gst – Peepal Media

ಕರ್ನಾಟಕಕ್ಕೆ ಜಿಎಸ್ಟಿ ಮೋಸ : ನಿರ್ಮಲಾ ಸೀತಾರಾಮನ್ ಅವರಿಗೆ ಸಚಿವ ಕೃಷ್ಣ ಬೈರೇಗೌಡ ಸವಾಲ್..!
* ರಾಜ್ಯಕ್ಕೆ ಒಟ್ಟಾರೆ ರೂ.11,495 ಕೋಟಿ ಹಣ ಕೇಂದ್ರದಿಂದ ಬಾಕಿ
* ಹಣಕಾಸು ಆಯೋಗದ ಶಿಫಾರಸು ಹಿಂಪಡೆಯುವಂತೆ ಕೋರಿದ ಸೀತಾರಾಮನ್
* ಓಟು ಒತ್ತೋಕೆ ಕರ್ನಾಟಕ ಬೇಕು, ನಮ್ಮ ಪಾಲಿನ ಹಣ ಕೇಳಿದರೆ ಮಾತ್ರ ಮೋಸವಾ?
* ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದಿಂದ ಬಿಡಿಗಾಸೂ ಬೇಕಾಗಿಲ್ಲ: ಕೃಷ್ಣ ಬೈರೇಗೌಡ

ಕರ್ನಾಟದಿಂದ ರಾಜ್ಯಸಭೆಗೆ ಆಯ್ಕೆಯಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದಲೇ ರಾಜ್ಯಕ್ಕೆ ತೆರಿಗೆ ಹಂಚಿಕೆ ಅನುದಾನದಲ್ಲಿ ಅನ್ಯಾಯವಾಗುತ್ತಿದೆ. ಮಾರ್ಚ್ 31ಕ್ಕೆ ಅವರು ಮೈಸೂರಿಗೆ ಆಗಮಿಸುತ್ತಿದ್ದು, ಈ ಬಗ್ಗೆ ಬಹಿರಂಗ ಚರ್ಚೆಗೆ ಅವರು ಸಿದ್ದರಿದ್ದಾರ? ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸವಾಲೆಸೆದಿದ್ದಾರೆ.

ರಾಜ್ಯಕ್ಕೆ ಜಿಎಸ್ಟಿ ತೆರಿಗೆ ಹಂಚಿಕೆ ಬಾಕಿ ಬಗ್ಗೆ ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಸಚಿವೆ ನಿರ್ಮಲಾ ಸೀತಾರಾಮನ್, “ ಕರ್ನಾಟಕಕ್ಕೆ ನೀಡಬೇಕಿರುವ ತೆರಿಗೆ ಪಾಲಿನಲ್ಲಿ ಯಾವುದೇ ಹಣ ಬಾಕಿ ಇಲ್ಲ” ಎಂದು ಹೇಳಿದ್ದರು. ಇದರ ಬೆನ್ನಿಗೆ ಸೋಮವಾರ ವಿಕಾಸಸೌಧದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳನ್ನು ದಾಖಲೆ ಸಮೇತ ಬಿಚ್ಚಿಟ್ಟರು.

ಯಾವುದೇ ರಾಜ್ಯಕ್ಕೆ 2019- 20ರಲ್ಲಿ ಕೊಟ್ಟಿದ್ದಕ್ಕಿಂತ ಕಡಿಮೆ ಅನುದಾನವನ್ನು ಕೊಡುವಂತಿಲ್ಲ ಎಂದು ಹಣಕಾಸು ಆಯೋಗ ಹೇಳುತ್ತದೆ. ಹಣಕಾಸು ಆಯೋಗದವರು 2019-20ರಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಬಂದ ತೆರಿಗೆ ಪಾಲಿಗಿಂತ 2020-21 ರಲ್ಲಿ ರೂ. 5495 ಕೋಟಿ ಹಣ ಕಡಿಮೆಯಾಗಿತ್ತು. ಈ ಹಣವನ್ನು ರಾಜ್ಯಕ್ಕೆ ತುಂಬಿಕೊಡಬೇಕು ಎಂದು ಸ್ವತಃ ಹಣಕಾಸು ಆಯೋಗ ಶಿಫಾರಸ್ಸು ಮಾಡಿದರೂ ಸಚಿವೆ ನಿರ್ಮಲಾ ಸೀತಾರಾಮನ್ ಇದನ್ನು ತಡೆಹಿಡಿದದ್ದು ಏಕೆ? ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಪ್ರಶ್ನಿಸಿದರು.

ರಾಜ್ಯದ ಪಾಲಿನ ನ್ಯಾಯಯುತ ತೆರಿಗೆ ಹಂಚಿಕೆ ನಷ್ಟ ಪರಿಹಾರ ಕೇಳಿದರೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2021 ನೇ ವರ್ಷದ ಅಂತಿಮ ವರದಿಯಲ್ಲಿ ಹಣಕಾಸು ಆಯೋಗ ಶಿಫಾರಸ್ಸು ಮಾಡಿಲ್ಲ ಎನ್ನುತ್ತಿದ್ದಾರೆ. ಆದರೆ, ಹಣಕಾಸು ಆಯೋಗದ ಅಂತಿಮ ವರದಿಯ 36ನೇ ಪುಟದಲ್ಲಿ ಕರ್ನಾಟಕಕ್ಕೆ ನಷ್ಟ ತುಂಬಿಕೊಡಬೇಕು ಎಂದು ಬರೆಯಲಾಗಿದೆಯಲ್ಲ ಇದೇನು? ಎಂದು ಅವರು ಕುಟುಕಿದರು.

