mcd election – Peepal Media

ಎಂಸಿಡಿ ಫಲಿತಾಂಶವೇ ಬಿಬಿಎಂಪಿ ಚುನಾವಣೆಯಲ್ಲಿ ಪುನರಾವರ್ತನೆ: ಮೋಹನ್‌ ದಾಸರಿ
ಬೆಂಗಳೂರು: ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಚುನಾವಣೆಯಲ್ಲಿ ಆಮ್‌ ಆದ್ಮಿ ಪಾರ್ಟಿಯ ಗೆಲುವನ್ನು ಬೆಂಗಳೂರಿನ ಎಎಪಿ ಕಾರ್ಯಕರ್ತರು ಸಂಭ್ರಮದಿಂದ ಆಚರಿಸಿದ್ದಾರೆ. ಕುಮಾರ ಪಾರ್ಕ್‌ ಪಶ್ಚಿಮದಲ್ಲಿರುವ ಪಕ್ಷದ ರಾಜ್ಯ ಕಚೇರಿಯಲ್ಲಿ ಸಿಹಿ ಹಂಚಿ, ನಂತರ ಅಲ್ಲಿಂದ ಬಿಬಿಎಂಪಿ ಕಚೇರಿಗೆ ಬೈಕ್‌ ರ‍್ಯಾಲಿ ನಡೆಸುವ ಮೂಲಕ ವಿಜಯೋತ್ಸವ ಆಚರಿಸಿದರು.

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಎಎಪಿ ಬೆಂಗಳೂರು ಅಧ್ಯಕ್ಷ ಮೋಹನ್‌ ದಾಸರಿ, “ಸಿಎಂ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಸರ್ಕಾರದ ಸಾಧನೆಗಳನ್ನು ಕಣ್ಣಾರೆ ಕಂಡಿದ್ದರಿಂದ ದೆಹಲಿಯ ಜನತೆ ಎಂಸಿಡಿ ಚುನಾವಣೆಯಲ್ಲಿ ಸಹಜವಾಗಿಯೇ ಎಎಪಿಯನ್ನು ಗೆಲ್ಲಿಸಿದ್ದಾರೆ. ನಗರ ಪ್ರದೇಶದ ಜನರು ಆಮ್‌ ಆದ್ಮಿ ಪಾರ್ಟಿಯತ್ತ ದೊಡ್ಡ ಪ್ರಮಾಣದಲ್ಲಿ ಆಕರ್ಷಿತರಾಗುತ್ತಿರುವುದು ಎಂಸಿಡಿ ಚುನಾವಣೆಯ ಫಲಿತಾಂಶದಿಂದ ಸಾಬೀತಾಗಿದ್ದು, ಬಿಬಿಎಂಪಿ ಚುನಾವಣೆಯಲ್ಲೂ ಇದೇ ರೀತಿಯ ಫಲಿತಾಂಶ ಬರಲಿದೆ. ಬಹುಮತದೊಂದಿಗೆ ಆಮ್‌ ಆದ್ಮಿ ಪಾರ್ಟಿಯು ಬಿಬಿಎಂಪಿಯ ಅಧಿಕಾರದ ಗದ್ದುಗೆ ಏರಲಿದೆ. ಖಾಸಗಿ ಸಂಸ್ಥೆಗಳಿಂದ ಸಮೀಕ್ಷೆ ಮಾಡಿಸಿದ ಬಿಜೆಪಿ ನಾಯಕರಿಗೂ ಈ ವಿಚಾರ ಅರಿವಿಗೆ ಬಂದಿದೆ. ಆದ್ದರಿಂದಲೇ ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಹೇಳಿದರು.

