govt schools – Peepal Media

ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ: ಸರ್ಕಾರದಿಂದ ಕಟ್ಟುನಿಟ್ಟಿನ ಮಾರ್ಗಸೂಚಿ
ರಾಜ್ಯದ ಎಲ್ಲ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಶೌಚಾಲಯಗಳ ಸ್ವಚ್ಛತೆಯನ್ನು ನಿರ್ವಹಿಸಲು ವಿದ್ಯಾರ್ಥಿಗಳನ್ನು ಬಳಸುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಂದು ಬಿಡುಗಡೆ ಮಾಡಿರುವ ಮಾರ್ಗಸೂಚಿಯಲ್ಲಿ 8 ಪ್ರಮುಖ ಅಂಶಗಳನ್ನು ಒಳಗೊಂಡಂತೆ ಸರ್ಕಾರ ಎಲ್ಲಾ ಸರ್ಕಾರಿ ಶಾಲೆಗಳಿಗೆ ಆದೇಶಿಸಿದೆ.

ಇತ್ತೀಚಿನ ದಿನಗಳಲ್ಲಿ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸುವ ವರದಿಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಈ ಆದೇಶ ಹೊರಡಿಸಿದೆ.

ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಚಟುವಟಿಕೆಗಳಲ್ಲಿ, ಸಹ ಪಠ್ಯ ಚಟುವಟಿಕೆಗಳಲ್ಲಿ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಮಾತ್ರ ತೊಡಗಿಸಿಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳನ್ನು ಶೌಚಾಲಯಗಳ ಸ್ವಚ್ಛತೆಯಂತಹ ಕಾರ್ಯಗಳಿಂದ ದೂರವಿರಿಸುವುದು ಅಧಿಕಾರಿಗಳ, ಮುಖ್ಯ ಶಿಕ್ಷಕರ, ಶಿಕ್ಷಕರ, ಸಿಬ್ಬಂದಿಗಳ ಕರ್ತವ್ಯವಾಗಿರುತ್ತದೆ. ಆದರೆ ಅವರುಗಳು ಈ ಹೊಣೆಗಾರಿಕೆಯನ್ನು ಮರೆತು ವಿದ್ಯಾರ್ಥಿಗಳನ್ನು ಶಾಲೆಗಳಲ್ಲಿ ಶೌಚಾಲಯಗಳ ಸ್ವಚ್ಛತೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಆಕ್ಷೇಪಣೀಯ ಮತ್ತು ಖಂಡನೀಯ ಎಂದು ಸರ್ಕಾರ ತಿಳಿಸಿದೆ.

ಇಂತಹ ಘಟನೆಗಳನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಶೌಚಾಲಯಗಳ ಸ್ವಚ್ಛತೆಯನ್ನು ನಿರ್ವಹಿಸುವ ಕುರಿತು ಕೆಳಕಂಡ ಅಂಶಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸಂಬಂಧಿಸಿದ ಎಲ್ಲರಿಗೂ ತಿಳಿಸಲಾಗಿದೆ.

* ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶೌಚಾಲಯಗಳ ಸ್ವಚ್ಛತಾ ಕಾರ್ಯ ಮತ್ತು ನಿರ್ವಹಣೆಯನ್ನು ಯಾವುದೇ ಕಾರಣಕ್ಕೂ, ಯಾವುದೇ ಸಂದರ್ಭದಲ್ಲಿಯೂ ಸಹ ವಿದ್ಯಾರ್ಥಿಗಳಿಂದ ಕೈಗೊಳ್ಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

* ಉಲ್ಲೇಖಿತ ಸುತ್ತೋಲೆಯ ಅನುಸಾರ ಶಾಲಾ ನಿರ್ವಹಣಾ ಅನುದಾನವನ್ನು ಆಯಾ ಸರ್ಕಾರಿ ಶಾಲೆಗಳಿಗೆ ಪ್ರಸ್ತುತ ಸಾಲಿಗೆ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಸದರಿ ಅನುದಾನವನ್ನು ಪ್ರಥಮ ಪ್ರಾಶಸ್ತ್ರದಲ್ಲಿ ಶೌಚಾಲಯಗಳ ಸ್ವಚ್ಛತಾ ಕಾರ್ಯಗಳಿಗೆ ಬಳಸಿಕೊಂಡು ಆಯಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್.ಡಿ.ಎಂ.ಸಿ) ಗಳ ಸಹಕಾರದೊಂದಿಗೆ, ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಶೌಚಾಲಯಗಳ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳತಕ್ಕದ್ದು.

