india – Peepal Media

4 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಿದ ಶಾಕ್‌ ಕೊಟ್ಟ ಅಮೆಜಾನ್
ನವದೆಹಲಿ : ವಿಶ್ವದ ನಂಬರ್ ಒನ್ ಇ-ಕಾಮರ್ಸ್ ಕಂಪನಿ ಎಂದು ಹೆಸರು ಪಡೆದುಕೊಂಡಿರುವ ಅಮೆಜಾನ್‌ ಕಂಪನಿ ತನ್ನ ಉದ್ಯೋಗಿಗಳಿಗೆ ಶಾಕ್‌ ಕೊಟ್ಟಿದ್ದು, ಬರೋಬ್ಬರು 14,000 ಉದ್ಯೋಗಿಗಳನ್ನು ಲೇ ಆಫ್ (Amazon Layoffs) ಮಾಡಿದೆ.

ಎಐ ಅಳವಡಿಕೆಗೆ ಒತ್ತು
ಕಳೆದ ಕೆಲ ಸಮಯದಿಂದ ಅಮೆಜಾನ್‌ ಸಂಸ್ಥೆಯು ಎಐ ಅಳವಡಿಕೆ ಮೇಲೆ ಒತ್ತು ನೀಡುತ್ತಿದೆ. ಈ ಕಾರಣದಿಂದಾಗಿಯೇ ಉದ್ಯೋಗಿಗಳ ಕೆಲಸಕ್ಕೆ ಕತ್ತರಿ ಹಾಕುವ ಕೆಲಸ ಮಾಡಲಾಗುತ್ತಿದೆ ಎಂದು ಅಂದಾಜಿಸಲಾಗಿದೆ. ಇದಿಷ್ಟೇ ಅಲ್ಲದೇ, ಮುಂದಿನ ದಿನಗಳಲ್ಲಿ ಅಮೆಜಾನ್ ಕಂಪನಿಯಲ್ಲಿ ಇನ್ನೂ ಹೆಚ್ಚು ಉದ್ಯೋಗಿಗಳು ಕೆಲಸ ಕಳೆದುಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ, ಈ ಉದ್ಯೋಗ ಕಡಿತದ ಬಗ್ಗೆ ಅಮೆಜಾನ್ ಸಿಇಒ ಆ್ಯಂಡಿ ಜ್ಯಾಸಿ ಅವರು ಜೂನ್‌ ತಿಂಗಳಲ್ಲಿಯೇ ಹೇಳಿದ್ದರು.ಎಐಗಳ ಕಾರಣದಿಂದಾಗಿ ಮುಂದಿನ ಕೆಲ ಸಮಯದಲ್ಲಿ ಅಮೆಜಾನ್​ನ ಕಂಪನಿಯಲ್ಲಿ ಕಾರ್ಪೊರೇಟ್ ಉದ್ಯೋಗಿಗಳ ಸಂಖ್ಯೆ ಕಡಿಮೆ ಆಗಲಿದ್ದು ಎಂದು ಹೇಳಿದ್ದರು.  ಅಲ್ಲದೇ, ನಿನ್ನೆಯಿಂದ ಸುಮಾರು 30 ಸಾವಿರ ಕಾರ್ಪೊರೇಟ್ ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧಾರ ಮಾಡಿದೆ, ಇದು ಸಾಂಕ್ರಾಮಿಕ ರೋಗದ ನಂತರ ವೆಚ್ಚವನ್ನು ಕಡಿಮೆ ಮಾಡಲು ಮತ್ತು ಮರು ಸಮತೋಲನಗೊಳಿಸುವ ಕ್ರಮ ಎಂದು ಪರಿಗಣಿಸಲಾಗಿದೆ. ಅದರ ಮೊದಲ ಹಂತವಾಗಿ ಈಗ 14 ಸಾವಿರ ಜನರ ಕೆಲಸ ಹೋಗಿದೆ ಎಂದು ಕಂಪನಿ ತಿಳಿಸಿದೆ.

ಭಾರತದಲ್ಲಿ ಕೆಲಸ ಕಳೆದುಕೊಳ್ಳಲಿದ್ದಾರಾ ಸಾವಿರ ಜನ?
ಸದ್ಯದ ಮಾಹಿತಿಗಳ ಪ್ರಕಾರ, ಅಮೆಜಾನ್‌ ಭಾರತದಲ್ಲಿರುವ ಅದರ ಕಚೇರಿಗಳಲ್ಲಿ ಸುಮಾರು 800 ರಿಂದ ಸಾವಿರ ಉದ್ಯೋಗಿಗಳನ್ನ ಮನೆಗೆ ಕಳುಹಿಸಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅದಿಕೃತ ಮಾಹಿತಿ ಇಲ್ಲ. ಭಾರತ ಕಚೇರಿಗಳಲ್ಲಿ ಫಿನಾನ್ಸ್, ಮಾರ್ಕೆಟಿಂಗ್, ಹ್ಯೂಮನ್ ರಿಸೋರ್ಸ್, ಟೆಕ್ ಇಲಾಖೆಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳನ್ನ ಕೆಲಸದಿಂದ ತೆಗೆದು ಹಾಕಲಾಗಿದ್ದು, ವಿಶ್ವದ ಬೇರೆ ಬೇರೆ ಟೀಮ್‌ಗಳಿಗೆ ನೇರವಾಗಿ ರಿಪೋರ್ಟಿಂಗ್ ಮಾಡುತ್ತಿರುವ ಉದ್ಯೋಗಿಗಳೇ ಹೆಚ್ಚಾಗಿ ಕೆಲಸ ಕಳೆದುಕೊಂಡಿದ್ದಾರೆ.ಕಳೆದ ಎರಡು ವರ್ಷಗಳಲ್ಲಿ, ಕಂಪನಿಯು ತನ್ನ ಸಾಧನಗಳು ಮತ್ತು ಪಾಡ್‌ಕ್ಯಾಸ್ಟಿಂಗ್ ವಿಭಾಗಗಳು ಸೇರಿದಂತೆ ಇದೇ ಕ್ಷೇತ್ರಗಳಲ್ಲಿ ಸಣ್ಣ ಕಡಿತಗಳನ್ನು ಮಾಡಿದೆ. ಕಂಪನಿಯ ಕೆಲವು ಒಳಗಿನವರ ಮಾಹಿತಿ ಪ್ರಕಾರ, ಅಮೆಜಾನ್‌ನ ಮಾನವ ಸಂಪನ್ಮೂಲ ಘಟಕವು ಅದರ ಸಿಬ್ಬಂದಿಗಳಲ್ಲಿ ಶೇಕಡಾ 15 ರಷ್ಟು ವರೆಗೆ ಕಡಿತ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. 2022 ರ ಅಂತ್ಯದ ನಂತರ, ಸುಮಾರು 27,000 ಉದ್ಯೋಗಿಗಳನ್ನ ತೆಗೆದುಹಾಕಿದಾಗಿನಿಂದ ಇದು ಅಮೆಜಾನ್‌ನ ಅತಿದೊಡ್ಡ ಉದ್ಯೋಗ ಕಡಿತ ಕ್ರಮವಾಗಿದೆ.  ಈ ಉದ್ಯೋಗಿಗಳನ್ನ ವಜಾ ಮಾಡುವುದರಿಂದ ಅಮೆಜಾನ್‌ನ ಮಾನವ ಸಂಪನ್ಮೂಲ ವಿಭಾಗ – ಆಂತರಿಕವಾಗಿ ಪೀಪಲ್ ಎಕ್ಸ್‌ಪೀರಿಯೆನ್ಸ್ ಮತ್ತು ಟೆಕ್ನಾಲಜಿ (PXT) ತಂಡ ಎಂದು ಕರೆಯಲ್ಪಡುವ ಜನರ ಮೇಲೆ ಇದು ಪರಿಣಾಮ ಬೀರಲಿದೆ. ಅದರ ಕಾರ್ಯಾಚರಣೆಗಳು, ಸಾಧನಗಳು ಮತ್ತು ಅಮೆಜಾನ್ ವೆಬ್ ಸೇವೆಗಳು (AWS) ಸೇರಿದಂತೆ ಹಲವಾರು ವಿಭಾಗಗಳ ಮೇಲೆ  ಸಹ ಈ ಉದ್ಯೋಗಿಗಳ ಕಡಿತ ಪರಿಣಾಮ ಬೀರುವ ನಿರೀಕ್ಷೆಯಿದೆ