2019-20ರಲ್ಲಿ ರಾಜ್ಯಕ್ಕೆ ಕೇಂದ್ರದಿಂದ ರೂ. 36675 ಕೋಟಿ ತೆರಿಗೆ ಪಾಲು ಬಂದಿತ್ತು. 2020-21ಕ್ಕೆ ಕೇವಲ ರೂ.31180 ಕೋಟಿಗೆ ಕುಸಿದಿತ್ತು. ಹೀಗಾಗಿ ರಾಜ್ಯಕ್ಕೆ ಆಗಿರುವ ನಷ್ಟ ರೂ. 5495 ಕೋಟಿ ಹಣವನ್ನು ಕೇಂದ್ರ ಸರ್ಕಾರ ನೀಡಬೇಕು ಎಂದು ಹಣಕಾಸು ಆಯೋಗ ಶಿಫಾರಸು ಮಾಡಿದೆ. ಆದರೆ, ಈ ಹಣ ಈವರೆಗೆ ರಾಜ್ಯಕ್ಕೆ ಬಂದಿಲ್ಲ. 2021-26ನೇ ಸಾಲಿನಲ್ಲಿ ರೂ.6,000 ಕೋಟಿ ಶಿಫಾರಸು ಮಾಡಲಾಗಿದೆ. ಒಟ್ಟಾರೆ, ರೂ.11495 ಕೋಟಿ ಹಣ ರಾಜ್ಯಕ್ಕೆ ಬರಬೇಕಿದೆ.

ಈ ಬಗ್ಗೆ ಪ್ರಶ್ನೆ ಮಾಡಿದರೆ ನಿರ್ಮಲಾ ಸೀತಾರಾಮನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳುತ್ತಿರುವುದು ಸುಳ್ಳು ಎನ್ನುತ್ತಿದ್ದಾರೆ. ಅಸಲಿಗೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಸೆಪ್ಟೆಂಬರ್ 17 2020ರಲ್ಲಿ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗಿ ವಿಶೇಷ ಅನುದಾನವನ್ನು ಬಿಡುಗಡೆ ಮಾಡಲು ಕೋರಿದ್ದರು. ಬಸವರಾಜು ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಸೀತಾರಾಮನ್ ಅವರಿಗೆ ಪತ್ರ ಬೆರೆದಿದ್ದರು. ಈ ಎಲ್ಲಾ ವಿಚಾರಗಳೂ ದಿನಪತ್ರಿಕೆಗಳಲ್ಲೂ ಸಹ ವರದಿಯಾಗಿತ್ತು. ಹಾಗಾದರೆ  ಯಡಿಯೂರಪ್ಪ ಹಾಗೂ ಬೊಮ್ಮಾಯಿಯವರೂ ಸಹ ಸುಳ್ಳು ಹೇಳಿದ್ದರಾ? ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾತಿನಲ್ಲೇ ತಿವಿದರು.

ಸಚಿವೆ ನಿರ್ಮಲಾ ಸೀತಾರಾಮನ್ ಅವರು ಒಂದೆಡೆ ಹಣಕಾಸು ಆಯೋಗದ ಒಂದೇ ಒಂದು ಶಿಫಾರಸ್ಸನ್ನು ಸಹ ನಾವು ತಿದ್ದಲು ಹೋಗುವುದಿಲ್ಲ ಎನ್ನುತ್ತಾರೆ. ಮತ್ತೊಂದೆಡೆ ರಾಜ್ಯಗಳಿಗೆ ನೀಡುವ ವಿಶೇಷ ಅನುದಾನವನ್ನು ಹಿಂಪಡೆಯುವಂತೆ ಹಣಕಾಸು ಆಯೋಗಕ್ಕೆ ಮನವಿ ಮಾಡಲಾಗಿದೆ ಎಂದು ಲೋಕಸಭೆಯಲ್ಲೇ ಉತ್ತರ ನೀಡುತ್ತಾರೆ. ಹಾಗಾದ್ರೆ ರಾಜ್ಯದ ಪಾಲಿನ ಹಣವನ್ನು ತಡೆಹಿಡಿಯಲು ಮಾತ್ರ ಇವರ ಕಾನೂನುಗಳು ಇರುವುದಾ? ಎಂದು ವಿಷಾದಿಸಿದರು.

ನಾವು ಕೇಳುತ್ತಿರುವುದು ಭಿಕ್ಷೆಯಲ್ಲ..!
ಹಣಕಾಸು ಆಯೋಗ ಶಿಫಾರಸು ಮಾಡಿದ ನಮ್ಮ ಅನುದಾನವನ್ನು ನಾವು ಸಂವಿಧಾನಾತ್ಮಕವಾಗಿಯೇ ಕೇಳುತ್ತಿದ್ದೇವೆಯೇ ವಿನಃ ನಾವೇನು ಭಿಕ್ಷೆ ಕೇಳುತ್ತಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಆಕ್ರೋಶ ಹೊರಹಾಕಿದರು.

