hddevegowda – Peepal Media

ಹಿಂದೆ ದೇವೇಗೌಡರು 3 ರೂಪಾಯಿಗೆ ಅಕ್ಕಿ ಕೊಟ್ಟಿದ್ದರು: ಕುಮಾರಸ್ವಾಮಿ
ಬೆಂಗಳೂರು: ಬಡವರಿಗೆ, ಅದರಲ್ಲಿಯೂ ನಗರ ಪ್ರದೇಶಗಳಲ್ಲಿ ವಾಸವಿರುವ ಆರ್ಥಿಕ ದುರ್ಬಲರಿಗೆ ಹೆಚ್.ಡಿ.ದೇವೇಗೌಡರು ಮುಖ್ಯಮಂತ್ರಿ ಆಗಿದ್ದಾಗಲೇ ಅಗ್ಗದ ದರದಲ್ಲಿ ಅಕ್ಕಿ ನೀಡಿದ್ದರು. ಅವರ ಸಂಪುಟದಲ್ಲಿ ಸಚಿವರಾಗಿದ್ದ ಇಂದಿನ ಮುಖ್ಯಮಂತ್ರಿಗಳಿಗೆ ಈ ವಿಷಯ ಮರೆತು ಹೋಗಿದೆಯಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದರು.

ಅಕ್ಕಿ ಗ್ಯಾರಂಟಿ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಇವರು ಇವತ್ತು ಅಕ್ಕಿ ಗ್ಯಾರಂಟಿ, ಅಕ್ಕಿ ಭಾಗ್ಯ ಎಂದು ಹೇಳುತ್ತಿದ್ದಾರೆ. ಆದರೆ, ದೇವೇಗೌಡರು ಹಿಂದೆಯೇ ಕಡಿಮೆ ದರದಲ್ಲಿ ಅಕ್ಕಿ ನೀಡುವ ಮೂಲಕ ಬಡಜನರ ನೆರವಿಗೆ ಧಾವಿಸಿದ್ದರು ಎಂದರು.

1995ರಲ್ಲಿ ಸಿದ್ದರಾಮಯ್ಯ ಅವರು ಮೊದಲ ಬಜೆಟ್ ಮಂಡಿಸುತ್ತಾರೆ. ಆಗ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಕೆಜಿಗೆ 4.54 ರೂ. ಇದ್ದ ಅಕ್ಕಿ ದರವನ್ನ ಕೇಂದ್ರ ಸರ್ಕಾರ ಏಕಾಏಕಿ 7.49 ರೂ.ಗಳಿಗೆ ಹೆಚ್ಚಳ ಮಾಡಿತು. ಆಗ ಮುಖ್ಯಮಂತ್ರಿ ಆಗಿದ್ದ ದೇವೇಗೌಡರು ಧೈರ್ಯ ಮಾಡಿ 30 ರೂಪಾಯಿಗೆ ಕೆಜಿ ಅಕ್ಕಿ ಕೊಡುವಂತೆ ಆದೇಶ ಹೊರಡಿಸಿದರು. ಬಹುಶಃ ಅವರಿಂದಲೇ ರಾಜಕೀಯವಾಗಿ ಬೆಳೆದವರಿಗೆ ಇದು ನೆನಪಿರಲಿಕ್ಕಿಲ್ಲ. ಈಗ ಆಪರೇಶನ್ ಹಸ್ತ ಮಾಡುತ್ತೇವೆ ಎಂದು ಮೀಸೆ ತಿರುವುತ್ತಿದ್ದಾರೆ. ಜನತಾದಳ ಪಕ್ಷವನ್ನು ಮುಗಿಸೋದು ಅಷ್ಟು ಸುಲಭ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು ಕುಮಾರಸ್ವಾಮಿ ಅವರು.

