MB Patil – Peepal Media

ಕೆಎಸ್ಡಿಎಲ್ ಲಾಭಾಂಶ ₹108 ಕೋಟಿ ಸರ್ಕಾರಕ್ಕೆ ಹಸ್ತಾಂತರ
ಬೆಂಗಳೂರು: ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ (ಕೆಎಸ್ಡಿಎಲ್) ಕಾರ್ಖಾನೆಯು 2023-24ನೇ ಸಾಲಿನಲ್ಲಿ ಮಾಡಿರುವ 362.07 ಕೋಟಿ ರೂಪಾಯಿ ಲಾಭದ ಪೈಕಿ 108.62 ಕೋಟಿ ರೂಪಾಯಿಗಳ ಲಾಂಭಾಂಶದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಕಾರ್ಖಾನೆ ಅಧ್ಯಕ್ಷ ಸಿ.ಎಸ್.ನಾಡಗೌಡ ಅವರು ಮಂಗಳವಾರ ಇಲ್ಲಿ ಹಸ್ತಾಂತರಿಸಿದರು.

ವಿಧಾನಸಭೆ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಈ ಚೆಕ್ ನೀಡಲಾಯಿತು. ಇದಲ್ಲದೆ, ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಇದೇ ಸಂದರ್ಭದಲ್ಲಿ ಐದು ಕೋಟಿ ರೂಪಾಯಿಗಳ ಚೆಕ್ ನೀಡಲಾಯಿತು. ಕಾರ್ಖಾನೆ ಇತಿಹಾಸದಲ್ಲಿ ಇಷ್ಟು ಮೊತ್ತದ ಲಾಭಾಂಶದ ಚೆಕ್ ನೀಡಿರುವುದು ಇದೇ ಮೊದಲು.

ನಂತರ ಮಾತನಾಡಿದ ಮುಖ್ಯಮಂತ್ರಿಯವರು, ‘ಸಾರ್ವಜನಿಕ ಉದ್ದಿಮೆಗಳು ಲಾಭದಾಯಕ ವಹಿವಾಟು ನಡೆಸುವುದು ಒಳ್ಳೆಯ ಬೆಳವಣಿಗೆಯಾಗಿದೆ. ಐದು ವರ್ಷಗಳ ಹಿಂದೆ 15.91 ಕೋಟಿ ರೂಪಾಯಿ ಲಾಭಾಂಶ ಕೊಟ್ಟಿದ್ದ ಈ ಉದ್ದಿಮೆಯು ಈ ವರ್ಷ 108 ಕೋಟಿ ರೂ.ಗಳಿಗೂ ಹೆಚ್ಚಿನ ಡಿವಿಡೆಂಡ್ ಕೊಟ್ಟಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಚಿವ ಎಂ ಬಿ ಪಾಟೀಲ ಮಾತನಾಡಿ, ‘ಈಗಿನ ಸರಕಾರ ಅಸ್ತಿತ್ವಕ್ಕೆ ಬಂದ ಮೇಲೆ ಕೆಎಸ್ಡಿಎಲ್ ಕಾರ್ಖಾನೆಯು ಉನ್ನತಿ ಕಾಣುತ್ತಿದೆ. ಈ ಲಾಭವನ್ನು ಇನ್ನೂ ಹೊಸ ಎತ್ತರಕ್ಕೆ ಕೊಂಡೊಯ್ಯಲು ಮತ್ತು ಜಾಗತಿಕ ಮಟ್ಟದಲ್ಲಿ ಮಾರುಕಟ್ಟೆ ಸೃಷ್ಟಿಸಲು ಅಗತ್ಯ ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೆ, ಹೊಸಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗಿದೆ’ ಎಂದರು.

ಸಾರ್ವಜನಿಕ ಉದ್ದಿಮೆಗಳು ತಮ್ಮ ಲಾಭಾಂಶದಲ್ಲಿ ಶೇ.30ರಷ್ಟನ್ನು ಸರಕಾರಕ್ಕೆ ಕೊಡಬೇಕಾದ್ದು ನಿಯಮವಾಗಿದೆ. ಇದಕ್ಕೆ ತಕ್ಕಂತೆ ಈ ಲಾಭಾಂಶವನ್ನು ಸರಕಾರಕ್ಕೆ ಹಸ್ತಾಂತರಿಸಲಾಗಿದೆ ಎಂದು ಅಧ್ಯಕ್ಷ ನಾಡಗೌಡ ವಿವರಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ವ್ಯವಸ್ಥಾಪಕ ನಿರ್ದೇಶಕ ಡಾ. ಪಿ.ಕೆ.ಎಂ.ಪ್ರಶಾಂತ್, ಕಾರ್ಖಾನೆ ಪ್ರಧಾನ ವ್ಯವಸ್ಥಾಪಕರಾದ ಕೆ.ಎಲ್.ರವೀಶ, ಗಂಗಪ್ಪ ಅವರು ಉಪಸ್ಥಿತರಿದ್ದರು.

