Gruhalakshmi – Peepal Media

ಬಹು ನಿರೀಕ್ಷಿತ ‘ಗೃಹಲಕ್ಷ್ಮಿ ಯೋಜನೆ’ಗೆ ಅಧಿಕೃತ ಚಾಲನೆ ನೀಡಿದ ರಾಹುಲ್ ಗಾಂಧಿ
ಮೈಸೂರು : ಮೈಸೂರಲ್ಲಿ ‘ಗೃಹಲಕ್ಷ್ಮಿ’ ಯೋಜನೆಗೆ ಡಿಜಿಟಲ್ ಬಟನ್ ಒತ್ತುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಅಧಿಕೃತ ಚಾಲನೆ ನೀಡಿದ್ದಾರೆ. ಅದರಂತೆ ಇಂದಿನಿಂದಲೇ ಮನೆ ಯಜಮಾನಿಯರ ಖಾತೆಗೆ 2 ಸಾವಿರ ಹಣ ಜಮಾ ಆಗಲಿದೆ.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಗೃಹಲಕ್ಷ್ಮಿ’ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಈ ಮೂಲಕ ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಇಂದಿನಿಂದಲೇ ಪ್ರತಿ ತಿಂಗಳು2000 ಹಣ ಮನೆ ಯಜಮಾನಿಯರ ಖಾತೆಗೆ ವರ್ಗಾವಣೆಯಾಗಲಿದೆ.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ಸಚಿವರು ಪಾಲ್ಗೊಂಡಿದ್ದರು. ಕಾರ್ಯಕ್ರಮ ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಿದ್ದರು. ಈ ಹಿನ್ನೆಲೆ ಮಹಾರಾಜ ಕಾಲೇಜು ಮೈದಾನದ ಸುತ್ತಮುತ್ತಾ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.

ಸೆಂಚುರಿ ಸಂಭ್ರಮದಲ್ಲಿ ಸಿದ್ದು ಎಂಡ್‌ ಟೀಮ್:‌ ಇಂದು ಮೈಸೂರಿನಲ್ಲಿ ಗೃಹಲಕ್ಷ್ಮಿಗೆ ಸ್ವಾಗತ
ಮೈಸೂರು: ಗ್ಯಾರಂಟಿಗಳಲ್ಲೇ ಬಹಳ ಪ್ರಮುಖ ಗ್ಯಾರಂಟಿಯಾಗಿದ್ದ ಮನೆಯ ಮುಖ್ಯ ಮಹಿಳೆಗೆ‌ ರೂಪಾಯಿಗೆ 2,000 ನೇರ ವರ್ಗಾವಣೆ ಮಾಡುವ ಕಾಂಗ್ರೆಸ್‌ ಪಕ್ಷದ ಕನಸಿನ ಯೋಜನೆ ಇಂದು ಮೈಸೂರಿನಲ್ಲಿ ಕಾರ್ಯರೂಪಕ್ಕೆ ಬರಲಿದೆ.

ಈ ಬೆಲೆಯೇರಿಕೆಯ ಕಾಲದಲ್ಲಿ ಈ ಯೋಜನೆಯು ಕೇವಲ ಬಡವರಿಗಷ್ಟೇ ಅಲ್ಲದೆ ಮಧ್ಯಮ ವರ್ಗಕ್ಕೂ ಆಶಾಕಿರಣದಂತೆ ಗೋಚರಿಸತೊಡಗಿದೆ. ದುಡಿಯಲು ಪಟ್ಟಣಗಳಿಗೆ ಹೋಗುವ ಮಹಿಳೆಯರಿಗಾಗಿ ಉಚಿತ ಬಸ್‌ ಪ್ರಯಾಣವನ್ನು ನೀಡಿದ್ದ ಸಿದ್ಧರಾಮಯ್ಯನವರ ಸರ್ಕಾರ ಈಗ ಹಣವನ್ನೂ ನೀಡುವುದರೊಂದಿಗೆ ಮಹಿಳೆಯರ ಕಣ್ಮಣಿ ಸರ್ಕಾರವಾಗುವತ್ತ ದಾಪುಗಾಲಿಡುತ್ತಿದೆ.

ಸಿಎಂ ತವರು ಜಿಲ್ಲೆ ಮೈಸೂರಿನಿಂದಲೇ ಈ ಬಹು ನಿರೀಕ್ಷಿತ ಯೋಜನೆಗೆ ಚಾಲನೆ ನೀಡಲಾಗುತ್ತಿದ್ದು, ಬೆಳಗ್ಗೆ 11 ಗಂಟೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗೃಹಲಕ್ಷ್ಮಿಗೆ ಚಾಲನೆ ನೀಡಿಲಿದ್ದಾರೆ.

ಕುಟುಂಬ ನಿರ್ವಹಣೆಯ ಹೊಣೆಹೊತ್ತ ನಾಡಿನ ಕೋಟಿಗೂ ಅಧಿಕ ಮಹಿಳೆಯರಿಗೆ ಆರ್ಥಿಕ ನೆರವು ನೀಡಿ, ಬೆಲೆಯೇರಿಕೆಯ ಸಂಕಷ್ಟಗಳ ನಡುವೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಅವರ ಕನಸನ್ನು ನನಸಾಗಿಸುವ ಗೃಹಲಕ್ಷ್ಮಿ ಯೋಜನೆ ಜಾರಿಗೆ ಕ್ಷಣಗಣನೆ ಆರಂಭಗೊಂಡಿದೆ. ಮಹಿಳಾ ಸಬಲೀಕರಣದ ನಮ್ಮ ಪ್ರಯತ್ನಕ್ಕೆ ಕೈಜೋಡಿಸುವಂತೆ ಸಿಎಂ ಮನವಿ ಮಾಡಿದ್ದಾರೆ.

“ಗೃಹಲಕ್ಷ್ಮಿ” ಯೋಜನೆಗೆ ಈ ವರೆಗೆ 1.08 ಕೋಟಿ ಮಹಿಳೆಯರು ಯಶಸ್ವಿಯಾಗಿ ನೋಂದಣಿ ಮಾಡಿಕೊಂಡಿದ್ದು, ಇಂದೇ ಎಲ್ಲಾ ನೋಂದಾಯಿತ ಮಹಿಳೆಯರ ಬ್ಯಾಂಕ್ ಖಾತೆಗೆ ಮಾಸಿಕ ರೂ. 2,000 ನೇರ ವರ್ಗಾವಣೆ ಆಗಲಿದೆ.

ಪ್ರಸಕ್ತ ಸಾಲಿನಲ್ಲಿ ಈ ಕಾರ್ಯಕ್ರಮಕ್ಕಾಗಿ ರೂ. 17,500 ಕೋಟಿ ಮೀಸಲಿಡಲಾಗಿದೆ. ರಾಜ್ಯದ 10,400 ಸ್ಥಳಗಳಲ್ಲಿ ಏಕಕಾಲಕ್ಕೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗಲಿದೆ. ಇದರ ಜೊತೆಗೆ ಈ ಕಾರ್ಯಕ್ರಮದ ನೇರಪ್ರಸಾರ ಕೂಡ ಇರಲಿದೆ.

ಗ್ರಾಪಂ, ನಗರಪಾಲಿಕೆ, ನಗರಸಭೆ ಮಟ್ಟದಲ್ಲಿ ಈ ಕಾರ್ಯಕ್ರಮ ನೇರ ಪ್ರಸಾರವಾಗುತ್ತಿರುವ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸೇರುವ ನಿರೀಕ್ಷೆ ಇದೆ. ಪ್ರತಿ ಜಿಲ್ಲೆಯ ಒಂದೆರಡು ಗ್ರಾಮ ಪಂಚಾಯಿತಿಗಳಲ್ಲಿ ಫಲಾನುಭವಿಗಳೊಂದಿಗೆ ಸಂವಾದ ಕೂಡ ನಡೆಸಲಾಗುತ್ತಿದ್ದು, ಪ್ರತಿ ಪಂಚಾಯಿತಿಗೂ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಮುಖ್ಯ ವೇದಿಕೆಗೆ 140 ಅಡಿ ಸ್ಕ್ರೀನ್ ಅಳವಡಿಸಲಾಗಿದೆ.

ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಶೇ 80ರಷ್ಟು ನೋಂದಣಿಯಾಗಿವೆ. ರಾಜ್ಯದ ಅತ್ಯಂತ ದೊಡ್ಡ ಜಿಲ್ಲೆಯಾಗಿರುವ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ತವರು ಜಿಲ್ಲೆ ಬೆಳಗಾವಿಯಲ್ಲಿ ಸುಮಾರು 10 ಲಕ್ಷ ಫಲಾನುಭವಿಗಳು ಅಂದರೆ ಶೇ. 95ರಷ್ಟು ಜನರು ನೋಂದಣಿ ಮಾಡಿ ಮಾಡಿಕೊಂಡಿದ್ದಾರೆ.

‘ಗೃಹಲಕ್ಷ್ಮಿ’ ನೋಂದಣಿಗೆ ಕ್ಷಣಗಣನೆ ; ಹೇಗೆಲ್ಲಾ ಇರಲಿದೆ ವ್ಯವಸ್ಥೆ?
ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣದ ಅಡಿಯಲ್ಲಿ ರಾಜ್ಯ ಸರ್ಕಾರ ಘೋಷಣೆ ಮಾಡಿದ ‘ಗೃಹಲಕ್ಷ್ಮಿ’ ಯೋಜನೆಗೆ ಸರ್ಕಾರ ಪ್ರಮುಖ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಗೃಹಲಕ್ಷ್ಮಿ ನೋಂದಣಿ ಪ್ರಕ್ರಿಯೆಯಲ್ಲಿ ಮಹಿಳೆಯರಿಗೆ ಮತ್ತು ಅವರ ಸಹಾಯಕರಿಗೆ ಸಮಸ್ಯೆ ಆಗದಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸುವಂತೆ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ‘ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ನಾಳೆ ಅಂದರೆ ಜುಲೈ 19 ರಿಂದ ಅರ್ಜಿ ಸ್ವೀಕಾರ ಆರಂಭವಾಗಲಿದೆ. ಇದು ಕಾಂಗ್ರೆಸ್‌ ಸರ್ಕಾರದ ನಾಲ್ಕನೇ ಗ್ಯಾರಂಟಿ ಯೋಜನೆಯಾಗಿದ್ದು, ಯೋಜನೆಯ ನೋಂದಣಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ ಹಾಗೂ ಅರ್ಜಿ ಸಲ್ಲಿಸಲು ಡೆಡ್‌ಲೈನ್‌ ಕೂಡ ನಿಗದಿ ಪಡಿಸಿಲ್ಲʼ ಎಂದು ತಿಳಿಸಿದ್ದಾರೆ.

2,000 ರೂ ನಗದು ಹಣವನ್ನು ಫಲಾನುಭವಿಯ ಆಧಾರ್ ಸಂಖ್ಯೆಗೆ ಲಿಂಕ್ ಮಾಡಿದ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ಆಗಸ್ಟ್ 16 ರಿಂದ ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ವರ್ಗಾಯಿಸಲಾಗುತ್ತದೆ. ಫಲಾನುಭವಿಯು ಹೊಸ ಬ್ಯಾಂಕ್ ಖಾತೆಯನ್ನು ಒದಗಿಸಿದ್ದರೆ (ಆಕೆಯ ಆಧಾರ್ ಸಂಖ್ಯೆಗೆ ಲಿಂಕ್ ಮಾಡಲಾದ ಖಾತೆಯನ್ನು ಹೊರತುಪಡಿಸಿ), ಮೊತ್ತವನ್ನು ಆರ್‌ಟಿಜಿಎಸ್ ಮೂಲಕ ವರ್ಗಾಯಿಸಲಾಗುತ್ತದೆ” ಎಂದು ಸಚಿವರು ಹೇಳಿದರು.

ಈಗಾಗಲೇ ತಿಳಿಸಿದಂತೆ BPL, APL ಅಥವಾ ಅಂತ್ಯೋದಯ ಕಾರ್ಡ್ ಗಳಲ್ಲಿ ಸೂಚಿಸಲಾದ ಕುಟುಂಬದ ಮಹಿಳೆಯರಲ್ಲಿ ಮನೆಯ ಹಿರಿಯ ಸದಸ್ಯೆ ಆಗಿರಬೇಕು. ಆಧಾರ್ ಕಾರ್ಡ್ ಮೂಲಕ ಲಿಂಕ್ ಆದ ಬ್ಯಾಂಕ್ ಗೆ ಮಹಿಳೆಗೆ ಹಣ ವರ್ಗಾವಣೆ ಆಗುವುದು. ಪ್ರಮುಖವಾಗಿ ಮಹಿಳೆಯ ಗಂಡ ಅಥವಾ ಮಗ GST ಪಾವತಿದಾರ ಆಗಿರಬಾರದು ಎಂದು ತಿಳಿಸಲಾಗಿದೆ.

ಅರ್ಜಿ ಸಲ್ಲಿಕೆ ಹೇಗೆ? ಅಲ್ಲಿನ ವ್ಯವಸ್ಥೆಗಳೇನು?
ಗೃಹಲಕ್ಷ್ಮಿ ಯೋಜನೆಗೆ ಸರ್ಕಾರ ನಿಗದಿ ಪಡಿಸಿದ ಗ್ರಾಮ ಒನ್, ಕರ್ನಾಟಕ ಒನ್ ಬೆಂಗಳೂರು ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ನಿಮ್ಮ ಹತ್ತಿರದಲ್ಲಿರುವ ಈ ಯಾವುದಾದರೂ ಒಂದು ಕೇಂದ್ರಕ್ಕೆ ತೆರಳಿ ನೀವು ಅರ್ಜಿ ಸಲ್ಲಿಸಬಹುದು. ಗೃಹಜ್ಯೋತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದಂತೆ ಇದಕ್ಕೆ ಸಲ್ಲಿಸಲು ಸಾಧ್ಯವಿಲ್ಲ.

ರೇಷನ್‌ ಕಾರ್ಡ್‌ನಲ್ಲಿ ಗುರುತಿಸಲಾಗಿರುವ ಕುಟುಂಬದ ಯಜಮಾನಿ ಮಹಿಳೆಗೆ ದಿನಾಂಕ, ಸಮಯ, ಹಾಗೂ ನೋಂದಣಿ ಮಾಡಿಸುವ ಸ್ಥಳದ ವಿವರವನ್ನು ತಿಳಿಸಲಾಗುವುದು. ಆನಂತರವೇ ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಸಲ್ಲಿಸಲು ಸಮಯದ ಮಿತಿ ಇಲ್ಲ. ಆದರೆ ಫಲಾನುಭವಿಗಳಿಗೆ ಆಗಸ್ಟ್ ತಿಂಗಳ ಎರಡನೇ ವಾರದ ಅಂತ್ಯದ ವೇಳೆಗೆ ಹಣ ವರ್ಗಾವಣೆ ಆಗಲಿದೆ.

* ಇನ್ನು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವವರಿಗೆ ಯಾವುದೇ ತೊಂದರೆ ಆಗದಂತೆ, ಪ್ರತೀ ನೋಂದಣಿ ಕೇಂದ್ರಕ್ಕೆ ಒಬ್ಬರಂತೆ ಮೇಲ್ವಿಚಾರಣೆ ಅಧಿಕಾರಿಯನ್ನು ನೇಮಿಸಲಾಗುವುದು.
* ಕೆಲವು ಸೂಕ್ಷ್ಮ ಪ್ರದೇಶ ಮತ್ತು ಜನದಟ್ಟಣೆ ಜಾಸ್ತಿ ಇರುವ ಕಡೆಗಳಲ್ಲಿ ಓರ್ವ ಪೊಲೀಸ್ ಸಿಬ್ಬಂದಿಯನ್ನೂ ನೇಮಿಸಲಾಗುವುದು.
* ನೋಂದಣಿ ಕೇಂದ್ರದಲ್ಲಿ ವಿದ್ಯುತ್ ತೊಂದರೆ ಆಗದಂತೆ ಬ್ಯಾಟರಿ ವ್ಯವಸ್ಥೆ ಮತ್ತು ಸುಸ್ಥಿತಿಯಲ್ಲಿ ಇರುವ ಪ್ರಿಂಟರ್ ವ್ಯವಸ್ಥೆ ಮಾಡಲಾಗುವುದು. ಇದರ ಸಂಪೂರ್ಣ ನಿರ್ವಹಣೆ ಕೇಂದ್ರದ ಮೇಲ್ವಿಚಾರಣೆ ಅಧಿಕಾರಿಯ ಮೇಲಿರುತ್ತದೆ.
* ಈ ಬಗ್ಗೆಹೆಚ್ಚಿನ ಮಾಹಿತಿಗಾಗಿ ಪ್ರತೀ ತಾಲ್ಲೂಕು ಕೇಂದ್ರಗಳಲ್ಲಿ ಹೆಲ್ಪ್ ಡೆಸ್ಕ್ ವ್ಯವಸ್ಥೆ ಮಾಡಲಾಗುವುದು.
* ನೋಂದಣಿ ಕಾರ್ಯಕ್ಕೆ ಅಗತ್ಯವಿರುವ ಪ್ರಜಾಪ್ರತಿನಿಧಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ತರಬೇತಿ ಕೊಡಿಸಲಾಗುವುದು.
* ಮಳೆ ಮತ್ತು ಬಿಸಿಲಿಗೆ ಪ್ರತೀ ನೋಂದಣಿ ಕೇಂದ್ರದಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು
* ಪ್ರತೀ ನೋಂದಣಿ ಕೇಂದ್ರಕ್ಕೆ ನಿಯೋಜಿಸಲಾದ ನೋಡಲ್ ಅಧಿಕಾರಿಯ ಮಾಹಿತಿಗಳನ್ನು ಇ – ಆಡಳಿತ ಇಲಾಖೆ ಒದಗಿಸುವ ಲಿಂಕ್ ನಲ್ಲಿ ಅಪ್ ಲೋಡ್ ಮಾಡಲಾಗುವುದು.

ಇವಿಷ್ಟು ಪ್ರತೀ ಕೇಂದ್ರಗಳಲ್ಲೂ ಮಹಿಳೆಯರಿಗೆ ಮತ್ತು ಅವರ ಸಹಾಯಕರಿಗೆ ಯಾವುದೇ ಸಮಸ್ಯೆ ಆಗದಂತೆ ಅಧಿಕಾರಿಗಳು ಅನುಸರಿಸುವ ಕ್ರಮಗಳು ಎಂಬುದಾಗಿ ಇಲಾಖೆ ಸುತ್ತೋಲೆ ಹೊರಡಿಸಿದೆ.

