janasankalpa yatre – Peepal Media

ಮುರುಘಾ ಮಠಕ್ಕೆ ಆಡಳಿತಾಧಿಕಾರಿ: ವರದಿಯ ನಂತರ ತೀರ್ಮಾನ: ಸಿಎಂ ಬೊಮ್ಮಾಯಿ
ಚಿತ್ರದುರ್ಗ (ಹೊಸದುರ್ಗ): ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸಿ ಎಂದು  ಅರ್ಜಿ  ಬಂದಿದ್ದು, ನೇಮಿಸುವ ಪೂರ್ವದಲ್ಲಿ ಏನು ನಡೆದಿದೆ ಎನ್ನುವುದರ ಬಗ್ಗೆ ನ್ಯಾಯ ಸಮ್ಮತ ಪ್ರಕ್ರಿಯೆ ನಡೆಯುತ್ತಿದೆ.  ಕಂದಾಯ ಇಲಾಖೆಯಿಂದ ಸ್ಥಿತಿಗತಿಗಳ ಬಗ್ಗೆ ವರದಿ ಕೇಳಿದ್ದು, ವರದಿ ಬಂದ ನಂತರ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ತಿಳಿಸಿದರು.

ಈ ಕುರಿತು ಸಾಣೇಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುರುಘಾ ಶ್ರೀಗಳ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ವ್ಯಾಖ್ಯಾನ ಮಾಡುವುದಿಲ್ಲ. ನ್ಯಾಯಾಲಯ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ನಂಬಿಕೆಗಳಿಗೆ ಕೊಡಲಿ ಏಟು ಕೊಡುವ ಕೆಲಸ

ಶಾಸಕ ಸತೀಶ್ ಜಾರಕಿಹೊಳಿಯವರ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ ಶತಮಾನಗಳಿಂದ ಯಾವುದೇ ಧರ್ಮ ನಡೆಯುವುದು ನಂಬಿಕೆ, ವಿಶ್ವಾಸದ ಮೇಲೆ ಸ್ಥಾಪಿತವಾಗಿರುವ ನಂಬಿಕೆಗಳಿಗೆ ಕೊಡಲಿ ಏಟು ಕೊಡುವ ಕೆಲಸ ಮಾಡಿದ್ದಾರೆ. ಅದರ ಮೇಲೆ ಚರ್ಚೆ ಮಾಡುವುದೇನಿದೆ. ತಾಂತ್ರಿಕವಾಗಿ ಅವರ ಶಾಲಾ, ಕಾಲೇಜುಗಳ ಪ್ರಮಾಣಪತ್ರದಲ್ಲಿ ಹಿಂದೂ ಎಂದೇ ನಮೂದಾಗಿದೆ. ನಂಬಿಕೆಗಳು ಶತಮಾನಗಳಿಂದ ಇದೆ. ಜನರ ನಂಬಿಕೆಯನ್ನು ಘಾಸಿ ಮಾಡುವಂಥ ಕೆಲಸ ಮಾಡಿ ಪುನಃ ಚರ್ಚೆ ಮಾಡುವುದು ಏನೂ ಇಲ್ಲ. ಅವರ ಕ್ಷಮೆಯೂ ಬೇಕಾಗಿಲ್ಲ. ಜನ ತೀರ್ಮಾನ ಮಾಡುತ್ತಾರೆ ಎಂದರು.

ಜನಸಂಕಲ್ಪಯಾತ್ರೆಗೆ ಸಿದ್ದರಾಮಯ್ಯ ಅವರಿಗೆ ಆಹ್ವಾನ

ಜನಸಂಕಲ್ಪ ಯಾತ್ರೆಯಲ್ಲಿ ಜನರೇ ಸೇರುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡುತ್ತೇನೆ ಬಂದು ನೋಡಲಿ ಎಂದರು.  ಮಾಧ್ಯಮದಲ್ಲಿ ತೋರಿಸುವ ಜನಸಾಗರವೇ ಉತ್ತರ. ಹೀಗಾಗಿ ಜನಸಂಕಲ್ಪ ಯಾತ್ರೆ, ವಿಜಯಸಂಕಲ್ಪವಾಗಿ ಪರಿವರ್ತನೆಯಾಗಲಿದೆ ಎಂದರು.

