HD Kumaraswamy – Peepal Media

ಎಡಿಜಿಪಿ ವಿರುದ್ಧ ಕ್ರಮ ತೆಗೆದುಕೊಳ್ಳಲು ಜೆಡಿಎಸ್‌ ಒತ್ತಾಯ
ಬೆಂಗಳೂರು: ಕುಮಾರಸ್ವಾಮಿಯವರನ್ನು ಇತ್ತೀಚೆಗೆ ಟೀಕಿಸಿ ಹೇಳಿಕೆ ನೀಡಿದ್ದ ಕರ್ನಾಟಕ ಲೋಕಯುಕ್ತ ವಿಶೇಷ ತನಿಖಾ ದಳದ ಮುಖ್ಯಸ್ಥ ಎಡಿಜಿಪಿಎಂ ಚಂದ್ರಶೇಖರ್‍ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಜೆಡಿಎಸ್‌ ನಾಯಕರು ಮನವಿ ನೀಡಿದರು.
ಕರ್ನಾಟಕ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ನಿರ್ದೇಶಕರಾದ ಡಾ. ಅಲೋಕ್ ಮೋಹನ್ ಅವರನ್ನು ಭೇಟಿ ಮಾಡಿ ಭಾರತ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರು ಹಾಗೂ ಜನತಾದಳ(ಜಾತ್ಯತೀತ) ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಅಸಭ್ಯ ಮತ್ತು ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ ಎಂದು ಐಪಿಎಸ್ ಅಧಿಕಾರಿ ಹಾಗೂ ಎಸ್‍ಐಟಿ ಮುಖ್ಯಸ್ಥ ಎಂ ಚಂದ್ರಶೇಖರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಮುಖಂಡ ಟಿ.ಎ. ಶರವಣ ನೇತೃತ್ವದಲ್ಲಿ ಜೆಡಿಎಸ್ ಪಕ್ಷ ನಾಯಕರು ಮನವಿ ನೀಡಿದ್ದಾರೆ.

ದೇಶದ ವಿರೋಧಪಕ್ಷಗಳ ವಿರುದ್ಧ ಮೋದಿ ದ್ವೇಷ- ಬಿಜೆಪಿ ಜೆಡಿಎಸ್ ಪಿತೂರಿಗೆ ನಾನು ಹೆದರಲ್ಲ: ಸಿಎಂ ಸ್ಪಷ್ಟ ಎಚ್ಚರಿಕೆ
ಬೆಂಗಳೂರು, ಸೆಪ್ಟೆಂಬರ್ 24: ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಿ, ಹಾಗೂ ನನಗೆ ಕಪ್ಪು ಮಸಿ ಬಳಿಯಲು ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಪ್ರಯತ್ನಕ್ಕೆ ಸೋಲು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಛ ನ್ಯಾಯಾಲಯದ ಆದೇಶ ಹೊರಬಂದ ನಂತರ ಪತ್ರಿಕಾ ಗೋಷ್ಠಿ ನಡೆಸಿ, ತಮ್ಮ ಮೊದಲ ಪ್ರತಿಕ್ರಿಯೆ ನೀಡಿದರು.

ಕಾನೂನು ತಜ್ಞರೊಂದಿಗೆ ಚರ್ಚಿಸಿ ಮುಂದಿನ ಕ್ರಮ

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ , ಬಿಎನ್ ಎಸ್ ಎಸ್ ಪ್ರಕಾರ 218 ಹಾಗೂ ಪಿಸಿ ಕಾಯ್ದೆ 19ರಂತೆ ತನಿಖೆಗೆ ಅನುಮತಿ ನೀಡುವುದನ್ನು ತಿರಸ್ಕರಿಸಿ, ಪಿಸಿ ಕಾಯ್ದೆಯ 17 ಎ ಪ್ರಕಾರ ತನಿಖೆಗೆ ಉಚ್ಛನ್ಯಾಯಾಲಯ ಆದೇಶ ನೀಡಿದೆ. ಈ ತೀರ್ಪಿನ ಮೇಲೆ ಕಾನೂನು ಹೋರಾಟದ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ಮಾಡಿ , ಮುಂದಿನ ಕ್ರಮದ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದರು.

ಬಿಜೆಪಿ ಜೆಡಿಎಸ್ ನ ಪಿತೂರಿಗೆ ಹೆದರುವುದಿಲ್ಲ

ಬಿಜೆಪಿ ಜೆಡಿಎಸ್ ನ ಪಿತೂರಿಗೆ ನಾನು ಎಂದೂ ಹೆದರುವುದಿಲ್ಲ. ಬಿಜೆಪಿ ಜೆಡಿಎಸ್ ಸಂಚು , ರಾಜಭವನ ದುರುಪಯೋಗ ಹಾಗೂ ದುರ್ಬಳಕೆಗೆ ನಾನು ಹೆದರುವುದಿಲ್ಲ. ರಾಜ್ಯದ ಜನ , ಪಕ್ಷದ ಹೈಕಮಾಂಡ್, ಶಾಸಕರು, ಸಚಿವರು, ಕಾರ್ಯಕರ್ತರು ನನ್ನೊಂದಿಗಿದ್ದಾರೆ. ಕಾನೂನು ಹೋರಾಟಕ್ಕೆ ಹೈಕಮಾಂಡ್ ಸಹಕಾರ ನೀಡಲಿದೆ. ನರೆಂದ್ರ ಮೋದಿಯವರ ಬಿಜೆಪಿ ಸರ್ಕಾರ , ಕೇವಲ ನನ್ನ ಮೇಲಷ್ಟೇ ಅಲ್ಲ , ಇಡೀ ದೇಶದ ವಿರೋಧಪಕ್ಷಗಳ ವಿರುದ್ಧ ಮೇಲೆ ಸೇಡಿನ ರಾಜಕೀಯ ಮಾಡುತ್ತಿದ್ದಾರೆ. ಮಾಡುತ್ತಿದ್ದಾರೆ ಎಂದರು.

ಆಪರೇಷನ್ ಕಮಲದ ಪ್ರಯತ್ನ ವಿಫಲ

ಬಿಜೆಪಿ ಹಾಗೂ ಜೆಡಿಎಸ್ ನವರು ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬಂದಿಲ್ಲ. ವಿಧಾನಸಭೆ ಚುನಾವಣೆಯಲ್ಲಿಯೂ ಸೋತಿದ್ದಾರೆ. ಅವರು ಹಣಬಲದಿಂದ, ಆಪರೇಷನ್ ಕಮಲ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರೇ ಹೊರತು, ಜನರ ಆಶೀರ್ವಾದದೊಂದಿಗೆ ಎಂದಿಗೂ ಬಿಜೆಪಿ-ಜೆಡಿಎಸ್ ಅಧಿಕಾರಕ್ಕೆ ಬಂದಿಲ್ಲ. ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನ ಗೆದ್ದಿರುವ ಕಾಂಗ್ರೆಸ್ ಪಕ್ಷ ಬಂದಿದ್ದರಿಂದ ಆಪರೇಷನ್ ಕಮಲ ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ದುಡ್ಡನ್ನು ಕೊಟ್ಟು ಶಾಸಕರನ್ನು ಖರೀದಿಸುವ ಪ್ರಯತ್ನ ಮಡಿದರು. ನಮ್ಮ ಯಾವ ಶಾಸಕರೂ ದುಡ್ಡಿನ ಹಿಂದೆ ಹೋಗದ ಕಾರಣ,ಅವರ ಪ್ರಯತ್ನ ವಿಫಲವಾಯಿತು ಎಂದರು.

