KMF – Peepal Media

ಮುಂದುವರೆದ ಪರಂಪರೆ: ನಂದಿನಿ ಬ್ರಾಂಡ್‌ ರಾಯಭಾರಿಯಾಗಿ ಶಿವಣ್ಣ
ಬೆಂಗಳೂರು: ರೈತರ ಸಂಸ್ಥೆಯಾದ ಕರ್ನಾಟಕದ ಹೆಮ್ಮೆಯ ನಂದಿನಿಗೆ ಈ ಹಿಂದೆ ಡಾ. ರಾಜ್‌ಕುಮಾರ್‌ ರಾಯಭಾರಿಯಾಗಿದ್ದರು. ಅವರ ನಂತರ ಪುನೀತ್‌ ಕೂಡಾ ಉಚಿತವಾಗಿಯೇ ಈ ಬ್ರಾಂಡಿನ ರಾಯಭಾರವನ್ನು ಮುಂದುವರೆಸಿದ್ದರು. ಅವರ ಅಕಾಲಿಕ ಅಗಲಿಕೆಯ ನಂತರ ಈಗ ಡಾ. ಶಿವರಾಜ್‌ಕುಮಾರ್‌ ನಂದಿನಿಯ ರಾಯಭಾರಿಯಾಗಲು ಒಪ್ಪಿಕೊಂಡಿದ್ದಾರೆ.

ಈ ಕುರಿತು ಸುದ್ದಿಯನ್ನು ಹಂಚಿಕೊಂಡಿರುವ ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷರಾದ ಭೀಮಾ ನಾಯಕ್‌ ಶಿವರಾಜ್‌ಕುಮಾರ್‌ ಅವರು ರಾಯಭಾರಿಯಾಗಲು ಒಪ್ಪಿಕೊಂಡಿರುವ ಸುದ್ದಿಯನ್ನು ಖಚಿತಪಡಿಸಿದ್ದಾರೆ.

https://twitter.com/BheemaNaikINC/status/1686286657170132993
ಇನ್ನು ನಂದಿನಿ ತುಪ್ಪ ತಿರುಪತಿಗೆ ಸರಬರಾಜು ಮಾಡುವ ವಿಚಾರದಲ್ಲಿ ಬಿಜೆಪಿ ತನ್ನ ರಾಜಕೀಯವನ್ನು ಮುಂದುವರೆಸಿದ್ದು, ಈ ಕುರಿತು ಪ್ರತಿಕ್ರಿಯಿಸಿರುವ ಸಿದ್ಧರಾಮಯ್ಯನವರು “ಈ ಹಿಂದೆ ಬೊಮ್ಮಾಯಿ, ಯಡಿಯೂರಪ್ಪನವರ ಕಾಲದಲ್ಲೂ ಟೆಂಡರ್‌ ತಪ್ಪಿತ್ತು ಹಾಗೆಂದು ಅವರೂ ಧರ್ಮ ದೋಹಿಗಳಾಗುತ್ತಾರೆಯೇ” ಎಂದು ತಮ್ಮ ಟ್ವಿಟರ್‌ ಅಕೌಂಟಿನಲ್ಲಿ ಕುಟುಕಿದ್ದಾರೆ.

https://m.facebook.com/story.php?story_fbid=pfbid0ZciQ8xZxR1ECSxT2D8p8NZdTgP9SzL7zPe7RNJQ9yRyiswiJC5jqmiiYvAvfNfLml&id=100044576433033&sfnsn=wiwspwa&mibextid=6aamW6

2021 ರಲ್ಲೇ ತಿರುಪತಿಗೆ ತುಪ್ಪದ ಪೂರೈಕೆ ನಿಲ್ಲಿಸಲಾಗಿದೆ : ಕೆಎಂಎಫ್ ಎಂ.ಡಿ ಸ್ಪಷ್ಟನೆ
ಆಗಸ್ಟ್ 1 ರಿಂದ ಕೆಎಂಎಫ್ (ಕರ್ನಾಟಕ ಮಿಲ್ಕ್ ಫೆಡರೇಷನ್) ಹಾಲಿನ ಉತ್ಪನ್ನಗಳ ಪರಿಷ್ಕೃತ ದರ ಅನ್ವಯವಾಗಲಿದ್ದು, ಬಹುತೇಕ ಉತ್ಪನ್ನಗಳ ಬೆಲೆ ಏರಿಕೆ ಆಗಲಿದೆ ಎಂದು ಕೆಎಮ್ಎಫ್ ಅಧ್ಯಕ್ಷ ಭೀಮಾ ನಾಯ್ಕ್ ಮಾಹಿತಿ ನೀಡಿದ್ದಾರೆ. ಇತ್ತ ವಿರೋಧ ಪಕ್ಷದಲ್ಲಿರುವ ಬಿಜೆಪಿ ಸಹಜವಾಗಿ ಸರ್ಕಾರದ ನಿಲುವಿಗೆ ವಿರೋಧ ವ್ಯಕ್ತಪಡಿಸಿದೆ.