ಬೀದರ್ ನಾಂದೇಡ್ ರೈಲು ಯೋಜನೆಗೆ ಅನುದಾನ: ಬೊಮ್ಮಾಯಿ ಭರವಸೆ
ಬೀದರ್: ಕೇಂದ್ರ ಸರ್ಕಾರದ ವತಿಯಿಂದ ಬೀದರ್ ನಾಂದೇಡ್ ರೈಲು ಯೋಜನೆ ಮಂಜೂರಾಗಲಿದ್ದು, ಇದರ ನಿರ್ಮಾಣಕ್ಕೆ ಅಗತ್ಯವಿರುವ ಭೂಸ್ವಾಧೀನ ಹಾಗೂ ರಾಜ್ಯದ ಪಾಲಿನ ಹಣ ಎರಡನ್ನೂ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಔರಾದ್ ನಲ್ಲಿ ಆಯೋಜಿಸಿರುವ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಔರಾದ್ ಕೆರೆ ತುಂಬಿಸುವ ಯೋಜನೆ 36 ಕೆರೆಗಳ ತುಂಬಿಸುವ 698 ಕೋಟಿ ವೆಚ್ಚದಲ್ಲಿ ಕೈಗೊಂಡಿದ್ದು 40 ಗ್ರಾಮಗಳಿಗೆ ಉಪಯೋಗವಾಗುತ್ತಿದೆ. ಸಂಸದ ಭಗವಂತ ಖೂಬಾ ಹಾಗೂ ಸಚಿವ ಚೌಹಾಣ್ ಅವರ ಒತ್ತಡಕ್ಕೆ ಮಣಿದು 700 ಕೋಟಿ ರೂ.ಗಳ ಯೋಜನೆಯನ್ನು ಕೈಗೊಳ್ಳಲಾಗಿದೆ. ಬರುವ ತಿಂಗಳಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿ, ನವೆಂಬರ್ ನಲ್ಲಿ ಪ್ರಾರಂಭಿಸಲಾಗುವುದು ಎಂದರು.

ಭಾಲ್ಕಿ ವಿಧಾನಸಭಾ ಕ್ಷೇಡತ್ರದ 24 ಸಾವಿರ ಕರೆ ಜಮೀನಿಗೆ ಒಂದು ಟಿಎಂಸಿ ನೀರಿನಲ್ಲಿ 762 ಕೋಟಿ ರೂ.ಗಳ ಯೋಜನೆಗೆ  ಮಂಜೂರಾತಿ ನೀಡಲಾಗಿದೆ. ಎಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಕೆಲಸ ಮಾಡಲಾಗುತ್ತಿದೆ. ಬೀದರ್ ನಲ್ಲಿ ಈ ಎರಡು ಯೋಜನೆಗಳು ಬಹಳ ದಿನಗಳ ಬೇಡಿಕೆಯಾಗಿತ್ತು. ಹೀಗಾಗಿ ಕಾಂಗ್ರೆಸ್ ಮಾಡದ ಕೆಲಸಗಳನ್ನು ನಾವು ಮಾಡುತ್ತಿದ್ದೇವೆ ಎಂದು ಹೇಳಿದರು.