* ಒಂದು ವೇಳೆ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು ಮತ್ತು ಸಿಬ್ಬಂದಿಗಳಾಗಲಿ ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯಗಳ ಸ್ವಚ್ಛತೆಗಾಗಿ ಬಳಸಿಕೊಂಡಲ್ಲಿ ಅಂತಹವರ ಮೇಲೆ ಇಲಾಖಾ ವತಿಯಿಂದ ನಿಯಮಾನುಸಾರ ಶಿಸ್ತು ಕ್ರಮಗಳನ್ನು ಜರುಗಿಸಲಾಗುವುದು ಹಾಗೂ ಪ್ರಥಮ ವರ್ತಮಾನ ವರದಿ (FIR) ದಾಖಲಿಸಲಾಗುವುದು ಎಂದು ಎಚ್ಚರಿಸಲಾಗಿದೆ.
* ಆಯಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್.ಡಿ.ಎಂ.ಸಿ)ಗಳು ವಿದ್ಯಾರ್ಥಿಗಳಿಗೆ ಈ ಕುರಿತು ಅರಿವು ಮೂಡಿಸತಕ್ಕದ್ದು ಯಾವುದೇ ವಿದ್ಯಾರ್ಥಿಗಳು ಶಾಲಾ ಶೌಚಾಲಯಗಳ ತೊಡಗಿಸಿಕೊಂಡಿರುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬಹುದಾಗಿರುತ್ತದೆ.

* ಶಾಲೆಗಳಿಗೆ ಕಾಲ-ಕಾಲಕ್ಕೆ ಖುದ್ದು ಭೇಟಿ ನೀಡಿ ಶಾಲೆಗಳಲ್ಲಿ ಹೆಣ್ಣು ಮಕ್ಕಳು ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕವಾದ ಬಳಕೆಗೆ ಯೋಗ್ಯವಾದ ಶೌಚಾಲಯಗಳು ಲಭ್ಯವಿರುವುದನ್ನು ಪರಿಶೀಲಿಸಿ ಮತ್ತು ಶಾಲಾ ಅವಧಿಯಲ್ಲಿ ಈ ಶೌಚಾಲಯಗಳಿಗೆ ಬೀಗ ಹಾಕದೇ ವಿದ್ಯಾರ್ಥಿಗಳ ಉಪಯೋಗಕ್ಕೆ ಅವಕಾಶ ಕಲ್ಪಿಸಿರುವುದನ್ನು ಹಾಗೂ ವಿದ್ಯಾರ್ಥಿಗಳನ್ನು ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿರುವುದಿಲ್ಲ ಎಂಬ ಅಂಶಗಳನ್ನು ಖುದ್ದಾಗಿ ಪರಿಶೀಲಿಸಿ ಖಚಿತಪಡಿಸಿಕೊಳ್ಳುವಂತೆ ಶಾಲಾ ಉಸ್ತುವಾರಿ ಹಾಗೂ ಮೇಲ್ವಿಚಾರಣೆಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಈ ಮೂಲಕ ಸೂಚಿಸಲಾಗಿದೆ.
* ಶಾಲೆಯ ಸಂದರ್ಶನದ ವೇಳೆಯಲ್ಲಿ ಒಂದು ವೇಳೆ ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿರುವುದು ಗಮನಕ್ಕೆ ಬಂದಲ್ಲಿ, ಅದಕ್ಕೆ ಕಾರಣರಾದವರ ಮೇಲೆ ಮೇಲ್ಕಂಡಂತೆ ತತ್‌ಕ್ಷಣವೇ ಕ್ರಮವಹಿಸಲು ಅನುವಾಗುವಂತೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗೂ ಉಪನಿರ್ದೇಶಕರು (ಆಡಳಿತ)ರವರಿಗೆ ತಕ್ಷಣ ವರದಿ ಮಾಡಲು ಶಾಲಾ ಉಸ್ತುವಾರಿ ಹಾಗೂ ಮೇಲ್ವಿಚಾರಣೆಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ತಿಳಿಸಿದೆ.
* ಅದರಂತೆ ಇಂತಹ ಪ್ರಕರಣಗಳಲ್ಲಿ ತತ್‌ಕ್ಷಣವೇ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಉಪನಿರ್ದೇಶಕರು(ಆಡಳಿತ)ರವರು ಮೇಲೆ ತಿಳಿಸಿರುವಂತೆ ಸಂಬಂಧಿಸಿದವರ ಮೇಲೆ ಜರೂರಾಗಿ ಕ್ರಮವಹಿಸುವಂತೆ ಈ ಮೂಲಕ ಸೂಚಿಸಲಾಗಿದೆ. ತಪ್ಪಿದಲ್ಲಿ ಅಥವಾ ನಿರ್ಲಕ್ಷತನ ತೋರಿದಲ್ಲಿ ಮತ್ತು ಇಂತಹ ಪ್ರಕರಣಗಳು ಮರುಕಳಿಸಿದಲ್ಲಿ ಅದಕ್ಕೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಉಪನಿರ್ದೆಶಕರು(ಆಡಳಿತ) ರವರನ್ನೇ ನೇರ ಹೊಣೆಗಾರರನ್ನಾಗಿಸಿ ಇಲಾಖೆ ನಿಯಮಾನುಸಾರ ಶಿಸ್ತು ಕ್ರಮಗಳನ್ನು ಜರುಗಿಸಲಾಗುವುದು ಎಂದು ಎಚ್ಚರಿಸಲಾಗಿದೆ.
* ಇದೇ ರೀತಿ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿಯು ಸಹ ಇಂತಹ ಯಾವುದೇ ಪ್ರಕರಣಗಳು ಜರುಗದಂತೆ ಸಂಬಂಧಪಟ್ಟ ಶಾಲಾ ಆಡಳಿತ ಮಂಡಳಿಗಳು ಹಾಗೂ ಶಾಲಾ ಮುಖ್ಯಸ್ಥರು ಎಚ್ಚರಿಕೆ ವಹಿಸಲು ತಿಳಿಸಿದೆ.