ಮೊದಲ ಸಹಕಾರಿ ಟ್ಯಾಕ್ಸಿ ಸೇವೆಯಾದ ‘ಭಾರತ್ ಟ್ಯಾಕ್ಸಿ’ಯನ್ನು ಪ್ರಾರಂಭಿಸಿದ ಕೇಂದ್ರ ಸರ್ಕಾರ
ನವದೆಹಲಿ : ಓಲಾ (Ola) ಮತ್ತು ಉಬರ್‌ನಂತಹ (Uber) ಖಾಸಗಿ ಕಂಪನಿಗಳಿಗೆ ನೇರವಾಗಿ ಸವಾಲು ಹಾಕಲೆಂದೇ ವಿನ್ಯಾಸಗೊಳಿಸಲಾದ ಭಾರತದ (India) ಮೊದಲ ಸಹಕಾರಿ ಟ್ಯಾಕ್ಸಿ ಸೇವೆಯಾದ ‘ಭಾರತ್ ಟ್ಯಾಕ್ಸಿ’ಯನ್ನು (Bharat Taxi) ಕೇಂದ್ರ ಸರ್ಕಾರ (Central Govt) ಪ್ರಾರಂಭಿಸಿದೆ.ಕೇಂದ್ರದ ಸಹಕಾರ ಸಚಿವಾಲಯ ಮತ್ತು ರಾಷ್ಟ್ರೀಯ ಇ-ಆಡಳಿತ ವಿಭಾಗದ ಅಡಿಯಲ್ಲಿ ಅಭಿವೃದ್ಧಿಪಡಿಸಲಾದ ಭಾರತ್ ಟ್ಯಾಕ್ಸಿ, ಪ್ರಯಾಣಿಕರಿಗೆ ಸರ್ಕಾರಿದ ಭದ್ರತೆ ಜೊತೆಗೆ ಚಾಲಕರಿಗೆ ತಮ್ಮ ಗಳಿಕೆಯ ಸಂಪೂರ್ಣ ಹಣವನ್ನು ನೀಡುವ ಗುರಿಯನ್ನು ಹೊಂದಿದೆ.

ಆಪ್ ಆಧಾರಿತ ಟ್ಯಾಕ್ಸಿ ಸೇವೆಗಳ ಬಗ್ಗೆ ದೂರುಗಳು, ಸೂಕ್ತ ಸೌಲಭ್ಯ ಇಲ್ಲದ ವಾಹನಗಳು ಮತ್ತು ಸಿಕ್ಕಾಪಟ್ಟೆ ದರಗಳು, ಮನಸ್ಸಿಗೆ ಬಂದಾಗ ರೇಡ್ ರದ್ದು ಮಾಡುವುದು, ಬೆಲೆಯಲ್ಲಿ ಏಕಾಏಕಿ ಏರಿಕೆ ಮಾಡುವುದರಿಂದ ಜನರು ಕಂಗೆಟ್ಟಿದ್ದಾರೆ. ಕಂಪನಿಗಳು ವಿಧಿಸುವ ಹೆಚ್ಚಿನ ಕಮಿಷನ್ ದರಗಳ ಬಗ್ಗೆ ಅನೇಕ ಚಾಲಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಗಾಗ ತಮ್ಮ ಆದಾಯದ ಶೇಕಡಾ 25 ರವರೆಗೆ ಕಳೆದುಕೊಳ್ಳುತ್ತಿದ್ದೇವೆ ಎಂದು ಆರೋಪ ಮಾಡ್ತಾರೆ.ಈಗ ಬರುತ್ತಿರೋ ಭಾರತ್ ಟ್ಯಾಕ್ಸಿ ಎಲ್ಲಾ ವ್ಯವಸ್ಥೆಯನ್ನು ಬದಲಾಯಿಸಲು ಮುಂದಾಗಿದೆ. ಖಾಸಗಿ ಕಂಪನಿಗಳಿಗಿಂತ ಇದು ಭಿನ್ನವಾಗಿರಲಿದೆ. ಭಾರತ್ ಟ್ಯಾಕ್ಸಿ ಚಾಲಕರು ಯಾವುದೇ ಕಮಿಷನ್ ಕೊಡಬೇಕಾಗಿಲ್ಲ. ಅದರ ಬದಲಾಗಿ, ಸದಸ್ಯತ್ವ ಪಡೆಯಬೇಕು. ದೈನಂದಿನ, ವಾರದ ಅಥವಾ ತಿಂಗಳ ಶುಲ್ಕವನ್ನು ಮಾತ್ರ ಪಾವತಿಸಬೇಕು. ಆ ಹಣ ಆಪ್ ಮೇಂಟೇನೆನ್ಸ್​ಗೆ ಬಳಕೆಯಾಗುತ್ತದೆ. ಇದರಿಂದ ಚಾಲಕರು ಹೆಚ್ಚಿನ ಹಣ ಗಳಿಸಲು ಸಹಾಯ ಮಾಡುತ್ತದೆ ಎಂದು ಮೋದಿ ಸರ್ಕಾರ ಹೇಳ್ತಿದೆ. ಭಾರತ್ ಟ್ಯಾಕ್ಸಿಯು ಸದ್ಯ ಬೀಟಾ ಹಂತದಲ್ಲಿದೆ. ನವೆಂಬರ್‌ನಲ್ಲಿ ಈ ಆಪ್ ದೆಹಲಿಯಲ್ಲಿ ಪ್ರಾರಂಭವಾಗಲಿದ್ದು, 650 ವಾಹನಗಳು ಮತ್ತು ಅವುಗಳ ಮಾಲೀಕರು ಚಾಲಕರೊಂದಿಗೆ ಆರಂಭವಾಗಲಿದೆ. ಅಲ್ಲಿ ಯಶಸ್ವಿಯಾದರೆ, ಡಿಸೆಂಬರ್‌ನಲ್ಲಿ ಪೂರ್ಣ ಪ್ರಮಾಣದ ಆಪ್ ಬಿಡುಗಡೆಗೆ ನಿರ್ಧರಿಸಲಾಗಿದೆ. ಆಗ ಈ ಸೇವೆಯು ಬೇರೆ ಬೇರೆ ಪ್ರಮುಖ ನಗರಗಳಿಗೆ ವಿಸ್ತರಿಸಲಿದೆ.

ಒಂದು ವೇಳೆ ಈ ಆಪ್ ಲಾಂಚ್ ಆದರೆ, ಪುರುಷರು ಮತ್ತು ಮಹಿಳೆಯರು ಸೇರಿದಂತೆ 5,000 ಕ್ಕೂ ಹೆಚ್ಚು ಚಾಲಕರು ಆಪ್​ಗೆ ಸೇರಲಿದ್ದಾರೆ. ಮುಂದಿನ ವರ್ಷದಲ್ಲಿ ಈ ಸೇವೆಯು ಬೆಂಗಳೂರು, ಮುಂಬೈ, ಪುಣೆ, ಭೋಪಾಲ್, ಲಕ್ನೋ ಮತ್ತು ಜೈಪುರ ಸೇರಿದಂತೆ 20 ನಗರಗಳಿಗೆ ಹಂತ ಹಂತವಾಗಿ ವಿಸ್ತರಿಸಲಿದೆ. ಮಾರ್ಚ್ 2026 ರ ವೇಳೆಗೆ, ಮೋದಿ ಸರ್ಕಾರವು ಹಲವಾರು ಮೆಟ್ರೋ ನಗರಗಳಲ್ಲಿ ಭಾರತ್ ಟ್ಯಾಕ್ಸಿಯನ್ನು ಸ್ಥಾಪಿಸುವ ಗುರಿಯನ್ನು ಹೊಂದಿದೆ. 2030 ರ ವೇಳೆಗೆ, ಭಾರತ್ ಟ್ಯಾಕ್ಸಿಯು ಜಿಲ್ಲಾ ಕೇಂದ್ರಗಳು ಮತ್ತು ಗ್ರಾಮೀಣ ಭಾಗಗಳನ್ನು ಸೇರಿ 1 ಲಕ್ಷ ಚಾಲಕರನ್ನು ಸೇರಿಸಿಕೊಳ್ಳುವ ನಿರೀಕ್ಷೆಯಿದೆ.