ಮತಕ್ಕಾಗಿ, ಅಧಿಕಾರಕ್ಕಾಗಿ ಅಕ್ಕಿ ಫ್ರೀ ಎಂದವರು ಈಗ ಅಕ್ಕಿ ಕೊಡುವ ಮತುಕೊಟ್ಟಿದ್ದ ಇವರು ದೇವೇಗೌಡರ ಬದ್ಧತೆಯನ್ನು ಒಮ್ಮೆ ನೆನಪು ಮಾಡಿಕೊಳ್ಳಬೇಕು. ಕೈಲಾಗದವನು ಮೈ ಪರಚಿಕೊಂಡ ಎನ್ನುವಂತೆ ಇವರು ಕೊಟ್ಟ ಭರವಸೆ ಈಡೇರಿಸಲಾಗದೆ ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ಟೀಕಿಸಿದರು.

ಇದು ಪರ್ಸೆಂಟೇಜ್ ಸರ್ಕಾರ:

ಇದು ಕೂಡ ಪರ್ಸೆಂಟೆಜ್ ಸರ್ಕಾರ. ನಿಮಾಗೆ ಅನುಮಾನ ಇದೆಯಾ? ಎಂದು ಮಾಧ್ಯಮಗಳನ್ನು ಪ್ರಶ್ನೆ ಮಾಡಿದ ಕುಮಾರಸ್ವಾಮಿ ಅವರು, ಇದಕ್ಕಾಗಿಯೇ ಎಲ್ಲ ಇಲಾಖೆಗಳಲ್ಲಿ ಸಲಹೆಗಾರರು ಬಂದು ತುಂಬಿಕೊಂಡಿದ್ದಾರೆ. ಇದೆಲ್ಲಾ ಪರ್ಸೆಂಟೆಜ್ ವ್ಯವಸ್ಥೆಗೆ ಮಾಡಿಕೊಂಡಿರುವ ವ್ಯವಸ್ಥೆ ಎಂದು ಕುಟುಕಿದರು.

ನಮ್ಮದು ಸಂಪತ್ಪಭರಿದ ರಾಜ್ಯ. ಹಣಕ್ಕೆ ಕೊರತೆ ಇಲ್ಲ. ನಿರೀಕ್ಷೆಗೂ ಮೀರಿದ ತೆರಿಗೆ ಸಂಗ್ರಹ ಆಗುತ್ತಿದೆ. ಘೋಷಣೆ ಮಾಡಿಕೊಂಡು ಒದ್ದಾಡ್ತಾ ಇದ್ದಾರೆ ಇವರು. ಬಿಜೆಪಿ ಸರಕಾರದ ವಿರುದ್ಧ 40% ಆರೋಪ ಮಾಡಿದ ಇವರು ಈಗ ಪರ್ಸೆಂಟೇಜ್ ಬಗ್ಗೆ ತಲೆಕೆಡಿಸಿಕೊಂಡು ಕೂತಿದ್ದಾರೆ. ಇದು ಕೂಡ ಪರ್ಸೆಂಟೇಜ್ ಸರಕಾರವೇ ಆಗಿದೆ ಎಂದು ಅವರು ದೂರಿದರು.

ಅಕ್ಕಿ ತರಲು ರೇಟ್ ಜಾಸ್ತಿ ಮಾಡೋದು ಇವರೇ. ಕಮೀಷನ್ ಗಾಗಿ ರೇಟ್ ಜಾಸ್ತಿ ಮಾಡ್ತಾರೆ. ಕಮಿಷನ್ ಕಡಿಮೆ ಮಾಡಿದರೆ ಅಕ್ಕಿ ದರ ಕಡಿಮೆ ಆಗತ್ತದೆ. ಇವರ ಯೋಜನೆಗೆ ಕೇಂದ್ರದ ಮುಂದೆ ಕೈಚಾಚೋದು ಏಕೆ? ನಾನು ಸಾಲಮನ್ನಾ ಘೋಷಣೆ ಮಾಡಿದಾಗ ಕೇಂದ್ರದ ಬಳಿ ಹಣ ಕೇಳಲಿಲ್ಲ ಎಂದು ಅವರು ಹೇಳಿದರು.