ಮೇಲ್ಕಂಡ ಎಲ್ಲಾ ಅಂಶಗಳನ್ನು ಹಾಗೂ ಈ ಕುರಿತು ಸರ್ಕಾರದಿಂದ ಮತ್ತು ಇಲಾಖೆಯಿಂದ ಕಾಲ-ಕಾಲಕ್ಕೆ ಹೊರಡಿಸಲಾಗುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಚಾಚೂ ತಪ್ಪದೇ ಪಾಲಿಸಲು ಹಾಗೂ ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುವಂತಹ ಪ್ರಕರಣಗಳು ಮರುಕಳಿಸದಂತೆ ಸೂಕ್ತ ಎಚ್ಚರಿಕೆ ಕ್ರಮಗಳನ್ನು ವಹಿಸುವಂತೆ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮುಖ್ಯ ಶಿಕ್ಷಕರಿಗೆ ಮತ್ತು ಸಂಬಂಧಿಸಿದ ಎಲ್ಲಾ ಇಲಾಖಾಧಿಕಾರಿಗಳಿಗೆ ಈ ಮೂಲಕ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

ಅಸಮರ್ಥ ಶಿಕ್ಷಣ ಸಚಿವ ಹಾಗೂ ಸರ್ಕಾರದ ನಿರ್ಲಕ್ಷ್ಯದಿಂದಾಗಿ 1.62 ಲಕ್ಷ ದಾಖಲಾತಿ ಕುಸಿತ: ಮೋಹನ್‌ ದಾಸರಿ ಆರೋಪ
ಬೆಂಗಳೂರು: ರಾಜ್ಯದ 1.62 ಲಕ್ಷ ವಿದ್ಯಾರ್ಥಿಗಳು ಈ ವರ್ಷ ಸರ್ಕಾರಿ ಶಾಲೆಯನ್ನು ತ್ಯಜಿಸಿ ಖಾಸಗಿ ಶಾಲೆ ಸೇರಿರುವುದಕ್ಕೆ ರಾಜ್ಯ ಬಿಜೆಪಿ ಸರ್ಕಾರಕ್ಕೆ ಶಿಕ್ಷಣ ಕ್ಷೇತ್ರದ ಮೇಲಿರುವ ನಿರ್ಲಕ್ಷ್ಯ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ರವರ ಅಸಮರ್ಥತೆ ಕಾರಣ ಎಂದು ಆಮ್‌ ಆದ್ಮಿ ಪಾರ್ಟಿ ಬೆಂಗಳೂರು ಅಧ್ಯಕ್ಷ ಮೋಹನ್‌ ದಾಸರಿ ಆರೋಪಿಸಿದ್ದಾರೆ.

ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮೋಹನ್‌ ದಾಸರಿಯವರು, ʼಕೋವಿಡ್‌ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಲಕ್ಷಕ್ಕೂ ಅಧಿಕ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಯಿಂದ ಬಿಡಿಸಿ, ಸರ್ಕಾರಿ ಶಾಲೆಗೆ ಸೇರಿಸಿದ್ದರು. ಆದರೆ ಈಗ ಸರ್ಕಾರಿ ಶಾಲೆಗಳ ದುಸ್ಥಿತಿಯಿಂದ ಬೇಸತ್ತು ಅವರು ತಮ್ಮ ಮಕ್ಕಳನ್ನು ಪುನಃ ಖಾಸಗಿ ಶಾಲೆಗೆ ಸೇರಿಸುತ್ತಿದ್ದಾರೆ. ಪರಿಣಾಮವಾಗಿ, ಒಂದರಿಂದ ಹತ್ತನೇ ತರಗತಿವರೆಗಿನ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಸಂಖ್ಯೆ 1.62 ಲಕ್ಷ ಕುಸಿದಿದೆʼ ಎಂದು ಹೇಳಿದ್ದಾರೆ.

ʼಕರ್ನಾಟಕದಲ್ಲಿರುವ 47,585 ಸರ್ಕಾರಿ ಶಾಲೆಗಳ ಪೈಕಿ 6,529 ಶಾಲೆಗಳಲ್ಲಿ ಕೇವಲ ಒಬ್ಬರೇ ಶಿಕ್ಷಕರಿದ್ದಾರೆ. ಬಹುತೇಕ ಶಾಲೆಗಳಲ್ಲಿ ಮೂಲಸೌಕರ್ಯಗಳು ಹಾಗೂ ಶಿಕ್ಷಕರ ಕೊರತೆಯಿದೆ. ಶಾಲೆಗಳು ಹಾಗೂ ಕಾಲೇಜುಗಳಲ್ಲಿ ಕೋಮು ರಾಜಕೀಯಕ್ಕೆ ನೀಡುವ ಆದ್ಯತೆಯನ್ನು ಅಭಿವೃದ್ಧಿಗೆ ನೀಡದಿರುವುದು ದುರಂತ. ದೆಹಲಿಯ ಆಮ್‌ ಆದ್ಮಿ ಪಾರ್ಟಿ ಸರ್ಕಾರವು ಸರ್ಕಾರಿ ಶಾಲೆಗಳಲ್ಲಿ ವಿಶ್ವದರ್ಜೆಯ ಮೂಲಸೌಕರ್ಯಗಳನ್ನು ಅಳವಡಿಸಿದ್ದು, ಅಲ್ಲಿ ವಿದ್ಯಾರ್ಥಿಗಳ ಸಂಖ್ಯೆಯು ಗಣನೀಯವಾಗಿ ಏರಿಕೆಯಾಗುತ್ತಿದೆ. ಕರ್ನಾಟಕದಲ್ಲೂ ಅಂತಹ ಶೈಕ್ಷಣಿಕ ಕ್ರಾಂತಿಗಾಗಿ ಆಮ್‌ ಆದ್ಮಿ ಪಾರ್ಟಿ ಸರ್ಕಾರ ಅಧಿಕಾರಕ್ಕೆ ಬರಬೇಕುʼ ಎಂದು ಮೋಹನ್‌ ದಾಸರಿ ಹೇಳಿದ್ದಾರೆ.

ʼವಿವೇಕ ಯೋಜನೆʼ: ತರಗತಿ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಯುವುದರ ವಿರುದ್ಧ ಕರ್ನಾಟಕ ಕಾಂಗ್ರೆಸ್ ಅಭಿಯಾನ
ಬೆಂಗಳೂರು: ರಾಜ್ಯ ಸರ್ಕಾರ ʼವಿವೇಕ ಯೋಜನೆʼ ಅಡಿಯಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಸರ್ಕಾರಿ ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಯುವುದರ ವಿರುದ್ಧ ಕರ್ನಾಟಕ ಕಾಂಗ್ರೆಸ್‌ ಅಭಿಯಾನ ಆರಂಭಿಸಿದೆ.

