kannada rajyothsava – Peepal Media

ಕನ್ನಡಿಗರ ಸಂತಸದೊಂದಿಗೆ ನಾನೂ ಭಾಗಿ : ಅರವಿಂದ್‌ ಕೇಜ್ರೀವಾಲ್‌
ಹೊಸದಿಲ್ಲಿ : ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ರವರು ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಕನ್ನಡಿಗರಿಗೆ ಟ್ವೀಟ್‌ ಮಾಡಿ ಶುಭಕೋರಿದ್ದಾರೆ.

ಕರ್ನಾಟಕ ಏಕೀಕರಣದ ಈ ಶುಭ  ಸಂದರ್ಭದಲ್ಲಿ ಸಮಸ್ತ ಕನ್ನಡಿಗರಿಗೆ ಶುಭಾಶಯವನ್ನು ತಿಳಿಸಿದ್ದಾರೆ. ವಿಶ್ವದ ಎಲ್ಲ ಕನ್ನಡಿಗರ  ಸಂತಸದೊಂದಿಗೆ ನಾನೂ ಸಹ ಇದ್ದೇನೆ ಎಂದು ತಮ್ಮ ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.

ಹೊರ ರಾಜ್ಯಗಳ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕಾ ಕಾರ್ಯಕ್ರಮ: ಸಚಿವ ಡಾ.ಕೆ.ಸುಧಾಕರ್‌
ಬೆಂಗಳೂರು: ಜಿಲ್ಲಾಡಳಿತ ವತಿಯಿಂದ ನಡೆದ 67ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ರಾಜ್ಯದ ಎಲ್ಲಾ ವೈದ್ಯಕೀಯ, ಅರೆ ವೈದ್ಯಕೀಯ, ನರ್ಸಿಂಗ್ ಕಾಲೇಜುಗಳ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನು ಕಲಿಸುವ ಕಾರ್ಯಕ್ರಮವನ್ನು ಇದೇ ವರ್ಷದಿಂದ ಜಾರಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಘೋಷಣೆ ಮಾಡಿದ್ದಾರೆ.

ಸಮಾರಂಭದಲ್ಲಿ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್‌, ʼಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿ ಮಾಡಿದ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ, ಮಾತೃಭಾಷಾ ಕಲಿಕೆಗೆ ಆದ್ಯತೆ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಕೆಲ ರಾಜ್ಯಗಳಲ್ಲಿ ಈಗಾಗಲೇ ಮಾತೃಭಾಷೆಯಲ್ಲಿ ಕಲಿಯಲು ಅವಕಾಶ ನೀಡಲಾಗಿದೆ. ಇದೇ ನವ ಭಾರತದ ಪರಿಕಲ್ಪನೆಯಾಗಿದೆ. ಅದೇ ರೀತಿ, ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬಂದ ಎಲ್ಲಾ ವೈದ್ಯಕೀಯ ವಿದ್ಯಾರ್ಥಿಗಳಿಗೆ ಇದೇ ವರ್ಷದಿಂದ ಕನ್ನಡ ಭಾಷೆಯನ್ನು ಕಲಿಸುವ ಕಾರ್ಯಕ್ರಮವನ್ನು ಜಾರಿ ಮಾಡಲಾಗುವುದು. ಕರ್ನಾಟಕದಲ್ಲಿ ನಾವು ಇರುವುದಲ್ಲ, ನಮ್ಮೊಳಗೆ ಕರ್ನಾಟಕ ಇರಬೇಕು. ಅದಕ್ಕಾಗಿ ʼಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ವಿಧೇಯಕ 2022ʼ ತರುವ ಚಿಂತನೆ ಸರ್ಕಾರಕ್ಕಿದೆʼ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಹೋದರೆ ವಿಭಿನ್ನವಾದ ಸೊಗಸಾದ ಭಾಷೆ ಕೇಳಬಹುದು. ಹಳೇ ಮೈಸೂರಿಗೆ ಹೋದರೆ ಬೇರೆ ರೀತಿಯ ಕನ್ನಡ ಕೇಳಬಹುದು. ಉತ್ತರ ಕನ್ನಡ ಜಿಲ್ಲೆಗೆ ಹೋದರೆ ಹವ್ಯಕ ಕನ್ನಡ, ದಕ್ಷಿಣ ಕನ್ನಡಕ್ಕೆ ಹೋದರೆ ಬೇರೆ ಶೈಲಿಯ ಕನ್ನಡ, ಕುಂದಾಪುರಕ್ಕೆ ಹೋದರೆ ಕುಂದ ಕನ್ನಡ ಕೇಳಬಹುದು. ಹಾಗೆಯೇ ಆಚಾರ, ವಿಚಾರ, ತಿಂಡಿಗಳು ಬದಲಾಗುತ್ತವೆ. ಯಕ್ಷಗಾನ, ಬಯಲಾಟ, ವೀರಗಾಸೆ, ದೈವಾರಾಧನೆ, ಜೋಗಪ್ಪ ಮೊದಲಾದ ಕಲೆಗಳು ನಮ್ಮಲ್ಲಿವೆ ಎಂದು ಮಾತನಾಡಿದರು.