ನಮ್ಮ ರಾಜ್ಯದ ಹಕ್ಕನ್ನು ಕೇಳಿದರೆ ಕೇಂದ್ರ ಸರ್ಕಾರ ನಾವು ಸುಳ್ಳು ಹೇಳುತ್ತಿದ್ದೇವೆ ಎಂದು ಆರೋಪ ಹೊರಿಸಿ ಕರ್ನಾಟಕದ ಜನರಿಗೆ ಅನ್ಯಾಯ ಮಾಡುತ್ತಿದೆ. ಸ್ವತಃ ಕರ್ನಾಟಕದಿಂದ ಆಯ್ಕೆಯಾದ ನಿರ್ಮಲಾ ಸೀತಾರಾಮನ್ ಅವರು ಹೀಗೆ ರಾಜ್ಯದ ಹಿತದ ವಿಚಾರದಲ್ಲಿ ಸುಳ್ಳು ಹೇಳಿ ಜನರನ್ನು ಗೊಂದಲಕ್ಕೀಡು ಮಾಡುತ್ತಿರುವುದು ಸರಿಯಲ್ಲ. ತೆರಿಗೆ ಪಾಲು ಹಂಚಿಕೆಯಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಮೈಸೂರಿನಲ್ಲಿ ಬಹಿರಂಗ ಚರ್ಚೆಯಾಗಲಿ. ಈ ಚರ್ಚೆಗೆ ನಾವು ಸಿದ್ದ ಮಾನ್ಯ ನಿರ್ಮಲಾ ಸೀತಾರಾಮನ್ ಅವರು ಸಿದ್ದವಿದ್ದಾರ? ಎಂದು ಅವರು ಇದೇ ಸಂದರ್ಭದಲ್ಲಿ ಸವಾಲು ಹಾಕಿದರು.

ಅಲ್ಲದೆ, ಈ ವಿಚಾರದಲ್ಲಿ ಕೆಸರೆರಚಾಟ, ರಾಜಕೀಯ ತೆವಲಾಟ ಆಗಬಾರದು. ಕರ್ನಾಟಕದಂತಹ ಪ್ರಗತಿಪರ ರಾಜ್ಯಗಳಿಗೆ ಮಲತಾಯಿ ಧೋರಣೆ ಅನ್ಯಾಯ ಮಾಡಬಾರದು ಎಂದು ಅವರು ಕೇಂದ್ರ ಸರ್ಕಾರವನ್ನು ವಿನಂತಿಸಿದರು.

ಗ್ಯಾರಂಟಿಗೆ ಕೇಂದ್ರದಿಂದ ನಯಾಪೈಸೆಯೂ ಬೇಕಾಗಿಲ್ಲ:
ಗ್ಯಾರಂಟಿಗೆ ಕೇಂದ್ರ ಸರ್ಕಾರದ ನಯಾಪೈಸೆಯೂ ಬೇಕಾಗಿಲ್ಲ. ನಮ್ಮ ಗ್ಯಾರಂಟಿಗೆ ಬೇಕಾದ ಹಣವನ್ನು ನಾವೇ ಹೊಂದಿಸಿಕೊಳ್ಳುತ್ತಿದ್ದೇವೆ.ಗ್ಯಾರಂಟಿ ಜೊತೆಗೆ ನಿವೃತ್ತಿ ವೇತನ ರೂ.11200 ಕೋಟಿ ಹಣವನ್ನೂ ಸಹ ರಾಜ್ಯ ಸರ್ಕಾರವೇ ನೀಡುತ್ತಿದೆ. ಈ ಹಣದ ಪೈಕಿ ಕೇಂದ್ರ ಸರ್ಕಾರದ ಪಾಲು ರೂ. 550 ಕೋಟಿ ಮಾತ್ರ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.

ನಮ್ಮ ಗ್ಯಾರಂಟಿ ಯೋಜನೆಗಳಿಗೆ ಇವರಿಂದ ನಯಾಪೈಸೆಯೂ ಬೇಕಾಗಿಲ್ಲ. ನಮ್ಮ ತೆರಿಗೆಯಿಂದ ನಮ್ಮ ನ್ಯಾಯಯುತ ಪಾಲನ್ನು ಕೊಟ್ಟರೆ ಸಾಕು. ನಮ್ಮ ರಾಜ್ಯಕ್ಕೆ ಬರಬೇಕಾದ ಬರಪರಿಹಾರವನ್ನು ಕೊಡಲಿ. ನಿಮ್ಮ ಉದಾರತನವೇನು ಬೇಕಾಗಿಲ್ಲ. ಕರ್ನಾಟಕದ ಜನ ಇರುವುದು ಕೇವಲ ಓಟು ಒತ್ತೋಕಷ್ಟೇ ಎಂಬ ಭಾವನೆಯಿಂದ ಕೇಂದ್ರ ಸರ್ಕಾರ ಹೊರಬರಲಿ. ನಮ್ಮನ್ನು ದ್ವಿತೀಯ ದರ್ಜೆಯ ಪ್ರಜೆಗಳಂತೆ ನಡೆಸಿಕೊಳ್ಳುವುದನ್ನು ಬಿಡಲಿ. ನಮ್ಮ ಹಕ್ಕನ್ನು ನಮಗೆ ಕೊಡಲಿ ಎಂದು ಅವರು ಒತ್ತಾಯಿಸಿದರು.