ʼಸಿಎಂ ಅಂಕಲ್‌ʼ ಎಂಬ ʼಹ್ಯಾಶ್‌ಟ್ಯಾಗ್‌ʼನೊಂದಿಗೆ ಅಭಿಯಾನವನ್ನು ಪ್ರಾರಂಭಿಸಿರುವ ಕಾಂಗ್ರೆಸ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ತರಗತಿಗಳಿಗೆ ಬಣ್ಣ ಬಳಿಯುವ ಬದಲು, ಮೊದಲು ಮಕ್ಕಳಿಗೆ ಶೌಚಾಲಯಗಳನ್ನು ನಿರ್ಮಿಸಿರುವಂತೆ ಒತ್ತಾಯಿಸಿದೆ.ಈ ಅಭಿಯಾನದ ಮೂಲಕ, ಕಾಂಗ್ರೆಸ್ ಶಾಲಾ ಮಕ್ಕಳ ಪರವಾಗಿ ಬೊಮ್ಮಾಯಿ ಅವರನ್ನು ಪ್ರಶ್ನಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌, ʼರಾಜ್ಯದಾದ್ಯಂತ ಶಾಲೆಗಳಲ್ಲಿ ಮೂಲಸೌಕರ್ಯಗಳ ಕೊರತೆ ಇದೆ. ಮಕ್ಕಳು ಶೌಚಾಲಯಗಳಿಲ್ಲದೆ ಹೆಣಗಾಡುತ್ತಿದ್ದಾರೆ. ಸಿಎಂ ಅಂಕಲ್, ಶಾಲಾ ಕಟ್ಟಡಗಳಿಗೆ ಕೇಸರಿ ಬಣ್ಣ ಬಳಿಯುವ ಮೊದಲು, ಮೊದಲು ಶೌಚಾಲಯಗಳನ್ನು ನಿರ್ಮಿಸಿ, ಮಕ್ಕಳಿಗೆ ಆರೋಗ್ಯಕರ ಕುಡಿಯುವ ನೀರು ಮತ್ತು ಶಾಲೆಗಳಿಗೆ ಮಕ್ಕಳನ್ನು ಆಕರ್ಷಿಸುವ ಸೌಲಭ್ಯಗಳನ್ನು ನೀಡಿʼ ಎಂದು ಒತ್ತಾಯಿಸಿದೆ.

ದೇಶದಲ್ಲಿ ಕೈಗಾರಿಕಾ ಮತ್ತು ವೈಜ್ಞಾನಿಕ ಕ್ರಾಂತಿಗೆ ಕಾರಣರಾದ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ರಾಜ್ಯ ಸರ್ಕಾರ ಈ ಯೋಜನೆಯನ್ನು ಜಾರಿಗೆ ತರುತ್ತಿದೆ, ಆದರೆ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಮುಖ್ಯಮಂತ್ರಿಗಳು ಏಕೆ ಮುಂದೆ ಬರುತ್ತಿಲ್ಲ? ಎಂದು ಕಾಂಗ್ರೆಸ್ ಕಿಡಿಕಾರಿದೆ.

ʼಗುಣಮಟ್ಟದ ಬೋಧನೆ ಇಲ್ಲ, ಸರಿಯಾದ ಮಧ್ಯಾಹ್ನದ ಊಟವಿಲ್ಲ, ನೀವು ಯಾವ ಕ್ರಮವನ್ನು ತೆಗೆದುಕೊಳ್ಳಲಿದ್ದೀರಿ? ಅಪೌಷ್ಟಿಕ ಮಕ್ಕಳಿಗೆ ಮೊಟ್ಟೆಗಳನ್ನು ನೀಡುವ ಯೋಜನೆಯನ್ನು ಸರಿಯಾಗಿ ಅನುಷ್ಠಾನಗೊಳಿಸುತ್ತಿಲ್ಲ. ಮೊದಲು ಮೊಟ್ಟೆಗಳನ್ನು ವಿತರಿಸಲು ಕ್ರಮ ಕೈಗೊಳ್ಳಿ, ಆದರೆ ಮೊಟ್ಟೆಗಳನ್ನು ಖರೀದಿಸುವಲ್ಲಿಯೂ ಭ್ರಷ್ಟಾಚಾರಕ್ಕೆ ಅವಕಾಶ ನೀಡಬೇಡಿ ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

