janaspandana – Peepal Media

ʼಜನಸ್ಪಂದನʼ ಯಶಸ್ಸಿಗೆ ಕಾಂಗ್ರೆಸ್‌ ದಿಕ್ಕೆಟ್ಟಿದೆ: ಬಿಜೆಪಿ
ಬೆಂಗಳೂರು: ರಾಜ್ಯ ಸರ್ಕಾರವು ಮೂರು ವರ್ಷದ ಸಾಧನೆಯ ಕುರಿತು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಆಯೋಜಿಸಿದ್ದ ʼಜನಸ್ಪಂದನೆʼ ಸಮಾವೇಶವು ಅಭೂತಪೂರ್ವ ಯಶಸ್ಸನ್ನು ಕಂಡು ಕಾಂಗ್ರೆಸ್‌ ಕಂಗಾಲಾಗಿದೆ ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್‌ ಮಾಡಿದೆ.

ಜನ ಸ್ಪಂದನ ಕಾರ್ಯಕ್ರಮದ ಯಶಸ್ಸಿಗೆ ಕಾಂಗ್ರೆಸ್‌ ದಿಕ್ಕೆಟ್ಟಿದೆ. ಬಿಜೆಪಿಯ ಜನಸ್ಪಂದನ ಕಾರ್ಯಕ್ರಮ, ನಾವೇ ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಲ್ಲಿದ್ದ ಕಾಂಗ್ರೆಸ್‌ ನಾಯಕರ ನಿದ್ದೆಗೆಡಿಸಿದೆ. ಜನರು ಬಿಜೆಪಿ ಪಕ್ಷದ ಜೊತೆಗೆ ಇದ್ದಾರೆ ಎನ್ನುವುದು ರಾಜ್ಯದಲ್ಲಿ ನಡೆದ ಮೋದಿ ಕಾರ್ಯಕ್ರಮ ಮತ್ತು ಜನಸ್ಪಂದನ ಸಮಾವೇಶವೇ ಸಾಕ್ಷಿಯಾಗಿದೆ ಎಂದು ಬಿಜೆಪಿ ಹೇಳಿದೆ.

ಜನ ಸ್ಪಂದನ ಕಾರ್ಯಕ್ರಮದ ಯಶಸ್ಸಿಗೆ ಕಾಂಗ್ರೆಸ್‌ ದಿಕ್ಕೆಟ್ಟಿದೆ.

ಬಿಜೆಪಿಯ ಜನಸ್ಪಂದನ ಕಾರ್ಯಕ್ರಮ, ನಾವೇ ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಲ್ಲಿದ್ದ ಕಾಂಗ್ರೆಸ್‌ ನಾಯಕರ ನಿದ್ದೆಗೆಡಿಸಿದೆ.

ಜನರು ಬಿಜೆಪಿ ಪಕ್ಷದ ಜೊತೆಗೆ ಇದ್ದಾರೆ ಎನ್ನುವುದು ರಾಜ್ಯದಲ್ಲಿ ನಡೆದ ಮೋದಿ ಕಾರ್ಯಕ್ರಮ ಮತ್ತು ಜನಸ್ಪಂದನ ಸಮಾವೇಶವೇ ಸಾಕ್ಷಿಯಾಗಿದೆ.
— BJP Karnataka (@BJP4Karnataka) September 12, 2022

ʼಜನಸ್ಪಂದನೆʼಯಲ್ಲಿ ಕಾಂಗ್ರೆಸ್‌ ಕುರಿತು ಆರೋಪ: ಸಿದ್ದರಾಮಯ್ಯ ತಿರುಗೇಟು
ಬೆಂಗಳೂರು: ರಾಜ್ಯ ಸರ್ಕಾರದ ಮೂರು ವರ್ಷದ ಆಡಳಿತದ ಬಗ್ಗೆ ಜನರಿಗೆ ತಿಳಿಸುವ ನಿಟ್ಟಿನಲ್ಲಿ ಜನಸ್ಪಂದನ ಸಮಾವೇಶ ಹಮ್ಮಿಕೊಂಡಿದ್ದು, ಸಮಾವೇಶದಲ್ಲಿ ಬಿಜೆಪಿ ನಾಯಕರುಗಳು ಕಾಂಗ್ರೆಸ್‌ ಪಕ್ಷದ ಮೇಲೆ ಆರೋಪ ಮಾಡಿರುವ ಕುರಿತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಜನಸ್ಪಂದನವಂತೆ ಜನಸ್ಪಂದನ. ಇದು ಜನಸ್ಪಂದನ ಅಲ್ಲ ಜನ ಮರ್ದನ. ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುಸಂಘರ್ಷದಿಂದ ಬಿಜೆಪಿ ಸರ್ಕಾರ ರಾಜ್ಯದ ಜನರ ಮರ್ದನ ಮಾಡುತ್ತಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರವನ್ನು ಪ್ರಶ್ನಿಸುವ ವಿರೋಧ ಪಕ್ಷಗಳ ಮೇಲೆ ಸಿಬಿಐ, ಇಡಿ, ಐಟಿ ದಾಳಿಗಳಾಗುತ್ತಿವೆ, ಪ್ರಶ್ನಿಸುವ ನಾಗರಿಕರ ಮೇಲೆ ಸುಳ್ಳು ಕೇಸ್ ಗಳನ್ನು ಹಾಕಿ ಜಾಮೀನು ಇಲ್ಲದೆ ಜೈಲಿಗೆ ತಳ್ಳಲಾಗುತ್ತಿದೆ. ಹಾಗಾದರೆ ಜನರ ಸ್ಪಂದನಕ್ಕೆ ಅವಕಾಶ ಎಲ್ಲಿದೆ? ಜನತೆಗೆ ಮುಕ್ತವಾಗಿ ಮಾತನಾಡಲು ಅವಕಾಶ ಕೊಟ್ಟರೆ ಜನಾಕ್ರೋಶದಲ್ಲಿ ಜನಸ್ಪಂದನ ಕಾರ್ಯಕ್ರಮ ಮಾತ್ರವಲ್ಲ ಬಿಜೆಪಿ ಸರ್ಕಾರವೇ ಕೊಚ್ಚಿಹೋಗಬಹುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮುಂದುವರೆದು ಟ್ವೀಟ್‌ ಮಾಡಿರುವ ಅವರು, ರಾಜ್ಯದ ಗುತ್ತಿಗೆದಾರರ ಸಂಘ, ಶಿಕ್ಷಣ ಸಂಸ್ಥೆಗಳ ಒಕ್ಕೂಟ ಪ್ರಧಾನಿ ಅವರಿಗೆ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಪತ್ರ ಬರೆಯುತ್ತಿದ್ದಾರೆ. ರಾಜ್ಯದ ಹೈಕೋರ್ಟ್ ಒಂದಲ್ಲ ಎರಡಲ್ಲ ಹಲವು ಬಾರಿ ನೇರವಾಗಿ ಭ್ರಷ್ಟಾಚಾರಕ್ಕಾಗಿ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಇನ್ನು ಯಾವ ಸಾಕ್ಷಿ ಬೇಕು?  ಎಂದು ಪ್ರಶ್ನಿಸಿದ್ದಾರೆ.

ಹೈಕಮಾಂಡ್ ಗೆ 2000 ಕೋಟಿ ಕೊಟ್ಟರೆ ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಬಹುದು ಎಂದು ಹೇಳಿದ್ದು ಬಿಜೆಪಿ ಪಕ್ಷದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ನಾವಲ್ಲ. ಮಾಜಿ ಮುಖ್ಯಮಂತ್ರಿಗಳ ಮಗ ಲಂಚ ಹೊಡೆಯುತ್ತಿದ್ದಾರೆ ಎಂದು ಆರೋಪಿಸಿರುವುದು ಕೂಡಾ ಅದೇ ಶಾಸಕ. ಭದ್ರಾ ಮೇಲ್ದಂಡೆ ಯೋಜನೆಯಲ್ಲಿ 2 ಸಾವಿರ ಕೋಟಿ ಕಿಕ್ ಬ್ಯಾಕ್ ಆರೋಪ ಮಾಡಿದ್ದೂ ಸಹ ಬಿಜೆಪಿ ಶಾಸಕ ಎಚ್.ವಿಶ್ವನಾಥ್. ಪಿ.ಎಸ್.ಐ ನೇಮಕಾತಿ ಹಗರಣದಲ್ಲಿ ವಸೂಲಿ ಮಾಡಿದ ಲಂಚವನ್ನು ಸರ್ಕಾರಕ್ಕೆ ನೀಡಿದ್ದೇನೆ ಎಂದು ಹೇಳಿದ್ದು ಬಿಜೆಪಿ ಶಾಸಕ ಬಸವರಾಜ ದಡೆಸುಗೂರ್. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಮತ್ತವರ ಮಕ್ಕಳು ನನ್ನ ಖಾತೆಯಲ್ಲಿ ಕೈ ಆಡಿಸುತ್ತಿದ್ದಾರೆ ಎಂದು ರಾಜ್ಯಪಾಲರಿಗೆ ದೂರು ನೀಡಿದ್ದು ಆಗಿನ ಸಚಿವ ಕೆ.ಎಸ್.ಈಶ್ವರಪ್ಪ ಎಂದು ಕಾಂಗ್ರೆಸ್‌ ಪಕ್ಷದಮೇಲೆ ಆರೋಪ ಮಾಡಿದವರ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