ಹಣದುಬ್ಬರ ನಿಯಂತ್ರಿಸಲಾಗದ ಬಿಜೆಪಿ ಸರ್ಕಾರ ಜನರಿಗೆ ಸುಳ್ಳು ಹೇಳಿದೆ: ಸಿದ್ದರಾಮಯ್ಯ ಟೀಕೆ
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶದಲ್ಲಿ ಹಣದುಬ್ಬರ ಕಡಿಮೆಯಾಗಿದೆ ಎಂದು ಜನರಿಗೆ ಸುಳ್ಳು ಹೇಳಿದೆ ಮತ್ತು ಈ ಸುಳ್ಳು ಮಾಹಿತಿಯನ್ನು ದೇಶದ ಎಲ್ಲ ಮಾಧ್ಯಮಗಳಲ್ಲಿ ಪ್ರಸಾರ ಮಾಡುವಂತೆ ನೋಡಿಕೊಂಡಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಜೆಪಿ ಸರ್ಕಾರದ ಪ್ರಕಾರ ದೇಶದಲ್ಲಿ ಹೆಚ್ಚಾಗಿರುವ ಬೆಲೆಗಳೆಲ್ಲ ಕಡಿಮೆಯಾಗಿವಿಯೆ? ಜನರು ಬೆಲೆಗಳು ಕಡಿಮೆಯಾಗಿವೆಯೆಂದು ಖುಷಿಯಾಗಿದ್ದಾರೆಯೆ? ಜನರ ಖರೀದಿಯ ಸಾಮಥ್ರ್ಯ ಹೆಚ್ಚಾಗಿದೆಯೆ? ಜನರಿಗೆ ಅಗತ್ಯ ಇರುವ ವಸ್ತುಗಳ ಉತ್ಪಾದನೆಯು ದೇಶದಲ್ಲಿ ಹೆಚ್ಚಾಗಿದೆಯೆ? ಆಮದು ಕಡಿಮೆಯಾಗಿದೆಯೆ? ಈ ಪ್ರಶ್ನೆಗಳಿಗೆ ಬಿಜೆಪಿ ಸರ್ಕಾರಗಳು ಉತ್ತರ ಹೇಳುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಚುನಾವಣೆಗಳು ಹತ್ತಿರ ಬರುತ್ತಿರುವುದರಿಂದ ರಾಜನಿಗೆ ಬೇಕಾದಂತಹ ವರದಿಗಳನ್ನು ವಾಸ್ತವಕ್ಕೆ ವಿರುದ್ಧವಾಗಿ ತಿರುಗಾ ಮುರುಗಾ ಮಾಡಿ ಸಿದ್ಧ ಮಾಡಿಕೊಟ್ಟಂತೆ ಕಾಣುತ್ತಿದೆ. ಇದರಿಂದಾಗಿ ಬಿಜೆಪಿ ಎಂಬುದು ದಿಲ್ಲಿಯಿಂದ ಹಳ್ಳಿಯವರೆಗೆ ‘ಬೊಗಳೆ ಬಿಡುವ ಪಕ್ಷʼಎಂದು ಪದೇ ಪದೇ ಸಾಬೀತಾಗುತ್ತಿದೆ.  ಅದಕ್ಕಾಗಿಯೆ ಬಿಜೆಪಿಯನ್ನು ‘ಸುಳ್ಳನ್ನು ಉತ್ಪಾದಿಸಿ ಮಾರುವ ಫ್ಯಾಕ್ಟರಿʼಎಂದು ಜನರೇ ಕರೆಯುತ್ತಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