ಕನ್ನಡಕ್ಕೆ ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸವಿದ್ದು, ಜಗತ್ತಿನಲ್ಲಿ ಆರೂವರೆ ಸಾವಿರ ಭಾಷೆಗಳಲ್ಲಿ ಕನ್ನಡ 27ನೇ ಸ್ಥಾನದಲ್ಲಿದೆ ಎನ್ನಲಾಗುತ್ತದೆ. ವಿಶ್ವ ಲಿಪಿಗಳ ರಾಣಿ ಎಂದು ಕನ್ನಡದ ಲಿಪಿಯನ್ನು ಬಣ್ಣಿಸಲಾಗಿದೆ. ಭಾರತವನ್ನು ಹಲವಾರು ದಶಕ ಆಳಿದ ಬ್ರಿಟಿಷರ ದೇಶದ ಪ್ರಧಾನಿಯಾಗಿ ಕರ್ನಾಟಕದ ಅಳಿಯ ರಿಷಿ ಸುನಕ್‌ ಆಯ್ಕೆಯಾಗಿದ್ದಾರೆ ಎಂಬುದು ಹೆಮ್ಮೆಯ ವಿಚಾರ ಎಂದರು.

ನಾಡಪ್ರಭು ಕೆಂಪೇಗೌಡರು ಆಗಿನ ಕಾಲದಲ್ಲೇ ಸರ್ವಜನಾಂಗದ ಶಾಂತಿ ತೋಟ ಸ್ಥಾಪಿಸಿದ್ದರು. ಸಮಾನತೆಗೆ ಒತ್ತು ಕೊಟ್ಟಿದ್ದ ಅವರು, ಜಾತಿ ಸಮುದಾಯಗಳಿಗೆ ಪೂರಕವಾಗಿ ಪೇಟೆಗಳನ್ನು ನಿರ್ಮಾಣ ಮಾಡಿದ್ದರು. ಅಂತಹ ಪುಣ್ಯಾತ್ಮನನ್ನು ನಮ್ಮ ಸರ್ಕಾರ ಸ್ಮರಣೆ ಮಾಡುತ್ತಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 108ಅಡಿ ಎತ್ತರದ ಪ್ರತಿಮೆ ನಿರ್ಮಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್‌ 11ರಂದು ಈ ಪ್ರತಿಮೆ ಅನಾವರಣ ಮಾಡಲಿದ್ದಾರೆ. ಇದು ಬೆಂಗಳೂರು ಗ್ರಾಮಾಂತರದ ಜನರಿಗೆ ವಿಶೇಷ ಕ್ಷಣವಾಗಿದ್ದು, ಜನರು ಹೆಚ್ಚಿನ ಸಂಖ್ಯೆಯಲ್ಲಿ ಆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದರು.

