maharashtra govt – Peepal Media

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಮುಂದಿನ ವಾರ ಸರ್ವಪಕ್ಷಗಳ ಸಭೆ ನಿಗದಿ ಮಾಡಿದ ಬಸವರಾಜ ಬೊಮ್ಮಾಯಿ
ಬೆಂಗಳೂರು: ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವಿನ ಗಡಿ ವಿವಾದವು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ನಾಯಕರ ಹೇಳಿಕೆಗಳ ನಂತರ ಭುಗಿಲೆದ್ದಿದ್ದು, ವಿವಾದಾತ್ಮಕ ವಿಷಯದ ಬಗ್ಗೆ ಮುಂದಿನ ವಾರ ಸರ್ವಪಕ್ಷಗಳ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ.

ಗಡಿ ವಿವಾದವನ್ನು ಮಾತುಕತೆಯ ಮೂಲಕ ಸೌಹಾರ್ದಯುತವಾಗಿ ಪರಿಹರಿಸುವ ಮಹಾರಾಷ್ಟ್ರ ಸರ್ಕಾರದ ಉದ್ದೇಶಗಳ ಬಗ್ಗೆ ಸರ್ವಪಕ್ಷಗಳ ಸಭೆಯಲ್ಲಿ ವಿವರವಾಗಿ ಚರ್ಚಿಸಲಾಗುವುದು ಎಂದು ಬೊಮ್ಮಾಯಿ ಹೇಳಿದರು.

ʼಗಡಿ ವಿವಾದ ಮುಗಿದಿದೆ ಆದರೆ ಮಹಾರಾಷ್ಟ್ರವು ಈ ವಿವಾದವನ್ನು ಎತ್ತಿ ಹಿಡಿಯುತ್ತಿದೆ. ಗ್ರಾಮ ಪಂಚಾಯಿತಿಯ ಪರಿಹಾರ ಮತ್ತು ಇತರ ಸಂಬಂಧಿತ ಸಮಸ್ಯೆಗಳು ನಮ್ಮೊಂದಿಗೆ ಇವೆ (ನಮ್ಮ ಪರವಾಗಿ). ಇದೆಲ್ಲವನ್ನೂ ಸುಪ್ರೀಂ ಕೋರ್ಟ್ ನಲ್ಲಿ ಚರ್ಚಿಸಲಾಗುವುದುʼ ಎಂದರು.

ಎರಡು ರಾಜ್ಯಗಳ ಗಡಿಯಲ್ಲಿರುವ ಹಲವಾರು ಗ್ರಾಮಗಳ ‘ಮಾಲೀಕತ್ವ’ಕ್ಕೆ ಸಂಬಂಧಿಸಿದ ಗಡಿ ವಿವಾದವನ್ನು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಕರ್ನಾಟಕದ ವಾದಗಳನ್ನು ಸುಪ್ರೀಂ ಕೋರ್ಟ್ ಮುಂದೆ ಮಂಡಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮಾತುಕತೆಯ ಮೂಲಕ ಈ ಬಿಕ್ಕಟ್ಟನ್ನು ಪರಿಹರಿಸುವ ಬಗ್ಗೆ ಮಾತನಾಡಲಾಗುತ್ತಿದೆ ಎನ್ನುವುದರ ಬಗ್ಗೆ ನನಗೆ ಮಾಹಿತಿ ಇದೆ ಎಂದು ಬೊಮ್ಮಾಯಿ ಹೇಳಿದರು.