ಬಿಜೆಪಿ ನೇತೃತ್ವದ ಕರ್ನಾಟಕ ಸರ್ಕಾರವು ‘ವಿವೇಕ ಯೋಜನೆ’ಯಡಿ 8,100 ತರಗತಿ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಸುತ್ತಿದ್ದು,ಇದಲ್ಲದೆ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು 11 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಧ್ಯಾನದ ತರಗತಿಗಳನ್ನು ಪ್ರಾರಂಭಿಸಲು ಸಜ್ಜಾಗಿದೆ.

ರಾಜ್ಯಾದ್ಯಂತ ಶಾಲೆಗಳಲ್ಲಿ ಮೂಲಸೌಕರ್ಯದ ಕೊರತೆ ಇದೆ, ಶೌಚಾಲಯವಿಲ್ಲದೆ ಮಕ್ಕಳು ಪರದಾಡುತ್ತಿದ್ದಾರೆ.#ಸಿಎಂಅಂಕಲ್,
ಕೇಸರಿ ಬಣ್ಣ ಬಳಿಯುವಿರಂತೆ, ಆದರೆ ಮೊದಲು ಶೌಚಾಲಯ ಕಟ್ಟಿಸಿಕೊಡಿ. ಕುಡಿಯಲು ಶುಚಿಯಾದ ನೀರು ಕೊಡಿ,
ಶಾಲೆಗಳು ಮಕ್ಕಳನ್ನು ಆಕರ್ಷಿಸುವಂತೆ ಮಾಡಿಕೊಡಿ. pic.twitter.com/abMgboxDnZ
— Karnataka Congress (@INCKarnataka) November 14, 2022

ಮಕ್ಕಳ ದಿನಾಚರಣೆ: ಸರ್ಕಾರಿ ಶಾಲೆಗಳ ಅವ್ಯವಸ್ಥೆ ಕುರಿತ ವಿಡಿಯೋ ಬಿಡುಗಡೆಮಾಡಿದ ಡಿಕೆ ಶಿವಕುಮಾರ್‌
ಬೆಂಗಳೂರು: ದೇಶಾದ್ಯಂತ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮಕ್ಕಳ ಭವಿಷ್ಯವನ್ನು ಉತ್ತಮವಾಗಿ ರೂಪಿಸಲು ಮೂಲಭೂತ ಹಕ್ಕಾದ ಶಿಕ್ಷಣವನ್ನು ಉತ್ತಮ ರೀತಿಯಲ್ಲಿ ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಆದರೆ ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಅವ್ಯವಸ್ಥೆ, ಆ ಮೂಲಕ ಮಕ್ಕಳ ಮೇಲಾಗುವ ವ್ಯತಿರಿಕ್ತ ಪರಿಣಾಮದ ಬಗ್ಗೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ವಿಡಿಯೋ ಬಿಡುಗಡೆ ಮಾಡಿದ್ದಾರೆ.

ಡಿ.ಕೆ ಶಿವಕುಮಾರ್ ಬಿಡುಗಡೆಗೊಳಿಸಿರುವ ವಿಡಿಯೋದಲ್ಲಿ, ಕರ್ನಾಟಕದ ಪ್ರಸ್ತುತ ಶಿಕ್ಷಣ ಪರಿಸ್ಥಿತಿಯ ಮೇಲೆ ಬೆಳಕು ಚೆಲ್ಲಲಾಗಿದೆ. ಶಿಕ್ಷಣ ಇಲಾಖೆ ಏಕೀಕೃತ ಜಿಲ್ಲಾ ಶಿಕ್ಷಣ ವ್ಯವಸ್ಥೆ (ಯುಡಿಎಸ್ಇ+) ವರದಿಯನ್ನು ಬಿಡುಗಡೆ ಮಾಡಿದ್ದು, ವರದಿಯಲ್ಲಿ ರಾಜ್ಯ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಸಂಖ್ಯೆ ಹೆಚ್ಚಿದ್ದರೂ ಶಿಕ್ಷಕರ ಸಂಖ್ಯೆ ಕಡಿಮೆಯಿರುವುದು ಉಲ್ಲೇಖವಾಗಿದೆ. ಇದು ಶಿಕ್ಷಣದ ಗುಣಮಟ್ಟದ ಮೇಲೆ ಪರಿಣಾಮ ಬೀರುವುದರಲ್ಲಿ ಅನುಮಾನವಿಲ್ಲ ಎಂದು ಡಿಕೆಶಿಯವರು ವಿಡಿಯೋ ಮೂಲಕ ತಿಳಿಸಿದ್ದಾರೆ.