ಈ ನಡುವೆ ಹಾಲಿನ ದರ ಏರಿಕೆ ಹಿನ್ನೆಲೆಯಲ್ಲಿ ತಿರುಪತಿ ದೇವಸ್ಥಾನಕ್ಕೆ ಸಂಬಂಧಪಟ್ಟ ಸುದ್ಧಿಯೊಂದು ಬಿಜೆಪಿ ಸಾಮಾಜಿಕ ಜಾಲತಾಣ ಸೇರಿದಂತೆ ಬಿಜೆಪಿ ನಾಯಕರ ಬಾಯಲ್ಲಿ ಹೊಸ ಸುದ್ದಿಯಂತೆ ಹರಿದಾಡುತ್ತಿದೆ. ಅದೇನೆಂದರೆ ‘ನಂದಿನಿ ಉತ್ಪನ್ನಗಳ ದರ ಏರಿಕೆ ಹಿನ್ನೆಲೆಯಲ್ಲಿ ತಿರುಪತಿಯಲ್ಲಿ ಇನ್ನು ನಂದಿನಿ ಪದಾರ್ಥಗಳ ಖರೀದಿ ನಿಲ್ಲಿಸಲಾಗಿದೆ’ ಎಂದು.

ಇದನ್ನೇ ಮುಂದಿಟ್ಟುಕೊಂಡು ಕರ್ನಾಟಕಕ್ಕೆ ಇದು ಕಾಂಗ್ರೆಸ್ ಸರ್ಕಾರ ಮಾಡಿದ ದ್ರೋಹ. ನಂದಿನಿ ಉಳಿಸುತ್ತೇವೆ ಎಂದು ಬಂದ ಕಾಂಗ್ರೆಸ್ ಈಗ ನಂದಿನಿ ಅವಸಾನಕ್ಕೆ ದಾರಿ ಮಾಡಿದೆ. 5 ದಶಕಗಳಲ್ಲಿ ಇದೇ ಮೊದಲ ಬಾರಿ ಹೀಗಾಗಿದೆ ಎಂಬಿತ್ಯಾದಿ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವಿಷಯ ಹರಿದಾಡಿದೆ.

ಅಸಲಿ ವಿಚಾರ ಏನೆಂದರೆ ತಿರುಮಲ ತಿರುಪತಿ ದೇವಸ್ಥಾನಕ್ಕೆ (ಟಿಟಿಡಿ) ಕಳೆದ ಒಂದೂವರೆ ವರ್ಷದಿಂದಲೇ ನಂದಿನಿ ಉತ್ಪನ್ನದ ತುಪ್ಪವನ್ನು ಪೂರೈಸಿಲ್ಲ ಎಂದು ಕೆಎಮ್ಎಫ್ ಸ್ಪಷ್ಟಪಡಿಸಿದೆ. ಡೈರಿ ಉತ್ಪನ್ನಗಳ ಬೆಲೆ ಏರಿಕೆಯ ನಂತರ ಟಿಟಿಡಿ ಕರ್ನಾಟಕದಿಂದ ನಂದಿನಿ ತುಪ್ಪವನ್ನು ಸಂಗ್ರಹಿಸುವುದನ್ನು ನಿಲ್ಲಿಸಿದೆ ಎಂದು ಹೇಳಿರುವ ವರದಿಯಲ್ಲಿ ಬಹುತೇಕ ಸತ್ಯಕ್ಕೆ ದೂರವಾದದು. 2021 ಕ್ಕೇ ಕೊನೆಯ ಬಾರಿಗೆ ಟಿಟಿಡಿ ನಮ್ಮ ಉತ್ಪನ್ನಗಳನ್ನು ಖರೀದಿಸಿದ್ದು ಎಂದು ಕೆಎಮ್ಎಫ್ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್ ಸ್ಪಷ್ಟಪಡಿಸಿದ್ದಾರೆ.