100 ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. 438 ನಮ್ಮ ಕ್ಲಿನಿಕ್‌ಗಳನ್ನು ಇದೇ ನವೆಂಬರ್‌ನಲ್ಲಿ ಆರಂಭಿಸಲಾಗುವುದು. ಬಡತನ ರೇಖೆಗಿಂತ ಕೆಳಗಿರುವವರಿಗೆ ಗುಣಮಟ್ಟದ ಶಿಕ್ಷಣ, ಆರೋಗ್ಯ ನೀಡುವ ಕೆಲಸವಾಗುತ್ತಿದೆ ಎಂದು ಮಾತನಾಡಿದರು.

ರಾಜ್ಯದ ಯುವಜನರು ಕನ್ನಡ ಭಾಷೆ, ಸಾಹಿತ್ಯವನ್ನು ಹೆಚ್ಚು ಅಧ್ಯಯನ ಮಾಡಬೇಕು. ಕನ್ನಡಿಗರು ವಿಶ್ವಮಾನವರಾಗಬೇಕು ಎಂದು ಕವಿ ಕುವೆಂಪು ಹೇಳಿದ್ದರು. ಅದರ ಜೊತೆಗೆ ಕನ್ನಡ ಭಾಷೆ ಎಲ್ಲರಲ್ಲೂ ಗಟ್ಟಿಯಾಗಿ ಬೇರೂರಬೇಕು ಎಂದರು.

ತನು ಕನ್ನಡ, ಮನ ಕನ್ನಡ ಎಂಬಂತೆ ನಮ್ಮೆಲ್ಲರ ಮನಸ್ಸು, ಹೃದಯ ಎಲ್ಲವೂ ಕನ್ನಡವಾಗಲಿ ಎಂದು ಹಾರೈಸುತ್ತೇನೆ. ರಾಷ್ಟ್ರಕವಿ ಕುವೆಂಪು ಅವರು ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಎಂದು ಹೇಳಿದ್ದರು. ಅದು ನಮಗೆ ಸ್ಪೂರ್ತಿಯಾಗಬೇಕು ಎಂದು ಹೇಳಿದರು.

ಕನ್ನಡವೇ ನನ್ನ ಗುರುತು: ನಟ ಕಿಶೋರ್‌ ಕುಮಾರ್
ಬೆಂಗಳೂರು : ಕರ್ನಾಟಕ ರಾಜ್ಯೋತ್ಸವದ ಕನ್ನಡಿಗರ ಈ ವಿಶೇಷ ದಿನದಂದು ನಟ ಕಿಶೋರ್‌ ಕುಮಾರ್‌, ಕನ್ನಡ ಎಂದರೆ ಬರೀ ಭಾಷೆಯಲ್ಲಅದು ನನ್ನ ಅಸ್ಮಿತೆ, ಕನ್ನಡ ಎಂದರೆ ನಾನು ಎಂದು  ಕನ್ನಡದ ಬಗ್ಗೆ ಒಂದು ಕವಿತೆ ಬರೆದು ಕನ್ನಡಾಭಿಮಾನವನ್ನು ವ್ಯಕ್ತಪಡಿಸಿದ್ದಾರೆ.

ಸದಾ ನಾಡು, ನುಡಿ, ಪ್ರಚಲಿತ ವಿಷಯಗಳ ಕುರಿತು ನೇರವಾಗಿ ಮಾತನಾಡುವ ಇವರು ಕನ್ನಡದ ಪ್ರಜ್ಞಾವಂತ ನಟರಲ್ಲಿ ಒಬ್ಬರು. ಸದಾ ಸಾರ್ವಜನಿಕ ವಿಷಯಗಳಿಗೆ ಮಿಡಿಯುತ್ತಿರುತ್ತಾರೆ. ತಾನು ಸೆಲೆಬ್ರಿಟಿ ಎನ್ನುವ ಹಮ್ಮು ಬಿಮ್ಮಿಲ್ಲದೆ ಜನರೊಂದಿಗೆ ಬೆರೆಯುವ ಇವರು ಅಭಿಮಾನಿಗಳ ಪಾಲಿಗೆ ಪ್ರೀತಿಯ ಹುಲಿ.