ಮಹಾರಾಷ್ಟ್ರ ಸರ್ಕಾರವು ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದೆ. ಹೀಗಾಗಿ ಕರ್ನಾಟಕ ಸರ್ಕಾರವು ಸರ್ವಪಕ್ಷಗಳ ಸಭೆ ನಡೆಸಿ, ಸರ್ವೋಚ್ಚ ನ್ಯಾಯಾಲಯದಲ್ಲಿ ವಾದ-ಪ್ರತಿವಾದಗಳ ಬಗ್ಗೆ ಮತ್ತು ಗಡಿ ಅಭಿವೃದ್ಧಿ ಪ್ರಾಧಿಕಾರದೊಂದಿಗೆ ಚರ್ಚೆ ನಡೆಸಲಿದೆ ಎಂದು ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಸರ್ವೋಚ್ಚ ನ್ಯಾಯಾಲಯದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಕಾನೂನು ತಂಡವನ್ನು ಬಲಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯರವರು ಒತ್ತಾಯಿಸಿದ ನಂತರ ಬೊಮ್ಮಾಯಿ ಅವರು ಸರ್ವಪಕ್ಷಗಳ ಸಭೆ ನಡೆಸಲು ನಿರ್ಧರಿಸಿದ್ದಾರೆ.

ಬೆಳಗಾವಿ ಗಡಿ ವಿವಾದ| ನಿಷ್ಕ್ರಿಯಗೊಂಡಿರುವ ಗಡಿ ಸಂರಕ್ಷಣಾ ಸಮಿತಿಯನ್ನು ಪುನರ್‌ ರಚಿಸಿ: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ
ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿ, ಗಡಿವ್ಯಾಜ್ಯದ ಮೇಲುಸ್ತುವಾರಿಯನ್ನು ಹಿರಿಯ ಸಚಿವರಿಗೆ ಒಪ್ಪಿಸಬೇಕು ಮತ್ತು ನಿಷ್ಕ್ರೀಯಗೊಂಡಿರುವ ಗಡಿ ಸಂರಕ್ಷಣಾ ಸಮಿತಿಯನ್ನು ಪುನರ್‌ ರಚಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬರೆದಿರುವ ಪತ್ರಕ್ಕೆ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ನೀಡಿದ್ದು, ಬೆಳಗಾವಿ ಗಡಿವಿವಾದಕ್ಕೆ ಸಂಬಂಧಿಸಿದಂತೆ ನೀವು ಬರೆದಿರುವ ಪತ್ರ ತಲುಪಿದೆ. ಅತ್ಯಂತ ಮಹತ್ವಪೂರ್ಣವಾದ ಈ ವಿಷಯದ ಬಗ್ಗೆ ವಿಳಂಬವಾಗಿಯಾದರೂ ಕಾರ್ಯಪ್ರವರ್ತರಾಗಿರುವುದು ಸಂತೋಷ ಮತ್ತು ಸಮಾಧಾನದ ವಿಷಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದ ವ್ಯಾಜ್ಯದ ಬಗ್ಗೆ ಮಹಾರಾಷ್ಟ್ರ ಸರ್ಕಾರ ಇತ್ತೀಚೆಗೆ ಅತೀವ ಆಸಕ್ತಿ ತೋರುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರ ಕೂಡಾ ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆದುಕೊಂಡು ರಾಜ್ಯದ ಕಾರ್ಯತಂತ್ರವನ್ನು ರೂಪಿಸಬೇಕೆಂದು ಸಲಹೆ ನೀಡಿದ್ದೆ ಎಂದರು.