ಸಿಎಂ ಹಿಂದೆ ಸುತ್ತುವ ಮಂತ್ರಿಗಳು:

ಸರಕಾರ ಬಂದು ಒಂದು ತಿಂಗಳ ಮೇಲಾಯಿತು. ಜನರು ಕಷ್ಟದಲ್ಲಿದ್ದಾರೆ. ಜನ ಆರ್ಥಿಕವಾಗಿ ಕುಗ್ಗಿ ಹೋಗಿದ್ದಾರೆ. ವಿವಿಧ ಇಲಾಖೆಗಳ ಮಂತ್ರಿಗಳು ಇನ್ನೂ ತಮ್ಮ ಇಲಾಖೆಗಳ ಸಭೆಗಳನ್ನೇ ನಡೆಸುತ್ತಿಲ್ಲ. ಮುಖ್ಯಮಂತ್ರಿ ಹಿಂದೆ ಮುಂದೆ ಓಡಾಡಿಕೊಂಡಿದ್ದಾರೆ. ದಿನದ 24 ಗಂಟೆಯೂ ಮುಖ್ಯಮಂತ್ರಿ ಜತೆ ಇವರಿಗೇನು ಕೆಲಸ. ಸಿಎಂ ಮನೆಯಲ್ಲೂ ಇವರೇ, ಸಿಎಂ ಕಚೇರಿಯಲ್ಲೂ ಇವರೇ, ಸಿಎಂ ದಿಲ್ಲಿಗೆ ಹೋದರೆ ಅಲ್ಲೂ ಇವರೇ. ಎನ್ ನಡೀತಿದೆ ಇಲ್ಲಿ? ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದರು.

ಮುಳಬಾಗಿಲು ಕ್ಷೇತದ ಶಾಸಕ ಸಮೃದ್ಧಿ ಮಂಜುನಾಥ್ ಅವರು ಈ ಸಂದರ್ಭದಲ್ಲಿ ಉಸ್ಥಿತರಿದ್ದರು.

ಕೆಂಪೇಗೌಡರ ಪುತ್ತಳಿ ಅನಾವರಣ: ಬಿಜೆಪಿಯಿಂದ ದೇವೇಗೌಡರಿಗೆ ಅವಮಾನ : ಜೆಡಿಎಸ್‌ ಆಕ್ರೋಶ
ಬೆಂಗಳೂರು: ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯ ಉದ್ಘಾಟನೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನ ಮಂತ್ರಿ ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್‌.ಡಿ. ದೇವೇಗೌಡ ಅವರಿಗೆ ರಾಜ್ಯ ಸರ್ಕಾರ ಆಮಂತ್ರಣ ನೀಡದೆ ಅವಮಾನಿಸಿದೆ ಎಂದು ಜನತಾ ದಳ (ಜೆಡಿಎಸ್‌) ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತು ರಾಜ್ಯ ಜೆಡಿಎಸ್‌ ಘಟಕ ಟ್ವೀಟ್‌ ಮಾಡಿದ್ದು, ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಹೆಚ್‌.ಡಿ.ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ ಎಂದು ಆರೋಪಿಸಿದೆ.

ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರಕಾರ, ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಅವರನ್ನು ಆಹ್ವಾನ ಮಾಡಲಿಲ್ಲ, ಯಾಕೆ? ಎಂದು ಪ್ರಶ್ನಿಸಿದೆ.

ಯಾವುದೋ ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿಗಳೇ ಬರುತ್ತಾರೆ ಎಂದರೆ, ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಲೇಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ ಎಂದು ಜೆಡಿಎಸ್‌ ಘಟಕ ಕಿಡಿಕಾರಿದೆ.