ಕನ್ನಡ ಬರಿ ಭಾಷೆ ಮಾತ್ರವಲ್ಲ ಎಂದು ಹೇಳಿರುವ ಕನ್ನಡದ ನಟ ಕಿಶೋರ್‌ ಕುಮಾರ್‌ ಕನ್ನಡ ಭಾಷೆಯನ್ನು ಪರಿಸರದ ಜೀವ ಸಂಕುಲಗಳನ್ನು ಒಳಪಡಿಸಿಕೊಂಡು, ಊರು ಕೇರಿಗಳು, ಆಹಾರ , ಕೆರೆ ಕುಂಟೆ ಜೊತೆಗೆ ತನ್ನನ್ನೂ ಸೇರಿಸಿ ಕನ್ನಡ ಭಾಷೆಯ ಬಗ್ಗೆ ಕವಿತೆ ಬರೆದು ತಮ್ಮ ಪೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

“ಕನ್ನಡ, ಬರಿ ಭಾಷೆ ಮಾತ್ರವಲ್ಲ,
ಬೇಲಿಯಲ್ಲ,
ಕನ್ನಡವೆಂದರೆ ನಾನೆಂದೆ.
ಎನ್ನಡಕಗಳ,
ಹೆಣ್ಣು- ಗಂಡುಗಳ,
ಜಾತಿ, ಮತ, ದೈವಗಳ
ಬಡವ-ಶ್ರೀಮಂತಗಳ,
ಉಣಿಸು- ತಿನಿಸುಗಳ,
ಹಳ್ಳಿಗಳ – ಊರುಗಳ,
ಹೊಲಗದ್ದೆ, ಕಾಡುಗಳ
ಕೆರೆ – ಕುಂಟೆ, ನದಿ, ಸಾಗರಗಳ
ಹಾಡು – ಪಾಡುಗಳ
ಮಣ್ಣುಗಳ ಮಾತುಗಳ
ಒಟ್ಟುಮೊತ್ತ ನಾನೆಂದೆ.
ಕನ್ನಡ ಬರಿ ಭಾಷೆ ಮಾತ್ರವಲ್ಲ
ನನ್ನಸ್ಮಿತೆಯೆಂದೆ.
ಕನ್ನಡವೆಂದರೆ ನಾನು ಎಂದೆ.” ಎಂದು ಬರೆದು ತನ್ನಲ್ಲಿರುವ ಕನ್ನಡ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ.

ಕರವೇ ರಾಜ್ಯೋತ್ಸವ: ಕನ್ನಡವನ್ನು ಪ್ರೀತಿಸಿ, ಬಳಸಿ
ಬೆಂಗಳೂರು: ಕರ್ನಾಟಕದ ಜನತೆಗೆ ನವೆಂಬರ್ 1 ಹೆಮ್ಮೆಯ ದಿನವಾಗಿದೆ. ಪ್ರತಿ ವರ್ಷ ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವವನ್ನು ಬಹಳ ಅದ್ಧೂರಿಯಿಂದ ಆಚರಣೆ ಮಾಡಲಾಗುತ್ತದೆ. ಪ್ರತಿ ವರ್ಷದಂತೆ ಇಂದು ಅಂದರೆ ನವೆಂಬರ್ 1ನೇ ತಾರೀಖು ಕೂಡ ಕರವೇ ಮುಖ್ಯ ಕಛೇರಿ ಬಳಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯ್ತು.