ರಾಜ್ಯದಲ್ಲಿ ಒಟ್ಟು ಶಾಲೆಗಳ ಸಂಖ್ಯೆ 76,450. ಅದರಲ್ಲಿ 49,679 ಸರ್ಕಾರಿ ಶಾಲೆಗಳು, 7,110 ಸರ್ಕಾರಿ ಅನುದಾನಿತ ಶಾಲೆಗಳು, 19,650 ಖಾಸಗಿ ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳಿವೆ. ರಾಜ್ಯದ ಶಾಲೆಗಳಲ್ಲಿ ದಾಖಲಾತಿ ಸಂಖ್ಯೆ 2021ರಲ್ಲಿ 1.18 ಕೋಟಿ ಇದ್ದದ್ದು 2022ರ ವೇಳೆಗೆ 1.20 ಕೋಟಿಯಾಗಿದೆ. 2021-22ನೇ ಸಾಲಿನಲ್ಲಿ 8 ಲಕ್ಷಕ್ಕೂ ಹೆಚ್ಚು ಹೊಸ ವಿದ್ಯಾರ್ಥಿನಿಯರು ದಾಖಲಾಗುವುದರ ಜೊತೆಗೆ ಇದೇ ಸಾಲಿನಲ್ಲಿ ಎಸ್ಸಿ, ಎಸ್ಟಿ, ಒಬಿಸಿ ಮತ್ತು ಸಿಡಬ್ಲ್ಯೂಎಸ್ಎನ್ ಅಡಿಯಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳವಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ತಿಳಿದುಬಂದಿದೆ.

2020-21 ಯುಡಿಐಎಸ್ಇ+ ವರದಿಗೆ ಹೋಲಿಸಿದರೆ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಸಂಖ್ಯೆ 2.08 ಲಕ್ಷದಿಂದ 1.99 ಲಕ್ಷಕ್ಕೆ ಇಳಿಕೆಯಾಗಿದ್ದು, ಪ್ರಾಥಮಿಕ ಹಂತದಲ್ಲಿ ಸುಮಾರು 23 ವಿದ್ಯಾರ್ಥಿಗಳಿಗೆ ಓರ್ವ ಶಿಕ್ಷಕರು ಇರುವಂತಾಗಿರುವುದು ಕಳವಳಕಾರಿಯಾಗಿದೆ.

ಕರ್ನಾಟಕದಲ್ಲಿ 47,608 ಸರ್ಕಾರಿ ಶಾಲೆಗಳಿವೆ. 45.42 ಲಕ್ಷ ವಿದ್ಯಾರ್ಥಿಗಳು ಓದುತ್ತಿದ್ದು, ಒಟ್ಟು 2.5 ಲಕ್ಷ ತರಗತಿಗಳಿವೆ. ಈ ಪೈಕಿ 40 ಸಾವಿರ ತರಗತಿಗಳನ್ನು ತುರ್ತು ರಿಪೇರಿ ಮಾಡಿಸಬೇಕಿದ್ದು, ಮಕ್ಕಳ ಹಿತಾಸಕ್ತಿಗೆ ಸರ್ಕಾರ ಮುಂದಾಗಬೇಕಿದೆ ಎಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಆರ್ಟಿಇ ಮೂಲೆಗುಂಪಾಗಿರುವುದು ದುರದೃಷ್ಟಕರ. ಅಂಕಿ ಅಂಶಗಳ ಪ್ರಕಾರ ಆರ್ಟಿಇ ಮಾನದಂಡಗಳನ್ನು ಅನುಸರಿಸುವಲ್ಲಿ ರಾಜ್ಯವು ಶೇಕಡಾ 23.6ರಷ್ಟು ಕಡಿಮೆ ಅನುಸರಣೆ ದರ ಹೊಂದಿದೆ. ಸರ್ಕಾರಿ ಶಾಲೆಗಳಲ್ಲಿ ನೀರು, ವಿದ್ಯುತ್ನಂತಹ ಸೌಲಭ್ಯಗಳ ಕೊರತೆ ಹೆಚ್ಚಳವಾಗಿರುವುದು ಜಡ್ಡುಗಟ್ಟಿದ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದಿದ್ದಾರೆ.

