Karnataka-Maharashtra border dispute – Peepal Media

ಬೆಳಗಾವಿಯಲ್ಲಿ ತಗ್ಗಿದ ಉದ್ವಿಗ್ನತೆ : ಶಾಂತಿ ಕದಡಲು ‘ಮಹಾಮೇಳ’ವನ್ನು ಯೋಜಿಸಿದ ಮಹಾರಾಷ್ಟ್ರ ಏಕೀಕರಣ ಸಮಿತಿ
ಬೆಳಗಾವಿ: ಡಿಸೆಂಬರ್ 19 ರಿಂದ 30 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ಮುಂಚಿತವಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದ ಭುಗಿಲೇಳುವ ಸೂಚನೆಗಳಿದ್ದರೂ ಬೆಳಗಾವಿಯ ಕೆಲವು ಭಾಗಗಳಲ್ಲಿ ಬುಧವಾರದಿಂದ ಉದ್ವಿಗ್ನತೆ ತಗ್ಗಿತ್ತು. ಆದರೆ ಬೆಳಗಾವಿ ಮತ್ತು ಇತರ ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಬಗ್ಗೆ ಧ್ವನಿ ಎತ್ತುವ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಗಡಿ ನಗರದಲ್ಲಿ ನಡೆಯುವ ಅಧಿವೇಶನದಲ್ಲಿ ಪ್ರತಿಭಟಿಸಲು ತನ್ನ ಯೋಜಿತ ‘ಮಹಾಮೇಳ’ದೊಂದಿಗೆ ಮುಂದುವರಿಯುವುದಾಗಿ ತಿಳಿಸಿದೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಎಂಇಎಸ್ ಮಾಜಿ ಶಾಸಕ ಮನೋಹರ್ ಕಿನೇಕರ್ ಅವರು, ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಅಧಿವೇಶನವನ್ನು ವಿರೋಧಿಸಿ ತಮ್ಮ ವಾರ್ಷಿಕ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.

ಪ್ರಸ್ತುತವಾಗಿ ಕರ್ನಾಟಕ ರಾಜ್ಯದ ಗಡಿ ಭಾಗವಾಗಿರುವ ಬೆಳಗಾವಿಯಲ್ಲಿ ಪರಿಸ್ಥಿತಿ ಶಾಂತಿಯುತವಾಗಿದೆ. ಆದರೆ ಹಿರೇಬಾಗೇವಾಡಿ ಬಳಿ ಮಹಾರಾಷ್ಟ್ರ ನಂಬರ್ ಪ್ಲೇಟ್ ಗಳನ್ನು ಹೊಂದಿದ್ದ ವಾಹನಗಳನ್ನು ಧ್ವಂಸಗೊಳಿಸಿರುವುದಕ್ಕೆ, ಎಂಇಎಸ್ ನ ಯಾವುದೇ ಕ್ರಮವು ಕನ್ನಡ ಸಂಘಟನೆಗಳ ಕ್ರಮಕ್ಕೆ ಪ್ರತಿಕ್ರಿಯೆಯಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಮನೋಹರ್ ಕಿನೇಕರ್ ಹೇಳಿಕೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದು, ʼಬೆಳಗಾವಿ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಗಡಿ ವಿವಾದದ ಬಗ್ಗೆ ಮೌನವಾಗಿದ್ದಾರೆ. ಏಕೆಂದರೆ ಅದು ತಮ್ಮ ವೋಟ್ ಬ್ಯಾಂಕ್ ಮೇಲೆ ಪರಿಣಾಮ ಬೀರುತ್ತದೆ ಎಂದು ಅವರು ಹೆದರುತ್ತಾರೆʼ ಎಂದು ಟೀಕಿಸಿದ್ದಾರೆ.

ಈ ಕುರಿತು ಕನ್ನಡ ಹೋರಾಟಗಾರ ಅಶೋಕ್ ಚಂದರಗಿ ಸುದ್ದಿಗಾರರೊಂದಿಗೆ ಮಾತನಾಡಿ, ʼಈ ವಿವಾದವು ಮಹಾರಾಷ್ಟ್ರರಾಜಕೀಯ ಬೆಳವಣಿಗೆಗಳೊಂದಿಗೆ ಸಂಬಂಧ ಹೊಂದಿದೆ. ರಾಜಕೀಯ ಲಾಭಕ್ಕಾಗಿ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷ (NCP) ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿದೆ. ಹೀಗಾಗಿ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗಳು ಮುಗಿಯುವವರೆಗೆ ವಿವಾದವು ಮುಂದುವರಿಯುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.

ದೆಹಲಿಯ ಬೆಂಬಲವಿಲ್ಲದೆ ಮಹಾರಾಷ್ಟ್ರದ ವಾಹನಗಳ ಮೇಲೆ ದಾಳಿ ಸಾಧ್ಯವಿಲ್ಲ: ಶಿವಸೇನಾ ಸಂಸದ ಸಂಜಯ್ ರಾವತ್
ಮಹಾರಾಷ್ಟ್ರ: ಕೇಂದ್ರದ ಬೆಂಬಲವಿಲ್ಲದೆ ಕರ್ನಾಟಕದ ಹಿರೇಬಾಗೇವಾಡಿಯಲ್ಲಿ ಮಹಾರಾಷ್ಟ್ರ ನಂಬರ್ ಪ್ಲೇಟ್ ಹೊಂದಿರುವ ವಾಹನಗಳ ಮೇಲೆ ದಾಳಿ ನಡೆಸಲು ಸಾಧ್ಯವಿಲ್ಲ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಬುಧವಾರ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು ʼದೆಹಲಿಯ ಬೆಂಬಲವಿಲ್ಲದೆ ಬೆಳಗಾವಿಯಲ್ಲಿ ಮಹಾರಾಷ್ಟ್ರದ ವಾಹನಗಳ ಮೇಲೆ ದಾಳಿ ಮಾಡಲು ಸಾಧ್ಯವಿಲ್ಲ. ಮಹಾರಾಷ್ಟ್ರ ಏಕೀಕರಣ ಸಮಿತಿಯ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಇದು ಮರಾಠಿ ಜನರ ಹೆಮ್ಮೆ ಮತ್ತು ಸ್ವಾಭಿಮಾನವನ್ನು ಕೊನೆಗಾಣಿಸುವ ಯೋಜನೆಯಾಗಿದೆ. ಬೆಳಗಾವಿಯಲ್ಲಿ ನಡೆದ ದಾಳಿಯು ಅದೇ ಪಿತೂರಿಯ ಒಂದು ಭಾಗವಾಗಿದೆ. ಮರಾಠರು ಇನ್ನಾದರು ಎಚ್ಚೆತ್ತುಕೊಳ್ಳಿʼ ಎಂದು ತಿಳಿಸಿದ್ದಾರೆ.