‘ಗೃಹಲಕ್ಷ್ಮಿ’ಗೆ ಡೇಟ್ ಫಿಕ್ಸ್, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರಿಂದ ಚಾಲನೆ ಸಾಧ್ಯತೆ
ಕರ್ನಾಟಕದ ಮಹಿಳೆಯರ ಭಾರೀ ನಿರೀಕ್ಷೆಯ ‘ಗೃಹ ಲಕ್ಷ್ಮಿ’ ಯೋಜನೆಗೆ ಜುಲೈ 16 ರಿಂದ ಚಾಲನೆ ಸಿಗಲಿದೆ. ಈ ಹಿಂದೆ ಜುಲೈ 14 ಕ್ಕೆ ಗೃಹಲಕ್ಷ್ಮಿ ಚಾಲನೆ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದರು. ಆದರೆ ಜುಲೈ 16 ರಿಂದ 18 ರ ವರೆಗೆ ದೇಶದ ಎಲ್ಲಾ ಪ್ರತಿಪಕ್ಷಗಳ ಸಭೆಯ ಹಿನ್ನೆಲೆಯಲ್ಲಿ ಅಂದೇ ಚಾಲನೆ ಸಿಗುವ ಬಗ್ಗೆ ಮಾಹಿತಿ ಹೊರಬಿದ್ದಿದೆ.

‘ಗೃಹಲಕ್ಷ್ಮಿ’ ಯೋಜನೆಗೆ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾಗಾಂಧಿ ಅಥವಾ ಪ್ರಿಯಾಂಕಾ ಗಾಂಧಿಯವರಿಂದ ಚಾಲನೆ ಸಿಗುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಜುಲೈ 16 ರಿಂದ 18ರವರೆಗೆ ಬೆಂಗಳೂರಿನಲ್ಲಿ ಪ್ರತಿಪಕ್ಷ ನಾಯಕರ ಸಭೆಯ ಹಿನ್ನೆಲೆಯಲ್ಲಿ, ಇದೇ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿಗೆ ತರಲು ನಿರ್ಧರಿಸಲಾಗಿದೆ ಎನ್ನಲಾಗುತ್ತಿದೆ.

ಒಂದು ಕಡೆ ‘ಶಕ್ತಿ’ ಯೋಜನೆಯಡಿಯಲ್ಲಿ ರಾಜ್ಯದ ಮಹಿಳೆಯರು ಉಚಿತ ಬಸ್‌ ಪ್ರಯಾಣದ ಖುಷಿಯಲ್ಲಿದ್ದಾಗಲೇ, ‘ಗೃಹಜ್ಯೋತಿ’ಯ ಅರ್ಜಿ ಸ್ವೀಕಾರ ಮಹಿಳೆಯರಿಗೆ ಮತ್ತೊಂದು ಕೊಡುಗೆ ಕೊಟ್ಟಂತಾಗಿದೆ‌. ಕಾಂಗ್ರೆಸ್ ಸರ್ಕಾರ ‘ಗೃಹಲಕ್ಷ್ಮಿ’ ಮೂಲಕ ಬ್ಯಾಕ್ ಟು ಬ್ಯಾಕ್ ಮತ್ತೊಂದು ಸಿಹಿ ಸುದ್ದಿ ಕೊಡಲು ಹೊರಟಿದೆ. ಅಂದುಕೊಂಡಂತೆ ಆದರೆ ಆಗಸ್ಟ್ 15 ರ ಆಸುಪಾಸಿನಲ್ಲಿ ರಾಜ್ಯದ ಪ್ರತಿ ಮನೆಯ ಒಡತಿಯ ಬ್ಯಾಂಕ್ ಖಾತೆಗೆ 2,000 ರೂ ಬರಲಿದೆ.

ಅಂದುಕೊಂಡಂತೆ ಆದರೆ ಜುಲೈ 18ರಂದು ಅರ್ಜಿ ಸ್ವೀಕರಿಸಲು ಪ್ರಕ್ರಿಯೆ ಆರಂಭವಾಗಬಹುದು. ರಾಜ್ಯಾದ್ಯಂತ ಇರುವ ಮನೆಯ ಒಡತಿಯರು ಅರ್ಜಿ ಸಲ್ಲಿಕೆ ಮಾಡಲಿದ್ದಾರೆ. ರಾಜ್ಯ ಸರ್ಕಾರದ ವೆಬ್ ಪೋರ್ಟಲ್ ಸೇವಾಸಿಂಧು ಮೂಲಕ ಅಥವಾ ಸಮೀಪದ ನಾಡ ಕಚೇರಿ, ತಾಲ್ಲೂಕು ಕಚೇರಿಗಳಲ್ಲಿ ಗೃಹಲಕ್ಷ್ಮಿ ಅರ್ಜಿ ಸ್ವೀಕಾರ ಆಗುವ ಸಾಧ್ಯತೆ ಇದೆ. ಆ ನಂತರ ಅವುಗಳ ಪರಿಶೀಲನೆ ಮಾಡಿ ಒಂದು ತಿಂಗಳ ಒಳಗೆ ಎಲ್ಲರ ಖಾತೆಗೆ ಹಣ ಹಾಕಲು ಸರ್ಕಾರ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಸಧ್ಯ ಜುಲೈ 16 ಕ್ಕೆ ಚಾಲನೆ ಸಿಕ್ಕರೆ ಜುಲೈ 18ರ ನಂತರ ಅರ್ಜಿ ಸ್ವೀಕಾರವಾಗಲಿದೆ.

ರಾಜ್ಯ ಕುಟುಂಬ ಕಲ್ಯಾಣ ಇಲಾಖೆಯು ಈ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮನೆಯ ಯಜಮಾನಿ ಯಾರೆಂದು ಘೋಷಿಸುವ, ಆಧಾರ್ ಕಾರ್ಡ್, ಆಧಾರ್ ಕಾರ್ಡ್ ಜೊತೆಗೆ ಲಿಂಕ್ ಇರುವ ಫೋನ್ ನಂಬರ್, ರೇಷನ್ ಕಾರ್ಡ್, ವೋಟರ್ ಐಡಿ ಕಾರ್ಡ್ ನಂಬರ್ ಸೇರಿದಂತೆ ಹಲವಾರು ಮಾಹಿತಿಗಳನ್ನು ನೀಡುವಂತೆ ಸೂಚಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ.

‘ಗೃಹಲಕ್ಷ್ಮಿ’ಗೆ ಕೂಡಿ ಬಂತು ಮುಹೂರ್ತ ; ನಾಳೆ (ಜೂನ್ 27)ಯಿಂದಲೇ ಅರ್ಜಿ ಸ್ವೀಕಾರ
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ‘ಶಕ್ತಿ ಯೋಜನೆ’ ಅನುಷ್ಠಾನಗೊಂಡ ಬೆನ್ನಲ್ಲೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈಗ ‘ಗೃಹಲಕ್ಷ್ಮಿ ಯೋಜನೆ’ಗೆ ಸರ್ವ ಸಿದ್ಧತೆ ಮಾಡಿಕೊಂಡಿದೆ. ಅದರ ಸಲುವಾಗಿ ಈಗ ‘ಗೃಹಲಕ್ಷ್ಮಿ ಯೋಜನೆ’ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ನಾಳೆಯಿಂದ ಆರಂಭಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್ ಸರ್ಕಾರದಿಂದ ಮನೆಯ ಹಿರಿಯ ಮಹಿಳೆಗೆ ಪ್ರತಿ ತಿಂಗಳು ರೂ.2000 ನೀಡುವಂತ ‘ಗೃಹಲಕ್ಷ್ಮಿ ಯೋಜನೆ’ ಘೋಷಿಸಿತ್ತು. ಈಗ ಈ ಯೋಜನೆಗೆ ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸ್ವೀಕೃತಿ ಪ್ರಕ್ರಿಯೆ ನಾಳೆ ಮಂಗಳವಾರದಿಂದ ಚಾಲನೆ ಸಿಗಲಿದೆ ಎಂದು ತಿಳಿಸಿದ್ದಾರೆ.

ಈ ಹಿಂದೆ ಜೂನ್ 15 ಕ್ಕೇ ಅರ್ಜಿ ಸ್ವೀಕೃತಿ ಪ್ರಕ್ರಿಯೆ ಆರಂಭವಾಗಬೇಕಿತ್ತು. ಆದರೆ ತಾಂತ್ರಿಕ ಮತ್ತು ಕೆಲವು ಆಡಳಿತಾತ್ಮಕ ಕಾರಣದಿಂದ ತಡವಾಗಿತ್ತು. ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ಆರಂಭಗೊಂಡಿರಲಿಲ್ಲ. ಆನ್ ಲೈನ್ ಮತ್ತು ಆಫ್ ಲೈನ್ ಎರಡೂ ಪ್ರಕ್ರಿಯೆಯಲ್ಲಿ ಅರ್ಜಿ ಸಲ್ಲಿಕೆಗೆ ಎಲ್ಲಾ ಸಿದ್ಧತೆ ಪೂರ್ಣಗೊಂಡ ನಂತರ ಈಗ ಆರಂಭಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಮಹಿಳೆಯರು ಗೃಹ ಲಕ್ಷ್ಮೀ ಯೋಜನೆಗಾಗಿ ಸೇವಾ ಸಿಂಧುವಿನ ಪ್ರತ್ಯೇಕ ವೆಬ್ ಸೈಟ್ https://sevasindhugs.karnataka.gov.in/about_kannada.html ಈ ಲಿಂಕ್ ನಲ್ಲಿ ಮೂಲಕ ಸಲ್ಲಿಸಬಹುದಾಗಿದೆ.

