karnataka congrees – Peepal Media

ಸೌಜನ್ಯ ಪರ ವಿಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಗೆ ಪೊಲೀಸ್ ನೋಟಿಸ್
ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ವಿಡಿಯೋ ಮಾಡಿದ್ದ ಸಮೀರ್ ಎಂ.ಡಿ. ಅವರ ಮನೆಗೆ ಮಾರ್ಚ್ 6ರ, ಬುಧವಾರ ತಡರಾತ್ರಿ ಪೊಲೀಸರು ಪ್ರವೇಶಿಸಿದ್ದಾರೆ. ಬಂಧಿಸಲು ಯತ್ನಿಸಿ, ಆನಂತರ ನೋಟಿಸ್ ನೀಡಿರುವುದಾಗಿ ವರದಿಯಾಗಿದೆ. ಈ ಬಗ್ಗೆ ಬುಧವಾರ ರಾತ್ರಿ 1ಗಂಟೆ ಸುಮಾರಿ ತಮ್ಮ ಫೇಸ್ ಬುಕ್ ಲೈವ್ ನಲ್ಲಿ ಮಾಹಿತಿ ನೀಡಿರುವ ಸಮೀರ್ ತಮ್ಮ ಮೇಲಾಗುತ್ತಿರುವ ಟ್ರೋಲ್ ಗಳು, ಮತ್ತು ಅವರ ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದಾರೆ.

ಸಮೀರ್ ತಮ್ಮ ಯೂಟ್ಯೂಬ್ ನಲ್ಲಿ ಧರ್ಮಸ್ಥಳ ಸೌಜನ್ಯ ಪ್ರಕರಣದ ಬಗ್ಗೆ ಇತ್ತೀಚೆಗೆ ಮಾಡಿದ್ದ ವೀಡಿಯೊವೊಂದು ಹೆಚ್ಚು ವೈರಲ್ ಆಗಿತ್ತು, ಆ ಮೂಲಕ ರಾಜ್ಯದಾದ್ಯಂತ ಮತ್ತೆ ಸೌಜನ್ಯ ಪ್ರಕರಣ ಮುನ್ನಲೆಗೆ ಬಂದಿದೆ. ಈ ನಡುವೆ ಸಮೀರ್ ಅವರ ಧರ್ಮವನ್ನು ಮುನ್ನಲೆಗೆ ತಂದು ಅವರನ್ನು ಅವಮಾನಿಸುತ್ತಿರುವವರಿಗೆ ಪ್ರತಿಕ್ರಿಯೆ ನೀಡಿರುವ ಸಮೀರ್, ಜನರು ಜಾತಿ ಮತ್ತು ಧರ್ಮವನ್ನು ಈ ವಿಷಯಕ್ಕೆ ಏಕೆ ಎಳೆದು ತರುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಈ  ನಡುವೆ ಎಡಿಜಿಪಿ ( ಕಾನೂನು ಮತ್ತು ಸುವ್ಯವಸ್ಥೆ) ಅವರು ಹೊರಡಿಸಿದ್ದಾರೆ ಎನ್ನಲಾದ ಆದೇಶದ ಪ್ರತಿಯೊಂದು ಬುಧವಾರ ಸಂಜೆಯಿಂದ ವೈರಲ್ ಆಗಿದೆ. ಈ ಆದೇಶದಲ್ಲಿ “ಸಮೀರ್ ವೀಡಿಯೊದಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದ್ದು, ಸಾಮಾಜಿಕ ಮಾಧ್ಯಮ ಮಾನಿಟರಿಂಗ್ ಸೆಲ್ ಚುರುಕುಗೊಳಿಸಿ ಕ್ರಮ ಕೈಗೊಳ್ಳಬೇಕು” ಎಂಬ ಆದೇಶ ನೀಡಲಾಗಿದ್ದು, ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ.