दिल्लीचया पाठिंब्या शिवाय
बेळगावात मराठी माणूस व महाराष्ट्राच्या वाहनांवर हल्ला होऊ शकत नाहीं.महाराष्ट्र एकीकरण समितीच्या कार्यकर्त्यांना अटक झाली आहे.महाराष्ट्राचा
कणा मोडून मराठी स्वाभिमान कायमचा संपविण्याचा खेळ सुरू झालाय.बेळगावातील हल्ले  त्याच कटाचा भाग आहे.ऊठ मराठ्या ऊठ!
— Sanjay Raut (@rautsanjay61) December 7, 2022

ಮಹಾರಾಷ್ಟ್ರದ ನಂಬರ್ ಪ್ಲೇಟ್ ಹೊಂದಿರುವ ವಾಹನಗಳ ಮೇಲೆ ಬೆಳಗಾವಿ ಸಮೀಪದ ಹಿರೇಬಾಗೇವಾಡಿ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಕರವೇ ಕಾರ್ಯಕರ್ತರಿಂದ ದಾಳಿ ನಡೆದಿದ್ದು, ಉಭಯ ರಾಜ್ಯಗಳ ನಡುವಿನ ಗಡಿ ವಿವಾದವು ಮಂಗಳವಾರ ಬೀದಿಗೆ ಬೀಳುತ್ತಿದ್ದಂತೆ ಹಲವಾರು ಜನರನ್ನು ಬಂಧಿಸಲಾಗಿದೆ. ವಿವಾದದ ಕೇಂದ್ರ ಬಿಂದುವಾಗಿರುವ ರಾಜ್ಯದ ಗಡಿ ಜಿಲ್ಲೆಯಾದ ಬೆಳಗಾವಿಗೆ, ಮಹಾರಾಷ್ಟ್ರದ ಇಬ್ಬರು ಸಚಿವರು ತಮ್ಮ ನಿಗದಿತ ಭೇಟಿಯನ್ನು ರದ್ದುಗೊಳಿಸಿದ ಕೆಲವು ದಿನಗಳಿಂದ ಭುಗಿಲೆದ್ದ ಉದ್ವಿಗ್ನತೆಯು ಉಲ್ಬಣಗೊಂಡಿದೆ.

ಎರಡೂ ರಾಜ್ಯಗಳ ನಡುವಿನ ಗಡಿ ವಿವಾದದ ನಡುವೆ, ಕರ್ನಾಟಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳು ಮಂಗಳವಾರ ರಾತ್ರಿ ದೂರವಾಣಿಯಲ್ಲಿ ಪರಸ್ಪರ ಮಾತನಾಡಿ, ಎರಡೂ ಕಡೆ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಬೇಕು ಎಂದು ಒಪ್ಪಿಕೊಂಡಿದ್ದಾರೆ. ಕರ್ನಾಟಕದೊಂದಿಗಿನ ರಾಜ್ಯದ ಗಡಿ ವಿವಾದವನ್ನು ಸಮನ್ವಯಗೊಳಿಸಲು ನೇಮಕಗೊಂಡಿರುವ ಮಹಾರಾಷ್ಟ್ರ ಸಚಿವರಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಅವರು ಬೆಳಗಾವಿ ಜಿಲ್ಲೆಗೆ ಭೇಟಿ ನೀಡಬೇಕಿತ್ತು, ಆದರೆ ಪ್ರವಾಸವು ಕಾರ್ಯರೂಪಕ್ಕೆ ಬರಲಿಲ್ಲ. ಈ ಇಬ್ಬರು ಸಚಿವರು  ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಕಾರ್ಯಕರ್ತರನ್ನು ಭೇಟಿಯಾಗಲಿದ್ದಾರೆ ಮತ್ತು ದಶಕಗಳಷ್ಟು ಹಳೆಯದಾದ ಗಡಿ ವಿವಾದದ ಬಗ್ಗೆ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಹಿರೇಬಾಗೇವಾಡಿಯಲ್ಲಿ ಕರವೇ-ಪೊಲೀಸ್‌ ಸಂಘರ್ಷ: ಟಿ.ಎ.ನಾರಾಯಣಗೌಡ ಸೇರಿದಂತೆ ಸಾವಿರಾರು ಕಾರ್ಯಕರ್ತರ ಬಂಧನ
ಹಿರೇಬಾಗೇವಾಡಿ ಟೋಲ್‌ ಪ್ಲಾಜಾ (ಬೆಳಗಾವಿ): ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಮುಂದೆ ಬೃಹತ್‌ ಹೋರಾಟಕ್ಕೆ ಮುಂದಾಗಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ಸಾವಿರಾರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಸೇರಿದಂತೆ ಸುಮಾರು ಐನೂರಕ್ಕೂ ಹೆಚ್ಚು ವಾಹನಗಳಲ್ಲಿ ಬಂದಿದ್ದ ಕಾರ್ಯಕರ್ತರು, ಮುಖಂಡರನ್ನು ಪೊಲೀಸರು ಬಂಧಿಸಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಟೋಲ್‌ ಪ್ಲಾಜಾ ಬಳಿ ಪೊಲೀಸರು ಇರುವುದನ್ನು ಗಮನಿಸಿದ ಕರವೇ ಮುಖಂಡರು ಕಾಲ್ನಡಿಗೆ ಮೂಲಕ ಮೆರವಣಿಗೆ ಹೊರಟರು. ಪ್ಲಾಜಾ ಬಳಿ ಬೆಳಿಗ್ಗೆಯಿಂದಲೂ ನೆರೆದಿದ್ದ ಪೊಲೀಸರು ಕರವೇ ಕಾರ್ಯಕರ್ತರನ್ನು ಬಂಧಿಸುತ್ತಿರುವುದಾಗಿ ಘೋಷಿಸಿದರು.