ಸೋಲಿನೊಂದಿಗೆ ಸರಣಿ ಆರಂಭ, ಆಸಿಸ್ ವಿರುದ್ಧ ಮುಗ್ಗರಿಸಿದ ಭಾರತ
ಆಸ್ಟ್ರೇಲಿಯಾ : ಭಾರತ vs ಆಸ್ಟ್ರೇಲಿಯಾ (India vs Australia) ನಡುವಿನ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ 7 ವಿಕೆಟ್​ಗಳ ಜಯ ಸಾಧಿಸಿದೆ. ಇಂದು (ಅ.20) ಪರ್ತ್ ಮೈದಾನದಲ್ಲಿ (Perth stadium) ನಡೆದ ಪಂದ್ಯಕ್ಕೆ ಮಳೆ ಅಡ್ಡಿಯಾಗಿತ್ತು. ಹೀಗಾಗಿ ಪಂದ್ಯವನ್ನು 26 ಓವರ್​ಗಳಿಗೆ ಸೀಮಿತಗೊಳಿಸಲಾಯಿತು. ಟಾಸ್ ಸೋತು ಬ್ಯಾಟಿಂಗ್ ಮಾಡಿದ ಭಾರತ (Team India) 9 ವಿಕೆಟ್​ಗಳ ನಷ್ಟಕ್ಕೆ 136 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 3 ವಿಕೆಟ್ ಕಳೆದುಕೊಂಡು ಗುರಿ ಮುಟ್ಟುವ ಮೂಲಕ ಜಯ ಸಾಧಿಸಿದೆ.

ಇಂದಿನ ಪಂದ್ಯದಲ್ಲಿ ಭಾರತ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಬರೋಬ್ಬರಿ 7 ತಿಂಗಳುಗಳ ನಂತರ ನೀಲಿ ಜರ್ಸಿಯಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಇಂದಿನ ಪಂದ್ಯದಲ್ಲಿ ಈ ಇಬ್ಬರೂ ವಿಫಲರಾಗಿದ್ದು, ಆಸ್ಟ್ರೇಲಿಯಾದ ಜನ ಇನ್ನಷ್ಟು ಸುಲಭವಾಗಿದೆ. ಈ ಮೈದಾನದಲ್ಲಿ ಆಸ್ಟ್ರೇಲಿಯಾ ತನ್ನ ಮೊದಲ ಗೆಲುವನ್ನು ದಾಖಲಿಸಿದೆ.

ಭಾರತ ತಂಡದ ಪರ ಕನ್ನಡಿಗ ಕೆಎಲ್ ರಾಹುಲ್ 38 ರನ್, ಅಕ್ಷರ್ ಪಟೇಲ್ 31 ರನ್, ಮತ್ತು ನಿತೀಶ್ ಕುಮಾರ್ ರೆಡ್ಡಿ ಅಜೇಯ 19 ರನ್ ಬಾರಿಸಿ ತಂಡವನ್ನು 100 ರನ್​ಗಳ ಗಡಿ ದಾಟಿಸಿದರು. ಆದ್ರೆ ಆಸ್ಟ್ರೇಲಿಯಾ ಕೇವಲ 3 ವಿಕೆಟ್ ಕಳೆದುಕೊಂಡು ನಿರಾಯಾಸವಾಗಿ ಗೆಲುವು ಸಾಧಿಸಿದೆ

ಜಿಎಸ್‌ಟಿ ಕಡಿತ ಹಿನ್ನೆಲೆ ಮಹಿಂದ್ರಾ,ಟಾಟಾ, ಹ್ಯುಂಡೈ, ಔಡಿ ಕಾರು ಬೆಲೆ ಇಳಿಕೆ
ನವದೆಹಲಿ : ಕೇಂದ್ರದಲ್ಲಿರುವ ಎನ್​ಡಿಎ ಸರ್ಕಾರ (NDA) ಜಿಎಸ್​ಟಿ (GST 2.0) ದರ ಕಡಿತ ಮಾಡಿದೆ. ಆದ್ದರಿಂದ ಮಧ್ಯಮ ಹಾಗೂ ಬಡತನ ರೇಖೆಗಿಂತ ಮೇಲಿರುವ ಜನರಿಗೆ ತುಂಬಾ ಅನುಕೂಲಕರವಾಗಿದೆ. ಅದರಲ್ಲೂ ಸ್ವಂತ ಕಾರು ಖರೀದಿಸಲು ಕನಸು ಕಾಣುತ್ತಿದ್ದವರಿಗೆ ನನಸು ಮಾಡಿಕೊಳ್ಳುವ ಸುಸಂದರ್ಭ ಒದಗಿದೆ.

ವಾಹನಗಳ ಮೇಲಿನ ಜಿಎಸ್‌ಟಿ ದರ ಇಳಿಕೆಯ ಪರಿಣಾಮವಾಗಿ ತನ್ನ ಜನಪ್ರಿಯ ಮ್ಯಾಗ್ನೈಟ್‌ ಎಸ್‌ಯವಿ ಮಾದರಿಯ ಬೆಲೆಯಲ್ಲಿ ₹1 ಲಕ್ಷದವರೆಗೆ ಇಳಿಕೆ ಆಗಲಿದೆ ಎಂದು ನಿಸಾನ್ ಮೋಟರ್ ಇಂಡಿಯಾ ಕಂಪನಿಯು ಸೋಮವಾರ ತಿಳಿಸಿದೆ.ಹೊಸ ದರವು ಜಿಎಸ್‌ಟಿ ಪರಿಷ್ಕೃತ ದರ ಜಾರಿಗೆ ಬರಲಿರುವ ಸೆಪ್ಟೆಂಬರ್‌ 22ರಿಂದ ಅನ್ವಯವಾಗಲಿದೆ. ಆದರೆ, ಹೊಸ ದರಕ್ಕೆ ಕಾರು ಬುಕ್ ಮಾಡಲು ಈಗಿನಿಂದಲೇ ಅವಕಾಶ ಇದೆ ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.

ಜಿಎಸ್‌ಟಿ ಕಡಿತದ ಸಂಪೂರ್ಣ ಪ್ರಯೋಜನಗಳನ್ನು ಖರೀದಿದಾರರಿಗೆ ವರ್ಗಾಯಿಸುವುದಾಗಿ ಮಾರುತಿ ಸುಜುಕಿ ಇಂಡಿಯಾ ಮತ್ತು ಮಹೀಂದ್ರಾ & ಮಹೀಂದ್ರಾ ಶುಕ್ರವಾರ ಘೋಷಿಸಿದ ನಂತರ, ಹ್ಯುಂಡೈ ಮೋಟಾರ್ ಇಂಡಿಯಾ ಕೂಡ ಇದೇ ರೀತಿಯ ಘೋಷಣೆ ಮಾಡಿದೆ. ತನ್ನ ಗ್ರಾಹಕರಿಗೆ ಜಿಎಸ್‌ಟಿ ಕಡಿತದ ಸಂಪೂರ್ಣ ಪ್ರಯೋಜನವನ್ನು ವರ್ಗಾಯಿಸುವುದಾಗಿ ಹ್ಯುಂಡೈ ಮೋಟಾರ್ ಇಂಡಿಯಾ ಭಾನುವಾರ ಘೋಷಿಸಿದೆ.

ಹೊಸ ದರ ಸೆಪ್ಟೆಂಬರ್ 22 ರಿಂದ ಜಾರಿಗೆ

ಪ್ರಯಾಣಿಕ ಕಾರುಗಳ ಬೆಲೆಯನ್ನು ಗಮನಾರ್ಹವಾಗಿ ಕಡಿತ ಮಾಡಿದೆ. ಹೊಸ ಬೆಲೆಗಳು ಹಬ್ಬದ ಸೀಸನ್‌ಗೆ ಮುಂಚಿತವಾಗಿ ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿವೆ. ಪರಿಷ್ಕೃತ ಬೆಲೆಯೊಂದಿಗೆ, ಹ್ಯುಂಡೈ ಕಾರುಗಳು ಮತ್ತು SUV ಗಳು ರೂ 2.4 ಲಕ್ಷದವರೆಗೆ ಅಗ್ಗವಾಗುತ್ತವೆ.

