Krishna Byregowda – Peepal Media

ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಜೆಡಿಎಸ್ ವಿರುದ್ಧ ಕಂದಾಯ ಸಚಿವ ಕೃಷ್ಣಭೈರೇಗೌಡ ವಾಗ್ದಾಳಿ
ಹಾಸನ : ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಲುವಿನಲ್ಲಿ ಕಂದಾಯ ಸಚಿವ ಕೃಷ್ಣಭೈರೇಗೌಡ ಬಿಜೆಪಿ ಜೆಡಿಎಸ್‌ ವಿರುದ್ಧ ವಾಗ್ದಾಳಿ ನಡೆಸಿದರು. ಮಾತನಾಡುತ್ತಾ “ಗೌರ್ನರ್‌ಗೆ ಅರ್ಜಿಗಳನ್ನು ಕೊಟ್ಟು ರಾಜ್ಯಪಾಲರಿಂದ ಸರ್ಕಾರಕ್ಕೆ ಪತ್ರಗಳನ್ನು ಬರೆಸಿ ಏನಾದರೂ ಮಾಡಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿದ್ದಾರೆ.ಜನಪ್ರಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ ಸರ್ಕಾರ ಬುಡಮೇಲು ಮಾಡಲು ಹೊರಟಿದ್ದಾರೆ.

ನಮಗೂ ಸಂವಿಧಾನ ಇದೆ. ಈ ದೇಶದಲ್ಲಿ ಜನ ಸಂವಿಧಾನದ‌ ಪರವಾಗಿ ಮತ ಕೊಟ್ಟಿದ್ದಾರೆ. ಸಂವಿಧಾನದ ರಕ್ಷಣೆ ನಮಗೆ ಇದೆ.ರಾಜ್ಯಪಾಲರ ಕಚೇರಿಯನ್ನು ದುರುಪಯೋಗಪಡಿಸಿಕೊಂಡು ನಮ್ಮ ಸರ್ಕಾರವನ್ನು ಬುಡಮೇಲು ಮಾಡಲು ಹೋದರೆ ನಾವು ಕೋರ್ಟ್‌ಗೆ ಹೋಗಿ ಹೋರಾಟ ಮಾಡುತ್ತೇವೆ. ಹಲವು ರಾಜ್ಯಗಳಲ್ಲಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಗೌರ್ನರ್ ಕಚೇರಿ ದುರುಪಯೋಗ ಮಾಡಿ ನಮ್ಮ ಸರ್ಕಾರದ ಮೇಲೆ ಪಿತೂರಿ ಮಾಡಿದರೆ ನಾವು ಸುಪ್ರೀಂಕೋರ್ಟ್ ಮೆಟ್ಟಲಿಗೆ ಹೋಗ್ತೇವೆ” ಎಂದರು.ಅಷ್ಟೇ ಅಲ್ಲದೇ “ಪ್ರಜಾಪ್ರಭುತ್ವ ಉಳಿಸಲು ಬೀದಿಗಿಳಿದು ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಕೆಯನ್ನು ನೀಡಿದರು.

ಹಾಗೆಯೇ “ಬಿಜೆಪಿಯವರು ಇವತ್ತು ಹತಾಶರಾಗಿದ್ದಾರೆ, ಜೆಡಿಎಸ್‌ನವರು ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ. ಜೆಡಿಎಸ್‌‌ನ ಒಬ್ಬರು, ಬಿಜೆಪಿಯ ಒಬ್ಬರು ದೆಹಲಿಯಲ್ಲಿ ಕುಳಿತುಕೊಂಡು ಕರ್ನಾಟಕಕ್ಕೆ ನ್ಯಾಯ ಕೊಡಿಸುವುದನ್ನು ಬಿಟ್ಟು ನಮ್ಮ ಸರ್ಕಾರ ಬೀಳಿಸಲು ಹೊಂಚು ಹಾಕುತ್ತಿದ್ದಾರೆ.ಕೇಂದ್ರದಲ್ಲಿ ಮಂತ್ರಿಯಾಗಿರುವವರು ಮೇಕೆದಾಟು, ಕಳಸಾಬಂಡೂರಿ ಯೋಜನೆಗೆ ದುಡ್ಡು ಕೊಡಿಸುವುದು ಬಿಟ್ಟು ಅಲ್ಲಿ ಕುಳಿತುಕೊಂಡು ನಮ್ಮ ಸರ್ಕಾರ ಬೀಳಿಸುವುದು ಹೇಗೆಂದು ಸ್ಕೆಚ್ ಹಾಕುತ್ತಿದ್ದಾರೆ. ನಾವು ಕೈಕಟ್ಟಿ ಕುಳಿತು ಕೊಳ್ಳುವುದಿಲ್ಲ, ಕಾನೂನಾತ್ಮಕ ಹೋರಾಟ ಮಾಡುತ್ತೇವೆ” ಎಂದು ಹೇಳಿದರು

ಎಲ್ಲಾ ಸವಾಲುಗಳನ್ನು ಎದುರಿಸಲು ಸಿದ್ಧರಿದ್ದೇವೆ ಎನ್ನುತ್ತಾ “ಅವರು ಏನು ಮಾಡ್ತಾರೆ ಮಾಡಲಿ ಈಗ ಅವರವರಲ್ಲೇ ಜಗಳ ಶುರುವಾಗಿದೆ.ಪ್ರಜಾಪ್ರಭುತ್ವ ಉಳಿಯಬೇಕು ಅದಕ್ಕಾಗಿ ಬೀದಿ ಹೋರಾಟ ಹಾಗೂ ಕಾನೂನಾತ್ಮಕ ಹೋರಾಟ ಮಾಡುತ್ತೇವೆ.ಈ ಸರ್ಕಾರ ಅಲ್ಲಾಡಿಸಬೇಕು ಎಂದು ಹಗಲುಗನಸು ಕಾಣುತ್ತಿದ್ದಾರೆ” ಎಂದು ಬಿಜೆಪಿ ಜೆಡಿಎಸ್‌ ನಾಯಕರನ್ನು ಕಿಚಾಯಿಸಿದರು.

ಮುಡಾ ವಿಚಾರವಾಗಿ ಮಾತನಾಡುತ್ತಾ “ಇ ಡಿ ಆಯ್ತು ಈಗ ರಾಜ್ಯಪಾಲರ ಕಚೇರಿ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಮುಡಾ ಹಗರಣದ ವಿರುದ್ಧ ಪಾದಯಾತ್ರೆ ವಿಚಾರಜನಗಳ ದೃಷ್ಟಿಯಲ್ಲಿ ಒಂದು ಕಲ್ಪನೆ ಕ್ರಿಯೇಟ್ ಮಾಡಲು ಎಲ್ಲಾ ಪಿತೂರಿ ಮಾಡುತ್ತಿದ್ದಾರೆ. ನಾವು ಆಯೋಗ ರಚನೆ ಮಾಡಿದ್ದೇವೆ ತನಿಖೆ ಮಾಡಲಿ. ಮೈಸೂರು ಮುಡಾದಲ್ಲಿ ಹೆಚ್ಚು ಸೈಟ್‌ಗಳನ್ನು ತೆಗೆದುಕೊಂಡಿರುವುದು ಬಿಜೆಪಿ, ಜೆಡಿಎಸ್‌ನವರು. ಸಾವಿರಾರು ಸೈಟ್‌ಗಳು, ಸಾವಿರಾರು ಬದಲಿ ಜಮೀನುಗಳನ್ನು ತೆಗೆದುಕೊಂಡಿದ್ದಾರೆ
ಅವರೇನೆ ಮಾಡಬಾರದ್ದು ಮಾಡಿ ನಮ್ಮ ಕಡೆಗೆ ಬೆರಳು ತೋರಿಸುತ್ತಿದ್ದಾರೆ. ಅವರ ಉದ್ದೇಶ ಯಾವ ಹಗರಣವೂ ಅಲ್ಲ, ತಪ್ಪಿತಸ್ಥರಿಗೆ ಶಿಕ್ಷೆ ಕೊಡುವುದು ಅಲ್ಲ, ಅವರಿಗೆ ಅಧಿಕಾರದ ದಾಹ” ಎಂದು ತಿರುಗೇಟು ನೀಡಿದರು.

“ಬಡವರ ಪರವಾಗಿ ಇರುವ ಕಾಂಗ್ರೆಸ್ ಸರ್ಕಾರವನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಏನಾದರೂ ಮಾಡಿ ಬಡವರ ಪರ ಇರುವ ಸರ್ಕಾರವನ್ನು ಬುಡಮೇಲು ಮಾಡಲು ಯತ್ನ ಮಾಡುತ್ತಿದ್ದಾರೆ ಇದು ಪಿತೂರಿಯ ಒಂದು ಭಾಗ ಅಷ್ಟೇ. ಎಂದರು.

“ವಾಲ್ಮೀಕಿ ಹಗರಣ ಮುಚ್ಚಿ ಹಾಕಿದರು ಎಂದು ಯತ್ನಾಳ್ ಅವರು ಹೇಳಿದ್ದಾರೆ. ಇನ್ನೊಂದು ಕಡೆ ಪಾದಯಾತ್ರೆ ಬೇಕಾಗಿಲ್ಲ ಎಂದು ಜೆಡಿಎಸ್‌ನವರು ಹೇಳುತ್ತಿದ್ದಾರೆ. ಏಕೆಂದರೆ ಅವರೇ ಹೆಚ್ಚು ಫಲಾನುಭವಿಗಳು, ತನಿಖೆ ಮಾಡಿದರೆ ಹೆಚ್ಚು ಹೊರಗೆ ಬರುವುದು ಅವರದ್ದೇ ತಪ್ಪಿತಸ್ಥರಿಗೆ ಶಿಕ್ಷೆ ಕೊಡಲು ನಮ್ಮ ಸರ್ಕಾರ ದೃಢವಾಗಿದೆ. ಆ ದಿಕ್ಕಿನಲ್ಲಿ ನಾವು ಕೆಲಸವನ್ನು ಮಾಡ್ತೇವೆ ಎಂದರು.

ಕರ್ನಾಟಕಕ್ಕೆ ಜಿಎಸ್ಟಿ ಮೋಸ : ನಿರ್ಮಲಾ ಸೀತಾರಾಮನ್ ಅವರಿಗೆ ಸಚಿವ ಕೃಷ್ಣ ಬೈರೇಗೌಡ ಸವಾಲ್..!
* ರಾಜ್ಯಕ್ಕೆ ಒಟ್ಟಾರೆ ರೂ.11,495 ಕೋಟಿ ಹಣ ಕೇಂದ್ರದಿಂದ ಬಾಕಿ
* ಹಣಕಾಸು ಆಯೋಗದ ಶಿಫಾರಸು ಹಿಂಪಡೆಯುವಂತೆ ಕೋರಿದ ಸೀತಾರಾಮನ್
* ಓಟು ಒತ್ತೋಕೆ ಕರ್ನಾಟಕ ಬೇಕು, ನಮ್ಮ ಪಾಲಿನ ಹಣ ಕೇಳಿದರೆ ಮಾತ್ರ ಮೋಸವಾ?
* ಗ್ಯಾರಂಟಿ ಯೋಜನೆಗಳಿಗೆ ಕೇಂದ್ರದಿಂದ ಬಿಡಿಗಾಸೂ ಬೇಕಾಗಿಲ್ಲ: ಕೃಷ್ಣ ಬೈರೇಗೌಡ

ಕರ್ನಾಟದಿಂದ ರಾಜ್ಯಸಭೆಗೆ ಆಯ್ಕೆಯಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದಲೇ ರಾಜ್ಯಕ್ಕೆ ತೆರಿಗೆ ಹಂಚಿಕೆ ಅನುದಾನದಲ್ಲಿ ಅನ್ಯಾಯವಾಗುತ್ತಿದೆ. ಮಾರ್ಚ್ 31ಕ್ಕೆ ಅವರು ಮೈಸೂರಿಗೆ ಆಗಮಿಸುತ್ತಿದ್ದು, ಈ ಬಗ್ಗೆ ಬಹಿರಂಗ ಚರ್ಚೆಗೆ ಅವರು ಸಿದ್ದರಿದ್ದಾರ? ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸವಾಲೆಸೆದಿದ್ದಾರೆ.

ರಾಜ್ಯಕ್ಕೆ ಜಿಎಸ್ಟಿ ತೆರಿಗೆ ಹಂಚಿಕೆ ಬಾಕಿ ಬಗ್ಗೆ ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಸಚಿವೆ ನಿರ್ಮಲಾ ಸೀತಾರಾಮನ್, “ ಕರ್ನಾಟಕಕ್ಕೆ ನೀಡಬೇಕಿರುವ ತೆರಿಗೆ ಪಾಲಿನಲ್ಲಿ ಯಾವುದೇ ಹಣ ಬಾಕಿ ಇಲ್ಲ” ಎಂದು ಹೇಳಿದ್ದರು. ಇದರ ಬೆನ್ನಿಗೆ ಸೋಮವಾರ ವಿಕಾಸಸೌಧದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳನ್ನು ದಾಖಲೆ ಸಮೇತ ಬಿಚ್ಚಿಟ್ಟರು.