ಈ ಸಂದರ್ಭದಲ್ಲಿ ಕರವೇ ಮುಖಂಡರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಪೊಲೀಸರು ಬಲವಂತವಾಗಿ ಬಂಧನಕ್ಕೆ ಮುಂದಾದಾಗ ಅಲ್ಲಿದ ಮಹಾರಾಷ್ಟ್ರದ ಲಾರಿಗಳ ಮೇಲೆ ಹತ್ತಿದ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು. ಬಂಧಿಸಿ ಕರೆದೊಯ್ಯಲು ತರಲಾಗಿದ್ದ ಬಸ್‌ ಗಳ ಕೆಳಗೆ ಮಲಗಿ ಪ್ರತಿರೋಧ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ, ಬೆಳಗಾವಿಯ ರಾಜಕಾರಣಿಗಳು ಹೇಡಿಗಳು. ಹೇಡಿತನದಿಂದ ಕರವೇ ಕಾರ್ಯಕರ್ತರನ್ನು ಬಂಧಿಸಲು ಪೊಲೀಸರನ್ನು ಛೂ ಬಿಟ್ಟಿದ್ದಾರೆ ಎಂದು ಆರೋಪಿಸಿದರು. ಬೆಳಗಾವಿಯ ಒಂದು ಅಡಿ ಜಾಗವನ್ನೂ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರ ರಾಜಕಾರಣಿಗಳು ಹಗಲುಗನಸು ಕಾಣುವುದನ್ನು ನಿಲ್ಲಿಸಬೇಕು, ಬೆಳಗಾವಿಯಲ್ಲಿ ಅಶಾಂತಿ ಮೂಡಿಸುವುದನ್ನು ನಿಲ್ಲಿಸಬೇಕು ಎಂದು ಅವರು ಆಗ್ರಹಿಸಿದರು.

ನಾಳೆ ಬೆಳಗಾವಿಯಲ್ಲಿ ಕರವೇ ಶಕ್ತಿ ಪ್ರದರ್ಶನ
ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ನಾಳೆ ಬೆಳಗಾವಿಯಲ್ಲಿ ಏರ್ಪಡಿಸಿರುವ ಬೃಹತ್‌ ಪ್ರತಿಭಟನೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಣ್ಣೀರಪ್ಪ ತಿಳಿಸಿದ್ದಾರೆ.

ನಾಳೆ ಮಹಾರಾಷ್ಟ್ರ ಸರ್ಕಾರದ ಇಬ್ಬರು ಮಂತ್ರಿಗಳು ಬೆಳಗಾವಿಗೆ ಭೇಟಿ ನೀಡುವ ಕಾರ್ಯಕ್ರಮವಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಮುತ್ತಿಗೆಯನ್ನು ಆಯೋಜಿಸಿತ್ತು. ಮಹಾರಾಷ್ಟ್ರದ ಸಚಿವರುಗಳ ಕಾರ್ಯಕ್ರಮ ರದ್ದು ಪಡಿಸಲಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಇಂದು ನೀಡಿದ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ ಬಿ.ಸಣ್ಣೀರಪ್ಪ, ಮಹಾರಾಷ್ಟ್ರ ರಾಜಕಾರಣಿಗಳನ್ನು ನಂಬುವಂತಿಲ್ಲ. ಹಿಂದೆ ಹಲವು ವರ್ಷಗಳ ಹಿಂದೆ ಶರದ್‌ ಪವಾರ್‌ ತಮ್ಮ ಕಾರ್ಯಕ್ರಮ ರದ್ದುಪಡಿಸಿದ್ದೇನೆ ಎಂದು ಹೇಳಿದ್ದರೂ, ಬೆಳಗಾವಿ ಪ್ರವೇಶಿಸಿ ಸಮಾವೇಶ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ನಮ್ಮ ಕಾರ್ಯಕ್ರಮ ರದ್ದುಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಾಡದ್ರೋಹಿ ಎಂ.ಇ.ಎಸ್ ಬೆಂಬಲಿಗರು ಮತ್ತು ಮಹಾರಾಷ್ಟ್ರ ರಾಜಕಾರಣಿಗಳು ಕನ್ನಡಿಗರನ್ನು ಮತ್ತು ಕರ್ನಾಟಕ ಸರ್ಕಾರವನ್ನು ನಿಂದಿಸುವ ಕೆಲಸವನ್ನು ಮಾಡುತ್ತಿರುವುದನ್ನು ವಿರೋಧಿಸಿ ನಾಳೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣಗೌಡರ ನೇತೃತ್ವದಲ್ಲಿ ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ಬಹಿರಂಗ ಸಭೆ ನಡೆಸಲಾಗುವುದು. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಭಾಗದ ಕರವೇ ಕಾರ್ಯಕರ್ತರು ಬೆಳಗಾವಿಗೆ ಆಗಮಿಸಬೇಕೆಂದು ಎಂದು ಸಣ್ಣೀರಪ್ಪ ಮನವಿ ಮಾಡಿದ್ದಾರೆ.