2012 ರ ವರ್ಷವನ್ನು ಬೇಸ್ ವರ್ಷವೆಂದು ಆಧಾರವಾಗಿಟ್ಟುಕೊಂಡು ಮಾಡುವ ಸಮೀಕ್ಷೆಯ ವರದಿಗಳನ್ನು  ಕೇಂದ್ರ ಸರ್ಕಾರವು ಆಗಿಂದಾಗ್ಗೆ ಬಿಡುಗಡೆ ಮಾಡುತ್ತಿರುತ್ತದೆ. ಆಹಾರ ಪದಾರ್ಥಗಳು, ವಸತಿ, ಇಂಧನ, ವಿದ್ಯುತ್, ಬಟ್ಟೆ ಹಾಗೂ ಇನ್ನಿತರೆ ವಸ್ತುಗಳು, ಶಿಕ್ಷಣ, ವೈದ್ಯಕೀಯ, ಸಾರಿಗೆ ಮುಂತಾದ ಸೇವೆಗಳು ಹೀಗೆ ಮುಖ್ಯವಾದ ವಲಯಗಳಲ್ಲಿನ ಬೆಲೆಗಳನ್ನು ಆಧರಿಸಿ ಹಣದುಬ್ಬರವನ್ನು ಲೆಕ್ಕ ಹಾಕಲಾಗುತ್ತದೆ. ಅಂದರೆ 2012 ರ ಬೆಲೆಗಳನ್ನು ಆಧಾರವಾಗಿಟ್ಟುಕೊಂಡು ಪ್ರಸ್ತುತ ಬೆಲೆಗಳನ್ನು ಹೋಲಿಕೆ ಮಾಡಿ ಪ್ರತಿ ತಿಂಗಳ ಏರಿಳಿತಗಳನ್ನು ಲೆಕ್ಕ ಹಾಕಲಾಗುತ್ತದೆ. ಹಣದುಬ್ಬರದಲ್ಲಿನ ಶೇ.40 ಕ್ಕೂ ಹೆಚ್ಚು ಪಾಯಿಂಟುಗಳು ಆಹಾರ ಸಂಬಂಧಿತ ವಲಯಕ್ಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಸೆಪ್ಟೆಂಬರ್‌ಗಿಂತ ಅಕ್ಟೋಬರ್ ತಿಂಗಳಲ್ಲಿ ಬೆಲೆಗಳು ಶೇ.10 ರಿಂದ ಶೇ.20 ರಷ್ಟು ಹೆಚ್ಚಾಗಿವೆ ಎಂಬುದು ಸಣ್ಣಪುಟ್ಟ ವ್ಯಾಪಾರಿಗಳ ಅಭಿಪ್ರಾಯ. ಅವರು ಹೇಳಿದ ಪ್ರಕಾರ 110 ರೂ. ಒಳಗಿದ್ದ ತೊಗರಿ ಬೇಳೆ ಅಕ್ಟೋಬರ್ ನಲ್ಲಿ 127 ರೂಗಳಿಗೆ ಏರಿಕೆಯಾಗಿದೆ. ಅಕ್ಕಿ ಕೆಜಿ ಮೇಲೆ 5 ರೂ ರೂಪಾಯಿ ಹೆಚ್ಚಾಗಿದೆ. ಗೋಧಿ 35-36 ಇದ್ದದ್ದು 44 ರೂಪಾಯಿಗಳಿಗೆ ಏರಿಕೆ ಕಂಡಿದೆ. ರವೆ 30 ರೂ. ನಿಂದ 40 ರೂ.ಗೆ ಏರಿದೆ. ಅಡುಗೆಗೆ ಬಳಸುವ ಎಣ್ಣೆ ಮಾತ್ರ 10-25 ರೂವರೆಗೆ ಕಡಿಮೆಯಾಗಿದೆ ಎಂದರು.  ಹಾಗೆ ನೋಡಿದರೆ 2014 ಕ್ಕೆ ಮೊದಲು 70 ರೂಪಾಯಿ ಆಸುಪಾಸಿನಲ್ಲಿದ್ದ ಅಡುಗೆ ಎಣ್ಣೆ ಈಗ 160 ರೂಗಳಿಗೂ ಹೆಚ್ಚಿದೆ. ಹಾಗೆಯೆ ಅಡುಗೆ ಗ್ಯಾಸಿನ ಬೆಲೆ ಕಡಿಮೆಯಾಗಿಲ್ಲ. 2013 ರಲ್ಲಿ 400 ರೂ ಇದ್ದದ್ದು ಈಗ 1100 ರೂ ವರೆಗೆ ಏರಿಕೆಯಾಗಿದೆ. 47 ರೂ ಇದ್ದ ಡೀಸೆಲ್‌ 90 ರೂ ಆಗಿದೆ. ಪೆಟ್ರೋಲ್ ಕೂಡ ಹಾಗೆಯೆ. ರಾಜ್ಯದಲ್ಲಿ ವಿದ್ಯುತ್ ಶುಲ್ಕವನ್ನೂ ತಾರಾ ಮಾರಾ ಏರಿಸಲಾಗಿದೆ. ಯಾವ ಹಣ್ಣು – ತರಕಾರಿಗಳ ಬೆಲೆಗಳು ಕಡಿಮೆ ಇಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

50 ಕೆಜಿ ಸಿಮೆಂಟಿನ ಚೀಲದ ಮೇಲೆ ಮೋದಿ ಸರ್ಕಾರ 90- 100 ರೂವರೆಗೆ ಜಿಎಸ್‍ಟಿ ದೋಚುತ್ತಿದೆ. ಸಿಮೆಂಟಿನ ಮೇಲೆ ಶೇ.28 ರಷ್ಟು ಜಿಎಸ್‍ಟಿ ಇದೆ. ಕಬ್ಬಿಣದ ಬೆಲೆಗಳೂ ದುಪ್ಪಟ್ಟಾಗಿವೆ. ಇದರಿಂದಾಗಿ ಮನೆಗಳ ನಿರ್ಮಾಣ ವೆಚ್ಚ ಗಗನಕ್ಕೇರಿದೆ.

ಶಿಕ್ಷಣ ವೆಚ್ಚವೂ ತೀವ್ರವಾಗಿ ಏರಿಕೆಯಾಗಿದೆ. ನಿನ್ನೆ ತಾನೆ ಕರ್ನಾಟಕದ ಉಚ್ಛ ನ್ಯಾಯಾಲಯವು ಕಾಲೇಜುಗಳ ಶುಲ್ಕ ದರೋಡೆಯನ್ನು ನಿಲ್ಲಿಸಿ ಎಂಬರ್ಥದಲ್ಲಿ ಸರ್ಕಾರಕ್ಕೆ ತಾಕೀತು ಮಾಡಿದೆ. ಆದರೂ ಮೋದಿ ಸರ್ಕಾರ ಮಾತ್ರ ಬೆಲೆಗಳು ಕಡಿಮೆಯಾಗಿವೆ ಎಂದು ಜನರನ್ನು ನಂಬಿಸಲು ಪ್ರಯತ್ನಿಸುತ್ತಿದೆ ಎಂದು ಸಿದ್ದರಾಮಯ್ಯ ದೂರಿದ್ದಾರೆ.

ಡಾಲರಿನ ಎದುರು ರೂಪಾಯಿಯ ಮೌಲ್ಯ ಪಾತಾಳಕ್ಕೆ ತಲುಪುತ್ತಿದೆ. ಡಾಲರಿನಲ್ಲಿ ವಸ್ತುಗಳನ್ನು ಆಮದು ಮಾಡಿಕೊಳ್ಳಬೇಕಾಗಿರುವುದರಿಂದ ರೂಪಾಯಿಯ ಅಪಮೌಲ್ಯದಿಂದಾಗಿ ವಸ್ತುಗಳ ಬೆಲೆ ಶೇ. 16 ರವರೆಗೆ ಹೆಚ್ಚಾಗಿದೆ. ಇದರಿಂದಾಗಿಯೂ ಹಣದುಬ್ಬರ ಹೆಚ್ಚುತ್ತಿದೆ. ವಸ್ತುಗಳ ಬೆಲೆ ಹೆಚ್ಚಾಗುತ್ತಿವೆ. ಬ್ಯಾಂಕುಗಳು ಬಡ್ಡಿದರ ಹೆಚ್ಚಿಸುತ್ತಿವೆ ಎಂದಿದ್ದಾರೆ.

ಮೇಕ್ ಇನ್ ಇಂಡಿಯಾ ಮಾಡುವುದಾಗಿ ಜನರಿಗೆ ಸುಳ್ಳು ಟೋಪಿ ಹಾಕಿ ಅಧಿಕಾರಕ್ಕೆ ಬಂದ ಮೋದಿಯವರು ಮಾಡಿದ್ದೇನು? ಕೇಂದ್ರ ಸರ್ಕಾರದ ವಾಣಿಜ್ಯ ಇಲಾಖೆಯು ನಿನ್ನೆ ಬಿಡುಗಡೆ ಮಾಡಿರುವ ಮಾಹಿತಿಯಂತೆ ಕೋವಿಡ್ ಸಂದರ್ಭಕ್ಕಿಂತಲೂ ಅತ್ಯಂತ ಕನಿಷ್ಠ ಮಟ್ಟದಲ್ಲಿ ಭಾರತವು ಹೊರದೇಶಗಳಿಗೆ ರಫ್ತು ಮಾಡುತ್ತಿದೆ. ಅಕ್ಟೋಬರ್ ತಿಂಗಳಲ್ಲಿ ದೇಶದ ರಫ್ತು ಶೇ.16.7 ರಷ್ಟು ಅಂದರೆ 2.4 ಲಕ್ಷ ಕೋಟಿಯಷ್ಟು ಕಡಿಮೆ ರಫ್ತು ಮಾಡಿದೆ. ಇದೇ ಸಂದರ್ಭದಲ್ಲಿ ಆಮದು ಪ್ರಮಾಣವು ಶೇ.6 ರಷ್ಟು ಹೆಚ್ಚಾಗಿದೆ. ಇದಕ್ಕಾಗಿ 4.58 ಲಕ್ಷ ಕೋಟಿಗಳನ್ನು ಹೆಚ್ಚು ಪಾವತಿಸುತ್ತಿದೆ. ರೂಪಾಯಿ ಅಪಮೌಲ್ಯದಿಂದಾಗಿ ಆಮದು ವಸ್ತುಗಳ ಬೆಲೆಗಳೂ ಹೆಚ್ಚುತ್ತಿವೆ. ಇದೆಲ್ಲ ಏನನ್ನು ಸೂಚಿಸುತ್ತಿದೆ? ಮೋದಿ ಸರ್ಕಾರದ ಉತ್ಪಾದನಾ ನೀತಿಗಳು, ತೆರಿಗೆ ವ್ಯವಸ್ಥೆ, ಬೆಲೆ ನೀತಿಗಳು ಜನರ ಪರವಾಗಿಲ್ಲ ಎಂಬುದನ್ನಲ್ಲವೆ?  ಯಾರೊ ಕೆಲವರ ಉದ್ಧಾರಕ್ಕಾಗಿ ಮೋದಿಯವರ ಬಿಜೆಪಿ ಸರ್ಕಾರ ಕೆಲಸ ಮಾಡುತ್ತಿದೆಯೇ ಹೊರತು ಎಲ್ಲರ ವಿಕಾಸಕ್ಕಲ್ಲ. ಇದರಿಂದಾಗಿ ದೇಶದ ಅರ್ಥ ವ್ಯವಸ್ಥೆ ಅಧಃಪತನದ ಕಡೆಗೆ ಸಾಗುತ್ತಿದೆ ಎಂದು ಟೀಕಿಸಿದ್ದಾರೆ.