ಬಿಜೆಪಿಯವರು ಸಾಮಾಜಿಕ ನ್ಯಾಯ, ಬಡವರ ವಿರೋಧಿಗಳು

ಕಾಂಗ್ರೆಸ್ ಸರ್ಕಾರದ ಬಡವರ ಪರ ಕಾರ್ಯಕ್ರಮಗಳನ್ನು ಬಿಜೆಪಿ ವಿರೋಧಿಸುತ್ತಾ ಬಂದಿದ್ದಾರೆ. ಶೂಭಾಗ್ಯ, ಪಶುಭಾಗ್ಯ, ಶಾದಿಭಾಗ್ಯ , ಕ್ಷೀರಭಾಗ್ಯ ಸೇರಿದಂತೆ ಹಲವು ಜನಪರ ಯೋಜನೆಗಳು ಹಾಗೂ ಈಗಿನ ಗ್ಯಾರಂಟಿ ಯೋಜನೆಗಳನ್ನು ಸಹ ವಿರೋಧಿಸುತ್ತಿದ್ದಾರೆ. ಬಿಜೆಪಿಯವರು ಸಾಮಾಜಿಕ ನ್ಯಾಯ, ಬಡವರ ವಿರೋಧಿಗಳು. ಸರ್ಕಾರಕ್ಕೆ ಕಪ್ಪು ಮಸಿ ಬಳಿಯುವುದು ಅವರ ದುರಾಲೋಚನೆ. ಹೈಕೋರ್ಟ್ ಆದೇಶದ ಪ್ರತಿಯನ್ನು ಸಂಪೂರ್ಣ ಪರಿಶೀಲಿಸಿ , ಮುಂದಿನ ಪ್ರತಿಕ್ರಿಯೆಯನ್ನು ನೀಡುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಇಡೀ ದೇಶದಲ್ಲಿ ಪಿತೂರಿ ಮಾಡಿದಂತೆ ಕರ್ನಾಟಕದಲ್ಲಿಯೂ ನನ್ನ ಹಾಗೂ ಸರ್ಕಾರದ ವಿರುದ್ಧ ಪಿತೂರಿ ಮಾಡಲಾಗಿದೆ ಎಂದರು.

ಕಾನೂನಾತ್ಮಕ ಹೋರಾಟ:
ಆದೇಶ ತೃಪ್ತಿ ತಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಇದೊಂದು ಕಾನೂನಾತ್ಮಕ ಹೋರಾಟ. ಈ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ಮಾಡಿ ಪ್ರತಿಕ್ರಿಯೆ ನೀಡುವುದಾಗಿ ಹೇಳಿದರು.

ತಪ್ಪು ಮಾಡಿಲ್ಲ
ನನ್ನ ಪ್ರಕಾರ ನಾನು ತಪ್ಪು ಮಾಡಿಲ್ಲ. 17 ಎ ರಡಿ ತನಿಖೆ ಮಾಡಲು ಆದೇಶ ನೀಡಿದ ಮಾತ್ರಕ್ಕೆ ನಾನು ತಪ್ಪು ಮಾಡಿದ್ದೇನೆ ಎಂದಲ್ಲ. ಬಿ ಎನ್.ಎಸ್.ಎಸ್ ಕಾಯ್ದೆಯಡಿ 218 ಆದೇಶ ಮಾಡಿಲ್ಲ ಎಂದು ಸ್ಪಷ್ಟ ಪಡಿಸಿದರು.

ಸಚಿವ ಕುಮಾರಸ್ವಾಮಿಯವರಿಗೆ ಅನ್ವಯವಾಗುವುದಿಲವೇ?

ಬಿಜೆಪಿಯವರು ಮುಖ್ಯಮಂತ್ರಿಗಳು ರಾಜಿನಾಮೆ ಕೊಡಲು ಒತ್ತಾಯಿಸಿ ಪ್ರತಿಭಟನೆ ಮಾಡುತ್ತಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಅವರನ್ನು ನಾವು ಎದುರಿಸುತ್ತೇವೆ. ರಾಜಿನಾಮೆ ಏಕೆ ಕೊಡಬೇಕು ಎಂದು ಪ್ರಶ್ನಿಸಿದರು. ರಾಜಿನಾಮೆ ಕೇಳುವುದಿಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ಹೇಳಿಕೆಗೆ ಪ್ರತಿಕ್ರಿಯಿಸಿ ಅವರ ಮೇಲೆ ಎಫ್.ಐ.ಆರ್ ಆಗಿದ್ದು ಅವರು ಜಾಮೀನಿನ ಮೇಲೆ ಇದ್ದಾರೆ.ಅವರು ರಾಜಿನಾಮೆ ಕೊಟ್ಟಿದ್ದಾರೆಯೇ? ಇದು ಅವರಿಗೆ ಅನ್ವಯವಾಗುವುದಿಲ್ಲವೇ? ತನಿಖೆ ಹಂತದಲ್ಲಿಯೇ ರಾಜಿನಾಮೆ ಕೊಡುವ ಬಗ್ಗೆ ಕುಮಾರಸ್ವಾಮಿಯವರನ್ನು ಕೇಳಿ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ನ್ಯಾಯಾಲಯದ ತೀರ್ಪನ್ನು ನಾನು ಪೂರ್ತಿ ಓದಿಲ್ಲ. ಮಾಧ್ಯಮಗಳಲ್ಲಿ ಬಿತ್ತರಿಸಿರುವುದನ್ನು ಮಾತ್ರ ಓದಿದ್ದೇನೆ ಎಂದರು. ಓದಿದ ನಂತರ ಪುನಃ ಪ್ರತಿಕ್ರಿಯೆ ನೀಡುತ್ತೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಬಿಜೆಪಿ-ಜೆಡಿಎಸ್ ಲೋಕಸಭಾ ಅಭ್ಯರ್ಥಿಯಾಗಿ ಹೆಚ್.ಡಿ.ಕುಮಾರಸ್ವಾಮಿ!
ಇತ್ತೀಚಿನ ದಿನಗಳ ರಾಜ್ಯ ರಾಜಕೀಯದಲ್ಲಿ ಹಿಟ್ ಅಂಡ್ ರನ್ ರಾಜಕಾರಣಿ ಅಂತಲೇ ಪ್ರಸಿದ್ಧಿ ಪಡೆದಿರುವ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಈಗ ಲೋಕಸಭಾ ಅಖಾಡಕ್ಕೆ ಹೆಜ್ಜೆ ಇರಿಸುವುದು ಬಹುತೇಕ ಖಚಿತ ಎನ್ನುವಂತಾಗಿದೆ. ರಾಮನಗರದಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲಿನ ನೋವು ಮಾಸುವ ಮುನ್ನವೇ ಕಾಂಗ್ರೆಸ್ ನ ದೊಡ್ಡ ಭದ್ರಕೋಟೆಯಂತಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಕುಮಾರಸ್ವಾಮಿ ಸ್ವತಃ ಅಭ್ಯರ್ಥಿಯಾಗುವ ಕಣ್ಣಿಟ್ಟಿದ್ದಾರೆ.

