hostel hudugaru bekagiddare – Peepal Media

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆʼ: ಅಜನೀಶ್ ಲೋಕನಾಥ್ ಕಿಡ್ನ್ಯಾಪ್ ಮಾಡಿದ ಟೀಂ ಪೋಟೋ ವೈರಲ್‌
ಬೆಂಗಳೂರು: ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಜನೀಶ್ ಲೋಕನಾಥ್ ರನ್ನು ಥಳಿಸಿ, ಕೈ ಕಟ್ಟಿ ಗನ್ ಹಿಡಿದು ನಿಂತ ಉಗ್ರರ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಫೋಟೋ ನೋಡಿ ಅಜನೀಶ್ ಲೋಕನಾಥ್ ಕಿಡ್ನ್ಯಾಪ್ ಆದ್ರಾ ಎಂದು ಎಲ್ಲರು ಮಾತನಾಡೋಕೆ ಆರಂಭಿಸಿದ್ದಾರೆ.

ಆದರೆ ಈ ಫೋಟೋ ಅಸಲಿಯತ್ತು ಬೇರೆನೇ ಇದೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ಸಿನಿಮಾದ ಪ್ರಮೋಷನ್ ಫೋಟೋ ಇದಾಗಿದ್ದು, ಅಜನೀಶ್ ಲೋಕನಾಥ್ ಸ್ಯಾಂಡಲ್ ವುಡ್ ಅಂಗಳದಲ್ಲಿ ಬಹು ನಿರೀಕ್ಷೆ ಮೂಡಿಸಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರಕ್ಕೆ ಸಾಥ್ ನೀಡಿದ್ದಾರೆ. ಮ   ಅದರ ಪ್ರಮೋಷನ್ ಗಾಗಿ ತೆಗೆದ ಫೋಟೋ ಇದಾಗಿದೆ ಎನ್ನಲಾಗಿದೆ.

ವಿಭಿನ್ನ ಹಾಗೂ ವಿಶಿಷ್ಟ ರೀತಿಯ ಪ್ರಮೋಷನ್ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಸದ್ದು ಮಾಡುತ್ತಿರುವ ಸಿನಿಮಾ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’. ಸ್ಯಾಂಡಲ್ ವುಡ್ ಸ್ಟಾರ್ ತಾರೆಯರು ಈ ಚಿತ್ರಕ್ಕೆ ಸಾಥ್ ನೀಡ್ತಿದ್ದಾರೆ. ಇತ್ತೀಚೆಗೆ ಮೋಹಕ ತಾರೆ ರಮ್ಯಾ ಕೂಡ ಸಾಥ್ ನೀಡಿದ ವೀಡಿಯೋ ಟೀಸರ್ ಸಖತ್ ವೈರಲ್ ಆಗಿ ಗಮನ ಸೆಳೆದಿತ್ತು.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ರಕ್ಷಿತ್ ಶೆಟ್ಟಿ, ಸುದೀಪ್, ರಮ್ಯಾ ಕೂಡ ಈ ಸಿನಿಮಾಗೆ ಸಾಥ್ ನೀಡಿದ್ದಾರೆ, ಚಿತ್ರದ ವಿಭಿನ್ನ ಪ್ರಮೋಷನ್ ಟೀಸರ್ ನಲ್ಲಿ ಅಭಿನಯಿಸಿದ್ದಾರೆ. ಆ ಸಾಲಿಗೆ ಅಜನೀಶ್ ಲೋಕನಾಥ್ ಸೇರ್ಪಡೆಯಾಗಿದ್ದಾರೆ. ಈ ಚಿತ್ರದ ಸಂಗೀತ ನಿರ್ದೇಶನ ಕೂಡ ಇವರದ್ದೇ ಆಗಿದೆ.