“ಹಲವು ವರ್ಷಗಳಿಂದ ಕೆಎಮ್ಎಫ್ ಟಿಟಿಡಿಗೆ ಹಾಲಿನ ಉತ್ಪನ್ನಗಳನ್ನು ಪೂರೈಸುತ್ತಾ ಬಂದಿದೆ. ಅದರಂತೆ ಟಿಟಿಡಿ ಕೂಡಾ ತಿಂಗಳಿಗೊಮ್ಮೆ ಟೆಂಡರ್ ಮೂಲಕ ತುಪ್ಪ ಖರೀದಿಸುತ್ತಿತ್ತು. ಹಿಂದಿನಿಂದಲೂ ನಾವು (ಕೆಎಮ್ಎಫ್) ಬಿಡ್ ನಲ್ಲಿ ಪಾಲ್ಗೊಂಡು ಅತಿ ಕಡಿಮೆ ಬೆಲೆಗೆ ಪೂರೈಸುತ್ತಿದ್ದೆವು. ಆದರೆ ಸ್ಪರ್ಧಾತ್ಮಕವಾಗಿ ನಾವು ಕಡಿಮೆ ಬೆಲೆಗೆ ಉತ್ಪನ್ನಗಳನ್ನು ಪೂರೈಸಿದರೆ ನಮಗೇ ನಷ್ಟವಾಗುತ್ತಿದ್ದ ಕಾರಣ 2021 ರಿಂದಲೇ ಬಿಡ್ ನಲ್ಲಿ ಭಾಗಿಯಾಗುತ್ತಿಲ್ಲ” ಎಂದು ಕೆಎಮ್ಎಫ್ ಎಂ.ಡಿ, ಎಂ.ಕೆ ಜಗದೀಶ್ ಸ್ಪಷ್ಟಪಡಿಸಿದ್ದಾರೆ.

ಸಧ್ಯ ಎಂ.ಕೆ.ಜಗದೀಶ್ ಅವರ ಸ್ಪಷ್ಟನೆಯಿಂದ ಈ ವಿವಾದಕ್ಕೆ ತೆರೆ ಎಳೆದಂತಾಗಿದೆ. ಆ ಮೂಲಕ ಬಿಜೆಪಿ ಸರ್ಕಾರದ ಅವಧಿಯಲ್ಲೇ ನಂದಿನಿ ತುಪ್ಪ ಟಿಟಿಡಿಗೆ ಹೋಗುವುದು ನಿಲ್ಲಿಸಲಾಗಿದೆ ಎಂಬುದಕ್ಕೆ ಸ್ಪಷ್ಟನೆ ಸಿಕ್ಕಂತಾಗಿದೆ.

ಮಾಜಿ ಶಾಸಕ ಭೀಮಾ ನಾಯ್ಕ್ ಗೆ ಒಲಿದ ಕೆಎಮ್ಎಫ್ ಅಧ್ಯಕ್ಷ ಸ್ಥಾನ
ಹೊಸ ಸರ್ಕಾರ ರಚನೆಯಾದ ನಂತರ ಬಾಲಚಂದ್ರ ಜಾರಕಿಹೊಳಿ ಅವರಿಂದ ತೆರವಾದ ಕೆಎಮ್ಎಫ್ ( KMF ) ಅಧ್ಯಕ್ಷ ಸ್ಥಾನಕ್ಕೆ ಹಗರೀಬೊಮ್ಮನಹಳ್ಳಿ ಮಾಜಿ ಶಾಸಕರಾದ ಭೀಮಾ ನಾಯ್ಕ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಸಧ್ಯ ರಾಬಕೋವಿ ಹಾಲು ಒಕ್ಕೂಟದ ಅಧ್ಯಕ್ಷರಾಗಿರುವ ಭೀಮಾ ನಾಯ್ಕ್ ಗೆ ಕೆಎಮ್ಎಫ್ ಗದ್ದುಗೆಯ ಅದೃಷ್ಟ ಒಲಿದಿದೆ.

ಕೆಎಮ್ಎಫ್ ಬೋರ್ಡ್ ಮೀಟಿಂಗ್ ನಲ್ಲಿ ಸರ್ವಾನುಮತದಿಂದ ಭೀಮಾ ನಾಯ್ಕ್ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ನಡೆದ ಚುನಾವಣೆಯಲ್ಲಿ ಬೆಳಿಗ್ಗೆ ಭೀಮಾ ನಾಯ್ಕ್ ಅವರು ಕೆಎಮ್ಎಫ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಕೆ ಬಳಿಕ ಫೇಸ್​ಬುಕ್​ ಪೋಸ್ಟ್​ನಲ್ಲಿ, ಈ ಸ್ಥಾನಕ್ಕೆ ನನ್ನನ್ನು ನಾಮ ಪತ್ರ ಸಲ್ಲಿಸಲು ಆಯ್ಕೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ , ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಹಾಗೂ ನೂತನ ಸಚಿವರಿಗೆ ನನ್ನ ಕೃತಜ್ಞತೆಗಳು ಎಂದು ಬರೆದುಕೊಂಡಿದ್ದರು.