ಇದೇ ಹಿನ್ನೆಲೆಯಲ್ಲಿ ಗುರುವಾರ ಬಿಜೆಪಿ ವರಿಷ್ಠರೊಂದಿಗೆ ಮಾತುಕಥೆ ನಡೆಸಲು ತೆರಳಿರುವ ಕುಮಾರಸ್ವಾಮಿ ಹಳೆ ಮೈಸೂರು ಭಾಗದ ಕೆಲವು ಲೋಕಸಭಾ ಕ್ಷೇತ್ರಗಳ ಬಗ್ಗೆ ಪ್ರಸ್ತಾಪಿಸಲಿದ್ದಾರೆ. ಸೀಟು ಹಂಚಿಕೆ ಬಗ್ಗೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಅಮಿತ್ ಷಾ ಜೊತೆಗೆ ಚರ್ಚೆ ನಡೆಸಿ ಎಷ್ಟು ಸಾಧ್ಯವೋ ಅಷ್ಟು ಕ್ಷೇತ್ರ‌ಗಳನ್ನು ಜೆಡಿಎಸ್ ತೆಕ್ಕೆಗೆ ತಗೆದುಕೊಳ್ಳುವ ಬಗ್ಗೆ ಮಾತುಕತೆ ನಡೆಸುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ವಿಶೇಷವಾಗಿ ಒಕ್ಕಲಿಗ ಪ್ರಾಬಲ್ಯ ಹೊಂದಿರುವ ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ತುಮಕೂರು, ಹಾಸನ ಕ್ಷೇತ್ರ ಹಾಗೂ ಕೋಲಾರ, ಚಿಕ್ಕಬಳ್ಳಾಪುರ ಸೇರಿ ಒಟ್ಟು 8 ಕ್ಷೇತ್ರಕ್ಕೆ ಕುಮಾರಸ್ವಾಮಿ ಕಣ್ಣಿಟ್ಟಿದ್ದಾರೆ. ಆ ಮೂಲಕ ಈ ಕ್ಷೇತ್ರಗಳನ್ನು ಜೆಡಿಎಸ್ ತೆಕ್ಕೆಗೆ ತಗೆದುಕೊಂಡು ಕ್ಷೇತ್ರ ತಮ್ಮದಾಗಿಸಿಕೊಳ್ಳಲು ಅಭ್ಯರ್ಥಿಗಳ ಪಟ್ಟಿ ಜೊತೆಗೇ ಕುಮಾರಸ್ವಾಮಿ ದೆಹಲಿಗೆ ಪಯಣ ಬೆಳೆಸಿದ್ದಾರೆ.

ಆಶ್ಚರ್ಯ ಎಂದರೆ ಈ ಬಾರಿ ಸ್ವತಃ ತಾವೇ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ಜೆಡಿಎಸ್ ಮುಖಂಡರ ಕಡೆಯಿಂದಲೂ ಅನುಮತಿ ಪಡೆದು ಬಿಜೆಪಿ ನಾಯಕರೊಂದಿಗೆ ಮಾತುಕತೆಗೆ ಮುಂದಾಗಲಿದ್ದಾರೆ. ಇಲ್ಲಿ ಜೆಡಿಎಸ್ ತಂತ್ರಗಾರಿಕೆ ಏನು, ಅದಕ್ಕೆ ಬಿಜೆಪಿ ಹೇಗೆ ಸಾತ್ ಕೊಡಬಹುದು ಎಂಬ ನಿಟ್ಟಿನಲ್ಲಿ ಅಮಿತ್ ಷಾ ಮತ್ತು ಜೆಪಿ ನಡ್ಡಾಗೆ ಮನವರಿಕೆ ಮಾಡುವುದು ಈಗ ಕುಮಾರಸ್ವಾಮಿ ಮುಂದಿರುವ ದೊಡ್ಡ ಸವಾಲು.

ಬೆಂಗಳೂರು ಗ್ರಾಮಾಂತರ, ಹಾಸನ ಹಾಗೂ ಮಂಡ್ಯ ಹೊರತುಪಡಿಸಿ ಬೇರೆಲ್ಲಾ ಕ್ಷೇತ್ರಗಳಲ್ಲಿ ಹಾಲಿ ಬಿಜೆಪಿ ಸಂಸದರೇ ಇರುವ ಹಿನ್ನೆಲೆಯಲ್ಲಿ ಈ ಉಳಿದ ಕ್ಷೇತ್ರಗಳ ಸೀಟು ಹಂಚಿಕೆ ಜೆಡಿಎಸ್ ಪಾಲಿಗೆ ಕಗ್ಗಂಟಾಗಿ ಉಳಿಯಲಿದೆ. ಆದರೆ ರಾಜ್ಯ ವಿಧಾನಸಭಾ ಚುನಾವಣೆ ನಂತರ ಈ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ತನ್ನ ಪ್ರಾಬಲ್ಯ ಮೆರೆದಿದೆ. ಈ ಕಾರಣದಿಂದ ಜೆಡಿಎಸ್ ಈ ಎಲ್ಲಾ ಕ್ಷೇತ್ರಗಳಲ್ಲಿ ತನ್ನ ಅಸ್ತಿತ್ವ ಸ್ಥಾಪಿಸಲು ಬಿಜೆಪಿ ವರಿಷ್ಟರೊಂದಿಗೆ ಪಟ್ಟು ಹಿಡಿಯಬಹುದು.

ಇನ್ನು ಬೆಂಗಳೂರು ಗ್ರಾಮಾಂತರ ಜೆಡಿಎಸ್ ಗೆ ಹೊಸ ಕ್ಷೇತ್ರವೇನೂ ಅಲ್ಲ. ಈ ಹಿಂದೆ 2009 ರಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸಂಸದರಾಗಿ ಆಯ್ಕೆಯಾಗಿದ್ದರು. ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಕೂಡಾ ರಾಮನಗರದಲ್ಲಿ ಒಂದು ಅವಧಿಗೆ, ಕುಮಾರಸ್ವಾಮಿ ನಾಲ್ಕು ಅವಧಿಗೆ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಹಾಲಿ ಚನ್ನಪಟ್ಟಣ ಕ್ಷೇತ್ರದಲ್ಲಿ ಶಾಸಕರೂ ಆಗಿರುವ ಕುಮಾರಸ್ವಾಮಿಗೆ ಬೆಂಗಳೂರು ಗ್ರಾಮಾಂತರದಲ್ಲಿ ಸವಾಲು ಎನ್ನಿಸುವ ಕ್ಷೇತ್ರಗಳೆಂದರೆ ಕನಕಪುರ, ಮಾಗಡಿ, ಆನೇಕಲ್ ಹಾಗೂ ಕುಣಿಗಲ್ ವಿಧಾನಸಭಾ ಕ್ಷೇತ್ರಗಳು.