ಎಡಿಜಿಪಿ ಹೊರಡಿಸಿದ್ದಾರೆ ಎನ್ನಲಾದ ಈ ಆದೇಶದಲ್ಲಿ, “ಇತ್ತೀಚಿಗೆ ಸಮೀರ್ ಎಂಬಾತನು ಸಾಮಾಜಿಕ ಜಾಲತಾಣದಲ್ಲಿ ಈ ಹಿಂದೆ ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋವನ್ನು ಹರಿಬಿಟ್ಟದ್ದು, ಘಟಕಾಧಿಕಾರಿಗಳು ಈ ವಿಷಯವನ್ನು ತಮ್ಮ ಘಟಕಗಳಲ್ಲಿರುವ Social Media Monitoring Cell ಮುಖೇನ ಮೇಲಾಧಿಕಾರಿಗಳ ಗಮನಕ್ಕೆ ತರುವಲ್ಲಿ ವಿಫಲರಾಗಿರುತ್ತೀರಿ. ಈ ವಿಷಯ ಕುರಿತಂತೆ ಸಾರ್ವಜನಿಕರಲ್ಲಿ ಪರ/ವಿರೋಧ ಅನಿಸಿಕೆಗಳು ಉದ್ಭವಿಸಿ ಸಾಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿರುತ್ತದೆ. ಆದ್ದರಿಂದ, Social Media Monitoring Cell ಚುರುಕುಗೊಳಿಸುವುದು ಹಾಗೂ ಈ ಕುರಿತಂತೆ ಕೈಗೊಂಡ ಕ್ರಮದ ಬಗ್ಗೆ ಮಾನ್ಯ ಎಡಿಜಿಪಿ, ಕಾನೂನು ಮತ್ತು ಸುವ್ಯವಸ್ಥೆ ರವರಿಗೆ ಮಾಹಿತಿ ನೀಡುವುದು” ಎಂದು ಹೇಳಿದೆ.

ಮಾಜಿ ಪೊಲೀಸ್ ಅಧಿಕಾರಿ, ಸೌಜನ್ಯ ಪರ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದ ಗಿರೀಶ್ ಮಟ್ಟಣ್ಣನವರ್ ಅವರ ಜೊತೆಗೆ ಸಮೀರ್ ಅವರು ಬುಧವಾರ ತಡರಾತ್ರಿ ಫೇಸ್‌ಬುಕ್ ಲೈವ್‌ನಲ್ಲಿ ತನಗೆ ವ್ಯಾಪಕ ಜೀವ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಹೇಳಿದ್ದಾರೆ.

ಲೈವ್‌ನಲ್ಲಿ ಮಾತನಾಡಿದ ಸಮೀರ್, “ಪ್ರಸ್ತುತ ನನ್ನ ಪರಿಸ್ಥತಿ ತುಂಬಾ ಕೆಟ್ಟದಾಗಿದ್ದು, ಈಗಾಗಲೆ ಪೊಲೀಸ್ ನೋಟಿಸ್ ಬಂದಿದೆ. ಸುಮಾರು ರಾತ್ರಿ 10;45ರ ಹೊತ್ತಿಗೆ ಪೊಲೀಸರು ಬಂದು ನೋಟಿಸ್ ಕೊಟ್ಟು ಹೋಗಿದ್ದಾರೆ. ಅದಾಗ್ಯೂ ನನಗೆ ಯಾವುದೇ ಭಯವಿಲ್ಲ. ನಾನು ವಿಡಿಯೊದಲ್ಲಿ ಹೇಳಿರುವ ಎಲ್ಲಾ ವಿಚಾರಗಳಿಗೂ ಸಾಕ್ಷಿಯಿದೆ. ನನಗೆ ಕಾನೂನಿನ ಮೇಲೆ ನಂಬಿಕೆಯಿದ್ದು, ಕೋರ್ಟ್‌ನ ಮುಂದೆ ಮತ್ತಷ್ಟು ವಿಸೃತವಾಗಿ ಮಂಡಿಸುತ್ತೇನೆ. ಈ ಬಗ್ಗೆ ಯಾವುದೇ ತೊಂದರೆಯಿಲ್ಲ” ಎಂದು ಹೇಳಿದ್ದಾರೆ.

