mamatha banerjee – Peepal Media

ಹತ್ಯೆಯಾದ ವೈದ್ಯ ವಿದ್ಯಾರ್ಥಿನಿ ಕುಟುಂಬಕ್ಕೆ ಹಣದ ಆಮಿಷ ಒಡ್ಡಿರುವುದು ಸುಳ್ಳು: ಮಮತಾ
ಕೋಲ್ಕತ್ತ: ಆರ್‌ ಜಿ.ಕರ್ ಆಸ್ಪತ್ರೆಯಲ್ಲಿ ‘ಹತ್ಯೆಯಾದ ವೈದ್ಯ ವಿದ್ಯಾರ್ಥಿನಿ ಕುಟುಂಬಕ್ಕೆ ನಾನು ಹಣದ ಆಮಿಷ ಒಡ್ಡಿಲ್ಲ’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಟಷ್ಟಪಡಿಸಿದ್ದಾರೆ.

ರಾಜ್ಯ ಸಚಿವಾಲಯ ‘ನಬನ್ನಾ’ದಲ್ಲಿ ನಡೆದ ಆಡಳಿತ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಕೇಂದ್ರದ ಪಿತೂರಿಯಿಂದ ರಾಜ್ಯದಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು, ಕೆಲ ಎಡ ಪಕ್ಷಗಳು ಇದರಲ್ಲಿ ಭಾಗಿಯಾಗಿರುವುದು ನೋವು ತಂದಿದೆʼ ಎಂದು ಅವರು ಬೇಸರವ್ಯಕ್ತಪಡಿಸಿದ್ದಾರೆ.

‘ಹತ್ಯೆಯಾದ ಆರ್‌.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿ ಕುಟುಂಬಕ್ಕೆ ನಾನು ಹಣದ ಆಮಿಷ ಒಡ್ಡಿದ್ದೇನೆ ಎಂಬುವುದು ಸುಳ್ಳು. ಇದು ಅಪಪ್ರಚಾರವಲ್ಲದೇ ಬೇರೇನೂ ಅಲ್ಲ. ಮಗಳ ಸ್ಮರಣಾರ್ಥ ಏನಾದರೂ ಮಾಡಬೇಕೆಂದಿದ್ದರೆ ನಮ್ಮ ಸರ್ಕಾರ ನಿಮ್ಮ ಜೊತೆಗಿದೆ ಎಂದು ಪೋಷಕರಿಗೆ ಹೇಳಿದ್ದೇನೆ. ಯಾವ ಸಂದರ್ಭದಲ್ಲಿ ಏನು ಮಾತನಾಡಬೇಕೆಂದು ನನಗೆ ಗೊತ್ತಿದೆ ಎಂದು ಮಮತಾ ಹೇಳಿದ್ದಾರೆ.

‘ಪ್ರತಿಭಟನೆಯ ಹಿನ್ನೆಲೆಯಲ್ಲಿ ಕೋಲ್ಕತ್ತ ಪೊಲೀಸ್ ಆಯುಕ್ತ ವಿನಿತ್ ಗೋಯಲ್ ರಾಜೀನಾಮೆ ನೀಡಲು ಸಿದ್ದರಾಗಿದ್ದಾರೆ. ದುರ್ಗ ಪೂಜೆಗೂ ಮೊದಲು ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ತಿಳಿದಿರುವ ಯಾರನ್ನಾದರೂ ನೇಮಿಸಬೇಕಿದೆ’ ಎಂದಿರುವ ಅವರು,

‘ಸಾಧ್ಯವಾದಷ್ಟೂ ಬೇಗನೇ ಕರ್ತವ್ಯಕ್ಕೆ ಹಾಜರಾಗಿ’ ಎಂದು ಪ್ರತಿಭಟನಾನಿರತ ಕಿರಿಯ ವೈದ್ಯರಿಗೆ ಇದೇ ವೇಳೆ ಮನವಿ ಮಾಡಿದ್ದೇನೆ ಎಮದು ಅವರು ತಿಳಿಸಿದ್ದಾರೆ.

ಆಗಸ್ಟ್ 9ರಂದು ಆರ್‌.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣದಲ್ಲಿ ವೈದ್ಯ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿದ್ದಾಗ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಘಟನೆಗೆ ರಾಷ್ಟ್ರವ್ಯಾಪಿ ಆಕ್ರೋಶ ವ್ಯಕ್ತವಾಗಿತ್ತು.

ನೀತಿ ಆಯೋಗದ ಸಭೆಯಿಂದ ಎದ್ದು ಹೊರನಡೆದ ಮಮತಾ: ನಿತೀಶ್‌ ಕುಮಾರ್‌ ಸಹ ಗೈರು
ನವದೆಹಲಿ: ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳನ್ನು ಒಳಗೊಂಡಂತೆ ಇಂದು ಶನಿವಾರ ಬೆಳಗ್ಗೆಯಿಂದ ನಡೆಯುತ್ತಿರುವ ನೀತಿ ಆಯೋಗದ ಸಭೆಯಿಂದ ಮಮತಾ ಬ್ಯಾನರ್ಜಿ ದಿಢೀರ್‌ ಎದ್ದು ಹೊರ ನಡೆದಿದ್ದಾರೆ.

ಕೇಂದ್ರ ಸರ್ಕಾರದಿಂದ ಅವರಿಗೆ  ಮಾತನಾಡಲು ಸಮಯ ನಿರಾಕರಿಸಲಾಗಿದೆ. ಕೇವಲ ಐದು ನಿಮಿಷ ಮಾತನಾಡಿದ ಬಳಿಕ ನನ್ನನ್ನು ತಡೆದಿದ್ದಾರೆ ಎಂದು ಅವರು ಹೇಳಿದ್ದಾರೆ. ಜೊತೆಗೆ ಕೇಂದ್ರ ಬಜೆಟ್‌ ಅನ್ನೂ ಟೀಕಿಸಿರುವ ಅವರು, ತಾರತಮ್ಯದ ಬಜೆಟ್ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

‘ಸಭೆ ಬಹಿಷ್ಕರಿಸಿ ನಾನು ಹೊರಗೆ ಬಂದಿದ್ದೇನೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಮಾತನಾಡಲು 20 ನಿಮಿಷ ನೀಡಲಾಯಿತು. ಅಸ್ಸಾಂ, ಗೋವಾ, ಛತ್ತೀಸಗಢ ಮುಖ್ಯಮಂತ್ರಿಗಳೂ 10–12 ನಿಮಿಷ ಮಾತನಾಡಿದರು. ನಾನು ಮಾತು ಪ್ರಾರಂಭಿಸಿದ 5 ನಿಮಿಷವಾಗುವಾಗಲೇ ತಡೆದರು. ಇದು ಸರಿಯಲ್ಲ. ವಿರೋಧ ಪಕ್ಷಗಳ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಪೈಕಿ ನಾನೊಬ್ಬಳೇ ಹಾಜರಿದ್ದೆ. ಸಹಕಾರಿ ಒಕ್ಕೂಟವನ್ನು ಬಲಪಡಿಸಬೇಕು ಎಂಬ ಕಾರಣಕ್ಕೆ ನಾನು ಸಭೆಯಲ್ಲಿ ಭಾಗವಹಿಸಿದ್ದೆ’ ಎಂದು ಮಮತಾ ತಿಳಿಸಿದರು.

‘ಈ ವರ್ಷದ ಬಜೆಟ್ ಕೂಡ ರಾಜಕೀಯ ಹಾಗೂ ತಾರತಮ್ಯದಿಂದ ಕೂಡಿದೆ. ನೀವ್ಯಾಕೆ ತಾರತಮ್ಯ ಮಾಡುತ್ತಿದ್ದೀರಿ ಎಂದು ನಾನು ಪ್ರಶ್ನಿಸಿದೆ. ನೀತಿಯ ಆಯೋಗಕ್ಕೆ ಹಣಕಾಸಿನ ಯಾವುದೇ ಅಧಿಕಾರ ಇಲ್ಲ. ಅದು ಹೇಗೆ ಕಾರ್ಯ ನಿರ್ವಹಿಸುತ್ತದೆ. ಅದಕ್ಕೆ ಹಣಕಾಸಿನ ಅಧಿಕಾರ ನೀಡಿದದವರು ಯಾರು ಎಂದು ಪ್ರಶ್ನಿಸಿದ ಅವರು,  ಯೋಜನಾ ಆಯೋಗವನ್ನು ಮತ್ತೆ ಜಾರಿಗೆ ತನ್ನಿ’ ಅವರು ಆಗ್ರಹಿಸಿದರು.

ನಿತೀಶ್‌ಕುಮಾರ್‌ ಗೈರು: ನೀತಿ ಆಯೋಗದ ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾಗವಹಿಸಿಲ್ಲ ಎಂದು ಜೆಡಿಯು ವಕ್ತಾರ ನೀರಜ್ ಕುಮಾರ್ ತಿಳಿಸಿದ್ದಾರೆ. ನಿತೀಶ್ ಕುಮಾರ್ ಬದಲಿಗೆ ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಅವರು ರಾಜ್ಯವನ್ನು ಪ್ರತಿನಿಧಿಸಿದ್ದಾರೆ ಎಂದು ಅವರು ಹೇಳಿದರು.