40% ಕಮಿಷನ್ ಕೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡದ್ದು ಈಶ್ವರಪ್ಪನಿಗೆ ಆತ್ಮೀಯನಾಗಿದ್ದ ಗುತ್ತಿಗೆದಾರ. ಸರ್ಕಾರಿ ಕಾಮಗಾರಿಗಳಲ್ಲಿ 40% ಕಮಿಷನ್ ನೀಡಬೇಕಾಗುತ್ತದೆ, ಇಲ್ಲದೇ ಇದ್ದಿದ್ದರೆ ಬಿಲ್ ಪಾಸ್ ಮಾಡುತ್ತಿಲ್ಲ ಎಂದು ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಧೈರ್ಯದಿಂದ ಬಹಿರಂಗವಾಗಿಯೇ ಆರೋಪ ಮಾಡುತ್ತಿರುವುದು ನಾವಲ್ಲ, ರಾಜ್ಯದ ಸರ್ಕಾರಿ ಗುತ್ತಿಗೆದಾರರ ಸಂಘದವರು ಎಂದು ಕಿಡಿಕಾರಿದರು.

ಶಿಕ್ಷಣ ಇಲಾಖೆಯ ಭ್ರಷ್ಟಾಚಾರದ ಬಗ್ಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ರುಪ್ಸಾ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ. ಲಂಚ ಪಡೆದು ಖಾಸಗಿ ಶಾಲೆಗಳಿಗೆ ಬೇಕಾಬಿಟ್ಟಿ ಅನುಮತಿ ನೀಡಿದ್ದ ಇಲಾಖೆಯೇ ಅಕ್ರಮ ಮುಚ್ಚಿಹಾಕಲು ಲಂಚ ಕೇಳುತ್ತಿದೆಯಂತೆ. ಇದರಲ್ಲಿ ಬಿ.ಸಿ. ನಾಗೇಶ್ ಪಾಲೆಷ್ಟು? ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ಅವರ ಪಕ್ಷದ ಶಾಸಕರು, ಸಚಿವರೇ ಸಾಕ್ಷಿ ನೀಡುತ್ತಿದ್ದಾರೆ. ಇವರನ್ನು ಸಾಲಾಗಿ ವೇದಿಕೆಯಲ್ಲಿ ನಿಲ್ಲಿಸಿ ಜನಸ್ಪಂದನ ಮಾಡಿದರೆ ಕಾರ್ಯಕ್ರಮ ಯಶಸ್ವಿಯಾಗಬಹುದು. ಬೇಕಿದ್ದರೆ ಗುತ್ತಿಗೆದಾರರ ಸಂಘದ ಅಧ್ಯಕ್ಷರನ್ನೂ ಕರೆಸಿ ಎಂದು ವ್ಯಂಗ್ಯವಾಡಿದ್ದಾರೆ.

ಪಿಎಸ್ಐ ನೇಮಕಾತಿಯ ಹಗರಣ ಈಗ ರಾಷ್ಟ್ರೀಯ ಸುದ್ದಿಯಾಗಿದೆ. ಈ ಹಗರಣದಲ್ಲಿ ಸಚಿವರು, ಮಾಜಿ ಸಚಿವರು ಮತ್ತು ಅವರ ಮಕ್ಕಳು ಸೇರಿದ ಹಾಗೆ ಎಲ್ಲರೂ ಭಾಗಿಯಾಗಿದ್ದಾರೆ. ಇದರಿಂದ ಉದ್ಯೋಗ ವಂಚಿತರಾದ 54,000 ಯುವಜನರಿಂದ ಜನಸ್ಪಂದನ ನಡೆಸಿ ಎಂದು  ಸಿದ್ದರಾಮಯ್ಯ ಸವಾಲ್‌ ಹಾಕಿದರು.