ಡಿ.6ರಂದು ಬೆಳಗಾವಿಗೆ ಮಹಾರಾಷ್ಟ್ರ ಸಚಿವರು, ಸಂಸದರ ಭೇಟಿ ರದ್ದು: ಮಹಾರಾಷ್ಟ್ರ ಸಿಎಂ
ಬೆಳಗಾವಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ತಮ್ಮ ಸಚಿವ ಸಹೋದ್ಯೋಗಿಗಳಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಅವರ ಯೋಜಿತ ಬೆಳಗಾವಿ ಭೇಟಿಯನ್ನು ಡಿಸೆಂಬರ್ 6 ರಂದು ರದ್ದುಗೊಳಿಸಲಾಗಿದೆ ಎಂದು ಸೋಮವಾರ ಮುಂಬೈನಲ್ಲಿ ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿಯೋಗವನ್ನು ಕಳುಹಿಸಬೇಡಿ ಎಂದು ತಮ್ಮ ಮಹಾರಾಷ್ಟ್ರ ಸಹವರ್ತಿಗೆ ಮನವಿ ಮಾಡಿದ್ದಾರೆ. ಏಕೆಂದರೆ ಇದು ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಗಳಿಗೆ ಕಾರಣವಾಗಬಹುದು. ಅಲ್ಲದೆ, ಡಾ.ಬಿ.ಆರ್.ಅಂಬೇಡ್ಕರ್ ಅವರ ಪುಣ್ಯತಿಥಿಯನ್ನು ಡಿಸೆಂಬರ್ 6 ರಂದು ಮಹಾಪರಿನಿರ್ವಾಣ ದಿನವನ್ನಾಗಿ ಆಚರಿಸಲಾಗುತ್ತದೆ. ಹೀಗಾಗಿ ನಿಯೋಗವನ್ನು ಕಳುಹಿಸಬೇಡಿ ಎಂದು ಮನವಿ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಅವರನ್ನು ಮಹಾರಾಷ್ಟ್ರ ಸರ್ಕಾರವು ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಸಮನ್ವಯ ಸಚಿವರಾಗಿ ನೇಮಿಸಿದೆ. ಅವರು ಗಡಿ ವಿವಾದದಲ್ಲಿ ಹುತಾತ್ಮರಾದವರ ಕುಟುಂಬಗಳನ್ನು ಭೇಟಿ ಮಾಡಲು ಮತ್ತು ಕೆಲವು ಮರಾಠಿ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಲು ನಿಗದಿಪಡಿಸಲಾಗಿತ್ತು. ಇದಕ್ಕೂ ಮುನ್ನ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮಾತನಾಡಿ, ಕನ್ನಡ ಸಂಘಟನೆಗಳ ಮನವಿಯಂತೆ ಮಹಾರಾಷ್ಟ್ರ ಸಚಿವರು ಮತ್ತು ಸಂಸದರಿಗೆ ರಾಜ್ಯದ ಗಡಿ ದಾಟಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದ್ದರು.

ಗಡಿ ವಿವಾದ: ಕರ್ನಾಟಕಕ್ಕೆ ಮಹಾರಾಷ್ಟ್ರ ಸಚಿವರ ಆಗಮನ, ಬೆಳಗಾವಿಗೆ ಕನ್ನಡ ಹೋರಾಟಗಾರರ ದಂಡು
ಬೆಂಗಳೂರು: ಬೆಳಗಾವಿಯಲ್ಲಿ ಗಡಿ ವಿವಾದ ಉಲ್ಬಣಗೊಂಡಿದ್ದು, ಮಹಾರಾಷ್ಟ್ರ ಸಚಿವರು ಮಂಗಳವಾರ ಗಡಿ ನಗರಕ್ಕೆ ಭೇಟಿ ನೀಡುವುದಾಗಿ ಘೋಷಿಸಿದ್ದಾರೆ. ಮತ್ತೊಂದೆಡೆ ಕನ್ನಡ ಸಂಘಟನೆಗಳು ಕಾರ್ಮಿಕರಿಗೆ ಅವರು ರಾಜ್ಯಕ್ಕೆ ಪ್ರವೇಶಿಸುವುದನ್ನು ತಡೆಯಲು ಬೆಳಗಾವಿಗೆ ಬರುವಂತೆ ಕರೆ ನೀಡಿವೆ.

ಈ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರು, ಸದಸ್ಯರುಗಳು ಸೇರಿ ಸಭೆ ನಡೆಸಿದ್ದು, ಮಹಾರಾಷ್ಟ್ರ ಸಚಿವರನ್ನು ರಾಜ್ಯಕ್ಕೆ ಪ್ರವೇಶಿಸುವುದನ್ನು ತಡೆಯಲು ಸೋಮವಾರ ಸಂಜೆ ಬೆಂಗಳೂರಿನಿಂದ 100 ವಾಹನಗಳಲ್ಲಿ ಬೆಳಗಾವಿಗೆ ತೆರಳಲಿದ್ದೇವೆ. ಅಂತೆಯೇ, ಮಹಾರಾಷ್ಟ್ರ ಸಚಿವರ ಭೇಟಿ ವಿರೋಧಿಸಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಆಡಳಿತಾರೂಢ ಬಿಜೆಪಿ ಸರ್ಕಾರವು ಸಂಕಷ್ಟದಲ್ಲಿದೆ, ಕನ್ನಡ ಸಂಘಟನೆಗಳು ಮಹಾರಾಷ್ಟ್ರದ ಸಚಿವರನ್ನು ಕರ್ನಾಟಕದ ಭೂಪ್ರದೇಶದೊಳಗೆ ಪ್ರವೇಶಿಸಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿವೆ. ಪ್ರಸ್ತುತ ಪರಿಸ್ಥಿತಿಯಲ್ಲಿ ರಾಜ್ಯಕ್ಕೆ ಭೇಟಿ ನೀಡದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಹಾರಾಷ್ಟ್ರ ಸಚಿವರಿಗೆ ಸಲಹೆ ನೀಡಿದ್ದರು. ಆದರೂ ಬಂದರೆ, ಕ್ರಮ ಕೈಗೊಳ್ಳಬಹುದು ಎಂದು ಕನ್ನಡ ಪರ ಹೋರಾಟಗಾರರು ಎಚ್ಚರಿಸಿದ್ದಾರೆ.