ರಾಜ್ಯ ಬಿಜೆಪಿ ಸರಕಾರ,ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕಾಗಿ ಮಾಜಿ ಪ್ರಧಾನಿಗಳನ್ನು ಕಡೆಗಣಿಸಿದ್ದಾರೆ ಎನ್ನುವುದು ಎಲ್ಲರ ಭಾವನೆ. ಇದನ್ನು ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಸಿದ್ದು ಮಾಜಿ ಪ್ರಧಾನಿಗಳಿಗೆ ಮಾತ್ರವಲ್ಲ, ಸಮಸ್ತ ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೇ ಮಾಡಿದ ಅಪಮಾನ. ಇದು ಅಕ್ಷಮ್ಯದ ಪರಮಾವಧಿ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಸರ್ವ ಜನರನ್ನು ಸಮಾನವಾಗಿ ಕಂಡು ಆದರ್ಶ ಪ್ರಭುವಾಗಿದ್ದ ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆಯುವ ಕೆಲಸವನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಮಾಡಿರುವುದು ಸ್ಪಷ್ಟ. ಇದು ಅತ್ಯಂತ ದುರದೃಷ್ಟಕರ. ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡೇ ಪ್ರತಿಮೆ ಅನಾವರಣ ಮಾಡಲಾಗಿದೆ ಎನ್ನುವುದು ಸತ್ಯ ಎಂದು ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯ ಸರಕಾರ ಹಾಗೂ ಬಿಜೆಪಿ ನಾಯಕರು ದಾರಿ ತಪ್ಪಿಸಿದ್ದಾರೆ ಎನ್ನುವುದರಲ್ಲಿ ಸಂಶಯ ಇಲ್ಲ.  ದೇವೇಗೌಡರ ಬಗ್ಗೆ ಅತೀವ ಗೌರವ ಇಟ್ಟುಕೊಂಡಿರುವ ಪ್ರಧಾನಿಗಳ ಬಗ್ಗೆಯೇ ಕನ್ನಡಿಗರಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ರಾಜ್ಯ ಬಿಜೆಪಿ ಸರಕಾರ ಮತ್ತು ಬಿಜೆಪಿ ನಾಯಕರು ವರ್ತಿಸಿದ್ದಾರೆ ಎಂದು ಹರಿಹಾಯ್ದಿದೆ.

ಕೆಂಪೇಗೌಡರು ಬಿಜೆಪಿ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ. ನಾಡಪ್ರಭುಗಳು ಸಮಸ್ತ ಕನ್ನಡಿಗರ ಹೆಮ್ಮೆ. ನಮ್ಮೆಲ್ಲರ ಅರಾಧ್ಯದೈವ. ಇನ್ನು, ಬೆಂಗಳೂರು ನಗರ ನಮ್ಮೆಲ್ಲರದ್ದು. ಸಮಸ್ತ ಕನ್ನಡಿಗರ ಜೀವನಾಡಿ. ಈ ಸೂಕ್ಷ್ಮವನ್ನು ರಾಜ್ಯ ಬಿಜೆಪಿ ಸರಕಾರ ಮರೆತು ಕನ್ನಡಿಗರನ್ನು ಅಪಮಾನಿಸಿದೆ ಎಂದು ವಾಗ್ದಾಳಿ ನಡೆಸಿದೆ.

ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಶ್ರೀ @H_D_Devegowda ಅವರನ್ನು ಶ್ರೀ ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ @BJP4Karnataka ಸರಕಾರವು ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ.1/7 pic.twitter.com/Zkr37zeSMl
— Janata Dal Secular (@JanataDal_S) November 11, 2022

ಈ ಕುರಿತು ʼಪೀಪಲ್‌ ಟಿವಿʼಯೊಂದಿಗೆ ಮಾತನಾಡಿದ ಜೆಡಿಎಸ್‌ ವಕ್ತಾರರಾದ ಗಂಗಾಧರ ಮೂರ್ತಿಯವರು, ಬಿಜೆಪಿ ಸರ್ಕಾರ ಸರ್ಕಾರ ಸರ್ಕಾರದ ಅನುದಾನದಲ್ಲಿ ಮಾಡಿರುವಂತ ಕಾರ್ಯಕ್ರಮ ಇದಾಗಿದ್ದು, ಯಾವುದೇ ಪಕ್ಷದ ಕಾರ್ಯಕ್ರಮ ಅಥವಾ ಸಚಿವ ಸಿ. ಎನ್. ಅಶ್ವತ್ ನಾರಾಯಣ್ ಅವರ ಕಾರ್ಯಕ್ರಮವಲ್ಲ ಎಂದು ಕಿಡಿಕಾರಿದರು.

ಸರ್ಕಾರ 100 ಕೋಟಿ ಅನದಾನ ನೀಡಿ, ಕೆಂಪೇಗೌಡರ ಮೂರ್ತಿಯನ್ನು ಸ್ಥಾಪಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳಸಬೇಕೆಂಬ ಕಾರಣಕ್ಕೆ, ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಎಂದು ತಿಳಿಸಿದರು.

