Jagadeesh shettar – Peepal Media

ಪ್ರಹ್ಲಾದ್ ಜೋಷಿ ವಿರುದ್ಧ ಸಿಡಿದೆದ್ದ ಲಿಂಗಾಯತ ಮಠಾಧೀಶರು ; ಟಿಕೆಟ್ ಬದಲಿಸಲು ಬಿಜೆಪಿಗೆ ಗಡುವು
ರಾಜಕೀಯವನ್ನು ತಿಳಿದು ಮಾಡಬೇಕೇ ಹೊರತು ತುಳಿದು ಮಾಡಬಾರದು. ಬಿಜೆಪಿ ಸಂಸದ ಪ್ರಹ್ಲಾದ್ ಜೋಷಿ ಇತರೆ ಸಮುದಾಯಗಳನ್ನು ತುಳಿದು ರಾಜಕೀಯ ಮಾಡುತ್ತಿದ್ದಾರೆ. ಧಾರವಾಡ ಲೋಕಸಭಾ ಮತಕ್ಷೇತ್ರದಿಂದ ಅವರಿಗೆ ನೀಡಿರುವ ಟಿಕೆಟ್‌ನ್ನು ಬಿಜೆಪಿ ವರಿಷ್ಠರು ಮಾ. 31ರೊಳಗೆ ಬದಲಾಯಿಸಬೇಕು. ಇಲ್ಲದಿದ್ದಲ್ಲಿ ಏ. 2ರಂದು ನಮ್ಮ ನಿರ್ಧಾರ ಪ್ರಕಟಿಸಬೇಕಾಗುತ್ತದೆ ಎಂದು ರಾಜ್ಯದ 40 ಮಠಾಧೀಶರ ಸಮೂಹ ಬಿಜೆಪಿ ವರಿಷ್ಠರಿಗೆ ಸಂದೇಶ ರವಾನಿಸಿದ್ದಾರೆ.

ಮೂರುಸಾವಿರಮಠದ ಆವರಣದಲ್ಲಿ ವಿವಿಧ ಮಠಾಧೀಶರೊಂದಿಗೆ ಚಿಂತನ ಮಂಥನ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಈ ಕುರಿತು ಮಾತನಾಡಿದರು. ಚಿಂತನ ಮಂಥನ ಸಭೆಯಲ್ಲಿ ಬರೋಬ್ಬರಿ ವಿವಿಧ ಜಿಲ್ಲೆಗಳ 40ಕ್ಕೂ ಹೆಚ್ಚು ವಿವಿಧ ಮಠಾಧೀಶರು ಪಾಲ್ಗೊಂಡಿದ್ದರು.

ಜೋಶಿ ಅವರಿಗೆ ಅಧಿಕಾರ ಮತ್ತು ಸಂಪತ್ತಿನ ಮದವೇರಿದೆ, ಲಿಂಗಾಯತ, ಕುರುಬ ಸೇರಿದಂತೆ ಎಲ್ಲ ಸಮುದಾಯವನ್ನು ತುಳಿದಿದ್ದಾರೆ. ಸ್ವಾಮೀಜಿಗಳನ್ನು ಅವಮಾನಿಸಿದ್ದಾರೆ. ನಮ್ಮ ವಿರೋಧ ಅವರ ವ್ಯಕ್ತಿತ್ವಕ್ಕೆ ಹೊರತು ಪಕ್ಷ ಅಥವಾ ಸಮಾಜಕ್ಕೆ ಅಲ್ಲ. ಶ್ರೀಮಠದಲ್ಲಿ ನಡೆದ ಚಿಂಥನ ಮಂತನ ಸಭೆಯಲ್ಲಿ ಮಠಾಧಿಪತಿಗಳು ಸೇರಿ ಈ ನಿರ್ಣಯ ಕೈಗೊಳ್ಳಲಾಗಿದೆ. ಬಿಜೆಪಿ ಹೈಕಮಾಂಡ್‌ ಪ್ರಹ್ಲಾದ ಜೋಶಿ ಅವರನ್ನು ಮಾ. 31ರೊಳಗೆ ಬದಲಿಸಿ ಬೇರೊಬ್ಬರಿಗೆ ಟಿಕೆಟ್‌ ಘೋಷಿಸಬೇಕು. ಇಲ್ಲದಿದ್ದಲ್ಲಿ ಏ. 2ರಂದು ಮತ್ತೊಮ್ಮೆ ಲಿಂಗಾಯತ ಸ್ವಾಮೀಜಿಗಳ ಸಭೆ ಕರೆದು ನಮ್ಮ ಮುಂದಿನ ನಡೆ ಏನು ಎಂಬುದನ್ನು ಸ್ಪಷ್ಟಪಡಿಸಬೇಕಾಗುತ್ತದೆ ಎಂದು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಸ್ಥಳೀಯರೇ ಆದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಈ ಬಾರಿ ಹುಬ್ಬಳ್ಳಿ ಧಾರವಾಡ ಲೋಕಸಭಾ ಟಿಕೆಟ್ ಗೆ ಲಿಂಗಾಯತ ಮಠಾಧೀಶರು ಪ್ರಯತ್ನಿಸಿದ್ದರು. ಆದರೆ ಅವರಿಗೆ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲೂ ಅಸಮಾಧಾನ ಹೊರ ಹಾಕಿದ ಮಠಾಧೀಶರು ‘ಮಾಜಿ ಮುಖ್ಯಮಂತ್ರಿಗಳಿಗೆ ಬೇರೆ ಕ್ಷೇತ್ರ ನೀಡಿದಂತೆ, ಕಳೆದ 4 ಚುನಾವಣೆಯಲ್ಲಿ ಲಿಂಗಾಯತರೆಲ್ಲರೂ ಜೋಶಿ ಅವರ ಬೆನ್ನಿಗೆ ನಿಂತು ಗೆಲ್ಲಿಸಿ ಕೇಂದ್ರ ಸಚಿವರನ್ನಾಗಿ ಮಾಡಿದ್ದಾರೆ. ಆ ಉಪಕಾರಕ್ಕೆ ಜೋಶಿ ಈ ಬಾರಿ ಕ್ಷೇತ್ರ ತ್ಯಾಗ ಮಾಡಲಿ. ಲಿಂಗಾಯತ ಕ್ಷೇತ್ರದಲ್ಲಿ ಬ್ರಾಹ್ಮಣರು ಅನಿವಾರ್ಯವೇ?. ಆದರೆ ಬ್ರಾಹ್ಮಣರ ಪ್ರಾಬಲ್ಯ ಇರುವ ಕ್ಷೇತ್ರದಲ್ಲಿ ಲಿಂಗಾಯತರನ್ನು ಚುನಾವಣೆಯಲ್ಲಿ ನಿಲ್ಲಿಸಿ ಆರಿಸಿ ತರಲಿ ಎಂದು ಸವಾಲು ಹಾಕಿದರು.

ಮಾಜಿ ಮುಖ್ಯಮಂತ್ರಿಯೊಬ್ಬರು ಮರಳಿ ಪಕ್ಷಕ್ಕೆ ಹೋದಾಗ ಶುಭಾಶಯ ಹೇಳಲು ಮನಸ್ಸಿದ್ದರೂ ಹಿಂಬಾಲಕರು ಇವರ ಭಯಕ್ಕೆ ಯಾರೂ ಹೋಗುತ್ತಿಲ್ಲ. ಐಟಿ, ಇಡಿ ಸಂಸ್ಥೆಗಳ ಮೇಲೆ ಇನ್ನಿಲ್ಲದ ಪ್ರಭಾವ ಬೀರಿ ಎಲ್ಲೆಡೆ ಭಯ ಸೃಷ್ಟಿಸಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಮೂಲಕ ಪಕ್ಷದ ಒಳಗೂ ಸಹ ನಾಯಕರಲ್ಲಿ ಅಷ್ಟೊಂದು ಭಯ ಸೃಷ್ಟಿಸಿದ್ದಾರೆ. ಇದು ಪಕ್ಷ ಸಂಘಟಿಸುವ ಮಾರ್ಗ ಅಲ್ಲ ಎಂದು ಪ್ರಹ್ಲಾದ್ ಜೋಶಿ ವಿರುದ್ಧ ಮಠಾಧೀಶರು ಕಿಡಿಕಾರಿದ್ದಾರೆ.

ಬೆಳಗಾವಿ ಬಿಜೆಪಿಯಲ್ಲಿ ಬಿನ್ನಮತ ಭುಗಿಲು ; ಶೆಟ್ಟರ್ ಸ್ಪರ್ಧೆಗೆ ತೀವ್ರ ವಿರೋಧ
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಮಾಡಿದ್ದು, ಸ್ಥಳೀಯ ಬಿಜೆಪಿಗೆ ತೀವ್ರ ಇರಿಸುಮುರಿಸು ಉಂಟುಮಾಡಿದೆ. ಸ್ಥಳೀಯರು ಅಲ್ಲದ ಅಭ್ಯರ್ಥಿ ಎಂಬುದು ಒಂದುಕಡೆಯಾದರೆ, ಕಾಂಗ್ರೆಸ್ ನಿಂದ ವಲಸೆ ಬಂದವರು ಎಂಬುದು ಇನ್ನೊಂದು ಕಡೆ. ಇದರ ಜೊತೆಗೆ ಈಗಾಗಲೇ ಇದ್ದ ಆಕಾಂಕ್ಷಿಗಳ ಬೆಂಬಲಿಗರೂ ಸಹ ಶೆಟ್ಟರ್ ಆಯ್ಕೆಯನ್ನು ವಿರೋಧಿಸಿದ್ದಾರೆ.