ಹ್ಯುಂಡೈ ಟಕ್ಸನ್‌ನಲ್ಲಿ ಬೆಲೆಯಲ್ಲಿ ಅತ್ಯಂತ ಹೆಚ್ಚು ರೂ. 2,40,303 ಕಡಿತವಾಗಲಿದೆ. ಇತರ ಜನಪ್ರಿಯ ಮಾದರಿಗಳಾದ Grand i10 Nios, Aura, Exter, i20, ವೆನ್ಯೂ, ವೆರ್ನಾ, ಕ್ರೆಟಾ ಮತ್ತು ಅಲ್ಕಾಜರ್‌ಗಳು ಸಹ ಸುಮಾರು ರೂ. 60,000 ರೂ.ಗಳಿಂದ 1.2 ಲಕ್ಷದವರೆಗೆ ಗಣನೀಯ ಪ್ರಮಾಣದ ಕಡಿತವಾಗಲಿದೆ.

ನಟಿ ವಿಜಯಲಕ್ಷ್ಮಿ ದರ್ಶನ್‌ಗೆ ಅಶ್ಲೀಲ ಸಂದೇಶ: ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್‌ ದಾಖಲು
ಬೆಂಗಳೂರು: ನಟ ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ 4-5 ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಶ್ಲೀಲ ಕಮೆಂಟ್‌ಗಳನ್ನು ಹಾಕಿದವರ ವಿರುದ್ಧ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಲೋಕೇಶ್ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣ ಮಾನಿಟರಿಂಗ್ ಸೆಲ್‌ನಿಂದ ಸ್ವಯಂಪ್ರೇರಿತವಾಗಿ ಈ ದೂರು ದಾಖಲಿಸಲಾಗಿದೆ.

ಮಾಜಿ ಸಂಸದೆ ರಮ್ಯಾ ಅವರ ವಿರುದ್ಧ ಅಶ್ಲೀಲ ಸಂದೇಶಗಳ ಪ್ರಕರಣದ ಬೆನ್ನಲ್ಲೇ ಈ ಘಟನೆ ವರದಿಯಾಗಿದೆ. ವಿಜಯಲಕ್ಷ್ಮಿ ದರ್ಶನ್ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯವಾಗಿ ಕಮೆಂಟ್‌ಗಳನ್ನು ಮಾಡಲಾಗಿದ್ದು, ಈ ಕುರಿತು ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗವು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದೆ.

ಮಹಿಳಾ ಆಯೋಗದಿಂದ ಪೊಲೀಸ್ ಆಯುಕ್ತರಿಗೆ ಪತ್ರ

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಅವರು ಈ ಕುರಿತು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ರಮ್ಯಾ ಅವರಿಗೆ ಕಳುಹಿಸಿದ ಅಶ್ಲೀಲ ಸಂದೇಶಗಳಂತೆಯೇ ವಿಜಯಲಕ್ಷ್ಮಿ ಅವರಿಗೂ ಅಸಭ್ಯವಾಗಿ ಮತ್ತು ಕೆಟ್ಟದಾಗಿ ಕಮೆಂಟ್‌ಗಳನ್ನು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿ 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಆ ಪತ್ರದಲ್ಲಿ ತಿಳಿಸಲಾಗಿದೆ.

ಇಂತಹ ಕೃತ್ಯಗಳ ಬಗ್ಗೆ ಎಚ್ಚರಿಕೆ ನೀಡಿದ ಅವರು, ರಮ್ಯಾ ಅಥವಾ ವಿಜಯಲಕ್ಷ್ಮಿ ಮಾತ್ರವಲ್ಲದೆ ಯಾವುದೇ ಮಹಿಳೆಯರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯವಾಗಿ ಕಮೆಂಟ್ ಮಾಡುವುದು ಅಥವಾ ಅವಹೇಳನ ಮಾಡುವುದು ಗಂಭೀರ ಅಪರಾಧ. ಇಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಮತ್ತು ಅವರಿಗೆ ಜೈಲು ಶಿಕ್ಷೆಯ ಜೊತೆಗೆ ದಂಡವನ್ನೂ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ.ವಿ.ಪ್ರಭಾಕರ್
ಬೆಂಗಳೂರು ಆ 19: ನೋಟಕ್ಕೆ ಹೃದಯವಂತಿಕೆಯ ಸ್ಪರ್ಷ ಸಿಕ್ಕಾಗ ಅದ್ಭುತ ಫೋಟೋ ಜರ್ನಲಿಸ್ಟ್ ಹುಟ್ಟುತ್ತಾನೆ. ಆತ ಆ ಕ್ಷಣದಲ್ಲಿ ತೆಗೆದ ಚಿತ್ರ ಚರಿತ್ರೆಯಾಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ಬೆಂಗಳೂರು ಫೋಟೋ ಜರ್ನಲಿಸ್ಟ್ ಸಂಘ ಆಯೋಜಿಸಿದ್ದ “ವಿಶ್ವ ಛಾಯಾಗ್ರಾಹಕ ದಿನ”ವನ್ನು ಉದ್ಘಾಟಿಸಿ ಮಾತನಾಡಿದರು.

ಮಗು ಮಾತಾಡುವುದಕ್ಕಿಂತ ಮೊದಲು ನೋಟದಿಂದಲೇ ಜಗತ್ತನ್ನು ಗ್ರಹಿಸುತ್ತದೆ. ನೋಟಕ್ಕೆ ಭಾಷೆಯ, ಪದಗಳ, ವಾಕ್ಯಗಳ ಹಂಗಿಲ್ಲ. ಪ್ರೀತಿ, ಪ್ರೇಮದ ಅಂಕುರ ಆಗೋದು ನೋಟದಿಂದಲೇ ಹೊರತು, ಮಾತಿನಿಂದಲ್ಲ. ಅದಕ್ಕೇ “Love at First Sight” ಎಂದು ಹೇಳೋದು. ಹೀಗಾಗಿ ಫೋಟೋ ಜರ್ನಲಿಸ್ಟ್ ಗಳಿಗೆ ನೋಟ, ಒಳನೋಟ ಬಹಳ ಮುಖ್ಯ ಎಂದರು.

ಫೋಟೋ ಜರ್ನಲಿಸ್ಟ್ ಗಳೇ ಸಂಘಟಿಸಿರುವ ಇವತ್ತಿನ ಕಾರ್ಯಕ್ರಮದಲ್ಲಿ ನನಗೆ ಕೆವಿನ್ ಕಾರ್ಟರ್ ಮತ್ತು ಸಂಗೊಳ್ಳಿಯ ಸಂಗವ್ವ ಇಬ್ಬರೂ “ಫೋಟೋ ಜರ್ನಲಿಸಂನ ದೃಶ್ಯ ಪಠ್ಯಗಳು” ಎಂದು ಹೇಳಲು ಇಚ್ಚಿಸುತ್ತೇನೆ.

ಆಫ್ರಿಕಾದ ಫೋಟೋ ಜರ್ನಲಿಸ್ಟ್ ತೆಗೆದ ಒಂದು ಫೋಟೋ ಇವತ್ತಿಗೂ ತೀವ್ರ ಚರ್ಚೆಯ ಸಂಗತಿಯಾಗಿಯೇ ಉಳಿದಿದೆ.

ಯುದ್ಧ ಸಂತ್ರಸ್ಥ ಸುಡಾನ್ ದೇಶದಲ್ಲಿ ತೆಗೆದ ಫೋಟೋ ಅದು. ಗಂಜಿ ಕೇಂದ್ರಕ್ಕೆ ತೆವಳುತ್ತಿದ್ದ ಒಂದು ಮಗು ಹಸಿವಿನಿಂದ ನೆಲಕ್ಕೇ ತಲೆಕೊಟ್ಟು ನಿತ್ರಾಣಗೊಂಡಿದೆ. ಅಲ್ಲೇ ಒಂದು ರಣಹದ್ದು ಮಗುವನ್ನೇ ತಿನ್ನಲು ಹೊಂಚು ಹಾಕಿ ಕುಳಿತಿದೆ. ಈ ಫೋಟೋಗೆ 1994 ರಲ್ಲಿ ವಿಶ್ವಶ್ರೇಷ್ಠ ಪುಲಿಟ್ಜರ್ ಪ್ರಶಸ್ತಿ ಬಂತು. ಆದರೆ ಪ್ರಶಸ್ತಿ ಪಡೆದ ಕೆವಿನ್ ಕಾರ್ಟರ್ ಮೂರು ತಿಂಗಳಲ್ಲಿ ಅಳುಕಿನಿಂದ ಆತ್ಮಹತ್ಯೆ ಮಾಡಿಕೊಂಡರು. ಇದು ಪತ್ರಿಕಾ ವೃತ್ತಿಯ ಚರಿತ್ರೆಯಲ್ಲಿ ಅಳಿಸಲಾಗದ ಒಂದು ಪಠ್ಯ.