ಇದಕ್ಕೂ ಮೊದಲು ದೇವೇಗೌಡರು ಪ್ರಧಾನಮಂತ್ರಿಯಾದಂತಹ ಸಂದರ್ಭದಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವುದಕ್ಕೆ ಜಾಗ ಗುರುತಿಸಿ, ಅನುದಾನ ನೀಡಿದ್ದರು. ಇಲ್ಲದಿದ್ದರೆ ಈ ವಿಮಾನ ನಿಲ್ದಾಣವು ಬೆಂಗಳೂರಿಗೆ ಬರುತ್ತಿರಲಿಲ್ಲ ಎಂದರು.

ರಾಜ್ಯ ಸರ್ಕಾರವು ಈ ಕಾರ್ಯಕ್ರಮವನ್ನು ಕೇಸರಿಮಯವಾಗಿ ರೂಪಿಸಲು ಹೋಗಿ ಈ ರೀತಿಯ ಸಮಸ್ಯೆಗಳನ್ನು ಸೃಷ್ಟಿಮಾಡಿಕೊಂಡಿದೆ. ಈ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನ ನೀಡದಿರುವುದು ರಾಜ್ಯಕ್ಕಾಗಲಿ ಅಥವಾ ನಾಡಿನ ಜನತೆಗಾಗಲಿ ನಷ್ಟವಾಗಿಲ್ಲ, ಇದರಿಂದ ನಷ್ಟವಾಗಿರುವುದು ಬಿಜೆಪಿ ಸರ್ಕಾರಕ್ಕೆ ಎಂದರು.

ಅದರೆ ಇಲ್ಲಿ ನಾಡಪ್ರಭು ಎಂದೆನಿಸಿಕೊಳ್ಳುವ ಕೆಂಪೇಗೌಡರನ್ನು ಒಂದು ಜಾತಿಗೆ ಸೀಮಿತ ಮಾಡಿ ಮತ್ತು ಒಂದು ಪಕ್ಷಕ್ಕೆ ಸಿಮೀತ ಮಾಡಿರುವುವಂತದ್ದು ರಾಜ್ಯ ಬಿಜೆಪಿ ಸರ್ಕಾರದ ಹುನ್ನಾರ ಎಂದು ಆರೋಪಿಸಿದರು.

ನನ್ನ ಕಣ್ಮುಂದೆಯೇ ಜೆಡಿಎಸ್‌ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ : ದೇವೇಗೌಡ
ನನ್ನ ಕಣ್ಮುಂದೆಯೇ ಜೆಡಿಎಸ್‌ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ. ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದಾರೆ. ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ  ಆತ್ಮವಿಶ್ವಾಸದಿಂದ ಹೇಳಿದ್ದಾರೆ.

ಶನಿವಾರ ಬಸವನಗುಡಿಯ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಪಕ್ಷದ ‘ಜನತಾ ಮಿತ್ರ’ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನನಗೆ ಇನ್ನೂ ಹೋರಾಟ ಮಾಡುವ ಶಕ್ತಿ ಇದೆ. ಕೊನೆಯವರೆಗೂ ರಾಜ್ಯದ ನೆಲ, ಜಲಕ್ಕಾಗಿ ಹೋರಾಟ ಮಾಡುತ್ತೇನೆ ಎಂದು ಹೇಳಿದ್ದಾರೆ.

ಮುಂದುವರೆದು, ಕುಮಾರಸ್ವಾಮಿ ಅವರು ಪಕ್ಷವನ್ನು ಉಳಿಸಲು 10 ವರ್ಷಗಳಿಂದ ಹಲವು ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಅದರ ಶ್ರಮ ಏನೆಂಬುದು ನನಗೆ ಗೊತ್ತು. ನನ್ನ ಆರೋಗ್ಯ ಇನ್ನು ಸ್ವಲ್ಪ ಚೇತರಿಸಿಕೊಳ್ಳಬೇಕು. ನಂತರ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಪ್ರವಾಸ ಕೈಗೊಳ್ಳುತ್ತೇನೆ. ಪಕ್ಷವನ್ನು ಉಳಿಸಿ, ಬೆಳೆಸುವಲ್ಲಿ ಶ್ರಮಿಸಬೇಕು ಎಂದು ಕಾರ್ಯಕರ್ತರಿಗೆ ಹುರಿದುಂಬಿಸಿದರು.