ಕುಮಾರಸ್ವಾಮಿ ಮಟ್ಟಿಗೆ ಈ ಅವಧಿಯಲ್ಲಿ ಕನಕಪುರ ಗಗನ ಕುಸುಮವೇ ಸರಿ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರಾಜ್ಯದ ಇತಿಹಾಸದಲ್ಲೇ ದಾಖಲೆ ಅಂತರದಲ್ಲಿ ಗೆಲುವು ಸಾಧಿಸಿದ ಕ್ಷೇತ್ರವಾಗಿದೆ ಕನಕಪುರ. ಡಿಕೆಶಿ ಬೇರಾವ ಕ್ಷೇತ್ರ ಬಿಟ್ಟುಕೊಟ್ಟರೂ ಕನಕಪುರವನ್ನು ಮಾತ್ರ ಯಾವ ಕಾರಣಕ್ಕೂ ಬಿಟ್ಟು ಕೊಡಲಾರರು. ಇನ್ನು ತಮ್ಮ ಪುತ್ರ ನಿಖಿಲ್ ಸೋಲಿನ ಬಳಿಕ ರಾಮನಗರದ ಜನತೆ ಬಗ್ಗೆ ಕುಮಾರಸ್ವಾಮಿ ನಡೆದುಕೊಂಡ ರೀತಿ ಈಗಲೂ ಚರ್ಚಿತ ವಿಷಯವೇ. ಅದೆಲ್ಲದರ ಹೊರತುಪಡಿಸಿ ಅನುಕಂಪ ಏನಾದರೂ ವರ್ಕೌಟ್ ಆದರೆ ರಾಮನಗರದಲ್ಲಿ ಕುಮಾರಸ್ವಾಮಿ ಹೆಚ್ಚಿನ ಅಂತರದ ಮತ ಪಡೆಯಬಹುದು.

ಇನ್ನು ಮಾಗಡಿ, ಆನೇಕಲ್ ಹಾಗೂ ಕುಣಿಗಲ್ ಈ ಮೂರೂ ಕ್ಷೇತ್ರಗಳಲ್ಲಿ ಜೆಡಿಎಸ್ ಎರಡನೇ ಸ್ಥಾನದಲ್ಲಿದ್ದರೂ ಈ ಬಾರಿ ಜೆಡಿಎಸ್ ಗೆ ಇಲ್ಲಿ ಕಡಿಮೆ ಅಂತರವೇನೂ ಇಲ್ಲ ಎಂಬುದು ಮುಖ್ಯವಾದ ಅಂಶ. ಆದರೆ ನೇರವಾಗಿ ಕುಮಾರಸ್ವಾಮಿಯೇ ಅಖಾಡಕ್ಕೆ ಇಳಿದರೆ ಈ ಮೂರೂ ಕ್ಷೇತ್ರಗಳಲ್ಲಿ ಏನಾದರೂ ಮ್ಯಾಜಿಕ್ ನಡೆದರೂ ಆಶ್ಚರ್ಯವಿಲ್ಲ. ಇವೆಲ್ಲವನ್ನೂ ಹೊರತುಪಡಿಸಿ ಹೆಚ್.ಡಿ.ಕುಮಾರಸ್ವಾಮಿಗೆ ಇರುವ ಅತಿ ದೊಡ್ಡ ಮತ್ತು ಬೇಧಿಸಲು ತೀರಾ ಕಷ್ಟಸಾಧ್ಯ ಎನ್ನಿಸುವ ಸವಾಲು ಎಂದರೆ ಅದು ಹಾಲಿ ಸಂಸದ ಡಿ.ಕೆ.ಸುರೇಶ್.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಈ ಕ್ಷಣಕ್ಕೆ ಚುನಾವಣೆ ನಡೆದರೂ ಗೆಲ್ಲೋದು ಬಂಡೆಯಂತೆ ಇರೋ ಡಿಕೆ ಸುರೇಶ್ ಅಂತ ಆ ಕ್ಷೇತ್ರದ ಪ್ರತಿಯೊಬ್ಬರೂ ಅಭಿಪ್ರಾಯ ಪಡುತ್ತಾರೆ. ಯಾಕೆಂದರೆ ಸಂಸದರಾಗಿ ಆಯ್ಕೆ ಆದ ದಿನದಿಂದಲೂ ಡಿ.ಕೆ.ಸುರೇಶ್ ಕ್ಷೇತ್ರದ ಜನರೊಂದಿಗೆ ದಿನನಿತ್ಯವೂ ಬೆರೆಯುತ್ತಿದ್ದಾರೆ. ಅಷ್ಟು ಮಾತ್ರವಲ್ಲ, ತಮ್ಮ ಕಾರ್ಯಕರ್ತರಲ್ಲಿ ಒಬ್ಬರನ್ನೂ ಬಿಡದೇ ವಿಶ್ವಾಸಕ್ಕೆ ತೆಗೆದುಕೊಂಡು ಹೋಗ್ತಿದ್ದಾರೆ.

ಇನ್ನು ತಂತ್ರಗಾರಿಕೆಯಲ್ಲಿ ಹೇಳುವುದೇ ಆದರೆ ತಮ್ಮ ಅಣ್ಣ ಡಿಕೆ ಶಿವಕುಮಾರ್ ಗಿಂತ ಒಂದು ಕೈ ಮೇಲೆಯೇ ಡಿಕೆ ಸುರೇಶ್ ಇದ್ದಾರೆ ಎಂಬುದರಲ್ಲಿ ಎರಡು ಮಾತಿಲ್ಲ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಡಿಕೆ ಸುರೇಶ್ ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದ ಮೂಲಕ ಕಣಕ್ಕಿಳಿಯುವ ಬಗ್ಗೆ ಒಂದು ಊಹಾಪೋಹವಿತ್ತು. ಅಕಸ್ಮಾತ್ ಡಿಕೆ ಸುರೇಶ್ ಕಣಕ್ಕಿಳಿದಿದ್ದರೆ ಆರ್.ಅಶೋಕ್ ಗೆ ಪದ್ಮನಾಭ ನಗರ ಕೂಡಾ ಗೆಲುವಿಗೆ ಏದುಸಿರು ಬಿಡುವುದಿತ್ತು. ಇದಕ್ಕೆ ಇಂಬು ಕೊಡುವಂತೆ ಈಗ ಕೆಲವೇ ತಿಂಗಳ ಹಿಂದೆ ಪದ್ಮನಾಭ ನಗರದಲ್ಲಿ ಘಟಾನುಘಟಿ ಬಿಜೆಪಿ ನಾಯಕರುಗಳ ‘ಆಪರೇಷನ್ ಹಸ್ತ’ದ ಹಿಂದೆ ಇದ್ದದ್ದು ಇದೇ ಡಿಕೆ ಸುರೇಶ್.