ಜಗದೀಶ್ ಶೆಟ್ಟರ್ ಬದಲಿಗೆ ಸ್ಥಳೀಯರಿಗೆ ಟಿಕೆಟ್ ಕೊಡಬೇಕು ಎಂದು ಬೆಳಗಾವಿ ಬಿಜೆಪಿ ನಾಯಕರು ಆಗ್ರಹಿಸಿದ್ದು ಈ ವಿಚಾರವಾಗಿ ರಾಜ್ಯ ನಾಯಕರನ್ನು ಭೇಟಿಯಾಗಿ ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಒಂದು ವೇಳೆ ರಾಜ್ಯ ನಾಯಕರ ಭೇಟಿ ಫಲ ಕೊಡದಿದ್ದರೆ, ದೆಹಲಿಗೆ ತೆರಳಿ ಹೈಕಮಾಂಡ್ ಅನ್ನು ಕೂಡ ಭೇಟಿಯಾಗುವ ಬಗ್ಗೆ ಸ್ಥಳೀಯ ನಾಯಕರು ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಬೆಂಗಳೂರು ತಲುಪಿರುವ ಬೆಳಗಾವಿ ಬಿಜೆಪಿ ನಾಯಕರು ಅಭ್ಯರ್ಥಿಯ ಆಯ್ಕೆ ಬದಲಾವಣೆಗೆ ಪಟ್ಟು ಹಿಡಿದು ಇಂದು ಬೆಂಗಳೂರು ತಲುಪಿದ್ದಾರೆ. ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸರವಾಲ್, ಸಂಘಟನಾ ಕಾರ್ಯದರ್ಶಿ ರಾಜೇಶ್ ಭೇಟಿಗೆ ಸಮಯ ಕೋರಿದ್ದಾರೆ. ಈ ನಾಯಕರನ್ನು ಭೇಟಿಯಾಗಲಿರುವ ಬೆಳಗಾವಿ ಮುಖಂಡರು ಶೆಟ್ಟರ್ ಬದಲು ಸ್ಥಳೀಯ ನಾಯಕರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಲಿದ್ದಾರೆ. ರಾಜ್ಯ ನಾಯಕರ ಪ್ರತಿಕ್ರಿಯೆ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲು ಅವರು ನಿರ್ಧರಿಸಿದ್ದಾರೆ.

ಒಂದು ವೇಳೆ ರಾಜ್ಯ ನಾಯಕರು ಇದನ್ನು ಒಪ್ಪದ ಸಂದರ್ಭದಲ್ಲಿ ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್​ ಸಂತೋಷ್ ಭೇಟಿಯಾಗಿ ಒತ್ತಡ ಹೇರಲೂ ಸಹ ಸ್ಥಳೀಯ ಬಿಜೆಪಿ ನಾಯಕರು ಮುಂದಾಗುವರು ಎಂದು ತಿಳಿದು ಬಂದಿದೆ.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಧಾರವಾಡ ಮತ್ತು ಹಾವೇರಿ ಕ್ಷೇತ್ರದ ಟಿಕೆಟ್​ಗೆ ಬೇಡಿಕೆ ಇಟ್ಟಿದ್ದರು. ಆದರೆ, ಧಾರವಾಡದಿಂದ ಹಾಲಿ ಸಂಸದ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯನ್ನು ಹೈಕಮಾಂಡ್ ಕಣಕ್ಕಿಳಿಸಿದ್ದರೆ ಮತ್ತೊಂದೆಡೆ ಹಾವೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಹಾವೇರಿಯಲ್ಲಿ ಬಸವರಾಜ ಬೊಮ್ಮಾಯಿಯವರಿಂದ ಬೇಡಿಕೆ ಇಲ್ಲದಿದ್ದರೂ ಅವರಿಗೆ ಅಭ್ಯರ್ಥಿ ಮಾಡಿದ್ದರ ಬಗ್ಗೆ ಶೆಟ್ಟರ್ ಅಸಮಾಧಾನಗೊಂಡಿದ್ದರು. ಅವರಿಗೆ ಖುದ್ದು ಕರೆ ಮಾಡಿದ್ದ ಕೇಂದ್ರ ಗ್ರಹ ಸಚಿವ ಅಮಿತ್ ಶಾ ಬೆಳಗಾವಿಯಿಂದ ಸ್ಪರ್ಧಿಸುವಂತೆ ಸೂಚನೆ ನೀಡಿದ್ದರು.

