karnataka govt – Peepal Media

ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಿಗೆ ವಿಶೇಷ ಆದೇಶ ಹೊರಡಿಸಿದ ರಾಜ್ಯ ಸರ್ಕಾರ ; ಏನದು ಹೊಸ ಆದೇಶ?
ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಡುವ ಎಲ್ಲಾ ಹಿರಿಯ ನಾಗರೀಕರಿಗೂ ನೇರ ದೇವರ ದರ್ಶನಕ್ಕೆ ಅವಕಾಶ ಕೊಡಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರ ವಿಶೇಷ ಆದೇಶ ಹೊರಡಿಸಿದೆ. ಕೆಲವು ಪ್ರಮುಖ ಅಂಶಗಳನ್ನು ಒಳಗೊಂಡಂತೆ ಹೊರಡಿಸಿದ ಆದೇಶ ಪತ್ರದಲ್ಲಿ ಈ ವಿಶೇಷ ಅಂಶವೂ ಒಳಗೊಂಡಿದೆ.

ಇತ್ತೀಚೆಗೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಾದ ಶಕ್ತಿ ಯೋಜನೆಯಲ್ಲಿ ಕರ್ನಾಟಕದ ಮಹಿಳೆಯರು, ವಯಸ್ಕರು ಹೆಚ್ಚಿನ ಸಂಖ್ಯೆಯಲ್ಲಿ ಧಾರ್ಮಿಕ ಕೇಂದ್ರಗಳಿಗೆ ಹೋಗುತ್ತಿರುವುದು ಕಂಡುಬಂದಿದೆ. ಕರ್ನಾಟಕದ ಧಾರ್ಮಿಕ ಕೇಂದ್ರಗಳಿಗೆ ಪ್ರವಾಸಿಗರು, ಭಕ್ತಾದಿಗಳ ಸಂಖ್ಯೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಈ ವಿಶೇಷ ಆದೇಶವನ್ನು ಸರ್ಕಾರ ಹೊರಡಿಸಿದೆ.

65 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಸರತಿ ಸಾಲಿನಲ್ಲಿ ನಿಲ್ಲಲು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ವಯಸ್ಸಿನ ಆಧಾರದಲ್ಲಿ ಸರತಿ ಸಾಲಿನಲ್ಲಿ ನಿಲ್ಲದೇ ನೇರವಾಗಿ ದೇವರ ದರ್ಶನಕ್ಕೆ ಅನುವು ಮಾಡಿಕೊಡಬೇಕು ಎಂದು ಹೊರಡಿಸಿದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಹಿರಿಯ ನಾಗರಿಕರು ಅವರ ವಯಸ್ಸಿನ ದಾಖಲೆಯಾದ ಆಧಾರ್ ಕಾರ್ಡ್, ಓಟರ್ ಐಡಿಯಂತಹ ದಾಖಲೆಗಳನ್ನು ತೋರಿಸಿ ನೇರ ದೇವರ ದರ್ಶನಕ್ಕೆ ಹೋಗಬಹುದು. ಹಾಗೆಯೇ ದೇವಾಲಯಗಳಲ್ಲಿ ಹೆಚ್ಚಿನ ಸ್ಥಳಾವಕಾಶ ಇದ್ದಲ್ಲಿ ಹಿರಿಯ ನಾಗರಿಕರಿಗೆ ಪ್ರತ್ಯೇಕ ಸ್ಥಳ ಕಾಯ್ದಿರಿಸಲೂ ಸೂಚಿಸಿದೆ.

ದೇವಾಲಯಗಳಲ್ಲಿ ಹಿರಿಯ ನಾಗರೀಕರಿಗೆ ಸಹಾಯ ಕೇಂದ್ರಗಳನ್ನು ಸ್ಥಾಪಿಸಿ, ಅವರೊಂದಿಗೆ ಸಹಕರಿಸಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು. ಸದರಿ ಸಹಾಯ ಕೇಂದ್ರಕ್ಕೆ ಜವಾಬ್ದಾರಿಯುತ ಸಿಬ್ಬಂದಿಗಳನ್ನು ನೇಮಿಸಿ, ಹಿರಿಯ ನಾಗರೀಕರಿಗೆ ತ್ವರಿತ ದರ್ಶನ ವ್ಯವಸ್ಥೆ ಕಲ್ಪಿಸಲು ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳಿಗೆ ಆದೇಶ ಹೊರಡಿಸಿದೆ.

ಮನೆ ಯಜಮಾನಿಗೆ 2000 ರೂ: ಅರ್ಜಿ ಸಲ್ಲಿಸೋದು ಹೇಗೆ?
ಈಗಾಗಲೇ ‘ಶಕ್ತಿ ಯೋಜನೆ’ ಹೆಸರಿನ ಅಡಿಯಲ್ಲಿ ರಾಜ್ಯದ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣವನ್ನು ಅನುಷ್ಠಾನಕ್ಕೆ ತಂದ ಕಾಂಗ್ರೆಸ್ ಸರ್ಕಾರ, ಈಗ ‘ಗೃಹಲಕ್ಷ್ಮಿ’ ಯೋಜನೆಗೆ ಮಾರ್ಗಸೂಚಿ ಹೊರಡಿಸಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿಡುಗಡೆ ಮಾಡಿರುವ ಪ್ರಸ್ತಾವನೆಯಲ್ಲಿ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳು ಯಾರು, ಯಾವ ರೀತಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು, ನಂತರ ಯಾವಾಗ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ಬರಲಿದೆ ಎಂಬ ಬಗ್ಗೆ ತಿಳಿಸಿದೆ.

ಮೇ 20 ರಂದು ಕರೆದ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡ ಗೃಹಲಕ್ಷ್ಮಿ ಯೋಜನೆಯಲ್ಲಿ ಪ್ರತಿ ಕುಟುಂಬದ ಯಜಮಾನಿಗೆ 2,000 ರೂಪಾಯಿಯ ಮಾಸಿಕ ಭತ್ಯೆ ನೀಡುವ ಬಗೆಗಿನ ಪ್ರಸ್ತಾಪದಲ್ಲಿ ಒಂದಷ್ಟು ನಿಯಮಗಳನ್ನು ಹೊರಡಿಸಲಾಗಿದೆ. ಅದರಂತೆ

* ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ಗುರುತಿಸಿಕೊಂಡ ಮಹಿಳೆ ಈ ಯೋಜನೆಯ ಅರ್ಹ ಫಲಾನುಭವಿ ಆಗಿರುತ್ತಾರೆ.