ಪ್ರಸ್ತುತ ತನಗೆ ತೊಂದರೆ ಆಗುತ್ತಿರುವುದು, ಮುಸ್ಲಿಮನೊಬ್ಬ ಧರ್ಮಸ್ಥಳ ಸೌಜನ್ಯ ಪ್ರಕರಣದ ಬಗ್ಗೆ ಮಾತನಾಡಿದ್ದೆ ತಪ್ಪು ಹಾಗೂ ಹಿಂದೂ ವಿರೋಧಿ ಎಂದು ಬಿಂಬಿಸಲಾಗುತ್ತಿದೆ ಆದರೆ, ನಾನು ಅನ್ಯಾಯದ ವಿರುದ್ಧ ಧ್ವನಿಯೆತ್ತಿದ್ದೇನೆ, ಅದು ನನ್ನ ಧರ್ಮ, ಅದನ್ನು ನಾನು ಪಾಲಿಸುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.

“ಒಂದು ವೇಳೆ ನಾನು ಹಿಂದೂ ವಿರೋಧಿ ಆಗಿದ್ದರೆ, ಒಬ್ಬ ಹಿಂದೂ ಹುಡುಗಿಗೆ ಆಗಿರುವ ಅನ್ಯಾಯದ ಬಗ್ಗೆ ನಾನು ಯಾಕೆ ಧ್ವನಿ ಎತ್ತಬೇಕು? ನ್ಯಾಯದ ಬಗ್ಗೆ ಮಾತನಾಡೋಣ. ಅದುವೇ ಧರ್ಮ” ಎಂದು ಸಮೀರ್ ಅವರು ಫೇಸ್‌ಬುಕ್ ಲೈವ್‌ನಲ್ಲಿ ಹೇಳಿದ್ದಾರೆ.

ಭಾರತ ಐಕ್ಯತಾ ಯಾತ್ರೆಗೆ ಹೆಚ್ಚೆಚ್ಚು ಜನ ಭಾಗವಹಿಸಿ, ಬೆಂಬಲಿಸಿ: ಸಿದ್ದರಾಮಯ್ಯ
ಬೆಂಗಳೂರು: ಕಾಂಗ್ರೆಸ್ಸಿನ ನಾಯಕರಾದ ರಾಹುಲ್‌ ಗಾಂಧಿ ಅವರ ನಾಯಕತ್ವದಲ್ಲಿ ಇಂದು ರಾಜ್ಯಕ್ಕೆ ಆಗಮಿಸಿರುವ ಭಾರತ ಐಕ್ಯತಾ ಯಾತ್ರೆಗೆ ಹೆಚ್ಚೆಚ್ಚು ಜನ ಭಾಗವಹಿಸಿ, ಬೆಂಬಲಿಸಿ ಎಂದು ರಾಜ್ಯದ ಜನತೆಗೆತೆ ಸಿದ್ದರಾಮಯ್ಯನವರು ಕರೆ ನೀಡಿದರು.

ಜೊತೆಗ ರಾಹುಲ್‌ ಗಾಂಧಿ @RahulGandhi ಅವರ ಜೊತೆಗೂಡಿ ವನಸಿರಿ ಹೋಟೆಲ್ ಗೆ ತೆರಳಿ ಉಪಾಹಾರ ಸೇವಿಸುತ್ತಾ, ಯಾತ್ರೆ ಕುರಿತಾಗಿ ಸಮಾಲೋಚನೆ ನಡೆಸಿದೆ. ದೇಶವನ್ನು ಒಂದುಗೂಡಿಸುವ ನಮ್ಮ ಈ ಯಾತ್ರೆಗೆ ಹೆಚ್ಚೆಚ್ಚು ಜನರು ಬಂದು ಭಾಗವಹಿಸಿ, ಬೆಂಬಲಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಟ್ವೀಟ್‌ ಮೂಲಕ ಮನವಿ ಮಾಡಿದರು.