ಬೀದರ್ ನಮ್ಮ ರಾಜ್ಯದ ಮುಕುಟ ಪ್ರಾಯ ಇದ್ದಹಾಗೆ. ಅತ್ಯುತ್ತಮ ಹವಾಮಾನ, ಕೈಗಾರಿಕೆಗೆ ಸೂಕ್ತ ವಾತಾವರಣ, ಕೃಷಿಗೆ ಫಲವತ್ತಾದ ಮಣ್ಣು, ಐತಿಹಾಸಿಕ ಕುರುಹುಗಳಿರುವ ಜಿಲ್ಲೆ. ಬೀದರ್ ಹಾಗೂ ಕಲಬುರ್ಗಿ ಕೋಟೆಗಳ ಅಭಿವೃದ್ದಿಗೆ ತಲಾ 20 ಕೋಟಿ ರೂ ದಗಿಸಲಾಗಿದೆ. ಪ್ರವಾಸೋದ್ಯಮ ಇಲ್ಲಿಂದ ಪ್ರಾರಂಭವಾಗಬೇಕೆಂದು ಈ ಭಾಗದ ಪ್ರವಾಸೋದ್ಯಮ ಅಭಿವೃದ್ದಿಗೆ ಆದ್ಯತೆ ನೀಡುತ್ತಿದ್ದೇವೆ‌. ಸಮಗ್ರ ಹೈದರಾಬಾದ್  ಕರ್ನಾಟಕ ಅಭಿವೃದ್ಧಿಯ ಜೊತೆಗೆ ಬೀದರ್ ಜಿಲ್ಲೆಯ ಅಭಿವೃದ್ಧಿಯನ್ನೂ ತೆಗೆದುಕೊಳ್ಳಾಗಿದೆ. ಬಸವಕಲ್ಯಾಣ ಗ್ರಾಮದ ಸಮಗ್ರ ಅಭಿವೃದ್ಧಿಗೂ ಅನುದಾನ ಒದಗಿಸಿದೆ.  ಸಿಪೆಟ್ ಯೋಜನೆ ಕರ್ನಾಟಕಕ್ಕೆ ಮಾಡಲು ರಾಜ್ಯ ಸರ್ಕಾರದ ಪಾಲು 50 ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಒದಗಿಸಿ ಇಂದು ಅಡಿಗಲ್ಲು ಹಾಕಲಾಗಿದೆ. ಅದರ ಶ್ರೇಯಸ್ಸು ಕೇಂದ್ರ ಸಚಿವ ಭಗವಂತ್ ಖೂಬಾ ಅವರಿಗೆ ಸಲ್ಲಬೇಕು ಎಂದರು.

ಕಾರಂಜಾ ಯೋಜನೆಯ ನಾಲೆಗಳ ಅಭಿವೃದ್ಧಿ

ಕಾರಂಜಾ ಯೋಜನೆಯ ನಾಲೆಗಳ ಅಭಿವೃದ್ಧಿಗೆ ಈ ವರ್ಷ ಕ್ರಮ ಕೈಗೊಂಡಿದೆ.  ಕಾರಾಂಜಾ ನದಿಯ ಕೊನೆಯ ಭಾಗದಲ್ಲಿ ನೀರು ಲಭ್ಯವಾಗಿಲ್ಲದೆ ರೈತರ ಬವಣೆ ನಮಗೆ ತಿಳಿದಿದೆ. ಕಾರಾಂಜಾ ನದಿಯಿಂದ ಔರಾದ್ ಗೆ ಕುಡಿಯುವ ನೀರು ಯೋಜನೆ ಜಾರಿಗೆ ಮಂಜೂರಾತಿ ನೀಡುವುದಾಗಿ ಭರವಸೆ ಇತ್ತರು.  ಜಿಲ್ಲೆಯ ಎಲ್ಲಾ ತಾಲ್ಲೂಕುಗಳು ಅಭಿವೃದ್ಧಿಯಾದಾಗ ಕರ್ನಾಟಕ ಅಭಿವೃದ್ಧಿಯಾಗುತ್ತದೆ. ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರಿಗೆ 9000 ಕೋಟಿ ರೂ.ಗಳನ್ನು ಒದಗಿಸುತ್ತಿದ್ದು, ನಗರ ಪ್ರದೇಶಕ್ಕೆ 7500 ಕೋಟಿ ಒದಗಿಸಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 2000 ಶಾಲಾ ಕೊಠಡಿಗಳ ನಿರ್ಮಾಣವಾಗುತ್ತಿದೆ.  ಪ್ರತಿ ತಾಲ್ಲೂಕಿಗೆ ಕನಿಷ್ಠ 50 ಕೊಠಡಿಗಳ ನಿರ್ಮಾಣವಾಗಲಿದೆ. 70 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು 34 ಪಿ.ಹೆಚ್.ಸಿ ಕೇಂದ್ರಗಳನ್ನು ಸಿ ಹೆಚ್ ಸಿಗಳನ್ನಾಗಿ  ಮೇಲ್ದರ್ಜೆಗೇರಿಸಲಾಗುತ್ತಿದೆ.   ಕೃಷಿ,ಕೈಗಾರಿಕೆ, ಉದ್ಯೋಗ ಶಿಕ್ಷಣ ಆರೋಗ್ಯಕ್ಕೆ ಹೆಚ್ಚು ಒತ್ತು ಕೊಡುತ್ತಿದ್ದೇವೆ.‌ ಪೌಷ್ಟಿಕ ಆಹಾರ, ಗರ್ಭಿಣಿ ಸ್ತ್ರೀಯರ ಆರೋಗ್ಯಕ್ಕೆ ವಿಶೇಷ ಅನುದಾನ, ಬೀದರ್ ಅಭಿವೃದ್ಧಿಗೆ   ನಮ್ಮಸರ್ಕಾರ ಬದ್ಧವಾಗಿದೆ ಎಂದರು.

ಬಸವ ಕಲ್ಯಾಣ ಅಭಿವೃದ್ದಿ

ಬಸವ ಕಲ್ಯಾಣ ಅಭಿವೃದ್ದಿಗೆ ಈಗಾಗಲೇ ಕ್ರಮ ಕೈಗೊಂಡಿದ್ದೇವೆ. 1400 ಕೋಟಿ ರೂ.ಗಳನ್ನು ಮುಂಗಡವಾಗಿ ಬಿಡುಗಡೆ ಮಾಡಿ ಸಂಪೂರ್ಣವಾಗಿ ಖರ್ಚು ಮಾಡಲಾಗುತ್ತಿದೆ. ಮಾರ್ಚ್ ನಿಂದ ಮುಂದಿನ ಜನವರಿವರೆಗೆ ಸಂಪೂರ್ಣ ಹಣವನ್ನು ಬಿಡುಗಡೆ ಮಾಡಲಾಗಿದೆ. ಈ ವರ್ಷ ಬಜೆಟ್ ನಲ್ಲಿ 3000 ಕೋಟ ರೂ.ಗಳನ್ನು ಒದಗಿಸಿ ಕ್ರಿಯಾಯೋಜನೆಗೆ ಅನುಮೋದನೆಯನ್ನೂ ನೀಡಲಾಗಿದೆ. ಮುಂದಿನ ಬಜೆಟ್ ನಲ್ಲಿ 5000 ಕೋಟಿ ರೂ.ಗಳನ್ನು  ಮೀಸಲಿಡಲಾಗುವುದು. 1400 ನೇಮಕಾತಿಗೆ ಅನುಮತಿ ನೀಡಲಾಗಿದೆ. ಈ ಪೈಕಿ 500 ಶಿಕ್ಷಕರಿದ್ದಾರೆ.  ಎನ್.ಇ. ಪಿ ಗೆ 50 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ನೀರಾವರಿಗೆ ವಿಶೇಷ ಅನುದಾನ, ಅನುಭವ ಮಂಟಪ ನಿರ್ಮಾಣಕ್ಕೆ ಈಗಾಗಲೆ 500 ಕೋಟಿ ರೂ. ಒದಗಿಸಿದೆ. ಈ ಹಿನ್ನಲೆಯಲ್ಲಿ ಬಸವ ಕಲ್ಯಾಣ ಅಭಿವೃದ್ದಿಗೆ ವಿಶೇಷ ಅನುದಾನ ನೀಡಲಾಗಿದೆ ಎಂದರು.

ಸಚಿವ ಸಂಪುಟ ವಿಸ್ತರಣೆ- ಸಧ್ಯದಲ್ಲೇ ದೆಹಲಿಗೆ ಭೇಟಿ: ಸಿಎಂ ಬೊಮ್ಮಾಯಿ
ಬೆಳಗಾವಿ: ಜನಸಂಕಲ್ಪ ಯಾತ್ರೆಯ ಸಂದರ್ಭದಲ್ಲಿಯೇ ನವದೆಹಲಿಗೆ ಭೇಟಿ ನೀಡಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಹೇಳಿದರು.

ಇಂದು ಬೆಳಗಾವಿಯ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ ಮಾಹಿತಿಯನ್ನು ಹಂಚಿಕೊಂಡರು.

ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಬೆಳಗಾವಿಗೆ ಶುಭ ಸುದ್ದಿ ಇದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ನಿರ್ಣಯ ಕೈಗೊಂಡಾಗ ಎಲ್ಲರಿಗೂ ತಿಳಿಸಲಾಗುವುದು ಎಂದು ತಿಳಿಸಿದರು.

ರಾಜ್ಯ ಹಾಗೂ ಭಾಷೆಗಳು ಅಡಚಣೆ ಆಗಬಾರದು:

ಕೊಲ್ಲಾಪುರದ ಕನೇರಿ ಮಠದಲ್ಲಿ ಕನ್ನಡ ಭವನ ಕಟ್ಟಲು ಶಿವಸೇನೆಯವರು ವಿರೋಧಿಸುತ್ತಿರುವ ಬಗ್ಗೆ ಪ್ರತಿಕ್ರಯಿಸಿ, ಈಗಾಗಲೇ ಮಹಾರಾಷ್ಟ್ರದಲ್ಲಿ ಹತ್ತು ಹಲವಾರು ಸಂಘಗಳ ಕನ್ನಡ ಭವನಗಳು ಇವೆ. ಹಲವಾರು ದೇವಸ್ಥಾನಗಳು, ಯಾತ್ರಿನಿವಾಸಗಳೂ ಇವೆ. ಈ ವಿಚಾರದಲ್ಲಿ ರಾಜ್ಯ ಹಾಗೂ ಭಾಷೆಗಳು ಅಡಚಣೆ ಆಗಬಾರದು ಎಂಬುದು ನನ್ನ ಅನಿಸಿಕೆ ಎಂದರು.

ಶ್ರೀ ಪ್ರಭಾಕರ ಕೋರೆಯವರು ಸ್ನೇಹಜೀವಿ:

ಕೆ ಎಲ್ ಇ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಪ್ರಭಾಕರ ಕೋರೆಯವರ 75 ನೇ ವರ್ಷದ ಅಮೃತ ಮಹೋತ್ಸವ ಆಚರಿಸುತ್ತಿರುವುದು ಸಂತೋಷದ ವಿಷಯ. ಇಡೀ ಉತ್ತರ ಕರ್ನಾಟಕಕ್ಕೆ ಅವರ ಸುದೀರ್ಘ ನಾಲ್ಕು ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಶೈಕ್ಷಣಿಕ, ಆರೋಗ್ಯ, ಕೃಷಿ, ಸಹಕಾರಿ ಕ್ಷೇತ್ರಗಳಲ್ಲಿ ಕೆಲಸ ಮಾಡಿ ಜನಪ್ರಿಯರಾಗಿದ್ದಾರೆ. ಜನಾನುರಾಗಿಯಾದ ಕೋರೆಯವರಲ್ಲಿ ನಿರಂತರವಾಗಿ ಕೆಲಸ ಮಾಡುವ ಶಕ್ತಿ ಇದೆ. ಎಲ್ಲರೊಂದಿಗೂ ಸ್ನೇಹದಿಂದಿರುವ ಸ್ನೇಹಜೀವಿ. ಈ ಸಮಾರಂಭ ಅರ್ಥಪೂರ್ಣವಾಗಿರಲಿದೆ ಎಂದು ತಿಳಿಸಿದರು.

ಎಸ್ಸಿ ಎಸ್ಟಿ ಸಮುದಾಯವರಿಗೆ ನ್ಯಾಯ ಕೊಡಿಸುತ್ತೇನೆ: ಸಿಎಂ ಬೊಮ್ಮಾಯಿ
ಹೊಸಪೇಟೆ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯವರ ಕಲ್ಯಾಣ ಕಾರ್ಯಕ್ರಮಗಳ ಮೂಲಕ ಈ ಸಮುದಾಯಗಳಿಗೆ ನ್ಯಾಯ ಕೊಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಡಾ. ಪುನಿತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜನ ಸಂಕಲ್ಪ ಯಾತ್ರೆ ಯನ್ನು ಉದ್ಘಾಟಿಸಿ ಮಾತನಾಡಿದರು.

ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಭಯವಿಲ್ಲ. ನಮ್ಮ ಸರ್ಕಾರ ರೈತ ಕೂಲಿಕಾರ್ಮಿಕರಿಗೆ, ನೇಕಾರರು, ಮೀನುಗಾರರು, ಟ್ಯಾಕ್ಸಿ ಹಾಗೂ ಆಟೋಚಾಲಕರ ಮಕ್ಕಳಿಗೂ ವಿದ್ಯಾನಿಧಿ ಕೊಡುತ್ತಿದೆ. ಗ್ರಾಮೀಣ ಪ್ರದೇಶದಲ್ಲಿರುವ ಬಡಿಗರು, ಕಮ್ಮಾರರು, ವಿಶ್ವಕರ್ಮರು, ಮೇದಾರರು ಸೇರಿದಂತೆ ಕುಶಲಕರ್ಮಿಗಳಿಗೆ 50 ಸಾವಿರ ಧನಸಹಾಯ ನೀಡಲಾಗುತ್ತಿದೆ. ಜಗಜೀವನರಾಂ ಹೆಸರಿನಲ್ಲಿ 100 ಯುವಕರಿಗೆ ಸ್ವಯಂ ಉದ್ಯೋಗ, ಸ್ತ್ರೀಶಕ್ತಿ ಸಂಘಗಳಿಗೆ ಸ್ತ್ರೀಸಾಮರ್ಥ್ಯ ಯೋಜನೆಯಡಿ 5 ಲಕ್ಷ ಮಹಿಳೆಯರಿಗೆ ಉದ್ಯೋಗ, ಯುವಕರ ಸಂಘಕ್ಕೆ ಆರ್ಥಿಕ ನೆರವು ನೀಡಿ, ಉತ್ಪಾದನೆ ಹಾಗೂ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಈ ಯೋಜನೆಯಡಿ 5 ಲಕ್ಷ ಯುವಕರಿಗೆ ಉದ್ಯೋಗ ದೊರೆಯಲಿದೆ.