ಕೆಎಮ್ಎಫ್ ಸಂಸ್ಥೆ ಈ ವರೆಗೂ ರೈತರಿಗೆ ಸಹಕಾರಿಯಾಗಿ ಬೆಳೆದು ಬಂದಿದೆ. ಸಂಸ್ಥೆಯನ್ನು ಇನ್ನೂ ಎತ್ತರಕ್ಕೆ ಬೆಳೆಸುವ ಗುರಿಯಿದೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ಸೇರಿದಂತೆ ಹಿರಿಯರು, ರೈತರು ಮತ್ತು ಗ್ರಾಹಕರ ಸಂಪೂರ್ಣ ಸಹಕಾರ ಬೇಕು. ಆ ನಿಟ್ಟಿನಲ್ಲಿ ನಾನು ಕೆಲಸ ಮಾಡುವುದಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಇದೇ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಹಕಾರಿ ಸಚಿವ ರಾಜಣ್ಣ, ‘ನಂದಿನಿ ಸಂಸ್ಥೆಯನ್ನು ಬೆಳೆಸಲು ಸರ್ಕಾರ ಬದ್ಧವಾಗಿದೆ. ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಕಡಿಮೆಯಾಗಿದೆ. ಹೈನುಗಾರಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡಲಿದೆ. ರೈತರಿಗೆ ಸಿಗುವ ಹಾಲಿನ ದರದಲ್ಲಿ ಹೆಚ್ಚಳ ಮಾಡುವ ಕಡೆಗೂ ಗಮನ ಹರಿಸಬೇಕು. ಆ ನಿಟ್ಟಿನಲ್ಲಿ ಹಾಲಿನ ದರ ಏರಿಕೆ ಕೂಡಾ ನಮ್ಮ ಗಮನದಲ್ಲಿದೆ’ ಎಂದು ಹಾಲಿನ ದರ ಏರಿಕೆಯ ಮುನ್ಸೂಚನೆ ಕೊಟ್ಟಿದ್ದಾರೆ.

ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹ ಧನವನ್ನು ಕೂಡಲೇ ಬಿಡುಗಡೆ ಮಾಡಿ: ಸಿದ್ದರಾಮಯ್ಯ ಆಗ್ರಹ
ಬೆಂಗಳೂರು: ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹ ಧನವನ್ನು ಕೂಡಲೇ ಬಿಡುಗಡೆ ಮಾಡಿ ಹಾಲಿನ ಉತ್ಪನ್ನಗಳ ದರ ಏರಿಕೆಯಿಂದಾಗಿ ಬರುವ ಲಾಭವನ್ನು ಪೂರ್ಣವಾಗಿ ಹೈನುಗಾರರಿಗೇ ನೀಡಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಈ ಸಂಬಂಧ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಸರ್ಕಾರದ ಹಾದಿ ತಪ್ಪಿದ ನೀತಿಗಳಿಂದಾಗಿ ರಾಜ್ಯದ ಹಾಲು ಉತ್ಪಾದಕರು, ಹಾಲು ಉತ್ಪಾದಕ ಮಂಡಳಿಗಳೂ ಸಹ ವಿಪರೀತ ಒತ್ತಡದಲ್ಲಿರುವ ಪರಿಣಾಮ, 94 ಲಕ್ಷ ಲೀಟರುಗಳಿಗೆ ತಲುಪಿದ್ದ ಹಾಲಿನ ಸಂಗ್ರಹವು ಈ ತಿಂಗಳಲ್ಲಿ 77 ಲಕ್ಷ ಲೀಟರುಗಳಿಗೆ ಕುಸಿದಿದೆ. ರಾಜ್ಯದಲ್ಲಿ ಸುಮಾರು 25 ಲಕ್ಷ ನೋಂದಾಯಿತ ಹಾಲು ಉತ್ಪಾದಕರಿದ್ದಾರೆ. ಅವರಲ್ಲಿ ಸರಾಸರಿ 9 ಲಕ್ಷ ಜನರಿಗೆ ಸರ್ಕಾರ ಪ್ರೋತ್ಸಾಹ ಧನವನ್ನು ನೀಡುತ್ತಿದೆ. ಹಾಲನ್ನು ಯಥೇಚ್ಛವಾಗಿ ಉತ್ಪಾದಿಸುತ್ತಿದ್ದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ ಮುಂತಾದ ಜಿಲ್ಲೆಗಳ ರೈತರೆ ಹಸುಗಳನ್ನು ಸಾಕಲು ನಿರಾಸಕ್ತಿ ತೋರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರ ಇದ್ದಾಗ 2013 ರಿಂದ 2018ರ ಅವಧಿಯಲ್ಲಿ ಹಾಲಿಗೆ ನೀಡುವ ಪ್ರೋತ್ಸಾಹ ಧನವನ್ನು ಲೀಟರಿಗೆ 5 ರೂಪಾಯಿಗಳಷ್ಟು ಹೆಚ್ಚಿಸಿದ್ದೆವು. ವರ್ಷಕ್ಕೆ 4700 ಕೋಟಿ ರೂಪಾಯಿಗೂ ಅಧಿಕ ಮೊತ್ತವನ್ನು ರೈತರ ಖಾತೆಗಳಿಗೆ ವರ್ಗಾಯಿಸಿದ್ದೆವು. ನಮ್ಮ ಸರ್ಕಾರದ ನಿರ್ಧಾರದಿಂದಾಗಿ 2012-13 ರಲ್ಲಿ 45 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣವು 2017ರ ವೇಳೆಗೆ 73 ಲಕ್ಷ ಲೀಟರಿಗೆ [28 ಲಕ್ಷ ಲೀಟರು] ಏರಿಕೆಯಾಗಿತ್ತು. ಇದರಿಂದಾಗಿ ರೈತರ ಬದುಕಿನಲ್ಲಿ ಚೈತನ್ಯ ಮೂಡಿತ್ತು ಎಂದರು.

