gujarath election – Peepal Media

ಕರ್ನಾಟಕ ವಿಧಾನಸಭಾ ಚುನಾವಣೆ: ಗುಜರಾತ್ ಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುವುದಾಗಿ ಎಎಪಿ ಭರವಸೆ
ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಕೆಲವೇ ತಿಂಗಳುಗಳಲ್ಲಿ ನಡೆಯುತ್ತಿದ್ದು, ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ತಮ್ಮದೇ ಆದ ಖ್ಯಾತಿಯ ಮೇಲೆ ಗೆಲ್ಲಬಲ್ಲ ಉತ್ತಮ ಅಭ್ಯರ್ಥಿಗಳನ್ನು ಹುಡುಕುತ್ತದೆ, ಹಾಗೆಯೇ ಚುನಾವಣೆಯಲ್ಲಿ ಗೆಲ್ಲುವ ಸುಮಾರು 60 ಕ್ಷೇತ್ರಗಳತ್ತ ಗಮನ ಹರಿಸಲಾಗುತ್ತಿದೆ ಎಂದು ತಿಳಿಸಿದೆ.

ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಅನ್ನು ಬಿಜೆಪಿಯಿಂದ ವಶಪಡಿಸಿಕೊಂಡ ನಂತರ ಮತ್ತು ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ನಂತರ ಎಎಪಿ ಉತ್ಸಾಹಭರಿತವಾಗಿದೆ ಎಂದು ಕರ್ನಾಟಕದ ಎಎಪಿಪಕ್ಷದ ನಾಯಕರು ಹೇಳುತ್ತಿದ್ದಾರೆ.

ಈ ಕುರಿತು ಶುಕ್ರವಾರ ನಡೆದ ಪತಿಕಾಗೋಷ್ಠಿಯಲ್ಲು ಮಾತನಾಡಿದ ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಭಾಸ್ಕರ್ ರಾವ್ ಅವರು, ಗುಜರಾತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಐವರು ಎಎಪಿ ಅಭ್ಯರ್ಥಿಗಳು ʼಹಣ ಮತ್ತು ಸ್ನಾಯುಬಲʼದಿಂದ ಬೆಂಬಲಿತರಾಗಿರಲಿಲ್ಲ ಮತ್ತು ಅವರು ತಮ್ಮದೇ ಆದ ಖ್ಯಾತಿಯಿಂದ ಗೆದ್ದಿದ್ದಾರೆ. ಇದೇ ಮಾರ್ಗವನ್ನು ನಾವು ಕರ್ನಾಟಕದಲ್ಲೂ ಮುಂದುವರೆಸಲು ಬಯಸುತ್ತೇವೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಮೇ ತಿಂಗಳೊಳಗೆ ಚುನಾವಣೆ ನಡೆಯಲಿದ್ದು, ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷವು ʼಹೊಸ ಮತ್ತು ಉತ್ತಮ ಅಭ್ಯರ್ಥಿಗಳನ್ನುʼ ಕಣಕ್ಕಿಳಿಸಲಿದೆ. ಹಾಗೆಯೇ 50 ರಿಂದ 60 ʼಗೆಲ್ಲಬಹುದಾದʼ ಕ್ಷೇತ್ರಗಳ ಮೇಲೆ ಗಮನ ಹರಿಸಲಿದೆ ಎಂದು ಭಾಸ್ಕರ್ ರಾವ್ ತಿಳಿಸಿದ್ದಾರೆ.

ʼನಾವು ಗುಜರಾತ್ನಲ್ಲಿ ಏನು ಮಾಡಿದ್ದೇವೆಯೋ ಅದಕ್ಕಿಂತ ಉತ್ತಮ ಛಾಪು ಕರ್ನಾಟಕದಲ್ಲಿಯೂ ಮೂಡಿಸಲಿದ್ದೇವೆ,  ನಾವು ತುಂಬಾ ಆಶಾವಾದಿಗಳಾಗಿದ್ದೇವೆ, ಕರ್ನಾಟಕ ವಿಧಾನಸಭಾ ಚುನಾವಣೆಗೆ ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪ್ರಚಾರವು ಖಂಡಿತವಾಗಿಯೂ ಪಕ್ಷದ ಗೆಲುವು, ಸ್ವೀಕಾರಾರ್ಹತೆ ಮತ್ತು ಅವಕಾಶಗಳನ್ನು ಹೆಚ್ಚಿಸುತ್ತದೆ ಎಂದು ರಾವ್ ಅಭಿಪ್ರಾಯ ಪಟ್ಟಿದ್ದಾರೆ.

ಕರ್ನಾಟಕಕ್ಕೆ ಸಂಪೂರ್ಣವಾಗಿ ಹೊಸ ಮಾದರಿಯ ಅಗತ್ಯವಿದೆ. ಆದರೆ ರಾವ್‌ ಅವರ ಪ್ರಕಾರ ಕಾಂಗ್ರೆಸ್, ಬಿಜೆಪಿ ಮತ್ತು ಮೈತ್ರಿ ಮಾದರಿಗಳನ್ನು ತಿರಸ್ಕರಿಸಿದ್ದಾರೆ.

ಗುಜರಾತ್‌ನಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಕಾಂಗ್ರೆಸ್ ಮತಗಳನ್ನು ತಿಂದು ಹಾಕಿದೆ ಎಂಬ ರಾಜ್ಯದ ಕಾಂಗ್ರೆಸ್‌ ಪಕ್ಷದ ನಾಯಕರ ವಾದದ ಬಗ್ಗೆ ಪ್ರತಿಕ್ರಿಯಿಸಿದ ಅವರು,  ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಪಕ್ಷಕ್ಕೆ ತಮ್ಮ ಮತಗಳನ್ನು ಕ್ರೋಢೀಕರಿಸುವುದನ್ನು ಯಾರೂ ತಡೆಯಲಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಗುಜರಾತ್‌ನಲ್ಲಿ ಮಾತ್ರ ಮೋದಿ ಪ್ರಭಾವವೆಂದು ಫಲಿತಾಂಶದಿಂದ ಸಾಬೀತು: ಪೃಥ್ವಿ ರೆಡ್ಡಿ
ಬೆಂಗಳೂರು: ಕೇವಲ ಹತ್ತು ವರ್ಷಗಳಲ್ಲಿ ಆಮ್‌ ಆದ್ಮಿ ಪಾರ್ಟಿಯು ದೇಶದ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದು, ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಲು ಕರ್ನಾಟಕ ಜನತೆ ಚುನಾವಣೆಗಾಗಿ ಕಾಯುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು.

ಆಮ್‌ ಆದ್ಮಿ ಪಾರ್ಟಿಗೆ ರಾಷ್ಟ್ರೀಯ ಸ್ಥಾನಮಾನ ಸಿಗುತ್ತಿರುವ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪೃಥ್ವಿ ರೆಡ್ಡಿ, “ಎಂಸಿಡಿ, ಗುಜರಾತ್‌ ಹಾಗೂ ಹಿಮಾಚಲ ಪ್ರದೇಶದ ಚುನಾವಣೆಗಳ ಫಲಿತಾಂಶವು ಮೂರು ಸಂದೇಶಗಳು ನೀಡಿದೆ. ಮೊದಲನೆಯದು, ಬಿಜೆಪಿಯನ್ನು ಸೋಲಿಸಲು ಆಮ್‌ ಆದ್ಮಿ ಪಾರ್ಟಿಗೆ ಸಾಧ್ಯವಿದೆ. ಎರಡನೆಯದು, ಕೇವಲ ಗುಜರಾತ್‌ನಲ್ಲಿ ಮಾತ್ರ ಪ್ರಧಾನಿ ಮೋದಿಯವರ ಪ್ರಭಾವವಿದೆ. ಮೂರನೆಯದು, ದೆಹಲಿ ಹಾಗೂ ಹಿಮಾಚಲ ಪ್ರದೇಶದಂತೆ ಕರ್ನಾಟಕದಲ್ಲೂ ಮೋದಿಯವರು ಬಿಜೆಪಿಯನ್ನು ಗೆಲ್ಲಿಸಲು ಸಾಧ್ಯವಿಲ್ಲ. ಬಿಜೆಪಿಯ ಭದ್ರಕೋಟೆ ಎಂದು ಕರೆಯಲ್ಪಡುವ ಗುಜರಾತ್‌ನಲ್ಲೂ 12% ಮತಗಳನ್ನು ಪಡೆಯುವುದರಲ್ಲಿ ಎಎಪಿ ಯಶಸ್ವಿಯಾಗಿದೆ” ಎಂದು ಹೇಳಿದರು.

