k sudhakar – Peepal Media

ಆರೋಗ್ಯ ಇಲಾಖೆಯನ್ನು ಭ್ರಷ್ಟಾಚಾರದ ಕೊಂಪೆ ಮಾಡಿದ ಕೀರ್ತಿ ಸುಧಾಕರ್‌ ಅವರದ್ದು : ಕಾಂಗ್ರೆಸ್‌ ಕಿಡಿ
ಬೆಂಗಳೂರು : ತುಮಕೂರಿನ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಗ್ರಾಮದಲ್ಲಿ ಚಿಕಿತ್ಸೆ ಸಿಗದೆ ಮಗು ಸಾವನ್ನಪ್ಪಿದ್ದು ಪ್ರಕರಣಕ್ಕೆ ಸಂಭಂದಿಸಿದಂತೆ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದ್ದು, ಈ ಕುರಿತು ಆಕ್ರೋಶ ವ್ಯಕ್ತ ಪಡಿಸಿರುವ ರಾಜ್ಯ ಕಾಂಗ್ರೆಸ್‌ ʼಸರ್ಕಾರ ಜೀವ ಉಳಿಸುವ ಬದಲು ಜೀವ ತೆಗೆಯುವ ಕೆಲಸ ಮಾಡುತ್ತಿದೆʼ ಎಂದು ಕಿಡಿಕಾರಿದೆ.

ಶುಕ್ರವಾರದಂದು ಆಕಸ್ಮಿಕವಾಗು ಐದು ವರ್ಷದ ಮಗುವೊಂದು ಸೊಂಪ್‌ನಲ್ಲಿ ಬಿದ್ದಿದ್ದು, ಮಗುವನ್ನು ಚಿಕಿತ್ಸೆಗೆಂದು ಕರೆತಂದ  ವೇಳೆ ವೈದ್ಯರ ಕರ್ತವ್ಯಲೋಪ ಮತ್ತು ಉದಾಸೀನತೆಯ ತೋರಿಸಿರುವ  ಹಿನ್ನೆಲೆಗೆ ಸಂಬಂಧಿಸಿದಂತೆ ಆರೋಗ್ರ ಇಲಾಖೆ ಅಯುಕ್ತರು, ಕೊಡಿಗೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ.ರೋಹಿತ್‌ ಡಿ. ಅವರನ್ನು ಶನಿವಾರದಂದು ಅಮಾನತುಗೊಳಿಸಲಾಗಿದೆ.

ಈ ಘಟನೆಗೆ ಕುರಿತು ಇಂದು ಆಕ್ರೋಶ ವ್ಯಕ್ತ ಪಡಿಸಿರುವ ರಾಜ್ಯ ಕಾಂಗ್ರೆಸ್‌, ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ ಅವರ ವಿರುದ್ದ ಕಿಡಿಕಾರಿದೆ. ʼಬೆಳಗಾವಿಯಲ್ಲಿ ವೆಂಟಿಲೇಟರ್‌ ಸಿಗದೆ ಸಾವನ್ನಪ್ಪಿದ್ದ ಘಟನೆ, ಹಾಸನದಲ್ಲಿ ಚಿಕಿತ್ಸೆ ನಿರಾಕರಿಸಿ ಸಾವು, ಇದೀಗ ತುಮಕೂರಿನ ಮಧುಗಿರಿಯಲ್ಲಿ ವೈದ್ಯರ ಕರ್ತವ್ಯ ಲೋಪದಿಂದ ಮಗು ಬಲಿಯಾಗಿದೆ. ಈ ಎಲ್ಲಾ ಜವಬ್ದಾರಿಗಳಿಗೂ ಸಚಿವ ಕೆ. ಸುಧಾಕರ್‌ ಅವರೇ ನೇರ ಹೊಣೆ ಮಾಡಿದ್ದು, ಆರೋಗ್ಯ ಇಲಾಖೆಯನ್ನು ಭ್ರಷ್ಟಾಚಾರದ ಕೊಂಪೆ ಮಾಡಿದ ಕೀರ್ತಿ ಸುಧಾಕರ್‌ ಅವರದ್ದೇʼ ಎಂದು ಕಾಂಗ್ರೆಸ್‌ ಟ್ವೀಟ್‌ನಲ್ಲಿ ಹೇಳಿದೆ.