ಈಗ ಜನರಿಗೆ ಭಯವಿಲ್ಲ:

ದೀನದಲಿತರು, ವಿದ್ಯಾರ್ಥಿಗಳು, ಮಹಿಳೆಯರು, ಯುವಕರಿಗೆ ಭಯವಿಲ್ಲ. ಎಸ್ಸಿ ಎಸ್ಟಿ ಸಮುದಾಯವರಿಗೆ ಮೀಸಲಾತಿ ಹೆಚ್ಚಳ ಮಾಡುವ ಬೇಡಿಕೆ ಇದ್ದರೂ ನೀವು ನಿರ್ಧಾರ ಮಾಡಿಲ್ಲ. ನಾವು ನಿರ್ಧಾರ ಮಾಡಿದರೆ ಅದನ್ನು ಪ್ರಶ್ನಿಸುತ್ತೀರಾ. ನಮಗೂ ಕಾನೂನು ಗೊತ್ತಿದೆ.‌ಈ ಸಮುದಾಯಕ್ಕೆ ನ್ಯಾಯ ಕೊಡಿಸಲು ನಾನು ನಿಲ್ಲುತ್ತೇನೆ‌ ಎಂಬ ವಚನ ಕೊಡುತ್ತೇನೆ.
ಬಿಜೆಪಿ ಸರ್ಕಾರದಲ್ಲಿ ದೀನ ದಲಿತರು ಭಯಭೀತರಾಗಿದ್ದಾರೆ‌. ಅಂತ ಹೇಳಿದ್ದಿರಿ, ಆದರೆ ನೀವು ವೀರಶೈವ ಲಿಂಗಾಯತ ಸಮುದಾಯ ಒಡೆಯುವ ಪ್ರಯತ್ನ ಮಾಡಿದ್ದಿರಿ ಆಗ ಜನರಿಗೆ ಭಯ ಇತ್ತು. ನಾವು ವೀರಶೈವ ಲಿಂಗಾಯತರನ್ನು ಒಂದಾಗುವಂತೆ ಮಾಡಿದ್ದೇವೆ.
ನಿಮ್ಮ ಕಾಲದಲ್ಲಿ ಕೊಲೆಗಳು ನಡೆಯುತ್ತಿದ್ದವು ಜನರು ಭಯಭೀತರಾಗಿದ್ದರು‌ . ಆ ಭಯ ಈಗ ಇಲ್ಲ ಎಂದರು.

ಏಕ್ ಭಾರತ ಶ್ರೇಷ್ಟ ಭಾರತ:

ಪ್ರಧಾನಿ ನರೇಂದ್ರ ಮೊದಿಯವರು ಏಕ್ ಭಾರತ ಶ್ರೇಷ್ಟ ಭಾರತ ಎಂದು ಹೇಳಿದ್ದಾರೆ‌. ಪ್ರಧಾನಿಮೋದಿಯವರ ನಾಯಕತ್ವದಲ್ಲಿ ದೇಶ ಮುನ್ನಡೆಯಲು ಜನ ಬಯಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಾರ್ಯಕ್ರಮಗಳನ್ನು ಜನರ ಮುಂದಿಟ್ಟು, ನವಕರ್ನಾಟಕ ನಿರ್ಮಾಣಕ್ಕಾಗಿ ನಿಮ್ಮೆಲ್ಲರ ಆಶೀರ್ವಾದವನ್ನು ಕೋರುತ್ತೇನೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಶಶಿಕಲಾ ಜೊಲ್ಲೆ, ಆನಂದ್ ಸಿಂಗ್, ಗೋವಿಂದ್ ಕಾರಜೋಳ, ಶ್ರೀರಾಮುಲು, ಹಾಲಪ್ಪ ಆಚಾರ್, ಸಂಸದರಾದ ವೈ.ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಶಶೀಲ್ ನಮೋಶಿ, ಶಾಸಕರಾದ ರಾಜು ಗೌಡ, ಬಸವರಾಜ ದಡೆಸುಗೂರು, ಬಿಜೆಪಿ ಬಳ್ಳಾರಿ ವಿಭಾಗ ಪ್ರಭಾರಿಗಳು ಸಿದ್ದೇಶ್ ಯಾದವ್, ವಿಜಯನಗರ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಮತ್ತಿತರರು ಹಾಜರಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಮುಳುಗುತ್ತಿರುವ ಹಡಗು: ಸಿಎಂ ಬೊಮ್ಮಾಯಿ