ಇದೆಲ್ಲದರ ನಡುವೆ ಹೆಚ್.ಡಿ.ಕುಮಾರಸ್ವಾಮಿ ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಶತಾಯಗತಾಯ ಜೆಡಿಎಸ್ ಪಕ್ಷದ ಹೀನಾಯ ಸೋಲಿಗೆ ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಉತ್ತರ ಕೊಡುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ. ಆದರೆ ಗೆಲುವು ಮಾತ್ರ ತೀರಾ ಕಷ್ಟ ಎನ್ನುವಂತಿದೆ. ಅಷ್ಟಕ್ಕೂ ಬಿಜೆಪಿ ಹೈಕಮಾಂಡ್ ಎಷ್ಟು ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡಲಿದೆ, ಜೆಡಿಎಸ್ ಇದಕ್ಕೆ ತೃಪ್ತಿ ಹೊಂದಲಿದೆಯೇ ಎಂಬುದನ್ನು ಮಾತ್ರ ಕಾದು ನೋಡಬೇಕಿದೆ.

ಪೆನ್ ಡ್ರೈವ್ ಪ್ರದರ್ಶನ : ಕುಮಾರಸ್ವಾಮಿ ವಿರುದ್ಧ ದೂರು ದಾಖಲು
ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪದ ಹೊರಿಸಿ ಹೋದಲ್ಲಿ ಬಂದಲ್ಲಿ ಪೆನ್ ಡ್ರೈವ್ ತೋರಿಸಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೈಕೋರ್ಟ್ ನ ವಕೀಲರಾದ ಅಮೃತೇಶ್ ಎಂಬುವವರು ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯ ಸರ್ಕಾರದ ಮೇಲಿನ ಭ್ರಷ್ಟಾಚಾರದ ಆರೋಪದಲ್ಲಿ ಪ್ರತೀ ಬಾರಿಯೂ ಕುಮಾರಸ್ವಾಮಿ, ತನ್ನ ಬಳಿಯೂ ದಾಖಲೆಗಳಿವೆ, ಸೂಕ್ತ ಸಮಯದಲ್ಲಿ ಅದನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿಕೊಂಡು ಬಂದಿದ್ದಾರೆ. ಕೆಲವು ಖಾಸಗಿ ಚಾನಲ್ ಚರ್ಚೆಗಳಲ್ಲೂ ಸಹ ನನ್ನ ಪೆನ್ ಡ್ರೈವ್ ನಲ್ಲಿ ದಾಖಲೆ ಇರುವುದು ಸತ್ಯ ಎಂದೇ ಹೇಳಿಕೊಂಡು ಬಂದಿದ್ದಾರೆ.

ಈ ಬಗ್ಗೆ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕುಮಾರಸ್ವಾಮಿ ವಿರುದ್ಧ ವಕೀಲ ಅಮೃತೇಶ್ ಎನ್ನುವವರು ದೂರು ದಾಖಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ಕಮಿಷನ್ ಬಗ್ಗೆ ಆರೋಪಿಸಿ ಎಚ್ ಡಿ ಕುಮಾರಸ್ವಾಮಿ ಪೆನ್ ಡ್ರೈವ್ ಇದೆ ಅಂತ ಹೇಳಿಕೆ ನೀಡಿದ್ದರು. ಎಚ್ಡಿಕೆ ವಿರುದ್ಧ ಬ್ಲಾಕ್ ಮೇಲ್, ಬೆದರಿಕೆ, ಅಪರಾಧಿಕ ಸಂಚು ಸೇರಿದಂತೆ ಇತರೆ ಹಲವು ಆರೋಪದಡಿ ಕ್ರಮ ಕೈಗೊಳ್ಳುವಂತೆ ದೂರು ದಾಖಲಾಗಿದೆ.

ಅಲ್ಲದೆ ಇದೆ ವೇಳೆ ದೂರಿನಲ್ಲಿ ಎಚ್ಡಿಕೆ ಬಳಿ ಇರುವ ಪೆನ್ ಡ್ರೈವ್ ಅನ್ನು ಸೀಜ್ ಮಾಡಿ ಅವರ ವಿರುದ್ಧ ಸೂಕ್ತವಾದ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸೌಧ ಪೊಲೀಸ್ ಠಾಣೆಗೆ ವಕೀಲ ಅಮೃತೇಶ್ ಎನ್ನುವರು ದೂರು ನೀಡಿದ್ದಾರೆ.

DK v/s HDK : ಕುಮಾರಸ್ವಾಮಿ ರಾಜಕೀಯ ದಾಳಕ್ಕೆ ಏನಂದ್ರು DK ‘ಬ್ರದರ್’?
ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ದಿನಗಳಲ್ಲಿ ತಿಹಾರ್ ಜೈಲಿಗೆ ಹೋಗಲಿದ್ದಾರೆ.. ಇನ್ನು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ.. ನಮ್ಮನ್ನು ಹಾಸನಕ್ಕೆ ಓಡಿಸಬಹುದು, ಆದರೆ ಅವರು ಜೈಲಿಗೆ ಹೋಗುವುದು ತಪ್ಪಲ್ಲ.. ಹೀಗೆ ಡಿಕೆ ಬ್ರದರ್ಸ್ ಮೇಲೆ ರಾಜಕೀಯ ದಾಳಿ ನಡೆಸುತ್ತಿರುವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಡಿಕೆ ಸುರೇಶ್ ಖಡಕ್ ಆಗಿ ಉತ್ತರಿಸಿದ್ದಾರೆ.

ಏನಂದ್ರು ಕುಮಾರಸ್ವಾಮಿ?
ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ತಿರುಗಿ ಬಿದ್ದಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಈಗ ತಮ್ಮ ಅಸ್ತ್ರಗಳನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೇಲೆ ತಿರುಗಿಸಿದ್ದಾರೆ.