ಕೆವಿನ್ ತೆಗೆದ ಒಂದು ಫೋಟೋ ಹುಟ್ಟಿಸಿದ ಪ್ರಶ್ನೆಗಳು ಆತನನ್ನು ಆತ್ಮಹತ್ಯೆಗೆ ದೂಡಿದರೆ, ಅದೊಂದು ಫೋಟೋದ ಮೇಲೆ ನೂರಾರು ಭಾಷೆಗಳಲ್ಲಿ ಕೋಟಿಗಟ್ಟಲೆ ಪದಗಳು, ವಾಕ್ಯಗಳಲ್ಲಿ ಚರ್ಚೆ ನಡೆಯಿತು. ಹೀಗಾಗಿ ನೋಟವೇ ಒಂದು ಭಾಷೆ. ಇದು ವಿಶ್ವ ಭಾಷೆಯಾಗಿದೆ ಎಂದು ಕೆ.ವಿ.ಪ್ರಭಾಕರ್ ವಿವರಿಸಿದರು.

ಹಾಗೆಯೇ ಒಂದೂ ಮಾತು, ಒಂದೇ ಒಂದು ಪದದ ಸಹವಾಸವಿಲ್ಲದೆ ಸಂಗೊಳ್ಳಿಯ ಸಂಗವ್ವ ವಿಶ್ವಕ್ಕೇ ಪರಿಚಯವಾದರು. ಸರ್ಕಾರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಘೋಷಿಸಿದಾಗ ಕುಹಕ, ಅಣಕ, ಟೀಕೆ, ವಿಮರ್ಷೆಗಳ ಮಹಾಪೂರವೇ ಹರಿಯುತ್ತಿತ್ತು. ಆದರೆ, ಉಚಿತ ಬಸ್ ಹತ್ತುವಾಗ ಬೆಳಗಾವಿ ಜಿಲ್ಲೆಯ ಸಂಗೊಳ್ಳಿಯ ಸಂಗವ್ವ ಸರ್ಕಾರಿ ಬಸ್ ನ ಮೆಟ್ಟಿಲುಗಳಿಗೆ ನಮಸ್ಕರಿಸಿದ ಒಂದು ಫೋಟೋ ಎಲ್ಲಾ ಕುಹಕ, ಅಣಕಗಳನ್ನು ಅಳಿಸಿಹಾಕಿತು. 24 ಗಂಟೆಯಲ್ಲಿ ಸಂಗವ್ವ ಸೋಷಿಯಲ್ ಮೀಡಿಯಾದ ಸೆನ್ಸೇಷನ್ ಆಗಿಬಿಟ್ಟರು.

ಹೀಗಾಗಿ ಕೆವಿನ್ ಕಾರ್ಟರ್ ಮತ್ತು ಸಂಗೊಳ್ಳಿಯ ಸಂಗವ್ವ ಫೋಟೋ ಜರ್ನಲಿಸಂನ ಎರಡು ಪಠ್ಯಗಳು ಎಂದು ನಾನು ಭಾವಿಸುತ್ತೇನೆ.

ವರದಿಗಳು, ಮಾತುಗಳು, ಪದಗಳು ಸುಳ್ಳು ಹೇಳಬಹುದು ಅಥವಾ ಸತ್ಯವನ್ನು ತಿರುಚಬಹುದು. ಆದರೆ, ಫೋಟೋಗಳು, ನೋಟಗಳು ಸುಳ್ಳು ಹೇಳುವುದಿಲ್ಲ. ನಾವು ಬರೆಯುವ ಸುದ್ದಿಗಳಿಗೆ ಸತ್ಯದ ಮೊಹರೆ ಒತ್ತುವುದು ಫೋಟೋಗಳು ಎಂದರು.‌

ಫೋಟೋಗ್ರಫಿ ಪತ್ರಿಕೋದ್ಯಮದ ಅವಿಭಾಜ್ಯ ಅಂಗ. ಫೋಟೋಗಳು ಘಟನೆಯ ನೈಜ ಚಿತ್ರಣವನ್ನು ಓದುಗರ ಗ್ರಹಿಕೆಗೆ ಒದಗಿಸುತ್ತವೆ.

ಆಧುನಿಕ ತಂತ್ರಜ್ಞಾನ ಫೋಟೋಗ್ರಫಿ ಹೆಚ್ಚಿನಮೌಲ್ಯತಂದುಕೊಟ್ಟಿದೆ. ಕೃತಕ‌ ಬುದ್ದಿಮತ್ತೆ ಒಂದು ಸವಾಲು ಮತ್ತು ಅವಕಾಶವೂ ಹೌದು. ಯಾವುದೇ ತಂತ್ರಜ್ಞಾನ ಬಂದರೂ ಅದಕ್ಕೆ ಸ್ವಂತ ಕಾಲ್ಪನಿಕ‌ ಶಕ್ತಿ ಇರುವುದಿಲ್ಲ. ಎಲ್ಲಿಯವರೆಗೂ ಫೋಟೋ ಜರ್ನಲಿಸ್ಟ್ ಗಳ ಕಲ್ಪನಾ ಸಾಮರ್ಥ್ಯ ಸೃಜನಶೀಲ ಮತ್ತು ಶ್ರೀಮಂತ ಹಾಗೂ ಸಹೃದಯತೆಯಿಂದ ಕೂಡಿರುತ್ತದೋ ಅಲ್ಲಿಯವರೆಗೂ ಯಾವ ತಂತ್ರಜ್ಞಾನವೂ ಅಪಾಯ ಒಡ್ಡುವುದಿಲ್ಲ ಎಂದು ವಿವರಿಸಿದರು.

ಸುಮಾರು 20 ವರ್ಷಗಳ ಹಿಂದೆ ಫೋಟೋಗ್ರಫಿ ಈಗಿನಷ್ಟು ಸರಾಗ ಮತ್ತು ಸುಲಭವಾಗಿರಲಿಲ್ಲ ಬಹಳ ಕಷ್ಟ ಪಡಬೇಕಾಗಿತ್ತು. ಆದರೆ ಬದಲಾದ ತಂತ್ರಜ್ಞಾನದಿಂದಾಗಿ ಫೋಟೋಗ್ರಫಿ ಅತ್ಯಂತ ಸುಲಭವಾಗಿದ್ದು, ಸೃಜನಶೀಲತೆ ರೂಪಿಸಿಕೊಂಡು ಫೋಟೋಗಳ ಮೂಲಕವೇ ಅರ್ಥಪೂರ್ಣ ಸ್ಟೋರಿಗಳನ್ನು ಸೃಷ್ಟಿಸುವ ಶಕ್ತಿ -ಸಾಮರ್ಥ್ಯ ರೂಡಿಸಿಕೊಂಡರೆ ಮಾತ್ರ ಈಗಿನ ಸ್ಪರ್ಧಾಜಗತ್ತಿನಲ್ಲಿ ಉಳಿಯಲು ಸಾಧ್ಯ ಎಂದರು.

ಇವತ್ತಿಗೂ ಗ್ರಾಮೀಣ ಮತ್ತು ತಾಲ್ಲೂಕು ಮಟ್ಟದಲ್ಲಿ ಸುದ್ದಿ ಬರೆಯುವ ವರದಿಗಾರರಿಗಿಂತ ಫೋಟೋಗ್ರಾಫರ್ ಗಳಿಗೇ ಹೆಚ್ಚು ಬೇಡಿಕೆ ಇದೆ. ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯ ಒಂದು ಫೋಟೋ ಬಂದರೆ ಸಾಕು ಎಂದು ರಾಜಕಾರಣಿಗಳು ಕಾತರಿಸುತ್ತಾರೆ. ಯಾವುದೇ ಭಾಷೆಯವರಿಗಾದರೂ, ಅನಕ್ಷರಸ್ಥರಿಗೂ ಕೂಡ ಫೋಟೋ ಮೂಲಕ ಸಂವಹನ ನಡೆಸಬಹುದಾದ ಸಾಧ್ಯತೆಯೇ ಫೋಟೋ ಜರ್ನಲಿಸ್ಟ್ ಗಳ ಮಹತ್ವವನ್ನು ಹೇಳುತ್ತದೆ.

