Kannada Medium School – Peepal Media

ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ ಹಾಗೂ ಕೇಂದ್ರದ ಹಿಂದಿ ಹೇರಿಕೆಯಿಂದ ಕನ್ನಡ ನಾಶವಾಗುತ್ತಿದೆ: ರಮೇಶ್‌ ಬೆಲ್ಲಂಕೊಂಡ
ಬೆಂಗಳೂರು: ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ ಹಾಗೂ ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯ ನೀತಿಗಳಿಂದ ಕನ್ನಡ ಭಾಷೆ ನಾಶವಾಗುತ್ತಿದೆ. ಒಂದೆಡೆ ಸಾವಿರಾರು ವಿದ್ಯಾರ್ಥಿಗಳು ಪ್ರಥಮ ಭಾಷೆ ಕನ್ನಡದಲ್ಲಿಯೇ ಅನುತ್ತೀರ್ಣರಾಗಿದ್ದಾರೆ. ಕನ್ನಡ ಓದಲು ಮತ್ತು ಬರೆಯಲು ಬರುತ್ತಿಲ್ಲ. ಮತ್ತೊಂದೆಡೆ ಕೇಂದ್ರ ಸರ್ಕಾರದ ಉದ್ಯೋಗಗಳಲ್ಲಿ ಹಿಂದಿಯೇತರ ಭಾಷಿಗರನ್ನು ಹೊರಗಿಡುವ ವ್ಯವಸ್ಥಿತ ಹುನ್ನಾರ ಚಾಲ್ತಿಯಲ್ಲಿದೆ. ಕರ್ನಾಟಕದಲ್ಲಿ ಕನ್ನಡ ಉಳಿಯಬೇಕೆಂದರೆ ನ್ಯಾಯಯುತವಾದ ದ್ವಿಭಾಷಾ ನೀತಿ ಜಾರಿಯಾಗಬೇಕು. ಕರ್ನಾಟಕದೊಳಗೆ ನಮ್ಮ ಪ್ರಾದೇಶಿಕ ಭಾಷೆ ಕನ್ನಡ ಹಾಗೂ ಭಾರತದ ಒಳಗೆ ಮತ್ತು ಹೊರಗಿನ ಪ್ರಪಂಚದೊಂದಿಗೆ ಸಂವಹನ ನಡೆಸಲು ಇಂಗ್ಲಿಷ್ ಭಾಷೆ; ಇವೆರಡೂ ಶಿಕ್ಷಣ, ಆಡಳಿತ ಮತ್ತು ಸಾಮಾನ್ಯ ಸಂವಹನದಲ್ಲಿ ಕಡ್ಡಾಯ ಭಾಷೆಗಳಾಗಬೇಕು. ಕನ್ನಡ ಮಾಧ್ಯಮ ಶಾಲೆಗಳ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಿರ್ಣಾಯಕ ಕ್ರಮ ಕೈಗೊಳ್ಳಬೇಕು ಎಂದು ಡಾ. ರಮೇಶ್‌ ಬೆಲ್ಲಂಕೊಂಡ ಒತ್ತಾಯಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಮ್‌ ಆದ್ಮಿ ಪಾರ್ಟಿ ರಾಜ್ಯ ಉಪಾಧ್ಯಕ್ಷ ಡಾ. ರಮೇಶ್ ಬೆಲ್ಲಂಕೊಂಡ, ಕನ್ನಡ ಮಾಧ್ಯಮದಲ್ಲಿ ಓದಿದ ಸಾವಿರಾರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಕನ್ನಡ ವಿಷಯದಲ್ಲೇ ಅನುತ್ತೀರ್ಣಗೊಂಡಿರುವ ಕುರಿತು ಆತಂಕ ವ್ಯಕ್ತಪಡಿಸಿದರು. ಈ ಬಾರಿಯ ಕನ್ನಡ ಮಾಧ್ಯಮ ಶಾಲೆಗಳ ಫಲಿತಾಂಶ ಕೇವಲ ಶೇ 52 ದಾಖಲಾಗಿದೆ. ಶೇ 48ರಷ್ಟು ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿದ್ದಾರೆ. ಕೊಪ್ಪಳ ಜಿಲ್ಲೆಯೊಂದರಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಸುಮಾರು 22 ಸಾವಿರ ವಿದ್ಯಾರ್ಥಿಗಳ ಪೈಕಿ 8 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿಲ್ಲ. ಇದು ಕನ್ನಡ ಶಾಲೆಗಳ ಗುಣಮಟ್ಟ, ಶಿಕ್ಷಕರ ಬೋಧನಾ ಗುಣಮಟ್ಟಗಳ ಬಗ್ಗೆ ಗಂಭೀರ ಪ್ರಶ್ನೆಯನ್ನು ಹುಟ್ಟುಹಾಕಿದೆ. ಕನ್ನಡ ಶಾಲೆಗಳ ಅಗತ್ಯತೆ ಬಗ್ಗೆ ಪೋಷಕರು ಪ್ರಶ್ನಿಸುವಂತಾಗಿದೆ. ಸಮವಸ್ತ್ರ, ಶೂಗಳು, ಪುಸ್ತಕಗಳು, ಬಿಸಿಯೂಟ, ಮೊಟ್ಟೆ, ಚಿಕ್ಕಿ ಹೀಗೆ ಸಾಕಷ್ಟು ಉಚಿತ ಕೊಡುಗೆಗಳನ್ನು ರಾಜ್ಯ ಸರ್ಕಾರ ನೀಡುತ್ತಲೇ ಬಂದಿದೆ. ಆದರೆ ಉತ್ತಮ ಗುಣಮಟ್ಟದ ಶಿಕ್ಷಣವನ್ನೇ ನೀಡುತ್ತಿಲ್ಲ ಎಂದಾದರೆ ಏನು ಕೊಟ್ಟು ಏನು ಬಂತು? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಂದೆಡೆ ಕನ್ನಡ ಮಾಧ್ಯಮ ಶಾಲೆಗಳಿಂದ ಕಳಪೆ ಶಿಕ್ಷಣ, ಮತ್ತೊಂದೆಡೆ ಕೇಂದ್ರ ಸರ್ಕಾರದಿಂದ ಹಿಂದಿ ಹೇರಿಕೆ. ಸಾಲದ್ದಕ್ಕೆ ಸಂಸ್ಕೃತವನ್ನು ಹೇರುವ ಪ್ರಯತ್ನ ನಡೆಯುತ್ತಿದೆ. ಇದರಿಂದ ಕನ್ನಡದ ಕಗ್ಗೋಲೆಯಾಗುತ್ತಿದೆ. ಕನ್ನಡಿಗರನ್ನು ಹಿಂದಿಗರ ಗುಲಾಮರನ್ನಾಗಿಸಲಾಗುತ್ತಿದೆ. ಹಿಂದಿಯನ್ನು ಹೇರುವ ಮೂಲಕ ಕನ್ನಡವನ್ನು ಎರಡನೇ ದರ್ಜೆಯ ಭಾಷೆಯಾಗಿ ಪರಿಗಣಿಸಲಾಗುತ್ತಿದೆ ಮತ್ತು ಭಾರತದಲ್ಲಿ ಕನ್ನಡಿಗರನ್ನು ಎರಡನೇ ದರ್ಜೆಯ ಭಾರತೀಯರಂತೆ ನೋಡಲಾಗುತ್ತಿದೆ. ಭಾಷಾ ನೀತಿಗಳು ಮತ್ತು ಆಚರಣೆಗಳು ಹಿಂದಿ ಹೇರಿಕೆಯ ಪರವಾಗಿವೆ. ದೇಶದಲ್ಲಿ ಭಾಷಾ ಅಸಮಾನತೆ ಮತ್ತು ಭಾಷಾ ಅನ್ಯಾಯ ಅಸ್ತಿತ್ವದಲ್ಲಿದೆ. ದೇಶದ ಹಿಂದಿಯೇತರ ಜನಸಂಖ್ಯೆಯ ಮೇಲೆ ಹಿಂದಿಯನ್ನು ಹೇರಲಾಗುತ್ತಿದೆ.ಕೇಂದ್ರ ಸರ್ಕಾರದ ಪ್ರಚಲಿತ ಆಚರಣೆಗಳು ಮತ್ತು ನೀತಿಗಳ ಪರಿಣಾಮವಾಗಿ ಕರ್ನಾಟಕ ಸೇರಿದಂತೆ ದೇಶದ ಇತರ ಅನೇಕ ರಾಜ್ಯಗಳಲ್ಲಿ ಭಾಷಾ ಅಸಮಾನತೆ ಅಸ್ತಿತ್ವದಲ್ಲಿದೆ. ಕೇಂದ್ರ ಸರ್ಕಾರದ ಉದ್ಯೋಗಗಳು ಮತ್ತು ಇತರೆ ಅವಕಾಶಗಳು ಹಿಂದಿಯವರಿಗೆ ಸಿಗುವಂತೆ ನೋಡಿಕೊಳ್ಳಲಾಗುತ್ತಿದೆ. ಪ್ರಸ್ತುತ, ಬಹುಪಾಲು ಅಥವಾ ಸಂಪೂರ್ಣವಾಗಿ, UPSC ಪರೀಕ್ಷೆಗಳು, SSC ಪರೀಕ್ಷೆಗಳು, ಬ್ಯಾಂಕ್ ಅಧಿಕಾರಿಗಳ ಪರೀಕ್ಷೆಗಳು, ರೈಲ್ವೆ ಪರೀಕ್ಷೆಗಳು, ಕೇಂದ್ರೀಯ ವಿಶ್ವವಿದ್ಯಾಲಯಗಳ ಪರೀಕ್ಷೆ ಸೇರಿದಂತೆ ಮುಂತಾದವುಗಳನ್ನು ಹಿಂದಿ ಮತ್ತು ಇಂಗ್ಲಿಷ್​ನಲ್ಲಿ ಮಾತ್ರ ನಡೆಸಲಾಗುತ್ತದೆ. ಈ ನೀತಿ ಮತ್ತು ಅಭ್ಯಾಸವು ಹಿಂದಿಯೇತರ ಭಾರತೀಯರಿಗಿಂತ ಹಿಂದಿ ಭಾರತೀಯರಿಗೆ ಹೆಚ್ಚು ಅನುಕೂಲ ಮಾಡಿಕೊಡುತ್ತಿದೆ. ಇತ್ತೀಚೆಗೆ ಕೇಂದ್ರ ಸರ್ಕಾರವು ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಬ್ಯಾಂಕಿಂಗ್ ವಿಶೇಷ ಭಾಷಾ ಅಧಿಕಾರಿಗಳ ನೇಮಕಾತಿಯನ್ನು ಘೋಷಿಸಿತ್ತು. ಅದಕ್ಕೆ ಬೇಕಾದ ವಿದ್ಯಾರ್ಹತೆ ಹಿಂದಿ ಅಥವಾ ಸಂಸ್ಕೃತದಲ್ಲಿ ಸ್ನಾತಕೋತ್ತರ ಪದವಿ. ಕನ್ನಡ ಸೇರಿದಂತೆ ಬೇರೆ ಯಾವುದೇ ಭಾಷೆಗೆ ಅಲ್ಲಿ ಸ್ಥಾನವಿರಲಿಲ್ಲ. ಈ ಅಧಿಕಾರಿಗಳ ಕಾರ್ಯವೇನೆಂದರೆ ಕರ್ನಾಟಕ ಸೇರಿದಂತೆ ಭಾರತದ ಎಲ್ಲೆಡೆ ಬ್ಯಾಂಕ್​ಗಳಲ್ಲಿ ಹಿಂದಿ ಬಳಕೆಯನ್ನು ಕ್ರಮೇಣ ಹೆಚ್ಚಿಸುವುದೇ ಆಗಿದೆ. ಇದು ಅತ್ಯಂತ ಅಪಾಯಕಾರಿಯಾಗಿದೆ ಎಂದು ರಮೇಶ್‌ ಬೆಲ್ಲಂಕೊಂಡ ಆತಂಕ ವ್ಯಕ್ತಪಡಿಸಿದರು.