ಮಹಾರಾಷ್ಟ್ರ ಸರ್ಕಾರ ಗಡಿವಿವಾದದ ಬಗ್ಗೆ ಸತತವಾಗಿ ವಿರೋಧಪಕ್ಷಗಳ ಜೊತೆ ಸಮಾಲೋಚನೆ ನಡೆಸುತ್ತಾ ಬಂದಿದೆ. ಕಳೆದ ಒಂದು ತಿಂಗಳಿನಿಂದ ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿರುವ ವಿಚಾರಣೆಯನ್ನು ಎದುರಿಸಲು ವಿರೋಧಪಕ್ಷಗಳ ನಾಯಕರನ್ನೂ ಸೇರಿಸಿಕೊಂಡು 16 ಸದಸ್ಯರ ಸಲಹಾ ಸಮಿತಿಯನ್ನೂ ಕೂಡಾ ರಚಿಸಿದ್ದು, ಮುಖ್ಯಮಂತ್ರಿಗಳ ಅಧ್ಯಕ್ಷತೆಯ ಈ ಸಮಿತಿ ಈಗಾಗಲೇ ಸಭೆ ನಡೆಸಿ ನ್ಯಾಯಾಂಗದ ಹೋರಾಟಕ್ಕೆ ಕಾರ್ಯತಂತ್ರಗಳನ್ನು ರೂಪಿಸಿದೆ. ಸುಪ್ರೀಂ ಕೋರ್ಟ ನಲ್ಲಿ ನಡೆಯುವ ಗಡಿ ವ್ಯಾಜ್ಯ ವಿಚಾರಣೆಯ ಮೇಲುಸ್ತುವಾರಿಗಾಗಿ ಇಬ್ಬರು ಸಚಿವರ ಸಮಿತಿಯನ್ನು ಕೂಡಾ ಮಹಾರಾಷ್ಟ್ರ ಸರ್ಕಾರ ರಚಿಸಿದೆ ಎಂದು ತಿಳಿಸಿದ್ದಾರೆ.

ಆದರೆ ಕರ್ನಾಟಕ ¸ಸರ್ಕಾರ ಗಡಿವಿವಾದದ ಬಗ್ಗೆ ಮಹಾರಾಷ್ಟ್ರದಷ್ಟೇ ಮುತುವರ್ಜಿ ವಹಿಸಿಲ್ಲ ಎನ್ನುವುದು ವಿಷಾದನೀಯವಾದರೂ ವಾಸ್ತವವಾಗಿದೆ. ಇಂದು (ನವಂಬರ್ 23) ಸುಪ್ರೀಮ್ ಕೋರ್ಟ್ ಗಡಿ ವಿವಾದದ ಮೊಕದ್ದಮೆ ವಿಚಾರಣೆ ನಡೆಯಲಿದ್ದರೂ ಇಲ್ಲಿಯ ವರೆಗೆ ವಿರೋಧಪಕ್ಷಗಳ ಜೊತೆ ಸಮಾಲೋಚನೆ ನಡೆಸುವ ಸೌಜನ್ಯವನ್ನೂ ತೋರದಿರುವುದು ವಿಷಾದನೀಯ. ಮುಖ್ಯಮಂತ್ರಿಗಳು ನಿನ್ನೆಯಷ್ಟೇ (ನವಂಬರ್ 22) ನಮ್ಮ ವಕೀಲರ ಜೊತೆ ವಿಡಿಯೋ ಸಂವಾದ ನಡೆಸಲಿರುವುದು ರಾಜ್ಯ ಸರ್ಕಾರ ಈ ವಿಷಯವನ್ನು ಎಷ್ಟು ಗಂಭೀರವಾಗಿ ಸ್ವೀಕರಿಸಬೇಕಿತ್ತೋ ಅಷ್ಟು ಗಂಭೀರವಾಗಿ ಸ್ವೀಕರಿಸಿಲ್ಲ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಾನು ಮುಖ್ಯಮಂತ್ರಿಯಾಗಿದ್ದಾಗ 2015ರಲ್ಲಿ ಮಾಜಿ ಸಚಿವ ಎಚ್ .ಕೆ.ಪಾಟೀಲ್ ಅವರನ್ನು ಗಡಿಭಾಗದ ಉಸ್ತುವಾರಿ ಸಚಿವರಾಗಿ ನೇಮಕ ಮಾಡಿದ್ದೆ. ಆದರೆ ಈಗಿನ ಸರ್ಕಾರದಲ್ಲಿ ಗಡಿ ಉಸ್ತುವಾರಿಗೆ ಸಚಿವರನ್ನು ನೇಮಿಸದೆ ನಿರ್ಲಕ್ಷ್ಯ ತೋರಿದೆ.