ಒಂದು ವರದಿಯನ್ನು ಸಂಪಾದಕರು ತೆಗೆದು ಪಕ್ಕಕ್ಕಿಡಬಹುದು. ಆದರೆ ಉತ್ತಮವಾದ ಒಂದು ಫೋಟೋವನ್ನು ಯಾರೂ ಪಕ್ಕಕ್ಕಿಡುವುದಿಲ್ಲ. ಆದ್ದರಿಂದ ಪತ್ರಿಕೆಗಳಲ್ಲಿ ಲಭ್ಯವಿರುವ ಸ್ಪೇಸ್ ಅನ್ನು ಸಮರ್ಥವಾಗಿ ಸದುಪಯೋಗಪಡಿಸಿಕೊಳ್ಳಿ ಎಂದು ಕೆವಿಪಿ ಕರೆ ನೀಡಿದರು.

ಡೆಕ್ಕನ್ ಹರಾಲ್ಡ್ ಸಂಸ್ಥೆಯ ಮುಖ್ಯಸ್ಥರಾದ ಕೆ.ಎನ್.ಶಾಂತಕುಮಾರ್, ಮಾಧ್ಯಮ ಅಕಾಡೆಮಿ‌ ಅಧ್ಯಕ್ಷೆ ಆಯೆಷಾ ಖಾನುಂ, ಹಿರಿಯ ಫೋಟೋ ಜರ್ನಲಿಸ್ಟ್ ಭಾಗ್ಯಪ್ರಕಾಶ್, ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ಅಧ್ಯಕ್ಷರಾದ ಮೋಹನ್, ಹಿರಿಯ ಪತ್ರಕರ್ತ ಸದಾಶಿವ ಶೆಣೈ ಅವರು ಉಪಸ್ಥಿತರಿದ್ದರು.

ನಮ್ಮ ಕೆಲಸ ನಾವು ಮಾಡುತ್ತೇವೆ! ಎಸ್‌ಐಆರ್ ಪ್ರಕ್ರಿಯೆಯನ್ನು ಸಮರ್ಥಿಸಿಕೊಂಡ ಸಿಇಸಿ ಜ್ಞಾನೇಶ್ ಕುಮಾರ್
ಭಾರತದ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ಬಿಹಾರದಲ್ಲಿ ಜಾರಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಸಮರ್ಥಿಸಿಕೊಂಡಿದ್ದಾರೆ.

ನಾವು ಯಾರಿಗೂ ಹೆದರುವುದಿಲ್ಲ, ನಮ್ಮ ಕೆಲಸವನ್ನು ನಾವು ಮಾಡುತ್ತೇವೆ ಎಂದು ಅವರು ಹೇಳಿದರು. ಬಿಜೆಪಿ ಜೊತೆ ಸೇರಿಕೊಂಡು, ಮತದಾರರ ಪಟ್ಟಿಯಲ್ಲಿ ಅಕ್ರಮಗಳನ್ನು ಮಾಡುವ ಮೂಲಕ ಮತಗಳನ್ನು ಕದ್ದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಮಾಡಿದ ಟೀಕೆಗಳು ಸಂಚಲನ ಮೂಡಿಸಿದ್ದವು.

ಇದೇ ವಿಷಯದ ಬಗ್ಗೆ ಅವರು ಬಿಹಾರದಲ್ಲಿ ವಿಶೇಷ ಯಾತ್ರೆಯನ್ನು ಆರಂಭಿಸಿದ ದಿನವೇ ಸಿಇಸಿ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ನವದೆಹಲಿಯಲ್ಲಿರುವ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ (ಎನ್‌ಎಂಸಿ) ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ, ಚುನಾವಣಾ ಆಯುಕ್ತರಾದ ವಿವೇಕ್ ಜೋಶಿ, ಸುಖಬೀರ್ ಸಿಂಗ್ ಸಂಧು, ಹಿರಿಯ ಉಪಚುನಾವಣಾ ಆಯುಕ್ತ ಮನೀಷ್ ಗರ್ಗ್, ಉಪಚುನಾವಣಾ ಆಯುಕ್ತ ಸಂಜಯ್ ಕುಮಾರ್, ಮಹಾನಿರ್ದೇಶಕ ಆಶಿಶ್ ಗೋಯಲ್, ಉಪಮಹಾನಿರ್ದೇಶಕ ವಿಜಯ್ ಕುಮಾರ್ ಪಾಂಡೆ ಅವರೊಂದಿಗೆ ಜ್ಞಾನೇಶ್ ಕುಮಾರ್ ಮಾತನಾಡಿದರು.

ಚುನಾವಣಾ ಆಯೋಗದ ವಿರುದ್ಧ ಮಾಡಲಾದ ಆರೋಪಗಳು ರಾಜಕೀಯ ಪ್ರೇರಿತ ಎಂದು ಹೇಳಿದ ಅವರು, ಅಪವಾದಗಳನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ರಾಜಕೀಯ ಪ್ರತೀಕಾರಕ್ಕೆ ನಾವು ತಲೆಬಾಗುವುದಿಲ್ಲ, ಕೇವಲ ಸಂವಿಧಾನಕ್ಕೆ ಮಾತ್ರ ಚುನಾವಣಾ ಆಯೋಗ ತಲೆಬಾಗಲಿದೆ ಎಂದು ಅವರು ಹೇಳಿದರು.

ವಿರೋಧ ಪಕ್ಷ ಅಧಿಕಾರಕ್ಕೆ ಬಂದರೂ, ಅವರೂ ಎಂದಿನಂತೆ ನಮ್ಮನ್ನು ಗೌರವಿಸುತ್ತಾರೆ ಎಂದು ಅವರು ಅಭಿಪ್ರಾಯಪಟ್ಟರು. ಚುನಾವಣಾ ಆಯೋಗವನ್ನು ಗುರಿಯಾಗಿಟ್ಟುಕೊಂಡು ರಾಜಕೀಯ ಮಾಡುವುದು ಸರಿಯಲ್ಲ ಎಂದರು. ಸಂವಿಧಾನದ ಪ್ರಕಾರ ಚುನಾವಣಾ ಆಯೋಗದಲ್ಲಿ ನೋಂದಾಯಿಸಿದ ನಂತರವೇ ಯಾವುದೇ ಪಕ್ಷ ನಮಗೆ ಸಮಾನ ಎಂದು ಹೇಳಿದರು.

ಬಿಹಾರದ ಎಸ್‌ಐಆರ್ ಬಗ್ಗೆ ಮಾಡಲಾದ ಎಲ್ಲಾ ಆರೋಪಗಳನ್ನು ಜ್ಞಾನೇಶ್ ಕುಮಾರ್ ಅಲ್ಲಗಳೆದರು. ಸಾಕ್ಷ್ಯಗಳಿಲ್ಲದೆ ಆರೋಪ ಮಾಡುವುದು ಸರಿಯಲ್ಲ ಎಂದರು. ಇಂತಹ ಸುಳ್ಳು ಆರೋಪಗಳಿಗೆ ಚುನಾವಣಾ ಆಯೋಗ ಅಥವಾ ಮತದಾರರು ಹೆದರುವುದಿಲ್ಲ ಎಂದು ಹೇಳಿದರು. ಮತದಾರರ ಪಟ್ಟಿಯ ಬಗ್ಗೆ 28,370 ಜನರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

ಬಿಹಾರದ ಕರಡು ಮತದಾರರ ಪಟ್ಟಿಯ ತಿದ್ದುಪಡಿಗೆ ಕೇವಲ 15 ದಿನಗಳು ಮಾತ್ರ ಬಾಕಿ ಉಳಿದಿದೆ ಎಂದು ಜ್ಞಾನೇಶ್ ಹೇಳಿದರು. ಈ ಕರಡು ಪಟ್ಟಿಯ ಬಗ್ಗೆ ಯಾವುದೇ ರಾಜಕೀಯ ಪಕ್ಷಕ್ಕೆ ಯಾವುದೇ ಅನುಮಾನಗಳಿದ್ದರೆ ನಮ್ಮನ್ನು ಸಂಪರ್ಕಿಸಬಹುದು ಎಂದು ಹೇಳಿದರು.