ಈ ಸಂದರ್ಭ ಮಾತನಾಡಿದ ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಸುರೇಶ್ ರಾಥೋಡ್, ಹಿಂದಿ ಭಾರತದ ರಾಷ್ಟ್ರ ಭಾಷೆ ಅಲ್ಲ. ಭಾರತೀಯ ಸಂವಿಧಾನವು ಯಾವುದೇ ರಾಷ್ಟ್ರ ಭಾಷೆಯನ್ನು ನಿರ್ದಿಷ್ಟ ಪಡಿಸಿಲ್ಲ. ಸಂವಿಧಾನದ ಶೆಡ್ಯೂಲ್ 8 ರಲ್ಲಿ22 ಭಾಷೆಗಳಿದ್ದು, ಅದರಲ್ಲಿ ಹಿಂದಿಯೂ ಒಂದಾಗಿದೆ. ಆದರೆ 342 ರಿಂದ 351 ನೇ ವಿಧಿಗಳಲ್ಲಿ, ಸಂವಿಧಾನವು ಹಿಂದಿಗೆ ವಿಶೇಷ ಪ್ರಾಮುಖ್ಯತೆಯನ್ನು ನೀಡಬೇಕು ಎಂದು ಹೇಳುತ್ತದೆ. ಇದರರ್ಥ ಎಲ್ಲಾ ಪ್ರಮುಖ ಹಿಂದಿಯೇತರ ಭಾರತೀಯ ಭಾಷೆಗಳಿಗೆ ಕಡಿಮೆ ಪ್ರಾಮುಖ್ಯತೆಯನ್ನು ನೀಡಬೇಕು ಎಂದಾಗುತ್ತದೆ. ಇದು ನಮ್ಮ ಸಂವಿಧಾನದ ಮೂಲ ಆಶಯವಾದ ಸಮಾನತೆ ಮತ್ತು ನೈಸರ್ಗಿಕ ನ್ಯಾಯದ ಮೂಲಭೂತ ತತ್ವಗಳಿಗೆ ವಿರುದ್ಧವಾಗಿದೆ. ಹಾಗಾಗಿ ಹಿಂದಿಗೆ ನೀಡಲಾದ ಈ ವಿಶೇಷ ಸ್ಥಾನವನ್ನು, ಸಂವಿಧಾನದಲ್ಲಿಯೇ ಇರುವ ಅವಕಾಶದಂತೆ, ಸವಿಂಧಾನದ ತಿದ್ದುಪಡಿಯೊಂದಿಗೆ ತೆಗೆದುಹಾಕಬೇಕಿದೆ. ಆಗ ಎಲ್ಲಾ ಭಾರತೀಯರಿಗೆ ಸಮಾನವಾದ ನ್ಯಾಯವನ್ನು ದೊರಕಿಸಿಕೊಡುವಂತಾಗುತ್ತದೆ ಎಂದು ಆಗ್ರಹಿಸಿದರು.