ಯಾವುದೇ ರಾಜ್ಯಕ್ಕೆ 2019- 20ರಲ್ಲಿ ಕೊಟ್ಟಿದ್ದಕ್ಕಿಂತ ಕಡಿಮೆ ಅನುದಾನವನ್ನು ಕೊಡುವಂತಿಲ್ಲ ಎಂದು ಹಣಕಾಸು ಆಯೋಗ ಹೇಳುತ್ತದೆ. ಹಣಕಾಸು ಆಯೋಗದವರು 2019-20ರಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಬಂದ ತೆರಿಗೆ ಪಾಲಿಗಿಂತ 2020-21 ರಲ್ಲಿ ರೂ. 5495 ಕೋಟಿ ಹಣ ಕಡಿಮೆಯಾಗಿತ್ತು. ಈ ಹಣವನ್ನು ರಾಜ್ಯಕ್ಕೆ ತುಂಬಿಕೊಡಬೇಕು ಎಂದು ಸ್ವತಃ ಹಣಕಾಸು ಆಯೋಗ ಶಿಫಾರಸ್ಸು ಮಾಡಿದರೂ ಸಚಿವೆ ನಿರ್ಮಲಾ ಸೀತಾರಾಮನ್ ಇದನ್ನು ತಡೆಹಿಡಿದದ್ದು ಏಕೆ? ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಪ್ರಶ್ನಿಸಿದರು.

ರಾಜ್ಯದ ಪಾಲಿನ ನ್ಯಾಯಯುತ ತೆರಿಗೆ ಹಂಚಿಕೆ ನಷ್ಟ ಪರಿಹಾರ ಕೇಳಿದರೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2021 ನೇ ವರ್ಷದ ಅಂತಿಮ ವರದಿಯಲ್ಲಿ ಹಣಕಾಸು ಆಯೋಗ ಶಿಫಾರಸ್ಸು ಮಾಡಿಲ್ಲ ಎನ್ನುತ್ತಿದ್ದಾರೆ. ಆದರೆ, ಹಣಕಾಸು ಆಯೋಗದ ಅಂತಿಮ ವರದಿಯ 36ನೇ ಪುಟದಲ್ಲಿ ಕರ್ನಾಟಕಕ್ಕೆ ನಷ್ಟ ತುಂಬಿಕೊಡಬೇಕು ಎಂದು ಬರೆಯಲಾಗಿದೆಯಲ್ಲ ಇದೇನು? ಎಂದು ಅವರು ಕುಟುಕಿದರು.

2019-20ರಲ್ಲಿ ರಾಜ್ಯಕ್ಕೆ ಕೇಂದ್ರದಿಂದ ರೂ. 36675 ಕೋಟಿ ತೆರಿಗೆ ಪಾಲು ಬಂದಿತ್ತು. 2020-21ಕ್ಕೆ ಕೇವಲ ರೂ.31180 ಕೋಟಿಗೆ ಕುಸಿದಿತ್ತು. ಹೀಗಾಗಿ ರಾಜ್ಯಕ್ಕೆ ಆಗಿರುವ ನಷ್ಟ ರೂ. 5495 ಕೋಟಿ ಹಣವನ್ನು ಕೇಂದ್ರ ಸರ್ಕಾರ ನೀಡಬೇಕು ಎಂದು ಹಣಕಾಸು ಆಯೋಗ ಶಿಫಾರಸು ಮಾಡಿದೆ. ಆದರೆ, ಈ ಹಣ ಈವರೆಗೆ ರಾಜ್ಯಕ್ಕೆ ಬಂದಿಲ್ಲ. 2021-26ನೇ ಸಾಲಿನಲ್ಲಿ ರೂ.6,000 ಕೋಟಿ ಶಿಫಾರಸು ಮಾಡಲಾಗಿದೆ. ಒಟ್ಟಾರೆ, ರೂ.11495 ಕೋಟಿ ಹಣ ರಾಜ್ಯಕ್ಕೆ ಬರಬೇಕಿದೆ.

ಈ ಬಗ್ಗೆ ಪ್ರಶ್ನೆ ಮಾಡಿದರೆ ನಿರ್ಮಲಾ ಸೀತಾರಾಮನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳುತ್ತಿರುವುದು ಸುಳ್ಳು ಎನ್ನುತ್ತಿದ್ದಾರೆ. ಅಸಲಿಗೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಸೆಪ್ಟೆಂಬರ್ 17 2020ರಲ್ಲಿ ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗಿ ವಿಶೇಷ ಅನುದಾನವನ್ನು ಬಿಡುಗಡೆ ಮಾಡಲು ಕೋರಿದ್ದರು. ಬಸವರಾಜು ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಸೀತಾರಾಮನ್ ಅವರಿಗೆ ಪತ್ರ ಬೆರೆದಿದ್ದರು. ಈ ಎಲ್ಲಾ ವಿಚಾರಗಳೂ ದಿನಪತ್ರಿಕೆಗಳಲ್ಲೂ ಸಹ ವರದಿಯಾಗಿತ್ತು. ಹಾಗಾದರೆ  ಯಡಿಯೂರಪ್ಪ ಹಾಗೂ ಬೊಮ್ಮಾಯಿಯವರೂ ಸಹ ಸುಳ್ಳು ಹೇಳಿದ್ದರಾ? ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾತಿನಲ್ಲೇ ತಿವಿದರು.

ಸಚಿವೆ ನಿರ್ಮಲಾ ಸೀತಾರಾಮನ್ ಅವರು ಒಂದೆಡೆ ಹಣಕಾಸು ಆಯೋಗದ ಒಂದೇ ಒಂದು ಶಿಫಾರಸ್ಸನ್ನು ಸಹ ನಾವು ತಿದ್ದಲು ಹೋಗುವುದಿಲ್ಲ ಎನ್ನುತ್ತಾರೆ. ಮತ್ತೊಂದೆಡೆ ರಾಜ್ಯಗಳಿಗೆ ನೀಡುವ ವಿಶೇಷ ಅನುದಾನವನ್ನು ಹಿಂಪಡೆಯುವಂತೆ ಹಣಕಾಸು ಆಯೋಗಕ್ಕೆ ಮನವಿ ಮಾಡಲಾಗಿದೆ ಎಂದು ಲೋಕಸಭೆಯಲ್ಲೇ ಉತ್ತರ ನೀಡುತ್ತಾರೆ. ಹಾಗಾದ್ರೆ ರಾಜ್ಯದ ಪಾಲಿನ ಹಣವನ್ನು ತಡೆಹಿಡಿಯಲು ಮಾತ್ರ ಇವರ ಕಾನೂನುಗಳು ಇರುವುದಾ? ಎಂದು ವಿಷಾದಿಸಿದರು.

ನಾವು ಕೇಳುತ್ತಿರುವುದು ಭಿಕ್ಷೆಯಲ್ಲ..!
ಹಣಕಾಸು ಆಯೋಗ ಶಿಫಾರಸು ಮಾಡಿದ ನಮ್ಮ ಅನುದಾನವನ್ನು ನಾವು ಸಂವಿಧಾನಾತ್ಮಕವಾಗಿಯೇ ಕೇಳುತ್ತಿದ್ದೇವೆಯೇ ವಿನಃ ನಾವೇನು ಭಿಕ್ಷೆ ಕೇಳುತ್ತಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಆಕ್ರೋಶ ಹೊರಹಾಕಿದರು.

ನಮ್ಮ ರಾಜ್ಯದ ಹಕ್ಕನ್ನು ಕೇಳಿದರೆ ಕೇಂದ್ರ ಸರ್ಕಾರ ನಾವು ಸುಳ್ಳು ಹೇಳುತ್ತಿದ್ದೇವೆ ಎಂದು ಆರೋಪ ಹೊರಿಸಿ ಕರ್ನಾಟಕದ ಜನರಿಗೆ ಅನ್ಯಾಯ ಮಾಡುತ್ತಿದೆ. ಸ್ವತಃ ಕರ್ನಾಟಕದಿಂದ ಆಯ್ಕೆಯಾದ ನಿರ್ಮಲಾ ಸೀತಾರಾಮನ್ ಅವರು ಹೀಗೆ ರಾಜ್ಯದ ಹಿತದ ವಿಚಾರದಲ್ಲಿ ಸುಳ್ಳು ಹೇಳಿ ಜನರನ್ನು ಗೊಂದಲಕ್ಕೀಡು ಮಾಡುತ್ತಿರುವುದು ಸರಿಯಲ್ಲ. ತೆರಿಗೆ ಪಾಲು ಹಂಚಿಕೆಯಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಮೈಸೂರಿನಲ್ಲಿ ಬಹಿರಂಗ ಚರ್ಚೆಯಾಗಲಿ. ಈ ಚರ್ಚೆಗೆ ನಾವು ಸಿದ್ದ ಮಾನ್ಯ ನಿರ್ಮಲಾ ಸೀತಾರಾಮನ್ ಅವರು ಸಿದ್ದವಿದ್ದಾರ? ಎಂದು ಅವರು ಇದೇ ಸಂದರ್ಭದಲ್ಲಿ ಸವಾಲು ಹಾಕಿದರು.

ಅಲ್ಲದೆ, ಈ ವಿಚಾರದಲ್ಲಿ ಕೆಸರೆರಚಾಟ, ರಾಜಕೀಯ ತೆವಲಾಟ ಆಗಬಾರದು. ಕರ್ನಾಟಕದಂತಹ ಪ್ರಗತಿಪರ ರಾಜ್ಯಗಳಿಗೆ ಮಲತಾಯಿ ಧೋರಣೆ ಅನ್ಯಾಯ ಮಾಡಬಾರದು ಎಂದು ಅವರು ಕೇಂದ್ರ ಸರ್ಕಾರವನ್ನು ವಿನಂತಿಸಿದರು.

ಗ್ಯಾರಂಟಿಗೆ ಕೇಂದ್ರದಿಂದ ನಯಾಪೈಸೆಯೂ ಬೇಕಾಗಿಲ್ಲ:
ಗ್ಯಾರಂಟಿಗೆ ಕೇಂದ್ರ ಸರ್ಕಾರದ ನಯಾಪೈಸೆಯೂ ಬೇಕಾಗಿಲ್ಲ. ನಮ್ಮ ಗ್ಯಾರಂಟಿಗೆ ಬೇಕಾದ ಹಣವನ್ನು ನಾವೇ ಹೊಂದಿಸಿಕೊಳ್ಳುತ್ತಿದ್ದೇವೆ.ಗ್ಯಾರಂಟಿ ಜೊತೆಗೆ ನಿವೃತ್ತಿ ವೇತನ ರೂ.11200 ಕೋಟಿ ಹಣವನ್ನೂ ಸಹ ರಾಜ್ಯ ಸರ್ಕಾರವೇ ನೀಡುತ್ತಿದೆ. ಈ ಹಣದ ಪೈಕಿ ಕೇಂದ್ರ ಸರ್ಕಾರದ ಪಾಲು ರೂ. 550 ಕೋಟಿ ಮಾತ್ರ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.

ನಮ್ಮ ಗ್ಯಾರಂಟಿ ಯೋಜನೆಗಳಿಗೆ ಇವರಿಂದ ನಯಾಪೈಸೆಯೂ ಬೇಕಾಗಿಲ್ಲ. ನಮ್ಮ ತೆರಿಗೆಯಿಂದ ನಮ್ಮ ನ್ಯಾಯಯುತ ಪಾಲನ್ನು ಕೊಟ್ಟರೆ ಸಾಕು. ನಮ್ಮ ರಾಜ್ಯಕ್ಕೆ ಬರಬೇಕಾದ ಬರಪರಿಹಾರವನ್ನು ಕೊಡಲಿ. ನಿಮ್ಮ ಉದಾರತನವೇನು ಬೇಕಾಗಿಲ್ಲ. ಕರ್ನಾಟಕದ ಜನ ಇರುವುದು ಕೇವಲ ಓಟು ಒತ್ತೋಕಷ್ಟೇ ಎಂಬ ಭಾವನೆಯಿಂದ ಕೇಂದ್ರ ಸರ್ಕಾರ ಹೊರಬರಲಿ. ನಮ್ಮನ್ನು ದ್ವಿತೀಯ ದರ್ಜೆಯ ಪ್ರಜೆಗಳಂತೆ ನಡೆಸಿಕೊಳ್ಳುವುದನ್ನು ಬಿಡಲಿ. ನಮ್ಮ ಹಕ್ಕನ್ನು ನಮಗೆ ಕೊಡಲಿ ಎಂದು ಅವರು ಒತ್ತಾಯಿಸಿದರು.

ಅಗ್ನಿ ದುರಂತಗಳ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸಬೇಕು: ಸಚಿವ ಕೃಷ್ಣ ಬೈರೇಗೌಡ
ನಗರದಲ್ಲಿ ಹೆಚ್ಚುತ್ತಿರುವ ಅಗ್ನಿ ದುರಂತಗಳಿಂದ ಪ್ರಾಣಾಪಾಯಗಳು ಹೆಚ್ಚುತ್ತಿದೆ. ಜನಸಾಮಾನ್ಯರಲ್ಲೂ ಆತಂಕ ಮನೆಮಾಡಿದೆ. ಹೀಗಾಗಿ ಅಗ್ನಿ ದುರಂತಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಹಿಸಬೇಕು, ಅಗ್ನಿ ಶಾಮಕದಳವನ್ನೂ ಉನ್ನತೀಕರಣಗೊಳಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.