ನನ್ನ ಜೀವನದಲ್ಲಿ ಡಿ.ಕೆ. ಶಿವಕುಮಾರ್‌ ಅವರ ಜತೆ ಎಂದೂ ರಾಜಿ ಆಗಲ್ಲ. ಒಮ್ಮೆ ಅವರ ಜತೆ ಸರ್ಕಾರ ಮಾಡಿದ್ದರಿಂದ ನಾನು ಈಗಲೂ ನೋವು ಅನುಭವಿಸುತ್ತಾ ಇದ್ದೇನೆ. ಜೆಡಿಎಸ್ ಜೊತೆಗಿನ ಮೈತ್ರಿ ಸರ್ಕಾರವನ್ನು ಉರುಳಿಸಿದ್ದೇ ಡಿ.ಕೆ.ಶಿವಕುಮಾರ್. ಅವರು ಒಮ್ಮೆ ತಿಹಾರ್ ಜೈಲಿಗೆ ಹೋಗಿ ಬಂದಿದ್ದಾರೆ. ಅವರು ಮತ್ತೆ ಅಲ್ಲಿಗೆ ಪರ್ಮನೆಂಟಾಗಿ ಹೋದರೂ ಅಚ್ಚರಿ ಅಲ್ಲ. ನಮ್ಮನ್ನು ಹಾಸನಕ್ಕೆ ಓಡಿಸಬಹುದು, ಆದರೆ ಅವರು ತಿಹಾರ್‌ ಜೈಲಿಗೆ ಓಡುವ ಕಾಲ ಹತ್ತಿರದಲ್ಲಿ ಇದೆ.. ಹೀಗೆ ಒಂದೊಂದಾಗಿ ಕುಮಾರಸ್ವಾಮಿ ಡಿ.ಕೆ.ಶಿವಕುಮಾರ್ ಮೇಲೆ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಕುಮಾರಸ್ವಾಮಿಯವರ ಈ ರೀತಿಯ ರಾಜಕೀಯ ದಾಳಿಗೆ ಕಾಂಗ್ರೆಸ್ ನ ಹಲವು ಮುಖಂಡರು ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ತಮ್ಮ ತೃತೀಯ ದರ್ಜೆಯ ರಾಜಕೀಯ ಆರೋಪವನ್ನು ಮತ್ತೆ ಇಲ್ಲಿ ತಿರುಗಿಸಿದ್ದು ಖಂಡನೀಯ ಎಂದು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ತಿರುಗಿ ಬಿದ್ದಿದ್ದಾರೆ‌.

ಹೆಚ್ಡಿಕೆ ಆರೋಪಕ್ಕೆ ಏನಂತಾರೆ ಡಿ.ಕೆ.ಸುರೇಶ್?
ಕುಮಾರಸ್ವಾಮಿ ಏನು‌ ಹೇಳಿದ್ದಾರೋ ಗೊತ್ತಿಲ್ಲ, ಅವರು ದೊಡ್ಡವರು. ಅವರ ನುಡಿಮುತ್ತುಗಳನ್ನು ನೋಡಿ ಉತ್ತರ ಕೊಡುತ್ತೇನೆ. ನನ್ನನ್ನು ಜೈಲಿಗೆ ಕಳುಹಿಸುವ ಬಗ್ಗೆ ಅವರ ಪ್ಲ್ಯಾನ್ ಏನಿದೆ ಎಂದು ಹೇಳುತ್ತಿದ್ದಾರೆ. ಅವರು ಬಿಜೆಪಿ ಜೊತೆಗೆ ಕೈ ಜೋಡಿಸಿದ್ದೇ ಈ ಉದ್ದೇಶಕ್ಕೆ ಇರಬಹುದು. ಇನ್ನೂ ಏನೆಲ್ಲ ಮಾಡಲು‌ ಸಾಧ್ಯವೋ ಎಲ್ಲವನ್ನೂ ಹೇಳುತ್ತಿದ್ದಾರೆ. ಹಿಂದೆಯೂ ಪಾಪ ಮಾಡಿದ್ದರಲ್ಲ. ನನ್ನ‌ ತಂಗಿ, ನನ್ನ ತಮ್ಮ, ನನ್ನ‌ ಹೆಂಡತಿ ಮೇಲೂ ಕೇಸ್ ಹಾಕಿದ್ದರು. ಈ ಹಿಂದೆ ಸಿಎಂ ಆಗಿದ್ದನ್ನು ಈಗ ನೆನಪು ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಈ ಬಗ್ಗೆ ಸಂಸದ ಡಿ.ಕೆ. ಸುರೇಶ್ ಪ್ರತಿಕ್ರಿಯೆ ನೀಡಿದ್ದು, ‘ಡಿ.ಕೆ. ಶಿವಕುಮಾರ್‌ ಅವರನ್ನು ತಿಹಾರ್ ಜೈಲಿಗೆ ಕಳುಹಿಸಿ ಅಂತ ದೆಹಲಿಗೆ ಹೋದಾಗ ಬಹುಶಃ ಇವರೇ ಅಮಿತ್ ಶಾಗೆ ರಿಕ್ವೆಸ್ಟ್ ಮಾಡಿಕೊಂಡು ಬಂದಿರಬೇಕು. ಇವರ ಗೊಡ್ಡು ಬೆದರಿಕೆಗಳಿಗೆ ಹೆದರುವ ಜಾಯಮಾನ ನಮ್ಮದಲ್ಲ. ಇವರ ದಾಖಲೆಗಳನ್ನು ಬಿಚ್ಚಿಡುವ ಸಮಯ ಬಂದರೆ ನಾವೂ ಸಿದ್ಧ. ಇವರ ಕನಸು ನನಸಾಗುವುದಿಲ್ಲ, ಕನಸು ಕನಸಾಗಿಯೇ ಉಳಿಯುತ್ತದೆ’ ಎಂದು ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಜೆಡಿಎಸ್ ನಾಯಕರು ಎಲ್ಲೋ ಒಂದು ಕಡೆ ಮಾನಸಿಕವಾಗಿ ಕುಗ್ಗಿದ್ದಾರೆ. ಅವರ ಕಾರ್ಯಕರ್ತರನ್ನು ಉಳಿಸಿಕೊಳ್ಳಬೇಕಿದೆ. ಅವರ ಆಲೋಚನೆಗಳೆಲ್ಲ ಒಂದು ಕಡೆ ಕೇಂದ್ರಿಕೃತ ಆದಂತೆ ಕಾಣುತ್ತಿದೆ. ಕಾರ್ಯಕರ್ತರು ಇವರ ನಡೆ ನುಡಿ ನೋಡಿ ಅವರ ದಾರಿಯನ್ನು ಅವರೇ ನೋಡಿಕೊಳ್ಳುತ್ತಿದ್ದಾರೆ. ಎಚ್‌ಡಿಕೆ ಹೇಳುವುದು ಸುಳ್ಳಿನ ಮಹಾ ಭಾಗ. ಸುಳ್ಳಿನಲ್ಲಿ ಎಚ್‌ಡಿಕೆ ಎಕ್ಸ್‌ಪರ್ಟ್” ಎಂದು ಹೇಳಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಇಂದು(ಬುಧವಾರ) ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ತಡರಾತ್ರಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಹೆಚ್.ಡಿ.ಕುಮಾರ ಸ್ವಾಮಿ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆ ಇಂದು ಅವರ ಕೋಲಾರ ಭೇಟಿ ರದ್ದು ಮಾಡಲಾಗಿದೆ. ಕೋಲಾರದ ಶ್ರೀನಿವಾಸಪುರದಲ್ಲಿ ಕುಮಾರಸ್ವಾಮಿ ಅವರು ರೈತರ ಜಮೀನುಗಳಿಗೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು. ಅರಣ್ಯ ಇಲಾಖೆ ಒತ್ತುವರಿ ತೆರವು ವೇಳೆ ರೈತರ ಬೆಳೆಗಳು ನಷ್ಟವಾಗಿತ್ತು.