ಇಷ್ಟು ಮಾತ್ರವಲ್ಲ ಗಡಿ ಸಂರಕ್ಷಣಾ ಸಮಿತಿ ಕೂಡಾ ಕಳೆದ ಮೂರು ವರ್ಷಗಳಿಂದ ಒಂದೇ ಒಂದು ಸಭೆ ನಡೆಸದೆ ನಿಷ್ಕ್ರೀಯವಾಗಿದೆ. ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರು ಸೇರಿದಂತೆ ಸಮಿತಿಯ ಇಬ್ಬರು ಸದಸ್ಯರು ಮೃತರಾಗಿದ್ದಾರೆ. ಗಡಿ ಸಂರಕ್ಷಣಾ ಸಮಿತಿಯನ್ನು ಪುನರ್‌ ರಚಿಸುವ ಜೊತೆಯಲ್ಲಿ ಉನ್ನತಾಧಿಕಾರದ ಸಮಿತಿಯನ್ನು ರಚಿಸುವಂತೆ ಕನ್ನಡ ಸಂಘಟನೆಗಳ ಬೇಡಿಕೆಯನ್ನೂ ಕೂಡಾ ರಾಜ್ಯ ಸರ್ಕಾರ ಈಡೇರಿಸಿಲ್ಲ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವೇ ನೇಮಿಸಿರುವ ಮಹಾಜನ ಆಯೋಗದ ವರದಿಯೇ ಅಂತಿಮ, ಆಯೋಗದ ಶಿಫಾರಸಿಗೆ ಕರ್ನಾಟಕ ಬದ್ದವಾಗಿದ್ದು ಅದಕ್ಕಿಂತ ಹೊರತಾದ ಯಾವುದೇ ಬದಲಾವಣೆಯನ್ನು ಕರ್ನಾಟಕ ಒಪ್ಪುವುದಿಲ್ಲ. ಎನ್ನುವುದು ಈ ವರೆಗಿನ ಎಲ್ಲ ರಾಜ್ಯ ಸರ್ಕಾರಗಳ ನಿಲುವಾಗಿದೆ ಎಂದರು.