ನಿರ್ಣಾಯಕ ಸಭೆಗೆ ನಿತೀಶ್‌ ಕುಮಾರ್ ಗೈರುಹಾಜರಾಗಲು ಕಾರಣವೆನೆಂಬ ಬಗ್ಗೆ ಅವರು ಖಚಿತಪಡಿಸಿಲ್ಲ. ನೀತಿ ಆಯೋಗದ ಸಭೆಗೆ ನಿತೀಶ್‌ ಕುಮಾರ್‌ ಗೈರಾಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಅವರು ಗೈರಾಗಿದ್ದರು. ಆಗ ಅಂದಿನ ಉಪಮುಖ್ಯಮಂತ್ರಿ ಸಭೆಗೆ ಹಾಜರಾಗಿ ರಾಜ್ಯವನ್ನು ಪ್ರತಿನಿಧಿಸಿದ್ದರು. ಈ ಬಾರಿಯೂ ಇಬ್ಬರು ಉಪಮುಖ್ಯಮಂತ್ರಿಗಳು ಸಭೆಗೆ ಹಾಜರಾಗಿದ್ದಾರೆ’ ಎಂದು ನೀರಜ್‌ ಕುಮಾರ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ 9ನೇ ಆಡಳಿತ ಮಂಡಳಿ ಸಭೆ ಇಂದು ಆರಂಭವಾಗಿದೆ.ನೀತಿ ಆಯೋಗದ ಆಡಳಿತ ಮಂಡಳಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳು ಮತ್ತು ಹಲವು ಕೇಂದ್ರ ಮಂತ್ರಿಗಳನ್ನು ಒಳಗೊಂಡಿದೆ. ಪ್ರಧಾನಿ ಮೋದಿ ಅವರು ಆಯೋಗದ ಅಧ್ಯಕ್ಷರಾಗಿದ್ದಾರೆ.

ಬಿಜೆಪಿ ನಾಯಕ ಸುವೆಂಧು ಅಧಿಕಾರಿ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ್ದ ಮನವಿ ನಿರಾಕರಣೆ
ನವದೆಹಲಿ: ತನ್ನ ಚುನಾವಣಾ ಗೆಲುವನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿಯನ್ನು ಕಲ್ಕತ್ತಾ ಹೈಕೋರ್ಟ್ ಹೊರತುಪಡಿಸಿ ಬೇರೆ ಯಾವುದೇ ಹೈಕೋರ್ಟ್‌ಗೆ ವರ್ಗಾಯಿಸುವಂತೆ ಬಿಜೆಪಿ ನಾಯಕ ಸುವೆಂಧು ಅಧಿಕಾರಿ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ್ದ ಮನವಿಯನ್ನು ಹಿಂಪಡೆದಿದ್ದಾರೆ.

ನಂದಿಗ್ರಾಮದಿಂದ ಬಿಜೆಪಿ ನಾಯಕ ಸುವೆಂಧು ಅಧಿಕಾರಿಯ ಗೆಲುವನ್ನು ಪ್ರಶ್ನಿಸಿ ಮಮತ ಬ್ಯಾನರ್ಜಿ ಸಲ್ಲಿಸಿದ್ದ ಚುನಾವಣಾ ಅರ್ಜಿಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಯು ಸುಪ್ರೀಂ ಕೊರ್ಟ್‌ಗೆ ಮೇಲ್ಮನವಿ ಹೋಗಿದ್ದರು. ಇದನ್ನು ಸುಪ್ರೀಂ ಕೋರ್ಟ್‌ ನಿರಾಕರಿಸಿದ ನಂತರ ತನ್ನ ಮನವಿಯನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ.

"ಹೈಕೋರ್ಟ್ ಈ ವಿಷಯದ ಬಗ್ಗೆ ಅಧಿಕಾರವನ್ನು ಹೊಂದಿದ್ದರು, ಸುಪ್ರೀಂ ಕೋರ್ಟ್‌ ಯಾರಿಗೂ ಉಚ್ಚ ನ್ಯಾಯಾಲಯಗಳನ್ನು ಆಯ್ಕೆ ಮಾಡಲು ಅನುಮತಿ ನೀಡುವುದಿಲ್ಲ" ಎಂದು ನ್ಯಾಯಧೀಶರಾದ ಡಿ ವೈ ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ಹೇಳಿದೆ.