“2012ರಲ್ಲಿ ʻಭ್ರಷ್ಟಾಚಾರ ವಿರೋಧಿ ಭಾರತʼ ಹೋರಾಟದ ಮುಂದಿನ ಭಾಗವಾಗಿ ಆಮ್‌ ಆದ್ಮಿ ಪಾರ್ಟಿ ಹುಟ್ಟಿಕೊಂಡಿತು. ಅಂದು ಸುಮಾರು ಹತ್ತು ಕಾರ್ಯಕರ್ತರಿಂದ ಆರಂಭವಾದ ಪಕ್ಷವು ದೆಹಲಿಯಲ್ಲಿ ಭದ್ರವಾಗಿ ಬೇರೂರಿ, ಈಗ ದೇಶದೆಲ್ಲೆಡೆ ಹೆಮ್ಮರವಾಗಿ ಬೆಳೆಯುತ್ತಿದೆ. ಚುನಾವಣಾ ಆಯೋಗದ ಮಾನದಂಡಕ್ಕೆ ಅನುಗುಣವಾಗಿ ನಾಲ್ಕು ರಾಜ್ಯಗಳಲ್ಲಿ ಸಾಧನೆ ತೋರುವ ಮೂಲಕ ರಾಷ್ಟ್ರೀಯ ಪಕ್ಷ ಎಂಬ ಮಾನ್ಯತೆ ಪಡೆಯಲು ಅರ್ಹವಾಗಿದೆ. ಎಎಪಿಗೆ ದೇಶಾದ್ಯಂತ ಸಿಗುತ್ತಿರುವ ಯಶಸ್ಸಿಗೆ ನಮ್ಮ ನಾಯಕರು ಮತ್ತು ಕಾರ್ಯಕರ್ತರ ಅವಿರತ ಪರಿಶ್ರಮ ಹಾಗೂ ಪಕ್ಷದ ತತ್ತ್ವ ಸಿದ್ಧಾಂತಗಳು ಕಾರಣ” ಎಂದು ಪೃಥ್ವಿ ರೆಡ್ಡಿ ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಹಾಗೂ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಮಾತನಾಡಿ, “ಕರ್ನಾಟಕದ ರಾಜಕೀಯದಲ್ಲಿ ಪರ್ಯಾಯ ಶಕ್ತಿಯಾಗಿ ಆಮ್‌ ಆದ್ಮಿ ಪಾರ್ಟಿ ಎದ್ದು ನಿಲ್ಲಲಿದೆ. ರಾಜ್ಯದ ವಿವಿಧ ಭಾಗಗಳಿಗೆ ಪ್ರವಾಸ ಹೋದ ಸಂದರ್ಭದಲ್ಲಿ ಜನಸಾಮಾನ್ಯರ ನಾಡಿಮಿಡಿತ ತಿಳಿಯಲು ನಾನು ಪ್ರಯತ್ನಿಸಿದ್ದು, ಆಗ ಈ ಅಂಶ ಸ್ಪಷ್ಟವಾಗಿ ಗಮನಕ್ಕೆ ಬಂದಿದೆ. ಮುಂಬರುವ ಬಿಬಿಎಂಪಿ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಆಮ್‌ ಆದ್ಮಿ ಪಾರ್ಟಿ ಪಕ್ಷವು ಬಹುಮತದೊಂದಿಗೆ ಅಧಿಕಾರಕ್ಕೆ ಬರುವ ಸಾಧ್ಯತೆ ದಟ್ಟವಾಗಿದೆ. ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಯು ಇನ್ನಷ್ಟು ಬಲಗೊಳ್ಳಲಿದೆ” ಎಂದು ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಜನಸಂಪರ್ಕ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ, “ಕಾಂಗ್ರೆಸ್‌ ಪಕ್ಷವನ್ನು ಹತ್ತಿಕ್ಕಲು ಬಿಜೆಪಿಯು ಎಎಪಿಯನ್ನು ಬಳಸಿಕೊಳ್ಳುತ್ತಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯನವರ ಹೇಳಿಕೆ ಮೂರ್ಖತನದಿಂದ ಕೂಡಿದೆ. ಚುನಾವಣೆ ಎಂಬ ಯುದ್ಧಕ್ಕೂ ಮುನ್ನವೇ ಶಸ್ತ್ರತ್ಯಾಗ ಮಾಡಿ ಸೋಲೊಪ್ಪಿಕೊಳ್ಳುವ ಕಾಂಗ್ರೆಸ್‌ಗೆ ಎಎಪಿ ಬಗ್ಗೆ ಮಾತಾಡುವ ನೈತಿಕತೆಯಿಲ್ಲ. ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಅತ್ಯಂತ ಭ್ರಷ್ಟ ಪಕ್ಷಗಳಾಗಿದ್ದು, ಇವೆರಡರ ದುರಾಡಳಿತದಿಂದ ಬೇಸತ್ತಿರುವವರು ಹಾಗೂ ದೇಶದ ರಾಜಕೀಯದಲ್ಲಿ ಬದಲಾವಣೆ ತರಬೇಕೆಂದು ಬಯಸುತ್ತಿರುವವರು ಆಮ್‌ ಆದ್ಮಿ ಪಾರ್ಟಿಯನ್ನು ಬೆಂಬಲಿಸುತ್ತಿದ್ದಾರೆ. ಎಲ್ಲ ಭ್ರಷ್ಟ ಪಕ್ಷಗಳಿಂದ ಆಮ್‌ ಆದ್ಮಿ ಪಾರ್ಟಿ ಅಂತರ ಕಾಯ್ದುಕೊಂಡು ಮುನ್ನಡೆಯುತ್ತಿದೆ” ಎಂದು ಹೇಳಿದರು.

ಎಎಪಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ, ಪಕ್ಷದ ಬೆಂಗಳೂರು ಅಧ್ಯಕ್ಷ ಮೋಹನ್‌ ದಾಸರಿ, ಹಿರಿಯ ವಕೀಲರಾದ ಕೆ.ದಿವಾಕರ್ ಭಾಗವಹಿಸಿದ್ದರು.

ಗುಜರಾತ್ ಫಲಿತಾಂಶದ ಬಗ್ಗೆ ರಾಜ್ಯ ಬಿಜೆಪಿ ಉತ್ಸಾಹ: 2023ಕ್ಕೆ ಸ್ಥಳೀಯ ಸಮಸ್ಯೆಗಳು ಮುಖ್ಯ ಎಂದ ಕಾಂಗ್ರೆಸ್
ಬೆಂಗಳೂರು: ಗುಜತಾರ್‌ನಲ್ಲಿ ಬಿಜೆಪಿ ಗೆದ್ದಿರುವುದರಿಂದ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿಯೂ ಬಿಜೆಪಿ ಅಧಿಕಾರದ ಪಟ್ಟ ಏರುವ ಲಕ್ಷಣಗಳು ಕಂಡುಬರುತ್ತಿವೆ ಎಂದು ಅಭಿಪ್ರಾಯ ಪಟ್ಟಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ರಾಜ್ಯ ಕಾಂಗ್ರೆಸ್‌ ಪಕ್ಷ, ಒಂದು ರಾಜ್ಯದ ಚುನಾವಣೆಗೂ, ಇನ್ನೊಂದು ರಾಜ್ಯದ ಚುನಾವಣೆಗೂ ಯಾವುದೇ ಸಂಬಂಧವಿಲ್ಲ, ಹೀಗಾಗಿ ಚುನಾವಣೆಗಳಿಗೆ ಮುಖ್ಯವಾಗಿ ಬೇಕಾಕಿರುವುದು ಅಲ್ಲಿನ ಸ್ಥಳಿಯ ಸಮಸ್ಯೆಗಳು ಎಂದು ಹೇಳಿದೆ.