ಹಗರಣದಲ್ಲಿ ಮಾಜಿ ಮುಖ್ಯಮಂತ್ರಿ ಮಗನ ಹೆಸರು ಬಹಿರಂಗಗೊಳಿಸಿ: ಸಿದ್ದರಾಮಯ್ಯ ಆಗ್ರಹ
ಬೆಂಗಳೂರು: ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಪರೀಕ್ಷೆ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರ ಹೇಳಿಕೆಯಂತೆ ಹಗರಣದಲ್ಲಿ ಭಾಗಿಯಾಗಿರುವುದು ಯಾವ ಮಾಜಿ ಮುಖ್ಯಮಂತ್ರಿ ಮಗ ಎನ್ನುವುದು ಜನರಿಗೆ ತಿಳಿಯ ಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.

ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರು ಹೇಳಿರುವ ಹೇಳಿಕೆಯಂತೆ, ಹಗರಣದಲ್ಲಿ ಭಾಗಿಯಾಗಿರುವುದು, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರ ಮಗನಾ, ಸಿದ್ದರಾಮಯ್ಯ ಮಗನಾ ಅಥವ ದೇವೇಗೌಡರ ಮಗನಾ ಎಂದು ಜನರಿಗೆ ಸತ್ಯಾ ತಿಳಿಯಬೇಕು ಎಂದು ಹೇಳಿದರು.

ಹೀಗಾಗಲೇ ನೇಮಕಾತಿ ಹಗರಣದ ವಿಷಯದಲ್ಲಿ ನೇಮಕಾತಿ ವಿಭಾಗದ ಮುಖ್ಯಸ್ಥರಾದ ಅಮೃತ ಪೌಲ್‌ ಬಂಧನವಾಗಿದ್ದು, ಈ ಹಗರಣದಲ್ಲಿ ಇನ್ನು ಯಾರೇಲ್ಲಾ ಭಾಗಿಯಾಗಿದ್ದಾರೆ ಎಂದು ತಿಳಿಯಬೇಕಾದರೆ ಅಮೃತ ಪೌಲ್‌ ಅವರಿಗೆ ಮಂಪರು ಪರೀಕ್ಷೆ ನಡಿಸಬೇಕು. 346ರ ಅಡಿಯಲ್ಲಿ ಅವರ ಹೇಳಿಕೆ ದಾಖಲಿಸಬೇಕು. ಆಗ ಈ ಹಗರಣದಲ್ಲಿ ಯಾರೇಲ್ಲ ರಾಜಕಾರಣಿಗಳು ಭಾಗಿಯಾಗಿದ್ದಾರೆ ಎನ್ನುವುದು ತಿಳಿಯುತ್ತದೆ ಎಂದು ಸಿದ್ದರಾಮಯ್ಯ ಗುಡುಗಿದರು.

ನಾಡಹಬ್ಬ ದಸರಾವನ್ನು ದೇವೆಗೌಡರಿಂದ ಚಾಲನೆ ಕೊಡಿಸಿ: ಎಚ್ ವಿಶ್ವನಾಥ್
ಮೈಸೂರು: ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರದಾನಿ ಎಚ್. ಡಿ. ದೇವೆಗೌಡ ಅವರಿಗೆ ಆಯ್ಕೆ ಮಾಡಬೇಕು ಎಂದು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ರಾಜ್ಯ ಸರ್ಕಾರವನ್ನು ಒತ್ತಾಯಿಸದ್ದಾರೆ.

ಮುಖ್ಯಮಂತ್ರಿಯಾಗಿ, ಪ್ರಧಾನ ಮಂತ್ರಿಯಾಗಿ ದೇವೆಗೌಡರ ರಾಜಕೀಯದ ಸಂಧ್ಯಾ ಕಾಲದಲ್ಲಿ ನಾಡಹಬ್ಬ ದಸರಾ ಚಾಲನೆ ನೀಡಲು ಅವಕಾಶ ಮಾಡಿಕೊಡಬೇಕೆಂದು ಎಚ್.ವಿಶ್ವನಾಥ್ ಹೇಳಿದರು.