ಆದರೆ ಇಂದಿನ ಸರ್ಕಾರ ತನ್ನ ಪಶುಪಾಲಕ ವಿರೋಧಿ ನೀತಿಗಳಿಂದಾಗಿ ಹಾಲು ಉತ್ಪಾದಕರ ಬದುಕನ್ನು ನಿರ್ನಾಮ ಮಾಡಲು ಹೊರಟಿದೆ ಎಂದು ಆರೋಪಿಸಿರುವ ಅವರು, ಸರ್ಕಾರ ಕಾಲ ಕಾಲಕ್ಕೆ ಬಿಡುಗಡೆ ಮಾಡಬೇಕಾದ ಪ್ರೋತ್ಸಾಹಧನವನ್ನು ಬಿಡುಗಡೆ ಮಾಡುತ್ತಿಲ್ಲ. ಇತ್ತೀಚಿನ ಪತ್ರಿಕೆಗಳ ವರದಿ ಪ್ರಕಾರ ಅನೇಕ ಜಿಲ್ಲೆಗಳ ಹಾಲು ಉತ್ಪಾದಕರಿಗೆ ಕಳೆದ 7-8 ತಿಂಗಳಿಂದ ಪ್ರೋತ್ಸಾಹ ಧನವನ್ನು ನೀಡಿಲ್ಲ. ಇದರ ಬಾಬತ್ತು ನೂರಾರು ಕೋಟಿಗಳಷ್ಟು ಬಾಕಿ ಇದೆ ಎಂದು ತಿಳಿಸಿದ್ದಾರೆ.

ಕಳೆದ 5 ವರ್ಷಗಳಲ್ಲಿ ಜಾನುವಾರುಗಳಿಗೆ ನೀಡುವ ಹಿಂಡಿ, ಬೂಸ ಮುಂತಾದ ಪಶು ಆಹಾರದ ಬೆಲೆಗಳು ದೊಡ್ಡ ಪ್ರಮಾಣದಲ್ಲಿ ಹೆಚ್ಚಾಗಿವೆ. 2017-18 ರಲ್ಲಿ 49 ಕೆಜಿ ಬೂಸಾದ ಬೆಲೆ 450ರೂ ಇದ್ದದ್ದು ಈಗ 1300 ರಿಂದ 1350 ರೂಗಳಿಗೆ ಏರಿಕೆಯಾಗಿದೆ. 30 ಕೆಜಿ ಹಿಂಡಿಯ ಬೆಲೆ 400 ರೂ ಇದ್ದದ್ದು ಈಗ 1400 ಕ್ಕೂ ಹೆಚ್ಚಾಗಿದೆ. ಆದರೆ ಹಾಲಿನ ದರಗಳು ಮಾತ್ರ ಹೆಚ್ಚಾಗಿಲ್ಲ. ಇದರಿಂದಾಗಿ ನಮ್ಮ ರೈತರು ಜಾನುವಾರುಗಳನ್ನು ಸಾಕಣೆ ಮಾಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಪ್ರತಿ ತಿಂಗಳು 3000 ಟನ್ ಹಾಲಿನ ಪುಡಿಯನ್ನು ‘ಕ್ಷೀರ ಭಾಗ್ಯ’ ಯೋಜನೆಯಡಿ ಶಾಲೆ ಮತ್ತು ಅಂಗನವಾಡಿಗಳ ಮಕ್ಕಳಿಗಾಗಿ ನೀಡಲಾಗುತ್ತಿದೆ. ಆದರೆ ಸರ್ಕಾರ ಕಳೆದ ಕೆಲವು ವರ್ಷಗಳಿಂದ ಈಚೆಗೆ ಹಾಲಿನ ಪುಡಿಗೆ ನೀಡುವ ದರಗಳನ್ನು ಪರಿಷ್ಕರಿಸಿಲ್ಲ. 1 ಕೆಜಿ ಹಾಲಿನ ಪುಡಿ ಉತ್ಪಾದಿಸಲು ಜಿಎಸ್‍ಟಿ ಬಿಟ್ಟು 310ರೂ ತಗಲುತ್ತಿದೆ. ಆದರೆ ಸರ್ಕಾರ ಪ್ರತಿ ಕೆಜಿಗೆ ಕೇವಲ 275ರೂಗಳನ್ನು ಮಾತ್ರ ನೀಡುತ್ತಿದೆ ಎಂದರು.

