Moradabad Police – Peepal Media

ಗುಂಡಿನ ಚಕಮಕಿಯಲ್ಲಿ ಬಿಜೆಪಿ ನಾಯಕನ ಪತ್ನಿ ಸಾವು: ಪೊಲೀಸರ ವಿರುದ್ಧ ಪ್ರಕರಣ ದಾಖಲು
ಡೆಹ್ರಾಡೂನ್: ಉತ್ತರಾಖಂಡದಲ್ಲಿ ಗಣಿಗಾರಿಕೆ ಮಾಫಿಯಾದ ಮೇಲೆ ಕಾರ್ಯಚರಣೆ ನಡೆಸುತ್ತಿರುವ ಸಂದರ್ಭದಲ್ಲಿ, ಉತ್ತರ ಪ್ರದೇಶದ ಮೊರಾದಾಬಾದ್‌ನ ಐವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.

ಮಾಹಿತಿ ಪ್ರಕಾರ, ಪೊಲೀಸರು ಮತ್ತು ಗಣಿಗಾರಿಕೆ ಮಾಫಿಯಾದ ಸಹಾಯಕರ ನಡುವಿನ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ ಮಹಿಳೆಯು, ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಗುರ್ತಾಜ್ ಭುಲ್ಲರ್ ಅವರ ಪತ್ನಿ ಗುರುಪ್ರೀತ್ ಕೌರ್ ಎಂದು ತಿಳಿದುಬಂದಿದೆ.

ಜಫರ್ ಎಂಬ ಗಣಿಗಾರಿಕೆ ಮಾಫಿಯಾವನ್ನು ಬಂಧಿಸಲು ಮೊರಾದಾಬಾದ್ ಪೊಲೀಸ್ ತಂಡವು ಉತ್ತರಾಖಂಡದ ಜಸ್ಪುರ್‌ಗೆ ತಲುಪಿದಾಗ ಉಂಟಾದ ಘರ್ಷಣೆಯಲ್ಲಿ ಪೊಲೀಸ್ ಅಧಿಕಾರಿಗಳ ಮೇಲೆ ಗುಂಡು ಹಾರಿಸಲಾಗಿದೆ. ಈ ವೇಳೆ ಮೂವರು ಪೊಲೀಸ್‌ ಅಧಿಕಾರಿಗಳು ಗಾಯಗೊಂಡಿದ್ದಾರೆ.

ಪೊಲೀಸರ ಪ್ರಕಾರ, ಮಾಫಿಯಾದ ಸಹಾಯಕನಾಗಿದ್ದ ಜಾಫರ್ ಎಂಬಾತ ₹ 50,000 ಬಹುಮಾನವನ್ನು ಹೊತ್ತೊಯ್ದು ಭುಲ್ಲರ್ ಅವರ ಮನೆಯಲ್ಲಿ ತಲೆಮರೆಸಿಕೊಂಡಿದ್ದಾನೆ ಎಂದು ಮಾಹಿತಿ ತಿಳಿದುಬಂದಿತು. ಈ ವೇಳೆ ಪೋಲಿಸ್‌ ತಂಡವು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸುತ್ತಿರುವ ಸಂದರ್ಭದಲ್ಲಿ, ನಮ್ಮ ಅಧಿಕಾರಿಗಳಿಗು ಮತ್ತು ಮಾಫಿಯಾ ಸಹಾಯಕರ ನಡುವೆ ಗುಂಡಿನ ಚಕಮಕಿಯಾಗಿದ್ದರಿಂದ ಮೂವರು ಅಧಿಕಾರಿಗಳು ಗಾಯಗೊಂಡಿದ್ದಾರೆ. ಈ ವೇಳೆ ಗುರ್ತಾಜ್ ಭುಲ್ಲರ್ ಅವರ ಪತ್ನಿ ಅವರಿಗೂ ಗುಂಡು ತಗಲಿದ್ದರಿಂದ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದರು.

ಮಹಿಳೆ ಸಾವಿನ ನಂತರ ಕೋಪಗೊಂಡ ಗ್ರಾಮಸ್ಥರು, ಉತ್ತರಾಖಂಡದಲ್ಲಿನ ಯುಪಿ ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ.