿದೆ. ಕಾಳುಮೆಣಸಿನ ಹಿಂದಿನ ಬೆಲೆಗೂ ಆಮದಿಗೆ ಅವಕಾಶ ನೀಡಿದ ನಂತರದ ಬೆಲೆಗೂ ಹೋಲಿಕೆ ಮಾಡಿದರೆ, ಗುತ್ತಿಗೆದಾರರು ಆರೋಪಿಸಿರುವಂತೆ 40% ಕಡಿಮೆಯಾಗಿರುವುದು ಗಮನಕ್ಕೆ ಬರುತ್ತದೆ ಎಂದು ಬ್ರಿಜೇಶ್‌ ಕಾಳಪ್ಪ ಹೇಳಿದರು.

ಎಎಪಿ ಮುಖಂಡರು ಹಾಗೂ ಹಿರಿಯ ವಕೀಲರಾದ ಕೆ.ದಿವಾಕರ್‌ ಮಾತನಾಡಿ,  ದೇಶಕ್ಕೆ ಅಗತ್ಯವಿರುವಷ್ಟು ಅಡಿಕೆ ಹಾಗೂ ಕಾಳುಮೆಣಸು ನಮ್ಮಲ್ಲೇ ಉತ್ಪಾದನೆಯಾಗುತ್ತಿದ್ದರೂ ವಿದೇಶಗಳಿಂದ ಆಮದಿಗೆ ಮುಂದಾಗಿರುವುದು ಅವುಗಳ ಬೆಳೆಗಾರರನ್ನು ಸಹಜವಾಗಿಯೇ ಚಿಂತೆಗೀಡುಮಾಡಿದೆ. ಒಂದುವೇಳೆ ಅಡಿಕೆ ಹಾಗೂ ಕಾಳುಮೆಣಸನ್ನು ಸರ್ಕಾರ ಆಮದು ಮಾಡಿಕೊಳ್ಳುವುದಾದರೆ, ಭಾರೀ ಮೊತ್ತದ ಆಮದು ಸುಂಕವನ್ನು ಇವುಗಳಿಗೆ ವಿಧಿಸಬೇಕು. ಭಾರತೀಯ ರೈತರನ್ನು ರಕ್ಷಿಸಲು ಪರಿಣಾಮಕಾರಿಯಾದ ಆಮದು ಸುಂಕ ನೀತಿ ಇಲ್ಲದಿರುವ ಸಂದರ್ಭವನ್ನು ದುರ್ಬಳಕೆ ಮಾಡಿಕೊಳ್ಳಲು ಆಮದುದಾರರಿಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.

ಆಡಳಿತ, ವಿರೋಧ ಪಕ್ಷದವರ ಪ್ರತ್ಯಾರೋಪಗಳಿಂದ ರೈತ ಕಂಗಾಲು: ಪೃಥ್ವಿ ರೆಡ್ಡಿ
ಬೆಂಗಳೂರು: ರಾಜ್ಯದ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳು ಜ್ವಲಂತ ಸಮಸ್ಯೆಗಳ ಬಗ್ಗೆ ಚಿಂತಿಸುವ ಬದಲು ರಾಜಕೀಯ ಆರೋಪಗಳಲ್ಲಿ ತೊಡಗಿರುವುದರಿಂದ ಅನ್ನದಾತರು ಸಂಕಷ್ಟ ಅನುಭವಿಸುವಂತಾಗಿದೆ ಎಂದು ಕರ್ನಾಟಕ ಆಮ್ ಆದ್ಮಿ ಪಕ್ಷ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರು ಹೇಳಿದರು.

ರಾಜ್ಯ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿ, ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಪೃಥ್ವಿ ರೆಡ್ಡಿ, ಕರ್ನಾಟಕದಲ್ಲಿ ಅತಿವೃಷ್ಟಿಯಿಂದ 8.91 ಲಕ್ಷ ಹೆಕ್ಟೇರ್‌ ಬೆಳೆಹಾನಿ ಸಂಭವಿಸಿ, 12,319 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ರಾಜ್ಯ ಸರ್ಕಾರವು ವಿಧಾನಸಭೆಯಲ್ಲಿ ತಿಳಿಸಿದೆ. ಈ ಪೈಕಿ ಕೇಂದ್ರ ಸರ್ಕಾರದಿಂದ ಕೇವಲ 1,646.05 ಕೋಟಿ ರೂಪಾಯಿಯನ್ನು ಮಾತ್ರ ಬಂದಿರುವುದು ಆನೆಯ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತಾಗಿದೆ. ಕೇಂದ್ರ ಸರ್ಕಾರವು ಸೂಕ್ತ ಪರಿಹಾರ ನೀಡಲು ನಿರಾಕರಿಸಿದ್ದರೂ ರಾಜ್ಯ ಸರ್ಕಾರವು ಸುಮ್ಮನಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಉಂಟಾದ ಪ್ರವಾಹವನ್ನೂ ರಾಜ್ಯ ಸರ್ಕಾರ ಸರಿಯಾಗಿ ನಿರ್ವಹಿಸಿಲ್ಲ ಎಂದು ಹೇಳಿದರು.

ಕರ್ನಾಟಕ ಆಮ್ ಆದ್ಮಿ ಪಕ್ಷ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಮತ್ತು ಪಕ್ಷದ ಮುಖಂಡರು ರಾಜ್ಯಪಾಲರಿಗೆ ದೂರು ಸಲ್ಲಿಸುತ್ತಿರುವ ಸಂದರ್ಭ

ಕಳೆದ ಮೂರು ವರ್ಷಗಳಲ್ಲಿ ಅತಿವೃಷ್ಟಿಯಿಂದಾಗಿ ಮನೆ ಕಳೆದುಕೊಂಡವರಿಗೆ ಐದು ಲಕ್ಷ ಪರಿಹಾರ ನೀಡುವ ಬಿಜೆಪಿ ಸರ್ಕಾರದ ಘೋಷಣೆಯು ಕೇವಲ ಘೋಷಣೆಯಾಗಿ ಉಳಿದಿದೆ. ಸಂತ್ರಸ್ತರ ಪೈಕಿ ಅನೇಕರಿಗೆ ಕೇವಲ ಒಂದು ಲಕ್ಷ ರೂಪಾಯಿ ಮಾತ್ರ ಸಿಕ್ಕಿದೆ. ಬೆರಳೆಣಿಕೆಯ ಮಂದಿಗೆ ಮಾತ್ರ ಐದು ಲಕ್ಷ ರೂಪಾಯಿ ಪರಿಹಾರ ಸಿಕ್ಕಿದೆ. ಅವರು ಮನೆಯಿಲ್ಲದೇ ಟೆಂಟ್‌ಗಳಲ್ಲಿ, ದೇವಸ್ಥಾನಗಳಲ್ಲಿ, ಬಸ್‌ ನಿಲ್ದಾಣಗಳಲ್ಲಿ ವಾಸಿಸುತ್ತಿದ್ದರೂ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಪೃಥ್ವಿ ರೆಡ್ಡಿ ಆರೋಪಿಸಿದರು.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷರಾದ ಭಾಸ್ಕರ್‌ ರಾವ್‌ ಮಾತನಾಡಿ, “ರಾಜ್ಯ ಸರ್ಕಾರ ನೀಡುತ್ತಿರುವ ಬೆಳೆ ಪರಿಹಾರ ಧನವು ಹಲವು ರೈತರಿಗೆ ತಲುಪುತ್ತಿಲ್ಲ. ರೈತರು ಲಂಚ ನೀಡಲು ನಿರಾಕರಿಸಿದ ಕಾರಣಕ್ಕೆ ಸ್ಥಳೀಯ ಅಧಿಕಾರಿಗಳು ಸರ್ವೇ ಮಾಡಿ ಸರ್ಕಾರದ ಆ್ಯಪ್‌ನಲ್ಲಿ ಹಾಕಲು ಮೀನಾಮೇಷ ಎಣಿಸುತ್ತಿದ್ದಾರೆ. ಸರ್ಕಾರದ ಕಠಿಣ ಮಾನದಂಡಗಳಿಂದಾಗಿ, ಸಂತ್ರಸ್ತ ರೈತರಿಗೆ ಪರಿಹಾರ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಕೇಂದ್ರದಿಂದ ಪರಿಹಾರ ದೊರಕಿಸಿ ಕೊಡುವುದರಲ್ಲಿ ರಾಜ್ಯದ ಕೇಂದ್ರ ಸಚಿವರು ಹಾಗೂ ಸಂಸದರು ಸಂಪೂರ್ಣ ವಿಫಲರಾಗಿದ್ದಾರೆ. ಇತ್ತೀಚೆಗೆ ಬಂದಿದ್ದ ಕೇಂದ್ರ ಪರಿಶೀಲನಾ ತಂಡವು ಸಮರ್ಪಕ ಸಮೀಕ್ಷೆ ನಡೆಸದೇ ಹಿಂದಿರುಗಿದೆ. ಕೇಂದ್ರ ಸರ್ಕಾರವು 2021-22 ಹಾಗೂ 2022-23ರಲ್ಲಿ 14,100 ಕೋಟಿ ರೂಪಾಯಿ ಜಿಎಸ್‌ಟಿ ಬಾಕಿ ಉಳಿಸಿಕೊಂಡಿದೆ. ಕೇಂದ್ರದೊಂದಿಗೆ ಮಾತುಕತೆ ನಡೆಸಿ ಈ ಮೊತ್ತವನ್ನು ರಾಜ್ಯಕ್ಕೆ ಬಿಡುಗಡೆ ಮಾಡಿಸಿಕೊಳ್ಳಲು ರಾಜ್ಯ ಸರ್ಕಾರ ಪ್ರಯತ್ನ ಮಾಡುತ್ತಿಲ್ಲ ಎಂದು ಹೇಳಿದರು.

ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಕೆ.ಮಥಾಯಿ, ಬ್ರಿಜೇಶ್‌ ಕಾಳಪ್ಪ, ಚನ್ನಪ್ಪಗೌಡ ನೆಲ್ಲೂರು, ಜಗದೀಶ್‌ ವಿ ಸದಂ ಮತ್ತಿತರು ಭಾಗವಹಿಸಿದ್ದರು.