ವರುಣ್ ಸ್ಟುಡಿಯೋಸ್ ಹಾಗೂ ಪ್ರಜ್ವಲ್ ಬಿ. ಪಿ ಅವರ ‘ಗುಲ್ ಮೋಹರ್ ಫಿಲಂಸ್’ ಬ್ಯಾನರ್ ನಡಿ ನಿರ್ಮಾಣವಾಗಿರುವ ಮೊದಲ ಸಿನಿಮಾವಿದು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಶೀರ್ವಾದದೊಂದಿಗೆ ಆರಂಭವಾದ ಈ ಚಿತ್ರವನ್ನು ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ಯೂತ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದಲ್ಲಿ ಹಲವು ರಂಗಭೂಮಿ ಪ್ರತಿಭೆಗಳು ನಟಿಸಿದ್ದಾರೆ. ಇವರ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ ನಟರ ಗೆಸ್ಟ್ ಅಪಿಯರೆನ್ಸ್ ಕೂಡ ಚಿತ್ರದಲ್ಲಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿಯಾಗಿದ್ದು, ಜನವರಿಯಲ್ಲಿ ಸಿನಿಮಾ ತೆರೆಗೆ ತರಲು ಪ್ಲ್ಯಾನ್ ಮಾಡಿಕೊಂಡಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಅರವಿಂದ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಸಂಕಲನ ಚಿತ್ರಕ್ಕಿದೆ.

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರಕ್ಕೆ ಮೋಹಕ ತಾರೆ ಸಾಥ್: ಇಂದು ಟೀಸರ್ ರಿಲೀಸ್
ಬೆಂಗಳೂರು : ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ಈ ಸಿನಿಮಾ ಹೆಸರು ನೀವು ಕೇಳಿರ್ತೀರಾ. ಸೋಶಿಯಲ್ ಮೀಡಿಯಾದಲ್ಲಿ ಒಂದಷ್ಟು ಸಖತ್ ಕ್ರಿಯೇಟಿವ್ ಆಗಿರೋ ಸಿನಿಮಾ ಪ್ರಮೋಷನಲ್ ವೀಡಿಯೋಗಳು ನಿಮ್ಮನ್ನು ಸೆಳೆದಿರುತ್ತೆ. ಅದಕ್ಕೂ ಮಿಗಿಲಾಗಿ ಎಲ್ಲರ ಪ್ರೀತಿಯ ಅಪ್ಪು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಚಿತ್ರದ ಪೋಸ್ಟರ್ ಲಾಂಚ್ ಮಾಡಿದ್ದ ವೀಡಿಯೋನಂತೂ ಕಣ್ತುಂಬಿಕೊಂಡಿರ್ತಿರಾ. ಹೀಗೆ ಸ್ಟಾರ್ ನಟರ ಮೂಲಕ ಸಿನಿಮಾದ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿರೋ ಈ ಚಿತ್ರತಂಡ ಇದೀಗ  ಸ್ಯಾಂಡಲ್ ವುಡ್ ಕ್ವೀನ್ ಮೋಹಕ ತಾರೆ ರಮ್ಯಾ ಅವರನ್ನು ಚಿತ್ರದ ಪ್ರಚಾರ ಕಾರ್ಯಕ್ಕೆ ಕರೆತಂದಿದೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ, ಕಿಚ್ಚ ಸುದೀಪ್‌ ಅವರಿಂದ ಸಿನಿಮಾ ಪ್ರಮೋಷನಲ್ ಕಟೆಂಟ್ ಮಾಡಿಸಿ ಗಮನ ಸೆಳೆದಿತ್ತು. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಟೀಮ್ ಸ್ಟಾರ್ ನಟರ ಮೂಲಕ ಸಿನಿಮಾ ಪ್ರಚಾರ ಒಂದು ಕಡೆಯಾದ್ರೆ ಇಂಟ್ರಸ್ಟಿಂಗ್ ಪ್ರಮೋಷನಲ್ ಕಂಟೆಂಟ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಎಲ್ಲರನ್ನು ಸಖತ್ ಇಂಪ್ರೆಸ್ ಮಾಡಿತ್ತು. ಹೀಗೆ ವಿಭಿನ್ನವಾಗಿ ಸಿನಿಮಾ ಪ್ರಚಾರ ಮಾಡುತ್ತಾ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಈ ಚಿತ್ರತಂಡ. ಈ ಬಾರಿ ಮೋಹಕ ತಾರೆ ರಮ್ಯಾ ಅವರನ್ನು ಚಿತ್ರದ ಪ್ರಚಾರ ಕಾರ್ಯಕ್ಕಾಗಿ ಕರೆತಂದಿದೆ. ರಮ್ಯಾ ಕೂಡ ಚಿತ್ರತಂಡಕ್ಕೆ ಸಾಥ್ ನೀಡಲು ಒಪ್ಪಿದ್ದು, ಬಹಳ ಖುಷಿಯಿಂದಲೇ ಚಿತ್ರದ ಪ್ರಮೋಷನಲ್ ಕಂಟೆಂಟ್ ವೀಡಿಯೋ ನಲ್ಲಿ ಭಾಗಿಯಾಗಿದ್ದಾರೆ. ನಾಳೆ ಸಂಜೆ ಆರು ಗಂಟೆಗೆ ಮೋಹಕ ತಾರೆ ಭಾಗಿಯಾಗಿರುವ ಚಿತ್ರದ ಪ್ರಮೋಷನಲ್ ಟೀಸರ್ ಬಿಡುಗಡೆ ಮಾಡುತ್ತಿದೆ.

ವರುಣ್ ಸ್ಟುಡಿಯೋಸ್ ಹಾಗೂ ಪ್ರಜ್ವಲ್ ಬಿ ಪಿ ಅವರ ಗುಲ್ ಮೋಹರ್ ಫಿಲಂಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಮೊದಲ ಸಿನಿಮಾ ಇದಾಗಿದೆ. ಈ ಚಿತ್ರದ ಕಥೆ ಮೊದಲು ಕೇಳಿದವರು ಮತ್ತದೇ ನಮ್ಮೆಲ್ಲರ ಪ್ರೀತಿಯ ರಾಜರತ್ನ ಪುನೀತ್ ರಾಜ್ ಕುಮಾರ್. ಚಿತ್ರತಂಡ ಈ ಸಿನಿಮಾ ಚಿತ್ರೀಕರಣಕ್ಕೂ ಮೊದಲು ಅಪ್ಪು ಅವರ ಬಳಿ ಹೋಗಿ ಸಿನಿಮಾ ಬಗ್ಗೆ ಮಾತುಕತೆ ನಡೆಸಿದೆ. ಕಥೆ ಕೇಳಿ ಸಖತ್ ಇಂಪ್ರೆಸ್ ಆದ ಅಪ್ಪು ಸಿನಿಮಾ ಮಾಡಿ ಎಂದು ಇಡೀ ತಂಡಕ್ಕೆ ಬೆನ್ನುತಟ್ಟಿ ಪ್ರೋತ್ಸಾಹ ನೀಡಿದರಂತೆ. ಅವರ ಆರ್ಶೀವಾದದೊಂದಿಗೆ ಸಿನಿಮಾ ಚಿತ್ರೀಕರಣ ಆರಂಭಿಸಿದ್ವಿ ಎಂದು ನಿರ್ಮಾಪಕ ವರುಣ್ ಕುಮಾರ್ ಹಾಗೂ ಪ್ರಜ್ವಲ್ ಬಿಪಿ ತಿಳಿಸಿದ್ದಾರೆ.

ಯೂತ್ ಸಬ್ಜೆಕ್ಟ್ ಒಳಗೊಂಡ  ಚಿತ್ರವನ್ನು ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಹಲವು ರಂಗಭೂಮಿ ಪ್ರತಿಭೆಗಳು ಈ ಚಿತ್ರದಲ್ಲಿ ನಟಿಸಿದ್ದಾರೆ. ಇವರ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ ನಟರ ಗೆಸ್ಟ್ ಅಪಿಯರೆನ್ಸ್ ಕೂಡ ಚಿತ್ರದಲ್ಲಿರಲಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದ್ದು, ಜನವರಿಯಲ್ಲಿ ಸಿನಿಮಾ ತೆರೆಗೆ ತರುವ ಪ್ಲ್ಯಾನ್ ನಲ್ಲಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಅರವಿಂದ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಸಂಕಲನ ಚಿತ್ರಕ್ಕಿದೆ.