ಮಾರುಕಟ್ಟೆಯಲ್ಲಿ ಕೆಎಂಎಫ್ ಒಂದು ಕೆಜಿ ಹಾಲಿನ ಪುಡಿಯನ್ನು 350 ರೂಗೆ ಮಾರಾಟ ಮಾಡುತ್ತಿರುವುದರಿಂದ ಪ್ರತಿ ವರ್ಷ 250 ಕೋಟಿ ರೂ ನಷ್ಟವಾಗಿ ಕೆಎಂಎಫ್ ಒತ್ತಡಕ್ಕೆ ಸಿಲುಕಿದೆ. ಸರ್ಕಾರ ಕೆಎಂಎಫ್‍ಗೆ ಮಾಡುತ್ತಿರುವ ಅನ್ಯಾಯದಿಂದಾಗಿ ರಾಜ್ಯದ ಜನರು ಮತ್ತು ಬೆಲೆ ಏರಿಕೆಯ ಹೊರೆಯನ್ನು ಅನುಭವಿಸುತ್ತಿದ್ದಾರೆ. ಸರ್ಕಾರ ಹಾಲು, ಮೊಸರಿಗೆ ಲೀಟರಿಗೆ 2 ರೂ ಹೆಚ್ಚು ಮಾಡಿದ್ದಾರೆ. ಆದರೆ ಕಳೆದ ಎರಡು ತಿಂಗಳಲ್ಲಿ ಪ್ರತಿ ಕೆಜಿ ತುಪ್ಪದ ಬೆಲೆಯನ್ನು ಸದ್ದಿಲ್ಲದೆ 140 ರೂ ಹೆಚ್ಚಿಸಿದ್ದಾರೆ. ಎಲ್ಲ ಸಿಹಿ ಪದಾರ್ಥಗಳು, ಪನ್ನೀರ್ ಮುಂತಾದವುಗಳ ಬೆಲೆಯನ್ನೂ ಸಹ ಶೇ.15 ರಷ್ಟು ಹೆಚ್ಚಿಸಿದ್ದಾರೆ. 10ರೂಗಳಿಗೆ ಮಾರುತ್ತಿದ್ದ ಒಂದು ಸಣ್ಣ ಮೈಸೂರುಪಾಕಿಗೆ 5 ರೂ ಹೆಚ್ಚಿಸಿ ಈಗ 15ರೂಗೆ ಮಾರುತ್ತಿದ್ದಾರೆ. ಆದರೆ ಏರಿಕೆಯಾಗಿರುವ ಹಾಲಿನ ದರವನ್ನು ಹೊರತುಪಡಿಸಿ ಉಳಿದ ಉತ್ಪನ್ನಗಳ ಹೆಚ್ಚುವರಿ ಹಣವನ್ನು ನಮ್ಮ ರೈತರಿಗೆ ವರ್ಗಾಯಿಸದೆ ಮೋಸ ಮಾಡಲಾಗುತ್ತಿದೆ. ತುಪ್ಪ, ಪನ್ನೀರ್, ಸಿಹಿ ತಿಂಡಿಗಳ ಬೆಲೆ ಹೆಚ್ಚಿಸಲಾಗಿದೆ ಎಂಬ ವಿಷಯವನ್ನು ಪ್ರಚಾರ ಮಾಡದೆ ಬಚ್ಚಿಡಲಾಗಿದೆ ಎಂದು ಹೇಳಿದರು.