ಈಗಿನ ಸರ್ಕಾರ ಜೀವ ಉಳಿಸುವ ಬದಲು ಜನರ ಜೀವಗಳನ್ನು ತೆಗೆಯುತ್ತಿದೆ ಎಂದು ಬಿಜೆಪಿ ಸರ್ಕಾರದ ವಿರುದ್ದ ರಾಜ್ಯ ಕಾಂಗ್ರೆಸ್‌ ಕಿಡಿಕಾರಿದೆ.

ಹತ್ತು ದಿನಗಳ ಕಾಲ ಚಳಿಗಾಲದ ಅಧಿವೇಶನ : ಸಚಿವ ಸಂಪುಟ ನಿರ್ಧಾರ
ಬೆಂಗಳೂರು : ಗುರುವಾರದಂದು ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, ಡಿಸೆಂಬರ್‌ 19ರಿಂದ 30 ರವರೆಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಹತ್ತು ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ  ಸಭೆಯಲ್ಲಿ, ʼರಾಮನಗರದಲ್ಲಿ 600 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜೀವ್ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣ, ಗೌರಿಬಿದನೂರಿನಲ್ಲಿ 12 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ನ್ಯಾಯಾಲಯ ಕಟ್ಟಡ ನಿರ್ಮಾಣ ಮಾಡುವುದಕ್ಕೆ ಸಮ್ಮತಿ ನೀಡಿದೆ ಎಂದು ತಿಳಿಸಿದ್ದಾರೆ.

ʼಶ್ರೀಗಂಧ ನೀತಿ -2022ಕ್ಕೆ ಸಂಪುಟ ಒಪ್ಪಿಗೆ ನೀಡಿದ್ದು, ಇನ್ನು ಮುಂದೆ ರೈತರು ಖಾಸಗಿ ಜಮೀನಿನಲ್ಲಿ ಶ್ರೀಗಂಧ ಬೆಳೆದು, ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಬಹುದಾಗಿದೆ. ಶ್ರೀಗಂಧ ಮಾರಾಟಕ್ಕಿದ್ದ ನಿರ್ಬಂಧನೆಗಳನ್ನು ಸಡಿಲಿಸಲಾಗಿದೆ ಎಂದು ಹೇಳಿದ್ದಾರೆ.

ಜೊತೆಗೆ ಹಿರೆ ಸೂಲೆ ಕೆರೆ ಕರಡಿ ಸಂರಕ್ಷಣಾ ಮೀಸಲು ಪ್ರದೇಶ, ಚಿಕ್ಕಸಂಗಮ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶ, ಮುಂಡಿಗೆ ಕೆರೆ ಮತ್ತು ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶ ಹಾಗೂ ಬೋನಾಳ ಪಕ್ಷಿ ಸಂರಕ್ಷಣಾ ಮೀಸಲು ಪ್ರದೇಶಗಳನ್ನು ಘೋಷಿಸಬೇಕು ಎಂಬ ಅರಣ್ಯ ಇಲಾಖೆ ಪ್ರಸ್ತಾವನೆಗಳಿಗೆ ಅನುಮೋದಿಸಲಾಗಿದೆ. ರಾಜ್ಯದಲ್ಲಿ ಹೊಸದಾಗಿ ಉತ್ತಾರೆ ಗುಡ್ಡ ವನ್ಯಜೀವಿಧಾಮ, ಬಂಕಾಪುರ ವನ್ಯಜೀವಿಧಾಮ ಮತ್ತು ಅರಸೀಕೆರೆ ಕರಡಿ ಧಾಮಗಳ ಘೋಷಣೆಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ʼಸಿʼ ಗ್ರೂಪ್ ಮತ್ತು ʼಡಿʼ ಗ್ರೂಪ್ ನೌಕರರ ವರ್ಗಾವಣೆ ತಿದ್ದುಪಡಿ ನೀತಿ ಅನುಷ್ಠಾನಗೊಳಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮಾಹಿತಿ ನೀಡಿದ್ದಾರೆ.