ಇದಲ್ಲದೇ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಂದರೆ ಸಮೀಪದ ಗ್ರಾಮ ಒನ್, ಕರ್ನಾಟಕ ಓನ್, ಬೆಂಗಳೂರು ಒನ್ ಸೆಂಟರ್, ನಾಡ ಕಛೇರಿ, ತಾಲ್ಲೂಕು ದಂಡಾಧಿಕಾರಿಗಳ ಕಛೇರಿಗಳಲ್ಲಿಯೂ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರತಿ ಕುಟುಂಬದ ಯಜಮಾನಿಗೆ 2,000 ರೂಪಾಯಿಯ ಮಾಸಿಕ ಭತ್ಯೆ ನೀಡುವ ಬಗೆಗಿನ ಪ್ರಸ್ತಾಪದಲ್ಲಿ ಒಂದಷ್ಟು ನಿಯಮಗಳನ್ನು ಹೊರಡಿಸಲಾಗಿದೆ. ಅದರಂತೆ

* ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ಗುರುತಿಸಿಕೊಂಡ ಮಹಿಳೆ ಈ ಯೋಜನೆಯ ಅರ್ಹ ಫಲಾನುಭವಿ ಆಗಿರುತ್ತಾರೆ.
* ಒಂದು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರು ಇದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸತಕ್ಕದ್ದು.
* ಅರ್ಜಿದಾರರು ಸೇವಾಸಿಂಧು ಪೋರ್ಟಲ್ ಅಥವಾ ತಾವೇ ಖುದ್ದು ಅಧಿಕಾರಿಗಳ ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.
* ಯೋಜನೆಯ ಸೌಲಭ್ಯ ಪಡೆಯುವ ಅರ್ಜಿದಾರರ ಬ್ಯಾಂಕ್ ಖಾತೆಯ ವಿವರ ಮತ್ತು ಆಧಾರ್ ಕಾರ್ಡ್ ಗಳನ್ನು ಜೋಡಣೆ ಮಾಡಬೇಕಿದೆ.
* ಅರ್ಜಿಯಲ್ಲಿನ ಅಂಶಗಳು ತಪ್ಪೆಂದು ಕಂಡುಬಂದಲ್ಲಿ ಅರ್ಜಿದಾರರು ಅಲ್ಲಿಯವರೆಗೆ ತಗೆದುಕೊಂಡ ಹಣವನ್ನು ವಸೂಲಿ ಮಾಡಿ, ಸೂಕ್ತ ಕ್ರಮ ತಗೆದುಕೊಳ್ಳಲಾಗುವುದು.
* ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವವರು, ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಹೆಸರಿನಲ್ಲಿ ಅರ್ಜಿ ಸಲ್ಲಿಸಬೇಕು‌.
* ಅರ್ಜಿಯನ್ನು ಗ್ರಾಮ ಒನ್ ಕೇಂದ್ರ, ಬೆಂಗಳೂರು ಒನ್ ಕೇಂದ್ರ, ಸೈಬರ್ ಕೆಫೆಗಳ ಮೂಲಕ ಸಲ್ಲಿಸಬಹುದು‌.
* ಭೌತಿಕವಾಗಿ ಅರ್ಜಿ ಸಲ್ಲಿಸುವವರು ತಮ್ಮ ಸಮೀಪದ ನಾಡ ಕಛೇರಿ ಮೂಲಕ ಅರ್ಜಿ ಸಲ್ಲಿಸಬಹುದು.
* ಗೃಹಲಕ್ಷ್ಮಿ ಅರ್ಜಿಗಳನ್ನು ಪರಿಶೀಲಿಸಿ ಮಂಜೂರಾತಿ ನೀಡಲು ಸಂಬಂಧಿಸಿದ ತಾಲ್ಲೂಕಿನ ಶಿಶು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳನ್ನು ಈ ಯೋಜನೆಯ ಅಧಿಕಾರಿಗಳು ಎಂದು ಮಂಜೂರಾತಿ ಪ್ರಾಧಿಕಾರದ ಅಧಿಕಾರಿಗಳೆಂದು ಪರಿಗಣಿಸಲಾಗಿದೆ.

ಮನೆ ಯಜಮಾನಿಗೆ 2000 ರೂ: ಅರ್ಜಿ ಸಲ್ಲಿಸೋದು ಹೇಗೆ?
ಈಗಾಗಲೇ ‘ಶಕ್ತಿ ಯೋಜನೆ’ ಹೆಸರಿನ ಅಡಿಯಲ್ಲಿ ರಾಜ್ಯದ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣವನ್ನು ಅನುಷ್ಠಾನಕ್ಕೆ ತಂದ ಕಾಂಗ್ರೆಸ್ ಸರ್ಕಾರ, ಈಗ ‘ಗೃಹಲಕ್ಷ್ಮಿ’ ಯೋಜನೆಗೆ ಮಾರ್ಗಸೂಚಿ ಹೊರಡಿಸಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿಡುಗಡೆ ಮಾಡಿರುವ ಪ್ರಸ್ತಾವನೆಯಲ್ಲಿ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳು ಯಾರು, ಯಾವ ರೀತಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು, ನಂತರ ಯಾವಾಗ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ಬರಲಿದೆ ಎಂಬ ಬಗ್ಗೆ ತಿಳಿಸಿದೆ.