ಜಾನುವಾರುಗಳಿಗೆ ಚರ್ಮಗಂಟು ರೋಗವು ವ್ಯಾಪಕವಾಗಿ ಹರಡುತ್ತಿದೆ. ಅವುಗಳಿಗೆ ಲಸಿಕೆ ಹಾಕಲು ವೈದ್ಯರುಗಳೇ ಇಲ್ಲ. ಸಂಚಾರಿ ಆಸ್ಪತ್ರೆ ಮಾಡುತ್ತೇವೆಂದು ಆಂಬ್ಯುಲೆನ್ಸುಗಳನ್ನು ಖರೀದಿಸಿ ಧೂಳು ತಿನ್ನಿಸಲಾಗುತ್ತಿದೆ. ಖರೀದಿಗೆ ಇರುವ ಉತ್ಸಾಹವು ಅವುಗಳನ್ನು ಬಳಸುವುದರಲ್ಲಿ ಇಲ್ಲವಾಗಿದೆ ಎಂದು ಅಸಮಾಧಾನ ವ್ಯಕ್ತ ಪಡಿಸಿದರು.

ಆದ್ದರಿಂದ ಈ ಕೂಡಲೆ ಬಾಕಿ ಇರುವ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡಬೇಕು. ನಂದಿನಿ ತುಪ್ಪ ಸೇರಿದಂತೆ ಇತರೆ ಉತ್ಪನ್ನಗಳಿಗೆ ಹೆಚ್ಚು ಮಾಡಿರುವ ಬೆಲೆಗಳಿಂದ ಬರುವ ಲಾಭವೆಲ್ಲವನ್ನೂ ರೈತರಿಗೆ ವರ್ಗಾಯಿಸಬೇಕು. ಕ್ಷೀರಭಾಗ್ಯ ಯೋಜನೆಯಡಿ ಕೆಎಂಎಫ್ ನಿಂದ ಖರೀದಿಸುತ್ತಿರುವ 36 ಸಾವಿರ ಟನ್ ಹಾಲಿನ ಪುಡಿಗೆ ನೀಡುತ್ತಿರುವ ಬೆಲೆಯನ್ನು ಪರಿಷ್ಕರಿಸಿ ಮಾರುಕಟ್ಟೆ ದರದಲ್ಲಿ ಖರೀದಿಸಿ ಕೆಎಂಎಫ್ ಮತ್ತು ರೈತರನ್ನು ಉಳಿಸಬೇಕು. ಚರ್ಮಗಂಟು ರೋಗ ತಡೆಯಲು ಕೂಡಲೆ ಸಮರೋಪಾದಿಯಲ್ಲಿ ಲಸಿಕೆ ಹಾಕಿ ಮುಗಿಸಬೇಕು. ವಿವಿಧ ಕಾರಣಗಳಿಂದಾಗಿ ಮರಣ ಹೊಂದುತ್ತಿರುವ ಕುರಿ ಮೇಕೆ ಮತ್ತು ದೊಡ್ಡ ಜಾನುವಾರುಗಳಿಗೆ ಪರಿಹಾರ ನೀಡುವಿಕೆಯನ್ನು ತ್ವರಿತಗೊಳಿಸಿ ಬಾಕಿ ಇರುವ ಎಲ್ಲ ಪ್ರಕರಣಗಳನ್ನು ಮುಕ್ತಾಯಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಜಾನುವಾರು ಹತ್ಯಾ ಕಾಯ್ದೆಯ ನೆಪದಲ್ಲಿ ರೈತರಿಗೆ ವಿಪರೀತ ಕಿರುಕುಳ ನೀಡಲಾಗುತ್ತಿದೆ. ಇದನ್ನು ತಪ್ಪಿಸಬೇಕು. ಆರೆಸ್ಸೆಸ್ಸಿಗೆ ಸರ್ಕಾರಿ ಜಮೀನುಗಳನ್ನು ಮನಸೋ ಇಚ್ಛೆ ನೀಡುತ್ತಿದ್ದೀರಿ. ಆದರೆ ನಮ್ಮ ರೈತರ ಜಾನುವಾರುಗಳು ಮೇಯಲು ಜಾಗ ಇಲ್ಲದಂತಾಗಿದೆ. ಇದನ್ನು ಕೂಡಲೆ ನಿಲ್ಲಿಸಿ ರಾಜ್ಯದಲ್ಲಿರುವ ಎಲ್ಲ ಮೇವಿನ ಕ್ಷೇತ್ರಗಳನ್ನು ಉಳಿಸಬೇಕು. ಸರ್ಕಾರ ಕೂಡಲೆ ಮಧ್ಯ ಪ್ರವೇಶಿಸಿ ರೈತರು ಮತ್ತು ಗ್ರಾಹಕರ ಇಬ್ಬರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ವೈಜ್ಞಾನಿಕವಾಗಿ ಸಮಸ್ಯೆಗಳನ್ನು ಪರಿಹರಿಸಬೇಕು. ಪಶುಭಾಗ್ಯ ಯೋಜನೆಯನ್ನು ಸಶಕ್ತಗೊಳಿಸಬೇಕು. ಸರ್ಕಾರಿ ನೌಕರರಿಂದ 11000 ರೂಪಾಯಿಗಳನ್ನು ದೋಚಲು ಹೊರಟಿರುವ ಯೋಜನೆಯನ್ನು ಕೂಡಲೆ ನಿಲ್ಲಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಹಾಲಿನ ದರದಲ್ಲಿ ಮೂರು ರೂ. ಹೆಚ್ಚಳಕ್ಕೆ ಕೆಎಂಎಫ್ ನಿರ್ಧಾರ
ಬೆಂಗಳೂರು: ಕಳೆದ ಎಂಟು ತಿಂಗಳುಗಳಿಂದ ಹಾಲಿನ ದರ ಹೆಚ್ಚಿಸುವಂತೆ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್‌) ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು, ಆದರೆ ಸರ್ಕಾರ ಈ ವಿಷಯದ ಬಗ್ಗೆ ಯಾವುದೇ ನಿರ್ಧಾರ ತೆದುಕೊಳ್ಳದಿರುವ ಪರಿಣಾಮ ಕೆಎಂಎಫ್‌  ಸ್ವತಃ ತಾವೇ ಬೆಲೆ ಹೆಚ್ಚಿಸುವ ನಿರ್ಧಾರವನ್ನು ತೆಗೆದುಕೊಂಡಿದೆ.