ಹೊಸ ನೀತಿಯಿಂದ 4-5 ವರ್ಷಗಳಲ್ಲಿ 45-50 ಸಾವಿರ ಕೋಟಿ ರೂ. ಹೂಡಿಕೆ ಸಾಧ್ಯತೆ: ಡಾ.ಕೆ ಸುಧಾಕರ್‌
ಬೆಂಗಳೂರು: ಬೆಂಗಳೂರಿನಲ್ಲಿ ಆರ್ಮಿ ಡಿಸೈನ್‌ ಬ್ಯೂರೋದ ರೀಜಿನಲ್‌ ಟೆಕ್ನಾಲಜಿ ನೋಡ್‌ (ಆರ್‌ಟಿಎನ್‌) ಉದ್ಘಾಟನಾ ಸಮಾರಂಭದಲ್ಲಿ ಸೋಮವಾರದಂದು  ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, ʼಕರ್ನಾಟಕ ಸರ್ಕಾರ ಜಾರಿಗೊಳಿಸುತ್ತಿರುವ ʼಏರೋಸ್ಪೇಸ್‌ ಮತ್ತು ಡಿಫೆನ್ಸ್‌ ನೀತಿ 2022-2027ʼ, ರಕ್ಷಣಾ ವಲಯದಲ್ಲಿ ಸ್ವದೇಶಿ ಉತ್ಪನ್ನಗಳನ್ನು ಹೆಚ್ಚಿಸಿ ಆತ್ಮನಿರ್ಭರತೆ ಸಾಧಿಸಲು ನೆರವಾಗಲಿದೆʼ ಎಂದು ಹೇಳಿದ್ದಾರೆ.

ಸಮಾರಂಭದಲ್ಲಿ ಮಾತನಾಡಿದ ಅವರು, ʼವೈಮಾನಿಕ ಕ್ಷೇತ್ರದಲ್ಲಿ ಭಾರತ ಬಹಳ ಪ್ರಗತಿ ಸಾಧಿಸಿದೆ. ಇತ್ತೀಚೆಗೆ ಕೊಚ್ಚಿಯಲ್ಲಿ ಸ್ವದೇಶಿ ನಿರ್ಮಿತ ಐಎನ್‌ಎಸ್‌ ವಿಕ್ರಾಂತ್‌ ಮೂಲಕ ರಕ್ಷಣಾ ಕ್ಷೇತ್ರದ ಸಾಮರ್ಥ್ಯ ಹೆಚ್ಚಾಗಿದೆ. ಕರ್ನಾಟಕವು ಎಲ್ಲಾ ಕ್ಷೇತ್ರಗಳಲ್ಲಿ ಹೂಡಿಕೆದಾರರ ಆದ್ಯತೆಯ ಕೇಂದ್ರವಾಗಿದೆ. ಬೆಂಗಳೂರಿನಲ್ಲಿ ಬಹಳ ಹಿಂದೆಯೇ ಎಚ್‌ಎಎಲ್‌ ಸಂಸ್ಥೆ ಆರಂಭವಾಗಿದ್ದರಿಂದ, ವಿಮಾನಯಾನ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿ ಸಾಧಿಸಿತು. ಏರೋಸ್ಪೇಸ್‌ ಮತ್ತು ಡಿಫೆನ್ಸ್‌ ನೀತಿ ತಂದ ಮೊದಲ ರಾಜ್ಯವೂ ಕರ್ನಾಟಕವೇ ಆಗಿದ್ದು, ವೈಮಾನಿಕ ಕ್ಷೇತ್ರದಲ್ಲಿ ಮುಂಚೂಣಿ ಸಾಧಿಸಿದೆ ಎಂದರು.