ಸೋಮವಾರ ವಿಕಾಸಸೌಧದಲ್ಲಿ ಅಗ್ನಿ ಶಾಮಕದಳ ಪೊಲೀಸ್ ಮಹಾ ನಿರ್ದೇಶಕರಾದ ಕಮಲ್ ಪಂತ್ ಅವರ ಜೊತೆಗಿನ ಸಭೆಯಲ್ಲಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಕಳೆದ 20 ದಿನಗಳ ಅವಧಿಯಲ್ಲಿ ಬೆಂಗಳೂರಿನಲ್ಲೇ ಮೂರು ಕಡೆಗಳಲ್ಲಿ ಅಗ್ನಿ ಅನಾಹುತಗಳು ಸಂಭವಿಸಿವೆ. ಅಗ್ನಿ ದುರಂತಗಳಿಂದ ಜನರೂ ಭಯಭೀತರಾಗಿದ್ದಾರೆ. ಹೀಗಾಗಿ ನಗರ ಭಾಗಗಳೂ ಸೇರಿದಂತೆ ರಾಜ್ಯಾದ್ಯಂತ ಅಗ್ನಿ ದುರಂತಗಳು ಸಂಭವಿಸಿದಂತೆ ಅಗ್ನಿಶಾಮಕ ದಳ ತಡೆಯುವಂತಾಗಬೇಕು” ಎಂದು ಸಲಹೆ ನೀಡಿದರು.

“ಅತ್ತಿಬೆಲೆ ಪಠಾಕಿ ಗೋದಾಮಿನ ದುರಂತದಲ್ಲಿ ತಮಿಳುನಾಡು ಮೂಲದ ರಾಜೇಶ್, ದಿನೇಶ್, ಸಂತೋಷ್ ಕುಮಾರ್, ನಿತೀಶ್, ವೇದಪ್ಪನ್, ಆದಿಕೇಶವನ್, ವಿಜಯರಾಘವನ್, ಆಕಾಶ್ ರಾಜ್, ಗಿರಿ, ಇಂಬರ್ತಿ, ಮುನಿವೇಲ್, ಪ್ರಕಾಶರಾಜ್, ಆಂಥೋನಿ ಪೌಲಾರಾಜ್ ಸೇರಿ 13 ಕಾರ್ಮಿಕರು ಮೃತಪಟ್ಟಿದ್ದರು.

ಅಕ್ಟೋಬರ್ 19 ರಂದು ಕೋರಮಂಗಲದ ಮಡ್‌ಪೈಪ್ ಅನ್ನೋ ರೆಸ್ಟೋಕೆಫೆ ಅಗ್ನಿ ದುರಂತಕ್ಕೆ ಈಡಾಗಿತ್ತು. ಈ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದರೆ, ಹಲವರು ಗಾಯಾಳುಗಳಾಗಿದ್ದರು. ಇದರ ಬೆನ್ನಿಗೆ ಕಳೆದ ಶನಿವಾರ ಹಜ್ ಭವನವೂ ಬೆಂಕಿಗೆ ಆಹುತಿಯಾಗಿದ್ದು ಕನಿಷ್ಟ 3 ಕೋಟಿ ನಷ್ಟವಾಗಿದೆ. ಎಂದು ಆತಂಕ ಹೊರಹಾಕಿದ ಸಚಿವರು, ಇಂತಹ ದುರಂತಗಳಿಗೆ ಕಾರಣವೇನು? ಇದನ್ನು ತಡೆಯಲು ತೆಗೆದುಕೊಳ್ಳಬೇಕಾದ ಕ್ರಮಗಳೇನು? ಎಂಬ ಕುರಿತು ಅಗ್ನಿಶಾಮಕ ದಳ ಚಿಂತನೆ ನಡೆಸಬೇಕಿದೆ” ಎಂದರು.

ಅಲ್ಲದೆ, ಅಗ್ನಿಶಾಮಕ ದಳದ ಉನ್ನತೀಕರಣಗಳ ಬಗ್ಗೆಯೂ ಗಮನವಹಿಸಬೇಕಿದೆ. ಇದರ ಜೊತೆಗೆ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವಾಗಲೇ ಅಗ್ನಿದುರಂತ ತಡೆಗೆ ತೆಗೆದುಕೊಳ್ಳಲಾಗಿರುವ ಕ್ರಮಗಳ ಬಗ್ಗೆಯೂ ಪರಿಶೀಲಿಸಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಅಗ್ನಿಶಾಮಕ ದಳದ ಉನ್ನತೀಕರಣ ಹಾಗೂ ಹೊಸ ಅಗ್ನಿಶಾಮಕ ದಳಗಳನ್ನು ಸ್ಥಾಪಿಸುವ ಕುರಿತ ಕ್ರಿಯಾ ಯೋಜನೆ ಮಂಡಿಸಿದ ಅಗ್ನಿಶಾಮಕ ದಳ ಪೊಲೀಸ್ ಮಹಾ ನಿರ್ದೇಶಕರಾದ ಕಮಲ್ ಪಂತ್, “ಉಡುಪಿ ಜಿಲ್ಲೆಯ ಮಣಿಪಾಲ್, ದಾವಣಗೆರೆಯ- ನ್ಯಾಮತಿ, ವಿಜಯಪುರ ಜಿಲ್ಲೆಯ ನಿಡಗುಂದಿ-ಬಬಲೇಶ್ವರ್, ರಾಯಚೂರಿನ ಮಸ್ಕಿ, ಬೆಳಗಾವಿಯ ಮುದಲಗಿ, ಬಳ್ಳಾರಿಯ ಕಂಪ್ಲಿ ಹಾಗೂ ಕಲಬುರಗಿ ಷಹಾಬಾದ್ ಭಾಗದಲ್ಲಿ ನೂತನ ಅಗ್ನಿಶಾಮಕ ದಳ ಸ್ಥಾಪಿಸುವ ಸಂಬಂಧ ಯೋಜನೆ ಮಂಡಿಸಿದರು.

ಅಲ್ಲದೆ, ಬೆಂಗಳೂರು ಸೇರಿದಂತೆ ನಗರ ಭಾಗದಲ್ಲಿ ಸಂಭವಿಸುತ್ತಿರುವ ಅಗ್ನಿ ಅವಘಡಗಳ ತಡೆಗೆ ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬಹುದು? ಎಂಬ ಕುರಿತು ಶೀಘ್ರದಲ್ಲೇ ಇಲಾಖೆಗೆ ವರದಿ ನೀಡುವುದಾಗಿಯೂ ತಿಳಿಸಿದರು.

ಬಗರ್ ಹುಕುಂ ಮಂಜೂರಾತಿಗೆ ಕ್ರಮ : ಅಧಿಕಾರಿಗಳಿಗೆ ಸೂಚಿಸಿದ ಸಚಿವ ಕೃಷ್ಣಭೈರೇಗೌಡ
ಅಕ್ರಮ ಬಗರ್ ಹುಕುಂ ಸಾಗುವಳಿ ಭೂಮಿ ಶೀಘ್ರವೇ ಸಕ್ರಮಗೊಳಿಸಿಕೊಡುವಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಕಾಸ ಸೌಧದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಚಿವರಿಗೆ ಬಗರ್ ಹುಕುಂ ತಂತ್ರಾಂಶ ಬಳಕೆ ಕುರಿತಾಗಿ ಪ್ರಾತ್ಯಕ್ಷಿಕೆ ತೋರಿಸಲಾಗಿದೆ.

ಈ ವೇಳೆ ಸಚಿವರು ಮಾಹಿತಿ ಪಡೆದು, ಅನಧಿಕೃತ ಸಾಗುವಳಿ ಭೂಮಿಯನ್ನು ಬಗರ್ ಹುಕುಂ ತಂತ್ರಾಂಶದ ಮೂಲಕ ಸಕ್ರಮಗೊಳಿಸುವ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಭೂಪರಿಶೀಲನೆಗೆ ಬಗರ್ ಹುಕುಂ ತಂತ್ರಾಂಶವನ್ನು ಕಾರ್ಯಯೋಜನೆಗೊಳಿಸಬೇಕು. ನಮೂನೆ ಸಂಖ್ಯೆ 50, 53, 57 ಅರ್ಜಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅವುಗಳನ್ನು ನ್ಯಾಯಯುತವಾಗಿ ವಿಲೇವಾರಿ ಮಾಡಬೇಕು. ಅನಧಿಕೃತವಾಗಿ ಸಾಗುವಳಿದಾರರು ಕೃಷಿಯಲ್ಲಿ ತೊಡಗಿದ್ದರೆ ಆಕ್ರಮ ಸಕ್ರಮ ಅಡಿಯಲ್ಲಿ ಸಾಗುವಳಿ ಚೀಟಿ ನೀಡಲು ಇಲಾಖೆ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ರಾಜ್ಯದ 195 ತಾಲೂಕುಗಳು ಬರಪೀಡಿತ ಎಂದು ಘೋಷಣೆ : ಸಂಪುಟ ಅನುಮೋದನೆ ನಂತರ ಕೇಂದ್ರಕ್ಕೆ ದಾಖಲೆ ಸಲ್ಲಿಕೆ
ಬೆಂಗಳೂರು : ರಾಜ್ಯದ 195 ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಈಗಾಗಲೇ ಘೋಷಣೆ ಮಾಡಲಾಗಿದೆ. ಈ ತಾಲೂಕುಗಳುಗಳಿಗೆ ಸಂಬಂಧ ಪಟ್ಟಂತೆ ಕೇಂದ್ರದ ಪರಿಹಾರಕ್ಕಾಗಿ ಮನವಿ ಸಲ್ಲಿಸಲು ಬೇಕಾಗಿರುವ ವರದಿಯನ್ನು (ಮೆಮೊರಾಂಡಮ್) ವಾರದಲ್ಲಿ ಸಲ್ಲಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ವಿಕಾಸಸೌಧದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಈ ವರ್ಷ ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಎದುರಾಗಿದೆ. ಈಗಾಗಲೇ 195 ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳು ಎಂದು ಘೋಷಿಸಲಾಗಿದೆ. ಅಂದಾಜಿನ ಪ್ರಕಾರ 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದ್ದರೆ, 2 ಲಕ್ಷ ಹೆಕ್ಟೇರ್ ನಷ್ಟು ತೋಟಗಾರಿಕೆ ಬೆಳೆ ಹಾನಿಯಾಗಿದೆ. ಬರ ತಾಲೂಕುಗಳುಗಳಿಗೆ ಸಂಬಂಧ ಪಟ್ಟಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲು ಬೇಕಾಗಿರುವ ವರದಿಯನ್ನು (ಮೆಮೊರಾಂಡಮ್) ತ್ವರಿತ ತಯಾರಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದರು.

ವರದಿ ಸಿದ್ದಪಡಿಸುವ ಕೆಲಸ ಈಗಾಗಲೇ ಶೇ.70 ರಷ್ಟು ಮುಗಿದಿದೆ. ಮೇವಿಗೂ, ಕುಡಿಯುವ ನೀರಿಗೂ ಪ್ರತ್ಯೇಕ ಪರಿಹಾರದ ಅವಕಾಶವಿದ್ದು, ಮುಂದಿನ ಮೂರು ದಿನದಲ್ಲಿ ಈ ಎಲ್ಲವನ್ನೂ ಸೇರಿಸಿ ಸಂಪೂರ್ಣ ಮೆಮೊರಾಂಡಮ್ ತಯಾರಿಸಲಾಗುವುದು. ಎನ್ ಡಿ ಆರ್ ಎಫ್ ನಿಯಮಗಳ ಅನ್ವಯ ಒಟ್ಟಾರೆ 5 ರಿಂದ 6 ಸಾವಿರ ಕೋಟಿ ಪರಿಹಾರ ಪಡೆಯಲು ಅವಕಾಶ ಇದೆ. ಕೇಂದ್ರಕ್ಕೆ ಮನವಿ ಸಲ್ಲಿಸಿದ ಕೂಡಲೇ ಕೇಂದ್ರದ ಅಧಿಕಾರಿಗಳೂ ರಾಜ್ಯಕ್ಕೆ ಬಂದು ಪರಿಶೀಲನೆ ನಡೆಸುವ ಭರವಸೆ ನೀಡಿದ್ದಾರೆ. ಹೀಗಾಗಿ ಮೆಮೊರಾಂಡಮ್ ಅನ್ನು ಸಚಿವ ಸಂಪುಟದಲ್ಲಿ ಮಂಡಿಸಿ ಅನುಮೋದನೆ ಪಡೆದು ಈ ವಾರಾಂತ್ಯದೊಳಗೆ ಸಲ್ಲಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.

ಎರಡನೇ ಹಂತದಲ್ಲಿ ಮತ್ತೆ ಬರ ಘೋಷಣೆ
ಕೇಂದ್ರ ಬರ ಮಾರ್ಗಸೂಚಿ ಅನ್ವಯ ರಾಜ್ಯದ 161 ತಾಲೂಕುಗಳಲ್ಲಿ ತೀವ್ರ ಬರ ಎದುರಾಗಿದೆ. 34 ತಾಲೂಕುಗಳಲ್ಲಿ ಭಾಗಶಃ ಬರದ ಸ್ಥಿತಿ ಇದೆ. ಈ ಎರಡನ್ನೂ ಸೇರಿಸಿ ಕಳೆದ ವಾರ 195 ತಾಲೂಗಳಲ್ಲಿ ಬರ ಘೋಷಿಸಲಾಗಿದೆ. ಉಳಿದಂತೆ ಇನ್ನೂ 41 ತಾಲೂಕುಗಳಲ್ಲೂ ಸಹ ಪರಿಸ್ಥಿತಿ ಬಿನ್ನವಾಗೇನು ಇಲ್ಲ. ಆದರೆ, ಕೇಂದ್ರದ ಮಾರ್ಗಸೂಚಿಯಂತೆ ಈ ತಾಲೂಕುಗಳಲ್ಲಿ ಬರ ಘೋಷಣೆ ಸಾಧ್ಯವಿಲ್ಲ.