“ಕಳೆದ 15 ವರ್ಷಗಳಿಂದ ಎಂಸಿಡಿಯಲ್ಲಿ ಅಧಿಕಾರ ಹೊಂದಿದ್ದ ಬಿಜೆಪಿಯು ಕಳಪೆ ಕಾಮಗಾರಿಗಳ ಮೂಲಕ ದೆಹಲಿಗೆ ಕೆಟ್ಟ ಹೆಸರು ತಂದಿತ್ತು. ಅಧಿಕಾರದ ಮದದಲ್ಲಿದ್ದ ಬಿಜೆಪಿಯು ಜನರ ಭಾವನೆಗೆ ಸ್ಪಂದಿಸುವುದನ್ನೇ ಮರೆತಿತ್ತು. ಬೆಂಗಳೂರಿನಲ್ಲಿ ಕೂಡ ಬಿಜೆಪಿ ಅದೇ ತಪ್ಪುಗಳನ್ನು ಅಲ್ಲಿಗಿಂತ ದೊಡ್ಡ ಪ್ರಮಾಣದಲ್ಲಿ ಮಾಡುತ್ತಿದೆ. ಬಿಜೆಪಿಗೆ ತಕ್ಕ ಪಾಠ ಕಲಿಸಲು ಬೆಂಗಳೂರಿನ ಪ್ರಜ್ಞಾವಂತ ಜನರು ಪಣತೊಟ್ಟಿದ್ದು, ಚುನಾವಣೆಗಾಗಿ ಕಾಯುತ್ತಿದ್ದಾರೆ. ಎಷ್ಟೇ ಕುತಂತ್ರಗಳನ್ನು ಮಾಡಿ ಚುನಾವಣೆಯನ್ನು ಮುಂದೂಡಿದರೂ, ಒಂದಲ್ಲಾ ಒಂದುದಿನ ಚುನಾವಣೆ ನಡೆಯಲೇ ಬೇಕು. ಯಾವಾಗ ಚುನಾವಣೆ ನಡೆದರೂ ಎಎಪಿಯೇ ಜಯಗಳಿಸಲಿದೆ” ಎಂದು ಮೋಹನ್‌ ದಾಸರಿ ಹೇಳಿದರು.

ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಜಗದೀಶ್‌ ವಿ ಸದಂ, ಗುರುಮೂರ್ತಿ, ಉಷಾ ಮೋಹನ್‌, ಅಶೋಕ್‌ ಮೃತ್ಯುಂಜಯ, ಶಾಶವಲ್ಲಿ, ಲೋಹಿತ್‌, ಪಿ.ಎಸ್.ಗಿರೀಶ್‌, ಗಿರೀಶ್‌ ಪಿಳ್ಳೇಗೌಡ ಮತ್ತಿತರ ಮುಖಂಡರು ಹಾಗೂ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.

ದಿಲ್ಲಿ ಎಂಸಿಡಿ: ಗೆಲುವಿನತ್ತ ಎಎಪಿ, ಸಂಭ್ರಮಾಚರಣೆ ಆರಂಭ
ಹೊಸದಿಲ್ಲಿ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್‌ ಆದ್ಮಿ ಪಾರ್ಟಿ ಭರ್ಜರಿ ಪೈಪೋಟಿಯ ನಡುವೆಯೂ ಗೆಲುವಿನತ್ತ ಸಾಗಿದ್ದು, ಎಎಪಿ ಕಾರ್ಯಕರ್ತರು ಸಂಭ್ರಮಾಚರಣೆ ಆರಂಭಿಸಿದ್ದಾರೆ.

ಇತ್ತೀಚಿನ ಮಾಹಿತಿ ಪ್ರಕಾರ, ಪ್ರಕಟಗೊಂಡ ಫಲಿತಾಂಶಗಳಲ್ಲಿ ಎಎಪಿ 93 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ 74 ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಒಟ್ಟಾರೆಯಾಗಿ ಎಎಪಿ 132 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 104 ಸ್ಥಾನಗಳಲ್ಲಿ ಮುಂದಿದೆ. ದಿಲ್ಲಿ ಮಹಾನಗರ ಪಾಲಿಕೆಯ ಗದ್ದುಗೆ ಹಿಡಿಯಲು 126 ಸ್ಥಾನಗಳ ಅವಶ್ಯಕತೆ ಇದೆ.

ಡಿಸೆಂಬರ್‌ 4 ರಂದು ನಡೆದ ಚುನಾವಣೆಯ ಮತಗಳ ಎಣಿಕೆ ಕಾರ್ಯ ಬೆಳಿಗ್ಗೆಯಿಂದ ಆರಂಭಗೊಂಡಿದ್ದು, ಭಾರತೀಯ ಜನತಾ ಪಕ್ಷ ಮತ್ತು ಆಮ್‌ ಆದ್ಮಿ ಪಾರ್ಟಿಯ ನಡುವೆ ಬಿರುಸಿನ ಸ್ಪರ್ಧೆ ಏರ್ಪಟ್ಟಿದೆ.

ತ್ರಿಕೋನ ಸ್ಪರ್ಧೆ ಎಂದು ಪರಿಗಣಿಸಲಾಗಿದ್ದ ಎಂಸಿಡಿ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದು ಈವರೆಗೆ ಕೇವಲ 4 ಸ್ಥಾನಗಳನ್ನು ಗೆದ್ದಿದ್ದು, ಮೂರು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.