ಇಂಗ್ಲಿಷ್ ಅನ್ನು ದ್ವೇಷಿಸುವುದರಿಂದ ಹಿಂದಿ ಹೇರಿಕೆಯನ್ನು ಸುಗಮಗೊಳಿಸಿದಂತಾಗುತ್ತದೆ. ಹಿಂದಿಯೇತರ ಭಾರತೀಯರನ್ನು ಮತ್ತಷ್ಟು ಕಡೆಗಣಿಸಲು ಅನುಕೂಲ ಮಾಡಿಕೊಟ್ಟಂತಾಗುತ್ತದೆ ಎಂಬುದನ್ನು ಕನ್ನಡಿಗರು ಮನಗಾಣಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಪಕ್ಷದ ಮುಖಂಡರಾದ ಶಶಿಧರ್ ಆರಾಧ್ಯ, ಸಶಾ ವಲಿ, ನವೀನ್ ಅಯ್ಯರ್ ಮತ್ತಿತರರು ಉಪಸ್ಥಿತರಿದ್ದರು.

ಇತರ ರಾಜ್ಯಗಳಲ್ಲಿ ‘ಕನ್ನಡ ಮಾಧ್ಯಮ ಶಾಲೆಗಳನ್ನು’ ಬಲಪಡಿಸುವ ಗುರಿ: ಬೊಮ್ಮಾಯಿ
ಬೆಂಗಳೂರು: ಕರ್ನಾಟಕವನ್ನು ಹೊರತುಪಡಿಸಿ ಇತರ ರಾಜ್ಯಗಳಲ್ಲಿ ʼಕನ್ನಡ ಮಾಧ್ಯಮ ಶಾಲೆʼಗಳನ್ನು ಬಲಪಡಿಸುವ ಗುರಿಯನ್ನು ಕರ್ನಾಟಕ ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಹೇಳಿದ್ದಾರೆ.

ಮಾಧ್ಯಮ ಭವನದಲ್ಲಿ ಆಯೋಜಿಸಿದ್ದ ‘ಕರುನಾಡ ಸಂಭ್ರಮ’ ಕಾರ್ಯಕ್ರಮವನ್ನು ಉದ್ಘಾಟಿಸಿದ ನಂತರ, ಈ ಕುರಿತು ಮಾತನಾಡಿದ ಅವರು, ಗಡಿ ಪ್ರದೇಶಗಳಲ್ಲಿ ಕನ್ನಡ ಮಾಧ್ಯಮ ಶಾಲೆಗಳ ಅಭಿವೃದ್ಧಿಯ ಜೊತೆಗೆ, ಇತರ ರಾಜ್ಯಗಳಲ್ಲೂ ಕನ್ನಡ ಶಾಲೆಗಳನ್ನು ಸುಧಾರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಬೊಮ್ಮಾಯಿ ಹೇಳಿದರು.

ಕನ್ನಡವು ರಾಜ್ಯದ ಜನರ ಅಸ್ಮಿತೆಯಾಗಿದೆ ಮತ್ತು ಅದನ್ನು ರಕ್ಷಿಸಬೇಕು ಎಂದ ಅವರ, ಕನ್ನಡಿಗರನ್ನು ದೇಶದಲ್ಲಿ ಎಲ್ಲಿಯೇ ಹೋದರೂ, ಜನರು ಅವರನ್ನು ಕನ್ನಡಿಗರು ಎಂದು ಗುರುತಿಸುತ್ತಾರೆ ಎಂದರು.

ʼನಮ್ಮ ಭೂಮಿ ಸಾಕಷ್ಟು ವಿಶೇಷ ಮತ್ತು ವಿಭಿನ್ನವಾಗಿದೆ. ಕರ್ನಾಟಕಕ್ಕೆ ನೀಡಿರುವ ಹೊಸ ಟ್ಯಾಗ್ಲೈನ್ ‘ದೇವರ ಜೀವಂತ ದೇಶ’ ಎಂದು ತಿಳಿಸಿದರು.

ಕನ್ನಡ ವಿದ್ವಾಂಸರನ್ನು ಅಭಿನಂದಿಸಿದ ಅವರು, ಎಂಟು ಕನ್ನಡ ವಿದ್ವಾಂಸರು ಪ್ರತಿಷ್ಠಿತ ‘ಜ್ಞಾನಪೀಠ’ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ ಮತ್ತು ದೇಶದ ಬೇರೆ ಯಾವುದೇ ರಾಜ್ಯವು ಈ ಪ್ರಶಸ್ತಿಯನ್ನು ಪಡೆದಿಲ್ಲ ಎಂದು ಹೇಳಿದರು.