ಪ್ರತಿ ಬಾರಿಯೂ ರಾಜ್ಯ ಸರ್ಕಾರದ ಅನುಮತಿ ಪಡೆದೇ ಹಾಲಿನ ದರ ಹೆಚ್ಚಳ ಮಾಡುತ್ತಿದ್ದ ಕೆಎಂಎಫ್‌, ಈ ಬಾರಿ ನಿರ್ಧಾರವನ್ನು ಬದಲಿಸಿದೆ. ಸಂಕಷ್ಟದಲ್ಲಿರುವ ರೈತರಿಗೆ ಸಹಕರಿಸುವ ನಿಟ್ಟಿನಲ್ಲಿ ಹಾಲಿನ ದರ ಹೆಚ್ಚಳದ ಕುರಿತು ಸರ್ಕಾರಕ್ಕೆ ಕೆಎಂಎಫ್ ಹಲವಾರು ಬಾರಿ ಪ್ರಸ್ತಾವನೆ ನೀಡಿತ್ತು.‌ ಆದರೆ ಸರ್ಕಾರ ಈ ಕುರಿತು ಮೀನಾಮೇಷಾ ಎಣಿಸುತ್ತಿರುವುದು ಈ ನಿರ್ಧಾರಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಮಾಹಿತಿ ನೀಡಿರುವ ಕರ್ನಾಟಕ ಹಾಲು ಒಕ್ಕೂಟ, ಆರ್ಥಿಕವಾಗಿ ಹಾಗೂ ಹಲವು ಯೋಜನೆಗಳೊಂದಿಗೆ ಸರ್ಕಾರದ ಜತೆ ಸಹಭಾಗಿತ್ವ ಇರುವುದರಿಂದ ರಾಜ್ಯ ಸರ್ಕಾರದ ಸಮ್ಮತಿ ಇಲ್ಲದೆ ಹಾಲಿನ ದರಗಳ ಬಗ್ಗೆ ಕೆಎಂಎಫ್‌ ನಿರ್ಧಾರ ತೆಗೆದುಕೊಳ್ಳುತ್ತಿರಲಿಲ್ಲ. ಆದರೆ, ಪ್ರಸ್ತುತ ಅಗತ್ಯ ವಸ್ತುಗಳ ಬೆಲೆ ಏರಿಕೆ, ಹಾಲಿನ ಉತ್ಪಾದನಾ ವೆಚ್ಚ ಹೆಚ್ಚಳ, ಅತಿವೃಷ್ಟಿಯಿಂದ ರೈತರಿಗೆ ಉಂಟಾಗಿರುವ ತೀವ್ರ ಸಂಕಷ್ಟದಿಂದಾಗಿ ಹಾಲಿನ ದರ ಹೆಚ್ಚಳ ಮಾಡಬೇಕಿರುವುದು  ಅನಿವಾರ್ಯವಾಗಿದ್ದು, ರಾಜ್ಯದಲ್ಲಿನ ಸುಮಾರು 14 ಹಾಲು ಒಕ್ಕೂಟಗಳಿಂದ ಸಭೆ ನಡೆಸಿ, ಹಾಲಿನ ದರವನ್ನು 3 ರೂಪಾಯಿ ಹೆಚ್ಚಳ ಮಾಡಬೇಕೆಂಬ ನಿರ್ಧಾರದ ಕುರಿತು ಒಕ್ಕೂಟ ಮಾಹಿತಿ ನೀಡಿದೆ.