ತೆರಿಗೆ ಸಂಗ್ರಹ ಉತ್ತಮವಾಗಿದೆಯೆಂದು ಮೋದಿ ಸರ್ಕಾರ ಹೇಳುತ್ತಿದೆಯಲ್ಲ ಎಂದು ಕೆಲವರು ಕೇಳುತ್ತಾರೆ. 2017-18 ರಲ್ಲಿ ಜಿಎಸ್‍ಟಿ ವ್ಯವಸ್ಥೆ ಜಾರಿಗೆ ತಂದ ವರ್ಷದ ಬೆಳವಣಿಗೆ ದರದಲ್ಲಿಯೆ ತೆರಿಗೆ ದರವಿದ್ದರೆ ಈ ವರ್ಷದ ವೇಳೆಗೆ ಪ್ರತಿ ತಿಂಗಳೂ ಕನಿಷ್ಟ 2.2 ಲಕ್ಷ ಕೋಟಿ ಜಿಎಸ್‍ಟಿ ಸಂಗ್ರಹವಾಗಬೇಕಾಗಿತ್ತು. ಆದರೆ ಆಗುತ್ತಿರುವುದೇನು?  ಮೊಸರು, ಮಜ್ಜಿಗೆ, ಮಂಡಕ್ಕಿ, ಅಕ್ಕಿ, ಗೋಧಿ, ಮಕ್ಕಳು ಬಳಸುವ ಪೆನ್ನು ಪೆನ್ಸಿಲ್ಲು, ಕಾಗದ, ಇಂಕು ಹಾಗೂ ಆಸ್ಪತ್ರೆ ಬಿಲ್ಲು ಹೀಗೆ ಎಲ್ಲದರ ಮೇಲೆಯೂ ತೆರಿಗೆ ವಿಧಿಸಿ ಕೊಳ್ಳೆ ಹೊಡೆಯಲಾಗುತ್ತಿದೆ. ಇಷ್ಟಾದರೂ ಜಿಎಸ್‍ಟಿ ಸಂಗ್ರಹ ಇನ್ನೂ 1.7 ಲಕ್ಷ ಕೋಟಿಗೂ ತಲುಪಿಲ್ಲ.

ಮೋದಿ ಸರ್ಕಾರದ ಜಿ ಎಸ್ ಟಿ ನೀತಿ ಹೇಗಿದೆಯೆಂದು ಇತ್ತೀಚೆಗೆ ಕುಂದಾಪುರದ ಹಿರಿಯ ಪತ್ರಕರ್ತರಾದ ರಾಜಾರಾಂ ತಲ್ಲೂರ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದಾರೆ. ಜಿಎಸ್‍ಟಿ ವ್ಯವಸ್ಥೆ ಬರುವುದಕ್ಕೂ ಮೊದಲು ಮತ್ತು ಬಂದ ನಂತರ ತೆರಿಗೆ ವ್ಯವಸ್ಥೆ ಹೇಗಾಗಿದೆ ಎಂಬುದಕ್ಕೆ ಕಾರುಗಳ ಬಿಲ್ಲುಗಳನ್ನು ಉದಾಹರಿಸಿದ್ದಾರೆ. ಜಿಎಸ್‍ಟಿ ಬರುವುದಕ್ಕೂ ಮೊದಲು 2017 ರಲ್ಲಿ 17.54 ಲಕ್ಷ ರೂಪಾಯಿ ಮೂಲಬೆಲೆಯ ಕಾರಿನ ಮೇಲೆ 6.5 ಲಕ್ಷರೂ ಒಟ್ಟು ತೆರಿಗೆ ಪಾವತಿಸುತ್ತಿದ್ದರೆ, 2022ರಲ್ಲಿ 13.44 ಲಕ್ಷ ರೂಪಾಯಿ ಮೂಲ ಬೆಲೆಯ ಕಾರಿನ ಮೇಲೆ 9.93 ಲಕ್ಷ ರೂಪಾಯಿಗಳನ್ನು ಸಂಗ್ರಹಿಸಲಾಗುತ್ತಿದೆಯಂತೆ. ಮೋದಿ ಮತ್ತು ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರ್ಕಾರಗಳು ಈ ಪ್ರಮಾಣದ ತೆರಿಗೆ ಲೂಟಿ ಮಾಡಿದರೂ ಸಹ ದೇಶದ ತೆರಿಗೆ ಸಂಗ್ರಹವು ನಿರಾಶಾದಾಯಕವಾಗಿಯೆ ಇದೆ.