ಬಿಜೆಪಿ ರಾಷ್ಟ್ರೀಯ ಅಪರಾಧ ದಾಖಲಾತಿ ಬ್ಯೂರೋ (NCRB) ಪ್ರಕಾರ ಭ್ರಷ್ಟಾಚಾರದಲ್ಲಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದೆ. ಇದು ದಾಖಲಾಗಿರುವ ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಮತ್ತು ಲಂಚ ಸ್ವೀಕಾರದ ಪ್ರಕರಣಗಳ ಆಧಾರದಲ್ಲಿ ನಡೆದ ಸಮೀಕ್ಷೆ. ಬಿಡಿಎ ಇನ್ನೊಂದು ಲಂಚದ ಕೂಪ. ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿ ನಾಲ್ಕು ಮಂದಿಗೆ ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸಿ ದುಬಾರಿ ಮೌಲ್ಯದ ಪರ್ಯಾಯ ನಿವೇಶನಗಳನ್ನು ಬಿಡಿಎ ಹಂಚಿಕೆ ಮಾಡಿದೆ. ಹಾಗಾದರೆ ಎತ್ತಂಗಡಿಯಾಗಿರುವ ಬಿಡಿಎ ಆಯುಕ್ತ ರಾಜೇಶ್ ಗೌಡರ ಸ್ಪಂದನ ಕೇಳಿಬಿಡಿ ಎಂದು ಹೇಳಿದರು.

2021 ರಲ್ಲಿ ಕೆಪಿಎಸ್ಸಿ ನಡೆಸಿದ್ದ ಲೋಕೋಪಯೋಗಿ ಇಲಾಖೆಯ ಕಿರಿಯ ಎಂಜಿನಿಯರ್ ನೇಮಕಾತಿ ಪರೀಕ್ಷೆಗಳಲ್ಲೂ ಅಕ್ರಮ. ಎಫ್‌ಡಿಎ, ಎಸ್‌ಡಿಎ, ಪಿಡಬ್ಯ್ಲುಡಿ, ಜೆಇ ಹಾಗೂ ಪೊಲೀಸ್ ಕಾನ್ಸ್‌ಟೇಬಲ್ ನೇಮಕದ ಲಿಖಿತ ಪರೀಕ್ಷೆಯಲ್ಲೂ ಅಕ್ರಮ. ಸಿಐಡಿ ಚಾರ್ಜ್ ಶೀಟ್ ನಲ್ಲಿ ಎಲ್ಲವೂ ಬಯಲಾಗಿದೆ. ಬೆಂಗಳೂರು ಉಪನೋಂದಣಿ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಮಧ್ಯವರ್ತಿಗಳ ಹಾವಳಿ, ಅಕ್ರಮವಾಗಿ ದಾಖಲೆಗಳ ನೋಂದಣಿ ಕುರಿತು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ವಿಚಾರಣೆ ಆರಂಭಿಸಿದ್ದಾರೆ. ವಿಚಾರಣೆ ಮುಗಿದ ನಂತರ ಯಾರ ತಲೆ ಉರುಳುತ್ತೋ ಕಾದು ನೋಡೋಣ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಬಿಬಿಎಂಪಿ  ಬಿಜೆಪಿಯ ಭ್ರಷ್ಟಾಚಾರಕ್ಕೆ ಹೆಡ್ ಆಫೀಸ್ ಆಗಿದೆ. ರಾಜಕಾಲುವೆ, ರಸ್ತೆ, ಮೂಲಭೂತ ಸೌಕರ್ಯ, ಘನತ್ಯಾಜ್ಯ ನಿರ್ವಹಣೆಯಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ವಾರ್ಷಿಕ ಲೆಕ್ಕ ಪರಿಶೋಧನಾ ವರದಿ ಹೇಳಿದೆ. ಅಂಗನವಾಡಿ ಮಕ್ಕಳ ಪಾಲಿನ ಮೊಟ್ಟೆಯ ಹಣದಲ್ಲೂ ಭ್ರಷ್ಟಾಚಾರ. ಆರೋಪ ಹೊತ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾಜೊಲ್ಲೆ ಮೇಲೆ ಯಾವ ಕ್ರಮವೂ ಇಲ್ಲ. ಬದಲಿಗೆ ಮಕ್ಕಳಿಗೆ ಕೊಡುವ ಮೊಟ್ಟೆಯನ್ನೇ ನಿಲ್ಲಿಸಲು ಬಿಜೆಪಿ ಹುನ್ನಾರ ನಡೆಸುತ್ತಿದೆ ಎಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ಲಂಚದ ಹಣದಿಂದ ಬಿಜೆಪಿಯ ಜನಸ್ಪಂದನ ಕಾರ್ಯಕ್ರಮ : ಸಿದ್ದರಾಮಯ್ಯ
ಹುಬ್ಬಳ್ಳಿ: ಬಾದಾಮಿ ಕ್ಷೇತ್ರದಲ್ಲಿ ಮಳೆಯಿಂದ ಹಾನಿಗೀಡಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಕೇಳಿ, ಅವುಗಳಿಗೆ ಶಾಶ್ವತ ಪರಿಹಾರ ಕೊಡಿಸುವ ಬಗ್ಗೆ ಸರ್ಕಾರದೊಂದಿಗೆ ಮಾತನಾಡಲಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯದ ಬಹಳಷ್ಟು ಕಡೆಗಳಲ್ಲಿ ಅಧಿಕವಾಗಿ ಮಳೆಯಾಗಿದ್ದು ಪ್ರವಾಹ ಪರಿಸ್ಥಿತಿ ಸೃಷ್ಠಿಯಾಗಿದೆ. ಸುಮಾರು 7 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ನಾಶವಾಗಿದೆ. ಇದಾಗಿಯೂ ಸರ್ಕಾರದಿಂದ ರೈತರಿಗೆ ಯಾವುದೇ ರೀತಿಯ ಪರಿಹಾರವನ್ನು ಕೊಟ್ಟಿಲ್ಲ  ಎಂದರು.

ಈಗಿನ ನೆರೆ ಪರಿಸ್ಥಿತಿಗೆ ರಾಜ್ಯ ಸರ್ಕಾರವೇ ಕಾರಣ. ನಮ್ಮ ಸರ್ಕಾರದ ಅವಧಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಮಾಡುವ ಕೆರೆ ಹೂಳೆತ್ತುವ ಕಾರ್ಯವನ್ನು ಮಾಡುತ್ತಿದ್ದೆವು, ಆದರೆ ಈ ಸರ್ಕಾರ ಕಾಮಗಾರಿಗಳನ್ನುನಿಲ್ಲಿಸಿದೆ ಎಂದು ಟೀಕಿಸಿದರು.

ಸಾಕಷ್ಟು ಕಡೆಗಳಲ್ಲಿ ರಸ್ತೆಗಳ ಮೇಲೆ ನೀರು ನಿಂತು ಜನರು ಬೋಟ್‌ ಗಳಲ್ಲಿ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಬಿಜೆಪಿ ಅವರು ಜನರ ಈ ಎಲ್ಲಾ ಸಮಸ್ಯೆಗಳಿಗೆ ಸ್ಪಂದಿಸದೆ ಜನಸ್ಪಂದನ ಕಾರ್ಯಕ್ರಮ ಅಂತ ಹೇಳಿ ಸ್ಟೇಜ್‌ ಮೇಲೆ ಡ್ಯಾನ್ಸ್‌ ಮಾಡುತ್ತಿದ್ದರೆ ಹೇಗೆ? ಇವರಿಗೆ ನಿಜವಾಗಿ ಜನರ ಬಗ್ಗೆ ಕಾಳಜಿ ಇದೆಯಾ? ಲಂಚ ಹೊಡೆದು ಸಂಪಾದಿಸಿರುವ ಹಣದಲ್ಲಿ ಜನ ಸೇರಿಸಿಕೊಂಡು ಜನಸ್ಪಂದನೆ ಎಂದು ಕಾರ್ಯಕ್ರಮ ಮಾಡಿದರೆ ಅದನ್ನು ಜನ ಒಪ್ಪಿಕೊಳ್ಳಲು ಸಿದ್ಧರಿದ್ದಾರ? ಎಂದು ಪ್ರಶ್ನಿಸಿದರು.