ಈ ಪರಿಣಾಮ ರೈತರೊಂದಿಗೆ ಮಾತನಾಡಲು ಹೆಚ್.ಡಿ.ಕುಮಾರಸ್ವಾಮಿ ಆಗಮಿಸಲಿದ್ದರು. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಹಿನ್ನೆಲೆ ಕೋಲಾರ ಪ್ರವಾಸ ರದ್ದಾಗಿದೆ.

ಇನ್ನು ಕುಮಾರಸ್ವಾಮಿ ಆರೋಗ್ಯದ ಬಗೆಗಿನ ಮಾಹಿತಿ ಇನ್ನೂ ಹೊರಬಂದಿಲ್ಲ.

ಬಿಜೆಪಿಯತ್ತ ಹೊರಟ ಕುಮಾರಸ್ವಾಮಿ : ಆತ್ಮರಕ್ಷಣೆಯೋ ಆತ್ಮಹತ್ಯೆಯೋ?
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಅಲ್ಲೊಂದು ಇಲ್ಲೊಂದು ಮಾತುಗಳು, ಊಹಾಪೋಹಗಳ ನಡುವೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸುಳಿವನ್ನು ಬಿಟ್ಟಿದ್ದಾರೆ. ಆ ಮೂಲಕ ಕರ್ನಾಟಕದ ಮಟ್ಟಿಗೆ ಎರಡೂ ಪಕ್ಷಗಳಿಗೂ ಈ ಮೈತ್ರಿ ಅನಿವಾರ್ಯವಾಗಿದೆ ಎನ್ನುವ ರೀತಿಯಲ್ಲಿ ಮಹತ್ವದ ಮಾತುಕತೆ ನಡೆದಿರುವ ಬಗ್ಗೆ ಮಾಹಿತಿ ತಿಳಿಸಿದ್ದಾರೆ‌.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭೂತಪೂರ್ವ ಗೆಲುವು ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳ ನಿದ್ದೆಗೆಡಿಸಿದೆ. ಅದರಲ್ಲೂ ಹೆಚ್.ಡಿ.ಕುಮಾರಸ್ವಾಮಿಯವರಂತೂ ಪಕ್ಷ ಸೋತ ಬೇಸರ ಒಂದು ಕಡೆಯಾದರೆ, ಇನ್ನೊಂದು ಕಡೆ ತನ್ನ ಮಗ ನಿಖಿಲ್ ಸೋತ ಬಗ್ಗೆ ಕಂಡಕಂಡಲ್ಲೆಲ್ಲ ಕಾಂಗ್ರೆಸ್ ಪಕ್ಷದ ಮೇಲೆ ಹರಿಹಾಯುತ್ತಿದ್ದಾರೆ. ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನ ನಾಗಾಲೋಟಕ್ಕೆ ಸರಿಯಾದ ತಿರುಗೇಟು ನೀಡಲು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ದೊಡ್ಡ ತಯಾರಿಗೆ ಹೆಜ್ಜೆ ಇರಿಸಿವೆ.

ಸಧ್ಯ ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ – ಜೆಡಿಎಸ್‌ ಮೈತ್ರಿ ನಿರ್ಣಾಯಕವಾಗಲಿದೆ ಎಂದು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ ಇಂದು ನಡೆಯುತ್ತಿರುವ ಕಾಂಗ್ರೆಸ್ ಮಿತ್ರಪಕ್ಷಗಳ ಸಭೆ, ನಾಳೆ ನಡೆಯಲಿರುವ NDA ಮೈತ್ರಿಕೂಟದ ಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಅನಿವಾರ್ಯತೆ ಬಗ್ಗೆ ಪ್ರಶ್ನೆಗಳು ಬಂದಾಗ ಈ ರೀತಿಯಾಗಿ ಉತ್ತರಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮೈತ್ರಿ ಮಾಡಿಕೊಳ್ಳುವ ಸೂಚನೆ ನೀಡುತ್ತಿದ್ದಾರೆ. ಆದರೆ, ಇಂದು ಬೆಳಗ್ಗೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ತಮ್ಮ ಪಕ್ಷಕ್ಕೆ ‘ಮಹಾಘಟಬಂಧನ್’ ಅಥವಾ ‘ಎನ್‌ಡಿಎ’ಯಿಂದ ಯಾವುದೇ ಆಹ್ವಾನ ಬಂದಿಲ್ಲ ಎಂದು ಹೇಳಿದ್ದಾರೆ. ಆದರೆ ಜೆಡಿಎಸ್ ಪಕ್ಷದ ನಡೆ ಮಾತ್ರ ಕಾಂಗ್ರೆಸ್ ವಿರೋಧಿಯಾಗಿ, ಬಿಜೆಪಿ ಜೊತೆಗೆ ಕೈ ಜೋಡಿಸಲು ಉತ್ಸುಕತೆ ತೋರಿರುವಂತೆ ಕಂಡುಬರುತ್ತಿದೆ.

ಇತ್ತ ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಅವರು “‘ಮಹಾಘಟಬಂಧನ್’ ಗೆ ಜೆಡಿಎಸ್ ನ್ನು ವಿಶೇಷವಾಗಿ ಆಹ್ವಾನಿಸುವ ಅಗತ್ಯವಿಲ್ಲ. ಮುಂದಿನ ಚುನಾವಣೆಯಲ್ಲಿ  ಬಿಜೆಪಿ ಸೋಲಿಸಲು ಒಂದಾಗುವ ನಿಟ್ಟಿನಲ್ಲಿ ಎಲ್ಲರೂ ಸ್ವಯಂಪ್ರೇರಿತರಾಗಿ ಕೈ ಜೋಡಿಸಿದ್ದಾರೆ. ಈ ನಿಟ್ಟಿನಲ್ಲಿ ಜೆಡಿಎಸ್ ಪಕ್ಷಕ್ಕೆ ಪ್ರತ್ಯೇಕ ಆಹ್ವಾನ ಅನಗತ್ಯ” ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ನಡೆಯ ಬಗ್ಗೆ ಜೆಡಿಎಸ್ ನಲ್ಲೇ ಅತೃಪ್ತಿ!
ಆದರೆ ಹೆಚ್.ಡಿ.ಕುಮಾರಸ್ವಾಮಿ ಮಾತ್ರ ನಾಳೆ ದೆಹಲಿಯಲ್ಲಿ ನಡೆಯಲಿರುವ NDA ಮೈತ್ರಿಕೂಟದ ಸಭೆಗೆ ಹಾಜರಾಗುವ ಬಗ್ಗೆ ಎಲ್ಲಾ ತಯಾರಿ ಮಾಡಿಕೊಂಡಿದ್ದಾರೆ. ಒಂದು ಕಡೆ ಪ್ರಧಾನಿ ನರೇಂದ್ರ ಮೋದಿಯವರನ್ನೂ ಭೇಟಿ ಮಾಡಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ.