ಗಾಂಧಿನಗರದ ಕಚೇರಿಯ ಮುಂಭಾಗ ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೇರಿಸಿ‌ ಮಾತನಾಡಿದ ಅವರು ಕನ್ನಡವು ಪ್ರತಿಯೊಬ್ಬ ಕನ್ನಡಿಗರ ಹೃದಯದ ಭಾಷೆಯಾಗಬೇಕು ಎಂದರು.

ಧ್ವಜಾರೋಹಣ ಮಾಡಿ ಮಾತನಾಡಿದ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ‌ರಾದ ಡಾ.ಸಿ.ಎನ್.ಮಂಜುನಾಥ್ ಅವರು, ನಮ್ಮದು ವೈಭವದ ಪರಂಪರೆಯ ನಾಡು, ನಾವು ಎಷ್ಟೇ ದೊಡ್ಡವರಾದರೂ ಎಲ್ಲೇ ಇದ್ದರೂ ಕನ್ನಡವನ್ನು ಪ್ರೀತಿಸಬೇಕು, ಕನ್ನಡವನ್ನೇ ಬಳಸಬೇಕು ಎಂದು ತಿಳಿಸಿದರು.

ಜಯದೇವ ಆಸ್ಪತ್ರೆಯಲ್ಲಿ ರಾಜ್ಯೋತ್ಸವವನ್ನು ನಾವು ವಿಶಿಷ್ಠ ರೀತಿಯಿಂದ ಆಚರಿಸಿದೆವು. 41 ವರ್ಷದ ಕೂಲಿ ಕಾರ್ಮಿಕನೊಬ್ಬನಿಗೆ ಹೃದಯ ಕಸಿ (ಟ್ರಾನ್ಸ್ ಪ್ಲಾಂಟ್) ಮಾಡಿದೆವು. ಇಂಥ ಸಂಭ್ರಮಗಳು ನಮಗೆ ಸಾರ್ಥಕ ಭಾವ ಮೂಡಿಸುತ್ತವೆ ಎಂದು ತಿಳಿಸಿದರು.

ಕನ್ನಡದ ಬಳಕೆಯೇ ಕಡಿಮೆಯಾಗಿ ಇಂಗ್ಲಿಷ್ ಮೆರೆಯುತ್ತಿದ್ದಾಗ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಉಳಿಸುವ ಕೆಲಸ ಮಾಡುತ್ತಿದೆ. ಬೆಂಗಳೂರಿನಲ್ಲಿ ಇಂದು ಕನ್ನಡ ಉಳಿದಿದೆ ಎಂದರೆ ಅದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಕಾರಣ ಎಂದರು. ಕರವೇ ಮುಖಂಡರು, ಕಾರ್ಯಕರ್ತರ ಹೃದಯಗಳು ಪ್ರತಿನಿತ್ಯ ಕನ್ನಡಿಗರಿಗಾಗಿ, ಕರ್ನಾಟಕಕ್ಕಾಗಿ ಮಿಡಿಯುತ್ತಿವೆ. ಅದು ಸಂತೋಷದ ವಿಷಯ ಎಂದು ತಿಳಿಸಿದರು.

ವೇದಿಕೆಯ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಅಧ್ಯಕ್ಷತೆ ವಹಿಸಿ‌ ಮಾತನಾಡಿ‌ ಎಸ್ ಎಸ್ ಸಿ ಪರೀಕ್ಷೆಗಳು ಕನ್ನಡದಲ್ಲೇ ನಡೆಯಬೇಕು, ಕನ್ನಡಿಗರಿಗೆ ಉದ್ಯೋಗ ನಡೆಯಬೇಕು, ಇಲ್ಲವಾದಲ್ಲಿ ಸರ್ಕಾರ ತೀವ್ರ ರೂಪದ ಪ್ರತಿಭಟನೆ ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಿದರು.