ಆದರೆ, ಅಕ್ಟೋಬರ್ ತಿಂಗಳ ಕೊನೆಯ ವರೆಗೆ  ಬೆಳೆ ಸಮೀಕ್ಷೆ ನಡೆಸಿ ಬರ ಘೋಷಣೆಗೆ ಅವಕಾಶ ಇದೆ. ಹೀಗಾಗಿ 195 ತಾಲೂಕುಗಳೇ ಅಂತಿಮವಲ್ಲ. ಬದಲಾಗಿ ಅಕ್ಟೋಬರ್ ತಿಂಗಳ ಮಳೆ ಪರಿಸ್ಥಿತಿ ಗಮನಿಸಿ ಮುಂದಿನ ದಿನಗಳಲ್ಲಿ ಬೆಳೆ ಸಮೀಕ್ಷೆ ಆಧರಿಸಿ ಮತ್ತೊಂದಷ್ಟು ತಾಲೂಕುಗಳನ್ನೂ ಎರಡನೇ ಪಟ್ಟಿಯಲ್ಲಿ “ಬರ ಪೀಡಿತ” ಎಂದು ಘೋಷಿಸಲಾಗುವುದು. ಈ ಬಗ್ಗೆ ಕೇಂದ್ರಕ್ಕೆ ಮತ್ತೊಂದು ಮನವಿ (ಮೆಮೊರಾಂಡಮ್) ಸಲ್ಲಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದರು.

ನೀರಿಗೂ, ಮೇವಿಗೂ ಕೊರತೆ ಇಲ್ಲ
ರಾಜ್ಯದಲ್ಲಿ ಸದ್ಯಕ್ಕೆ ಕುಡಿಯುವ ನೀರಿಗೆ ತೀವ್ರ ಅಭಾವ ಇಲ್ಲ. ಕುಡಿಯುವ ನೀರಿನ ಪೂರೈಕೆ ಸಲುವಾಗಿಯೇ ಎಲ್ಲಾ ಜಿಲ್ಲಾ ಪಂಚಾಯತ್ ಸಿಇಓ ಗಳ ಖಾತೆಗೆ ಈಗಾಗಲೇ ಒಂದು ಕೋಟಿ ರೂ. ಹಣವನ್ನು ವರ್ಗಾಯಿಸಲಾಗಿದೆ. ಅಲ್ಲದೆ, ಎಲ್ಲಾ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 462 ಕೋಟಿ ಹಣ ಇದೆ. ಈ ಹಣವನ್ನು ಕುಡಿಯುವ ನೀರು ಪೂರೈಕೆಗೆ ಬಳಸಲು ಸೂಚಿಸಲಾಗಿದೆ. ಮತ್ತಷ್ಟು ಹಣದ ಅಗತ್ಯ ಇದ್ದರೆ ಅದನ್ನೂ ಪೂರೈಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಅಗತ್ಯವಿದ್ದ ಸ್ಥಳಗಳಿಗೆ ಟ್ಯಾಂಕರ್ ಅಥವಾ ಖಾಸಗಿ ಬೋರ್ ಗಳ ಮೂಲಕ ನೀರು ಪೂರೈಕೆಗೆ ಮುಂದಾಗುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.

ಪಶುಗಳ ಮೇವಿನ ಕೊರತೆಗೆ ಸಂಬಂಧಿಸಿದ ಪತ್ರಕರ್ತರ ಪ್ರಶ್ನೆಗಳಿಗೂ ಉತ್ತರಿಸಿದ ಅವರು, ರಾಜ್ಯದಲ್ಲಿ ಮೇವಿನ ಕೊರತೆ ಇಲ್ಲ. ಬರ ಘೋಷಣೆಗೆ ಮುನ್ನವೇ ಅಗತ್ಯ ಮೇವಿನ ದಾಸ್ತಾನಿಗೆ ಸೂಚಿಸಲಾಗಿದೆ. ಅಲ್ಲದೆ, ನೀರಿನ ಲಭ್ಯತೆ ಇರುವ ರೈತರಿಗೆ ಮೇವಿನ ಭಿತ್ತನೆ ಬೀಜಗಳನ್ನು ಉಚಿತವಾಗಿ ವಿತರಿಸಲು 20 ಕೋಟಿ ರೂ. ನೀಡಲಾಗಿದೆ ಎಂದು ತಿಳಿಸಿದರು.

ಬರ ಘೋಷಿಸಿದ ಮೊದಲ ರಾಜ್ಯ ಕರ್ನಾಟಕ
ದೇಶದ ಹಲವು ರಾಜ್ಯಗಳಲ್ಲಿ ಇಂದು ಬರದ ಸ್ಥಿತಿ ಇದೆ. ಕೇರಳ, ಬಿಹಾರ, ಜಾರ್ಖಂಡ್, ಮಣಿಪುರ, ಮಿಜೋರಾಂ ರಾಜ್ಯಗಳಲ್ಲೂ ಈ ವರ್ಷ ತೀವ್ರ ಮಳೆ ಕೊರತೆ ಎದುರಾಗಿದೆ. ಆದರೆ, ಈ ಯಾವ ರಾಜ್ಯಗಳೂ ಈವರೆಗೆ “ಬರ” ಘೋಷಣೆ ಮಾಡಿಲ್ಲ. ಆದರೆ, ಕರ್ನಾಟಕದಲ್ಲಿ ರಾಜ್ಯ ಮಾತ್ರ ಮುಂಜಾಗ್ರತಾ ಕ್ರಮವಾಗಿ ಬರ ಘೋಷಿಸಲಾಗಿದೆ. ಜೂನ್ ತಿಂಗಳಿಂದಲೂ ರಾಜ್ಯದ ಮಳೆ ವರದಿಯನ್ನು ಪ್ರತಿ ವಾರ ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ಕಳುಹಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಅಲ್ಲದೆ, ರಾಜ್ಯದ ರೈತರಿಗೆ ಸಂಪೂರ್ಣ ನಷ್ಟ ಕಟ್ಟಿಕೊಡಲಾಗಲ್ಲ. ಆದರೆ ಅವರ ಕಷ್ಟಕ್ಕೆ ರಾಜ್ಯ ಸರ್ಕಾರ ಖಂಡಿತ ನೆರವಾಗಲಾಗಲಿದೆ” ಎಂದು ಅವರು ಭರವಸೆ ನೀಡಿದರು.

ಏನಿದು ಹಸಿರು ಬರ?
ಪ್ರಸ್ತುತ ದಿನಗಳಲ್ಲಿ ಊಹೆಗೂ ಮೀರಿ ಬದಲಾಗುತ್ತಿರುವ ಹವಾಮಾನದ ವಿಭಿನ್ನ ದ್ವಂದ್ವ ಬದಲಾವಣೆಯ ಪರಿಸ್ಥಿತಿಯಲ್ಲಿ “ಹಸಿರು ಬರ” ಎಂಬ ಪದವನ್ನೂ ಮೆಮೊರಾಂಡಮ್ ನಲ್ಲಿ ಸೇರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

“ಬರ ಘೋಷಿತ ತಾಲೂಕುಗಳ ಹೊರತಾಗಿಯೂ ಅನೇಕ ತಾಲೂಕುಗಳಲ್ಲಿ ಸಮಯಕ್ಕೆ ಸರಿಯಾಗಿ ಮಳೆ ಬಂದಿಲ್ಲ, ಬೆಳೆಯೂ ಕೈಸೇರಿಲ್ಲ. ಅಕಾಲಿಕ ಮಳೆಯ ಕಾರಣದಿಂದಾಗಿಯೂ ಒಂದಷ್ಟು ಬೆಳೆ ಹಾನಿಯಾಗಿದೆ. ಆದರೆ, ಈ ಅಕಾಲಿಕ ಮಳೆ ಭೂಮಿಯಲ್ಲಿ ತೇವಾಂಶಕ್ಕೆ ಕಾರಣವಾಗಿದೆ. ಸ್ಯಾಟಲೈಟ್ ಇಮೇಜ್ ನಲ್ಲಿ ವೀಕ್ಷಿಸಿದಾಗ ಬರ ಪೀಡಿತ ಪ್ರದೇಶದಲ್ಲೂ ತೇವಾಂಶದ ಹಸಿರು ಹೊದಿಕೆ ಕಂಡುಬರುತ್ತದೆ. ಕೇಂದ್ರ ಸರ್ಕಾರ ಬರ ಘೋಷಣೆಗೆ ಮುನ್ನ ಈ ಸ್ಯಾಟಲೈಟ್ ಇಮೇಜ್ ಗಳನ್ನು ಪರಿಶೀಲಿಸುವುದು ವಾಡಿಕೆ.

ಹೀಗಾಗಿ ಈ ಇಮೇಜ್ ಗಳು ಬರ ಘೋಷಣೆಗೆ ಬಹುದೊಡ್ಡ ಅಡ್ಡಿಯಾಗುತ್ತಿದೆ. ಇದನ್ನು ನಾವು “ಹಸಿರು ಬರ” ಎಂದು ಹೆಸರಿಸಿದ್ದೇವೆ. ಈ ಸಂಬಂಧ ಕೇಂದ್ರಕ್ಕೆ ಮನವಿ ಸಲ್ಲಿಸುವ ಮುನ್ನವೇ ಇಂತಹ ಪ್ರದೇಶಗಳಲ್ಲಿ ವೈಜ್ಞಾನಿಕ ಸಂಶೋಧನೆ ನಡೆಸುವ ಸಲುವಾಗಿ ರಾಜ್ಯದ ನಾಲ್ಕು ಕೃಷಿ ವಿಶ್ವವಿದ್ಯಾಲಯ ಹಾಗೂ ಒಂದು ತೋಟಗಾರಿಕಾ ವಿಶ್ವವಿದ್ಯಾಲಯದ ಸಂಶೋಧಕರನ್ನೂ ಕಳುಹಿಸಲಾಗಿತ್ತು. ಆ ವರದಿಯೂ ಕೈಸೇರಿದ್ದು ಮೆಮೊರಾಂಡಮ್ ನಲ್ಲಿ “ಹಸಿರು ಬರ”ದ ಕುರಿತು ಉಲ್ಲೇಖಿಸಲಾಗುವುದು. ಸಮೀಕ್ಷೆಗಾಗಿ ರಾಜ್ಯಕ್ಕೆ ಆಗಮಿಸುವ ಕೇಂದ್ರದ ಅಧಿಕಾರಿಗಳಿಗೆ ವೈಜ್ಞಾನಿಕ ಮಾಹಿತಿಯೂ ನೀಡಲಾಗುವುದು. ಇದರಿಂದ ಹಲವು ರೈತರಿಗೆ ಅನುಕೂಲವಾಗಲಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಗ್ಯಾರಂಟಿ ಯೋಜನೆ ಮೂಲಕ ₹52 ಸಾವಿರ ಕೋಟಿ ಹಣ ಬಡವರ ಕೈಸೇರುತ್ತಿರುವುದು ಜಗತ್ತಿನಲ್ಲೇ ಮೊದಲು : ಕೃಷ್ಣಭೈರೇಗೌಡ
ಬೆಂಗಳೂರು : ದಿನೋಪಯೋಗಿ ವಸ್ತುಗಳ ಬೆಲೆ ದಿನನಿತ್ಯ ಏರಿಕೆಯಾಗುತ್ತಿದ್ದು, ಬಡವರ ಬದುಕು ದುಸ್ಥರವಾಗಿದೆ. ಈ ಹಿನ್ನೆಲೆಯಲ್ಲಿ ಬಡವರಿಗೆ ಅನುಕೂಲವಾಗಲಿ, ಪ್ರತಿಯೊಂದು ಕುಟುಂಬಗಳಿಗೆ ತಿಂಗಳಿಗೆ 4 ರಿಂದ 5 ಸಾವಿರ ಹಣ ಉಳಿತಾಯವಾಗಲಿ ಎಂಬ ಕಾರಣಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ 52 ಸಾವಿರ ಕೋಟಿ ರೂ. ಹಣವನ್ನು ಜನಪರ ಯೋಜನೆಯ ಅಡಿಯಲ್ಲಿ ಜನರ ಕೈಗೇ ನೀಡುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಕೋಗಿಲು ವಾರ್ಡ್ ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪಿಂಚಣಿ ಹಾಗೂ ಗೃಹಲಕ್ಷ್ಮಿ ಮಂಜೂರಾತಿ ಪತ್ರ ವಿತರಣೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಸರ್ಕಾರ ರಚನೆಯಾಗಿ ಕೇವಲ ಎರಡೇ ತಿಂಗಳಲ್ಲಿ ಆಶ್ವಾಸನೆ ನೀಡಿದ ಎಲ್ಲಾ ಯೋಜನೆಗಳನ್ನೂ ಜಾರಿಗೆ ತರುವ ಮೂಲಕ ಬಡ-ಮಧ್ಯಮ ವರ್ಗದ ಜನರಿಗೆ ಅನುಕೂಲ ಮಾಡಿಕೊಟ್ಟಿದೆ. ಈ ಮೂಲಕ ಕಾಂಗ್ರೆಸ್ ಬಡವರ ಪರ ಸರ್ಕಾರ ಎಂಬುದನ್ನು ಮತ್ತೊಮ್ಮೆ ಸಾಬೀತುಮಾಡಿದೆ” ಎಂದರು.

ಮಹಿಳೆಯರ ಸಬಲೀಕರಣಕ್ಕಾಗಿ ಶಕ್ತಿ ಯೋಜನೆಯ ಅಡಿಯಲ್ಲಿ ಉಚಿತ ಸಾರಿಗೆ ವ್ಯವಸ್ಥೆ ನೀಡಲಾಗಿದೆ. ಎಲ್ಲರ ಮನೆಗಳಿಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯೂ ಆಗಸ್ಟ್ ತಿಂಗಳಿನಿಂದಲೇ ಜಾರಿಯಾಗಿದ್ದು, ಶೂನ್ಯ ದರದ ಬಿಲ್ ನೀಡಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಹೆಸರಿನಲ್ಲಿ ಪ್ರತಿ ಮಹಿಳೆಯರಿಗೆ 2 ಸಾವಿರ ರೂ ಹಣವನ್ನು ನೀಡಲು ಸರ್ಕಾರ ಈಗಾಗಲೇ ರೂಪುರೇಷೆ ಸಿದ್ದಪಡಿಸಿದ್ದು, ನೋಂದಣಿಯನ್ನೂ ಆರಂಭಿಸಿಯಾಗಿದೆ. ಅನ್ನಭಾಗ್ಯದ ಅಡಿಯಲ್ಲಿ 5 ಕೆಜಿ ಅಕ್ಕಿ, ಉಳಿದ ಅಕ್ಕಿಯ ಬದಲಾಗಿ ಕೆ.ಜಿ.ಗೆ ₹34ರಂತೆ ₹750 ರೂ.ಹಣವನ್ನು ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ.

ಈ ಮೂಲಕ ಪ್ರತಿ ಮನೆಗೆ ಮಾಸಿಕ ₹4 ರಿಂದ ₹5 ಸಾವಿರ ಹಣ ಉಳಿತಾಯವಾಗಲಿದೆ. ಈ ಹಣವನ್ನು ಮಹಿಳೆಯರು ತಮ್ಮ ಕುಟುಂಬ ನಿರ್ವಹಣೆಗೆ, ಮಕ್ಕಳ ಶಿಕ್ಷಣಕ್ಕೆ ಸೇರಿದಂತೆ ಅಗತ್ಯ ವಿಚಾರಗಳಿಗೆ ಬಳಸಿಕೊಳ್ಳಬಹುದು. ದಿನೋಪಯೋಗಿ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟ ಎದುರಿಸುತ್ತಿರುವ ಬಡ-ಮಧ್ಯಮ ವರ್ಗದ ಜನರ ಪಾಲಿಗೆ ಕಾಂಗ್ರೆಸ್ ಸರ್ಕಾರ ಯೋಜನೆಗಳು ಆಶಾಕಿರಣವಾಗಿದೆ. ಜನರ ಸಂಕಷ್ಟ ನಿವಾರಣೆಗಾಗಿ ₹52 ಸಾವಿರ ಕೋಟಿ ಹಣವನ್ನು ಜನರಿಗೇ ನೀಡುವ ಮೂಲಕ ಕಾಂಗ್ರೆಸ್ ಸರ್ಕಾರ ಈವರೆಗೆ ಜಗತ್ತಿನಲ್ಲಿ ಯಾರೂ ಮಾಡಲಾಗದ ಸಾಧನೆ ಮಾಡಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಭಾಗ್ಯಗಳ ಜೊತೆಗೆ ವಿಧವೆಯವರು, ವಯಸ್ಸಾವರು ಹಾಗೂ ಅಂಗವಿಕಲರನ್ನೂ ಹುಡುಕಿ ಅವರಿಗೂ ಪಿಂಚಣಿ ನೀಡುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಆದರೆ, ಅಧಿಕಾರದಲ್ಲಿದ್ದಾಗ ಯಾವ ಜನಪರ ಯೋಜನೆಗಳನ್ನೂ ಜಾರಿಮಾಡದ ಬಿಜೆಪಿ ನಾಯಕರು, ಕಾಂಗ್ರೆಸ್ ಘೋಷಿಸಿದ್ದ ಭಾಗ್ಯಗಳನ್ನು ಭೂಸಾ ಭಾಗ್ಯ, ಇದನ್ನು ಜಾರಿ ಮಾಡಲು ಸಾಧ್ಯವೇ ಇಲ್ಲ ಎಂದು ಆರೋಪಿಸಿದ್ದರು. ನಾವು ಈ ಆರೋಪ-ಅಪಹಾಸ್ಯಗಳಿಗೆ ಕಿವಿಗೊಡದೆ ಜನರ ಮಾತಿಗೆ ಬದ್ಧವಾಗಿ ಕೇವಲ ಎರಡು ತಿಂಗಳಲ್ಲಿ ಎಲ್ಲಾ ಭಾಗ್ಯಗಳನ್ನೂ ಜಾರಿ ಮಾಡಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡ ತಿರುಗೇಟು ನೀಡಿದರು.

ಬಡವರ ಅಕ್ಕಿಗೆ ತಾರತಮ್ಯ ಮಾಡಿದ ಕೇಂದ್ರದ ವಿರುದ್ಧ ಕಿಡಿ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10 ಕೆ.ಜಿ ಅಕ್ಕಿ ನೀಡುವುದಾಗಿ ಆಶ್ವಾಸನೆ ನೀಡಿತ್ತು. ಹೀಗಾಗಿ ನಿಗದಿತ ₹34ರ ದರದಂತೆ ಕರ್ನಾಟಕಕ್ಕೆ ಅಕ್ಕಿ ನೀಡುವಂತೆ ಭಾರತೀಯ ಆಹಾರ ನಿಗಮಕ್ಕೆ ಪತ್ರ ಬರೆಯಲಾಗಿತ್ತು. ಆದರೆ, ಆರಂಭದಲ್ಲಿ ಅಕ್ಕಿ ನೀಡುವುದಾಗಿ ತಿಳಿಸಿ ಪತ್ರ ಬರೆದಿದ್ದ ಆಹಾರ ನಿಗಮ ಒಂದೇ ವಾರದಲ್ಲಿ ಅಕ್ಕಿ ನೀಡುವ ನಿರ್ಧಾರದಿಂದ ಹಿಂದೆ ಸರಿಯಿತು.

ಈ ಬಗ್ಗೆ ಕೇಂದ್ರ ಸರ್ಕಾರದ ಗಮನಕ್ಕೆ ತಂದರೂ ಯಾವುದೇ ಉಪಯೋಗವಾಗಲಿಲ್ಲ. ಆಹಾರ ನಿಗಮಗಳ ಗೋಧಾಮಿನಲ್ಲಿ ಅಕ್ಕಿ ಇದ್ದರೂ ಬಡವರಿಗೆ ನೀಡಲು ಮನಸ್ಸಿಲ್ಲದ ಕೇಂದ್ರ ಸರ್ಕಾರ ಆ ಅಕ್ಕಿಯನ್ನು ಹರಾಜಿಗಿಟ್ಟಿತು. ಕರ್ನಾಟಕ ಸರ್ಕಾರಕ್ಕೆ ಹರಾಜಿನಲ್ಲಿ ಪಾಲ್ಗೊಳ್ಳಲೂ ಅವಕಾಶ ನೀಡಲಿಲ್ಲ. ಈ ಮೂಲಕ ಕೇಂದ್ರ ಸರ್ಕಾರ ತಾನು ಯಾವ ಕಾಲಕ್ಕೂ ಬಡವರ ಪರ ಇಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ ಎಂದು ಅವರು ಕಿಡಿಕಾರಿದರು.

ಕೇಂದ್ರ ಸರ್ಕಾರ ಬಡವರಿಗೆ ಅಕ್ಕಿ ನೀಡಲು ಸಹಕರಿಸದ ಕಾರಣ ಪ್ರತಿ ಕುಟುಂಬಗಳಿಗೆ 5 ಕೆಜಿ ಅಕ್ಕಿ ಜೊತೆಗೆ ಉಳಿದ 5 ಕೆಜಿ ಅಕ್ಕಿಗೆ ಬದಲಾಗಿ  ₹34ರ ದರದಂತೆ ₹750 ರೂ. ನೀಡಲು ಸರ್ಕಾರ ನಿರ್ಧರಿಸಿದ್ದು, ಆ ಹಣವೂ ನಿಮ್ಮ ಖಾತೆಗೆ ನೇರ ಜಮೆಯಾಗಲಿದೆ. ಈ ಹಣವನ್ನು ಮಹಿಳೆಯರು ನಿಮಗೆ ಅಗತ್ಯವಾದ ಪೌಷ್ಠಿಕ ಆಹಾರಕ್ಕೆ ಬಳಸಿ ಎಂದು ಸಚಿವ ಕೃಷ್ಣ ಬೈರೇಗೌಡ ಸಲಹೆ ನೀಡಿದರು.

ತಹಶೀಲ್ದಾರ್, ಎಸಿ-ಡಿಸಿ ನ್ಯಾಯಾಲಯಗಳ ಪ್ರಕರಣಗಳನ್ನು ಬೇಗನೆ ಇತ್ಯರ್ಥಗೊಳಿಸಿ : ಸಚಿವ ಕೃಷ್ಣ ಬೈರೇಗೌಡ ಸೂಚನೆ
ಬೆಂಗಳೂರು : ತಹಶೀಲ್ದಾರ್, ಎಸಿ ಹಾಗೂ ಡಿಸಿ ಮಟ್ಟದ ನ್ಯಾಯಾಲಯಗಳಲ್ಲಿ 6 ತಿಂಗಳಿನಿಂದ 5 ವರ್ಷಗಳವರೆಗೆ ನೂರಾರು ತಕರಾರು ಪ್ರಕರಣಗಳು ಬಾಕಿ ಉಳಿದಿದ್ದು, ಈ ಎಲ್ಲ ಪ್ರಕರಣಗಳನ್ನು 4 ತಿಂಗಳ ಕಾಲಮಿತಿಯಲ್ಲಿ ಇತ್ಯರ್ಥಪಡಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ.

ಬೆಂಗಳೂರು ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಜನರಿಗೆ ಒಳಿತು ಕೆಡುಕು ಎರಡನ್ನೂ ಮಾಡುವ ಶಕ್ತಿ ಕಂದಾಯ ಇಲಾಖೆಗೆ ಇದೆ. ಆದರೆ, ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡಲಿದೆ ಎಂಬ ಭರವಸೆಯಲ್ಲಿ ಜನ ನಮಗೆ ಮತ ನೀಡಿದ್ದು, ಜನಸ್ನೇಹಿ ಆಡಳಿತ ನೀಡುವುದು ನಮ್ಮ ಆದ್ಯತೆಯಾಗಲಿ ಎಂದು ಕಿವಿಮಾತು ಹೇಳಿದ್ದಾರೆ. ಕಳೆದ ಐದು ವರ್ಷಗಳಿಂದ ಇತ್ಯರ್ಥವಾಗದ ತಕರಾರು ಪ್ರಕರಣಗಳನ್ನು ಶೀಘ್ರದಲ್ಲೇ ವಿಲೇವಾರಿಗೊಳಿಸಿ ಎಂದು ಅಧಿಕಾರಿಳಿಗೆ ತಾಕೀತು ಮಾಡಿದರು.

“ಬೆಂಗಳೂರು ಪ್ರಾದೇಶಿಕ ವಿಭಾಗದ ತಹಶೀಲ್ದಾರ್ ನ್ಯಾಯಾಲಯಗಳಲ್ಲಿ  6 ತಿಂಗಳಿಂದ 5 ವರ್ಷಗಳವರೆಗಿನ ಒಟ್ಟು 6,859 ತಕರಾರು ಪ್ರಕರಣಗಳು ಈವರೆಗೆ ಇತ್ಯರ್ಥವಾಗದೆ ಬಾಕಿ ಉಳಿದಿವೆ. ಇದರಿಂದಾಗಿ ಸಾರ್ವಜನಿಕರು ದಿನಂಪ್ರತಿ ತಹಶೀಲ್ದಾರ್ ಕಚೇರಿಗೆ ಅಲೆಯುವಂತಾಗಿದೆ. ಹೀಗಾಗಿ ತಹಶೀಲ್ದಾರ್ ಕಚೇರಿಯಲ್ಲಿ ಬಾಕಿ ಉಳಿದಿರುವ ಪ್ರಕರಣಗಳಲ್ಲಿ 4000 ಪ್ರಕರಣಗಳನ್ನು ಮುಂದಿನ 4 ತಿಂಗಳ ಒಳಗಾಗಿ ಇತ್ಯರ್ಥಗೊಳಿಸಬೇಕು” ಎಂದು ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದರು.

ಉಪ ವಿಭಾಗಾಧಿಕಾರಿ-ಜಿಲ್ಲಾಧಿಕಾರಿಗಳ ವಿರುದ್ಧ ಅಸಮಾಧಾನ!
ಬೆಂಗಳೂರು ಪ್ರಾದೇಶಿಕ ವಿಭಾಗದ ಉಪ ವಿಭಾಗಾಧಿಕಾರಿ (ಎಸಿ) ಹಾಗೂ ಜಿಲ್ಲಾಧಿಕಾರಿ (ಡಿಸಿ) ನ್ಯಾಯಾಲಯಗಳಲ್ಲೂ ಸಾಕಷ್ಟು ತಕರಾರು ಪ್ರಕರಣಗಳು ಬಾಕಿ ಉಳಿದಿದ್ದು, ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ತೀವ್ರ ಅಸಮಾಧಾನ ಹೊರಹಾಕಿದರು.

ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳ ಪೈಕಿ ದೊಡ್ಡಬಳ್ಳಾಪುರ 5683, ಬೆಂಗಳೂರು ದಕ್ಷಿಣ 6129, ಬೆಂಗಳೂರು ಉತ್ತರ 6035, ಚಿಕ್ಕಬಳ್ಳಾಪುರ 3014, ಚಿತ್ರದುರ್ಗ 1374, ದಾವಣಗೆರೆ 152, ಹೊನ್ನಾಳ್ಳಿ 456, ಕೋಲಾರ 5112, ರಾಮಮನಗರ 4210, ಶಿವಮೊಗ್ಗ 613, ಸಾಗರ 411, ತುಮಕೂರು 7354, ಮಧುಗಿರಿ 3167 ಮತ್ತು ತಿಪಟೂರಿನ 742 ಪ್ರಕರಣಗಳು ಸೇರಿದಂತೆ ಒಟ್ಟಾರೆಯಾಗಿ 45,482 ಪ್ರಕರಣಗಳು ಬಾಕಿ ಇವೆ.

ಜಿಲ್ಲಾಧಿಕಾರಿ ನ್ಯಾಯಾಲಯಗಳ ಪೈಕಿ ಬೆಂಗಳೂರು ಗ್ರಾಮಾಂತರ 1384, ಬೆಂಗಳೂರು ನಗರ 4974, ಚಿಕ್ಕಬಳ್ಳಾಪುರ 429, ಚಿತ್ರದುರ್ಗ 1711, ದಾವಣಗೆರೆ 81, ಕೋಲಾರ 102, ರಾಮನಗರ 501, ಶಿವಮೊಗ್ಗ 73, ತುಮಕೂರಿನ 697 ಸೇರಿದಂತೆ ಒಟ್ಟಾರೆಯಾಗಿ 10,065 ಪ್ರಕರಣಗಳು ಬಾಕಿ ಇವೆ.

ಪರಿಶೀಲನೆಯ ವೇಳೆ ಎಸಿ-ಡಿಸಿ ನ್ಯಾಯಾಲಯಗಳಲ್ಲೂ ಬಾಕಿ ಇರುವ ಪ್ರಕರಣಗಳ ಬಗ್ಗೆ ಅಸಮಾಧಾನ ಹೊರಹಾಕಿದ ಸಚಿವರು, “ಉನ್ನತ ಅಧಿಕಾರಿಗಳೇ ತಮ್ಮ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಇತ್ಯರ್ಥಪಡಿಸದಿದ್ದರೆ, ತಹಶೀಲ್ದಾರರಿಂದ ನೀವು ಹೇಗೆ ಪರಿಣಾಮಕಾರಿ ಕೆಲಸವನ್ನು ನಿರೀಕ್ಷೆ ಮಾಡಲು ಸಾಧ್ಯ. ಹೀಗಾಗಿ ನೀವು ಇತರರಿಗೆ ತಪ್ಪು ಉದಾಹರಣೆಯಾಗಬೇಡಿ. ” ಎಂದು ಸಲಹೆ ನೀಡಿದರು.

ಅಲ್ಲದೆ, “ಉಪ ವಿಭಾಗಾಧಿರಿಗಳು ಸಿವಿಲ್ ತಕರಾರು ಪ್ರಕರಣಗಳನ್ನು ಮುಂದಿನ ಒಂದು ತಿಂಗಳಲ್ಲಿ ಇತ್ಯರ್ಥಪಡಿಸಬೇಕು. ಜಿಲ್ಲಾಧಿಕಾರಿಗಳು ತಮ್ಮ ಬಳಿಯ ಪ್ರಕರಣಗಳನ್ನು ವಿಭಾಗಿಸಿ ಈ ಪ್ರಕರಣಗಳನ್ನು ಎಷ್ಟು ದಿನಗಳಲ್ಲಿ ಮುಗಿಸಬಹುದು ಎಂದು ನಿರ್ಧರಿಸಬೇಕು ಹಾಗೂ ಸಣ್ಣಪುಟ್ಟ ಪ್ರಕರಣಗಳನ್ನು ಕೋರ್ಟ್ ಅದಾಲತ್ ಮೂಲಕ ಬಗೆಹರಿಸಬೇಕು. ಪ್ರಕರಣಕ್ಕೆ ಸಂಬಂಧಪಟ್ಟವರನ್ನು ಕರೆತರುವ ಜವಾಬ್ದಾರಿಯನ್ನು ಆಯಾ ರಾಜಸ್ವ ನಿರೀಕ್ಷಕರಿಗೆ (ರೆವೆನ್ಯೂ ಇನ್ಸ್ಪೆಕ್ಟರ್)ಗ ವಹಿಸಬೇಕು ಎಂದು ಸಭೆಯಲ್ಲಿ ಸಚಿವರು ಸೂಚಿಸಿದರು.

ಉಪ ವಿಭಾಗಾಧಿಕಾರಿಗಳು ತಮ್ಮ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಪೈಕಿ 6 ತಿಂಗಳಿಗಿಂತ ಹಳೆಯ ಎಲ್ಲಾ ಪ್ರಕರಣಗಳೂ ಸೇರಿದಂತೆ ಉಳಿದಿರುವ 12000 ಪ್ರಕರಣಗಳನ್ನೂ ಮುಂದಿನ 4 ತಿಂಗಳಲ್ಲಿ ವಿಲೇವಾರಿ ಮಾಡಬೇಕು. ಜಿಲ್ಲಾಧಿಕಾರಿಗಳೂ ಸಹ ತಮ್ಮ ನ್ಯಾಯಾಲಯದಲ್ಲಿರುವ 6 ತಿಂಗಳಿಗಿಂತ ಹಳೆಯ ಎಲ್ಲಾ ಪ್ರಕರಣಗಳನ್ನೂ ಮುಂದಿನ 3 ತಿಂಗಳಲ್ಲಿ ವಿಲೇವಾರಿ ಮಾಡಬೇಕು ಎಂದು ಕಾಲಮಿತಿ ನೀಡಿದರು

ಸೆಪ್ಟೆಂಬರ್ 10ನೇ ತಾರಿಖಿನ ಒಳಗಾಗಿ ಮತ್ತೊಂದು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದು, ಈ ಸಭೆಯಲ್ಲಿ ತಹಶೀಲ್ದಾರ್, ಎಸಿ-ಡಿಸಿ ನ್ಯಾಯಾಲಯಗಳಲ್ಲಿ ವಿಲೇವಾರಿಯಾಗಿರುವ ಪ್ರಕರಣಗಳ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

ಆದೇಶಕ್ಕೆ ಕಾಯ್ದಿರಿಸಿದ್ದ ಪ್ರಕರಣಗಳ ವಿಳಂಬವೇಕೆ?
ಉಪ ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆಯಾಗಿ ಆದೇಶಕ್ಕೆ ಕಾಯ್ದಿರಿಸಲ್ಪಟ್ಟ ಪ್ರಕರಣಗಳ ವಿಲೇವಾರಿಗೂ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿರುವುದೇಕೆ? ಎಂದು ಸಚಿವರ ಕೃಷ್ಣ ಬೈರೇಗೌಡ ಅವರು ಸಭೆಯಲ್ಲಿ ಅಸಮಾಧಾನ ಹೊರಹಾಕಿದರು.

ಈ ವೇಳೆ ಅಧಿಕಾರಿಗಳಿಗೆ ಕಾನೂನು ಪಾಠ ಮಾಡಿದ ಸಚಿವರು, “ಆದೇಶಕ್ಕೆ ಕಾಯ್ದಿರಿಸಲ್ಪಟ್ಟ ಪ್ರಕರಣಗಳಿಗೆ ಸಂಬಂಧಿಸಿದಂತೆ 15 ದಿನಗಳೊಳಗಾಗಿ ಆದೇಶ ಹೊರಡಿಸಬೇಕು ಎಂಬ ಕಾನೂನು ಇದೆ. ಆದರೆ, ಉಪ ವಿಭಾಗಾಧಿಕಾರಿಗಳು ವಿಚಾರಣೆ ಮುಗಿಸಿಯೂ ಸಾವಿರಾರು ಪ್ರಕರಣಗಳ ಆದೇಶ ಹೊರಡಿಸದಿರುವುದು ಏಕೆ? ಎಂದು ಕಟು ಪ್ರಶ್ನೆಗಳನ್ನು ಮುಂದಿಟ್ಟ ಸಚಿವರು, ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ನಿಯಮಗಳ ಅನ್ವಯ ತುರ್ತಾಗಿ ಆದೇಶ ಹೊರಡಿಸಲು ತಿಳಿಸಿದರು.

ಬಾಕಿ ಕಾಮಗಾರಿ ಪೂರ್ಣಗೊಳಿಸಲು ತಾಕೀತು
ಸಾರ್ವಜನಿಕ ಆಸ್ತಿಗಳಿಗೆ ಉಂಟಾಗಿರುವ ಹಾನಿ ದುರಸ್ಥಿಗೆ 2019ರಿಂದ 2022 ರ ಅವಧಿಯಲ್ಲಿ ಮಂಜೂರಾಗಿ ಇನ್ನೂ ಪೂರ್ಣಗೊಳ್ಳದ  14.87 ಕೋಟಿ ರೂ. ವೆಚ್ಚದ ಕಾಮಗಾರಿಗಳ (ಕೊರೋನಾ ಸೇರಿದಂತೆ) ಬಗ್ಗೆಯೂ ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ ಹೊರಹಾಕಿದರು.

ಈ ಕಾಮಗಾರಿಗಳು ಇನ್ನೂ ಪೂರ್ಣಗೊಳ್ಳದಿರಲು ಕಾರಣವೇನು? 45 ದಿನಗಳಲ್ಲಿ ಮುಗಿಯಬೇಕಾದ ಕಾಮಗಾರಿಗಳು 2019ರಿಂದಲೂ ಬಾಕಿ ಉಳಿದಿವೆ ಎಂದರೆ ಏನರ್ಥ? 2019ರ ನೆರೆಯಲ್ಲಿ ರಿಪೇರಿಯಾದ ಮನೆಯನ್ನು ಅಧಿಕಾರಿಗಳು ಈಗ ದುರಸ್ಥಿ ಮಾಡಿ ಕೊಡ್ತೀರಾ?  ಎಂದು ಆಕ್ರೋಶ ಹೊರಹಾಕಿದ ಸಚಿವರು, ಮುಂದಿನ 15 ದಿನಗಳಲ್ಲಿ ಈ ಎಲ್ಲಾ ಕಾಮಗಾರಿಗಳೂ ಪೂರ್ಣಗೊಳಿಸಬೇಕು, ಸಂಬಂಧಪಟ್ಟ ಕಾಮಗಾರಿಗೆ ಹಣ ಪಾವತಿ ಮಾಡಬೇಕು. ಕಳೆದ ವರ್ಷದ ಬಾಕಿಯನ್ನೂ ಸಂಪೂರ್ಣವಾಗಿ ವಿಲೇವಾರಿ ಮಾಡಬೇಕು ಎಂದು ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಅಧಿಕಾರಿಗಳು ಇ-ಆಫೀಸ್ ಬಳಕೆಗೆ ಮುಂದಾಗಿ
ಹಳೇ ಕಾಲದ ಪತ್ರ ವ್ಯವಹಾರವನ್ನು ಕೈಬಿಟ್ಟು ತಂತ್ರಜ್ಞಾನಕ್ಕೆ ಒಗ್ಗಿಕೊಳ್ಳುವ ಹಾಗೂ ಕಡತಗಳ ಶೀಘ್ರ ವಿಲೇವಾರಿಗೆ ಅನುಕೂಲವಾಗುವ ನಿಟ್ಟಿನಲ್ಲಿ  ಆಗಸ್ಟ್ 15ರಿಂದ ಇ-ಆಫೀಸ್ ಅನುಷ್ಠಾನಗೊಳಿಸಲಾಗಿದೆ. ಇನ್ನು ಮುಂದೆ ರಾಜ್ಯದ ಎಲ್ಲಾ ಎಸಿ-ಡಿಸಿ ಕಚೇರಿಯಿಂದ ಸರ್ಕಾರಕ್ಕೆ ಇ-ಆಫೀಸ್ ಮೂಲಕವೇ ಪತ್ರ ವ್ಯವಹಾರ ಮಾಡಬೇಕು. ಭೌತಿಕವಾಗಿ ಪತ್ರ ಸ್ವೀಕರಿಸುವುದಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

“ಕಡತಗಳು ಇ-ಆಫೀಸ್ ನಲ್ಲಿ ನನ್ನ ಲಾಗಿನ್ ಗೆ ಬಂದರೆ  2 ದಿನದಲ್ಲಿ ವಿಲೇವಾರಿ ಮಾಡಿದ್ದೇನೆ. ಇ-ಆಫೀಸ್ ಸಹಜವಾಗಿ ಕಾರ್ಯ ದಕ್ಷತೆ ಹೆಚ್ಚಿಸಲಿದೆ. ಯಾವುದೇ  ಸ್ಥಳದಲ್ಲಿಂದಲು ನೀವು ಕಡತ ವಿಲೇವಾರಿ ಮಾಡಬಹುದಾಗಿದೆ. ಸ್ವತ ನಾನು ಇ-ಆಫೀಸ್ ಮೂಲಕ ಕಡತ ವಿಲೇವಾರಿ ಮಾಡುತ್ತಿದ್ದೇನೆ. ಶಾಲೆ, ಗ್ರಾಮ ಪಂಚಾಯತಿಗೆ ಜಮೀನು ನೀಡಲು ಆಗುತ್ತಿರುವ ವಿಳಂಬಕ್ಕೆ ಇ-ಆಫೀಸ್ ಮೂಲಕ ಪರಿಹಾರ ನೀಡಬಹುದು” ಎಂದು ಅವರು ತಿಳಿಸಿದರು.

ಪೈಕಿ ಪಹಣಿ ಪರಿಹಾರಕ್ಕೆ ಸೂಚನೆ
ಸಭೆಯಲ್ಲಿ ಸರ್ವೆ ಇಲಾಖೆಯ ಪ್ರಗತಿಯನ್ನೂ ಪರಿಶೀಲನೆ ನಡೆಸಲಾಗಿದ್ದು, ಬೆಂಗಳೂರು ಪ್ರಾದೇಶಿಕ ವಿಭಾಗದಲ್ಲಿ 7,271  ಪೈಕಿ ಪಹಣಿಗಳು ಬಾಕಿ ಇರುವುದನ್ನು ಸಚಿವ ಕೃಷ್ಣ ಬೈರೇಗೌಡ ತೀವ್ರವಾಗಿ ಪರಿಗಣಿಸಿದರು. ಅಲ್ಲದೆ, ಸುದೀರ್ಘ ಚರ್ಚೆಯ ನಂತರ ಮುಂದಿನ 4 ತಿಂಗಳಲ್ಲಿ ಎಲ್ಲಾ ಪೈಕಿ ಪಹಣಿಗಳನ್ನು ಪರಿಹರಿಸಲು ಸೂಚಿಸಿದರು.

ಒತ್ತುವರಿ ತಡೆಗೆ ಬೀಟ್ ವ್ಯವಸ್ಥೆ
ಬೆಂಗಳೂರು ನಗರ-ಗ್ರಾಮೀಣ ಭಾಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸರ್ಕಾರ ಜಮೀನು ಒತ್ತುವರಿ ಎಗ್ಗಿಲ್ಲದೆ ನಡೆಯುತ್ತಿದೆ. ಆದರೆ, ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸಭೆಯಲ್ಲಿ ತಿಳಿಸಿದರು.

ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ವಿಶೇಷ ಅಭಿಯಾನ ಕೈಗೊಂಡು ಎಲ್ಲಾ ಸರ್ಕಾರಿ ಜಮೀನುಗಳನ್ನೂ ಭೂಮಿ ತಂತ್ರಾಂಶದಲ್ಲಿ ಕಡ್ಡಾಯವಾಗಿ ಅಳವಡಿಸುವ ಕೆಲಸ ತುರ್ತಾಗಿ ಆಗಬೇಕು. ಆಯಾ ಭಾಗದ ಗ್ರಾಮ ಆಡಳಿತ ಅಧಿಕಾರಿ (ವಿಲೇಜ್ ಅಕೌಂಟೆಂಟ್) ಪ್ರತಿ ಮೂರು ತಿಂಗಳಿಗೊಮ್ಮೆ ಸರ್ಕಾರಿ ಜಮೀನಿಗೆ ಭೇಟಿ ನೀಡಿ ಒತ್ತುವರಿಯಾಗಿಲ್ಲ ಎಂಬುದನ್ನು ಖಚಿತಪಡಿಸಬೇಕು. ಇಂತಹ ‘ಬೀಟ್’ ವ್ಯವಸ್ಥೆಯನ್ನು ಎಲ್ಲ ವಿಭಾಗದಲ್ಲೂ ಅಧಿಕಾರಿಗಳು ಪಾಲಿಸಬೇಕು ಎಂದು ತಿಳಿಸಿದರು.

ಈಗಾಗಲೇ ಬೆಂಗಳೂರು ನಗರ-ಗ್ರಾಮೀಣ ಭಾಗದಲ್ಲಿ ಒತ್ತುವಾರಿಯಾಗಿರುವ ಸರ್ಕಾರಿ ಭೂಮಿಗಳ ಪಟ್ಟಿ ಸಿದ್ದಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಟ್ಟಿ ಸಂಪೂರ್ಣವಾಗಿ ಸಿದ್ದವಾಗುತ್ತಿದ್ದಂತೆ ವಾರಂತ್ಯಗಳಲ್ಲಿ ಒತ್ತುವರಿ ತೆರವಿಗೆ ಮುಂದಾಗುವಂತೆ ಅಧಿಕಾರಿಗಳಿಗೆ ಆದೇಶಿಸಲಾಗಿದೆ ಎಂದು ಸಭೆಯಲ್ಲಿ ಸಚಿವರು ತಿಳಿಸಿದರು.

ಇದರ ಜೊತೆಗೆ ಸರ್ವೆ ಇಲಾಖೆಯಲ್ಲಿ ಬಾಕಿ ಇರುವ ಪ್ರಕರಣಗಳನ್ನು ವಿಲೇವಾರಿ ಮಾಡಲು 100 ಲೈಸೆನ್ಸ್ ಸರ್ವೇಯರ್, 257 ಸರ್ಕಾರಿ ಸರ್ವೇಯರ್ ಮತ್ತು 27 ಎಡಿಎಲ್ ಆರ್ ಗಳನ್ನು ನೇಮಕಾತಿ ಮಾಡಲು ಶುಕ್ರವಾರದ ಸಭೆಯಲ್ಲಿ ತೀರ್ಮಾನಿಸಲಾಯಿತು. ಬಾಕಿ ಪ್ರಕರಣಗಳಿಂದ ಜನಗಳಿಗೆ ಆಗುತ್ತಿರುವ ತೊಂದರೆಗೆ ಪರಿಹಾರ ನೀಡಲು ಅಧಿಕಾರಿಗಳಿಗೆ ಸೂಚಿಸಲಾಯಿತು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ, ವಿ. ರಶ್ಮಿ ಮಹೇಶ್, ಕಂದಾಯ ಇಲಾಖೆ ಆಯುಕ್ತರಾದ ಪಿ. ಸುನೀಲ್ ಕುಮಾರ್, ನೋಂದಣಿ ಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರಾದ ಡಾ| ಮಮತ ಬಿ. ಆರ್ ಸೇರಿದಂತೆ ಬೆಂಗಳೂರು ವಿಭಾಗದ 9 ಜಿಲ್ಲೆಯ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರು ಉಪಸ್ಥಿತರಿದ್ದರು.

ಸಿಂಗಪೂರ್ ಉದ್ಯಮಿಗಳಿಂದ $70 ಮಿಲಿಯನ್ ಡಾಲರ್ ಹೂಡಿಕೆ ಸಾಧ್ಯತೆ : ಸಚಿವ ಕೃಷ್ಣಭೈರೇಗೌಡ ಸಭೆ
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಟ್ರಾಫಿಕ್ ಸುಧಾರಣೆಗಾಗಿ ಟ್ರಾಫಿಕ್ ಮ್ಯಾನೇಜ್ಮೆಂಟ್ (ನಿರ್ವಹಣೆ) ಮೇಲೆ ಹೂಡಿಕೆ ಮಾಡುವಂತೆ ಸಿಂಗಪೂರ್ ಉದ್ಯಮಗಳ ಅಧಿಕಾರಿಗಳಿಗೆ ಸಚಿವ ಕೃಷ್ಣಭೈರೇಗೌಡ ಪ್ರಸ್ತಾವ ಸಲ್ಲಿಸಿದ್ದಾರೆ.

ವಿಕಾಸಸೌಧದಲ್ಲಿ‌ ಸಿಂಗಪೂರ್ ಮೂಲದ ಹೂಡಿಕೆದಾರ ಕಂಪೆನಿಗಳ ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿದ ಸಚಿವ ಕೃಷ್ಣಭೈರೇಗೌಡ ಅವರು, “ಬೆಂಗಳೂರು ಸೇರಿದಂತೆ ರಾಜ್ಯದ ಕೆಲ ನಗರಗಳಲ್ಲಿ ಮಿತಿಮೀರಿದ ಟ್ರಾಫಿಕ್ ಸಮಸ್ಯೆ ಇದೆ. ಸರ್ಕಾರ ಏನೇ ಕ್ರಮ ತೆಗೆದುಕೊಂಡರೂ ಸಹ ಟ್ರಾಫಿಕ್ ನಿರ್ವಹಣೆ ಸವಾಲಿನ ಕೆಲಸವಾಗಿದೆ.

ಆದರೆ, ಸಿಂಗಪೂರ್ ಟ್ರಾಫಿಕ್ ನಿರ್ವಹಣೆಯಲ್ಲಿ ಮಾದರಿಯಾಗಿದ್ದು, ಬೆಂಗಳೂರಿನ ಟ್ರಾಫಿಕ್ ನಿರ್ವಹಣೆ ಮೇಲೂ ಹೂಡಿಕೆ ಮಾಡಬಹುದು. ಸರ್ಕಾರ ಹೂಡಿಕೆದಾರರಿಗೆ ಎಲ್ಲ ರೀತಿಯ ಸಹಕಾರ ನೀಡಲಿದೆ” ಎಂದು ಆಶ್ವಾಸನೆ ನೀಡಿದರು.

ಟ್ರಾಫಿಕ್ ನಿರ್ವಹಣೆ ಮಾತ್ರವಲ್ಲದೆ, ಸಾರ್ವಜನಿಕ ಸಾರಿಗೆ, ರಸ್ತೆ ನಿರ್ವಹಣೆ ವಿಚಾರದಲ್ಲೂ ಸಿಂಗಪೂರ್ ಮಾದರಿ ನಗರ. ಹೀಗಾಗಿ ನಮ್ಮ ಪ್ರಸ್ತಾವನೆಯನ್ನು ಹೂಡಿಕೆದಾರರು ಒಪ್ಪಿದರೆ ಶೀಘ್ರದಲ್ಲೇ ಒಂದು ನಿಯೋಗ ಸಿಂಗಪೂರ್ ಗೆ ಭೇಟಿ ನೀಡಿ ಅಲ್ಲಿನ ಟ್ರಾಫಿಕ್ ನಿರ್ವಹಣೆ ಮತ್ತು ಸಾರ್ವಜನಿಕ ಸಾರಿಗೆಯಲ್ಲಿನ ಪ್ರಗತಿಯ ಬಗ್ಗೆ ಅಧ್ಯಯನ ನಡೆಸಲಿದೆ” ಎಂದು ಸಚಿವ ಕೃಷ್ಣಭೈರೇಗೌಡ ಅವರು ತಿಳಿಸಿದರು.

ಅಲ್ಲದೆ, “ಬಯೋ ಟೆಕ್ನಾಲಜಿ ವಿಭಾಗದಲ್ಲೂ ಬೆಂಗಳೂರು ದೇಶಕ್ಕೆ ಮೊದಲ ಸ್ಥಾನದಲ್ಲಿದೆ. ಐಟಿ-ಬಿಟಿ, ಡೇಟಾ ಸೈನ್ಸ್, ಹಾಗೂ ಹೆಲ್ತ್ ಟೂರಿಸಂ ವಿಭಾಗದಲ್ಲೂ ಹೂಡಿಕೆಗೆ ಮುಕ್ತ ಅವಕಾಶ ಇದೆ. ರಾಜ್ಯ ಸರ್ಕಾರ ಹಾಗೂ ವಿಜ್ಞಾನ-ತಂತ್ರಜ್ಞಾನ ಹಾಗೂ ಕೈಗಾರಿಕಾ ಸಚಿವರು ಸಹ ಹೊಸ ಹೂಡಿಕೆ- ಉದ್ಯೋಗಾವಕಾಶಗಳ ಸೃಷ್ಟಿಗೆ ಉತ್ಸುಕರಾಗಿದ್ದಾರೆ. ಹೀಗಾಗಿ ಈ ವಿಭಾಗದಲ್ಲೂ ಹೂಡಿಕೆ ಮಾಡಬಹುದು” ಎಂದು ಹೂಡಿಕೆದಾರರಿಗೆ ಮುಕ್ತ ಅವಕಾಶ ನೀಡಿದರು.

ಮುಂದುವರೆದು, ” ಆಪಲ್ ಹಾಗೂ ವಿಸ್ಟ್ರಾನ್ ಕಂಪೆನಿಗಳ ಜೊತೆಗೆ ರಾಜ್ಯದಲ್ಲಿ ಹೂಡಿಕೆಗೆ ಸಂಬಂಧಿಸಿದಂತೆ ಈಗಾಗಲೇ ಒಪ್ಪಂದಗಳಾಗಿವೆ. ಹೀಗಾಗಿ ಸಿಂಗಪೂರ್ ಉದ್ಯಮಗಳ ಹೂಡಿಕೆಗೆ ಸಂಬಂಧಿಸಿದ ವಿವರಗಳನ್ನು ಮೊದಲು ಸರ್ಕಾರಕ್ಕೆ ಸಲ್ಲಿಸಿ. ನಂತರ ಮುಂದಿನ ವಿಚಾರದ ಬಗ್ಗೆ ಚರ್ಚಿಸೋಣ” ಎಂದು ಅವರು ತಿಳಿಸಿದರು.

ಸಭೆಯಲ್ಲಿ ಮಾತನಾಡಿದ ಸಿಂಗಪೂರ್ ಉದ್ಯಮಗಳ ಅಧಿಕಾರಿಗಳು, “ಭಾರತದ ವಿವಿಧ ಕ್ಷೇತ್ರಗಳಲ್ಲಿ $ 70 ಮಿಲಿಯನ್ ಅಮೇರಿಕಾ ಡಾಲರ್ ಹೂಡಿಕೆ ಮಾಡುವ ಉದ್ದೇಶ ಇದೆ. ಈ ಪೈಕಿ ಕರ್ನಾಟಕದಲ್ಲಿ ಹೂಡಿಕೆ ಮಾಡಲು ನಾವು ಉತ್ಸುಕರಾಗಿದ್ದೇವೆ” ಎಂದು ತಿಳಿಸಿದರು.

ಸಭೆಯಲ್ಲಿ ಸಿಂಗಪೂರ್ ಉದ್ಯಮಗಳ ಅಧಿಕಾರಿಗಳ ಜೊತೆಗೆ ಮಾಜಿ ಕಾನ್ಸುಲೇಟ್ ಜನರಲ್ ಅಜಿತ್ ಸಿಂಗ್ ಉಪಸ್ಥಿತರಿದ್ದರು.

ತೆರಿಗೆ ಕಳ್ಳತನ ಅಕ್ಷಮ್ಯ ; ತೆರಿಗೆದಾರರು ಸರ್ಕಾರಕ್ಕೆ ಪ್ರಾಮಾಣಿಕರಾಗಿರಬೇಕು : ಸಚಿವ ಕೃಷ್ಣಭೈರೇಗೌಡ
ತೆರಿಗೆ ಕಳ್ಳತನ ಮಾಡದೆ, ಜನರಿಗೆ ಮತ್ತು ಸರ್ಕಾರಕ್ಕೆ ಪ್ರಾಮಾಣಿಕರಾಗಿ ಸೇವೆ ಸಲ್ಲಿಸಿ ಎಂದು ತೆರಿಗೆ ಸಲಹೆಗಾರರಿಗೆ ಸಚಿವ ಕೃಷ್ಣ ಬೈರೇಗೌಡ ಕಿವಿಮಾತು ಹೇಳಿದರು. ಕರ್ನಾಟಕ ರಾಜ್ಯ ತೆರಿಗೆ ಸಲಹೆಗಾರರ ಸಂಘವು ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಆಗಸ್ಟ್ 4, 5 ಮತ್ತು 6 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಷ್ಟ್ರೀಯ ತೆರಿಗೆ ಸಮ್ಮೇಳನ ಮತ್ತು ತೆರಿಗೆ ವೃತ್ತಿಪರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಕೃಷ್ಣಭೈರೇಗೌಡರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಜನರು ತಮ್ಮ ಹಣವನ್ನು ಎಲ್ಲಿ ಹೂಡಿಕೆ ಮಾಡಬೇಕು? ಮತ್ತು ತೆರಿಗೆಯನ್ನು ಎಲ್ಲೆಲ್ಲಿ ಉಳಿಸಬೇಕು ಎಂದು ಸಲಹೆ ನೀಡುವುದು ಉತ್ತಮ ಕೆಲಸವೇ. ಆದರೆ, ತೆರಿಗೆ ಕಳ್ಳತನ ಅಕ್ಷಮ್ಯ” ಎಂದು ಕಿವಿಮಾತು ಹೇಳಿದರು.

“ಯಾವುದೇ ಸರ್ಕಾರ ನಡೆಯಲು ತೆರಿಗೆ ಅತೀ ಅವಶ್ಯಕ. ತೆರಿಗೆ ಇಲ್ಲದೆ ಜನರಿಗೆ ಉತ್ತಮ ಆಡಳಿತ ನೀಡುವುದೂ ಸಾಧ್ಯವಿಲ್ಲ. ಆದರೆ, ಜನರಿಗೆ ತೆರಿಗೆ ಉಳಿಸುತ್ತೇವೆ ಎಂದು ಹಲವು ತೆರಿಗೆ ಸಲಹೆಗಾರರು ತೆರಿಗೆ ಕಳ್ಳತನ ನಡೆಸುತ್ತಿದ್ದಾರೆ. ಕಾನೂನು ರೀತಿಯೂ ಈ ಕೃತ್ಯ ಅಪರಾಧವಾಗಿದ್ದು, ತೆರಿಗೆ ಕಳ್ಳತನ ನಿಲ್ಲಬೇಕು. ಜನರಿಗೆ ಹಾಗೂ ಸರ್ಕಾರಕ್ಕೆ ಪ್ರಮಾಣಿಕರಾಗಿರಬೇಕು” ಎಂದು ರಾಷ್ಟ್ರೀಯ ತೆರಿಗೆ ಸಮ್ಮೇಳನದಲ್ಲಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಸಮ್ಮೇಳನದಲ್ಲಿ ಅಖಿಲ ಭಾರತ ತೆರಿಗೆ ಸಲಹೆಗಾರ ಒಕ್ಕೂಟದ ರಾಷ್ಟ್ರಾಧ್ಯಕ್ಷ ಪಂಕಜ್ ಗಯಾ, ಕರ್ನಾಟಕ ರಾಜ್ಯ ತೆರಿಗೆ ಸಲಹೆಗಾರರ ಸಂಘದ ಅಧ್ಯಕ್ಷ ಎಸ್. ನಂಜುಂಡ ಪ್ರಸಾದ್, ಗೋಲ್ಡನ್ ಜ್ಯುಬಿಲಿ ಈವೆಂಟ್ ಮುಖ್ಯಸ್ಥ ಹಾಗೂ ಕಾರ್ಯಕ್ರಮದ ಆಯೋಜಕರರಾದ ಡಿ.ಎಮ್. ಭಟ್ಟದ್ ಉಪಸ್ಥಿತರಿದ್ದರು.

ವಿಪಕ್ಷ ನಾಯಕನ ಗೊಂದಲ ಮುಚ್ಚಿಕೊಳ್ಳಲು ಬಿಜೆಪಿ ಅನಗತ್ಯ ರಾಜಕೀಯ : ಸಚಿವ ಕೃಷ್ಣಭೈರೇಗೌಡ
ಬಿಜೆಪಿಯವರ ತಮ್ಮ ಮನೆಯ ಹುಳುಕನ್ನ ಮುಚ್ಚಿಕೊಳ್ಳಲು ಸಣ್ಣಪುಟ್ಟ ವಿಷಯಗಳಲ್ಲೂ ರಾಜಕೀಯ ಬೇರೆಸ್ತಿದ್ದಾರೆ. ಅವರು ಮೊದಲು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲಿ ಎಂದು ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಕಲಬುರಗಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿಯವರು ಹತಾಶರಾಗಿದ್ದಾರೆ. ನಮ್ಮ ಸರ್ಕಾರ ರಾಜ್ಯದ ಜನರ ನಾಡಿ ಮಿಡಿತ ಅರಿತು ಕೆಲಸ ಮಾಡುತ್ತಿದೆ. ವಿಧಾನಸಭಾ ಚುನಾವಣೆ ಮುಗಿದು ಫಲಿತಾಂಶ ಪ್ರಕಟವಾಗಿ ಎರಡೂವರೆ ತಿಂಗಳಾದ್ರು ವಿಧಾನಸಭೆ ಮತ್ತು ಪರಿಷತ್ ಎರಡೂ ಕಡೆಗಳಲ್ಲಿ ವಿರೋಧ ಪಕ್ಷ ನಾಯಕನ ಆಯ್ಕೆ ಮಾಡಿಕೊಳ್ಳಲು ಬಿಜೆಪಿಗೆ ಆಗಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧದ ನಿಲುವನ್ನು ಬಿಜೆಪಿ ತಗೆದುಕೊಂಡಿದೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಸರ್ಕಾರದ ಧ್ಯೆಯೋದ್ದೇಶ ಅರಿತು ಉತ್ತಮ ಆಡಳಿತ ನೀಡಬೇಕು
ಇನ್ನು ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲಾವಾರು ಕಂದಾಯ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡ ಸಚಿವ ಕೃಷ್ಣ ಬೈರೇಗೌಡರು, ಕಂದಾಯ ಇಲಾಖೆಯು ಸರ್ಕಾರದ‌ ಮಾತೃ ಇಲಾಖೆಯಾಗಿದ್ದು, ಇಲ್ಲಿ ಕೆಲಸ ನಿರ್ವಹಿಸುವ ಅಧಿಕಾರಿಗಳು ಸಹ ಮಾತೃ ಹೃದಯಿಗಳಾಗಿರಬೇಕು. ಸರ್ಕಾರದ ಉದ್ದೇಶ ಮತ್ತು ಧ್ಯೆಯೋದ್ದೇಶಗಳನ್ನು ಅರಿತು ಜನರಿಗೆ ಉತ್ತಮ ಆಡಳಿತ ನೀಡಬೇಕು ಎಂದು ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಿಭಾಗದ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

“ರಾಜ್ಯದಲ್ಲಿ ಹೊಸ ಸರ್ಕಾರ ಬಂದಿದೆ. ಅಡಳಿತದಲ್ಲಿ ಬದಲಾವಣೆ ತರಬೇಕು. ಸರಳೀಕರಣಕ್ಕೆ ಆದ್ಯತೆ ನೀಡಬೇಕು. ಕಂದಾಯ ಇಲಾಖೆಯಲ್ಲಿ ಕೆಲಸ ನಿರ್ವಹಿಸುವ ಅಧಿಕಾರಿ-ಸಿಬ್ಬಂದಿಗಳು ತಂಡದ ರೂಪದಲ್ಲಿ ಕಾರ್ಯನಿರ್ವಹಿಸಬೇಕು ಎಂದ‌ ಸಚಿವರು, ಕಂದಾಯ ಸಚಿವನಾದ ಮೇಲೆ ಈಗಾಗಲೆ ಬೆಳಗಾವಿ‌ ವಿಭಾಗದ ಪ್ರಗತಿ ಪರಿಶೀಲನೆ ನಡೆಸಿದ್ದು, ಇಂದು‌ ಇಲ್ಲಿ (ಕಲಬುರಗಿ) ನಡೆಸಲಾಗುತ್ತಿದೆ. ಮುಂದೆ ಜಿಲ್ಲಾವಾರು ಸಹ ಪ್ರಗತಿ ಪರಿಶೀಲನೆ ಮಾಡುವುದಾಗಿ ಹೇಳಿದರು.

ಕಷ್ಟದಲ್ಲಿದ್ದವರಿಗೆ ಪರಿಹಾರ ವಿತರಣೆ ಮಾಡುವುದು ಒಳ್ಳೆಯದ್ದೆ. ನೊಂದವರಿಗೆ ಸರ್ಕಾರ ಸಹಾಯ ಹಸ್ತ ಚಾಚುವುದು ಉತ್ತಮ. ಆದರೆ ಇದನ್ನು ದುರಪಯೋಗ ವಾಗಬಾರದು ಎಂಬುದು ನಮ್ಮ‌ ಕಳಕಳಿಯಾಗಿದೆ. ವಿಪತ್ತು ನಿರ್ವಹಣೆ ಹೆಸರಿನಲ್ಲಿ ಹಣ ದುರಪಯೋಗವಾದಲ್ಲಿ ಅದು ಕೆಟ್ಟ ಆಡಳಿತಕ್ಕೆ ಅವಕಾಶ ಮಾಡಿಕೊಡುತ್ತದೆ. ಪರಿಹಾರ ವಿತರಣೆಯ ಕೆಲವೊಂದು ಪ್ರಕರಣದಲ್ಲಿ ಸ್ಯಾಟಲೈಟ್ ಫೋಟೋ ಗಳನ್ನು ಪರೀಕ್ಷಿಸಿ ಜಿಲ್ಲಾಧಿಕಾರಿಗಳು ಪರಿಹಾರ ನೀಡಬೇಕು ಎಂದು ಕಂದಾಯ ಸಚಿವ‌ ಕೃಷ್ಣ ಬೈರೇಗೌಡ ತಿಳಿಸಿದರು.

ವಿಪತ್ತು ನಿರ್ವಹಣೆ ಕೆಲಸ ವಿಳಂಬ ಸಲ್ಲ
ಕಲಬುರಗಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ 2020-21ನೇ ಸಾಲಿನ ನೆರೆ ಹಾವಳಿಯ ಕಾಮಗಾರಿಗಳು ಇನ್ನು ಪ್ರಗತಿಯಲ್ಲಿರುವುದಕ್ಕೆ ಸಚಿವ ಕೃಷ್ಣ ಬೈರೇಗೌಡ ಅವರು ಅಸಮಾಧಾನ ವ್ಯಕ್ತಪಡಿಸಿ, ರಸ್ತೆ, ಶಾಲೆ, ಸೇತುವೆ ದುರಸ್ತಿಗೆ ವಿಪತ್ತು ನಿರ್ವಹಣೆಯಲ್ಲಿ 1-2 ಲಕ್ಷ ರೂ. ಅನುದಾನ ನೀಡಲಾಗುತ್ತದೆ. ಮಳೆಗಾಲ ಹೋಗಿ ಮತ್ತೆ ಮಳೆಗಾಲ ಬಂದರೂ ಕೆಲಸ ಇನ್ನು ಮುಗಿಯಲ್ಲ ಎಂದರೆ ಏನರ್ಥ. ನೀಡಲಾದ ಅನುದಾನ ಉದ್ದೇಶ ಈಡೇರುತ್ತಾ ಎಂದು ಡಿಸಿಯನ್ನು ತರಾಟೆಗೆ ತೆಗೆದುಕೊಂಡರು.