ಭಾರತ ಐಕ್ಯತಾ ಯಾತ್ರೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ನಮ್ಮ ನಾಯಕರಾದ @RahulGandhi ಅವರ ಜೊತೆಗೂಡಿ ವನಸಿರಿ ಹೋಟೆಲ್ ಗೆ ತೆರಳಿ ಉಪಾಹಾರ ಸೇವಿಸುತ್ತಾ, ಯಾತ್ರೆ ಕುರಿತಾಗಿ ಸಮಾಲೋಚನೆ ನಡೆಸಿದೆ.
ದೇಶವನ್ನು ಒಂದುಗೂಡಿಸುವ ನಮ್ಮ ಈ ಯಾತ್ರೆಗೆ ಹೆಚ್ಚೆಚ್ಚು ಜನರು ಬಂದು ಭಾಗವಹಿಸಿ, ಬೆಂಬಲಿಸಬೇಕೆಂದು ಮನವಿ ಮಾಡುತ್ತೇನೆ.#BharatJodo pic.twitter.com/mhSl0BGcZm
— Siddaramaiah (@siddaramaiah) September 30, 2022

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

ಇದನ್ನೂ ನೋಡಿ: ರಿಷಬ್ ಶೆಟ್ಟಿ ನಿಜ ಜೀವನದಲ್ಲಿ ಶಿವಾನೇ : ಛಾಯಾಗ್ರಾಹಕ ಅರವಿಂದ್ ಕಶ್ಯಪ್ ಹೀಗೆ ಹೇಳಿದ್ದೇಕೆ?

Reviews KANTARA After Watching Celebrity Show

https://fb.watch/fRPMvrBMda/

ರಾಜ್ಯದಲ್ಲಿ ಸಿಎಂ ಬದಲಾವಣೆ ಕನಸು: ಕಾಂಗ್ರೆಸ್‌ಗೆ ಸುಧಾಕರ್‌ ಟಾಂಗ್‌
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುತ್ತಾ? ಎನ್ನುವ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌ ಘಟಕಕ್ಕೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ರಾಜ್ಯದಲ್ಲಿ  ದಕ್ಷ ನಾಯಕತ್ವದೊಂದಿಗೆ ಸರ್ಕಾರ ಸುಭದ್ರವಾಗಿದೆ ಎಂದು ತಿರುಗೇಟು ನೀಡಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು,  ಗಾಜಿನ ಮನೆಯಲ್ಲಿ ನಿಂತು ಅನ್ಯರತ್ತ ಕಲ್ಲು ತೂರುತ್ತಿರುವ ಕಾಂಗ್ರೆಸಿಗರ ಮನಃಸ್ಥಿತಿಯ ಬಗ್ಗೆ ಅಯ್ಯೋ ಎನ್ನಿಸುತ್ತಿದೆ. ದಿಲ್ಲಿ ಮಾಲೀಕರು ಕಳುಹಿಸಿದ ಚೀಟಿ ಆಧಾರದ ಮೇಲೆ ಮುಖ್ಯಮಂತ್ರಿಗಳನ್ನು ಬದಲಾಯಿಸಿದ ಘನ ಉದಾಹರಣೆ ನಿಮ್ಮ ಪಕ್ಷಕ್ಕೆ ಮಾತ್ರ ಇದೆ ಎಂದು ಕಾಂಗ್ರೆಸ್‌ ಪಕ್ಷವನ್ನು ವ್ಯಂಗಿಸಿದ್ದಾರೆ.

ಗಾಜಿನ ಮನೆಯಲ್ಲಿ ನಿಂತು ಅನ್ಯರತ್ತ ಕಲ್ಲು ತೂರುತ್ತಿರುವ ಕಾಂಗ್ರೆಸಿಗರ ಮನಃಸ್ಥಿತಿಯ ಬಗ್ಗೆ ಅಯ್ಯೋ ಎನ್ನಿಸುತ್ತಿದೆ.