ಇನ್ನು ಶೆಟ್ಟರ್ ಆಯ್ಕೆ ಬದಲಿಸುವ ಸ್ಥಳೀಯ ನಾಯಕರ ಬೇಡಿಕೆಗೆ ಬಿಜೆಪಿ ಒಪ್ಪದೇ ಇದ್ದ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ನಾಯಕರು ಪರ್ಯಾಯ ಮಾರ್ಗ ಕಂಡುಕೊಳ್ಳುವ ಸಾಧ್ಯತೆ ಕೂಡಾ ತಳ್ಳಿ ಹಾಕುವಂತಿಲ್ಲ. ಸ್ಥಳೀಯವಾಗಿ ರಮೇಶ್ ಜಾರಕಿಹೊಳಿ ಅಥವಾ ಬಾಲಚಂದ್ರ ಜಾರಕಿಹೊಳಿ ಅವರನ್ನು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಸಿ, ಬಿಜೆಪಿ ಮತ್ತು ಜಗದೀಶ್ ಶೆಟ್ಟರ್ ವಿರುದ್ಧ ತಮ್ಮ ಶಕ್ತಿ ಪ್ರದರ್ಶನ ತೋರುವ ಸಾಧ್ಯತೆ ಕೂಡಾ ಇದೆ.

ಒಟ್ಟಾರೆ ಬಿಜೆಪಿ ಪಕ್ಷದಲ್ಲಿ ಅಭ್ಯರ್ಥಿ ಆಯ್ಕೆಯ ಗೊಂದಲದಿಂದ ಚುನಾವಣೆ ಫಲಿತಾಂಶದಲ್ಲಿ ದೊಡ್ಡ ಬದಲಾವಣೆ ಅಂತೂ ನಿಶ್ಚಿತ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.

ಮತ್ತೆ ಬಿಜೆಪಿಗೆ ಸೇರಿದ ಜಗದೀಶ್‌ ಶೆಟ್ಟರ್
ನವದೆಹಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಉತ್ತರ ಕರ್ನಾಟಕದ ಹಿರಿಯ ಲಿಂಗಾಯತ ರಾಜಕಾರಣಿ ಜಗದೀಶ್ ಶೆಟ್ಟರ್ ಅವರು ಇಂದು ಗುರುವಾರ ಕಾಂಗ್ರೆಸ್ ತೊರೆದು ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತುಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ದೆಹಲಿಗೆ ತೆರಳಿರುವ ಶೆಟ್ಟರ್, ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ಇಂದು ವಾಪಸ್ ಮರಳಿದ್ದಾರೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೇಟ್‌ ಸಿಗದ ಹಿನ್ನೆಲೆಯಲ್ಲಿ ಶೆಟ್ಟರ್‌ ಮತ್ತು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕಮಲ ಪಕ್ಷವನ್ನು ತೊರೆದು ಶೆಟ್ಟರ್ ಕಾಂಗ್ರೆಸ್ ಸೇರಿದ್ದರು. ಅದೇ ಚುನಾವಣೆಯಲ್ಲಿ ಶೆಟ್ಟರ್ ಸ್ಪರ್ಧಿಸಿ ಸೋಲು ಕಂಡಿದ್ದರು. ಆನಂತರದಲ್ಲಿ ಕಾಂಗ್ರೆಸ್‌ ಅವರನ್ನು ಕರ್ನಾಟಕದ ವಿಧಾನ ಪರಿಷತ್ತಿನ ಸದಸ್ಯರಾಗಿ ಮಾಡಿತ್ತು.

ಈ ತಿಂಗಳ ಆರಂಭದಲ್ಲಿ, ಶೆಟ್ಟರ್ ಅವರು ಮತ್ತೆ ಬಿಜೆಪಿಗೆ ಸೇರುತ್ತಾರೆ ಎಂಬ ಊಹಾಪೋಹಗಳನ್ನು ಸ್ವತಃ ಶೆಟ್ಟರ್‌ ಅವರೇ ನಿರಾಕರಿಸಿದ್ದರು. ಜಗದೀಶ್ ಶೆಟ್ಟರ್ ಅವರು ಇಂದು ದೆಹಲಿಯಲ್ಲಿ ಬಿಜೆಪಿಗೆ ಸೇರುವ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್‌ ಉಪಸ್ಥಿತರಿದ್ದರು.

ಬೆಳಗ್ಗೆ ಮೊದಲು ಅಮಿತ್ ಶಾ ಅವರನ್ನು ಭೇಟಿಯಾಗಿ ಸುದೀರ್ಘವಾಗಿ ಚರ್ಚೆ ನಡೆಸಿರುವ ಶೆಟ್ಟರ್. ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಮತ್ತು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.