ಗಡಿ ವಿವಾದವನ್ನು ತೀರ್ಮಾನಿಸಬೇಕಾಗಿರುವುದು ಕೇಂದ್ರ ಸರ್ಕಾರವೇ ಹೊರತು ನ್ಯಾಯಾಲಯ ಅಲ್ಲ ಎನ್ನುವುದು ಕರ್ನಾಟಕ ಸರ್ಕಾರದ ನಿಲುವಾಗಿದೆ. ಕರ್ನಾಟಕಕ್ಕೆ ಸೇರಿರುವ 865 ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟಗೆ ಮೊರೆ ಹೋದ ದಿನದಿಂದ ಇದು ನಮ್ಮ ನಿಲುವಾಗಿದೆ. ಇಲ್ಲಿಯ ವರೆಗಿನ ಎಲ್ಲ ಸರ್ಕಾರಗಳು ಇದೇ ನಿಲುವನ್ನು ವ್ಯಕ್ತಪಡಿಸುತ್ತಾ ಬಂದಿದೆ. ಬೆಳಗಾವಿ ಗಡಿ ಸಮಸ್ಯೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿರುವ ದಾವೆ ಪುರಸ್ಕಾರ ಯೋಗ್ಯ ಅಲ್ಲ ಎಂದು ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದೆ. ಈ ಅರ್ಜಿ ಇತ್ಯರ್ಥವಾಗುವ ವರೆಗೆ ಸಾಕ್ಷಿದಾರರ ಪಾಟಿಸವಾಲು ದಾಖಲಾತಿ ನಡೆಸದಂತೆ ಸುಪ್ರೀಂಕೋರ್ಟಗೆ ಪುನರ್ ಪರಿಶೀಲನಾ ಅರ್ಜಿಯನ್ನೂ ಕೂಡಾಹಿಂದೆ ರಾಜ್ಯ ಸರ್ಕಾರ ಸಲ್ಲಿಸಿತ್ತು. ಈ ನಿಲುವಿಗೆ ರಾಜ್ಯ ಸರ್ಕಾರ ಬದ್ದವಾಗಿರಬೇಕೆಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ನೆಲ-ಜಲ-ಭಾಷೆಯ ರಕ್ಷಣೆಗಾಗಿ ರಾಜ್ಯ ಸರ್ಕಾರ ಕೈಗೊಳ್ಳುವ ನ್ಯಾಯಬದ್ದವಾದ ಎಲ್ಲ ಕ್ರಮಗಳನ್ನು ನಮ್ಮ ಪಕ್ಷ ಸಂಪೂರ್ಣವಾಗಿ ಬೆಂಬಲಿಸುತ್ತದೆ. ನ್ಯಾಯಬದ್ದವಾಗಿ ಕರ್ನಾಟಕಕ್ಕೆ ಸೇರಿರುವ ಒಂದಿಂಚು ಭೂಮಿ, ಒಂದು ಹನಿ ನೀರನ್ನು ಬಿಟ್ಟುಕೊಡುವುದಿಲ್ಲ ಎನ್ನುವುದು ನಮ್ಮ ನಿಲುವಾಗಬೇಕು. ನಾನು ನನ್ನ ರಾಜಕೀಯ ಜೀವನದ ಪ್ರಾರಂಭದ ದಿನಗಳಲ್ಲಿಯೇ ಕನ್ನಡ ಕಾವಲು ಸಮಿತಿ ಅಧ್ಯಕ್ಷನಾದವನು. ಮುಖ್ಯ ಮಂತ್ರಿಯಾಗಿಯೂ ಸಮಸ್ತ ಕರ್ನಾಟಕದ ಹಿತಾಸಕ್ತಿಯ ಕಾವಲುಗಾರನ ಕೆಲಸ ಮಾಡಿದ್ದೇನೆ ಎಂದರು.

ಬೆಳಗಾವಿ ಗಡಿ ವಿವಾದದ ನ್ಯಾಯಾಂಗ ಹೋರಾಟವನ್ನು ಈಗಿನ ರಾಜ್ಯ ಸರ್ಕಾರ ನಿರ್ಲಕ್ಷಿಸುತ್ತಾ ಬಂದಿದೆ ಎನ್ನುವುದು ಕನ್ನಡಿಗರು ಮತ್ತು ಕನ್ನಡ ಸಂಘಟನೆಗಳ ಆರೋಪವೂ ಆಗಿದೆ. ಆದ್ದರಿಂದ ರಾಜ್ಯ ಸರ್ಕಾರ ತಕ್ಷಣ ವಿರೋಧಪಕ್ಷಗಳ ನಾಯಕರನ್ನೂ ಸೇರಿಸಿಕೊಂಡು ಸಲಹಾ ಸಮಿತಿಯನ್ನು ರಚಿಸಬೇಕು. ಸುಪ್ರೀಂಕೋರ್ಟ್ ನಲ್ಲಿ ವಾದಕ್ಕೆ ನಮ್ಮ ವಕೀಲರ ತಂಡವನ್ನು ಇನ್ನಷ್ಟು ಸನ್ನದ್ದಗೊಳಿಸಬೇಕು, ಗಡಿವ್ಯಾಜ್ಯದ ಮೇಲುಸ್ತುವಾರಿಯನ್ನು ಹಿರಿಯ ಸಚಿವರಿಗೆ ಒಪ್ಪಿಸಬೇಕು ಮತ್ತು ನಿಷ್ಕ್ರೀಯಗೊಂಡಿರುವ ಗಡಿ ಸಂರಕ್ಷಣಾ ಸಮಿತಿಯನ್ನು ಪುನರ್‌ ರಚಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕಾಂಗ್ರೆಸ್ ಪಕ್ಷ ಮತ್ತು ಸಮಸ್ತ‌ ಕನ್ನಡಿಗರ ಪರವಾಗಿ ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.