ಉಮೇಶ್‌ ಕತ್ತಿ ಅವರು ಉತ್ತರ ಕರ್ನಾಟಕದ ಪ್ರಭಾವಿ ನಾಯಕರು ಮತು ಎಂಟು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದು, ಪ್ರಸ್ತುತ ಸರ್ಕಾರದಲ್ಲಿ ಸಚಿವರು ಆಗಿದ್ದವರು. ಇವರು ಮರಣ ಹೊಂದಿದಾಗ ಒಂದು ಕಡೆ ಶೋಕಾಚರಣೆ ಮಾಡುತ್ತೇವೆ ಎನ್ನುತ್ತಾರೆ, ಇನ್ನೊಂದು ಕಡೆ ಅವರ ಭಾವಚಿತ್ರದ ಮುಂದೆ ಬಿಜೆಪಿ ನಾಯಕರೇ ಡ್ಯಾನ್ಸ್‌ ಮಾಡುತ್ತಾರೆ. ಇದೇನಾ ಅವರಿಗೆ ಕೊಡುವ ಗೌರವ? ಈ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿ ಇಲ್ಲ, ಬರೀ ದುಡ್ಡು ಹೊಡೆಯುವ ಬಗ್ಗೆ ಮಾತ್ರ ಕಾಳಜಿ ಇದೆ ಎಂದು ಕಿಡಿಕಾರಿದರು.

ಸದನದಲ್ಲಿ ಪ್ರವಾಹ, 40% ಕಮಿಷನ್‌ ಹಗರಣ ಮುಂತಾದ ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತೇವೆ. ಪಿಎಸ್‌ಐ ನೇಮಕಾತಿಯಲ್ಲಿ ಲಂಚ ಪಡೆದಿದ್ದನ್ನು ಬಿಜೆಪಿಯ ಒಬ್ಬ ಶಾಸಕರೇ ಒಪ್ಪಿಕೊಂಡಿದ್ದಾರೆ, ಅವರ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡು, ಅವರನ್ನು ತಕ್ಷಣವೇ ಬಂಧಿಸಿ ವಿಚಾರಣೆ ನಡೆಸಬೇಕು ಎಂದರು.

ದಾವಣಗೆರೆಯಲ್ಲಿ ನಡೆದ ನನ್ನ ಜನ್ಮದಿನದ ಅಮೃತೋತ್ಸವ ಸಮಾರಂಭಕ್ಕೆ ಉತ್ತರವಾಗಿ ಬಿಜೆಪಿಯವರು ಜನಸ್ಪಂದನ ಕಾರ್ಯಕ್ರಮ ಮಾಡುತ್ತಿದ್ದಾರೆ. ನಮ್ಮ ಕಾರ್ಯಕ್ರಮಕ್ಕೆ ಜನ ಸ್ವಯಂಪ್ರೇರಿತವಾಗಿ ಬಂದಿದ್ದು, ಆದರೆ ಬಿಜೆಪಿ ಅವರ ಬಳಿ ಇರುವ ಭ್ರಷ್ಟ ಹಣ ಮತ್ತು ಅಧಿಕಾರದ ಬಲದಿಂದ ಜನ ಸೇರಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಭ್ರಷ್ಟಚಾರದ ಗಂಗೋತ್ರಿ ಎಂದರೆ ಕಾಂಗ್ರೆಸ್‌ : ನಳೀನ್‌ ಕುಮಾರ್‌ ಕಟೀಲ್‌
ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಬಿಜೆಪಿ ಸರ್ಕಾರ 3 ವರ್ಷ ಪೂರೈಸಿರುವ ಸಂತಸದಲ್ಲಿ ಆಯೋಜಿಸಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಮಾತನಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮುಂದಿನ ಚುನಾಚಣೆಯಲ್ಲಿ 150 ಸೀಟ್‌ಗಳನ್ನು ಗೆಲ್ಲುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರು ನಮ್ಮ ಸರ್ಕಾರದಲ್ಲಿ ಭ್ರಷ್ಟಚಾರವಿದೆ ಎಂದು ಹೇಳುತ್ತಿದ್ದಾರೆ, ಆದರೆ ರಾಜ್ಯದಲ್ಲಿ ಭ್ರಷ್ಟಚಾರದ ಗಂಗೋತ್ರಿ ಎಂದರೆ ಕಾಂಗ್ರೆಸ್‌ ಎಂದು ಕಿಡಿಕಾರಿದರು.