ಬೆಳಗಾವಿಗೆ ಬರಲು ಯೋಜಿಸುತ್ತಿರುವ ಮಹಾರಾಷ್ಟ್ರದ ಮಂತ್ರಿಗಳು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಾರೆ ಎಂದು ಕನ್ನಡ ಹೋರಾಟಗಾರರು ಹೇಳುತ್ತಿದ್ದು, ಅವರು ಕನ್ನಡ ಮತ್ತು ಮರಾಠಿ ಜನರ ನಡುವಿನ ಸಾಮರಸ್ಯವನ್ನು ಹಾಳುಮಾಡುತ್ತಾರೆ. ಅವರನ್ನು ರಾಜ್ಯಕ್ಕೆ ಪ್ರವೇಶಿಸಲು ಅವಕಾಶ ನೀಡಬೇಡಿ, ಒಂದೋ ಅವರನ್ನು ಬಂಧಿಸಿ ಅಥವಾ ವಾಪಸ್ ಕಳಿಸಿ ಎಂದು ಆಡಳಿತಾರೂಢ ಬಿಜೆಪಿಯನ್ನು ಕನ್ನಡ ಹೋರಾಟಗಾರರು ಒತ್ತಾಯಿಸಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ಎ.ನಾರಾಯಣಗೌಡ ಮಾತನಾಡಿ, ಬೆಳಗಾವಿಯನ್ನು ಮಹಾರಾಷ್ಟ್ರದೊಂದಿಗೆ ವಿಲೀನಗೊಳಿಸಲು ಹೋರಾಟ ನಡೆಸುತ್ತಿರುವ ಕರ್ನಾಟಕದ ರಾಜಕೀಯ ಸಂಘಟನೆ, ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮಹಾರಾಷ್ಟ್ರದ ಸಚಿವರನ್ನು ಬೆಳಗಾವಿ ನಗರಕ್ಕೆ ಆಹ್ವಾನಿಸಿ ಪತ್ರ ಬರೆದಿತ್ತು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಬಿಜೆಪಿ ಮತ್ತು ಶಿವಸೇನೆಯ ಸಮ್ಮಿಶ್ರ ಸರ್ಕಾರ ನೇಮಿಸಿದ ಸಮನ್ವಯ ಸಚಿವರಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಅವರಿಗೆ ಈ ಮನವಿ ಸಲ್ಲಿಸಲಾಗಿದೆ. ಗಡಿ ವಿವಾದದ ಬಗ್ಗೆ ಚರ್ಚೆಯ ಅಗತ್ಯವಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಇಬ್ಬರೂ ಸಚಿವರು ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಮತ್ತು ಡಿಸೆಂಬರ್ 6 ರಂದು ಬೆಳಗಾವಿ ನಗರಕ್ಕೆ ಭೇಟಿ ನೀಡುವುದಾಗಿ ಭರವಸೆ ನೀಡಿದ್ದಾರೆ. ಒಂದು ವೇಳೆ ಸರ್ಕಾರ ಮಹಾರಾಷ್ಟ್ರ ಸಚಿವರಿಗೆ ಪ್ರವೇಶಿಸಲು ಅವಕಾಶ ಮಾಡಿಕೊಟ್ಟರೆ, ಕನ್ನಡ ಹೋರಾಟಗಾರರು ಅವರನ್ನು ಒಳಗೆ ಬಿಡುವುದಿಲ್ಲ. ಅವರನ್ನು ರಾಜ್ಯಕ್ಕೆ ಬಿಟ್ಟರೆ ಯಾವುದೇ ಪರಿಣಾಮಗಳಿಗೆ ತಾವು ಜವಾಬ್ದಾರರಲ್ಲ ಎಂದು ಅನೇಕ ಕನ್ನಡ ಸಂಘಟನೆಗಳು ಕರ್ನಾಟಕದ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ ಎಂದು ತಿಳಿಸಿದ್ದಾರೆ.

ಗಡಿ ವಿವಾದ: ರಾಜ್ಯದ ನಿಲುವು ಸಂವಿಧಾನಬದ್ದ- ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಸುಪ್ರೀಂಕೋರ್ಟ್ ನಲ್ಲಿ ಗಡಿ ವಿವಾದದ ಪ್ರಕರಣ ವಿಚಾರಣೆಗೆ ಬರಲಿದ್ದು, ಕರ್ನಾಟಕದ ನಿಲುವು ಸಂವಿಧಾನಬದ್ದ ಹಾಗೂ ಕಾನೂನಾತ್ಮಕವಾಗಿ ಸ್ಪಷ್ಟವಾಗಿದೆ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇಂದು ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಪುಣ್ಯತಿಥಿಯ ಅಂಗವಾಗಿ ವಿಧಾನ ಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದ ಅರ್ಜಿ  ಮೈಂಟೆನಬಲ್ ಅಲ್ಲ ಎನ್ನುವುದು ನಮ್ಮ ನಿಲುವು. ಅದನ್ನೇ ನಮ್ಮ ವಕೀಲರು ವಾದ ಮಂಡಿಸಿದ್ದಾರೆ. ನಮ್ಮ ನಿಲುವು ಸಂವಿಧಾನಬದ್ದ ಹಾಗೂ ಕಾನೂನಾತ್ಮಕವಾಗಿದೆ. ಎಲ್ಲಾ ಅಂಶಗಳ ಬಗ್ಗೆ ವಕೀಲರು ವಾದ ಮಾಡಲಿದ್ದಾರೆ ಎಂದರು.