ಬಿಜೆಪಿ ಮುಳುಗುತ್ತಿರೋ ಹಡಗು ಅಲ್ಲ, ಅದು ಮುಳುಗಿರುವ ಹಡಗು : ಸಚಿವ ಎಂ.ಬಿ.ಪಾಟೀಲ್
‘ಬಿಜೆಪಿ ಪಕ್ಷವನ್ನು ಈಗಾಗಲೇ ಹಲವಷ್ಟು ಜನ ಮುಳುಗುತ್ತಿರೋ ಹಡಗು ಎಂದು ಹೇಳುತ್ತಿದ್ದಾರೆ. ಸ್ವತಃ ಬಿಜೆಪಿ ಪಕ್ಷದ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿಕೆ ಗಮನಿಸಿ. ಬಿಜೆಪಿಯಲ್ಲಿ ನಾಯಕರು ಯಾರೂ ಇಲ್ಲ. ವಿರೋಧ ಪಕ್ಷದ ನಾಯಕನಾಗಲಿ, ಪಕ್ಷದ ಅಧ್ಯಕ್ಷ ಯಾರೂ ಇಲ್ಲ. ಹೀಗಾಗಿ ಬಿಜೆಪಿಯಲ್ಲಿ ಏನೂ ಉಳಿದಿಲ್ಲ. ಅದು ಸಂಪೂರ್ಣ ನಿರ್ನಾಮ ಆಗಲಿದೆ’ ಎಂದು ಬಿಜೆಪಿ ವಿರುದ್ಧ ಸಚಿವ ಎಂ.ಬಿ.ಪಾಟೀಲ್ ಕಿಡಿಕಾರಿದ್ದಾರೆ.

ಬುಧವಾರ ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್ ಐಟಿ ಅಧಿಕಾರಿಗಳು ವಶಪಡಿಸಿಕೊಂಡ ಹಣ ಕಾಂಗ್ರೆಸ್ ನವರದ್ದು ಎಂಬ ಬಿಜೆಪಿ ಪಕ್ಷದ ಆರೋಪದ ಬಗ್ಗೆ ಮಾತನಾಡಿ, ಐಟಿ ದಾಳಿಯಾಗಿದೆ, ಐಟಿ ಅವರೇ ತನಿಖೆ ಮಾಡುತ್ತಾರೆ. ಇದು 40% ಕಮೀಷನ್ ಹಣ. ಹಾಗಾಗಿ ಬಿಜೆಪಿಯವರ ಹಣನೇ ಅದು, ನಮ್ಮ ಕಾಲದಲ್ಲಿ ಆಗಿರೋದು ಅಲ್ಲ. ನಮ್ಮ ಕಾಲದಲ್ಲಿ ಇನ್ನೂ ಟೆಂಡರೇ ಆಗಿಲ್ಲ ಎಂದು ಸಚಿವ ಎಂ ಬಿ ಪಾಟೀಲ್‌ ತಿಳಿಸಿದರು.

ನಂತರ ಮಾತನಾಡಿ, ಆಪರೇಷನ್ ಕಮಲ ಮಾಡಿ ಬಿಜೆಪಿಗೆ ಈ ಗತಿ ಬಂದಿದೆ. 102 ಶಾಸಕರಿದ್ದ ಬಿಜೆಪಿ ಈಗ 65 ಸ್ಥಾನಕ್ಕೆ ಕುಸಿದಿದೆ. ರಾಜ್ಯದ ಜನತೆಯಿಂದ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾದವರು ಈಗ ಸರಿಯಾಗಿ ಶಾಸಕರನ್ನೂ ಹಿಡಿದಿಟ್ಟುಕೊಳ್ಳಲು ಆಗುತ್ತಿಲ್ಲ ಎಂದು ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ್ದಾರೆ.