ಕರ್ನಾಟಕದ ಎರಡೂ ಪ್ರಮುಖ ಪಕ್ಷಗಳು ಗುರುವಾರದ ವಿಧಾನಸಭಾ ಚುನಾವಣಾ ಫಲಿತಾಂಶಗಳಲ್ಲಿ ಪ್ರೋತ್ಸಾಹವನ್ನು ಕಂಡಿವೆ. ಆಡಳಿತಾರೂಢ ಬಿಜೆಪಿ ಗುಜರಾತ್‌ನಲ್ಲಿ ತನ್ನ ಪ್ರಚಂಡ ಗೆಲುವಿನಿಂದ ಸ್ಫೂರ್ತಿ ಪಡೆದುಕೊಂಡಿದ್ದರೆ, ಕಾಂಗ್ರೆಸ್ ಪಕ್ಷವು ಹಿಮಾಚಲ ಪ್ರದೇಶದಲ್ಲಿ ಭರ್ಜರಿ ಗೆಲುವಿನಿಂದ ಸ್ಪೂರ್ತಿ ಪಡೆದುಕೊಂಡಿದೆ ಎನ್ನಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರಕಾರ, ʼಗುಜರಾತ್ ಫಲಿತಾಂಶವು ಏಪ್ರಿಲ್ 2023 ರಲ್ಲಿ ಮತ ಚಲಾಯಿಸುವಾಗ ಕರ್ನಾಟಕದ ಚುನಾವಣಾ ಫಲಿತಾಂಶದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಹೀಗಾಗಿ ಇತರ ಪಕ್ಷಗಳು ಆಡಳಿತ ನಡೆಸುತ್ತಿರುವ ಸರ್ಕಾರಗಳ ವಿರುದ್ಧ ಆಡಳಿತ ವಿರೋಧಿ ಅಲೆ ಇದ್ದರೂ, ಜನರು ಬಿಜೆಪಿ ಸರ್ಕಾರಗಳನ್ನು ಬೆಂಬಲಿಸುವ ವಾತಾವರಣವಿದ. ಗುಜರಾತ್ ಫಲಿತಾಂಶವನ್ನು ನೋಡುವುದಾದರೆ, ಜನರು ಉತ್ತಮ ಆಡಳಿತಕ್ಕೆ ಪ್ರತಿಫಲ ನೀಡುತ್ತಾರೆ ಎಂದೆನಿಸುತ್ತಿದೆ ಎಂದು ಹೇಳಿದ್ದಾರೆ.

ʼಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ಸಂಘಟನೆಯಿಂದಾಗಿ ಪಶ್ಚಿಮ ರಾಜ್ಯದಲ್ಲಿ ಸತತ ಏಳನೇ ಬಾರಿಗೆ ಬಿಜೆಪಿ ಅಧಿಕಾರ ಹಿಡಿಯಲು ಸಾಧ್ಯವಾಗಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಗುಜರಾತ್ ಫಲಿತಾಂಶವು ಮುಂದಿನ ಕರ್ನಾಟಕ  ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಘಟಕಕ್ಕೆ 140 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಭರವಸೆ ಮಾಡಿಸಿದೆ. ಹೀಗಾಗಿ ವಿರೋಧ ಪಕ್ಷಗಳು ಈಗಲಾದರೂ ರಾಜ್ಯದಲ್ಲಿ ಅಧಿಕಾರ ಪಡೆಯುವ ಬಗ್ಗೆ ಹಗಲುಗನಸು ಕಾಣುವುದನ್ನು ನಿಲ್ಲಿಸಬೇಕುʼ ಎಂದು ಹೇಳಿದ್ದಾರೆ.

ʼಗುಜರಾತ್ ಫಲಿತಾಂಶವು ಕರ್ನಾಟಕದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷವು ಯಾವುದೇ ಪ್ರಚಾರವಿಲ್ಲದೆ ಸುಲಭವಾಗಿ ಗೆಲ್ಲುತ್ತದೆ ಎಂದು ಅಭಿಪ್ರಾಪಟ್ಟಿದ್ದಾರೆ.

ʼಕರ್ನಾಟಕವು ಅತ್ಯಂತ ಭ್ರಷ್ಟ ಸರ್ಕಾರವನ್ನು ಹೊಂದಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದು,  ವಿಧಾನಸಭಾ ಚುನಾವಣೆಯ ಫಲಿತಾಂಶವು ಸ್ಥಳೀಯ ವಿಷಯಗಳ ಮೇಲೆ ಅವಲಂಬಿತವಾಗಿರುತ್ತದೆ ಎಂದು ಹೇಳಿದ್ದಾರೆ.

ಗುಜರಾತ್‌ ನಲ್ಲಿ ಆಮ್ ಆದ್ಮಿ ಪಕ್ಷವು ಕಾಂಗ್ರೆಸ್ ಮತಗಳನ್ನು ಕಬಳಿಸಿದೆ ಎಂದು ಆರೋಪಿಸಿದ ಸಿದ್ದರಾಮಯ್ಯನವರು, ʼಬಿಜೆಪಿಯೂ, ಎಎಪಿಗೆ ಹಣಕಾಸು ನೆರವು ನೀಡುವ ಮತ್ತು ಅದರ ಗೆಲುವನ್ನು ಖಚಿತಪಡಿಸಿಕೊಳ್ಳಲು ಮತಗಳನ್ನು ವಿಭಜಿಸುವ ತಂತ್ರವನ್ನು ಬಳಸಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ  ಜೆಡಿಎಸ್ ಅನ್ನು ಬಳಸುವ ಮೂಲಕ ಅದೇ ತಂತ್ರವನ್ನು ಅನುಸರಿಸಬಹುದು. ಆದರೆ ಅದು ಇಲ್ಲಿ ಕೆಲಸ ಮಾಡುವುದಿಲ್ಲʼ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಗುಜರಾತ್ ಚುನಾವಣೆ ಫಲಿತಾಂಶ: ಅನೇಕ ಕಾಂಗ್ರೆಸ್ ನಾಯಕರು ಬಿಜೆಪಿಗೆ ಪಲಾಯನ- ಸಚಿವ ಆರ್.ಅಶೋಕ್
ಬೆಂಗಳೂರು: 2023ರ ಮೊದಲಾರ್ಧದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದ್ದು, ಗುಜರಾತ್‌ ಚುನಾವಣೆಯಲ್ಲಿನ ಬಿಜೆಪಿಯ ಭರ್ಜರಿ ಗೆಲುವನ್ನು ನೋಡಿ, ಕಾಂಗ್ರೆಸ್ ನಾಯಕರು ಮತ್ತು ಶಾಸಕರು ಬಿಜೆಪಿಗೆ ಪಲಾಯನ ಮಾಡಲು ಬಯಸುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ʼಹಲವಾರು ಕಾಂಗ್ರೆಸ್ ನಾಯಕರಲ್ಲಿ ಸುಮಾರು 12 ಜನರು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ, ಏಕೆಂದರೆ ಅವರು ತಮ್ಮ ಪಕ್ಷವನ್ನು ತೊರೆದು ಬಿಜೆಪಿಗೆ ಸೇರಲು ಬಯಸುತ್ತಿದ್ದಾರೆʼ ಎಂದು ತಿಳಿಸಿದ್ದಾರೆ.

ʼಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯು ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸಹಾಯ ಮಾಡಲಿಲ್ಲ.ಆದರ ಬದಲು ಎಎಪಿ ಕಾಂಗ್ರೆಸ್ ಮತಗಳನ್ನು ಪಡೆದುಕೊಂಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ ಎಎಪಿ ಸುಮಾರು 5 ಪ್ರತಿಶತದಷ್ಟು ಮತಗಳನ್ನು ಪಡೆದರೂ, ಕರ್ನಾಟಕದಲ್ಲೂ ಕಾಂಗ್ರೆಸ್ ನಿರ್ನಾಮವಾಗುತ್ತದೆʼ ಎಂದು ಟೀಕಿಸಿದ್ದಾರೆ.

ಗುರುವಾರ ಗುಜರಾತ್‌ ಚುನಾವಣೆಯ ಫಲಿತಾಂಶದ ಕುರಿತು ಮಾತನಾಡಿದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರು,ʼ ಬಿಜೆಪಿ ಪಕ್ಷವು ರಾಜ್ಯದಲ್ಲೂ ತನ್ನ ಗುಜರಾತ್ ಸಾಧನೆಯನ್ನು ಪುನರಾವರ್ತಿಸಲಿದೆ, ಹಾಗೆಯೇ ಮುಂಬರುವ 224 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.

ಹಿಮಾಚಲ ಪ್ರದೇಶದಂತೆ ಕರ್ನಾಟಕದಲ್ಲೂ ಬಿಜೆಪಿ ಕಸದ ಬುಟ್ಟಿಗೆ: ರಾಜ್ಯ ಕಾಂಗ್ರೆಸ್‌ ಟೀಕೆ
ಬೆಂಗಳೂರು: ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು(ಬಿಜೆಪಿ) ಜನರು ಹೇಗೆ ತಿರಸ್ಕರಿಸಿದ್ದಾರೆಯೋ, ಹಾಗೆಯೇ ಕರ್ನಾಟಕದಲ್ಲೂ ಬಿಜೆಪಿಯನ್ನು ರಾಜ್ಯದ ಜನತೆ ತಿರಸಕ್ಕರಿಸುತ್ತದೆ ಎಂದು ರಾಜ್ಯ ಕಾಂಗ್ರೆಸ್‌ ಪಕ್ಷ ಟೀಕಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌ ಘಟಕ, ಬಿಜೆಪಿ ನಾಯಕರು ಚುನಾವಣಾ ದಿಕ್ಸೂಚಿಯನ್ನು ಗುಜರಾತಿನ ಫಲಿತಾಂಶದಿಂದಷ್ಟೇ ನೋಡುವ ಅಗತ್ಯವಿಲ್ಲ, ಹಿಮಾಚಲ ಪ್ರದೇಶದ ಫಲಿತಾಂಶದಿಂದಲೂ ನೋಡಲಿ. ಬಿಜೆಪಿಯ ದುರಾಡಳಿತವನ್ನು ಹಿಮಾಚಲ ಪ್ರದೇಶದ ಜನತೆ ಹೇಗೆ ತಿರಸ್ಕರಿಸಿದ್ದಾರೋ ಹಾಗೆಯೇ ಕರ್ನಾಟಕದಲ್ಲೂ ಬಿಜೆಪಿಯನ್ನು ಕಸದ ಬುಟ್ಟಿಗೆ ಎಸೆಯುತ್ತಾರೆ ಎಂದು  ವ್ಯಂಗಿಸಿದೆ.

ಜನರ ಸ್ಪಂದನೆಯೇ ಇಲ್ಲದ ಖಾಲಿ ಕುರ್ಚಿಗಳ ಸಮಾವೇಶಗಳನ್ನು ಮಾಡಿದ ಬಿಜೆಪಿ ಪಕ್ಷ ಮತ್ತೆ ಗೆಲ್ಲುತ್ತೇವೆ ಎನ್ನುವುದು ಪರಮಹಾಸ್ಯ. ಕುರ್ಚಿಗಳು ಮತ ಹಾಕುವುದಿಲ್ಲ ಎಂಬುದನ್ನು ಬಿಜೆಪಿ ನಾಯಕರು ಮನಗಾಣಲಿ! ಪ್ರಧಾನಿಯ ಮೆಗಾ ರೋಡ್ ಶೋ ಹಿಮಾಚಲ ಪ್ರದೇಶದಲ್ಲಿ ವಿಫಲವಾಗಿದ್ದೇಕೆ? ತವರಿಗೆ ಮಾತ್ರ ಮೋದಿಯವರ ಪ್ರಭಾವ ಸೀಮಿತವಾಗಿದೆಯಲ್ಲವೇ ಎಂದು ರಾಜ್ಯ ಕಾಂಗ್ರೆಸ್‌ ಘಟಕ ಪ್ರಶ್ನಿಸಿದೆ.

'@BJP4Karnataka ನಾಯಕರು ಚುನಾವಣಾ ದಿಕ್ಸೂಚಿಯನ್ನು ಗುಜರಾತಿನ ಫಲಿತಾಂಶದಿಂದಷ್ಟೇ ನೋಡುವ ಅಗತ್ಯವಿಲ್ಲ, ಹಿಮಾಚಲ ಪ್ರದೇಶದ ಫಲಿತಾಂಶದಿಂದಲೂ ನೋಡಲಿ.

ಬಿಜೆಪಿಯ ದುರಾಡಳಿತವನ್ನು
ಹಿಮಾಚಲ ಪ್ರದೇಶದ ಜನತೆ ಹೇಗೆ ತಿರಸ್ಕರಿಸಿದ್ದಾರೋ ಹಾಗೆಯೇ ಕರ್ನಾಟಕದಲ್ಲೂ ಬಿಜೆಪಿಯನ್ನು ಕಸದ ಬುಟ್ಟಿಗೆ ಎಸೆಯುತ್ತಾರೆ.
— Karnataka Congress (@INCKarnataka) December 8, 2022

ಗುಜರಾತ್ ನಲ್ಲಿ ಅತ್ಯಾಚಾರಿಗಳನ್ನು ‘ಸಂಸ್ಕಾರಿ ಬ್ರಾಹ್ಮಣರು’ ಎಂದಿದ್ದ ಅಭ್ಯರ್ಥಿ ಗೆಲುವು
ದೇಶಾದ್ಯಂತ ಹೆಚ್ಚಿನ ಕುತೂಹಲ ಕೆರಳಿಸಿದ್ದ ಗುಜರಾತ್ ಚುನಾವಣೆ ಫಲಿತಾಂಶ ಬಹುತೇಕ ಹೊರಬಿದ್ದಿದ್ದು ಬಿಜೆಪಿ ಪಕ್ಷ ಮತ್ತೊಮ್ಮೆ ಸರ್ಕಾರ ರಚಿಸುವುದು ನಿಚ್ಚಳವಾಗಿದೆ. ಇದರ ನಡುವೆ ಕೆಲವು ಅಭ್ಯರ್ಥಿಗಳ ಫಲಿತಾಂಶ ಕೂಡಾ ಆಶ್ಚರ್ಯದಿಂದ ಕೂಡಿದೆ.