* ಒಂದು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರು ಇದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸತಕ್ಕದ್ದು.

* ಯೋಜನೆಯ ಫಲಾನುಭವಿಗಳು ಇದೇ ಜೂನ್ 15 ರಿಂದ ಜುಲೈ 15 ರ ವರೆಗೆ ಅರ್ಜಿ ಸಲ್ಲಿಸಬಹುದು.

* ಅರ್ಜಿದಾರರು ಸೇವಾಸಿಂಧು ಪೋರ್ಟಲ್ ಅಥವಾ ತಾವೇ ಖುದ್ದು ಅಧಿಕಾರಿಗಳ ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.

* ಯೋಜನೆಯ ಸೌಲಭ್ಯ ಪಡೆಯುವ ಅರ್ಜಿದಾರರ ಬ್ಯಾಂಕ್ ಖಾತೆಯ ವಿವರ ಮತ್ತು ಆಧಾರ್ ಕಾರ್ಡ್ ಗಳನ್ನು ಜೋಡಣೆ ಮಾಡಬೇಕಿದೆ.

* ಜುಲೈ 15 ರ ನಂತರ ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲಿಸಿ, ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು.

* ಅರ್ಜಿಯಲ್ಲಿನ ಅಂಶಗಳು ತಪ್ಪೆಂದು ಕಂಡುಬಂದಲ್ಲಿ ಅರ್ಜಿದಾರರು ಅಲ್ಲಿಯವರೆಗೆ ತಗೆದುಕೊಂಡ ಹಣವನ್ನು ವಸೂಲಿ ಮಾಡಿ, ಸೂಕ್ತ ಕ್ರಮ ತಗೆದುಕೊಳ್ಳಲಾಗುವುದು.

* ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವವರು, ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಹೆಸರಿನಲ್ಲಿ ಅರ್ಜಿ ಸಲ್ಲಿಸಬೇಕು‌.

* ಅರ್ಜಿಯನ್ನು ಗ್ರಾಮ ಒನ್ ಕೇಂದ್ರ, ಬೆಂಗಳೂರು ಒನ್ ಕೇಂದ್ರ, ಸೈಬರ್ ಕೆಫೆಗಳ ಮೂಲಕ ಸಲ್ಲಿಸಬಹುದು‌.

* ಭೌತಿಕವಾಗಿ ಅರ್ಜಿ ಸಲ್ಲಿಸುವವರು ತಮ್ಮ ಸಮೀಪದ ನಾಡ ಕಛೇರಿ ಮೂಲಕ ಅರ್ಜಿ ಸಲ್ಲಿಸಬಹುದು.

* ಗೃಹಲಕ್ಷ್ಮಿ ಅರ್ಜಿಗಳನ್ನು ಪರಿಶೀಲಿಸಿ ಮಂಜೂರಾತಿ ನೀಡಲು ಸಂಬಂಧಿಸಿದ ತಾಲ್ಲೂಕಿನ ಶಿಶು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳನ್ನು ಈ ಯೋಜನೆಯ ಅಧಿಕಾರಿಗಳು ಎಂದು ಮಂಜೂರಾತಿ ಪ್ರಾಧಿಕಾರದ ಅಧಿಕಾರಿಗಳೆಂದು ಪರಿಗಣಿಸಲಾಗಿದೆ.

ಅದರಂತೆ ಜೂನ್ 15 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಜುಲೈ 15 ಕ್ಕೆ ಕೊನೆಯ ದಿನವಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೊಹಲ್ಲಾ ಕ್ಲಿನಿಕ್‌ಗಳನ್ನು ನಕಲು ಮಾಡುವುದರಲ್ಲೂ ಬಿಜೆಪಿ ಸರ್ಕಾರ ವಿಫಲ: ಆಮ್‌ ಆದ್ಮಿ ಪಾರ್ಟಿ ಆರೋಪ
ಬೆಂಗಳೂರು:ದೆಹಲಿಯ ಎಎಪಿ ಸರ್ಕಾರದ ʻಮೊಹಲ್ಲಾ ಕ್ಲಿನಿಕ್‌ʼ ಯೋಜನೆಯನ್ನು ಸರಿಯಾಗಿ ನಕಲು ಮಾಡುವುದರಲ್ಲಿ ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ʻನಮ್ಮ ಕ್ಲಿನಿಕ್‌ʼ ಯೋಜನೆಯು ಕಾಟಾಚಾರ ಹಾಗೂ ಕಳಪೆ ಗುಣಮಟ್ಟಕ್ಕೆ ಸಾಕ್ಷಿಯಾಗಿವೆ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ ಆರೋಪಿಸಿದ್ದಾರೆ.

ಮಾಧ್ಯಮಗಳಿಗೆ ಹೇಳಿಕೆ ನೀಡಿದ ಜಗದೀಶ್‌ ವಿ ಸದಂರವರು, ʼದೆಹಲಿಯಲ್ಲಿ ಅರವಿಂದ್‌ ಕೇಜ್ರಿವಾಲ್‌ ಸರ್ಕಾರ ತೆರೆದಿರುವ 500ಕ್ಕೂ ಹೆಚ್ಚು ಮೊಹಲ್ಲಾ ಕ್ಲಿನಿಕ್‌ಗಳು ಉತ್ತಮ ಗುಣಮಟ್ಟಕ್ಕೆ ಹೆಸರುವಾಸಿಯಾಗಿವೆ. ಅಲ್ಲಿ ಪ್ರಸ್ತುತ 212 ರೀತಿಯ ಆರೋಗ್ಯ ಸೇವೆಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಜನವರಿ 1ರಿಂದ ಇವುಗಳಿಗೆ ಇನ್ನೂ 238 ಸೇರ್ಪಡೆಯಾಗಿ ಸೇವೆಗಳ ಸಂಖ್ಯೆ 450 ತಲುಪಲಿವೆ. ಆದರೆ ಕರ್ನಾಟಕದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸುಣ್ಣಬಣ್ಣ ಬಳಿದು ʻನಮ್ಮ ಕ್ಲಿನಿಕ್‌ʼ ಎಂದು ಕರೆಯಲಾಗುತ್ತಿದೆ. ಯಾವುದೇ ಆಧುನಿಕ ಉಪಕರಣಗಳು ಹಾಗೂ ಅಗತ್ಯ ಸಂಖ್ಯೆಯ ವೈದ್ಯರಿಲ್ಲದೇ, ಕಾಟಾಚಾರಕ್ಕಾಗಿ ಯೋಜನೆಯನ್ನು ಜಾರಿಗೆ ತರಲಾಗಿದೆʼ ಎಂದು ಹೇಳಿದರು.

ʼಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿಯಿರುವ ಈ ಹೊತ್ತಿನಲ್ಲಿ ರಾಜ್ಯ ಬಿಜೆಪಿಗೆ ಆಮ್‌ ಆದ್ಮಿ ಪಾರ್ಟಿಯ ಭಯ ಶುರುವಾಗಿದೆ. ಇಲ್ಲಿನ ಆರೋಗ್ಯ ಇಲಾಖೆಯ ನಿಷ್ಕ್ರಿಯತೆ ಬಗ್ಗೆ ಅರವಿಂದ್‌ ಕೇಜ್ರಿವಾಲ್‌ರವರು ಪ್ರಶ್ನಿಸುವ ಮೊದಲೇ ಏನಾದರೂ ಮಾಡಬೇಕೆಂದು, ದೆಹಲಿ ಮಾದರಿಯಲ್ಲಿ ಕ್ಲಿನಿಕ್‌ಗಳನ್ನು ತೆರೆಯಲು ಸರ್ಕಾರ ಪ್ರಯತ್ನಿಸಿದೆ. ಕೋವಿಡ್‌ ಸಮಯದಲ್ಲಿ ಭಾರೀ ಅವ್ಯವಹಾರ ಮಾಡಿದ ಕಳಂಕ ಹೊತ್ತಿರುವ ಆರೋಗ್ಯ ಸಚಿವ ಡಾ. ಸುಧಾಕರ್‌ರವರಿಂದ ಕಳಪೆ ಗುಣಮಟ್ಟದ ನಮ್ಮ ಕ್ಲಿನಿಕ್‌ಗಳಲ್ಲದೇ ಮತ್ತೇನನ್ನು ನಿರೀಕ್ಷಿಸಲು ಸಾಧ್ಯ? ಬಡ ಹಾಗೂ ಮಧ್ಯಮ ವರ್ಗದ ರೋಗಿಗಳ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲದೇ, ಕೇವಲ ಪ್ರಚಾರಕ್ಕಾಗಿ ನಮ್ಮ ಕ್ಲಿನಿಕ್‌ಗಳನ್ನು ಸರ್ಕಾರ ತೆರೆದಿದೆʼ ಎಂದು ಜಗದೀಶ್‌ ವಿ ಸದಂ ಕಿಡಿಕಾರಿದ್ದಾರೆ.

ʼಆಮ್‌ ಆದ್ಮಿ ಪಾರ್ಟಿಯಿಂದಾಗಿ ಬೇರೆ ಪಕ್ಷಗಳ ಯೋಚನೆಯಲ್ಲಿ ದೇಶಾದ್ಯಂತ ಬದಲಾವಣೆಗಳು ಆಗುತ್ತಿವೆ. ತಮ್ಮ ರಾಜಕೀಯ ಜೀವನದಲ್ಲಿ ಎಂದೂ ಕೂಡ ಸರ್ಕಾರಿ ಶಾಲೆಗೆ ಭೇಟಿ ನೀಡದ ಕೇಂದ್ರ ಗೃಹ ಸಚಿವ ಅಮಿತ್‌ ಷಾರವರು ಕೆಲವು ತಿಂಗಳ ಹಿಂದೆ ಗುಜರಾತ್‌ನಲ್ಲಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ್ದರು. ಕರ್ನಾಟಕದ ಬಿಜೆಪಿ ಸರ್ಕಾರವು ಅಧಿಕಾರ ಸಿಕ್ಕಿ ಮೂರು ವರ್ಷಗಳ ನಂತರ ಶಾಲೆಗಳ ಶೌಚಾಲಯಗಳ ಬಗ್ಗೆ ಯೋಚಿಸುತ್ತಿದೆ ಹಾಗೂ ಜನಸಾಮಾನ್ಯರ ಆರೋಗ್ಯದ ಬಗ್ಗೆ ಯೋಚಿಸುತ್ತಿದೆ. ಆದರೆ ಭ್ರಷ್ಟ ಬಿಜೆಪಿಯು ಆಮ್‌ ಆದ್ಮಿ ಪಾರ್ಟಿಯ ಮಾರ್ಗ ಅನುಸರಿಸಲು ಕೇವಲ ಪ್ರಯತ್ನ ಪಡಬಹುದೇ ಹೊರತು, ಆಮ್‌ ಆದ್ಮಿ ಪಾರ್ಟಿಯಂತೆ ಪಾರದರ್ಶಕತೆ ಹಾಗೂ ಗುಣಮಟ್ಟ ಕಾಯ್ದುಕೊಳ್ಳಲು ಸಾಧ್ಯವಿಲ್ಲʼ ಎಂದು ಜಗದೀಶ್‌ ವಿ ಸದಂ ಹೇಳಿದರು.

ಅಡಿಕೆ ತೋಟಗಳಿಗೆ ಎಲೆ ಚುಕ್ಕೆ, ಹಳದಿ ಎಲೆ ರೋಗ: ದೋಟಿ ಖರೀದಿಸಲು ರಾಜ್ಯ ಸರ್ಕಾರದಿಂದ ಸಬ್ಸಿಡಿ- ಸಚಿವ ಮುನಿರತ್ನ
ಸುಳ್ಯ: ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಅಡಿಕೆ ತೋಟಗಳು ಎಲೆ ಚುಕ್ಕೆ ಮತ್ತು ಹಳದಿ ಎಲೆ ರೋಗದಿಂದ ಬಳಲುತ್ತಿದ್ದು, ಚುಕ್ಕೆಗಳಿಂದ ಬಾಧಿತವಾದ ಎಲೆಯನ್ನು ಕತ್ತರಿಸಲು ಮತ್ತು ಬೆಳೆಗಳಿಗೆ ಔಷದಿ ಸಿಂಪಡಿಸುವ ಸಲುವಾಗಿ ರಾಜ್ಯ ಸರ್ಕಾರವು ದೋಟಿ ಖರೀದಿಸಲು ಸಬ್ಸಿಡಿ ನೀಡುತ್ತಿದೆ ಎಂದು ತೋಟಗಾರಿಕೆ ಸಚಿವ ಮುನಿರತ್ನ ಅವರು ಭಾನುವಾರ ತಿಳಿಸಿದ್ದಾರೆ.

ಡಿ.11ರ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯತಾಲೂಕಿನ ಎಲೆ ಚುಕ್ಕೆ ಮತ್ತು ಅಡಿಕೆ ರೋಗ ಭಾದಿತ ಮರ್ಕಂಜದಲ್ಲಿರುವ ಅಡಿಕೆ ತೋಟಗಳಿಗೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼಅಡಿಕೆ ತೋಟಗಳು ಎಲೆ ಚುಕ್ಕೆ ಮತ್ತು ಹಳದಿ ಎಲೆ ರೋಗದಿಂದ ಬಳಲುತ್ತಿದ್ದು, ಇದರಿಂದ ರೈತರು ಅಪಾರ ನಷ್ಟ ಅನುಭವಿಸಿದ್ದಾರೆ. ಹೀಗಾಗಿ ಈ ರೋಗವು ಅಡಿಕೆ ಬೆಳೆಯನ್ನು ಏಕೆ ಬಾಧಿಸುತ್ತಿದೆ ಎಂಬುದರ ಬಗ್ಗೆ ಸಂಶೋಧನೆ ನಡೆಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ತಿಂಗಳು ಇಸ್ರೇಲ್ ಗೆ ಭೇಟಿ ನೀಡಿದಾಗ, ಅಲ್ಲಿನ ವಿಜ್ಞಾನಿಗಳೊಂದಿಗೆ ಈ ಕುರಿತು ಪರಿಹಾರವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತೆನೆʼ ಎಂದು ಹೇಳಿದ್ದಾರೆ.

ʼಚುಕ್ಕೆಗಳಿಂದ ಬಾಧಿತವಾದ ಎಲೆಯನ್ನು ಕತ್ತರಿಸಬೇಕು ಮತ್ತು ಬೆಳೆಯನ್ನು ಉಳಿಸಲು ಕೀಟನಾಶಕವನ್ನು ಸಿಂಪಡಿಸಬೇಕು ಎಂದು ತಿಳಿದುಬಂದಿದೆ. ಆದರೆ ಇದನ್ನು ನೆರೆಹೊರೆಯ ಕೃಷಿ ಮಾಲೀಕರು ಸಹ ಮಾಡಬೇಕಾಗಿದೆ. ಈ ಉದ್ದೇಶಕ್ಕಾಗಿ ಸರ್ಕಾರವು ದೋಟಿ ಖರೀದಿಸಲು ಸಬ್ಸಿಡಿ ನೀಡುತ್ತಿದೆ. ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡಲು ಚರ್ಚೆ ನಡೆಸಲಾಗಿದೆ. ಈ ಮೂಲಕ ರೋಗದಿಂದ ಬಾಧಿತವಾಗದ ತಳಿಯ ಅಡಿಕೆಯನ್ನು ಅಭಿವೃದ್ಧಿಪಡಿಸಸುವ ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ, ಎಲೆ ಚುಕ್ಕಿ ಬಾಧಿತ ಅಡಿಕೆ ತೋಟಗಳಿಗೆ,ಕೀಟನಾಶಕ ಸಿಂಪಡಿಸಲು ನಾಲ್ಕು ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಮತ್ತು ಈ ಕುರಿತು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆಯನ್ನು ಕಳುಹಿಸಲಾಗಿದೆʼ ಎಂದು ಮುನಿರತ್ನ ಮಾಹಿತಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಮೀನುಗಾರಿಕಾ ಸಚಿವ ಎಸ್.ಅಂಗಾರ, ಮರ್ಕಂಜ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪವಿತ್ರಾ ಗುಂಡಿ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ ಕಂಜಿಪಿಲಿ ಉಪಸ್ಥಿತರಿದ್ದರು.

ಒಲಿಂಪಿಕ್, ಪ್ಯಾರಾಲಿಂಪಿಕ್ಸ್ ವಿಜೇತರಿಗೆ ಗ್ರೂಪ್ ‘ಎ’ ಸರ್ಕಾರಿ ಉದ್ಯೋಗದ ಭರವಸೆ: ಬಸವರಾಜ್ ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಉದ್ಯೋಗಗಳಿಗೆ ಕ್ರೀಡಾಪಟುಗಳ ನೇರ ನೇಮಕಾತಿಗೆ ಸಚಿವ ಸಂಪುಟ ಅನುಮೋದನೆ ನೀಡಲಿದ್ದು, ಕ್ರೀಡಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದ ಆಯ್ಕೆ ಸಮಿತಿಯ ಮೂಲಕ ಈ ನೇಮಕಾತಿಯನ್ನು ಮಾಡಲಾಗುತ್ತದೆ ಮತ್ತು ಒಲಿಂಪಿಕ್ ಮತ್ತು ಪ್ಯಾರಾಲಿಂಪಿಕ್ಸ್ ವಿಜೇತರಿಗೆ ‘ಎ’ ಗುಂಪಿನ ಉದ್ಯೋಗಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಭರವಸೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಏಕಲವ್ಯ ಮತ್ತು ಇತರ ಕ್ರೀಡಾ ಪ್ರಶಸ್ತಿಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಏಷ್ಯನ್ ಗೇಮ್ಸ್ ಮತ್ತು ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ‘ಬಿ’ ಗುಂಪಿನಲ್ಲಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದರು. ಇತರ ಕ್ರೀಡಾಕೂಟಗಳಲ್ಲಿ ಪದಕ ಪಡೆದವರಿಗೆ ಗ್ರೂಪ್ ‘ಸಿ’ ಮತ್ತು ಗ್ರೂಪ್ ‘ಡಿ’ ಹುದ್ದೆಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಈ ವರ್ಷ ಆಗಸ್ಟ್ 15 ರಿಂದ ಸರ್ಕಾರವು 75 ಕ್ರೀಡಾಪಟುಗಳನ್ನು ದತ್ತು ತೆಗೆದುಕೊಂಡಿದೆ ಮತ್ತು ಮುಂದೆ ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ಗೆ ತರಬೇತಿ ನೀಡಲಿದೆ. ಕ್ರೀಡಾಪಟುಗಳಿಗೆ ನಾಲ್ಕು ವರ್ಷಗಳ ಕಾಲ ಉತ್ತಮ ತರಬೇತುದಾರರಿಂದ ತರಬೇತಿ ನೀಡಲಾಗುತ್ತಿದ್ದು, ಅವರು ಕ್ರೀಡೆಯನ್ನು ಮುಂದುವರಿಸಲು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಇದಕ್ಕಾಗಿ, ಸರ್ಕಾರವು ಪ್ರತಿ ಕ್ರೀಡಾಪಟುವಿಗೆ 10 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಮತ್ತು ಅಗತ್ಯದ ಮೇಲೆ ಹೆಚ್ಚಿನ ಹಣವನ್ನು ನೀಡಲಾಗುವುದು ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಯುವ ಸಬಲೀಕರಣ ಮತ್ತು ಕ್ರೀಡೆಗಳ ಅಭಿವೃದ್ಧಿಗಾಗಿ ಯುವ ನೀತಿಯನ್ನು ತರಲಾಗುವುದು ಎಂದು ಹೇಳಿದ ಅವರು. ʼಗೃಹ ಇಲಾಖೆಯಲ್ಲಿ ಶೇ.2ರಷ್ಟು ಹುದ್ದೆಗಳನ್ನು ಕ್ರೀಡಾಪಟುಗಳಿಗೆ ಮೀಸಲಿಡಲಾಗಿದೆ, ಹೀಗಾಘಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ನೀತಿಗಳನ್ನು ಜಾರಿಗೆ ತರುವ ಕ್ರಮಗಳಿಗೆ ಆದ್ಯತೆ ನೀಡಲಾಗುವುದುʼ ಎಂದು ಬೊಮ್ಮಾಯಿ ಹೇಳಿದರು.