ಆಪರೇಷನ್ ಕಮಲ ಮಾಡಬೇಕಾದರೆ 65 ಶಾಸಕರು ಬೇಕು. ಅಷ್ಟು ಶಾಸಕರು ಬಿಜೆಪಿಯವರಿಗೆ ಸಿಕ್ತಾರಾ? ಎಂದು ಪ್ರಶ್ನಿಸಿದ ಅವರು, ಐದು ಜನ ಶಾಸಕರು ಸಿಗಲ್ಲ, ಆಪರೇಷನ್ ನಂತರ ಇವರ ಕಥೆ ಏನಾಗಿದೆ ಗೊತ್ತಿದೆಯಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನು ರಮೇಶ್ ಜಾರಕಿಹೊಳಿ ಅವರು ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಿದ ಬಗ್ಗೆ ಸ್ವತಃ ಜಗದೀಶ್ ಶೆಟ್ಟರ್ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಎಂ.ಬಿ.ಪಾಟೀಲ್, ‘ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಕುರಿತು ಪಕ್ಷದ ಅಧ್ಯಕ್ಷರು, ಸಿಎಂ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಂತದಲ್ಲಿ ನಿರ್ಧಾರ ಆಗುತ್ತದೆ. ಯಾಕೆ ಭೇಟಿಯಾಗಿದ್ದಾರೆ ಅಂತ ಗೊತ್ತಿಲ್ಲ.ಅದು ವಯಕ್ತಿಕ ಭೇಟಿನಾ, ರಾಜಕೀಯ ಭೇಟಿನಾ ಅಂತ ನಮಗೆ ಗೊತ್ತಿಲ್ಲ. ಮಾಜಿ ಸಚಿವರಾದ ರಮೇಶ್ ಅವರಿಗೆ ಕಾಂಗ್ರೆಸ್ ಬರುವ ಒಲವು ಇರಬಹುದು’ ಎಂದು ಹೇಳಿದರು.

800 ಕೋಟಿ ರೂ. ಹೂಡಿಕೆಗೆ ಅಮೇರಿಕಾ ಮೂಲದ ಕಂಪನಿ ಉತ್ಸಾಹ : ಸಚಿವ ಎಂಬಿ ಪಾಟೀಲ್
ಅಮೇರಿಕಾ ಮೂಲದ ಕ್ರಿಪ್ಟನ್ ಸೊಲ್ಯೂಷನ್ಸ್ ಕಂಪನಿ ಬೆಂಗಳೂರಿನಲ್ಲಿ ತನ್ನ ಸಂಸ್ಥೆಯ ಘಟಕವನ್ನು ಹೂಡಿಕೆ ಮಾಡಲು ಉತ್ಸುಕತೆ ತೋರಿದೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ (MB Patil) ಹೇಳಿದ್ದಾರೆ. ಬೆಂಗಳೂರಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ (Bommasandra Industrial Area) ನೂತನ ಪ್ರಿಂಟೆಡ್ ಸರ್ಕ್ಯೂಟ್ ಬೋರ್ಡ್ (ಪಿಸಿಬಿ) ಉತ್ಪಾದನಾ ಘಟಕವನ್ನು ಆರಂಭಿಸಲು ಆಸಕ್ತಿ ಹೊಂದಿದೆ ಎಂದು ತಾವು ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ 100 ಮಿಲಿಯನ್ ಡಾಲರ್ (million dollars) (800 ಕೋಟಿ ರೂ.) ಬಂಡವಾಳ ಹೂಡಲು ಉತ್ಸಾಹ ತೋರಿದೆ. ಜತೆಗೆ ಈ ಕಂಪನಿಯು ಮೈಸೂರು ಮತ್ತು ಚಾಮರಾಜನಗರದಲ್ಲೂ ಹೂಡಿಕೆಗೆ ಇರುವ ಅವಕಾಶಗಳನ್ನು ಪರಿಶೀಲಿಸಲು ಒಪ್ಪಿಕೊಂಡಿದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಸಚಿವ ಎಂ.ಬಿ. ಪಾಟೀಲ್, ಕಂಪನಿಯ ಅಧ್ಯಕ್ಷ ಮತ್ತು ಸಿಇಒ ಸುರೇಶ್ ಪಟೇಲ್ ಮತ್ತು ಇತರ ಉನ್ನತಾಧಿಕಾರಿಗಳೊಂದಿಗೆ ಈ ಸಂಬಂಧ ಸೋಮವಾರ ಚರ್ಚಿಸಲಾಗಿದೆ. ಅದು ಸ್ಥಳೀಯ ಸಹಭಾಗಿತ್ವಕ್ಕೆ ಆಸಕ್ತಿ ಹೊಂದಿದ್ದು, ಕೌಶಲ್ಯಪೂರ್ಣ ಮಾನವ ಸಂಪನ್ಮೂಲದ ಖಾತ್ರಿಯನ್ನು ನಮ್ಮಿಂದ ಬಯಸಿದೆ ಎಂದು ಹೇಳಿದ್ದಾರೆ.

