hindimovie – Peepal Media

‘ಹಮಾರೆ ಬಾರಹ್’ ಸಿನಿಮಾ ರಾಜ್ಯದಲ್ಲಿ ಎರಡು ವಾರ ನಿಷೇಧ: ಮುಸ್ಲಿಮರ ಬಗ್ಗೆ ತುಷ್ಟೀಕರಣದ ಆರೋಪ
ಬೆಂಗಳೂರು: ಮುಸ್ಲಿಮರ ಬಗ್ಗೆ ಅವಹೇಳನಕಾರಿ ಸಂಗತಿಗಳಿವೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ಬಿಡುಗಡೆಯಾಗಬೇಕಿದ್ದ ‘ಹಮಾರೆ ಬಾರಹ್’ ಹಿಂದಿ ಸಿನಿಮಾ ಹಾಗೂ ಅದರ ಟ್ರೇಲರ್ ಅನ್ನು ರಾಜ್ಯ ಸರ್ಕಾರ ನಿಷೇಧಿಸಿದೆ.

ಈ ಸಿನಿಮಾವನ್ನು ಎರಡು ವಾರಗಳ ಅವಧಿ ಅಥವಾ ಮುಂದಿನ ಆದೇಶದವರೆಗೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರ ಬಿಡುಗಡೆಗೆ ಅನುಮತಿ ಕೊಟ್ಟಲ್ಲಿ ರಾಜ್ಯದಲ್ಲಿ ಶಾಂತಿಗೆ ಭಂಗವುಂಟು ಮಾಡುವ  ಧರ್ಮ ಧರ್ಮಗಳ ನಡುವೆ ಹಾಗೂ ಜಾತಿ ಜಾತಿಗಳ ಮಧ್ಯೆ ದ್ವೇಷವುಂಟು ಮಾಡುವ ಸಂಗತಿಗಳಿವೆ ಎನ್ನಲಾಗಿದೆ.  ಒಂದು ಧರ್ಮದ ಪದ್ಧತಿಗಳನ್ನು ಉದ್ದೇಶಪೂರ್ವಕವಾಗಿ ಅವಹೇಳನ ಮಾಡುವ ದೃಶ್ಯಗಳಿವೆ. ಅವು ಮುಸ್ಲಿಮರ ಹಾಗೂ ಮಹಿಳೆಯರ ಭಾವನೆಗಳಿಗೆ ಧಕ್ಕೆ ಉಂಟು ಮಾಡುವಂತೆ ಕಂಡು ಬಂದಿವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

‘ಇತ್ತೀಚಿಗೆ ‘ಜೀ ಸಿನಿಮಾ’ ವಾಹಿನಿಯು ‘ಹಮಾರೆ ಬಾರಹ್’ ಎಂಬ ಚಲನಚಿತ್ರದ ಟ್ರೇಲರ್ ಬಿಡುಗಡೆ ಮಾಡಿತ್ತು.  ಇದರಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಪ್ರಚೋದನಾತ್ಮಕ ಮತ್ತು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಚಿತ್ರ ಪ್ರದರ್ಶನಕ್ಕೆ ರಾಜ್ಯದ ವಿವಿಧ ಮುಸ್ಲಿಂ ಸಂಘಗಳಿಂದ ಪ್ರತಿಭಟನೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ ಯಾವುದೇ ಎಲೆಕ್ಟ್ರಾನಿಕ್ ಮಾಧ್ಯಮ, ಸಾಮಾಜಿಕ ಜಾಲತಾಣ, ಸಿನಿಮಾ ಮಂದಿರಗಳು, ಖಾಸಗಿ ಟಿವಿ ಚಾನಲ್‌ಗಳು ಹಾಗೂ ಇತರೆ ಮಾಧ್ಯಮಗಳ ಮೂಲಕ ಪ್ರಸಾರ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಆದೇಶದ ವಿವರ: ಇಂತಹ ಚಿತ್ರಗಳಿಗೆ ಅನುಮತಿ ನೀಡಿದರೆ ಧರ್ಮ ಮತ್ತು ಜಾತಿಗಳ ಮಧ್ಯೆ ದ್ವೇಷ ಹುಟ್ಟಿಸುತ್ತದೆ. ದೇಶದಲ್ಲಿ ಒಂದು ಧರ್ಮವನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿ, ಕೋಮು ಸೌಹಾರ್ದತೆಗೆ ಧಕ್ಕೆಯುಂಟು ಮಾಡಿ, ದೇಶದಲ್ಲಿ ಅಶಾಂತಿ ಉಂಟು ಮಾಡುವುದು, ಮುಸ್ಲಿಂ ಧರ್ಮದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವುದು ಒಂದು ಷಡ್ಯಂತ್ರವಾಗಿದೆ. ಚಲನಚಿತ್ರಗಳು ಸಮಾಜದಲ್ಲಿ ಮಾರ್ಗದರ್ಶನವಾಗಬೇಕು, ಅದನ್ನು ಬಿಟ್ಟು ಧರ್ಮಗಳ ಮಧ್ಯೆ ದ್ವೇಷ ಭಾವನೆ ಹುಟ್ಟಿಸುವುದಲ್ಲ. ಅದರಂತೆ, ಇಂದು (ಜೂನ್ 07, 2024) ದೇಶಾದ್ಯಂತ ಬಿಡುಗಡೆಯಾಗಲಿರುವ ‘ಹಮಾರೆ ಬಾರಹ್’ ಎಂಬ ವಿವಾದಾತ್ಮಕ ಸಿನಿಮಾ ಬಿಡುಗಡೆಯನ್ನು ನಿಷೇಧಿಸಲಾಗಿದೆ.

‘ಈ ಚಲನಚಿತ್ರದ ಟ್ರೈಲರ್ ಅನ್ನು ಪರಿಶೀಲಿಸಲಾಗಿದ್ದು, ‘ಹಮಾರೆ ಬಾರಹ್’ ಚಿತ್ರದಲ್ಲಿ ಪವಿತ್ರ ಗ್ರಂಥ ‘ಖುರಾನ್’ ಶರೀಫರಲ್ಲಿ ಇರುವ ‘ಸೂರೆ ಎ ಬಕರ’ದ ಸಾಲಿನಲ್ಲಿನ ಉಪದೇಶಗಳು ಹಾಗೂ ಸಂದೇಶಗಳ ಕುರಿತಂತೆ ನಿರ್ಮಾಪಕ ಹಾಗೂ ನಿರ್ದೇಶಕರು ತಪ್ಪು ಅಪಾರ್ಥ ಬರುವಂತೆ ಸೃಷ್ಟಿಸಿದ್ದಾರೆ. ಒಂದು ಸಮಾಜವನ್ನು ಧರ್ಮದ ಆಧಾರದಲ್ಲಿ ವಿಶ್ಲೇಷಣೆ ಮಾಡುವುದು ಸ್ವಾಸ್ಥ್ಯಕ್ಕೆ ಧಕ್ಕೆ ತರುವ ಸಂಭವವಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.