ಮೇ 20 ರಂದು ಕರೆದ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡ ಗೃಹಲಕ್ಷ್ಮಿ ಯೋಜನೆಯಲ್ಲಿ ಪ್ರತಿ ಕುಟುಂಬದ ಯಜಮಾನಿಗೆ 2,000 ರೂಪಾಯಿಯ ಮಾಸಿಕ ಭತ್ಯೆ ನೀಡುವ ಬಗೆಗಿನ ಪ್ರಸ್ತಾಪದಲ್ಲಿ ಒಂದಷ್ಟು ನಿಯಮಗಳನ್ನು ಹೊರಡಿಸಲಾಗಿದೆ. ಅದರಂತೆ

* ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ಗುರುತಿಸಿಕೊಂಡ ಮಹಿಳೆ ಈ ಯೋಜನೆಯ ಅರ್ಹ ಫಲಾನುಭವಿ ಆಗಿರುತ್ತಾರೆ.

* ಒಂದು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರು ಇದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸತಕ್ಕದ್ದು.

* ಯೋಜನೆಯ ಫಲಾನುಭವಿಗಳು ಇದೇ ಜೂನ್ 15 ರಿಂದ ಜುಲೈ 15 ರ ವರೆಗೆ ಅರ್ಜಿ ಸಲ್ಲಿಸಬಹುದು.

* ಅರ್ಜಿದಾರರು ಸೇವಾಸಿಂಧು ಪೋರ್ಟಲ್ ಅಥವಾ ತಾವೇ ಖುದ್ದು ಅಧಿಕಾರಿಗಳ ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.

* ಯೋಜನೆಯ ಸೌಲಭ್ಯ ಪಡೆಯುವ ಅರ್ಜಿದಾರರ ಬ್ಯಾಂಕ್ ಖಾತೆಯ ವಿವರ ಮತ್ತು ಆಧಾರ್ ಕಾರ್ಡ್ ಗಳನ್ನು ಜೋಡಣೆ ಮಾಡಬೇಕಿದೆ.

* ಜುಲೈ 15 ರ ನಂತರ ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲಿಸಿ, ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು.

* ಅರ್ಜಿಯಲ್ಲಿನ ಅಂಶಗಳು ತಪ್ಪೆಂದು ಕಂಡುಬಂದಲ್ಲಿ ಅರ್ಜಿದಾರರು ಅಲ್ಲಿಯವರೆಗೆ ತಗೆದುಕೊಂಡ ಹಣವನ್ನು ವಸೂಲಿ ಮಾಡಿ, ಸೂಕ್ತ ಕ್ರಮ ತಗೆದುಕೊಳ್ಳಲಾಗುವುದು.

* ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವವರು, ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಹೆಸರಿನಲ್ಲಿ ಅರ್ಜಿ ಸಲ್ಲಿಸಬೇಕು‌.

* ಅರ್ಜಿಯನ್ನು ಗ್ರಾಮ ಒನ್ ಕೇಂದ್ರ, ಬೆಂಗಳೂರು ಒನ್ ಕೇಂದ್ರ, ಸೈಬರ್ ಕೆಫೆಗಳ ಮೂಲಕ ಸಲ್ಲಿಸಬಹುದು‌.

* ಭೌತಿಕವಾಗಿ ಅರ್ಜಿ ಸಲ್ಲಿಸುವವರು ತಮ್ಮ ಸಮೀಪದ ನಾಡ ಕಛೇರಿ ಮೂಲಕ ಅರ್ಜಿ ಸಲ್ಲಿಸಬಹುದು.

* ಗೃಹಲಕ್ಷ್ಮಿ ಅರ್ಜಿಗಳನ್ನು ಪರಿಶೀಲಿಸಿ ಮಂಜೂರಾತಿ ನೀಡಲು ಸಂಬಂಧಿಸಿದ ತಾಲ್ಲೂಕಿನ ಶಿಶು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳನ್ನು ಈ ಯೋಜನೆಯ ಅಧಿಕಾರಿಗಳು ಎಂದು ಮಂಜೂರಾತಿ ಪ್ರಾಧಿಕಾರದ ಅಧಿಕಾರಿಗಳೆಂದು ಪರಿಗಣಿಸಲಾಗಿದೆ.

ಅದರಂತೆ ಜೂನ್ 15 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಜುಲೈ 15 ಕ್ಕೆ ಕೊನೆಯ ದಿನವಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.