ಕೆಲವರು ಇತ್ತೀಚೆಗೆ ನಡೆದ ಚುನಾವಣೆಗಳಿಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಲು ಹೇಳುತ್ತಿದ್ದಾರೆ, ಆದರೆ ವೈಯಕ್ತಿಕ ಗೌಪ್ಯತೆಗೆ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ನಾವು ಹಾಗೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಸಿಇಸಿ ಹೇಳಿದರು.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಡಿರುವ ‘ಮತ ಕಳ್ಳತನ’ ಆರೋಪಗಳ ಬಗ್ಗೆ ಏಳು ದಿನಗಳಲ್ಲಿ ಅಫಿಡವಿಟ್ ಸಲ್ಲಿಸಬೇಕು ಅಥವಾ ಕ್ಷಮೆಯಾಚಿಸಬೇಕು ಎಂದು ಸಿಇಸಿ ಹೇಳಿದರು. ಸಾಕ್ಷ್ಯಗಳಿಲ್ಲದೆ ಆರೋಪಗಳನ್ನು ಮಾಡಿದರೆ ಆ ಆರೋಪಗಳಲ್ಲಿ ಸತ್ಯವಿಲ್ಲ ಎಂದು ತಿಳಿಸಿದರು.

ಪಶ್ಚಿಮ ಬಂಗಾಳ ಮತ್ತು ಇತರ ರಾಜ್ಯಗಳಲ್ಲಿ ಎಸ್‌ಐಆರ್ ಅನ್ನು ಯಾವಾಗ ನಡೆಸಬೇಕು ಎಂಬುದನ್ನು ಚುನಾವಣಾ ಆಯೋಗ ನಿರ್ಧರಿಸುತ್ತದೆ ಮತ್ತು ಸೂಕ್ತ ಸಮಯದಲ್ಲಿ ನಿರ್ಧಾರವನ್ನು ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು. ಚುನಾವಣೆಗೆ ಮೊದಲು ಮತದಾರರ ಪಟ್ಟಿಯನ್ನು ಪರಿಷ್ಕರಿಸುವುದು ಚುನಾವಣಾ ಆಯೋಗದ ಜವಾಬ್ದಾರಿ ಎಂದು ಒಂದು ಪ್ರಶ್ನೆಗೆ ಜ್ಞಾನೇಶ್ ಕುಮಾರ್ ಉತ್ತರಿಸಿದರು.

ಇತ್ತ ರಾಹುಲ್ ಗಾಂಧಿ ಬಿಹಾರದಲ್ಲಿ ಆರಂಭಿಸಿದ ‘ಮತದಾರರ ಅಧಿಕಾರ ಯಾತ್ರೆ’ಯಲ್ಲಿ ಮತ್ತೆ ಇಸಿ ವಿರುದ್ಧ ವಾಗ್ದಾಳಿ ನಡೆಸಿದರು. ಕೇವಲ ನನ್ನನ್ನು ಮಾತ್ರ ಅಫಿಡವಿಟ್ ಸಲ್ಲಿಸುವಂತೆ ಇಸಿ ಒತ್ತಾಯಿಸುತ್ತಿದೆ, ಆದರೆ ಬಿಜೆಪಿ ನಾಯಕರು ಕೆಲವು ದಿನಗಳ ಹಿಂದೆ ಪತ್ರಿಕಾಗೋಷ್ಠಿ ನಡೆಸಿದಾಗ ಅವರನ್ನು ಏಕೆ ಅಫಿಡವಿಟ್ ಕೇಳಲಿಲ್ಲ ಎಂದು ಪ್ರಶ್ನಿಸಿದರು.

ದಕ್ಷಿಣ ಕನ್ನಡ | ಲಂಚ ಪಡೆಯುತ್ತಿದ್ದ ಆರೋಪ: ಉಪ ತಹಶೀಲ್ದಾರ್ ಸೇರಿ ಮೂವರ ಬಂಧನ
ಮಂಗಳೂರು: ಲಂಚ ಸ್ವೀಕರಿಸಿದ ಆರೋಪದ ಮೇಲೆ ಬಂಟ್ವಾಳದ ಉಪ ತಹಶೀಲ್ದಾರ್ ರಾಜೇಶ್ ನಾಯಕ್, ಕೇಸ್ ವರ್ಕರ್ ಸಂತೋಷ್ ಮತ್ತು ಮಧ್ಯವರ್ತಿ ಗಣೇಶ್ ವಾಮದಪದವು ಅವರನ್ನು ಮಂಗಳೂರು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಮಧ್ಯವರ್ತಿಯ ಮೂಲಕ 20,000 ರೂಪಾಯಿ ಲಂಚ ಸ್ವೀಕರಿಸುವಾಗ ಉಪ ತಹಶೀಲ್ದಾರ್ ರೆಡ್ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ.

ಸಂತ್ರಸ್ತರ ದೂರಿನ ಪ್ರಕಾರ, 2021ರಲ್ಲಿ ದೂರುದಾರರು ತಮ್ಮ ತಾಯಿಯ ಪೌತಿ ಖಾತೆಗಾಗಿ ಬಂಟ್ವಾಳ ತಾಲೂಕು ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಕಾನೂನು ವಿವಾದದ ನಂತರ, ಉಪ ಆಯುಕ್ತರ ನ್ಯಾಯಾಲಯವು ಭೂ ಮಂಜೂರಾತಿ ಆದೇಶವನ್ನು ಎತ್ತಿಹಿಡಿದು, ಸಜೀಪ ಮುನ್ನೂರು ಗ್ರಾಮದ ಸರ್ವೆ ನಂ 102/1ರಲ್ಲಿ ಪೌತಿ ಖಾತಾ ಮಾಡಿಕೊಡುವಂತೆ ಸಹಾಯಕ ಆಯುಕ್ತರ ನ್ಯಾಯಾಲಯಕ್ಕೆ ಸೂಚಿಸಿತು. ಸಹಾಯಕ ಆಯುಕ್ತರು ಬಂಟ್ವಾಳ ತಹಶೀಲ್ದಾರ್‌ಗೆ ಈ ಆದೇಶವನ್ನು ಜಾರಿಗೆ ತರುವಂತೆ ನಿರ್ದೇಶಿಸಿದರು.

ಆದರೆ, ಕಡತವು ಏಪ್ರಿಲ್ 2025ರಿಂದ ಬಂಟ್ವಾಳ ತಹಶೀಲ್ದಾರ್ ಕಚೇರಿಯಲ್ಲಿ ಬಾಕಿ ಉಳಿದಿತ್ತು. ದೂರುದಾರರು ಕೇಸ್ ವರ್ಕರ್ ಸಂತೋಷ್ ಅವರನ್ನು ಸಂಪರ್ಕಿಸಿದಾಗ, ದಾಖಲೆಗಳನ್ನು ಪ್ರಕ್ರಿಯೆಗೊಳಿಸಲು 1,500 ರೂಪಾಯಿ ಲಂಚ ಕೇಳಿದ್ದಾರೆ. ಉಪ ತಹಶೀಲ್ದಾರ್ ರಾಜೇಶ್ ನಾಯಕ್ ಪೌತಿ ಖಾತಾ ಪ್ರವೇಶಕ್ಕೆ ಅನುಮೋದನೆ ನೀಡಲು 20,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

ದೂರುದಾರರು ಮಂಗಳೂರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ, ಬುಧವಾರದಂದು ಲೋಕಾಯುಕ್ತ ತಂಡವು ಕಾರ್ಯಾಚರಣೆ ನಡೆಸಿ, ಮಧ್ಯವರ್ತಿ ಗಣೇಶ್ ಮೂಲಕ 20,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ರಾಜೇಶ್ ನಾಯಕ್ ಅವರನ್ನು ಬಂಧಿಸಿದೆ.

ಬಂಧಿತರಾದ ಮೂವರನ್ನು ವಿಚಾರಣೆ ನಡೆಸಲಾಗುತ್ತಿದೆ, ಮತ್ತು ಈ ಪ್ರಕರಣದಲ್ಲಿ ಬಂಟ್ವಾಳ ತಹಶೀಲ್ದಾರ್ ಪಾತ್ರದ ಬಗ್ಗೆ ತನಿಖೆ ನಡೆಯುತ್ತಿದೆ.

ಕರ್ನಾಟಕ ಲೋಕಾಯುಕ್ತ, ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕ (ಪ್ರಭಾರ) ಕುಮಾರಚಂದ್ರ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಡಿವೈಎಸ್‌ಪಿ ಡಾ. ಗಣ ಪ ಕುಮಾರ್, ಡಿವೈಎಸ್‌ಪಿ ಸುರೇಶ್ ಕುಮಾರ್ ಪಿ, ಇನ್ಸ್‌ಪೆಕ್ಟರ್‌ಗಳಾದ ಭಾರತಿ ಜಿ ಮತ್ತು ಚಂದ್ರಶೇಖರ್ ಕೆ ಎನ್, ಹಾಗೂ ಇತರ ಲೋಕಾಯುಕ್ತ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಉಪ ತಹಶೀಲ್ದಾರ್ ಸೇರಿ ಮೂವರನ್ನು ಲೋಕಾಯುಕ್ತರು ಬಂಧಿಸಿದ್ದಾರೆ.

ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್
ದೆಹಲಿ: ಒಲಿಂಪಿಕ್ ಪದಕ ವಿಜೇತ, ರೆಸ್ಲರ್ ಸುಶೀಲ್ ಕುಮಾರ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ದೆಹಲಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ ನಡೆದ ಹತ್ಯೆ ಪ್ರಕರಣದಲ್ಲಿ ಸುಶೀಲ್ ಕುಮಾರ್ ಜೈಲುಶಿಕ್ಷೆ ಎದುರಿಸುತ್ತಿದ್ದಾರೆ.

ಮಾಜಿ ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನ್ಕರ್ ಹತ್ಯೆ ಪ್ರಕರಣದಲ್ಲಿ ಸುಶೀಲ್ ಕುಮಾರ್ ವಿರುದ್ಧ ಆರೋಪಗಳಿವೆ. ಮಾರ್ಚ್ 4 ರಂದು ದೆಹಲಿ ಹೈಕೋರ್ಟ್ ಸುಶೀಲ್‌ಗೆ ಜಾಮೀನು ನೀಡಿತ್ತು. ಆದರೆ, ನ್ಯಾಯಮೂರ್ತಿ ಸಂಜಯ್ ಕರೋಲ್ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರ ಸುಪ್ರೀಂ ಕೋರ್ಟ್ ಪೀಠ ಆ ಜಾಮೀನನ್ನು ರದ್ದುಪಡಿಸಿದೆ.

ಒಂದು ವಾರದೊಳಗೆ ಸುಶೀಲ್ ಶರಣಾಗಬೇಕು ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ. ಆಸ್ತಿಯೊಂದರ ವಿಚಾರವಾಗಿ ರೆಸ್ಲರ್‌ಗಳ ನಡುವೆ ವಿವಾದ ಉಂಟಾಗಿತ್ತು. ಮೇ 2021 ರಲ್ಲಿ ಸುಶೀಲ್ ಕುಮಾರ್ ಮತ್ತು ಇತರರು ಧನ್ಕರ್ ಮೇಲೆ ಹಲ್ಲೆ ಮಾಡಿದ್ದರು. ಆ ಘಟನೆಯಲ್ಲಿ ಧನ್ಕರ್ ಅವರ ಇಬ್ಬರು ಸ್ನೇಹಿತರೂ ಗಾಯಗೊಂಡಿದ್ದರು. ಮರಣೋತ್ತರ ವರದಿಯ ಪ್ರಕಾರ, ಧನ್ಕರ್ ಅವರ ತಲೆಗೆ ತೀವ್ರ ಗಾಯಗಳಾಗಿದ್ದವು.

ಸಚಿವ ರಾಜಣ್ಣ ವಜಾ | ಇದು ದಲಿತರಿಗೆ ಮಾಡಿದ ಅವಮಾನ: ನಿಖಿಲ್‌ ಕುಮಾರಸ್ವಾಮಿ
ದಾವಣಗೆರೆ: ಸಹಕಾರ ಸಚಿವರಾಗಿದ್ದ ಕೆ.ಎನ್‌. ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವ ಮೂಲಕ ಕಾಂಗ್ರೆಸ್‌ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಅಗೌರವ ತೋರಿದೆ ಎಂದು ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಸಾಮಾಜಿಕ ನ್ಯಾಯ ಒದಗಿಸುವುದಾಗಿ ಹೇಳುವ ಕಾಂಗ್ರೆಸ್, ಅದೇ ಸಮುದಾಯದ ನಾಯಕರನ್ನು ನಡೆಸಿಕೊಳ್ಳುತ್ತಿರುವ ರೀತಿ ಸರಿಯಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು. ರಾಜಣ್ಣ ಅವರಂತಹ ಹಿರಿಯ ನಾಯಕರಿಂದ ಗೌರವಯುತವಾಗಿ ರಾಜೀನಾಮೆ ಪಡೆಯುವ ಅವಕಾಶ ಕಾಂಗ್ರೆಸ್‌ಗೆ ಇತ್ತು, ಆದರೆ ಏಕಾಏಕಿ ಅವರನ್ನು ಸಂಪುಟದಿಂದ ಕಿತ್ತುಹಾಕಿ ಮುಜುಗರಕ್ಕೀಡು ಮಾಡಿದೆ ಎಂದು ಅವರು ಟೀಕಿಸಿದರು.

‘ಆಂತರಿಕ ಪ್ರಜಾಪ್ರಭುತ್ವವಿಲ್ಲ’

“ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸ್‌ನಲ್ಲಿ ಆಂತರಿಕ ಪ್ರಜಾಪ್ರಭುತ್ವವೇ ಇಲ್ಲ. ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಚಿವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಆದರೆ, ಸತ್ಯವನ್ನು ನುಡಿದ ರಾಜಣ್ಣ ಅವರನ್ನು ಬಲಿಪಶು ಮಾಡಲಾಗಿದೆ. ಮತ ಕಳ್ಳತನದ ಬಗ್ಗೆ ರಾಜಣ್ಣ ನೀಡಿದ ಹೇಳಿಕೆಯಲ್ಲಿ ತಪ್ಪೇನಿದೆ?” ಎಂದು ನಿಖಿಲ್ ಪ್ರಶ್ನಿಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಮೈತ್ರಿ ಮುಂದುವರಿಕೆ

ಇದೇ ವೇಳೆ, ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ನಿಖಿಲ್‌, “ಸ್ಥಳೀಯ ಸಂಸ್ಥೆಗಳು ಸೇರಿದಂತೆ ಎಲ್ಲ ಚುನಾವಣೆಗಳಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಮುಂದುವರಿಯಲಿದೆ” ಎಂದು ಸ್ಪಷ್ಟಪಡಿಸಿದರು. ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಸಮನ್ವಯ ಸಮಿತಿ ರಚಿಸುವ ಪ್ರಸ್ತಾವನೆಗೆ ಬಿಜೆಪಿ ಸಕಾರಾತ್ಮಕವಾಗಿ ಸ್ಪಂದಿಸಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರನ್ನು ಸಿದ್ಧಪಡಿಸುವ ಪ್ರಕ್ರಿಯೆ ಆರಂಭವಾಗಿದೆ ಎಂದರು.

“ವಿಧಾನಸಭಾ ಚುನಾವಣೆಗೂ ಮುನ್ನ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳು ನಡೆಯಲಿವೆ. ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯಕರ್ತರಿಗೆ ಅಧಿಕಾರ ಸಿಕ್ಕರೆ ವಿಧಾನಸಭಾ ಚುನಾವಣೆ ಸುಲಭವಾಗಲಿದೆ. ಪಕ್ಷ ಸಂಘಟನೆಗೆ ಒತ್ತು ನೀಡಲು ಮತ್ತು ಕಾರ್ಯಕರ್ತರನ್ನು ಚುನಾವಣೆಗೆ ಸಜ್ಜುಗೊಳಿಸಲು ರಾಜ್ಯದಲ್ಲಿ ಎರಡು ಸಮಾವೇಶಗಳನ್ನು ನಡೆಸಲು ತೀರ್ಮಾನಿಸಲಾಗಿದೆ” ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.