ಇಂದಿನಿಂದ 48 ಲಕ್ಷ ಮಕ್ಕಳಿಗೆ ಜೆಇ ಲಸಿಕೆ: ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು: ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿ ಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟು ಮಾಡುವ ಜಪಾನಿನ ಎನ್ಸೆಫಾಲಿಟಿಸ್ (ಜೆಇ) ವಿರುದ್ಧ 1 ರಿಂದ 15 ವರ್ಷದೊಳಗಿನ ಅಂದಾಜು 48 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ವಿಶೇಷ ಲಸಿಕಾ ಅಭಿಯಾನವು ಸೋಮವಾರದಿಂದ ಮೂರು ವಾರಗಳ ಕಾಲ ರಾಜ್ಯದಲ್ಲಿ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಈ ಅಭಿಯಾನದ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼಡಿಸೆಂಬರ್ ಮೊದಲ ವಾರದಲ್ಲಿ ಲಸಿಕೆಗಳನ್ನು ಪ್ರಾಥಮಿಕವಾಗಿ ಖಾಸಗಿ ಮತ್ತು ಸರ್ಕಾರಿ ಶಾಲೆಗಳ ಮೇಲೆ ಕೇಂದ್ರೀಕರಿಸಲಾಗುವುದು. ಇದನ್ನು ಅನುಸರಿಸಿ, ಮುಂದಿನ ಎರಡು ವಾರಗಳಲ್ಲಿ, ನಾವು ಆರೋಗ್ಯ ಸಂಸ್ಥೆಗಳು, ಅಂಗನವಾಡಿ ಕೇಂದ್ರಗಳು ಮತ್ತು ಸಮುದಾಯಗಳಲ್ಲಿ ವ್ಯಾಕ್ಸಿನೇಷನ್ ಡ್ರೈವ್‌ಗಳ ಮೇಲೆ ಗಮನ ಹರಿಸಲಿದ್ದೇವೆ. ಡ್ರೈವ್ ನಡೆಸಲು ಕೇಂದ್ರ ಆರೋಗ್ಯ ಸಚಿವಾಲಯವು ನಮಗೆ ಜೆನ್ವ್ಯಾಕ್ ಲಸಿಕೆಯನ್ನು ಪೂರೈಸಲಿದೆʼ ಎಂದರು.

ಪ್ರಪಂಚದಾದ್ಯಂತ 24 ರಾಷ್ಟ್ರಗಳಲ್ಲಿ ಜಪಾನೀಸ್‌ ಎನ್‌ಸೆಫಲೈಟಿಸ್‌ (ಜೆಇ) ಪಿಡುಗನ್ನು ಗುರುತಿಸಲಾಗಿದೆ. ಇದರಲ್ಲಿ ಭಾರತವು ಸೇರಿದಂತೆ ಏಷ್ಯಾದ 11 ರಾಷ್ಟ್ರಗಳು ಸಹ ಪಟ್ಟಿಯಲ್ಲಿವೆ. ಪ್ರತಿ ವರ್ಷ ಸರಾಸರಿ 68,000 ಪ್ರಕರಣಗಳು ವರದಿಯಾಗುತ್ತಿದ್ದು, ಮರಣ ಪ್ರಮಾಣ ಶೇ,20 ರಿಂದ ಶೇ,30 ರಷ್ಟಿದೆ. ಗುಣಮುಖರಾದ ಶೇ, 30 ರಿಂದ ಶೇ, 50 ರಷ್ಟು ಪ್ರಕರಣಗಳಲ್ಲಿ ನರದೌರ್ಬಲ್ಯ, ಬುದ್ಧಿ ಮಾಂದ್ಯತೆ ಸೇರಿದಂತೆ ಶಾಶ್ವತ ಆಂಗವಿಕಲತೆ ಉಂಟಾಗಿದೆ ಎಂದು ಸಚಿವರು ಕಳವಳ ವ್ಯಕ್ತಪಡಿಸಿದ್ದಾರೆ.

ಜೆಇ ಮೆದುಳು ಜ್ವರದ ಮೊದಲ ಪ್ರಕರಣ 1955 ರಲ್ಲಿ ತಮಿಳುನಾಡಿನ ವೆಲ್ಲೂರ್ ನಲ್ಲಿ ವರದಿಯಾಗಿತ್ತು. ಕರ್ನಾಟಕದಲ್ಲಿ 1978 ರಲ್ಲಿ ಕೋಲಾರ ಜಿಲ್ಲೆಯಲ್ಲಿ ಮೊದಲ ಪ್ರಕರಣ ಪತ್ತೆಯಾಗಿತ್ತು. ಹೆಚ್ಚಿನ ಪ್ರಕರಣಗಳು 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಕಂಡುಬರುತ್ತಿದೆ. 2016 ರಲ್ಲಿ 11 ಪ್ರಕರಣಗಳು, 2017 ರಲ್ಲಿ 23 ಪ್ರಕರಣಗಳು, 2018 ರಲ್ಲಿ 35 ಪ್ರಕರಣಗಳು, 2019 ರಲ್ಲಿ 33 ಪ್ರಕರಣಗಳು, 2020 ರಲ್ಲಿ 19 ಪ್ರಕರಣಗಳು, 2021 ರಲ್ಲಿ 25 ಪ್ರಕರಣಗಳು, 2022 ರಲ್ಲಿ 21 ಪ್ರಕರಣಗಳು ಪತ್ತೆಯಾಗಿವೆ ಎಂದು ಸುಧಾಕರ್‌ ಮಾಹಿತಿ ನೀಡಿದ್ದಾರೆ.