ಇನ್ನೊಂದು ಕಡೆ ಕುಮಾರಸ್ವಾಮಿಯವರ ಈ ನಡೆ ಸ್ವಪಕ್ಷೀಯರಿಗೇ ಇರಿಸು ಮುರಿಸು ಉಂಟುಮಾಡಿದೆ. ಸ್ಥಳೀಯ ಮಟ್ಟದಲ್ಲಿ ಕಾಂಗ್ರೆಸ್ ಸೋಲಿಸುವ ನಿಟ್ಟಿನಲ್ಲಿ ಕೋಮುವಾದಿ ಮನಸ್ಥಿತಿಯ ಬಿಜೆಪಿ ಜೊತೆಗೆ ಕೈಜೋಡಿಸುವುದು ಹಾಗೂ ತನ್ನ ಪುತ್ರ ನಿಖಿಲ್ ಸೋಲಿಗೆ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿರುವುದು, ಕುಮಾರಸ್ವಾಮಿಯವರ ಧೃತರಾಷ್ಟ್ರನ ಪ್ರೇಮವನ್ನು ಎತ್ತಿ ಹಿಡಿದಂತಿದೆ. ತನ್ನ ಒಳಗಿನ ಕಿಚ್ಚಿಗೆ ಇಡೀ ಪಕ್ಷವನ್ನೇ ಕುಮಾರಸ್ವಾಮಿ ಬಲಿ ಕೊಡಲಿದ್ದಾರಾ ಎಂಬ ಬಗ್ಗೆಯೂ ಪ್ರಾಮಾಣಿಕವಾಗಿ ಪಕ್ಷದ ಪರ ನಿಂತವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗ ಜೆಡಿಎಸ್ ನಲ್ಲಿರುವ 19 ಮಂದಿ ಶಾಸಕರಲ್ಲಿ ಬಹುತೇಕರಿಗೆ ಬಿಜೆಪಿ ಜೊತೆಗಿನ ಮೈತ್ರಿಗೆ ಸಮ್ಮತವಿಲ್ಲ. ಒಂದು ಕಡೆ ‘ಜಾತ್ಯತೀತ’ ಎಂಬ ಹಣೆಪಟ್ಟಿ ಹೊಂದಿ, ಕೋಮುವಾದಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಡುವ ಬಗ್ಗೆ ಈಗಾಗಲೇ ಜೆಡಿಎಸ್ ಪಾಳಯದಲ್ಲೇ ಸಣ್ಣ ಬಿರುಕುಂಟಾಗಿದೆ. ಈ ಹಿಂದೆ ದುಡುಕಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತಂದ ತಪ್ಪಿಗೆ ಈಗಲೂ ಜೆಡಿಎಸ್ ನ್ನು ದೂರುವ ಮಂದಿ ಇದ್ದಾರೆ. ಹೀಗಿರುವಾಗ ನೇರಾನೇರ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡರೆ ಜೆಡಿಎಸ್ ಪಕ್ಷದ 19 ಮಂದಿ ಶಾಸಕರಲ್ಲಿ ಅರ್ಧ ಭಾಗಕ್ಕಿಂತ ಹೆಚ್ಚು ಮಂದಿ ಪಕ್ಷ ಬಿಡುವ ಅಥವಾ ಕಾಂಗ್ರೆಸ್ ಜೊತೆ ಕೈಜೋಡಿಸುವ ಬಗ್ಗೆ ಅನುಮಾನವೇ ಇಲ್ಲ ಎನ್ನುವ ಮಾತುಗಳು ಕೇಳಿ ಬಂದಿದೆ.

ಮಹಾರಾಷ್ಟ್ರವನ್ನೇ ಉದಾಹರಣೆಯಾಗಿ ತಗೆದುಕೊಳ್ಳುವುದಾದರೆ ಶಿವಸೇನೆಯನ್ನು ಇಬ್ಭಾಗ ಮಾಡಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಿತ್ತು ಬಿಜೆಪಿ. ಈಗ ಮತ್ತೆ NCP ಯನ್ನು ಕೂಡಾ ಇಬ್ಭಾಗ ಮಾಡಿ ಸರ್ಕಾರ ರಚನೆಯ ಪಾಲುದಾರಿಕೆ ಕೊಟ್ಟಿದೆ. ಮೇಲ್ನೋಟಕ್ಕೆ ಈಗ ಶಿವಸೇನೆ-NCP ಮೈತ್ರಿಯ ಸರ್ಕಾರ ಎಂದಾದರೂ ಇದರ ಸಂಪೂರ್ಣ ಜವಾಬ್ದಾರಿ ಬಿಜೆಪಿಯದ್ದಾಗಿದೆ. ಇದೇ ರೀತಿಯಲ್ಲಿ ಜೆಡಿಎಸ್ ಪಕ್ಷವನ್ನೂ ಸಹ ತನ್ನ ತೆಕ್ಕೆಗೆ ತಗೆದುಕೊಂಡರೆ ಜೆಡಿಎಸ್ ನ ಅಸ್ಥಿತ್ವವೇ ಇಲ್ಲದಂತಾಗುವುದರಲ್ಲಿ ಅನುಮಾನವಿಲ್ಲ.

ಒಟ್ಟಾರೆ ಮುಂಬರುವ ಜೆಡಿಎಸ್ ನಡೆ ಕುಮಾರಸ್ವಾಮಿ Vs ಜೆಡಿಎಸ್ ಎನ್ನುವ ರೀತಿಯಲ್ಲಿ, ಪಕ್ಷದಲ್ಲಿ ದೊಡ್ಡ ಮಟ್ಟದ ಬಿರುಕಿಗೆ ಕುಮಾರಸ್ವಾಮಿಯವರೇ ವೇದಿಕೆ ಸೃಷ್ಟಿ ಮಾಡಲಿದ್ದಾರಾ ಎಂಬ ಅನುಮಾನ ಸೃಷ್ಟಿಯಾಗಿದೆ. ಒಂದು ಕಡೆ ಕಾಂಗ್ರೆಸ್ ಮೇಲಿನ ದ್ವೇಷ ಇನ್ನೊಂದು ಕಡೆ ಕುಮಾರಸ್ವಾಮಿಯವರ ಧೃತರಾಷ್ಟ್ರ ಪ್ರೇಮ ಜೆಡಿಎಸ್ ಅವನತಿಗೆ ಈ ಬಾರಿಯ ಲೋಕಸಭಾ ಚುನಾವಣೆ ಸಾಕ್ಷಿ ಆಗಬಹುದು ಎಂಬುದು ರಾಜಕೀಯ ಪಂಡಿತರ ಲೆಕ್ಕಾಚಾರ.