ಕಲ್ಯಾಣ-ಕರ್ನಾಟಕದ 8,028 ಪ್ರಾಥಮಿಕ ಶಾಲೆಗಳ ಪೈಕಿ 1,234 ಶಾಲೆಗಳು ಮತ್ತು 4,663 ತರಗತಿ ಕೊಠಡಿಗಳು ಶಿಥಿಲಾವಸ್ಥೆಯಲ್ಲಿವೆ. ಒಟ್ಟು 1,193 ಪ್ರೌಢಶಾಲೆಗಳ ಪೈಕಿ 237 ಶಾಲೆಗಳು ಮತ್ತು 762 ತರಗತಿ ಕೊಠಡಿಗಳು ಶಿಥಿಲಾವಸ್ಥೆಯಲ್ಲಿವೆ. ಕಲಬುರಗಿಯಲ್ಲಿ 187, ಬಳ್ಳಾರಿಯಲ್ಲಿ 168, ಕೊಪ್ಪಳದಲ್ಲಿ 118, ರಾಯಚೂರಿನಲ್ಲಿ 100, ಯಾದಗಿರಿಯಲ್ಲಿ 97 ತರಗತಿ ಕೊಠಡಿಗಳು ಶಿಥಿಲಾವಸ್ಥೆಯಲ್ಲಿದೆ ಎಂದು ವಿಡಿಯೋದಿಂದ ತಿಳಿದುಬಂದಿದೆ.

ಇನ್ನು, ಶಿವಮೊಗ್ಗ ಜಿಲ್ಲೆಯಲ್ಲಿ 2,001 ಸರ್ಕಾರಿ ಶಾಲೆಗಳಿದ್ದು, 11,842 ತರಗತಿ ಕೊಠಡಿಗಳಿವೆ. ಅವುಗಳಲ್ಲಿ ಸುಮಾರು 2,000 ತರಗತಿ ಕೊಠಡಿಗಳಿಗೆ ನಿರ್ವಹಣಾ ಕಾರ್ಯದ ಅಗತ್ಯವಿದೆ. ದಾವಣಗೆರೆ ಜಿಲ್ಲೆಯಲ್ಲಿ ಬಹಳಷ್ಟು ಕೊಠಡಿಗಳು ತರಗತಿ ನಡೆಸಲು ಯೋಗ್ಯವಾಗಿಲ್ಲ. ಜಿಲ್ಲೆಯಲ್ಲಿ 72 ತರಗತಿ ಕೊಠಡಿಗಳನ್ನು ಕೆಡವಲು ಗುರುತಿಸಲಾಗಿದೆ. ಚಿತ್ರದುರ್ಗದ ಸರ್ಕಾರಿ ಬಾಲಕರ ಪ್ರೌಢಶಾಲೆ ಮತ್ತು ಜೂನಿಯರ್ ಕಾಲೇಜು ಕಟ್ಟಡ ಯಾವಾಗ ಬೀಳುತ್ತದೆಯೋ ಗೊತ್ತಿಲ್ಲ.

ಈ ಎಲ್ಲ ಅಂಶಗಳನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ಬಿಡುಗಡೆಗೊಳಿಸಿರುವ ವಿಡಿಯೋದಲ್ಲಿ ವಿವರವಾಗಿ ತಿಳಿಸಲಾಗಿದ್ದು, ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲಾಗಿದೆ. ಅಲ್ಲದೇ 2023ರಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸರ್ಕಾರಿ ಶಾಲೆಗಳ ಪರಿಸ್ಥಿತಿಯನ್ನು ಸುಧಾರಿಸುವುದು ನಮ್ಮ ಮೊದಲ ಆದ್ಯತೆ ಎಂದು ಡಿಕೆಶಿ ತಿಳಿಸಿದ್ದಾರೆ.