mohammed – Peepal Media

ಲೋಕಸಭೆ ಚುನಾವಣೆ: ಕ್ರಿಕೆಟಿಗ ಶಮಿ ಬಿಜೆಪಿಯಿಂದ ಕಣಕ್ಕೆ?
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಂಗಾಳದಿಂದ ಸ್ಟಾರ್ ಕ್ರಿಕೆಟಿಗ ಮೊಹಮ್ಮದ್ ಶಮಿ ಅವರನ್ನು ನಾಮನಿರ್ದೇಶನ ಮಾಡುವ ಸಾಧ್ಯತೆಯನ್ನು ಬಿಜೆಪಿ ಆಲೋಚಿಸುತ್ತಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಶಮಿ ರಣಜಿ ಟ್ರೋಫಿಯಲ್ಲಿ ಬಂಗಾಳವನ್ನು ಪ್ರತಿನಿಧಿಸುತ್ತಿದ್ದು, ಆ ರಾಜ್ಯದ ಪರವಾಗಿ ದೇಸಿ ಪಂದ್ಯಾಟಗಳಲ್ಲಿ ಭಾಗವಹಿಸುತ್ತಿದ್ದಾರೆ.

ಈ ಪ್ರಸ್ತಾವನೆಯನ್ನು ಬಿಜೆಪಿ ನಾಯಕತ್ವ ಶಮಿಗೆ ತಲುಪಿಸಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಕ್ರಿಕೆಟಿಗ ಇನ್ನೂ ಈ ಕುರಿತು ನಿರ್ಧಾರ ಕೈಗೊಂಡಿಲ್ಲ.

ಪ್ರಸ್ತುತ, ಶಮಿ ಇತ್ತೀಚಿನ ಶಸ್ತ್ರಚಿಕಿತ್ಸೆಯಿಂದ ಚೇತರಿಸಿಳ್ಳುತ್ತಿದ್ದು, ವಿರಾಮದಲ್ಲಿದ್ದಾರೆ. ಈ ಕುರಿತು ಶಮಿ ಹಾಕಿದ್ದ ಪೋಸ್ಟಿಗೆ ನರೇಂದ್ರ ಮೋದಿ ಪ್ರತಿಕ್ರಿಯಿಸಿ ಬೇಗನೇ ಗುಣಮುಖರಾಗಿ ಎಂದು ಹಾರೈಸಿದ್ದರು.

ಭಾರತದ ODI ವಿಶ್ವಕಪ್ ಅಭಿಯಾನದ ನಂತರ ಶಮಿ ಕ್ರಿಕೆಟ್‌ ಅಂಗಳಕ್ಕೆ ಇಳಿದಿಲ್ಲ, ವಿಶ್ವಕಪ್‌ ಪಂದ್ಯಾವಳಿಯಲ್ಲಿ ಅವರು ಏಳು ಪಂದ್ಯಗಳಲ್ಲಿ 10.70 ಸರಾಸರಿ ಮತ್ತು 12.20 ಸ್ಟ್ರೈಕ್ ರೇಟ್‌ನಲ್ಲಿ 24 ವಿಕೆಟ್‌ಗಳನ್ನು ಪಡೆಯುವ ಮೂಲಕ ತಂಡವನ್ನು ಫೈನಲ್ ತಲುಪಲು ಸಹಾಯ ಮಾಡಿದ್ದರು.

ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ ಫೈನಲ್‌ನಲ್ಲಿ ಸೋತ ನಂತರ, ಪ್ರಧಾನಿ ಮೋದಿ ಅವರು ಎಲ್ಲಾ ಆಟಗಾರರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಸಾಂತ್ವನ ಹೇಳಿದರು. ಆ ಸಂದರ್ಭದಲ್ಲಿ ಪ್ರಧಾನಿ ಶಮಿಯನ್ನು ವಿಶೇಷವಾಗಿ ಹೊಗಳಿ ತಬ್ಬಿಕೊಂಡಿದ್ದರು,

ಆ ವಿಡಿಯೋ ಆಗ ವೈರಲ್‌ ಆಗಿತ್ತು

ಶಮಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಹ ಭೇಟಿ ಮಾಡಿದ್ದಾರೆ.

ಇದಲ್ಲದೇ ಶಮಿ ಅವರ ಹುಟ್ಟೂರು ಅಮ್ರೋಹಾದಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದರು.

ಬಿಜೆಪಿಯ ಉನ್ನತ ಮೂಲಗಳ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಶಮಿ ಅವರನ್ನು ಅಭ್ಯರ್ಥಿಯಾಗಿ ಪ್ರಸ್ತಾಪಿಸಲಾಗಿದೆ ಮತ್ತು ಚರ್ಚೆಗಳು ಸಕಾರಾತ್ಮಕವಾಗಿವೆ. ಬಿಜೆಪಿಯೊಳಗಿನ ಆಂತರಿಕ ಚರ್ಚೆಗಳು ಶಮಿಯನ್ನು ಕಣಕ್ಕಿಳಿಸುವುದು ಬಂಗಾಳದ ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಗೆಲುವು ಸಾಧಿಸಲು ಸಹಾಯ ಮಾಡುತ್ತದೆ ಎಂದು ಸೂಚಿಸಿವೆ.

ಬಿಜೆಪಿ ಮೂಲಗಳ ಪ್ರಕಾರ, ಬಂಗಾಳದ ಗಡಿಯೊಳಗಿನ ಸಂದೇಶಖಾಲಿ ಗ್ರಾಮವು ಹಿಂಸಾಚಾರಕ್ಕೆ ಸಾಕ್ಷಿಯಾದ ನಂತರ ಸುದ್ದಿಯಲ್ಲಿರುವ ಬಸಿರ್ಹತ್ ಲೋಕಸಭಾ ಕ್ಷೇತ್ರದಿಂದ ಶಮಿಯನ್ನು ಕಣಕ್ಕಿಳಿಸುವುದು ಬಿಜೆಪಿಯ ಯೋಚನೆಯಾಗಿದೆ