ಪಕ್ಷದಲ್ಲಿ ರೌಡಿಗಳಿಗೆ ಅವಕಾಶವಿಲ್ಲ

ಪಕ್ಷದಲ್ಲಿ ಯಾವುದೇ ರೌಡಿಗಳನ್ನು ನಾವು ಸೇರ್ಪಡೆ ಮಾಡುವುದಿಲ್ಲ. ಯಾವುದೇ ಅವಕಾಶಗಳನ್ನು ಕೊಡುವುದಿಲ್ಲ ಎನ್ನುವುದು ಸ್ಪಷ್ಟವಾಗಿದೆ. ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು: ಚರ್ಚೆಯಾಗಿಲ್ಲ

ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯಲಿದ್ದು ಹಿಜಾಬ್ ಧರಿಸಲು ಅನುಮತಿ ನೀಡುವು ದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು,  ಈ ಬಗ್ಗೆ ಸರ್ಕಾರದಲ್ಲಿ  ಚರ್ಚೆಯಾಗಿಲ್ಲ. ಇದು ಅವರ ವೈಯಕ್ತಿಕ ಅಭಿಪ್ರಾಯವಿರಬಹುದು. ಇದು ನಮ್ಮ ಸರ್ಕಾರದ ನಿಲುವಲ್ಲ. ವಕ್ಫ್ ಮಂಡಳಿ ಅಧ್ಯಕ್ಷರು ಈ ಬಗ್ಗೆ  ಸರ್ಕಾರದೊಂದಿಗೆ ಚರ್ಚೆ ಮಾಡಬೇಕು ಎಂದರು.

ಈ ವೇಳೆ ಆರೋಗ್ಯ ಸಚಿವ ಡಾ: ಕೆ.ಸುಧಾಕರ್,  ಸಂಸದ ಮುನಿಸ್ವಾಮಿ, ಕೆಂಗಲ್ ಹನುಮಂತಯ್ಯ ಅವರ ಕುಟುಂಬ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕರ್ನಾಟಕ-ಮಹಾ ಗಡಿ ವಿವಾದವು ಒಂದು ಪಿತೂರಿ: ಕಾಂಗ್ರೆಸ್
ಕಲಬುರಗಿ: ಕರ್ನಾಟಕ-ಮಹಾರಾಷ್ಟ್ರದೊಂದಿಗಿನ ಗಡಿ ವಿವಾದದಿಂದ ಉದ್ಭವಿಸಿರುವ ಉದ್ವಿಗ್ನತೆಯ ನಡುವೆಯೇ, ಕರ್ನಾಟಕ ಕಾಂಗ್ರೆಸ್ ಪ್ರಸ್ತುತ ಪರಿಸ್ಥಿತಿಯನ್ನು ‘ಪಿತೂರಿ’ ಎಂದು ಕರೆದಿದೆ.

ಈ ಕುರಿತು ಮಾಧ್ಯಮದವರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಚುನಾವಣೆಗೂ ಮುನ್ನ ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನಗಳು ನಡೆಯುತ್ತಿದ್ದು, ʼನಮ್ಮ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ಮೇಲಿನ ಕೀಳರಿಮೆಯನ್ನು ಮರೆಮಾಚಲು ಇದನ್ನು ದೊಡ್ಡ ವಿಷಯವನ್ನಾಗಿ ಮಾಡುತ್ತಿದ್ದಾರೆ. ಇದರ ಹಿಂದೆ ಪಿತೂರಿ ಇದೆʼ ಎಂದು ಶಿವಕುಮಾರ್ ದೂರಿದ್ದಾರೆ.

ಗಡಿ ವಿವಾದವನ್ನು ಈಗಾಗಲೇ ಪರಿಹರಿಸಲಾಗಿದೆ. ʼನಮ್ಮ ಗಡಿಯೊಳಗಿನ ಪ್ರದೇಶ ನಮ್ಮದು, ಅವರ ಭೂಪ್ರದೇಶದಲ್ಲಿರುವ ಪ್ರದೇಶ ಅವರದು. ನಮ್ಮ ಪರವಾಗಿರುವವರು ನಮ್ಮ ಜನರೇʼ ಎಂದು ಶಿವಕುಮಾರ್‌ ಸಮರ್ಥಿಸಿಕೊಂಡಿದ್ದಾರೆ.

ಗಡಿ ವಿವಾದದ ನೆಪದಲ್ಲಿ ಮಹಾರಾಷ್ಟ್ರದಲ್ಲಿ ಯಾವುದೇ ಪಕ್ಷಕ್ಕೆ ಸೇರಿದ ಯಾರೊಬ್ಬರೂ ಶಾಂತಿ ಕದಡುವುದು ಸೂಕ್ತವಲ್ಲ ಎಂದು ಶಿವಕುಮಾರ್ ಹೇಳಿದ್ದಾರೆ.

ʼನಾವು ಬೆಳಗಾವಿಯಲ್ಲಿ ಸುವರ್ಣ ಸೌಧವನ್ನು ನಿರ್ಮಿಸಿದ್ದೇವೆ. ಶಾಂತಿ ಕದಡುವ ಕಾರ್ಯದಲ್ಲಿ ಯಾರೂ ತೊಡಗಬಾರದು’ ಎಂದಿದ್ದಾರೆ.

ಬೆಳಗಾವಿ ನಗರ ಮತ್ತು ಕರ್ನಾಟಕದ ನಾಲ್ಕು ಜಿಲ್ಲೆಗಳ 865 ಹಳ್ಳಿಗಳ ಮೇಲೆ ತನ್ನ ಹಕ್ಕುಗಳನ್ನು ಕೋರಿ ಮಹಾರಾಷ್ಟ್ರ ಸರ್ಕಾರವು 2004 ರಲ್ಲಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಸುಪ್ರೀಂ ಕೋರ್ಟ್ ಈ ಅರ್ಜಿಯನ್ನು ನಂತರದ ದಿನದಲ್ಲಿ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ ಎಂದು ಶಿವಕುಮಾರ್‌ ತಿಳಿಸಿದ್ದಾರೆ.