ಕಂಪನಿಯು ಟೆಕ್ಸಾಸ್‌ನಲ್ಲಿ ಹೊಂದಿರುವ 40 ಸಾವಿರ ಚದರ ಮೀಟರ್ ವಿಸ್ತೀರ್ಣದ ಉತ್ಪಾದನಾ ಘಟಕಕ್ಕೂ ಈ ಸಂದರ್ಭದಲ್ಲಿ ಭೇಟಿ ನೀಡಿದ್ದು, ಅಲ್ಲಿರುವ ಸೌಲಭ್ಯಗಳನ್ನು ವೀಕ್ಷಿಸಲಾಗಿದೆ. ರಾಜ್ಯದಲ್ಲಿ ಹೂಡಿಕೆ ಮಾಡಲು ಮುಂದೆಬಂದರೆ, ಅಗತ್ಯ ಸೌಲಭ್ಯಗಳನ್ನು ತ್ವರಿತ ಗತಿಯಲ್ಲಿ ಒದಗಿಸಲಾಗುವುದು. ಈ ಸಂಬಂಧದ ಪ್ರಾಥಮಿಕ ಚರ್ಚೆ ಈಗಾಗಲೇ ಮುಗಿದಿದೆ ಎಂದು ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ.

ಕಂಪನಿ ಜೊತೆಗಿನ ಭೇಟಿಯ ಬಗ್ಗೆ ಮಾಹಿತಿ ನೀಡಿರುವ ಎಂ.ಬಿ.ಪಾಟೀಲ್, ಕಂಪನಿಯು ಟೆಕ್ಸಾಸ್ ನಲ್ಲಿ ಹೊಂದಿರುವ 40ಸಾವಿರ ಚದರ ಮೀಟರ್ ವಿಸ್ತೀರ್ಣದ ಉತ್ಪಾದನಾ ಘಟಕಕ್ಕೂ ಈ ಸಂದರ್ಭದಲ್ಲಿ ಭೇಟಿ ನೀಡಲಾಗಿದೆ. ರಾಜ್ಯದಲ್ಲಿ ಹೂಡಿಕೆ ಮಾಡಲು ಮುಂದೆಬಂದರೆ, ಅಗತ್ಯ ಸೌಲಭ್ಯಗಳನ್ನು ತ್ವರಿತ ಗತಿಯಲ್ಲಿ ಒದಗಿಸಲಾಗುವುದು. ಈ ಸಂಬಂಧದ ಪ್ರಾಥಮಿಕ ಚರ್ಚೆ ಈಗಾಗಲೇ ಮುಗಿದಿದೆ ಎಂದು ಅವರು ತಿಳಿಸಿದ್ದಾರೆ.

ಸಭೆಯಲ್ಲಿ ಅನಲಾಗ್ ಮತ್ತು ಎಂಬೆಡೆಡ್ ಸೆಮಿಕಂಡಕ್ಟರ್ ಕುರಿತ ಸಂಶೋಧನೆಯನ್ನು ಕೈಗೆತ್ತಿಕೊಳ್ಳುವ ಬಗ್ಗೆಯೂ ಚರ್ಚಿಸಲಾಗಿದೆ. ಇದಕ್ಕೆ ಬೆಂಗಳೂರಿನ ವೈಟ್ ಫೀಲ್ಡಿನಲ್ಲಿರುವ ಸೆಮಿಕಂಡಕ್ಟರ್ ಸೂಕ್ತ ಸ್ಥಳವಾಗಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.

ಇದಷ್ಟೇ ಅಲ್ಲದೇ ಹೂಡಿಕೆಗೆ ಇರುವ ಅಡಚಣೆಗಳನ್ನು ನಿವಾರಿಸಲು ರಾಜ್ಯ ಸರ್ಕಾರ ಹೊಂದಿರುವ ಬದ್ಧತೆಯನ್ನು ಅವರಿಗೆ ತಿಳಿಸಲಾಗಿದೆ. ಭೇಟಿಯ ಸಂದರ್ಭದಲ್ಲಿ ಕಂಪನಿಯು ಹೊಂದಿರುವ 300 ಎಂಎಂ ವೇಫರ್ ಫ್ಯಾಬ್ ಉತ್ಪಾದನಾ ಘಟಕವನ್ನು ವೀಕ್ಷಿಸಲಾಯಿತು.