ದೇಶದ ಶೇ.25 ರಷ್ಟು ವಿಮಾನ ಹಾಗೂ ಅಂತರಿಕ್ಷ ನೌಕೆಯ ತಯಾರಿಕಾ ಉದ್ಯಮಗಳು ಕರ್ನಾಟಕದಲ್ಲೇ ಇದ್ದು, ಈ ಕ್ಷೇತ್ರದಲ್ಲಿ ರಾಜ್ಯ ಪ್ರಾಬಲ್ಯ ಹೊಂದಿದೆ. ರಕ್ಷಣಾ ಕ್ಷೇತ್ರಕ್ಕೆ ಪೂರೈಕೆಯಾಗುವ ಹೆಲಿಕಾಪ್ಟರ್‌, ವಿಮಾನಗಳಲ್ಲಿ ಶೇ.67 ರಷ್ಟು ರಾಜ್ಯದಲ್ಲೇ ತಯಾರಾಗುತ್ತಿವೆ. ರಾಜ್ಯ ಸರ್ಕಾರ ಏರೋಸ್ಪೇಸ್‌ ಮತ್ತು ಡಿಫೆನ್ಸ್‌ ನೀತಿಯನ್ನು ಜಾರಿ ಮಾಡಲಿದ್ದು, ಇದು ಹೊಸ ತಂತ್ರಜ್ಞಾನಗಳೊಂದಿಗೆ ಸ್ವದೇಶಿ ಉತ್ಪನ್ನಗಳ ತಯಾರಿಕೆಗೆ ಸಂಪೂರ್ಣ ಉತ್ತೇಜನ ನೀಡಲಿದೆ ಎಂದು ಮಾತನಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಆತ್ಮನಿರ್ಭರ ಪರಿಕಲ್ಪನೆಯಡಿ ʼಮೇಕ್‌ ಇನ್‌ ಇಂಡಿಯಾʼ ಹಾಗೂ ʼಸ್ಕಿಲ್‌ ಇಂಡಿಯಾʼ ಯೋಜನೆ ನೀಡಿದ್ದಾರೆ. ಈಗ ಹೊಸ ʼಏರೋಸ್ಪೇಸ್‌ ಮತ್ತು ಡಿಫೆನ್ಸ್‌ ನೀತಿ 2022-2027ʼ ಯಿಂದ ರಾಜ್ಯದಲ್ಲಿ 4-5 ವರ್ಷಗಳಲ್ಲಿ 45-50 ಸಾವಿರ ಕೋಟಿ ರೂ. ಹೂಡಿಕೆ ನಿರೀಕ್ಷಿಸಬಹುದು. ಇದರಿಂದ ಹೆಚ್ಚು ಉದ್ಯೋಗ ಸೃಷ್ಟಿಯ ಜೊತೆಗೆ, ಸಂಶೋಧನೆ ಮತ್ತು ಅಭಿವೃದ್ಧಿಯ ಬಲವರ್ಧನೆಯಾಗಲಿದೆ. ಹಾಗೆಯೇ, ಈ ನೀತಿಯಿಂದ ಉದ್ಯಮ ನಡೆಸುವ ಪ್ರಕ್ರಿಯೆಗಳು (ಈಸ್‌ ಆಫ್‌ ಡೂಯಿಂಗ್‌ ಬಿಸ್‌ನೆಸ್‌) ಸರಳವಾಗಲಿದೆ ಎಂದು ಹೇಳಿದರು.

ಕೋವಿಡ್‌ ಸಾಂಕ್ರಾಮಿಕದ ನಂತರ ಆರ್ಥಿಕತೆಯ ಪ್ರಗತಿಗೆ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ರಾಜ್ಯ ಸರ್ಕಾರ ಆಯೋಜಿಸಿದ್ದು, 9.5 ಲಕ್ಷ ಕೋಟಿ ಹೂಡಿಕೆಗೆ ಒಪ್ಪಂದಗಳು ನಡೆದಿವೆ. ಹೂಡಿಕೆಯ ವಿಚಾರದಲ್ಲಿ ಈ ಮಟ್ಟಿಗೆ ಉದ್ಯಮಿಗಳ ವಿಶ್ವಾಸವನ್ನು ರಾಜ್ಯ ಗಳಿಸಿದೆ ಎಂದು ತಿಳಿಸಿದರು.