ಇತ್ತೀಚೆಗೆ ದೇಶಾದ್ಯಂತ ಗಮನ ಸೆಳೆದ ಗುಜರಾತ್ ನ ಬಿಲ್ಕೀಸ್ ಬಾನೋ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿದ ಪ್ರಕರಣ ಎಲ್ಲೆಡೆ ಸುದ್ದಿಯಾಗಿತ್ತು. ಜೊತೆಗೆ ಅವರನ್ನು ಬಿಡುಗಡೆ ಮಾಡಿದ ವಿಚಾರವಾಗಿ ದೇಶಾದ್ಯಂತ ಹೆಚ್ಚಿನ ವಿರೋಧ ವ್ಯಕ್ತವಾಗಿತ್ತು‌. ಆ ಸಂದರ್ಭದಲ್ಲಿ ಬಿಲ್ಕೀಸ್ ಬಾನೋ ಅತ್ಯಾಚಾರ ಮಾಡಿದ ಅಪರಾಧಿಗಳನ್ನು ‘ಸಂಸ್ಕಾರಿ ಬ್ರಾಹ್ಮಣರು’ ಎಂದ ಬಿಜೆಪಿ ಅಭ್ಯರ್ಥಿ ಚಂದ್ರಸಿನ್ಹ ರೌಲ್ಜಿ ಮತ್ತೊಮ್ಮೆ ಪ್ರಚಂಡ ಗೆಲುವು ದಾಖಲಿಸಿದ್ದಾರೆ.

ಅತ್ಯಾಚಾರಿಗಳ ಬಿಡುಗಡೆ ಸಂದರ್ಭದಲ್ಲಿ ಚಂದ್ರಸಿನ್ಹ ರೌಲ್ಜಿ ಕೊಟ್ಟ ಹೇಳಿಕೆ ದೊಡ್ಡದಾಗಿ ಸುದ್ದಿ ಮಾಡಿತ್ತು. ಗುಜರಾತ್ ಸೇರಿದಂತೆ ದೇಶದ ಎಲ್ಲಾ ಕಡೆಗಳಲ್ಲೂ ಚಂದ್ರಸಿನ್ಹ ರೌಲ್ಜಿ ಹೇಳಿಕೆಗೆ ವಿರೋಧ ವ್ಯಕ್ತವಾಗಿತ್ತು. ಈ ಕಾರಣದಿಂದ ಈ ಬಾರಿಯ ಗುಜರಾತ್ ಚುನಾವಣೆಯಲ್ಲಿ ರೌಲ್ಜಿ ಫಲಿತಾಂಶ ಕೂಡಾ ಕುತೂಹಲ ಹುಟ್ಟಿಸಿತ್ತು. ಆದರೆ ಚಂದ್ರಸಿನ್ಹ ರೌಲ್ಜಿ ಈಗ ಗೋದ್ರಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಗೋದ್ರಾ ಕ್ಷೇತ್ರದಿಂದ ಸಿ.ಕೆ.ರೌಲ್ಜಿ ಅವರನ್ನು ಭಾರತೀಯ ಜನತಾ ಪಕ್ಷವು ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು ಇಂದು ಚುನಾವಣೆಯ ಫಲಿತಾಂಶ ಹೊರಬಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ರಶ್ಮಿತಾಬೆನ್ ದುಷ್ಯಂತಸಿಂಹ ಚೌಹಾಣ್ ವಿರುದ್ಧ 35 ಸಾವಿರ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಮಾರ್ಚ್ 3, 2002ರಂದು ಗುಜರಾತ್ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನೋ ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು. ಆ ಸಮಯದಲ್ಲಿ 19 ವರ್ಷದವರಾಗಿದ್ದ ಬಿಲ್ಕಿಸ್‌ ಗರ್ಭಿಣಿಯಾಗಿದ್ದರು. ಬಿಲ್ಕಿಸ್‌ ಅವರ ಮೂರು ವರ್ಷದ ಮಗಳು ಸೇರಿದಂತೆ ಅವರ ಕುಟುಂಬದ ಹದಿನಾಲ್ಕು ಸದಸ್ಯರನ್ನು ಅಹಮದಾಬಾದ್ ಬಳಿ ಗಲಭೆಕೋರರು ಹತ್ಯೆ ಮಾಡಿದ್ದರು.ಇಂತಹ ಅಪರಾದಿಗಳನ್ನು ಬಿಡುಗಡೆ ಮಾಡಿದ್ದು ತಪ್ಪು ಎಂಬ ವಾದ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗುತ್ತಿದ್ದಂತೆ. ಇವರೆಲ್ಲರೂ ಸಂಸ್ಕಾರಿ ಬ್ರಾಹ್ಮಣರು ಎಂದು ಸಿ.ಕೆ.ರೌಲ್ಜಿ ಹೇಳಿಕೆ ನೀಡಿದ್ದರು.

ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಎಲ್ಲಾ 11 ಅಪರಾಧಿಗಳನ್ನು ಗುಜರಾತ್ ಸರ್ಕಾರವು ಆಗಸ್ಟ್ 15 ರಂದು ಬಿಡುಗಡೆ ಮಾಡಿತ್ತು. ಸನ್ನಡತೆಯ ನೀತಿಯ ಅಡಿಯಲ್ಲಿ ಅಪರಾಧಿಗಳ ಅರ್ಜಿಯನ್ನು ಅನುಮೋದಿಸಿದ ನಂತರ ಗೋಧ್ರಾ ಜೈಲಿನಿಂದ ಬಿಡುಗಡೆ ಮಾಡಲಾಯಿತ್ತು.

ಗುಜರಾತ್‌ನಲ್ಲಿ ತನ್ನನ್ನು ಬೆಂಬಲಿಸುವ ಮುಸ್ಲಿಂ ಮತದಾರರೊಂದಿಗೆ ಸಹಜವಾಗಿಯೇ ಉತ್ತಮ ಬಾಂಧವ್ಯ ಹೊಂದಿದ್ದ ಕಾಂಗ್ರೆಸ್ ಪಕ್ಷ ಕೆಲವು ಮುಸ್ಲಿಂ ಪ್ರಾಬಲ್ಯ ಇರುವ ಕ್ಷೇತ್ರಗಳಲ್ಲೇ ಸೋಲಿನ ರುಚಿ ಕಂಡಿದೆ. ಇದರಿಂದ ಕಾಂಗ್ರೆಸ್ ಸಾಂಪ್ರದಾಯಿಕವಾಗಿ ತನಗೆ ಬರಬೇಕಾದ ಮುಸ್ಲಿಂ ಮತಗಳನ್ನೂ ಹಿಡಿದಿಟ್ಟುಕೊಳ್ಳುವಲ್ಲಿ ವಿಫಲವಾಗಿದೆ ಎಂದೇ ಊಹಿಸಬಹುದು.

ಗುಜರಾತ್ ಚುನಾವಣೆಯಲ್ಲಿ EVM ತಿರುಚಲಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಆತ್ಮಹತ್ಯೆಗೆ ಯತ್ನ!
ಗಾಂಧಿಧಾಮ: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಆದರೆ ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ಮತಪೆಟ್ಟಿಗೆ ತಿರುಚಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುಜರಾತ್‌ನಲ್ಲಿ ನಡೆದಿದೆ.

12,261 ಮತಗಳ ಅಂತರದಿಂದ ಸೋಲುವುದು ಖಚಿತವಾದಂತೆ ಗಾಂಧಿಧಾಮ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸೋಲಂಕಿ, ಕೆಲವೊಂದು ಮತ ಪೆಟ್ಟಿಗೆಗಳನ್ನು ಸರಿಯಾಗಿ ಸೀಲ್ ಮಾಡಿರಲಿಲ್ಲ ಎಂದು ದೂರಿ ಕುತ್ತಿಗೆಗೆ ಕೇಸರಿ ಸಾಲನ್ನು ಗಟ್ಟಿಯಾಗಿ ಸುತ್ತಿ ಉರುಳು ಹಾಕಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಅವರ ಜೊತೆ ಇದ್ದವರು ಅವರನ್ನು ತಡೆದಿರುವ ಘಟನೆ ಗುಜರಾತ್ ನ ಅಹ್ಮದಾಬಾದ್ ನಲ್ಲಿ ನಡೆದಿದೆ.