ದೇಶ ಒಂದೇ ನಮ್ಮದು, ಭಾಷೆಯೂ ಒಂದೇ ಎಂಬುದನ್ನು ನಾವು ಒಪ್ಪುವುದಿಲ್ಲ, ಇದು ಹಿಂದಿ ದೇಶವಲ್ಲ‌. ಬಹುಭಾಷೆಗಳ ದೇಶವಾಗಿದ್ದು,ಎಸ್ ಎಸ್ ಸಿ ಪರೀಕ್ಷೆಗಳನ್ನು ಹಿಂದಿ, ಇಂಗ್ಲಿಷ್ ನಲ್ಲಿ ಮಾತ್ರ ನಡೆಸುತ್ತಿರುವುದು ಸರಿಯಲ್ಲ. ನಾವು ಈಗಾಗಲೇ ಇದರ ವಿರುದ್ಧ ಪ್ರತಿಭಟನೆ ನಡೆಸಿ ಕನ್ನಡದಲ್ಲೂ ಪರೀಕ್ಷೆ ನಡೆಸಲು ಆಗ್ರಹಿಸಿದ್ದೇವೆ ಎಂದರು.

ಈಗ ಕೇಂದ್ರ ಸರ್ಕಾರದ ಇಲಾಖೆಗಳ ಕಾನ್ಸ್‌ಟೇಬಲ್ ಹುದ್ದೆಗಳನ್ನೂ ಸಹ ಕೇವಲ ಹಿಂದಿ, ಇಂಗ್ಲಿಷ್ ನಲ್ಲಿ ನಡೆಸಲಾಗುತ್ತಿದೆ. ಇದನ್ನು ಒಪ್ಪುವುದು ಸಾಧ್ಯವಿಲ್ಲ.
ಒಡೆದು ಚೂರಾಗಿದ್ದ ಕನ್ನಡ ನಾಡು ಒಂದಾದ ದಿನವನ್ನು ನಾವು ಕನ್ನಡ ರಾಜ್ಯೋತ್ಸವವಾಗಿ ಆಚರಿಸುತ್ತೇವೆ. ಆದರೆ ಇನ್ನೂ ಕನ್ನಡಿಗರ ಸಮಸ್ಯೆಗಳು ಪರಿಹಾರವಾಗದೇ ಇರುವುದು ನೋವಿನ ವಿಷಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಖ್ಯಾತ ನಟಿ‌‌ ಮೇಘನಾ ರಾಜ್ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ(ಡಿಸಿಪಿ) ಲಕ್ಷ್ಮಣ ನಿಂಬರ್ಗಿ ಅವರು ಭಾಗವಹಿಸಿದ್ದರು.

ರಾಜ್ಯದಾದ್ಯಂತ ʼಕೋಟಿಕಂಠ ಗಾಯನʼ ಕಾರ್ಯಕ್ರಮ : 1.15 ಕೋಟಿಗಿಂತಲೂ ಹೆಚ್ಚು ಜನ ನೋಂದಣಿ
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 67ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಇಂದು ನನ್ನ ನಾಡು ನನ್ನ ಹಾಡು ಶೀರ್ಷಿಕೆಯಡಿ ರಾಜ್ಯಾದ್ಯಂತ ಕೋಟಿ ಕಂಠ ಗಾಯನ ವಿಶೇಷ ಕಾರ್ಯಕ್ರಮ ಆಯೋಜಿಸಿದ್ದು, ಇಂದು ಬೆಳಗ್ಗೆ 11 ಗಂಟೆಯಿಂದ ರಾಜ್ಯಾದ್ಯಂತ ಕಾರ್ಯಕ್ರಮಗಳು ಜರುಗುತ್ತಿವೆ.

ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 67ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಇಂದು ನನ್ನ ನಾಡು ನನ್ನ ಹಾಡು ಶೀರ್ಷಿಕೆಯಡಿ ರಾಜ್ಯಾದ್ಯಂತ ಕೋಟಿ ಕಂಠ ಗಾಯನ ವಿಶೇಷ ಕಾರ್ಯಕ್ರಮ ಆಯೋಜಿಸಿದ್ದು, ಇಂದು ಬೆಳಗ್ಗೆ 11 ಗಂಟೆಯಿಂದ ರಾಜ್ಯಾದ್ಯಂತ ಕಾರ್ಯಕ್ರಮಗಳು ಜರುಗುತ್ತಿವೆ

ಕರ್ನಾಟಕ ಸರ್ಕಾರ 67ನೇ  ಕನ್ನಡ ರಾಜ್ಯೋತ್ಸವದ ಅಂಗವಾಗಿ ಇಂದು ರಾಜ್ಯಾದ್ಯಂತ ಕೋಟಿಕಂಠ ಗಾಯನ ಕಾರ್ಯಕ್ರಮವನ್ನು ಆಯೋಜಿಸಿಲಾಗಿದೆ. ಈಗಾಗಲೇ 1.15 ಕೋಟಿಗಿಂತಲೂ ಹೆಚ್ಚು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಲು ನೋಂದಣಿ ಮಾಡಿಸಿದ್ದು, ಸಾವಿರಾರು ಮಂದಿ ಕಾರ್ಯಕ್ರದದಲ್ಲಿ ಗೀತಗಾಯನಕ್ಕೆ ಸಿದ್ಧರಾಗಿದ್ದಾರೆ.

ಬೆಂಗಳೂರಿನಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ 50ಸಾವಿರ ಮಂದಿ ʼಜಯ  ಭಾರತ ಜನನಿಯ ತನುಜಾತೆʼ, ಹುಯಿಲಗೋಳ ನಾರಾಯಣರಾಯರ ʼಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡುʼ, ನಾಡೋಜ ಡಾ.ಚೆನ್ನವೀರ ಕಣವಿಯವರ ʼವಿಶ್ವ ವಿನೂತನ ವಿದ್ಯಾ ಚೇತನʼ, ಡಾ.ಡಿ.ಎಸ್‌ ಕರ್ಕಿರವರ ʼಹಚ್ಚೇವು ಕನ್ನಡದ ದೀಪʼ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು, ಮತ್ತು ಕುವೆಂಪುರವರ ಬಾರಿಸು ಕನ್ನಡ ಡಿಂಡಿಮವʼ ಈ ಆರು ಹಾಡುಗಳನ್ನು ಏಕಕಾಲಕ್ಕೆ ಸಿದ್ದತೆ ನಡೆಸಲಾಗುತ್ತಿದೆ.

ನಗರದ ಮೆಟ್ರೋ ನಿಲ್ಧಾಣಗಳು, ವಿಮಾನ ನಿಲ್ದಾಣ, ಆಟೋ ನಿಲ್ದಾಣ, ಕಾರಾಗೃಹ, ಐಟಿಬಿಟಿ ಸಂಸ್ಥೆಗಳು, ಲಾಲ್ ಬಾಗ್‌ ಸೇರಿದಂತೆ ಬೆಂಗಳೂರಿನ ಹಲವೆಡೆ ಮೈಸೂರು ಅರಮನೆ ,ಚಿತ್ರದುರ್ಗ ಕೋಟೆ, ಮಂಗಳೂರು, ಕೊಪ್ಪಳ ಇನ್ನೂ ರಾಜ್ಯದ ನಾನಾ ಭಾಗಗಳಲ್ಲಿ ಸರ್ಕಾರ ಆಯೋಜಿಸಿರುವ ಕೋಟಿಕಂಠ ಗಾಯನದ ಸಂಭ್ರಮ ನಡೆಸಲಾಗುತ್ತಿದೆ.

ಪ್ರತೀ ವಿಧಾನಸಭಾ ಕ್ಷೇತ್ರದಲ್ಲೂ ʼಕೋಟಿಕಂಠ ಗಾಯನʼ ಕಾರ್ಯಕ್ರಮ ಜರುಗಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಲಹೆ ನೀಡಿದೆ.