ಭಾರತೀಯ ಸೇನೆಯ ಯಾವುದೇ ಕಾರ್ಯಕ್ರಮ, ಯೋಜನೆಗಳಿಗೆ ಕರ್ನಾಟಕ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ. ಬೆಂಗಳೂರಿನಲ್ಲಿ ಭಾರತೀಯ ಸೇನೆಯ ರೀಜಿನಲ್‌ ಟೆಕ್ನಾಲಜಿ ನೋಡ್‌ ಸ್ಥಾಪನೆ ಮಾಡಿರುವ ಭಾರತೀಯ ಸೇನೆಯ ನಡೆ ಅತ್ಯಂತ ಸ್ವಾಗತಾರ್ಹವಾಗಿದ್ದು, ಇದು ನವೋದ್ಯಮ, ಎಂಎಸ್‌ಎಂಇ ಮೊದಲಾದವುಗಳಿಗೆ ಹೊಸ ಅವಕಾಶಗಳನ್ನು ನೀಡಲಿದೆ. ರಾಜ್ಯ ಸರ್ಕಾರವು ʼಏರೋಸ್ಪೇಸ್‌ ಮತ್ತು ಡಿಫೆನ್ಸ್‌ ನೀತಿ 2022-2027ʼ ಜಾರಿಗೊಳಿಸುತ್ತಿರುವ ಕಾಲದಲ್ಲೇ ಆರ್‌ಟಿಎನ್‌ ಆರಂಭವಾಗುತ್ತಿದೆ. ರಕ್ಷಣಾ ವಲಯದ ಆಧುನೀಕರಣ, ರಕ್ಷಣಾ ಕ್ಷೇತ್ರದಲ್ಲಿ ಆಮದು ಇಳಿಕೆ ಹಾಗೂ ರಫ್ತು ಉತ್ತೇಜನದಲ್ಲಿ ಕರ್ನಾಟಕ ಮುಖ್ಯ ಪಾತ್ರ ವಹಿಸಲು ಈ ಕ್ರಮಗಳು ಕಾರಣವಾಗಲಿದೆ. ಈ ಮೂಲಕ ಆತ್ಮನಿರ್ಭರ ಭಾರತವನ್ನು ಸಾಧಿಸಬಹುದಾಗಿದೆ ಎಂದರು.

ಕನ್ನಡಿಗರೇ ಆದ ಲೆಫ್ಟಿನೆಂಟ್‌ ಜನರಲ್‌ ಬಿ.ಎಸ್‌.ರಾಜು ಹಾಗೂ ಲೆಫ್ಟಿನೆಂಟ್‌ ಕರ್ನಲ್‌ ಬಿ.ಕೆ.ರೆಪ್ಸ್‌ವಾಲ್‌ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಆರ್‌ಟಿಎನ್‌ ಆರಂಭವಾಗಿದೆ. ಬೆಂಗಳೂರು ತಂತ್ರಜ್ಞಾನದ ರಾಜಧಾನಿ, ನವೋದ್ಯಮಗಳ ಕೇಂದ್ರವಾಗಿದ್ದು, ಇಲ್ಲಿ ಆರ್‌ಟಿಎನ್‌ಗೆ ಪೂರಕ ವಾತಾವರಣವಿದೆ. ಈ ಕೇಂದ್ರದಿಂದ ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ ಭಾರತ ಪರಿಕಲ್ಪನೆ ಸಾಕಾರವಾಗಲಿದೆ. ಸೇನೆಗೆ ಬೇಕಾದ ಎಲ್ಲಾ ತಂತ್ರಜ್ಞಾನ, ಉಪಕರಣಗಳನ್ನು ಭಾರತೀಯರೇ, ಭಾರತದಲ್ಲೇ ಅದರಲ್ಲೂ ಬೆಂಗಳೂರಿನಲ್ಲಿ ತಯಾರಿಸುವ ಕೆಲಸವನ್ನು ಸೇನೆ ಮಾಡುತ್ತಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ತುಂಬು ಹೃದಯದ ಅಭಿನಂದನೆ ತಿಳಿಸುತ್ತೇನೆ ಎಂದು ಸಚಿವ ಡಾ.ಕೆ.ಸುಧಾಕರ್‌ ಸೇನೆಗೆ ಧನ್ಯವಾದ ಅರ್ಪಿಸಿದರು.