ದೇಶದ ಜನರು ಬಳಸುವ ಎಲ್ಲ ವಸ್ತು ಸೇವೆಗಳ ಮೇಲಿನ ಹಣದುಬ್ಬರವು ಶೇ.2 ರಿಂದ 3 ರಷ್ಟಿರಬೇಕು. ಆದರೆ ಈ ವರ್ಷದ ಸರಾಸರಿ ಹಣದುಬ್ಬರ ಶೇ.7 ಕ್ಕಿಂತಲೂ ಅಧಿಕವಾಗಿದೆ. ಅಕ್ಟೋಬರ್ ತಿಂಗಳಲ್ಲಿ ವಾಸ್ತವಿಕ ವಸ್ತು ಮತ್ತು ಸೇವೆಗಳ ಬೆಲೆ ಹೆಚ್ಚಾದರೂ ಸಹ ಮೋದಿ ಸರ್ಕಾರ 6.77 ಕ್ಕೆ ಇಳಿದಿದೆ ಎಂದು ಸುಳ್ಳು ಹೇಳಿದೆ. ಈ 6.77 ಕೂಡ ಜನರ ಮನೆ ಹಾಳು ಮಾಡುವುದೆ ಹೊರತು ಜನರನ್ನು ಉದ್ಧಾರ ಮಾಡುವಂತಹುದಲ್ಲ. ಆದ್ದರಿಂದ ಮೋದಿಯವರು ಚುನಾವಣಾ ಗಿಮಿಕ್ಕುಗಳನ್ನು ಬಿಟ್ಟು ದೇಶದ ಜನರಿಗೆ ವಾಸ್ತವವನ್ನು ಹೇಳಬೇಕು. ಪ್ರತಿ ವಸ್ತುಗಳ ಸಿಪಿಐ ಮತ್ತು ಡಬ್ಲ್ಯುಪಿಐ ಎಷ್ಟಿದೆ ಎಂಬ ಪಟ್ಟಿಯನ್ನು ಬಿಡುಗಡೆ ಮಾಡಬೇಕು.  ದೇಶದ ಅಂಕಿ ಅಂಶಗಳ ಇಲಾಖೆಯು ಯುಪಿಎ ಸರ್ಕಾರದಲ್ಲಿ ಮಾಡುತ್ತಿದ್ದ ಹಾಗೆಯೆ ನಿರಂತರವಾಗಿ ಸರ್ವೆಗಳನ್ನು ಮಾಡಿ ಆಗಿಂದಾಗ್ಗೆ ವರದಿಗಳನ್ನು ಬಿಡುಗಡೆ ಮಾಡಬೇಕು. ಜನರ ಆದಾಯ, ವೆಚ್ಚ, ಖರೀದಿ ಸಾಮಥ್ರ್ಯ, ವಸ್ತುಗಳ ಬೆಲೆ ಇತ್ಯಾದಿಗಳ ಕುರಿತು ಜನರನ್ನು ಕತ್ತಲೆಯಲ್ಲಿ ಇಡಲಾಗಿದೆ. ವಾಸ್ತವಗಳನ್ನು ತಿಳಿಸದೆ ಅಂಕಿ ಅಂಶಗಳನ್ನು ತಿರುಚಿ ಸುಳ್ಳು ಹೇಳಿ ಜನರನ್ನು ಕತ್ತಲಲ್ಲಿಡುವುದು ಸರ್ವಾಧಿಕಾರದ ಲಕ್ಷಣವಾಗುತ್ತದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೇಳುತ್ತಿರುವುದು ಸಂಪೂರ್ಣ ಸುಳ್ಳು ಎಂದಿದ್ದಾರೆ.

ಅಚ್ಚೇ-ದಿನ್ ಎಲ್ಲಿ ಮೋದಿಜಿ? : ಸಿದ್ದರಾಮಯ್ಯ
ಚಿಕ್ಕಬಳ್ಳಾಪುರ : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದು ಎಂಟು ವರ್ಷಗಳಾಯಿತು ಆದರೂ ಕೂಡ ದೇಶದಲ್ಲಿ ಅಚ್ಚೇ ದಿನ್‌ ಎಲ್ಲಿ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಪ್ರಶ್ನಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಿಧುರಾಶ್ವತ್ಥದಲ್ಲಿ ಕಾಂಗ್ರೇಸ್ ಪಾದಯಾತ್ರೆ ವೇಳೆ ಮಾತನಾಡಿದ ಅವರು, ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದಾಗ ದೇಶದಲ್ಲಿ ಒಳ್ಳೆಯ ದಿನಗಳು ಬರುತ್ತವೆ ಎಂದು ಆಶ್ವಾಸನೆ ನೀಡಿದ್ದರು, ಆದರೆ ದೇಶದಲ್ಲಿ ಸುರಕ್ಷತೆ ಇದೆಯಾ?, ಜನಸಾಮಾನ್ಯರು- ರೈತರು ನೆಮ್ಮದಿಯಿಂದ ಬದುಕುವ ಪರಿಸ್ಥಿತಿ ಇದೆಯಾ?, ದೇಶದಲ್ಲಿ ಇಂಧನಗಳ ಬೆಲೆ ಹೆಚ್ಚಾಗಿದೆ. 400 ರೂಪಾಯಿ ಇದ್ದ ಗ್ಯಾಸ್‌ ಬೆಲೆ 1100 ರೂ. ಆಗಿದೆ ಜೊತೆಗೆ ಉಳಿದ ಇಂಧನಗಳ ಬೆಲೆ ಕೂಡ ಹೆಚ್ಚಾಗಿದೆ. ಈ ಮೂಲಕ ದೇಶದಲ್ಲಿ ಜಿಎಸ್‌ಟಿ ಗಗನಕ್ಕೇರಿದೆ. ಹಾಗದರೆ ನಿಮ್ಮ ಅಚ್ಚೇ ದಿನ್‌ ಎಲ್ಲಿದೆ ಸ್ವಾಮಿ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.