ರೋಗ ಪತ್ತೆ ಮಾಡಲು ರಾಜ್ಯದಲ್ಲಿ ಸೆಂಟಿನಲ್ ಸರ್ವೆಲೆನ್ಸ್ ಲ್ಯಾಬೊರೇಟರಿ (ಎಸ್‍ಎಸ್‍ಎಲ್‍) ಗಳನ್ನು ಸಜ್ಜುಗೊಳಿಸಲಾಗಿದೆ. ನಿಮ್ಹಾನ್ಸ್ -ಸ್ಟೇಟ್ ಅಪೆಕ್ಸ್ ಲ್ಯಾಬೊರೇಟರಿ, ವಿಮ್ಸ್-ಬಳ್ಳಾರಿ, ಕಿಮ್ಸ್-ಹುಬ್ಬಳ್ಳಿ, ಡಿಪಿಎಚ್‍ಎಲ್-ಕೋಲಾರ, ಮಣಿಪಾಲ್ ಸೆಂಟರ್ ಫಾರ್ ವೈರಸ್ ರಿಸರ್ಚ್-ಉಡುಪಿ, ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ವೈರಾಲಜಿ(ಎನ್‍ಐವಿ)-ಬೆಂಗಳೂರು ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಸುಧಾಕರ್‌ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಧಾರವಾಡ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳನ್ನು 10 ಜೆಇ ಎಂಡೆಮಿಕ್ ಜಿಲ್ಲೆಗಳು ಎಂದು ಗುರುತಿಸಲಾಗಿದೆ. ಈ ಜಿಲ್ಲೆಗಳಲ್ಲಿ ಮಕ್ಕಳಿಗೆ 9 ತಿಂಗಳು ತುಂಬಿದ ನಂತರ ಮೊದಲನೇ ಡೋಸ್ ಮತ್ತು 1.5 ವರ್ಷದ ವಯಸ್ಸಿನಲ್ಲಿ 2ನೇ ಡೋಸ್ ಲಸಿಕೆ ನೀಡಲಾಗುತ್ತಿದೆ ಎಂದರು.

ಪುರಸಭೆ ಸದಸ್ಯತ್ವಕ್ಕೆ ರೌಡಿಶೀಟರ್ ನಾಮನಿರ್ದೇಶನ ಮಾಡಿದ ಬಿಜೆಪಿ ಸರ್ಕಾರ
ಬಿಜೆಪಿ ಕಾರ್ಯಕ್ರಮಗಳಲ್ಲಿ ರೌಡಿ ಶೀಟರ್‌ಗಳ ಉಪಸ್ಥಿತಿಯ ಗದ್ದಲದ ನಡುವೆ ಕರ್ನಾಟಕದ ಬಸವರಾಜ ಬೊಮ್ಮಾಯಿ ಸರ್ಕಾರ ರೌಡಿಶೀಟರ್ ಒಬ್ಬನನ್ನು ಪುರಸಭೆ ಸದಸ್ಯನನ್ನಾಗಿ ನಾಮನಿರ್ದೇಶನ ಮಾಡಿದೆ. ಬೆಂಗಳೂರಿನ ಆನೇಕಲ್ ಭಾಗದ ಮಂಜುನಾಥ್ ಅಲಿಯಾಸ್ ಉಪ್ಪಿಯನ್ನು ಆನೇಕಲ್ ಪುರಸಭೆ ಸದಸ್ಯರನ್ನಾಗಿ ಸರ್ಕಾರ ನಾಮನಿರ್ದೇಶನ ಮಾಡಿದೆ.

ಕಳೆದ ಒಂದು ವಾರದಿಂದ ಬಿಜೆಪಿ ಪಕ್ಷದ ವಲಯದಲ್ಲಿ ರೌಡಿ ರಾಜಕಾರಣದ ಮಾತೇ ಹೆಚ್ಚು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಬಿಜೆಪಿ ನಾಯಕರ ಜೊತೆ ರೌಡಿ ಶೀಟರ್ ಕಾಣಿಸಿಕೊಂಡ ಸುದ್ದಿಯಲ್ಲಿ ಇದು ಐದನೇ ಬಾರಿ. ಬೆಂಗಳೂರು ನಗರದ ಹೊರವಲಯದಲ್ಲಿ ಇರುವ ಆನೇಕಲ್ ರಿಯಲ್ ಎಸ್ಟೇಟ್‌ನಲ್ಲಿ ಹಂತಹಂತವಾಗಿ ಅಭಿವೃದ್ಧಿ ಹೊಂದುತ್ತಿದೆ. ಈ ಹಿನ್ನೆಲೆಯಲ್ಲಿ ರಿಯಲ್ ಎಸ್ಟೇಟ್ ದಂಧೆ ಮತ್ತು ಹಲವು ಕೊಲೆ ಪ್ರಕರಣದ ಆರೋಪದಲ್ಲಿ ಕೇಳಿ ಬಂದ ರೌಡಿ ಶೀಟರ್ ಮಂಜುನಾಥ್ ಅಲಿಯಾಸ್ ಉಪ್ಪಿಯನ್ನು ಸರ್ಕಾರ ನಾಮ ನಿರ್ದೇಶನ ಮಾಡಿದ್ದು ಮತ್ತೊಮ್ಮೆ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.

ಸಿಸಿಬಿ ಪೊಲೀಸರ ವಾಂಟೆಡ್ ಪಟ್ಟಿಯಲ್ಲಿ ಇರುವ, ಸಿಸಿಬಿ ದಾಖಲೆಗಳಲ್ಲಿ ಪರಾರಿಯಾಗಿರುವ ರೌಡಿ ಸುನೀಲ್ ಕುಮಾರ್ ಅಲಿಯಾಸ್ ಸೈಲೆಂಟ್ ಸುನೀಲ್ ಬಿಜೆಪಿಯ ಹಿರಿಯ ನಾಯಕರೊಂದಿಗೆ ವೇದಿಕೆ ಹಂಚಿಕೊಂಡ ನಂತರ ಕರ್ನಾಟಕದಲ್ಲಿ ರೌಡಿ ರಾಜಕಾರಣದ ವಿವಾದ ಭುಗಿಲೆದ್ದಿದೆ. ನವೆಂಬರ್ 29 ರಂದು ನಡೆದ ರಕ್ತದಾನ ಶಿಬಿರದಲ್ಲಿ ಸಂಸದರಾದ ತೇಜಸ್ವಿ ಸೂರ್ಯ, ಪಿ.ಸಿ.ಮೋಹನ್, ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಸೇರಿದಂತೆ ಮುಂತಾದ ಬಿಜೆಪಿ ಮುಖಂಡರು ಇದ್ದ ವೇದಿಕೆಯಲ್ಲಿ ಸೈಲೆಂಟ್ ಸುನೀಲ ಕಾಣಿಸಿಕೊಂಡಿದ್ದರು. ಸ್ವತಃ ಕರ್ನಾಟಕ ಪೊಲೀಸರ ಭದ್ರತೆಯಲ್ಲೇ ಈ ಕಾರ್ಯಕ್ರಮ ನಡೆದದ್ದು ಹೆಚ್ಚು ಸುದ್ದಿಯಾಗಿತ್ತು.