ಕನ್ನಡದ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸಿದ ಅವರುʼಕನ್ನಡ ನಾಡಿನಲ್ಲಿ ಜನಿಸಿರುವುದು ನನ್ನ ಅದೃಷ್ಟ ಎಂದು ಭಾವಿಸುತ್ತೇನೆ. ಕರ್ನಾಟಕದ ಜನರಿಗಾಗಿ ಹೆಚ್ಚಿನದನ್ನು ಮಾಡಲು ನನಗೆ ಅವಕಾಶ ಸಿಕ್ಕಾಗಲೆಲ್ಲಾ ನಾನು ಕರ್ನಾಟಕದಲ್ಲಿ ಹುಟ್ಟಲು ಬಯಸುತ್ತೇನೆʼ ಎಂದರು.

ಈ ವೇಳೆ ಮಹಾರಾಷ್ಟ್ರದ ಕನ್ನಡ ಮಾಧ್ಯಮ ಶಾಲೆಗಳಿಗೆ ವಿಶೇಷ ಅನುದಾನ ಮತ್ತು ರಾಜ್ಯದ ಏಕೀಕರಣಕ್ಕಾಗಿ ಹೋರಾಡಿದ ನೆರೆಯ ರಾಜ್ಯದ ಕನ್ನಡಿಗರಿಗೆ ಪಿಂಚಣಿ ನೀಡಲು ತಮ್ಮ ಸರ್ಕಾರ ನಿರ್ಧರಿಸಿದೆ ಎಂದು ಅವರು ತಿಳಿಸಿದರು.

ಮಹಾರಾಷ್ಟ್ರದಲ್ಲಿ ವಾಸಿಸುವ ಹೆಚ್ಚಿನ ಸಂಖ್ಯೆಯ ಕನ್ನಡಿಗರ ಹಿತಾಸಕ್ತಿಗಳನ್ನು ರಕ್ಷಿಸುವುದು ರಾಜ್ಯ ಸರ್ಕಾರದ ಕರ್ತವ್ಯವಾಗಿದೆ ಎಂದ ಅವರು, ಈ ವರ್ಷದ ಸೆಪ್ಟೆಂಬರ್‌ನಲ್ಲಿ, ಕರ್ನಾಟಕ ಸರ್ಕಾರವು ಉನ್ನತ ಶಿಕ್ಷಣ ಮತ್ತು ವೃತ್ತಿಪರ ಕೋರ್ಸ್‌ಗಳಲ್ಲಿ ಕನ್ನಡಿಗರಿಗೆ ಮೀಸಲಾತಿಯನ್ನು ಒದಗಿಸುವ ಮತ್ತು ಕೈಗಾರಿಕೆಗಳಿಗೆ ಯಾವುದೇ ರಿಯಾಯಿತಿಗಳು ಅಥವಾ ಅನುದಾನವನ್ನು ಸ್ಥಳೀಯರಿಗೆ ಉದ್ಯೋಗಗಳೊಂದಿಗೆ ಜೋಡಿಸುವ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದೆ ಎಂದು ಹೇಳಿದ್ದಾರೆ.

ಈ ಮಸೂದೆಯು ಒಬ್ಬ ಕನ್ನಡಿಗನನ್ನು, ಅಂದರೆ ಸಾಮಾನ್ಯವಾಗಿ ಕರ್ನಾಟಕದ ನಿವಾಸಿಯಾಗಿರುವ ಮತ್ತು ಕನ್ನಡವನ್ನು ಓದುವ ಮತ್ತು ಬರೆಯುವ ಜ್ಞಾನವನ್ನು ಹೊಂದಿದವರನ್ನು, ಕಾನೂನುಬದ್ಧ ಪೋಷಕರೆಂದು ವ್ಯಾಖ್ಯಾನಿಸುತ್ತದೆ ಮತ್ತು ನಿಯಮಗಳ ಉಲ್ಲಂಘನೆಯ ಸಂದರ್ಭದಲ್ಲಿ ದಂಡನಾತ್ಮಕ ನಿಬಂಧನೆಗಳನ್ನು ಪ್ರಸ್ತಾಪಿಸುತ್ತದೆ ಎಂದರು.