ಕರ್ನಾಟಕದ ಗಡಿ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಇದೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು ಪೊಲೀಸ್ ಇಲಾಖೆ ಗಡಿ ಪ್ರದೇಶದಾದ್ಯಂತ ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಿದೆ. ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಎಂಬ ರಾಜಕೀಯ ಸಂಘಟನೆ ಬಿಜೆಪಿ-ಶಿವಸೇನೆ ಸಮ್ಮಿಶ್ರ ಸರ್ಕಾರದ ಇಬ್ಬರು ಸಚಿವರನ್ನು ಬೆಳಗಾವಿಗೆ ಆಹ್ವಾನಿಸಿದ್ದು, ಅವರಿಗೆ ಅವಕಾಶ ನೀಡದಂತೆ ಕನ್ನಡ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ. ಆದಾಗ್ಯೂ, ಪರಿಸ್ಥಿತಿಯ ಬಗ್ಗೆ ಕಾಂಗ್ರೆಸ್ ನೀಡಿದ ಹೇಳಿಕೆಯು ರಾಜ್ಯದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಮಹಾರಾಷ್ಟ್ರ ಮುಖ್ಯಮಂತ್ರಿ ಪ್ರತಿಕೃತಿ ದಹಿಸಿ ಕರವೇ ಆಕ್ರೋಶ
ಬೆಳಗಾವಿ : ಕರ್ನಾಟಕ – ಮಹಾರಾಷ್ಟ್ರ ಗಡಿವಿವಾದವು ತಾರಕಕ್ಕೇರಿದ್ದು, ಕರ್ನಾಟಕದ ಸರ್ಕಾರಿ ಬಸ್ಸುಗಳಿಗೆ ಮಸಿ, ಮತ್ತು ಕಲ್ಲು ತೂರಾಟ ಮಾಡಿರುವ ಹಿನ್ನಲೆಯಲ್ಲಿ, ಪ್ರತಿರೋಧವಾಗಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಹರಾಷ್ಟ್ರದ ವಾಹನಗಳಿಗೆ ಮಸಿ ಬಳಿಯುವುದರ ಜೊತೆಗೆ ಮಹರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರದ ವಿವಿಧ ನಗರಗಳಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆಯ ಹಲವು ಬಸ್‌ಗಳಿಗೆ ಅಖಿಲ ಮಹಾರಾಷ್ಟ್ರ ಮರಾಠಿಗರ ಸಂಘದ ಕಾರ್ಯಕರ್ತರು ಶುಕ್ರವಾರ ಕಪ್ಪು ಮಸಿ ಬಳಿದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಘೋಷಣೆಗಳನ್ನು ಕೂಗಿದ್ದರು. ಅಷ್ಟಲ್ಲದೆ, ಬೆಳಗಾವಿ, ನಿಪ್ಪಾಣಿ, ಖಾನಾಪುರ, ಬಾಲ್ಕಿ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಪ್ರತಿಭಟನೆ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ಕರವೇ ಕಾರ್ಯಕರ್ತರು ಭಾನುವಾರದಂದು ಬೆಳಗಾವಿ ಗಡಿ ಭಾಗದಲ್ಲಿನ ಮಹಾರಾಷ್ಟ್ರ ವಾಹನಗಳಿಗೆ ಕಪ್ಪು ಮಸಿ ಬಳಿದಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿಯವರ ಪ್ರತಿಕೃತಿಯನ್ನು ದಹನಗೊಳಿಸುವುದರ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ದೀಪಕ್‌ ಗುಡಗನಟ್ಟಿ,ʼಮಹಾರಾಷ್ಟ್ರಿಗರ ಪುಂಡಾಟದಿಂದ ನಮಗೆಲ್ಲ ಬೇಸರವಾಗಿದ್ದು, ಈ ಹಿನ್ನೆಲೆಯಲ್ಲಿ ಕರವೇ ವತಿಯಿಂದ ಮಹಾರಾಷ್ಟ್ರದ ಮುಖ್ಯಮಂತ್ರಿಯವರ ಪ್ರತಿಕೃತಿಯನ್ನು ದಹನ ಮಾಡುವುದರ ಮುಖಾಂತರ ನಮ್ಮ ಹೋರಾಟವನ್ನು ಮುಂದುವರೆಸಿ, ಜಿಲ್ಲೆಯ ಜನಪ್ರತಿನಿಧಿಗಳಿಗೆ ಎಚ್ಚರಿಕೆ ನೀಡುತ್ತಿದ್ದೇವೆʼ ಎಂದರು.

ಮುಂದುವರೆದು ಮಾತನಾಡಿದ ಅವರು, ಬೆಳಗಾವಿ ಗಡಿ ವಿಚಾರಕ್ಕೆ ಸಂಬಂಧ ಪಟ್ಟಂತೆ ಇಲ್ಲಿನ ಜನರು ಯಾರು ತುಟಿ ಬಿಚ್ಚುತ್ತಿಲ್ಲ. ನೀವು ಕನ್ನಡಿಗರ ಮತವನ್ನು ಪಡೆದುಕೊಂಡು ಕರ್ನಾಟಕ ಸರ್ಕಾರದ ಅಧಿಕಾರವನ್ನು ಅನುಭವಿಸುತ್ತಿದ್ದೀರಿ. ಹಾಗಾಗಿ ಗಡಿ ವಿಚಾರಕ್ಕೆ ಸಂಬಂಧಪಟ್ಟಂತೆ ನೀವೆಲ್ಲ ನಾಡಿನ ಪರವಾಗಿ ಮಾತನಾಡಬೇಕು. ಅದನ್ನು ಬಿಟ್ಟು, ನಾಡಿನ ಪರವಾಗಿ ಮಾತನಾಡಿದಾಗ ಬೇರೆ ಭಾಷಿಗರು ಮತವನ್ನು ಹಾಕುವುದಿಲ್ಲ ಎಂದು ತಿಳಿದುಕೊಂಡಿದ್ದರೆ, ನಾವು ಸಹ ಜಾಗೃತಿ ವಹಿಸಬೇಕಾಗುತ್ತದೆ. ಯಾವ ಪ್ರತಿನಿಧಿಗಳು ಕನ್ನಡ, ಕರ್ನಾಟಕ ಪರವಾಗಿ ಕಾರ್ಯ ನಿರ್ವಹಿಸುತ್ತಾರೋ ಅಂತಹವರಿಗೆ ಮುಂದಿನ ಚುನಾವಣೆಯಲ್ಲಿ ಮತ ಚಲಾಯಿಸುವಂತೆ ಕನ್ನಡಿಗರು ಹಾಗೂ ಕರವೇಯವರು ಮನೆಮನೆಗೂ ಹೋಗಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಈ ಕಾರಣ ತಕ್ಷಣವೇ ಸರ್ವ ಪಕ್ಷಗಳ ಸಭೆ ಕರೆದು, ದೆಹಲಿಗೆ ವಿಶೇಷ ನಿಯೋಗವನ್ನು ತೆಗೆದುಕೊಂಡು ಹೋಗಿ ಪ್ರಧಾನಿ ಮೋದಿಯವರಿಂದ ಮಹಾರಾಷ್ಟ್ರದ ಮುಖ್ಯಮಂತ್ರಿಗಳ ಕಿವಿ ಹಿಂಡುವಂತಹ ಕೆಲಸ ಮಾಡಬೇಕು.ಮಹಾರಾಷ್ಟ್ರ ಸರ್ಕಾರ ಇಂತಹ ಗೂಂಡಾಗಳನ್ನು ಮುಂದಿಟ್ಟುಕೊಂಡು ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸುತ್ತಿರುವ ಕೆಲಸವನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ದೀಪಕ್‌ ಗುಡಗನಟ್ಟಿ ಒತ್ತಾಯಿಸಿದ್ದಾರೆ.

https://www.facebook.com/PeepalMediaKannada/videos/664519368672565

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಮುಂದಿನ ವಾರ ಸರ್ವಪಕ್ಷಗಳ ಸಭೆ ನಿಗದಿ ಮಾಡಿದ ಬಸವರಾಜ ಬೊಮ್ಮಾಯಿ
ಬೆಂಗಳೂರು: ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವಿನ ಗಡಿ ವಿವಾದವು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ನಾಯಕರ ಹೇಳಿಕೆಗಳ ನಂತರ ಭುಗಿಲೆದ್ದಿದ್ದು, ವಿವಾದಾತ್ಮಕ ವಿಷಯದ ಬಗ್ಗೆ ಮುಂದಿನ ವಾರ ಸರ್ವಪಕ್ಷಗಳ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ.

ಗಡಿ ವಿವಾದವನ್ನು ಮಾತುಕತೆಯ ಮೂಲಕ ಸೌಹಾರ್ದಯುತವಾಗಿ ಪರಿಹರಿಸುವ ಮಹಾರಾಷ್ಟ್ರ ಸರ್ಕಾರದ ಉದ್ದೇಶಗಳ ಬಗ್ಗೆ ಸರ್ವಪಕ್ಷಗಳ ಸಭೆಯಲ್ಲಿ ವಿವರವಾಗಿ ಚರ್ಚಿಸಲಾಗುವುದು ಎಂದು ಬೊಮ್ಮಾಯಿ ಹೇಳಿದರು.

ʼಗಡಿ ವಿವಾದ ಮುಗಿದಿದೆ ಆದರೆ ಮಹಾರಾಷ್ಟ್ರವು ಈ ವಿವಾದವನ್ನು ಎತ್ತಿ ಹಿಡಿಯುತ್ತಿದೆ. ಗ್ರಾಮ ಪಂಚಾಯಿತಿಯ ಪರಿಹಾರ ಮತ್ತು ಇತರ ಸಂಬಂಧಿತ ಸಮಸ್ಯೆಗಳು ನಮ್ಮೊಂದಿಗೆ ಇವೆ (ನಮ್ಮ ಪರವಾಗಿ). ಇದೆಲ್ಲವನ್ನೂ ಸುಪ್ರೀಂ ಕೋರ್ಟ್ ನಲ್ಲಿ ಚರ್ಚಿಸಲಾಗುವುದುʼ ಎಂದರು.

ಎರಡು ರಾಜ್ಯಗಳ ಗಡಿಯಲ್ಲಿರುವ ಹಲವಾರು ಗ್ರಾಮಗಳ ‘ಮಾಲೀಕತ್ವ’ಕ್ಕೆ ಸಂಬಂಧಿಸಿದ ಗಡಿ ವಿವಾದವನ್ನು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಕರ್ನಾಟಕದ ವಾದಗಳನ್ನು ಸುಪ್ರೀಂ ಕೋರ್ಟ್ ಮುಂದೆ ಮಂಡಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮಾತುಕತೆಯ ಮೂಲಕ ಈ ಬಿಕ್ಕಟ್ಟನ್ನು ಪರಿಹರಿಸುವ ಬಗ್ಗೆ ಮಾತನಾಡಲಾಗುತ್ತಿದೆ ಎನ್ನುವುದರ ಬಗ್ಗೆ ನನಗೆ ಮಾಹಿತಿ ಇದೆ ಎಂದು ಬೊಮ್ಮಾಯಿ ಹೇಳಿದರು.

ಮಹಾರಾಷ್ಟ್ರ ಸರ್ಕಾರವು ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದೆ. ಹೀಗಾಗಿ ಕರ್ನಾಟಕ ಸರ್ಕಾರವು ಸರ್ವಪಕ್ಷಗಳ ಸಭೆ ನಡೆಸಿ, ಸರ್ವೋಚ್ಚ ನ್ಯಾಯಾಲಯದಲ್ಲಿ ವಾದ-ಪ್ರತಿವಾದಗಳ ಬಗ್ಗೆ ಮತ್ತು ಗಡಿ ಅಭಿವೃದ್ಧಿ ಪ್ರಾಧಿಕಾರದೊಂದಿಗೆ ಚರ್ಚೆ ನಡೆಸಲಿದೆ ಎಂದು ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಸರ್ವೋಚ್ಚ ನ್ಯಾಯಾಲಯದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಕಾನೂನು ತಂಡವನ್ನು ಬಲಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯರವರು ಒತ್ತಾಯಿಸಿದ ನಂತರ ಬೊಮ್ಮಾಯಿ ಅವರು ಸರ್ವಪಕ್ಷಗಳ ಸಭೆ ನಡೆಸಲು ನಿರ್ಧರಿಸಿದ್ದಾರೆ.