ನಂತರ ಮಂಡ್ಯದ ಫೈಟರ್ ರವಿ ಬಿಜೆಪಿ ಸೇರ್ಪಡೆ ಮತ್ತು ಜೆಡಿಎಸ್ ಪಕ್ಷದ ಸದಸ್ಯರೊಬ್ಬರಿಗೆ ಧಮಕಿ ಹಾಕಿ ಅವಾಚ್ಯ ಶಬ್ದಗಳಿಂದ ನಿಂಧಿಸಿದ ಸುದ್ದಿ ಕೂಡಾ ಹೆಚ್ಚು ಸುದ್ದಿಯಾಗಿತ್ತು. ಇಂತಹ ವ್ಯಕ್ತಿಗೂ ಬಿಜೆಪಿ ಮಣೆ ಹಾಕಿ ಆತಿಥ್ಯ ನೀಡಿದ್ದು ಜಗಜ್ಜಾಹೀರಾಗಿದೆ. ಇದರ ಜೊತೆಗೆ ರೌಡಿಶೀಟರ್ ಬೆತ್ತನಗೆರೆ ಶಂಕರ ಕೂಡಾ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಂಡಿದ್ದ. ಸದ್ಯ ಈ ಇಬ್ಬರೂ ರೌಡಿಗಳು ಬಿಜೆಪಿ ಸೇರ್ಪಡೆ ಮಾಧ್ಯಮಗಳಲ್ಲಿ ಹೆಚ್ಚು ಪ್ರಚಾರಕ್ಕೆ ಬಂದಿತ್ತು.

ಇದರ ನಂತರ ಕಳೆದ ಎರಡು ದಿನಗಳಿಂದ ಬಿಜೆಪಿಯ ಹಿರಿಯ ಮುಖಂಡ ಸಚಿವ ಸೋಮಣ್ಣ ನಿವಾಸಕ್ಕೆ ರೌಡಿಶೀಟರ್ ನಾಗರಾಜ್ ಅಲಿಯಾಸ್ ವಿಲ್ಸನ್ ಗಾರ್ಡನ್ ನಾಗ ಬಂದು ಹೋಗಿದ್ದು ಮತ್ತೊಮ್ಮೆ ಬಿಜೆಪಿ ಪಕ್ಷದ ಕಡೆಯಿಂದ ಹೆಚ್ಚು ಪ್ರಚಾರಕ್ಕೆ ಬಂದಿದೆ. ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನ ಭೇಟಿ ನಂತರ ಪ್ರತಿಕ್ರಿಯಿಸಿದ ಸಚಿವ ವಿ ಸೋಮಣ್ಣ ಯಾವ ನಾಗ ಯಾರೂ ನನಗೆ ಗೊತ್ತಿಲ್ಲ ಎಂದು ಉಚ್ಚರಿಸಿದ್ದಾರೆ.

ಈಗ ಮತ್ತೆ ಬಿಜೆಪಿ ಸರ್ಕಾರವೇ ಆನೇಕಲ್ ಭಾಗದಲ್ಲಿ ಪುರಸಭೆಗೆ ರೌಡಿಶೀಟರ್ ಒಬ್ಬನನ್ನು ನಾಮನಿರ್ದೇಶನ ಮಾಡಿರುವುದು ಮತ್ತೆ ಸುದ್ದಿಗೆ ಬಂದಿದೆ. ಬಿಜೆಪಿ ಪಕ್ಷ ಮುಂಬರುವ ಚುನಾವಣೆ ಸಂದರ್ಭದಲ್ಲಿ ರೌಡಿಗಳನ್ನು ಒಟ್ಟುಮಾಡುತ್ತಿದೆ. ಆ ಮೂಲಕ ಜನರಲ್ಲಿ ಭಯಭೀತಿ ಹುಟ್ಟಿಸಲು ತೊಡಗಿದೆ ಎಂಬುದನ್ನು ಬಿಜೆಪಿ ವಿರೋಧಿಗಳು ಮಾತನಾಡಿಕೊಳ್ಳುತ್ತಿದ್ದಾರೆ.

ಮತದಾರರ ಪಟ್ಟಿ| ಅಲ್ಪಸಂಖ್ಯಾತ ಮತದಾರರನ್ನು ಕೈಬಿಟ್ಟಿಲ್ಲ : ಬೊಮ್ಮಾಯಿ
ಬೆಂಗಳೂರು: ರಾಜ್ಯಾದ್ಯಂತ ಅನಧಿಕೃ ಸಮೀಕ್ಷೆಗಳು ನಡೆದು ಅಲ್ಪಸಂಖ್ಯಾತರ ಮತದಾರರನ್ನು ಡಿಲೀಟ್ ಮಾಡಲಾಗುತ್ತಿದೆ ಎನ್ನುವುದು ಸುಳ್ಳು ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಈ ಕುರಿತು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ  ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ರಾಜ್ಯ ಚುನಾವಣೆ ಆಯೋಗ ಈ ಬಗ್ಗೆ ಗಮನ ಹರಿಸಿದೆ. ಚುನಾವಣಾ ಆಯೋಗದ ನೇತೃತ್ವದಲ್ಲಿ ಮತದಾರರನ್ನು  ಪಟ್ಟಿ ಪರಿಷ್ಕರಣೆಯಾಗುತ್ತದೆ. ಈ ಕುರಿತು ಭಾರತ ಮತ್ತು ರಾಜ್ಯ ಚುನಾವಣಾ ಆಯೋಗ ಕಾಳಜಿ ವಹಿಸಿದೆ. ಈ ರೀತಿಯ ದೂರುಗಳು ಬಂದಲ್ಲಿ ಅಧಿಕಾರಿಗಳಿಂದ ತನಿಖೆ ಮಾಡಿಸಬೇಕು. ಅನಧಿಕೃತವಾಗಿ ಮತದಾರರನ್ನು ಸೇರಿಸುವ ಕೆಲಸವೂ ಆಗಿದೆ. ಎರಡು ಕಡೆಗಳಲ್ಲಿ ಮತದಾರರ ಚೀಟಿ ಹೊಂದಿರುವವರೂ ಇದ್ದಾರೆ. ಅಂಥವನ್ನು ತೆಗೆಯುವ ಕೆಲಸ ಆಯೋಗ ಮಾಡಬೇಕು. ಯಾವುದೇ ಕಾರಣಕ್ಕೂ ಅಧಿಕೃತ ಜನರಿಗೆ ಮತದಾನದ ಹಕ್ಕು ಇರಲೇಬೇಕು. ಅದನ್ನು ಮೇಲ್ವಿಚಾರಣೆ ಮಾಡುವ ಕೆಲಸ ಚುನಾವಣಾ ಆಯೋಗ ಮಾಡಬೇಕು ಎಂದರು.