ಮಹರಾಷ್ಟ್ರ ಸರ್ಕಾರದ ಹೊಸ ನಿರ್ಣಯಕ್ಕೆ ವಿರೋಧ ಪಕ್ಷಗಳಿಂದ ಟೀಕೆ
ಮುಂಬೈ: ಏಕನಾಥ ಶಿಂದೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಹೊಸ ನಿರ್ಣಯವನ್ನು ಕೈಗೊಂಡಿದ್ದು, ಇನ್ನು ಮುಂದೆ ಸರ್ಕಾರಿ ನೌಕರರು ದೂರವಾಣಿ ಕರೆಗಳನ್ನು ಸ್ವೀಕರಿಸುವಾಗ ‘ಹಲೋ’ಬದಲು ‘ವಂದೇ ಮಾತರಂ’ ಹೇಳ ಬೇಕೆಂದು ತಿಳಿಸಿದೆ.

ಮಹರಾಷ್ಟ್ರ ಸರ್ಕಾರ ಹೊರಡಿಸಿರುವ ಸುತ್ತೋಲೆಯೊಂದರಲ್ಲಿ,  ರಾಜ್ಯದ ಸರ್ಕಾರಿ ನೌಕರರು, ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವವರು, ಅನುದಾನಿತ ಶಾಲೆ, ಕಾಲೇಜು ಮತ್ತು ಇತರ ಸಂಸ್ಥೆಗಳ ನೌಕರರು, ಕಚೇರಿ ಅಥವಾ ವೈಯಕ್ತಿಕ ಮೊಬೈಲ್‌ ಸಂಖ್ಯೆಗಳಿಗೆ ಬರುವ ಕರೆಗಳನ್ನು ಸ್ವೀಕರಿಸುವಾಗ ‘ಹಲೋ’ ಬದಲು ‘ವಂದೇ ಮಾತರಂ’ ಎಂದೇ ಹೇಳಬೇಕು’ಎಂದು ತಿಳಿಸಿದೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಸಂಸ್ಕೃತಿ ಸಚಿವ ಸುಧೀರ್‌ ಮುಂಗಟಿವಾರ್‌ ಅವರು, ಇನ್ನು ಮುಂದೆ ʼಹಲೋʼ ಬದಲು ವಂದೇ ಮಾತರಂʼ ಎಂದೇ ಹೇಳಬೇಕೆಂದು ರಾಜ್ಯದ ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.

ಸುಧೀರ್‌ ಮುಂಗಟಿವಾರ್‌

ದೂರವಾಣಿ ಕರೆಗಳನ್ನು ಸ್ವೀಕರಿಸುವಾಗ ʼಜೈ ಭೀಮ್‌ʼ  ʼಜೈ ಶ್ರೀರಾಮ್‌ʼ ಎಂದೂ ಅಥವಾ ಅವರ ಪೋಷಕರ ಹೆಸರನ್ನು ಹೇಳಿದರೂ ಅದಕ್ಕೆ ಸರ್ಕಾರದ ವಿರೋಧವಿಲ್ಲ. ಆದರೆ ʼಹಲೋʼ ಎಂದು ಕರೆಯುವುದನ್ನು ನಿಲ್ಲಿಸಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಅಭಿಯಾನ ಕೈಗೊಂಡಿದ್ದೇವೆ ಎಂದು ಹೇಳಿದರು.

ಈ ಹಿನ್ನಲೆ ಮಹರಾಷ್ಟ್ರ ಸರ್ಕಾರದ ಹೊಸ ನಿರ್ಣಯದ ಕುರಿತು ವಿರೋಧ ಪಕ್ಷಗಳಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ.