Loan interest waiver – Peepal Media

ಸಹಕಾರಿ ಸಾಲದ ಬಡ್ಡಿ ಮನ್ನಾ : ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ
ರಾಜ್ಯದ ರೈತರು ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಬಡ್ಡಿಯನ್ನು ಸಂಪೂರ್ಣ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇಂದು ವಿಧಾನ ಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಅವಧಿಯೊಳಗೆ ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡುವ ಬಗ್ಗೆ ಘೋಷಣೆ ಮಾಡಿದ್ದಾರೆ.

ಬಿಜೆಪಿಯವರು 2018 ರ ತಮ್ಮ ಮ್ಯಾನಿಫೆಸ್ಟೊದಲ್ಲಿ ” ನಮ್ಮ ಸರಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕು ಮತ್ತು ಸಹಕಾರಿ ಸಂಘಗಳಲ್ಲಿ ಇರುವ 1 ಲಕ್ಷದವರೆಗೆ ರೈತರ ಬೆಳೆ ಸಾಲ ಮನ್ನಾ ಮಾಡಲಾಗುವುದು” ಎಂದು ಹೇಳಿದ್ದರು. ಆದರೆ ಬಿಜೆಪಿಯವರು ಈ ಕುರಿತು ಏನಾದರೂ ಮಾಡಿದರಾ? ನಯಾಪೈಸೆ ಬಿಡುಗಡೆ ಮಾಡಿದರಾ? ಹೇಳಿ ಎಂದು ಪ್ರಶ್ನಿಸಿದರು.

ಇನ್ನು ರಾಜ್ಯದ ವಿವಿಧ ಭಾಗಗಳಲ್ಲಿ ಬರಗಾಲದ ಕಾರಣ ರೈತರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಮನಗಂಡು, ಉತ್ತರ ಕರ್ನಾಟಕದಲ್ಲಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಆರ್ಥಿಕತೆಗೆ ಉತ್ತೇಜನ ನೀಡಲು ಹಾಗೂ ಸ್ಥಳೀಯರಿಗೆ ಉದ್ಯೋಗ ಒದಗಿಸುವ ಸಲುವಾಗಿ ಬೆಳಗಾವಿ ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ, 500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಅನ್ನು ಸ್ಥಾಪಿಸಲಾಗುವುದು ಹಾಗೂ ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು ನೀಡುವ ಬಗ್ಗೆ ಚಿಂತನೆ ನಡೆಸಿದೆ ಎಂದಿದ್ದಾರೆ.

ಉತ್ತರ ಕರ್ನಾಟಕವು ಸಮೃದ್ಧ ಪ್ರವಾಸೋದ್ಯಮಗಳ ತಾಣವಾಗಿದೆ. ಐತಿಹಾಸಿಕ ಮಹತ್ವವಿರುವ ಈ ತಾಣಗಳು ಅಂತರರಾಷ್ಟ್ರೀಯವಾಗಿಯೂ ಮಹತ್ವ ಪಡೆದಿವೆ. ಆದರೆ ಇದಕ್ಕೆ ಸಾಕಷ್ಟು ಮಹತ್ವ ನೀಡದೆ ಹಿನ್ನಡೆಯನ್ನು ಅನುಭವಿಸುತ್ತಿದೆ. ನಾವು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಪ್ರವಾಸೋದ್ಯಮವನ್ನು ಅಭಿವೃದ್ಧಿ ಮಾಡಲು ಸಮಗ್ರ ಕ್ರಿಯಾಯೋಜನೆಯನ್ನು ರೂಪಿಸಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಕ್ರಮವಹಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನು ವಿಜಯಪುರದಲ್ಲಿ ಉತ್ಪಾದನಾ ಕ್ಲಸ್ಟರ್ ಸ್ಥಾಪನೆ, ರಾಯಚೂರಿನಲ್ಲಿ ಆರ್ಥಿಕ ಅಭಿವೃದ್ಧಿ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ದೃಷ್ಠಿಯಿಂದ ಹತ್ತಿ ಆಧಾರಿತ ಕೈಗಾರಿಕೆಗಳ ಸ್ಥಾಪನೆ, ಧಾರವಾಡದಲ್ಲಿರುವ ವಾಲ್ಮಿ [ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ] ಯನ್ನು ಉನ್ನತೀಕರಿಸುವ ಬಗೆಗಿನ ಚಿಂತನೆ, ಹಾಗೂ ಕೃಷಿ ಸಂಬಂಧಿತವಾಗಿ ಉತ್ತರ ಕರ್ನಾಟಕದ ಮಣ್ಣಿನ ಸವುಳು- ಜವುಳು ಸಮಸ್ಯೆಯನ್ನು ನಿರ್ವಹಿಸಲಾಗುವುದು, ಹಾಗೂ ರೈತರ ಆದಾಯ ಹೆಚ್ಚಳದ ಕಡೆಗೆ ವಿಶೇಷ ಒತ್ತು ನೀಡಲಾಗುವ ಬಗ್ಗೆ ಸಿಎಂ ಸಿದ್ದರಾಮಯ್ಯ ಇಂದು ಸದನದಲ್ಲಿ ಹೇಳಿದ್ದಾರೆ.