ಕನ್ನಡಿಗನ ಮೇಲೆ ಹಲ್ಲೆ: ತನಿಖೆಗೆ ಆದೇಶ

ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡಿಗರ ಮೇಲೆ ಹಲ್ಲೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ನಾನು ತನಿಖೆ ಕೈಗೊಳ್ಳಲು ಪೋಲಿಸ್ ಆಯುಕ್ತರಿಗೆ ಸೂಚಿಸಿದ್ದು, ವರದಿ ಬಂದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಪೊಲೀಸರು ಹಲ್ಲೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸತ್ಯಾಸತ್ಯತೆಯನ್ನು ತಿಳಿದುಕೊಂಡು ಯಾರೇ ತಪ್ಪು ಮಾಡಿದ್ದರೂ ಅವರ ಮೇಲೆ ಕ್ರಮ ಕೈಗೊಳ್ಳುತ್ತಾರೆ ಎಂದರು.

ಮಂಗಳೂರು: ಸುರತ್ಕಲ್ ಟೋಲ್ ಸಂಗ್ರಹ ಡಿ.1ರಿಂದ ಸಂಪೂರ್ಣ ಸ್ಥಗಿತ – ಡಿಸಿ
ಮಂಗಳೂರು: ಸುರತ್ಕಲ್ ಟೋಲ್ ಗೇಟ್ನಲ್ಲಿ ಡಿಸೆಂಬರ್ 1 ರಿಂದ ಟೋಲ್ ಸಂಗ್ರಹ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಹೇಳಿದ್ದಾರೆ.

ನ್ಯಾಷನಲ್‌ ಇನ್ಸಿಟ್ಯೂಟ್‌ ಆಫ್‌ ಟೆಕ್ನಾಲಜಿ ಕರ್ನಾಟಕ (ಎನ್ಐಟಿಕೆ) ಬಳಿಯ ಟೋಲ್ ಗೇಟ್ನಲ್ಲಿ ಟೋಲ್ ಸಂಗ್ರಹಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಯೋಜನಾ ನಿರ್ದೇಶಕರು ನೀಡಿದ ಪತ್ರದ ಆಧಾರದ ಮೇಲೆ, ಟೋಲ್ ಸಂಗ್ರಹವನ್ನು ನಿಲ್ಲಿಸಲಾಗುವುದು ಎಂದು ರವಿಕುಮಾರ್ ಹೇಳಿದ್ದಾರೆ.

ನವೆಂಬರ್ 30 ರ ಮಧ್ಯರಾತ್ರಿಯಿಂದ ಈ ಆದೇಶ ಜಾರಿಗೆ ಬರಲಿದೆ ಎಂದು ಡಿಸಿ ರವಿಕುಮಾರ್ ತಮ್ಮ ಆದೇಶಿಸಿದ್ದು,  ಸಾರ್ವಜನಿಕರು ಯಾವುದೇ ಟೋಲ್ ಪಾವತಿಸದೆ ಟೋಲ್ ಗೇಟ್ ಅನ್ನು ದಾಟಬಹುದು ಎಂದು ಸಹ ತಿಳಿಸಿದ್ದಾರೆ.

‘ನಮ್ಮ ಕ್ಲಿನಿಕ್’ಗಳಲ್ಲಿ ಕರ್ತವ್ಯನಿರ್ವಹಿಸಲು ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು: ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಯೋಜನೆಯಡಿಯಲ್ಲಿ ಕರ್ನಾಟಕ ಸರ್ಕಾರದ ಅನುಮೋದನೆಯಂತೆ, ನೂತನವಾಗಿ ಸ್ಥಾಪಿಸಲಾಗುವ ‘ನಮ್ಮ ಕ್ಲಿನಿಕ್’ಗಳಲ್ಲಿ ಕರ್ತವ್ಯನಿರ್ವಹಿಸಲು ವೈದ್ಯಾಧಿಕಾರಿಗಳ ಹುದ್ದೆಗೆ 01 ವರ್ಷದ ಅವಧಿಗೆ ನೇರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಆಸಕ್ತಿವುಳ್ಳ ಎಂ.ಬಿ.ಬಿ.ಎಸ್ ಪದವಿ ಮತ್ತು ಕೆ.ಎಂ.ಸಿ ಕೌನ್ಸಿಲ್‌ ನೊಂದಾವಣಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮುಂದುವರಿದು, ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ವಿದ್ಯಾರ್ಹತೆಯ ಮೂಲ ದಾಖಲೆಗಳು ಮತ್ತು ಒಂದು ಜೆರಾಕ್ಸ್ ಪ್ರತಿ, ಭಾವಚಿತ್ರದೊಂದಿಗೆ ಮುಖ್ಯ ಆರೋಗ್ಯಾಧಿಕಾರಿ(ಸಾರ್ವಜನಿಕ ಆರೋಗ್ಯ) ರವರ ಕಛೇರಿ, ಅನೆಕ್ಸ್-2 ಕಟ್ಟಡ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಛೇರಿ, ಎನ್.ಆರ್.ಚೌಕ, ಬೆಂಗಳೂರು-560 002 ವಿಳಾಸಕ್ಕೆ ಖುದ್ದಾಗಿ – ಅರ್ಜಿ ಸಲ್ಲಿಸಲು ಎಂದು ಮುಖ್ಯ ಆರೋಗ್ಯಾಧಿಯಾದ ಡಾ. ಬಾಲಸುಂದರ್ ರವರು ಕೋರಿರುತ್ತಾರೆ.