laborers – Peepal Media

ಮೋದಿ ಕಾರ್ಯಕ್ರಮಕ್ಕೆ ಬಂದರೆ 500 ರೂ ಭರವಸೆ : ಈಡೇರಿಸದಿದ್ದಕ್ಕೆ ಕೂಲಿಕಾರರ ಆರೋಪ
ಬೆಂಗಳೂರು: ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಭಾಗವಹಿಸಿದ್ದಕ್ಕೆ 500 ರೂಪಾಯಿ ಕೊಡುವುದಾಗಿ ಭರವಸೆ ನೀಡಿ ಕೊಡದೇ ಯಾಮಾರಿಸಿದ್ದಕ್ಕೆ 40 ಕ್ಕೂ ಹೆಚ್ಚು ಕೂಲಿಕಾರರ ಗುಂಪು ಬಿಜೆಪಿ ನಾಯಕರ ಮೇಲೆ ಆರೋಪ ಮಾಡಿದೆ. ಆ ಮೂಲಕ ಒಂದು ದಿನದ ಕೂಲಿ ಲೆಕ್ಕದಂತೆ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸುತ್ತಲಿನ ಜನಸಾಮಾನ್ಯರಿಗೆ ಹಣದ ಭರವಸೆ ಮೂಲಕ ಕರೆತರಲಾಗಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ 40 ಕ್ಕೂ ಹೆಚ್ಚು ಕೂಲಿಕಾರರ ಗುಂಪು ಬಿಜೆಪಿ ನಾಯಕರ ಮೇಲೆ ಶನಿವಾರ ಗಂಭೀರ ಆರೋಪ ಮಾಡಿದೆ. ಶಿಡ್ಲಘಟ್ಟದಲ್ಲಿ ಪ್ರತಿಭಟನೆ ನಡೆಸಿದ ಕೂಲಿ ಕಾರ್ಮಿಕರ ಗುಂಪು ಮಾಧ್ಯಮಗಳೊಂದಿಗೆ ಮಾತನಾಡಿ, ತಮ್ಮನ್ನು ಕರೆದೊಯ್ಯುವ ವ್ಯಕ್ತಿ ಒಂದು ದಿನದ ಸಂಪಾದನೆಯನ್ನು ನೀಡುವುದಾಗಿ ಹೇಳಿದ್ದರು. ಆದರೆ ಕಾರ್ಯಕ್ರಮ ಮುಗಿದ ನಂತರ ನಮ್ಮ ಸಂಪರ್ಕಕ್ಕೆ ಆ ವ್ಯಕ್ತಿ ಸಿಗುತ್ತಿಲ್ಲ. ಇತ್ತ ನಮಗೆ ಆ ದಿನದ ಕೆಲಸವೂ ಇಲ್ಲ, ಕೂಲಿ ಸಂಬಳದ ಭರವಸೆ ಕೂಡ ಈಡೇರಿಸಿಲ್ಲ ಎಂದು ಆರೋಪಿಸಿದರು.

“ಕಾರ್ಯಕ್ರಮಕ್ಕೆ ಬಂದಿದ್ದಕ್ಕೆ ನಮಗೆ ಉಪಹಾರ ನೀಡಲಾಯಿತು ಆದರೆ ಮದ್ಯಾಹ್ನದ ಊಟ ಕೂಡ ನೀಡಿಲ್ಲ. ದಿನದ ಕೊನೆಯಲ್ಲಿ, ನಮ್ಮನ್ನು ಕರೆದೊಯ್ದ ವ್ಯಕ್ತಿ ನಮಗೆ ₹ 100 ನೀಡಲು ಬಂದಿದ್ದ. ಕೊಟ್ಟ ಭರವಸೆಯಂತೆ 500 ರೂಪಾಯಿ ಕೊಡಲು ಕೇಳಿದರೆ ನಮಗೆ ಅವಮಾನಿಸಿ ಕಳಿಸಿದ್ದಾನೆ ಎಂದು ಗುಂಪಿನ ಪ್ರಮುಖ ವ್ಯಕ್ತಿಯೊಬ್ಬರು ಮಾದ್ಯಮಗಳಿಗೆ ತಿಳಿಸಿದರು.

ಸಧ್ಯಕ್ಕೆ ಈ ಕೂಲಿ ಕಾರ್ಮಿಕರ ಗುಂಪು ಪೊಲೀಸರಿಗೆ ದೂರು ನೀಡಲು ಪ್ರಯತ್ನಿಸಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಅಂತಹ ಯಾವುದೇ ಗುಂಪು ದೂರು ನೀಡಿಲ್ಲ ಎಂದು ಶಿಡ್ಲಘಟ್ಟ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಟ್ರಕ್‌ಗೆ ಡಿಕ್ಕಿ ಹೊಡೆದ ಬಸ್‌: 15 ಜನ ಕಾರ್ಮಿಕರು ಸಾವು 40 ಮಂದಿಗೆ ಗಾಯ
ರೇವಾ: ಟ್ರಕ್‌ಗೆ ಬಸ್‌ ಡಿಕ್ಕಿ ಹೊಡೆದ ಪರಿಣಾಮ 15 ಜನ ಕಾರ್ಮಿಕರು ಸಾವನ್ನಪ್ಪಿದ್ದು, 40 ಮಂದಿಗೆ ಗಂಭೀರ ಗಾಯವಾಗಿರುವ ಘಟನೆ ಮಧ್ಯಪ್ರದೇಶದ ರೇವಾ ಹೆದ್ದಾರಿಯಲ್ಲಿ ನಡೆದಿದೆ.

ಉತ್ತರ ಪ್ರದೇಶದ ಗೋರಖ್‌ಪುರಕ್ಕೆ ಸುಮಾರು 100 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್‌, ನಿನ್ನೆ ತಡರಾತ್ರಿ ರೇವಾದ ಸುಹಾಗಿ ಪಹಾರಿ ಬಳಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.

ಈ ಕುರಿತು ಮಾಹಿತಿ ನೀಡಿರುವ ಪೊಲೀಸರು, ಬಸ್‌ ಟ್ರಕ್‌ ಹಿಂಭಾಗದಲ್ಲಿ ಡಿಕ್ಕಿ ಹೊಡೆದಿದ್ದು, ಟ್ರಕ್ ಹೆದ್ದಾರಿಯಲ್ಲಿ ಸಿಲುಕಿಕೊಂಡಿದೆ. ಸದ್ಯಕ್ಕೆ ಗಾಯಾಳುಗಳನ್ನು ಸುಹಗಿಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಗಂಭೀರ ಗಾಯಗೊಂಡವರನ್ನು ರೇವಾದ ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅವಘಡದ ಕುರಿತು, ರೇವಾ ಪೊಲೀಸ್ ವರಿಷ್ಠಾಧಿಕಾರಿ ನವನೀತ್ ಭಾಸಿನ್ ಮಾತನಾಡಿ, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಹೆಚ್ಚಿನ ಜನರು ಉತ್ತರ ಪ್ರದೇಶದ ಕಾರ್ಮಿಕರಾಗಿದ್ದು, ಮಧ್ಯಪ್ರದೇಶದ ಕಟ್ನಿಯಿಂದ ಬಸ್ ಹತ್ತಿ ದೀಪಾವಳಿಗೆಂದು ಮನೆಗೆ ತೆರಳುತ್ತಿದ್ದರು ಎಂದು ಬಸ್‌ನಲ್ಲಿದ್ದ ಕೆಲವರಿಂದ ಮಾಹಿತಿ ತಿಳಿದುಬಂದಿದೆ ಎಂದು ತಿಳಿಸಿದರು.

ಮುಂದುವರೆದು ಮಾತನಾಡಿದ ಅವರು, ಅಪಘಾತಕ್ಕೆ ನಿಖರ ಕಾರಣ ತಿಳಿಯಲು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಅಪಘಾತದ ಬಗ್ಗೆ ಮದ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ದುಃಖ ವ್ಯಕ್ತಪಡಿಸಿದ್ದಾರೆ. ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಮಾತನಾಡಿ, ಮೃತದೇಹಗಳನ್ನು ಉತ್ತರ ಪ್ರದೇಶದಲ್ಲಿರುವ ಅವರ ಕುಟುಂಬ ಸದಸ್ಯರಿಗೆ ಕಳುಹಿಸುವಂತೆ ವ್ಯವಸ್ಥೆ ಮಾಡಲು ವಿನಂತಿಸಿಕೊಂಡಿದ್ದಾರೆ.