ಕಾಂಗ್ರೆಸ್‌ ಪಕ್ಷದ ಕೇಂದ್ರದಲ್ಲಿನ ಸೋನಿಯ ಗಾಂಧಿ, ರಾಹುಲ್‌ ಗಾಂಧಿ ಇಂದ ಹಿಡಿದು ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್‌ ವರೆಗೆ ಎಲ್ಲರು ಅಪರಾಧಿಗಳು ಮತ್ತು ಭ್ರಷ್ಟತೆಯುಳ್ಳವರು. ಇವರುಗಳು ಕೋರ್ಟ್‌ನ ಬೇಲ್‌ ಮೇಲೆ ಹೊರಗಿದ್ದಾರೆ. ನಿಮ್ಮ ಕಾಂಗ್ರೆಸ್‌ ಸರ್ಕಾರ 100% ಭ್ರಷ್ಟತೆಯ ಸರ್ಕಾರ ಎಂದು ಗುಡುಗಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕೊಟ್ಟಿರುವ ಸವಲತ್ತು ಬೇರೆ ಯಾವ ಪಕ್ಷಗಳು ಕೊಟ್ಟಿಲ್ಲ: ಯಡಿಯೂರಪ್ಪ
ದೊಡ್ಡಬಳ್ಳಾಪುರ: ಭಾರತೀಯ ಜನತಾ ಪಕ್ಷವು ಮೂರು ವರ್ಷ ಅಧಿಕಾರವನ್ನು ಪೂರೈಸಿರುವ ಪ್ರಯುಕ್ತ ‘ಜನಸ್ಪಂದನ’ ಸಮಾವೇಶವನ್ನು ಹಮ್ಮಿಕೊಂಡಿದ್ದು, ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಕಾಂಗ್ರೆಸ್‌ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.

ಸಮಾವೇಶದಲ್ಲಿ ಮಾತನಾಡಿದ ಅವರು, ಈ ಕ್ರಾರ್ಯಕ್ರಮವು ಹಲವಾರು ಹಿರಿಯರ ಪರಿಶ್ರಮದಿಂದ ನಡೆಯುತ್ತಿದೆ, ಡಾ.ಸುಧಾಕರ್‌ ಅವರ ಪರಿಶ್ರಮದಿಂದ ಈ ಕ್ಷೇತ್ರದಲ್ಲಿ ಹೆಚ್ಚು ಬಿಜೆಪಿ ನಾಯಕರು ಗೆದ್ದಿರುವಂತೆ, ಮುಂದೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ವಿಜಯವನ್ನು ಸಾಧಿಸಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು.

ಮುಂದುವರೆದು ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಕೊಟ್ಟಿರುವ ಸವಲತ್ತುಗಳನ್ನು ಬೇರೆ ಯಾವ ಪಕ್ಷಗಳು ಕೊಟ್ಟಿಲ್ಲ, ಇತ್ತೀಚಿಗೆ ರಾಹುಲ್‌ ಗಾಂಧಿ ಅವರು ಬಡತನದ ಬಗ್ಗೆ ಮಾತನಾಡುತ್ತಿದ್ದಾರೆ, ಆದರೆ ಆವರ ಮನೆಯಲ್ಲಿ ಮೂರು ಜನ ಪ್ರಧಾನ ಮಂತ್ರಿಮಂತ್ರಿಗಳಾಗಿದ್ದರು ಆದರೂ ಬಡತನ ಕಡಿಮೆಯಾಗಿದೆಯ ಎಂದು ಪ್ರಶ್ನಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಬಿಜೆಪಿಯು ದೇಶದಲ್ಲಿ ಉತ್ತಮ ಅಧಿಕಾರವನ್ನು ನಡೆಸುತ್ತಿದ್ದು, ಬಡವರ ಪರವಾಗಿ, ಮಹಿಳೆಯರ ಪರವಾಗಿ, ರೈತರ ಪರವಾಗಿ, ಕಾರ್ಮಿಕರ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.