ದಿಲ್ಲಿ ಮಾಲೀಕರು ಕಳುಹಿಸಿದ ಚೀಟಿ ಆಧಾರದ ಮೇಲೆ ಮುಖ್ಯಮಂತ್ರಿಗಳನ್ನು ಬದಲಾಯಿಸಿದ ಘನ ಉದಾಹರಣೆ ನಿಮ್ಮ ಪಕ್ಷಕ್ಕೆ ಮಾತ್ರ ಇದೆ.

1/4 https://t.co/AQmQZyepfg
— Dr Sudhakar K (@mla_sudhakar) August 9, 2022

ಕಾಂಗ್ರೆಸ್ ಆಳ್ವಿಕೆ ಕಾಲದಲ್ಲಿ ಸಿಎಂ ಎಂದರೆ ಚೀಫ್ ಮಿನಿಸ್ಟರ್ ಬದಲು ಚೀಟಿ ಮಿನಿಸ್ಟರ್ ಎಂಬಂತಾಗಿತ್ತು. ದಿಲ್ಲಿ ಪೋಸ್ಟ್ ಮ್ಯಾನ್ ಗಳು ಕಳುಹಿಸಿದ ಚೀಟಿ ಆಧಾರದ ಮೇಲೆ ಕಾಂಗ್ರೆಸ್ ಬದಲಾಯಿಸಿದ ಮುಖ್ಯಮಂತ್ರಿಗಳ ಸಂಖ್ಯೆಯ ಲೆಕ್ಕ ಕೊಡಬೇಕೆ? ಮುಖ್ಯಮಂತ್ರಿ ಸ್ಥಾನದ ಘನತೆ- ಗೌರವಗಳನ್ನು ಹಾಳುಗೆಡವಿದ್ದೇ ಕಾಂಗ್ರೆಸ್. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮನೆಯ ಗೇಟ್ ಕೀಪರ್ ಗಳ ರೀತಿ ಕಾಂಗ್ರೆಸ್ ಮುಖ್ಯಮಂತ್ರಿಗಳು ವರ್ತಿಸಿದ ಇತಿಹಾಸ ಇದೆ. ಆದರೆ ಮುಖ್ಯಮಂತ್ರಿ ಗಾದಿಯ ಕನಸು ಕಾಣುತ್ತಿರುವ ರಾಜ್ಯದ ಇಬ್ಬರು ಹಿರಿಯ ನಾಯಕರು ಈಗಲೇ ಗಾಂಧಿ ಕುಟುಂಬದ ಗೇಟ್ ಕಾಯುತ್ತಿರುವುದು ವರ್ತಮಾನ ಎಂದಿದ್ದಾರೆ.

ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಎಂಬುದು ಕಾಂಗ್ರೆಸ್ ಕಾಣುತ್ತಿರುವ ಕನಸು. ಬೊಮ್ಮಾಯಿ ಅವರ ದಕ್ಷ ನಾಯಕತ್ವದಲ್ಲಿ ಬಿಜೆಪಿ ಸರಕಾರ ಸುಭದ್ರವಾಗಿದೆ. ಆದರೆ ಕಾಂಗ್ರೆಸ್ ನ ಡಬಲ್ ಡೋರ್ ಬಸ್ಸಿನಿಂದ ಯಾರು, ಯಾರನ್ನು ಕೆಳಗಿಳಿಸುತ್ತಾರೆ ಎಂಬುದು ಸದ್ಯದಲ್ಲೇ ಗೊತ್ತಾಗುತ್ತದೆ ಎಂದು ಕಾಂಗ್ರೆಸ್‌ ಘಟಕಕ್ಕೆ ಟಾಂಗ್‌ ಕೊಡುವ ಮೂಲಕ ತಮ್ಮ ಪಕ್ಷದ ಆಡಳಿತದ ಬಗ್ಗೆ ಸಮರ್ಥನೆ ಮಾಡಿಕೊಂಡಿದ್ದಾರೆ.