182 ವಿಧಾನಸಭಾ ಕ್ಷೇತ್ರಗಳಿರುವ ಗುಜರಾತ್‌ನಲ್ಲಿ ಬಿಜೆಪಿ 157 ಸ್ಥಾನಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಭರ್ಜರಿ ಗೆಲುವಿನ ಹುಮ್ಮಸ್ಸಿನಲ್ಲಿದೆ. ಇಲ್ಲಿ ಕಾಂಗ್ರೆಸ್ 16 ಸೀಟು ಗಳಿಸಿದ್ದರೆ, ಎಎಪಿ ಐದು ಹಾಗೂ ಸ್ವತಂತ್ರ ಅಭ್ಯರ್ಥಿಗಳು ನಾಲ್ಕು ಸೀಟುಗಳನ್ನು ಗಳಿಸಿದ್ದಾರೆ.

@aajtak @anjanaomkashyap @chitraaum @sudhirchaudhary Gandhidham – Kutch district me Congress candidate haar ke dar se suicide karne ki koshish ki. pic.twitter.com/yu9qhlIxvF
— Timir (@niyatimir) December 8, 2022

ಗುಜರಾತ್: ತನ್ನ ದಾಖಲೆ ತಾನೇ ಮುರಿಯುತ್ತಿರುವ ಬಿಜೆಪಿ
ಗಾಂಧಿನಗರ (ಗುಜರಾತ್): 1995ರ ನಂತರ ಒಂದೇ ಒಂದು ಚುನಾವಣೆಯಲ್ಲೂ ಸೋಲು ಕಾಣದ ಭಾರತೀಯ ಜನತಾ ಪಕ್ಷ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತನ್ನ ದಾಖಲೆಯನ್ನು ತಾನೇ ಮುರಿಯುತ್ತಿದೆ.

182 ಸದಸ್ಯ ಸ್ಥಾನದ ಗುಜರಾತ್‌ ವಿಧಾನಸಭೆಯಲ್ಲಿ 1995ರಿಂದ ಈಚೆಗೆ ನಡೆದ ಚುನಾವಣೆಗಳಲ್ಲಿ 149 ಸ್ಥಾನಗಳನ್ನು ಗಳಿಸಿದ್ದೇ ದೊಡ್ಡ ದಾಖಲೆಯಾಗಿತ್ತು. ಈ ದಾಖಲೆಯನ್ನು ಬಿಜೆಪಿ ಮುರಿಯಲಿದ್ದು, ಈಗಾಗಲೇ 158 ಸ್ಥಾನಗಳಲ್ಲಿ ಮುನ್ನಡೆ ಕಾಪಾಡಿಕೊಂಡಿದೆ. 27 ವರ್ಷಗಳಿಂದ ಗುಜರಾತನ್ನು ಆಳುತ್ತಿರುವ ಭಾರತೀಯ ಜನತಾ ಪಕ್ಷ ಇದೇ ಮೊದಲ ಬಾರಿ ಪ್ರಚಂಡ ಬಹುಮತವನ್ನು ಗಳಿಸಲಿದೆ.

ಈ ಬಾರಿಯ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿ ಏಳನೇ ಬಾರಿ ಗುಜರಾತ್‌ನಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಅಂದಾಜು ಮಾಡಲಾಗಿತ್ತು. ಆದರೆ ಚುನಾವಣೋತ್ತರ  ಸಮೀಕ್ಷೆಗಳ ಅಂದಾಜನ್ನು ಮೀರಿ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತಿದೆ. ಅಷ್ಟು ಮಾತ್ರವಲ್ಲ ಸ್ವತಃ ಬಿಜೆಪಿ ನಾಯಕರೇ ಹೇಳಿಕೊಂಡಿದ್ದ ಅಂಕಿಗಳನ್ನೂ ಮೀರಿ ಜಯ ಗಳಿಸುತ್ತಿದೆ.

2002ರ ಚುನಾವಣೆಯಲ್ಲಿ ಬಿಜೆಪಿ 149 ಸ್ಥಾನಗಳನ್ನು ಗೆದ್ದು ಬೀಗಿತ್ತು. ಈಗ ಈ ದಾಖಲೆಯನ್ನು ಬಿಜೆಪಿಯೇ ಮುರಿಯುತ್ತಿದೆ. ಅಲ್ಲದೆ ಸತತ ಏಳು ಬಾರಿ ರಾಜ್ಯವೊಂದರ ಅಧಿಕಾರದ ಚುಕ್ಕಾಣಿ ಹಿಡಿದ ಎಡರಂಗದ ದಾಖಲೆಯನ್ನು ಸರಿಗಟ್ಟುತ್ತಿದೆ. ಸತತ ಏಳು ಅವಧಿಗೆ ಪಶ್ಚಿಮ ಬಂಗಾಳದಲ್ಲಿ ಎಡರಂಗ ಗೆಲುವು ಸಾಧಿಸಿ ಸರ್ಕಾರ ರಚಿಸಿತ್ತು.

ಡಿಸೆಂಬರ್‌ 1 ಮತ್ತು ಡಿಸೆಂಬರ್‌ 5ರಂದು ಎರಡು ಹಂತದ ಚುನಾವಣೆಗಳಲ್ಲಿ ಗುಜರಾತ್‌ ಚುನಾವಣೆಗಳು ನಡೆದಿದ್ದು, ಮತಗಳ ಎಣಿಕೆ ಕಾರ್ಯ ಭರದಿಂದ ಸಾಗಿದೆ. ಮೊದಲ ಹಂತದಲ್ಲಿ 89 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದರೆ, ಎರಡನೇ ಹಂತದಲ್ಲಿ ಉಳಿದ 93 ಸ್ಥಾನಗಳಿಗೆ ಮತದಾನ ನಡೆದಿತ್ತು. ಒಟ್ಟು 4.9 ಕೋಟಿ ಮತದಾರರ ಪೈಕಿ 3.16 ಕೋಟಿ ಮತದಾರರು ತಮ್ಮ ಮತದಾನದ ಹಕ್ಕು ಚಲಾಯಿಸಿದ್ದರು.

ಕರ್ನಾಟಕದಲ್ಲಿ ಸುಮ್ಮನೆ ಚುನಾವಣೆ ಎದುರಿಸಿದರು ಕಾಂಗ್ರೆಸ್‌ ಗೆಲ್ಲುತ್ತೆ: ಸಿದ್ದರಾಮಯ್ಯ
ಮೈಸೂರು: ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಸುಮ್ಮನೆ ಚುನಾವಣೆ ಎದುರಿಸಿದರೂ ಗೆಲ್ಲಲಿದೆ, ಇಲ್ಲಿ ಯಾವ ತಂತ್ರಗಾರಿಕೆಯ ಅವಶ್ಯಕತೆಯೂ ಇಲ್ಲ  ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಗುಜರಾತ್‌ ಹಾಗೂ ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶದ ಬಗ್ಗೆ ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ಮಾತನಾಡಿದ ಅವರು, ʼನನಗಿದ್ದ ಮಾಹಿತಿ ಪ್ರಕಾರ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಇದೆ ಮತ್ತು ಗುಜರಾತ್‌ ನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬುದಾಗಿತ್ತು. ಗುಜರಾತ್‌ ನಲ್ಲಿ ಬಿಜೆಪಿ ಗೆದ್ದಿರುವುದರಲ್ಲಿ ಆಶ್ಚರ್ಯ ಇಲ್ಲ, ಆಮ್‌ ಆದ್ಮಿ ಪಕ್ಷದವರು ಸ್ಪರ್ಧೆ ಮಾಡಿ, ನಮ್ಮ ಮತಗಳನ್ನು ಪಡೆದುಕೊಂಡಿದ್ದಾರೆ, ಬಹುತೇಕ ಕ್ಷೇತ್ರಗಳಲ್ಲಿ ಆಮ್‌ ಆದ್ಮಿ ಪಕ್ಷ ನಮ್ಮ ಮತಗಳನ್ನೇ ಕಬಳಿಸಿದೆ. ಇದರಿಂದ ಗುಜರಾತ್‌ ನಲ್ಲಿ ಹಿನ್ನಡೆಯಾಗಿದೆ ಆದರೆ ಹಿಮಾಚಲ ಪ್ರದೇಶದಲ್ಲಿ ಈ ರೀತಿ ಆಗಿಲ್ಲ. ಕಾಂಗ್ರೆಸ್‌ ಪಕ್ಷ ಮುನ್ನಡೆಯಲ್ಲಿದೆ, ಹಾಗೆಯೇ ಕಾಂಗ್ರೆಸ್‌ ಬಹುಮತ ಪಡೆಯಲಿದೆ ಎಂಬ ಮಾಹಿತಿ ಇದೆ ಎಂದರು.