ಸರ್ವಸಮುದಾಯಗಳ ಒಳಿತನ್ನು ಕೇಂದ್ರೀಕರಿಸಿದ ಜನಪರ ಬಜೆಟ್: ಸಚಿವ ಎಂ ಬಿ ಪಾಟೀಲ್
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಾಖಲೆಯ 14ನೇ ಬಾರಿಗೆ ಮಂಡಿಸಿರುವ ಬಜೆಟ್‌ ಮಹಿಳೆಯರು, ದಲಿತರು, ರೈತರು ಅಲ್ಪಸಂಖ್ಯಾತರು, ಬಹುಸಂಖ್ಯಾತರು ಮತ್ತು ಉದ್ದಿಮದಾರರು ಸೇರಿದಂತೆ ಸಮಾಜದ ಎಲ್ಲಾ ಸಮುದಾಯಗಳ ಒಳಿತಿನ ಬಗ್ಗೆ ಗಮನ ಹರಿಸಿರುವ ಜನಪರ ಬಜೆಟ್‌ ಆಗಿದೆ. ಜತೆಗೆ, ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ಸರಕಾರ ಮಾಡಿದ ಅಕ್ರಮಗಳನ್ನು ಇದು ರಾಜ್ಯದ ಜನರಿಗೆ ತೋರಿಸಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಶುಕ್ರವಾರ ಬಜೆಟ್‌ ಮಂಡನೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, “ನಾವು ಚುನಾವಣೆಗೆ ಮೊದಲೇ ಮಾತು ಕೊಟ್ಟಿದ್ದಂತೆ ಐದೂ ಗ್ಯಾರಂಟಿಗಳನ್ನು ಜಾರಿಗೆ ತರುತ್ತಿದ್ದೇವೆ. ಬಜೆಟ್‌ನಲ್ಲಿ ಇದಕ್ಕೆ ಒಟ್ಟು 52 ಸಾವಿರ ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದೇವೆ.

ರಾಜ್ಯಕ್ಕೆ ಹೇಗೆ ಆದಾಯ ತರಬೇಕೆಂಬುದು ಸಿದ್ದರಾಮಯ್ಯನವರಿಗೆ ಗೊತ್ತಿದೆ. ನಮ್ಮ ಬಜೆಟ್ಟನ್ನು ಕಂಡು ಈಗಾಗಲೇ ಜನರಿಂದ ತಿರಸ್ಕೃತರಾಗಿರುವ ಬಿಜೆಪಿ ಮತ್ತಷ್ಟು ಹತಾಶವಾಗಿದೆ” ಎಂದರು.

ಬಿಜೆಪಿಯವರು ಬಜೆಟ್‌ನ ಅಳತೆಯನ್ನೂ ಮೀರಿ ಯಾವ್ಯಾವುದೋ ನೀರಾವರಿ ಯೋಜನೆಗಳಿಗೆಲ್ಲ ಟೆಂಡರ್ ಕರೆದಿದ್ದರು. ಇನ್ನೊಂದು ಕಡೆ ಶೇಕಡ 40ರಷ್ಟು ಕಮಿಷನ್‌ ಹೊಡೆಯುತ್ತಿದ್ದರು. ಅವರ ಬಣ್ಣವನ್ನು ನಾವು ಬಯಲಿಗೆಳೆದಿದ್ದೇವೆ. ನಾವು ಬಿಜೆಪಿಯವರಿಂದ ಏನನ್ನೂ ಕಲಿಯಬೇಕಾಗಿಲ್ಲ. ಜನರಿಗೆ ಕೊಟ್ಟ ಮಾತನ್ನು ನಾವು ಉಳಿಸಿಕೊಂಡಿದ್ದೇವೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿಯವರು ಈಗ ಅಂಬೇಡ್ಕರ್ ಹೆಸರನ್ನು ಹೇಳುತ್ತಿದ್ದಾರೆ. ಆದರೆ ತಮ್ಮ ಪಕ್ಷದಲ್ಲೇ ಅವರು ಹಿರಿಯರಾದ ಆಡ್ವಾಣಿ, ಯಡಿಯೂರಪ್ಪ ಅವರನ್ನೆಲ್ಲ ಮೂಲೆಗುಂಪು ಮಾಡಿದ್ದಾರೆ. ಜೊತೆಗೆ ಆ ಪಕ್ಷದ ನಾಯಕರು ಸಂವಿಧಾನವನ್ನೇ ಬದಲಿಸುವ ಮಾತುಗಳನ್ನಾಡಿದ್ದರು. ಹೀಗಾಗಿಯೇ ಆ ಪಕ್ಷವನ್ನು ಜನ ದೂರವಿಟ್ಟಿದ್ದಾರೆ ಎಂದು ಸಚಿವರು ಹೇಳಿದ್ದಾರೆ.