ಒಂದು ರಾಜ್ಯದ ಚುನಾವಣಾ ಫಲಿತಾಂಶ ಇನ್ನೊಂದು ರಾಜ್ಯದ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರಲ್ಲ. ಹಾಗೆ ಯೋಚಿಸುವುದಾದರೆ ದೆಹಲಿಯ ಪಾಲಿಕೆ ಚುನಾವಣೆಯ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪ್ರಭಾವ ಬೀರುತ್ತಾ? ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಮಹಾರಾಷ್ಟ್ರದ ಚುನಾವಣೆಯ ಫಲಿತಾಂಶ ಬೇರೆ ಕಡೆ ಪ್ರಭಾವ ಬೀರುತ್ತದಾ? ಆಯಾ ರಾಜ್ಯದ ಸಮಸ್ಯೆಗಳು ಮತ್ತು ಸ್ಥಳೀಯ ವಿಚಾರಗಳ ಮೇಲೆ ಫಲಿತಾಂಶ ನಿರ್ಧಾರವಾಗುತ್ತದೆ. ನಮ್ಮ ರಾಜ್ಯದಲ್ಲಿ ಅತೀ ಭ್ರಷ್ಟ ಸರ್ಕಾರವಿದೆ, ಇಲ್ಲಿ ಕಾಂಗ್ರೆಸ್‌ ಪಕ್ಷ ಸಂಘಟನಾ ದೃಷ್ಟಿಯಿಂದ ಹೆಚ್ಚು ಶಕ್ತಿಶಾಲಿಯಾಗಿದೆ. ಹಾಗಾಗಿ ಗುಜರಾತ್‌ ಫಲಿತಾಂಶ ಇಲ್ಲಿನ ಚುನಾವಣೆಯ ಮೇಲೆ ಯಾವ ಪ್ರಭಾವ ಬೀರಲ್ಲ ಎಂದು ಸಿದ್ದರಾಮಯ್ಯ ಅಭಿಪ್ರಾಪಟ್ಟಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆ ಇತ್ತು, ಬಿಜೆಪಿ ಸರ್ಕಾರದ ವಿರುದ್ಧ ಜನಾಕ್ರೋಶ ಇತ್ತು. ಹಾಗಾಗಿ ಕಾಂಗ್ರೆಸ್‌ ಪಕ್ಷಕ್ಕೆ ಬಹುಮತ ಸಿಗುವ ಸಾಧ್ಯತೆ ಇದೆ ಎಂಬ ಲೆಕ್ಕಾಚಾರ ಇತ್ತು, ಆದರೆ ಗುಜರಾತ್‌ ನಲ್ಲಿ ಆಮ್‌ ಆದ್ಮಿ ಪಕ್ಷ ಬಹಳಷ್ಟು ಹಣ ಖರ್ಚು ಮಾಡಿದೆ, ನನಗಿರುವ ಮಾಹಿತಿ ಪ್ರಕಾರ ಬಿಜೆಪಿ ಪಕ್ಷವೇ ಆಮ್‌ ಆದ್ಮಿ ಪಕ್ಷಕ್ಕೆ ಹಣ ನೀಡಿ ಕಾಂಗ್ರೆಸ್‌ ಮತಗಳನ್ನು ಒಡೆಯುವ ತಂತ್ರ ಮಾಡಿದೆ. ಕರ್ನಾಟಕದಲ್ಲಿ ಆಮ್‌ ಆದ್ಮಿ ಪಕ್ಷ ಇಲ್ಲ, ಹಾಗಾಗಿ ಜೆಡಿಎಸ್‌ ಜೊತೆ ಬಿಜೆಪಿ ರಾಜ್ಯದಲ್ಲಿ ತಂತ್ರಗಾರಿಕೆ ಮಾಡಬಹುದು, ಆದರೆ ಇದರಿಂದ ಯಾವ ಲಾಭ ಆಗಲ್ಲ ಎಂದರು.

ಕರ್ನಾಟಕದಲ್ಲೇ ಬೇರೆ ರೀತಿಯ ವಿಚಾರಗಳು ಇವೆ, ಎಲ್ಲಕ್ಕಿಂತ ಮುಖ್ಯವಾಗಿ ರಾಜ್ಯದಲ್ಲಿ ಪ್ರಬಲವಾದ ಆಡಳಿತ ವಿರೋಧಿ ಅಲೆ ಇದೆ. ಇಲ್ಲಿನ ಸರ್ಕಾರದ ದುರಾಡಳಿತ, ಭ್ರಷ್ಟಾಚಾರ, ನಿಷ್ಕ್ರಿಯತೆ ಇವುಗಳು ಮುಖ್ಯವಾದುದು. ಲಂಚ ನೀಡದೆ ಯಾವ ಕೆಲಸಗಳು ಇಲ್ಲಿ ಆಗುತ್ತಿಲ್ಲ, 40% ಕಮಿಷನ್‌ ಗುಜರಾತ್‌ ನಲ್ಲಿ ಇದೆ ಎಂದು ಯಾರಾದರೂ ಹೇಳಿದ್ದರಾ? ಇದು ಇರುವುದು ರಾಜ್ಯದಲ್ಲಿ ಎಂದು ಟೀಕಿಸಿದ್ದಾರೆ.

ಜೆಡಿಎಸ್‌ ಪಕ್ಷ ರಾಜ್ಯದಲ್ಲಿ ಹೊಸದಾಗಿ ಚುನಾವಣೆಗೆ ಸ್ಪರ್ಧೆ ಮಾಡುತ್ತಿಲ್ಲ, 1999 ರಿಂದಲೂ ಚುನಾವಣಾ ಅಖಾಡದಲ್ಲಿದೆ.

ಆಮ್‌ ಆದ್ಮಿ ಪಕ್ಷ ಗುಜರಾತ್‌ ನಲ್ಲಿ 10% ಮತ ಪಡೆದರೂ ಕೂಡ ಕಾಂಗ್ರೆಸ್‌ ನ ಗೆಲ್ಲುವ ಸೀಟುಗಳು ಕಡಿಮೆಯಾಗಿಬಿಡುತ್ತದೆ. ಆಮ್‌ ಆದ್ಮಿ ಪಕ್ಷ ಕಾಂಗ್ರೆಸ್‌ ಗಿಂತ ಹೆಚ್ಚು ಪ್ರಚಾರ ಮಾಡಿದರೂ ಕೇವಲ ಆರು ಸೀಟುಗಳನ್ನು ಗೆಲ್ಲಲಿದೆ. ಹೆಚ್ಚು ಹಣವನ್ನು ಆಮ್‌ ಆದ್ಮಿ ಪಕ್ಷ ಚುನಾವಣೆಗೆ ಖರ್ಚು ಮಾಡಿದೆ. ರಾಹುಲ್‌ ಗಾಂಧಿ ಅವರು ಭಾರತ ಐಕ್ಯತಾ ಯಾತ್ರೆಯಲ್ಲಿ ಇದ್ದುದ್ದರಿಂದ 2 ದಿನ ಅಷ್ಟೆ ಪ್ರಚಾರ ಮಾಡಲು ಹೋಗಿದ್ದರು. ಮಲ್ಲಿಕಾರ್ಜುನ ಖರ್ಗೆ ಅವರು ಪ್ರಚಾರ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಚುನಾವಣೆ ಗೆಲ್ಲಲು ಯಾವ ತಂತ್ರಗಾರಿಕೆಯೂ ಬೇಡ, ನಾವು ಸುಮ್ಮನೆ ಇದ್ದರೂ ಗೆಲ್ಲುತ್ತೇವೆ. ನರೇಂದ್ರ ಮೋದಿ ಅವರ ಹವಾ ರಾಜ್ಯದಲ್ಲಿ ಇಲ್ಲ. ನರೇಂದ್ರ ಮೋದಿ ಅವರು ವಾಸ ಮಾಡುವ ದೆಹಲಿಯಲ್ಲೇ ಅವರ ಹವಾ ಇಲ್ಲ. ಇನ್ನು ಇಲ್ಲಿ ಇರುತ್ತಾ? ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಗುಜರಾತ್ ಚುನಾವಣಾ ಫಲಿತಾಂಶ, ಸುಶಾಸನದ ಫಲ: ಸಿಎಂ ಬೊಮ್ಮಾಯಿ
ಬೆಂಗಳೂರು: ಗುಜರಾತ್  ಚುನಾವಣಾ  ಫಲಿತಾಂಶ ಸುಶಾಸನದ ಫಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಲಲಿತ್ ಅಶೋಕ್ ಹೋಟೆಲ್ ಬಳಿ  ಮಾತನಾಡಿದ್ದಾರೆ.

ಗುಜರಾತ್‌ ಚುನಾವಣೆ ಬಗ್ಗೆ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿಯವರು, ʼಚುನಾವಣೆಯಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದು, ಈ ಬಾರಿಯೂ ಗುಜರಾತ್ ನಲ್ಲಿ ಅಭೂತಪೂರ್ವ ಗೆಲುವು ಸಾಧಿಸುತ್ತಿದೆ. ಕಳೆದ ಎಲ್ಲ ಚುನಾವಣೆ ಗಳಿಗಿಂತ ಅತಿ ಹೆಚ್ಚು ಸ್ಥಾನಗಳನ್ನು ಪಡೆದುಕೊಳ್ಳುತ್ತಿದ್ದೇವೆ. ಇದು ಚುನಾವಣೋತ್ತರ ಸಮೀಕ್ಷೆಯಲ್ಲಿಯೂ ತಿಳಿದು ಬಂದಿತ್ತು. ಒಂದು ರಾಜ್ಯದಲ್ಲಿ ಸುಶಾಸನ ತಂದರೆ ಜನ ಬೆಂಬಲ ಕೊಡುತ್ತಾರೆ. ಇದುವರೆಗೂ ದೇಶದಲ್ಲಿ ಆಡಳಿತ  ವಿರೋಧ  ಟ್ರೆಂಡ್ ಇತ್ತು. ಗುಜರಾತ್ ಆಡಳಿತದ ಪರವಾಗಿದೆ ಎಂದು ನಿರೂಪಿಸಿದೆ. 7 ನೇ ಬಾರಿ ಗೆಲ್ಲುತ್ತಿರುವುದು ಸುಲಭದ ಮಾತಲ್ಲ. ಆಡಳಿತದ ಪರವಾಗಿ ಜನ ನಿಲ್ಲಲು ಸರ್ಕಾರಗಳು ಕೆಲಸ ಮಾಡಬೇಕಾಗುತ್ತದೆ. ಆ ಕೆಲಸವನ್ನು ಗುಜರಾತ್ ಸರ್ಕಾರ ಮಾಡಿದೆʼ ಎಂದರು.

ಮೋದಿಯವರ ನಾಯಕತ್ವದ ಬಗ್ಗೆ ಮಾತನಾಡಿ, ʼಎಲ್ಲಕ್ಕೂ ಮಿಗಿಲಾಗಿ ಇದಕ್ಕೆ ಅಡಿಪಾಯ ಹಾಕಿ ಬೆಳಸಿ, ಮಾರ್ಗದರ್ಶನ ಮಾಡುತ್ತಿರುವುದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಾಯಕತ್ವ.  ಅವರ ಸಕಾರಾತ್ಮಕ ನಾಯಕತ್ವ ಸುಮಾರು ಒಂದು ತಲೆಮಾರು ದಾಟಿದರೂ ಹಳೆ ಮತ್ತು ಹೊಸ  ಪೀಳಿಗೆ ಅವರ ಆಡಳಿತ, ದಕ್ಷತೆಯನ್ನು ಒಪ್ಪಿದ್ದಾರೆ. ದೇಶ ಮುನ್ನಡೆಸುವ ಶಕ್ತಿಯ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಕಳೆದ ಬಾರಿ 3 ರಾಜ್ಯಗಳಲ್ಲಿ ಸಹ  ಗೆದ್ದಿದ್ದೇವೆ. ಹಿಮಾಚಲ ಪ್ರದೇಶದಲ್ಲಿ ಸಮಬಲದ ಹೋರಾಟವಿದೆ. ಅಂತಿಮವಾಗಿ ಬಿಜೆಪಿ ಗೆದ್ದು ಸರ್ಕಾರ ರಚಿಸಲಿದೆ ಎಂದು ಹೇಳಿದ್ದಾರೆ.

ನವದೆಹಲಿಯಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ  15 ವರ್ಷ ಆಡಳಿತ ಮಾಡುವುದೇ ದೊಡ್ಡ ಸಾಧನೆ. ಸ್ಥಳೀಯ ಸಮಸ್ಯೆಗಳು  ಬಹಳ ಇರುತ್ತವೆ. ಮತದಾರರ ಸಣ್ಣ ಸಂಖ್ಯೆ, ಬಹು ಆಯಾಮದ ಸ್ಪರ್ಧೆ ಇರುತ್ತದೆ. ಮುನಿಸಿಪಲ್ ಚುನಾವಣೆಯನ್ನು  ಸಾರ್ವತ್ರಿಕ ಚುನಾವಣೆಗೆ  ಹೋಲಿಕೆ ಮಾಡಲಾಗುವುದಿಲ್ಲ ಎಂದರು.

ಬಿಜೆಪಿ ಗೆಲುವಿನ ಪರಿಣಾಮ ಸಕಾರಾತ್ಮಕವಾಗಿ ಕರ್ನಾಟಕದ ಚುನಾವಣೆಯ ಮೇಲೆ ಆಗಿಯೇ ಆಗುತ್ತದೆ. ಬಿಜೆಪಿ ಕಾರ್ಯಕರ್ತರು ಹಾಗೂ ಬೆಂಬಲಿಗರಿಗೆ ದೊಡ್ಡ ನೈತಿಕ ಬಲ ಸಿಗಲಿದೆ. ಇನ್ನಷ್ಟು ಹುರುಪು, ಹುಮ್ಮಸ್ಸಿನಲ್ಲಿ ಕೆಲಸ ಮಾಡಿದರೆ  ಜಯ ನಿಶ್ಚಿತ ಎಂದು ಪಕ್ಷದ ಬಗ್ಗೆ ಮಾತನಾಡಿದರು.